Home Announcement CET ಪರೀಕ್ಷೆ ಮುಂದೂಡಿಕೆ

CET ಪರೀಕ್ಷೆ ಮುಂದೂಡಿಕೆ

0
CET Examination Postpone

ಕೋವಿಡ್ ಹಿನ್ನೆಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜುಲೈ 7, 8 ರಂದು ನಡೆಯಬೇಕಿದ್ದ CET-2021 ಪರೀಕ್ಷೆಯನ್ನು ಮುಂದೂಡಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಮತ್ತು 2021 ನೇ ಸಾಲಿನ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಮುಂದೂಡಿರು ಕಾರಣ ಜುಲೈ 7, 8 ರಂದು ನಡೆಬೇಕಿದ್ದ 2021 ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ ಮತ್ತು ಜುಲೈ 9 ರಂದು ನಡೆಸಬೇಕಿದ್ದ ಕನ್ನಡ ಭಾಷಾ ಪರೀಕ್ಷೆಯನ್ನು ಮುಂದೂಡಲಾಗಿದೆ.

ಮುಂದೂಡಲಾದ CET ಪ್ರವೇಶ ಪರೀಕ್ಷೆಯನ್ನು ಆಗಸ್ಟ್ 28 ಮತ್ತು 29 ರಂದು ಹಾಗೂ ಕನ್ನಡ ಭಾಷಾ ಪರೀಕ್ಷೆಯನ್ನು ಆಗಸ್ಟ್ 30 ರಂದು ನಡೆಸಲಾಗುವುದು ಎಂದು ಪ್ರಾಧಿಕಾರದ ಪ್ರಕಟಣೆಯಲ್ಲಿ ತಿಳಸಿದೆ.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್ ಸೈಟ್ http://kea.kar.nic.in ಗೆ ಭೇಟಿ ನೀಡಲು ಕೋರಲಾಗಿದೆ.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version