ಅಥಿತಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

Teacher Tutor Vacancy Openings Jobs Schools Chikkaballapur

ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು, ಚಿಕ್ಕಬಳ್ಳಾಪುರ ಜಿಲ್ಲೆ ಇಲ್ಲಿ ಭೌತಶಾಸ್ತ್ರ, ಗಣಿತಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯಗಳ ಉಪನ್ಯಾಸಕರ ಹುದ್ದೆಗಳಿಗೆ ಇಲಾಖೆಯ ನಿರ್ದೇಶನದಂತೆ ಅಥಿತಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳಬೇಕಾಗಿದೆ. ಆಯ್ಕೆಯನ್ನು ಜಿಲ್ಲಾಧಿಕಾರಿಗಳು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಂದರ್ಶನದ ಮುಖಾಂತರ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಅರ್ಹ ಅಭ್ಯರ್ಥಿಗಳು (ನಿವೃತ್ತ ಹೊಂದಿರುವ ಅಥವಾ ಸದರಿ ವಿಷಯಗಳಲ್ಲಿ ಎಂ.ಎಸ್ಸಿ, ಬಿ.ಇಡಿ ಪದವಿಗಳನ್ನು ಹೊಂದಿರುವವರು) 2020ರ ನವೆಂಬರ್ 28 ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಜಿಲ್ಲಾಧಿಕಾರಿಗಳ ಕಚೇರಿ, ಬಿಸಿಎಂ ಇಲಾಖೆಯಲ್ಲಿ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08156-277053, 9731613955 ಅನ್ನು ಸಂಪರ್ಕಿಸಬಹುದೆಂದು ಎಂ.ಆರ್.ಡಿ. ಪಿಯು ಕಾಲೇಜಿನ ಪ್ರಾಂಶುಪಾಲರು ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *

error: Content is protected !!