14.1 C
Sidlaghatta
Thursday, December 25, 2025
Home Blog Page 10

ಶಿಡ್ಲಘಟ್ಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ: 1 ಲಕ್ಷ ಕೋಟಿ ರೂಪಾಯಿಗಳ ಅಭಿವೃದ್ಧಿಯೇ BJP ಗೆ ಉತ್ತರ!

0
CM Siddaramaiah Sidlaghatta Chikkaballapur Projects Inauguration

Sidlaghatta, Chikkaballapur : “ರಾಜ್ಯದ ಖಜಾನೆ ಖಾಲಿ” ಎಂದು ಬಿಜೆಪಿ ಮಾಡುತ್ತಿದ್ದ ಆರೋಪಗಳಿಗೆ ನಮ್ಮ ಸರ್ಕಾರವೇ ₹1 ಲಕ್ಷ ಕೋಟಿಗೂ ಅಧಿಕ ಅಭಿವೃದ್ಧಿ ಕಾಮಗಾರಿಗಳ ಮೂಲಕ ಉತ್ತರ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶಿಡ್ಲಘಟ್ಟ ತಾಲ್ಲೂಕಿನ ಹನುಮಂತಪುರದಲ್ಲಿ ನಡೆದ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ, ಹೆಚ್.ಎನ್.ವ್ಯಾಲಿ ಮೂರನೇ ಹಂತ, ಕುಡಿಯುವ ನೀರು, ಒಳಚರಂಡಿ ಹಾಗೂ ವಿವಿಧ ಇಲಾಖೆಗಳ ಸವಲತ್ತುಗಳ ವಿತರಣೆಯ ಉದ್ಘಾಟನೆ–ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆಯ ನಿರ್ಮಾಣ ಇಡೀ ರಾಜ್ಯದ ರೇಷ್ಮೆ ಕೃಷಿಕರಿಗೆ ನೆರವಾಗಲಿದ್ದು, ಶಿಡ್ಲಘಟ್ಟ ಕ್ಷೇತ್ರದಲ್ಲಿ ಒಂದೇ ದಿನದಲ್ಲಿ ಇಷ್ಟು ಹೆಚ್ಚಿನ ಕಾಮಗಾರಿಗಳಿಗೆ ಚಾಲನೆ ನೀಡುತ್ತಿರುವುದು ಸರ್ಕಾರದ ಅಭಿವೃದ್ಧಿ ಪರ್ವದ ವೇಗಕ್ಕೆ ಸಾಕ್ಷಿ ಎಂದರು. “ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನೂ, ಅಭಿವೃದ್ಧಿ ಕಾಮಗಾರಿಗಳನ್ನೂ ಒಂದೇ ಜಾಗದಲ್ಲಿ ನಿಲ್ಲಿಸಿಲ್ಲ. ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ” ಎಂದು ಹೇಳಿದರು.

ಬಿಜೆಪಿ “ಖಜಾನೆ ಖಾಲಿ” ಎಂದು ಆರೋಪ ಮಾಡುತ್ತಿದ್ದರೂ, ನಾವು ಕೈಗೊಂಡಿರುವ ಅಭಿವೃದ್ದಿ ಕಾರ್ಯಗಳ ಅಂಕಿಅಂಶವೇ ಅವರಿಗೆ ಉತ್ತರ. ರಾಜ್ಯದ ಪ್ರತೀ ಕುಟುಂಬಕ್ಕೂ ಪ್ರತೀ ತಿಂಗಳು ಸರ್ಕಾರದ ಸವಲತ್ತು ಹೋಗುತ್ತಿದೆ. ನಮ್ಮ ಸರ್ಕಾರ ಇರುವವರೆಗೂ ಯಾವುದೇ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ ಎಂದು ಭರವಸೆ ನೀಡಿದರು. ಜಾತಿ–ವರ್ಗ ಭೇದ ಹೋಗಿ ಪ್ರತಿಯೊಬ್ಬ ಬಡವನಿಗೂ ಆರ್ಥಿಕ ಶಕ್ತಿ ಬರಬೇಕು ಎಂಬುದು ಸರ್ಕಾರದ ಉದ್ದೇಶ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಬೇಡಿಕೆ ಇಟ್ಟಿದ್ದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಹಾಗೂ ಕ್ಷೇತ್ರದ ಶಾಸಕರ ಮನವಿಗೆ ಸ್ಪಂದಿಸಿದ ಸಿಎಂ, ಶಿಡ್ಲಘಟ್ಟಕ್ಕೆ ಮಿನಿ ವಿಧಾನಸೌಧ ಸೇರಿದಂತೆ ಇನ್ನಷ್ಟು ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಮಾತನಾಡಿ, ಕೋಲಾರ–ಚಿಕ್ಕಬಳ್ಳಾಪುರ ಭಾಗದಲ್ಲಿ ಕುಡಿಯುವ ನೀರಿನ ಕೊರತೆ ಗಂಭೀರವಾಗಿದ್ದು, ಎತ್ತಿನಹೊಳೆ ಯೋಜನೆಯಡಿ ನೀರು ಹರಿಸುವ ವಾಗ್ದಾನವನ್ನು ಈಡೇರಿಸಬೇಕೆಂದು ಮನವಿ ಮಾಡಿದರು. “ಇಲ್ಲಿ ಬೆಳೆಯದ ಬೆಳೆ ಇಲ್ಲ, ಆದರೆ ನೀರೇ ಸಮಸ್ಯೆ. ಈ ಭಾಗಕ್ಕೆ ನೀರು ಬಂದರೆ ಕೃಷಿಯೂ, ಜೀವನವೂ ಬದಲಾಗುತ್ತದೆ” ಎಂದರು.

ಶಿಡ್ಲಘಟ್ಟದ ಶಾಸಕ ಬಿ.ಎನ್.ರವಿಕುಮಾರ್ ಮಾತನಾಡಿ, ಕ್ಷೇತ್ರದ 270 ಕಿಲೋಮೀಟರ್ ರಸ್ತೆಗಳು ಹದಗೆಟ್ಟು ಅಪಘಾತಗಳು ಹೆಚ್ಚಾಗಿವೆ. ವಿಶೇಷ ಅನುದಾನ ನೀಡಿ ಅಭಿವೃದ್ಧಿಗೆ ಸಹಕರಿಸಬೇಕೆಂದು ಸಿಎಂಗೆ ಮನವಿ ಮಾಡಿದರು. “ನನಗೆ ಜನ್ಮ ನೀಡಿದ ತಾಯಿ ತಂದೆ ಮತ್ತು ಈ ಕ್ಷೇತ್ರದ ಮತದಾರರ ಆಶೀರ್ವಾದದಿಂದ ನಾನು ಶಾಸಕನಾಗಿದ್ದೇನೆ. ಅವರ ಋಣ ತೀರಿಸಲು ಅಭಿವೃದ್ಧಿ ಅಗತ್ಯ” ಎಂದರು.

ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವರಿಗೆ ರೇಷ್ಮೆಯ ಹಾರ, ಶಾಲು ಹಾಗೂ ಕಂಚಿನ ಮೂರ್ತಿಗಳನ್ನು ನೀಡಿ ಸನ್ಮಾನಿಸಲಾಯಿತು. ಕುರುಬ ಸಮುದಾಯದ ಮುಖಂಡರು ಗಂಡು ಕುರಿ ಮರಿಯನ್ನು ನೀಡಿ ಸಾಂಪ್ರದಾಯಿಕವಾಗಿ ಗೌರವ ಸಲ್ಲಿಸಿದರು. ಸ್ಥಳೀಯ ಕಲಾವಿದರ ಜನಪದ ಗೀತೆಗಳು, ಜಿಲ್ಲೆಯಲ್ಲಿ ಬೆಳೆಯುವ ಬೆಳೆಗಳ ರಾಶಿ ಮತ್ತು ಜಿಲ್ಲಾ ಅಭಿವೃದ್ಧಿಯ “ಜಿಲ್ಲಾ ದರ್ಶನ” ಪುಸ್ತಕ ಎಲ್ಲರ ಗಮನ ಸೆಳೆಯಿತು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-24/11/2025

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 24/11/2025

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 323
Qty: 16775 Kg
Mx : 769
Mn: 455
Avg: 674

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 06
Qty: 370 Kg
Mx : ₹ 851
Mn: ₹ 725
Avg: ₹ 788


For Daily Updates WhatsApp ‘HI’ to 7406303366

ಪದ್ಮಶ್ರೀ ಪುರಸ್ಕೃತ ಮುನಿವೆಂಕಟಪ್ಪ ಆಸ್ಪತ್ರೆಗೆ ದಾಖಲು

0
Padmashri Tamate Munivenkatappa Hospitalized

Sidlaghatta, chikkaballapur : ಪದ್ಮಶ್ರೀ ಪುರಸ್ಕೃತ ಪಿಂಡಿಪಾಪನಹಳ್ಳಿಯ ತಮಟೆವಾದಕ ನಾಡೋಜ ಮುನಿವೆಂಕಟಪ್ಪ ಅವರ ಆರೋಗ್ಯ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಗುರುವಾರದಿಂದ ಅವರ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದೆ. ಅವರ ಮೊಮ್ಮಗ ಪ್ರಸನ್ನ ಕುಮಾರ್ ಶುಕ್ರವಾರ ಚಿಂತಾಮಣಿಯ ಡೆಕ್ಕನ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅವರು ಕೋಲಾರದ ಜಾಲಪ್ಪ ಆಸ್ಪತ್ರೆಯಲ್ಲಿ ಎಂ.ಆರ್.ಐ ಸ್ಕ್ಯಾನ್ ಮಾಡಿಸುವಂತೆ ಸೂಚಿಸಿದ್ದಾರೆ. ಅಲ್ಲಿ ವೈದ್ಯರು ಸೋಡಿಯಂ ಕಡಿಮೆ ಆಗಿರುವ ಹಾಗಿದೆ, ಪಾರ್ಶ್ವವಾಯು ತಗುಲಿರುವ ಸಾಧ್ಯತೆ ಇದೆ ಎಂದು ಹೇಳಿ, ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಕಳಿಸಿದ್ದಾರೆ. ಅಲ್ಲಿಯೂ ಹಲವು ಟೆಸ್ಟ್ ಗಳನ್ನು ಮಾಡಿ, ಇಲ್ಲಿ ಐ.ಸಿ.ಯು ಇಲ್ಲ, ಖಾಸಗಿ ಆಸ್ಪತೆಗೆ ಹೋಗಿ ಎಂದು ಹೇಳಿದ್ದಾರೆ. ಆನಂತರ ಅವರು ಬೇಗೂರಿನ ಜಯಶ್ರೀ ಆಸ್ಪತ್ರೆಗೆ ಶನಿವಾರ ದಾಖಲಿಸಿದ್ದು, ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

“ಜಿಲ್ಲಾಧಿಕಾರಿ ಅವರಿಗೆ ಹಲವು ಬಾರಿ ಕರೆ ಮಾಡಿದೆ. ಅವರು ಕರೆ ಸ್ವೀಕರಿಸಲಿಲ್ಲ. ಅವರ ಪಿ.ಎ ಗೆ ಕರೆ ಮಾಡಿದೆ. ಅವರು ಮಾತನಾಡಿ ಜಿಲ್ಲಾ ಆರೋಗ್ಯಾಧಿಕಾರಿ ಅವರಿಗೆ ತಿಳಿಸಿದರು. ಜಿಲ್ಲಾ ಆರೋಗ್ಯಾಧಿಕಾರಿ ಅವರು ಇಲ್ಲಿ ಚಿಕಿತ್ಸೆ ನೀಡುತ್ತಿರುವ ವೈದ್ಯರೊಂದಿಗೆ ಮಾತನಾಡಿದರು” ಎಂದು ಮುನಿವೆಂಕಟಪ್ಪ ಅವರ ಮೊಮ್ಮಗ ಪ್ರಸನ್ನ ಕುಮಾರ್ ತಿಳಿಸಿದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-23/11/2025

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 23/11/2025

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 312
Qty: 16119 Kg
Mx : 755
Mn: 455
Avg: 675

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 18
Qty: 1062 Kg
Mx : ₹ 905
Mn: ₹ 685
Avg: ₹ 799


For Daily Updates WhatsApp ‘HI’ to 7406303366

ತಾಲ್ಲೂಕು ಮಟ್ಟದ ವಿಜ್ಞಾನ ವಸ್ತುಪ್ರದರ್ಶನ ಸ್ಪರ್ಧೆ

0
Sidlaghatta Taluk Level Science Exhibition

Sidlaghatta, Chikkaballapur : ಬಾಲ್ಯದಿಂದಲೇ ಪ್ರಶ್ನಿಸುವ, ಆಲೋಚಿಸುವ, ತಿಳಿದುಕೊಳ್ಳಲು ಪ್ರಯತ್ನಿಸುವ ಗುಣಗಳನ್ನು ಬೆಳೆಸಿಕೊಳ್ಳುವುದು ಅತ್ಯಂತ ಮುಖ್ಯ ಎಂದು ತಾಲ್ಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಎಚ್.ಎಸ್. ರುದ್ರೇಶಮೂರ್ತಿ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಗರುಡಾದ್ರಿ ಶಾಲೆ, ಶಿಡ್ಲಘಟ್ಟನಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಸರ್ ಎಂ. ವಿಶ್ವೇಶ್ವರಯ್ಯ ವಿಜ್ಞಾನ ಮತ್ತು ತಾಂತ್ರಿಕ ವಸ್ತುಸಂಗ್ರಹಾಲಯಗಳ ಆಶ್ರಯದಲ್ಲಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ ವಿಜ್ಞಾನ ವಸ್ತುಪ್ರದರ್ಶನಕ್ಕೆ ಉದ್ಘಾಟನೆ ನೀಡಿ ಮಾತನಾಡಿದರು.

“ವಿಜ್ಞಾನವೆಂದರೆ ಪುಸ್ತಕದಿಂದ ಕಲಿಯುವುದಲ್ಲ – ಪ್ರಯೋಗ, ಮಾದರಿ ನಿರ್ಮಾಣ, ಸ್ಥಳಭೇಟಿಗಳು, ಆತ್ಮಪರಿಶೀಲನೆಗಳ ಮೂಲಕ ಕಲಿಯುವಾಗ ವಿಜ್ಞಾನ ನಿಜವಾಗಿ ಪರಿಣಾಮ ಬೀರುತ್ತದೆ. ವಿದ್ಯಾರ್ಥಿಗಳಲ್ಲಿ ಈ ದಿಶೆಯೇ ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ಸಹಕಾರಿ.” ಎಂದು ಅವರು ಹೇಳಿದರು

ಶಿಕ್ಷಣ ಸಂಯೋಜಕ ಯು.ವೈ. ಮಂಜುನಾಥ್ ಮಾತನಾಡಿ “ವಿಜ್ಞಾನ ಕಲಿಕೆಗೆ ಪೋಷಕರು ಹೆಚ್ಚಿನ ಉತ್ತೇಜನ ಕೊಡಬೇಕು. ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಪಾಲ್ಗೊಂಡಾಗ ಅವರ ಆತ್ಮವಿಶ್ವಾಸ, ಚಿಂತನೆ ಮತ್ತು ಕೌಶಲ್ಯ ಬೆಳೆಸಿಕೊಳ್ಳಲು ಸಾಧ್ಯ,” ಎಂದು ಹೇಳಿದರು.

“ವಿಜ್ಞಾನವನ್ನು ಸರಳಗೊಳಿಸಲು, ಸುಲಭಗೊಳಿಸಲು ಕಳೆದ ಎರಡು ವರ್ಷಗಳಿಂದಲೇ ಪಟ್ಟಿಯಲ್ಲಿ ಆಧಾರಿತ ವಿಜ್ಞಾನ ಪ್ರಯೋಗ ಕಾರ್ಯಾಗಾರಗಳನ್ನು ನಡೆಸುತ್ತಿದ್ದೇವೆ.” ಎಂದು ತಾಲ್ಲೂಕು ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಲ್.ವಿ. ವೆಂಕಟರೆಡ್ಡಿ ಹೇಳಿದರು.

ಸಾಮೂಹಿಕ ವಿಭಾಗದಲ್ಲಿ 14 ತಂಡಗಳು, ವೈಯಕ್ತಿಕ ವಿಭಾಗದಲ್ಲಿ 11 ತಂಡಗಳು ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಿದವು.

ವಿಜೇತರಿಗೆ ಬಹುಮಾನ ಮತ್ತು ಪ್ರಮಾಣ ಪತ್ರ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲೆ ರೂಪಾ ಕೆ. ರಮೇಶ್, ತೀರ್ಪುಗಾರರು ಜಿ.ಲಕ್ಷ್ಮಿಪ್ರಸಾದ್, ಬೃಂದಾ, ವಿಶ್ವನಾಥ್ ಸೇರಿದಂತೆ ಅನೇಕ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ರೈತರು ಕಡ್ಡಾಯವಾಗಿ ಕಾಲುಬಾಯಿ ಲಸಿಕೆ ಹಾಕಿಸಿ, ರಾಸುಗಳನ್ನು ರಕ್ಷಿಸಿ

0
Sidlaghatta melur Foot and Mouth Disease awareness

Melur, Sidlaghatta, Chikkaballapur : ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಗನಹಳ್ಳಿಯಲ್ಲಿ ಜಾನುವಾರುಗಳಲ್ಲಿ ಹರಡುವ ಕಾಲುಬಾಯಿ ರೋಗ ನಿಯಂತ್ರಣಕ್ಕಾಗಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಜಿ.ವಿ. ಸುರೇಶ್ ಅವರು ಲಸಿಕಾ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು.

ಅವರು ರೈತರಿಗೆ ಮನವಿ ಮಾಡುತ್ತಾ, “ಕಾಲುಬಾಯಿ ರೋಗದಿಂದ ಜಾನುವಾರುಗಳ ಆರೋಗ್ಯದ ಜೊತೆಗೆ ರೈತರ ಆರ್ಥಿಕಸ್ಥಿತಿಗೂ ಭಾರೀ ಹೊಡೆತ ಬೀಳುತ್ತದೆ. ಇದನ್ನು ತಡೆಯಲು ಲಸಿಕೆ ಹಾಕಿಸುವುದು ಏಕೈಕ ಪರಿಣಾಮಕಾರಿ ಮಾರ್ಗ. ನಾಲ್ಕು ತಿಂಗಳ ಮೇಲ್ಪಟ್ಟ ಎಲ್ಲ ಜಾನುವಾರುಗಳಿಗೆ ಲಸಿಕೆ ಕಡ್ಡಾಯ,” ಎಂದು ತಿಳಿಸಿದರು.

ನವೆಂಬರ್ 3 ರಿಂದ ಡಿಸೆಂಬರ್ 2 ರವರೆಗೆ ನಡೆಯುವ ರಾಷ್ಟ್ರವ್ಯಾಪಿ ಲಸಿಕಾ ಅಭಿಯಾನವನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕೆಂದು ಅವರು ಹೇಳಿದರು. ಇದು ರಾಜ್ಯದಲ್ಲಿ ನಡೆಯುತ್ತಿರುವ 8ನೇ ಸುತ್ತಿನ ಲಸಿಕಾ ಅಭಿಯಾನವಾಗಿದ್ದು, ರೋಗ ಹರಡುವಿಕೆ ತಡೆಯಲು ನಿಯಮಿತ ಲಸಿಕೆ ಅತ್ಯಾವಶ್ಯಕವೆಂದರು.

“ಲಸಿಕೆ ಹಾನಿಯಲ್ಲ, ರಕ್ಷಣೆ”

ಪಶುಪಾಲನಾ ಇಲಾಖೆಯ ಪಶುಸಖಿ ಇಂದ್ರ ಮಾತನಾಡಿ, “ಲಸಿಕೆ ಹಾಕಿಸಿದರೆ ಹಾಲು ಕಡಿಮೆಯಾಗುತ್ತದೆ ಎಂಬ ತಪ್ಪು ಕಲ್ಪನೆ ತಪ್ಪಾಗಿದೆ. ಲಸಿಕೆ ಜಾನುವಾರುಗಳ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ರೈತರು ಯಾವುದೇ ಭಯವಿಲ್ಲದೆ ಲಸಿಕೆ ಹಾಕಿಸಬೇಕು,” ಎಂದು ತಿಳಿಸಿದರು.

ಕಾಲುಬಾಯಿ ರೋಗದ ಲಕ್ಷಣಗಳು ಮತ್ತು ಮುನ್ನೆಚ್ಚರಿಕೆ ಕುರಿತು ಜಾಗೃತಿ

ಡೇರಿ ಮುಖ್ಯ ಕಾರ್ಯನಿರ್ವಾಹಕ ಬೈರೇಗೌಡ ಅವರು ಕಾಲುಬಾಯಿ ರೋಗದ ಲಕ್ಷಣಗಳನ್ನು ವಿವರಿಸಿದರು — ಜ್ವರ, ಬಾಯಿಯಲ್ಲಿ ಹುಣ್ಣು, ಜೊಲ್ಲು ಸುರಿಯುವುದು, ಕಾಲು ಕುಂಟುವುದು, ಕೆಚ್ಚಲಿನ ಮೇಲೆ ಗುಳ್ಳೆ ಕಾಣಿಸಿಕೊಳ್ಳುವುದು.

ರೋಗ ನಿಯಂತ್ರಣಕ್ಕೆ ಸೂಚಿಸಿದ ಕ್ರಮಗಳಲ್ಲಿ:

  • ಅಡುಗೆ ಸೋಡಾದ ದ್ರಾವಣದಿಂದ ಹುಣ್ಣಿನ ಭಾಗ ಶುದ್ಧಗೊಳಿಸುವುದು
  • ಮೃದುವಾದ ಆಹಾರಗಳಾದ ಗಂಜಿ, ಬಾಳೆಹಣ್ಣು, ರಾಗಿ ಅಂಬಲಿ ನೀಡುವುದು
  • ಕೊಟ್ಟಿಗೆ ಸ್ವಚ್ಛತೆ, ಕ್ರಿಮಿನಾಶಕಗಳು ಬಳಸುವುದು
  • ರೋಗ ಪೀಡಿತ ಜಾನುವಾರುಗಳನ್ನು ಬೇರ್ಪಡಿಸಿ ನೋಡಿಕೊಳ್ಳುವುದು ಸೇರಿವೆ

“ಕಾಲುಬಾಯಿ ರೋಗ ತಡೆಗಟ್ಟಲು ಸರಿಯಾದ ಕ್ರಮ ಎಂದರೆ – ಸತತವಾಗಿ ಎರಡು ಬಾರಿ ಲಸಿಕೆ ಹಾಕಿಸುವುದು ಮತ್ತು ನಂತರ ಪ್ರತಿ ಆರು ತಿಂಗಳಿಗೊಮ್ಮೆ ಲಸಿಕೆ ಪುನರಾವರ್ತನೆ ಮಾಡುವುದು,” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಡೇರಿ ಉಪಾಧ್ಯಕ್ಷ ಜಿ.ಎಂ. ಮುತ್ತೇಗೌಡ, ನಿರ್ದೇಶಕರು ಕರಗಪ್ಪ, ಅಶ್ವಥಪ್ಪ, ಜಿ.ಕೆ. ಶಿವಾನಂದ, ಪಿಳ್ಳೇಗೌಡ ಸೇರಿದಂತೆ ಅನೇಕರು ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-22/11/2025

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 22/11/2025

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 304
Qty: 14920 Kg
Mx : 763
Mn: 466
Avg: 665

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 07
Qty: 431 Kg
Mx : ₹ 876
Mn: ₹ 463
Avg: ₹ 763


For Daily Updates WhatsApp ‘HI’ to 7406303366

ಪಕ್ಷದ ಅಡಿಯಲ್ಲೇ ಚುನಾವಣೆ, ಕಾರ್ಯಕ್ರಮ, ನಿಯಮ ಉಲ್ಲಂಘಿಸಿದರೆ ಕ್ರಮ : ಅಭಿಷೇಕ್ ದತ್ ಎಚ್ಚರಿಕೆ

0
Sidlaghatta Congress Abhishek Dutt pre election Meeting

Sidlaghatta : ಶಿಡ್ಲಘಟ್ಟದಲ್ಲಿ ನಡೆದ ವೋಟ್ ಚೋರ್ ಗದ್ದಿ ಚೋಡ್ ಸಹಿ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿರುವ ಹಿನ್ನೆಲೆಯಲ್ಲಿ, ಕ್ಷೇತ್ರಕ್ಕೆ ಭೇಟಿ ನೀಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ದತ್ ಅವರು ಕಾಂಗ್ರೆಸ್ ಕಾರ್ಯಕರ್ತರನ್ನು ಅಭಿನಂದಿಸಿ, ಮುಂಬರುವ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡರು.

ಸಭೆಯಲ್ಲಿ ಮಾತನಾಡಿದ ಅಭಿಷೇಕ್ ದತ್, “ಭಾರತದಲ್ಲಿ ಜನತಂತ್ರದ ಆತ್ಮವೇ – ಸ್ವತಂತ್ರ ಹಾಗೂ ನ್ಯಾಯಸಮ್ಮತ ಚುನಾವಣೆ. ಆದರೆ ಬಿಜೆಪಿಯು ಮತಗಳ್ಳತನದ ಮೂಲಕ ಅಧಿಕಾರ ಹಿಡಿಯುತ್ತಿರುವ ಉದಾಹರಣೆಗಳು ಹೆಚ್ಚುತ್ತಿವೆ. ಮತದಾರರು ಇದಕ್ಕೆ ಸೂಕ್ತ ಪಾಠ ಕಲಿಸುವ ಸಮಯ ದೂರದಲ್ಲಿಲ್ಲ,” ಎಂದು ಟೀಕಿಸಿದರು.

ಸಹಿ ಸಂಗ್ರಹ ಅಭಿಯಾನವನ್ನು ಶಿಡ್ಲಘಟ್ಟ ಬ್ಲಾಕ್ ಕಾಂಗ್ರೆಸ್ ಒಗ್ಗಟ್ಟಿನಿಂದ ಯಶಸ್ವಿಗೊಳಿಸಿರುವುದನ್ನು ಅವರು ಶ್ಲಾಘಿಸಿದರು. “ಇದೇ ಉತ್ಸಾಹ ಮುಂದಿನ ಎಲ್ಲ ಚುನಾವಣೆಗಳಲ್ಲಿ ಮುಂದುವರಿದರೆ, ಆಗ್ನೇಯ ಪದವೀಧರ ಕ್ಷೇತ್ರದಲ್ಲೂ ಕಾಂಗ್ರೆಸ್ ಗೆಲುವು ಖಚಿತ,” ಎಂದು ಹೇಳಿದರು.

ಪಕ್ಷ ಸಂಘಟನೆಯಲ್ಲಿ ಉತ್ತಮ ಪಾತ್ರವಹಿಸಿರುವ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸಹನಾ ರಾಜೀವ್ ಗೌಡ ಮತ್ತು ಮತ್ತೋರ್ವ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಾರೆಡ್ಡಿ ಅವರನ್ನು ವೇದಿಕೆಯಲ್ಲಿ ಅಭಿನಂದಿಸಿ ಶಾಲು ಹೊದಿಸಲಾಯಿತು.

“ದೇಶದಲ್ಲಿ ಕಾಂಗ್ರೆಸ್ ಮರುಸ್ಥಾಪನೆ ಅನಿವಾರ್ಯ. ನಮ್ಮ ತತ್ವಗಳು, ಸಾಧನೆಗಳು, ಜನಪರ ಕಾರ್ಯಕ್ರಮಗಳನ್ನು ಒಬ್ಬೊಬ್ಬ ಮತದಾರಿಗೆ ತಲುಪಿಸುವ ಜವಾಬ್ದಾರಿ ನಿಮ್ಮದು,” ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಸಭೆಯಲ್ಲಿ ಉದ್ವಿಗ್ನ ಕ್ಷಣ – ಇಬ್ಬರು ನಾಯಕ ಬೆಂಬಲಿಗರ ನಡುವೆ ಮಾತಿನ ಚಕಮಕಿ

ಅಭಿನಂದನಾ ಕಾರ್ಯಕ್ರಮದ ವೇಳೆ, ರಾಜೀವ್ ಗೌಡ ಮತ್ತು ಪುಟ್ಟು ಆಂಜಿನಪ್ಪ ಅವರ ಬೆಂಬಲಿಗರ ನಡುವೆ ಜೈಕಾರ ಘೋಷಣೆ ಹಿನ್ನೆಲೆಯಲ್ಲಿ ಮಾತಿನ ಚಕಮಕಿ ಸಂಭವಿಸಿತು. ಸ್ವಲ್ಪ ಸಮಯ ನೂಕಾಟ–ತಳ್ಳಾಟ ಕೂಡ ನಡೆದಿದ್ದು, ಸಭೆಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ವಿರೋಧಿಸಿ ಸ್ಪರ್ಧಿಸಿದ್ದ ಪುಟ್ಟು ಆಂಜಿನಪ್ಪ ಅವರ ಹಾಜರಾತಿಯ ಕುರಿತು ಕೆಲವು ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದರು. ಗೊಂದಲ ಹೆಚ್ಚಾಗುತ್ತಿದ್ದಂತೆಯೇ ಪೊಲೀಸರು ಮಧ್ಯಪ್ರವೇಶಿಸಿ ಕೆಲವು ಕಾರ್ಯಕರ್ತರನ್ನು ಸ್ಥಳದಿಂದ ಹೊರ ಕಳುಹಿಸಿದರು. ನಂತರ ಸಭೆಯು ಪುನಃ ಮುಂದುವರಿಯಿತು.

ಶಿಸ್ತು ಕುರಿತಾಗಿ ಅಭಿಷೇಕ್ ದತ್ ಎಚ್ಚರಿಕೆ


“ವೋಟ್ ಚೋರ್ ಗದ್ದಿ ಚೋಡ್ ಅಭಿಯಾನವನ್ನು ಯಾರೇ ನಡೆಸುತ್ತಿರಲಿ – ಅದು ಪಕ್ಷದ ನಿಯಮದಂತೆ, ಬ್ಲಾಕ್ ಕಾಂಗ್ರೆಸ್ ಮತ್ತು ಮುಂಚೂಣಿ ಘಟಕಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಡೆಯಬೇಕು. ಪ್ರತ್ಯೇಕವಾಗಿ ಕಾರ್ಯಕ್ರಮ ನಡೆಸುವುದು ಶಿಸ್ತುಭಂಗ. ಮುಂದಿನ ದಿನಗಳಲ್ಲಿ ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮ ಅನಿವಾರ್ಯ.” ಎಂದು ಸಭೆಯ ಬಳಿಕ ಇಬ್ಬರು ನಾಯಕರೊಂದಿಗೆ ಮಾತನಾಡಿದ ಅಭಿಷೇಕ್ ದತ್ ಸ್ಪಷ್ಟಪಡಿಸಿದರು

ಅಭಿಯಾನ, ಕಾರ್ಯಕ್ರಮ, ಹೋರಾಟಗಳು ಎಲ್ಲವೂ ಪಕ್ಷದ ಶಿಸ್ತು ಮತ್ತು ವ್ಯವಸ್ಥೆಯ ಒಳಗೆ ಸಾಗಬೇಕು ಎಂದು ಅವರು ಪುನರುಚ್ಚರಿಸಿದರು.

ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಕೇಶವರೆಡ್ಡಿ, ಕೆಪಿಸಿಸಿ ಕೋ–ಆರ್ಡಿನೇಟರ್ ರಾಜೀವ್ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸಹನಾ ರಾಜೀವ್ ಗೌಡ, ಅಧ್ಯಕ್ಷ ಕೃಷ್ಣಾರೆಡ್ಡಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಎ. ನಾಗರಾಜ್, ಕೆ.ಗುಡಿಯಪ್ಪ, ಬಿ.ವಿ.ಮುನೇಗೌಡ, ಪುಟ್ಟು ಆಂಜಿನಪ್ಪ, ಅಫ್ಸರ್ ಪಾಷ, ವೆಂಕಟೇಶ್, ನಿರಂಜನ್ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.


For Daily Updates WhatsApp ‘HI’ to 7406303366

ನ.24ರಂದು ಸಿಎಂ ಸಿದ್ದರಾಮಯ್ಯ ಭೇಟಿ – ಭಾರೀ ಸಿದ್ಧತೆ

0
CM Siddaramaiah Sidlaghatta visit Preparations

Sidlaghatta, Chikkaballapur : ಶಿಡ್ಲಘಟ್ಟ: ಜಿಲ್ಲೆಯಲ್ಲಿ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 24ರಂದು ಶಿಡ್ಲಘಟ್ಟಕ್ಕೆ ಆಗಮಿಸುತ್ತಿದ್ದಾರೆ. ಸಿಎಂ ಆಗಮನದ ಮುನ್ನ ಭಾರೀ ಸಿದ್ಧತೆಗಳು ನಡೆಯುತ್ತಿದ್ದು, ತಾಲ್ಲೂಕು ಮತ್ತು ಜಿಲ್ಲಾಡಳಿತವು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸುತ್ತಿದೆ.

ವಿಶಾಲ ವೇದಿಕೆ, ಸಾವಿರಾರು ಜನರಿಗೆ ವ್ಯವಸ್ಥೆ

ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರು ಹನುಮಂತಪುರ ಗ್ರಾಮದ ಬಳಿಯ ಕಾರ್ಯಕ್ರಮ ಸ್ಥಳಕ್ಕೆ ಭೇಟಿ ನೀಡಿ ಸಿದ್ಧತೆಗಳ ವಿಮರ್ಶೆ ನಡೆಸಿದರು.

ವರದನಾಯಕನಹಳ್ಳಿ ಗೇಟ್ ಬಳಿ 200 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ ಸ್ಥಳದಲ್ಲಿಯೇ ಬೃಹತ್ ವೇದಿಕೆ ನಿರ್ಮಿಸಲಾಗಿದೆ. ಜರ್ಮನ್ ಮಾದರಿಯ ದೊಡ್ಡ ಪೆಂಡಾಲ್, ಸಾವಿರಾರು ಆಸನ ವ್ಯವಸ್ಥೆ, ಶುದ್ಧ ಕುಡಿಯುವ ನೀರು, ಗಾಳಿ, ಬೆಳಕು, ಎಲ್‌ಇಡಿ ಪರದೆಗಳಲ್ಲಿ ನೇರ ಪ್ರಸಾರ, ಸಾರ್ವಜನಿಕರಿಗೆ ಊಟ ಮತ್ತು ಪಾರ್ಕಿಂಗ್ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

ಸಿಎಂ ಆಗಮನಕ್ಕೆ ರಸ್ತೆ-ಹೆಲಿಪ್ಯಾಡ್ ಸಿದ್ಧತೆ

ಸಿಎಂ ರಸ್ತೆ ಮೂಲಕ ಬರುವದೋ ಅಥವಾ ಹೆಲಿಕ್ಯಾಪ್ಟರ್ ಮೂಲಕ ಆಗಮಿಸುವದೋ ಇನ್ನೂ ಘೋಷಣೆ ಆಗದಿದ್ದರೂ, ಎರಡೂ ಮಾರ್ಗಗಳಲ್ಲೂ ಭಾರೀ ಸಿದ್ಧತೆ ನಡೆಯುತ್ತಿದೆ.

  • ದಿಬ್ಬೂರಹಳ್ಳಿ ಬೈಪಾಸ್ ಹಾಗೂ ಟಿಬಿ ರಸ್ತೆಗಳಲ್ಲಿ ಡಾಂಬರೀಕರಣ ಮತ್ತು ಸ್ವಚ್ಛತಾ ಕಾರ್ಯಗಳು ರಾತ್ರಿ ಹಗಲೇ ಸಾಗುತ್ತಿವೆ.
  • ರಸ್ತೆ ವಿಭಜಕಗಳಲ್ಲಿ ಕಳೆ ತೆರವು, ಅಲಂಕಾರಿಕ ಗಿಡಗಳ ನಾಟಿ, ತಡೆಗೋಡೆಗಳಿಗೆ ಸುಣ್ಣಬಣ್ಣ ಬಳಿಯಲಾಗುತ್ತಿದೆ.
  • ಸಿಎಂ ಹೆಲಿಕ್ಯಾಪ್ಟರ್ ಮೂಲಕ ಬರಬಹುದಾದ ಹಿನ್ನೆಲೆಯಲ್ಲಿ ವರದನಾಯಕನಹಳ್ಳಿ ಯೂನಿವರ್ಸಲ್ ಶಾಲೆ ಬಳಿ ಹೆಲಿಪ್ಯಾಡ್ ನಿರ್ಮಾಣ ಅಂತಿಮ ಹಂತದಲ್ಲಿದೆ. ಶಾಲೆಯಲ್ಲೇ ವಿಐಪಿ–ವಿವಿಐಪಿ ಊಟ ವ್ಯವಸ್ಥೆ ಕೂಡ ಮಾಡಲಾಗಿದೆ.

₹2,000 ಕೋಟಿ ಯೋಜನೆಗಳಿಗೆ ಚಾಲನೆ

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಳಗಿನ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ:

  • ₹200 ಕೋಟಿ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ
  • ಶಿಡ್ಲಘಟ್ಟ ನಗರಕ್ಕೆ ಸಾದಲಿ ರಾಮಸಮುದ್ರ ಕೆರೆಯಿಂದ ಕುಡಿಯುವ ನೀರು ಯೋಜನೆ
  • ನಗರದ 2ನೇ ಹಂತದ ಒಳಚರಂಡಿ ಕಾಮಗಾರಿ
  • ಸಾದಲಿ ಬಳಿಯ ಸಮುದಾಯ ಆರೋಗ್ಯ ಕೇಂದ್ರ ಲೋಕಾರ್ಪಣೆ
  • ರಸ್ತೆ ಅಭಿವೃದ್ಧಿ ಮತ್ತು ಶಾಶ್ವತ ನೀರಾವರಿ ಸಂಬಂಧಿಸಿದ ಇನ್ನಿತರೆ ಯೋಜನೆಗಳು

ಸಿಎಂ ಆಗಮನದ ದಿನ ಸಮೀಪಿಸುತ್ತಿರುವುದರಿಂದ ಶಿಡ್ಲಘಟ್ಟ ಪಟ್ಟಣವೇ ಹಬ್ಬದ ವಾತಾವರಣದಲ್ಲಿ ಸಿಂಗಾರಗೊಂಡಿದೆ. ಜಿಲ್ಲೆಯ ಎಲ್ಲೆಡೆಯಿಂದ ಸಾವಿರಾರು ಜನರು ಆಗಮಿಸುವ ನಿರೀಕ್ಷೆಯಿದ್ದು, ಜಿಲ್ಲಾಧಿಕಾರಿಗಳು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ.

Sidlaghatta WhatsApp Channel Group

For Daily Updates WhatsApp ‘HI’ to 7406303366

ಪ್ರತಿಭಟನೆ ಹಿಂಪಡೆದ ರೀಲರುಗಳು

0
Sidlaghatta Silk Reelers Protest Withdrawn

Sidlaghatta, Chikkaballapur : ಶಿಡ್ಲಘಟ್ಟ ರೇಷ್ಮೆ ಗೂಡಿನ ಮಾರುಕಟ್ಟೆಯಲ್ಲಿ ಶುಕ್ರವಾರ ನಡೆದ ಮಹತ್ವದ ಸಭೆಯಲ್ಲಿ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳ ರೀಲರ್‌ಗಳು ತಮ್ಮ ಸಮಸ್ಯೆಗಳು ಮತ್ತು ಬೇಡಿಕೆಗಳನ್ನು ರೇಷ್ಮೆ ಕೃಷಿ ಅಭಿವೃದ್ಧಿ ಆಯುಕ್ತೆ ಹಾಗೂ ನಿರ್ದೇಶಕಿ ವಿನೋತ್ ಪ್ರಿಯಾ ಅವರ ಮುಂದಿಡಿದರು. ಸಭೆಯಲ್ಲಿ ರೀಲರ್‌ ಅಸೋಸಿಯೇಷನ್‌ಗಳ ಅಧ್ಯಕ್ಷರು ಹಾಗೂ ಹಲವು ರೀಲರ್‌ ಮುಖಂಡರು ಭಾಗವಹಿಸಿದ್ದರು.

ರೀಲರ್‌ಗಳ ಕುಂದುಕೊರತೆಗಳನ್ನು ಆಲಿಸಿದ ಆಯುಕ್ತೆ, ಹಲವಾರು ಬೇಡಿಕೆಗಳಿಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರೆ, ಕೆಲವು ಬೇಡಿಕೆಗಳನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸುವುದಾಗಿ ತಿಳಿಸಿದ್ದಾರೆ. ಈ ಭರವಸೆಯನ್ನು ಗಮನಿಸಿ, ನವೆಂಬರ್ 24ರಂದು ನಡೆಯಲಿರುವ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆಯ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರತಿಭಟನೆ ನಡೆಸಬಾರದೆಂದು ಎರಡೂ ಜಿಲ್ಲೆಗಳ ರೀಲರ್‌ಗಳು ಒಮ್ಮತದಿಂದ ನಿರ್ಧರಿಸಿದ್ದಾರೆ.

ಸಭೆಯಲ್ಲಿ ರೇಷ್ಮೆ ಅಪರ ನಿರ್ದೇಶಕ ವೈ.ಟಿ.ತಿಮ್ಮಯ್ಯ, ರೇಷ್ಮೆ ಜಂಟಿ ನಿರ್ದೇಶಕ ಎನ್.ಮಹಾದೇವಯ್ಯ, ಜಂಟಿ ನಿರ್ದೇಶಕ ಕೆ.ಎನ್.ರವಿ, ಉಪ ನಿರ್ದೇಶಕ ಎನ್.ಉಮೇಶ್, ಸಹಾಯಕ ನಿರ್ದೇಶಕರಾದ ರಾಮ್ ಕುಮಾರ್, ಅಕ್ಮಲ್ ಪಾಷಾ, ಶ್ರೀನಿವಾಸ್ ಗೌಡ, ಉಪ ನಿರ್ದೇಶಕ ನರಸಿಂಹಮೂರ್ತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸಿಲ್ಕ್ ರೀಲರ್ಸ್ ಅಸೋಸಿಯೇಷನ್ ಅಧ್ಯಕ್ಷ ಅನ್ಸರ್ ಖಾನ್, ರೀಲರ್‌ ಮುಖಂಡರಾದ ಫಾರೂಕ್ ಪಾಷಾ, ಜಿ.ರೆಹಮಾನ್, ಅನ್ವರ್, ಆನಂದ್ ಕುಮಾರ್, ಮುನಿಕೃಷ್ಣ ಸೇರಿದಂತೆ ಅನೇಕರು ಸಭೆಯಲ್ಲಿ ಪಾಲ್ಗೊಂಡರು.

Sidlaghatta WhatsApp Channel Group

For Daily Updates WhatsApp ‘HI’ to 7406303366

error: Content is protected !!