Home Blog Page 289

Sidlaghatta Cocoon Market-18/02/2021

0
Silk cocoon Sidlaghatta Market February 18 2021

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 18/02/2021

CB Lots: 297
Qty: 16277 Kgs
Max: 430
Min: 144
Avg: 386

BV Lots: 01
Qty: 42 Kgs
Max: 451
Min: 451
Avg: 451

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

ಸರ್ಕಾರಿ ಪ್ರೌಢಶಾಲೆಯ ಗೇಟ್ ಮುಂಭಾಗ ವಾಹನ ಪಾರ್ಕಿಂಗ್ ಮಾಡುವುದನ್ನು ತಡೆಯಲು ಬ್ಯಾರಿಕೇಡ್

0
Govt Junior college Sidlaghatta

ತಾಲ್ಲೂಕು ಕೇಂದ್ರ ಸ್ಥಾನವಾದ ನಗರದ ತಾಲ್ಲೂಕು ಕಚೇರಿಗೆ ವಿವಿಧ ಕೆಲಸಗಳ ನಿಮಿತ್ತ ಬರುವ ಸಾರ್ವಜನಿಕರು ತಮ್ಮ ದ್ವಿಚಕ್ರ ವಾಹನ ಮತ್ತು ಕಾರುಗಳನ್ನು ಸರ್ಕಾರಿ ಪ್ರೌಢಶಾಲೆಯ ಗೇಟ್ ಮುಂಭಾಗ ಪಾರ್ಕಿಂಗ್ ಮಾಡುವುದು ಹಾಗೂ ಶಾಲಾ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡುವುದನ್ನು ತಡೆಗಟ್ಟಲು ಕ್ರಮ ವಹಿಸುವಂತೆ ಪೊಲೀಸ್ ಇಲಾಖೆಗೆ ತಹಶೀಲ್ದಾರ್ ಬಿ.ಎಸ್.ರಾಜೀವ್ ಸೂಚನೆ ನೀಡಿದ್ದಾರೆ.

ನಗರದ ನೆಹರೂ ಕ್ರೀಡಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ ನೀಡಲು ಆಗಮಿಸಿದಾಗ ಪದವಿ ಪೂರ್ವ ಕಾಲೇಜಿನ ಕೆಲ ಉಪನ್ಯಾಸಕರು ಮಾಡಿದ ಮನವಿಯ ಮೇರೆಗೆ ಶಾಲಾ ಆವರಣವನ್ನು ವೀಕ್ಷಿಸಿ ಕೂಡಲೇ ಗೇಟ್ ಮುಂಬಾಗ ವಾಹನಗಳನ್ನು ನಿಲ್ಲಿಸುವುದನ್ನು ತಪ್ಪಿಸಲು ಬ್ಯಾರಿಕೇಡ್ ಆಳವಡಿಸುವುದು ಮತ್ತು ಶಾಲಾ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡದಂತೆ ತಡೆಯಲು ಹೋಂ ಗಾರ್ಡ್‌ನನ್ನು ನಿಯೋಜಿಸುವಂತೆ ಸೂಚಿಸಿದರು.

 ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಗಳ ಎಲ್ಲಾ ಪ್ರಕ್ರಿಯೆಗಳು ಇದೇ ಶಾಲಾ ಆವರಣದಲ್ಲಿ ನಡೆದಿದ್ದು ಈ ಸಂದರ್ಭದಲ್ಲಿ ಯಾರೋ ಕಿಡಿಗೇಡಿಗಳು ಶಾಲೆಯ ಕಾಂಪೌಂಡ್ ಕಲ್ಲುಗಳನ್ನು ಕಿತ್ತುಹಾಕಿರುವುದರಿಂದ ಪುಂಡು ಪೋಕರಿಗಳು ಶಾಲೆಗೆ ಬರುವ ಹೆಣ್ಣು ಮಕ್ಕಳನ್ನು ಚುಡಾಯಿಸುತ್ತಿದ್ದಾರೆ. ಸಾಲದ್ದಕ್ಕೆ ಶಾಲೆಯ ಆವರಣದಲ್ಲಿ ನಾಗರಿಕರು ಮೂತ್ರ ವಿಸರ್ಜನೆ ಮಾಡುವುದರಿಂದ ಶಾಲೆಯ ಕೊಠಡಿಗಳವರೆಗೂ ದುರ್ವಾಸನೆ ಬರುತ್ತದೆ. ಈ ದುರ್ವಾಸನೆಯ ನಡುವೆ ಮಕ್ಕಳಿಗೆ ಪಾಠ ಮಾಡುವ ದುಸ್ಥಿತಿಯಲ್ಲಿ ಶಿಕ್ಷಕರಿದ್ದಾರೆ. ಕೂಡಲೇ ಮುರಿದುಹಾಕಿರುವ ಕಾಂಪೌಂಡ್ ಗೋಡೆ ದುರಸ್ತಿಗೊಳಿಸುವುದು ಮತ್ತು ಶಾಲೆಯ ಗೇಟ್ ಬಳಿ ಯಾವುದೇ ವಾಹನ ನಿಲ್ಲದಂತೆ ಕ್ರಮ ಜರುಗಿಸಿ ಎಂಬ ಶಿಕ್ಷಕರ ಮನವಿಗೆ ಸ್ಪಂದಿಸಿದ ತಹಶೀಲ್ದಾರ್ ಬಿ.ಎಸ್.ರಾಜೀವ್, ಪೊಲೀಸ್ ಇಲಾಖೆಯ ನೆರವಿನೊಂದಿಗೆ ಗೇಟ್ ಮುಂಬಾಗ ಬ್ಯಾರೀಕೇಡ್ ಅಳವಡಿಸುವ ಮೂಲಕ ವಾಹನ ನಿಲುಗಡೆಯನ್ನು ತೆರವುಗೊಳಿಸಿದರು.

ಸರ್ಕಾರಿ ಪ್ರೌಡಶಾಲೆ ಹಾಗೂ ಆವರಣದಲ್ಲಿರುವ ಸಮಸ್ಯೆಗಳನ್ನು ಒಂದೇ ಬಾರಿ ಬಗೆಹರಿಸಲು ಸಾಧ್ಯವಿಲ್ಲ. ಹಂತ ಹಂತವಾಗಿ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಜರುಗಿಸಲಾಗುವುದು. ಶಾಲೆ ಹಾಗೂ ಶಾಲಾ ಆವರಣವನ್ನು ಸ್ವಚ್ಚವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಇದರಲ್ಲಿ ಸಾರ್ವಜನಿಕರ ಸಹಕಾರ ಅತ್ಯಗತ್ಯ. ಶಾಲಾ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡುವುದನ್ನು ಬಿಟ್ಟು ಪ್ರವಾಸಿ ಮಂದಿರ ರಸ್ತೆಯಲ್ಲಿರುವ ಸಾರ್ವಜನಿಕ ಶೌಚಾಲಯವನ್ನು ಬಳಸಿಕೊಳ್ಳಬೇಕು

– ತಹಶೀಲ್ದಾರ್ ಬಿ.ಎಸ್.ರಾಜೀವ್

ಚಿತ್ರನಟ ದರ್ಶನ್ ಅಭಿಮಾನಿಗಳಿಂದ ಅನ್ನದಾನ

0
Kannada Movie Film Actor Darshan Fans Melur Sidlaghatta Taluk

ಕನ್ನಡ ಚಲನಚಿತ್ರ ನಟ ದರ್ಶನ್ ನ ಶಿಡ್ಲಘಟ್ಟ ತಾಲ್ಲೂಕಿನ ಮೇಲೂರಿನ ಅಭಿಮಾನಿಗಳು ಅಂಕತಟ್ಟಿ ಬಳಿಯ ಅನಾಥಾಶ್ರಮದಲ್ಲಿ ಕೇಕ್ ಕತ್ತರಿಸಿ ಅನ್ನದಾನವನ್ನು ನಡೆಸಿಕೊಟ್ಟರು.

Sidlaghatta Cocoon Market-17/02/2021

0
Silk cocoon Sidlaghatta Market February 17 2021

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 17/02/2021

CB Lots: 258
Qty: 14566 Kgs
Max: 425
Min: 342
Avg: 389

BV Lots: NILL

ತಾಲ್ಲೂಕು ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ

0
Inauguration Sports Sidlaghatta Taluk Government Employees

ನಗರದ ನೆಹರೂ ಕ್ರೀಡಾಂಗಣದಲ್ಲಿ ಸೋಮವಾರ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ತಾಲ್ಲೂಕು ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ನೀಡಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಂ.ಕೆ.ರಾಜಶೇಖರ್ ಮಾತನಾಡಿದರು.

ಕ್ರೀಡೆಗಳು ವ್ಯಕ್ತಿಯ ವ್ಯಕ್ತಿತ್ವ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುವ ಜೊತೆಗೆ ಮಾನಸಿಕ ಹಾಗೂ ದೈಹಿಕವಾಗಿ ಸದೃಢರನ್ನಾಗಿಸುತ್ತದೆ ಎಂದು ಅವರು ತಿಳಿಸಿದರು.

ಪ್ರತಿನಿತ್ಯ ಒತ್ತಡದ ನಡುವೆ ಕೆಲಸ ನಿರ್ವಹಿಸುವ ಸರ್ಕಾರಿ ನೌಕರರು ಮಾನಸಿಕ ಹಾಗೂ ದೈಹಿಕವಾಗಿ ಸದೃಢಗೊಳ್ಳಲು ಕ್ರೀಡೆ ಸಹಕಾರಿಯಾಗಲಿದೆ. ಪ್ರತಿಯೊಬ್ಬರೂ ಇಂತಹ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಮೂಲಕ ಆರೋಗ್ಯವನ್ನು ಮತ್ತಷ್ಟು ವೃದ್ಧಿಸಿಕೊಳ್ಳಬೇಕು ಎಂದರು.

ತಹಶೀಲ್ದಾರ್ ಬಿ.ಎಸ್.ರಾಜೀವ್ ಮಾತನಾಡಿ, ಕ್ರೀಡಾ ಮನೋಭಾವವನ್ನು ಬೆಳೆಸಿಕೊಳ್ಳುವ ಜೊತೆಗೆ ಸರ್ಕಾರಿ ನೌಕರರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.

ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎನ್.ಸುಬ್ಬಾರಡ್ಡಿ,  ಗೌರವಾಧ್ಯಕ್ಷ ಟಿ.ವಿಜಯ್‌ಕುಮಾರ್, ತಾಲ್ಲೂಕು ಪಂಚಾಯಿತಿ ಇಓ ಬಿ.ಕೆ.ಚಂದ್ರಕಾಂತ್, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಶ್ರೀನಿವಾಸ್, ಸಿಡಿಪಿಓ ನಾಗಮಣಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಆಂಜನೇಯಲು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಎಂ.ಮುನಿರಾಜು, ದೈಹಿಕ ಶಿಕ್ಷಕರ ಸಂಘದ ರಂಗನಾಥ್, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.

ಸಾಮೂಹಿಕ ಶ್ರೀಸತ್ಯನಾರಾಯಣ ಪೂಜಾ ಕಾರ್ಯಕ್ರಮ

0
SKDRDP Dharmasthala Gramabhivruddi Sangha Pooja

ಶಿಡ್ಲಘಟ್ಟ ತಾಲ್ಲೂಕಿನ ಸಾದಲಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಹಾಗೂ ಧಾರ್ಮಿಕ ಸಭೆ ಹಮ್ಮಿಕೊಳ್ಳಲಾಗಿತ್ತು. ತಾಲ್ಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್, ರಮೇಶ್, ಅರ್ಚಕರಾದ ದೇವರಾಜ್, ನಾರಾಯಣಸ್ವಾಮಿ, ಉದಯ ಕುಮಾರ್ ಮೇಲ್ವಿಚಾರಕ ದಿನೇಶ್ ಸೇವಾಪ್ರತಿನಿಧಿಗಳಾದ ಮಂಜುನಾಥ್, ಆದಿನಾರಾಯಣ ಶೆಟ್ಟಿ, ಅನಿತಾ ಹಾಜರಿದ್ದರು

ಬಸ್ ಸಂಚಾರ ಅವ್ಯವಸ್ಥೆ : ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರ ಪರದಾಟ

0
KSRTC Bus Sidlaghatta

ಕರೋನ ಹಿನ್ನೆಲೆ ಸ್ಥಗಿತಗೊಳಸಿದ್ದ ಶಾಲಾ ಕಾಲೇಜುಗಳು ಪುನಾರಂಭವಾಗಿದೆ. ಅದರೆ, ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ಹೋಗಿ ಬರಲು ನಿಗದಿತ ಸಮಯಕ್ಕೆ ಸಾರಿಗೆ ಬಸ್ ಸೌಲಭ್ಯವಿಲ್ಲದೆ, ದಿನನಿತ್ಯ ಹಳ್ಳಿಗಳಿಂದ ನಗರದ ಶಾಲಾ ಕಾಲೇಜಿಗೆ ಬರುವ ವಿದ್ಯಾರ್ಥಿಗಳು ಪರದಾಡುವಂತಹ ಪರಸ್ಥಿತಿ ನಿರ್ಮಾಣವಾಗಿದೆ.

 ತಾಲ್ಲೂಕಿನ ವಿವಿಧ ಗ್ರಾಮೀಣ ಭಾಗದ ಕಡೆಗೆ ವಿದ್ಯಾರ್ಥಿಗಳು ಹೋಗಿಬರಲು ಕೆ.ಎಸ್.ಆರ್.ಟಿ.ಸಿ ಬಸ್ ಗಳನ್ನು ಅವಲಂಬಿಸಿದ್ದಾರೆ. ಶಿಡ್ಲಘಟ್ಟದಿಂದ ಕೈವಾರ ಮಾರ್ಗವಾಗಿ ಸಂಚರಿಸುವ ಕೆ.ಎಸ್.ಆರ್.ಟಿ.ಸಿ ಬಸ್ ಗಳು ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ನಿಗದಿತ ಸಮಯಕ್ಕೆ ಬರುತ್ತಿಲ್ಲ. ಈ ಮಾರ್ಗದಲ್ಲಿ ಸಂಚರಿಸುತಿದ್ದ ಹಲವು ಬಸ್ ಗಳನ್ನು ನಿಲ್ಲಿಸಲಾಗಿದೆ. ಇದರಿಂದ ಬಸ್ ಗಳಲ್ಲಿ, ಎರಡು ಬಸ್ಸಿನ ಜನರನ್ನು ಒಂದೇ ಬಸ್ಸಿನಲ್ಲಿ ಕುರಿಗಳಂತೆ ತುಂಬಿಸಿಕೊಂಡು ಹೋಗುತ್ತಿವೆ.

  “ಮಹಿಳೆಯರು ಪುರಷರ ಜೊತೆಗೆ ನೂಕು ನುಗ್ಗಾಟದ ಮೂಲಕ ಬಸ್ ನಲ್ಲಿ ಪ್ರಯಾಣಿಸಬೇಕಿದೆ. ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ಮುಜುಗರಕ್ಕೆ ಈಡಾಗುವಂತಾಗಿದೆ. ಸರ್ಕಾರಿ ಸಾರಿಗೆ ವಾಹನಗಳಿಂದ ಗ್ರಾಮೀಣಭಾಗದ ಜನತೆ ಸಮಸ್ಯೆಗಳನ್ನು ಎದುರಿಸುವಂತಾಗಿದೆ” ಎಂದು ಶಿಕ್ಷಕಿ ಗೊರಮಡುಗು ಸುಧಾ ತಮ್ಮ ಆಕ್ರೋಶವನ್ನು ಹೊರಹಾಕಿದರು.

 ಕೈವಾರ ಮಾರ್ಗವಾಗಿ ಸಂಚರಿಸುತ್ತಿದ್ದ ಹಲವು ಬಸ್ ಗಳನ್ನೂ ಈಗಾಗಲೇ ಬೇರೆ ಮಾರ್ಗವಾಗಿ ಸಂಚರಿಸುತ್ತಿರುವುದರಿಂದ  ಸರಿಯಾದ ಸಮಯಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ಸೌಲಭ್ಯವಿಲ್ಲದೆ ಸಾಕಷ್ಟು ವೃದ್ದರು, ಗರ್ಬಿಣಿ ಮತ್ತು ಬಾಣಂತಿಯರು ಹಾಗೂ ವಿದ್ಯಾರ್ಥಿಗಳು ಕಾಲೇಜಿಗೆ ಹೋಗಲು ಪರದಾಡುವಂತಾಗಿದೆ.

ನಗರದ ಬಸ್  ನಿಲ್ದಾಣದಿಂದ ವಿವಿಧ ಗ್ರಾಮಗಳಿಗೆ ಸಂಜೆ 5 ಗಂಟೆಗೆ ಹೋಗುವ ಬಸ್ಸಿನಲ್ಲಿ, ಬಾಗಿಲು ತನಕ ವಿದ್ಯಾರ್ಥಿಗಳನ್ನು ನೇತಾಡಿಸಿಕೊಂಡು ವಿವಿಧ ಗ್ರಾಮಗಳಿಗೆ ಪ್ರಯಾಣಿಸುತ್ತಿದ್ದಾರೆ. ಬಸ್ ನಲ್ಲಿ ಜಾಗ ಇಲ್ಲದೆ ಹಲವು ವಿದ್ಯಾರ್ಥಿಗಳು ಆಟೋ ಮಾಡಿಕೊಂಡು ತಮ್ಮ ಮನೆಗಳಿಗೆ ತೆರಳುವಂತಾಗುತ್ತಿದೆ. ಒಟ್ಟಾರೆ ವಿದ್ಯಾರ್ಥಿಗಳು ನರಕಯಾತನೆ ಅನುಭವಿಸುವ ಮೂಲಕ ಸರ್ಕಾರಿ ಬಸ್ಸುಗಳಲ್ಲಿ ಸಾಗುವಂತಾಗಿದೆ. 

ಬಸ್ ನಿಲ್ದಾಣದ ಟಿಸಿ ನೀಡುವ ಹಾರಿಕೆ ಉತ್ತರದಿಂದ ವಿದ್ಯಾರ್ಥಿಗಳು ರೊಚ್ಚಿಗೆದ್ದು,ಈಗಾಗಲೇ ಸ್ಥಗಿತಗೊಳಿಸಿಸಿರುವ ಬಸ್ ಗಳನ್ನು ಪುನರಾರಂಭಿಬೇಕೆಂದು ಹಲವು ಬಾರಿ ಮನವಿ ಸಲ್ಲಿಸಿದ್ದರೂ, ಸಂಬಂದ ಪಟ್ಟ ಡಿಪೋ ಅಧಿಕಾರಿಗಳು ಮಾತ್ರ ಜಾಣ ಕುರುಡರಾಗಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ಕೊರೊನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆದೇಶಕ್ಕಿಂತ ಹೆಚ್ಚು ಪ್ರಯಾಣಿಕರನ್ನು ತೆರಳುವಂತೆ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಸೂಕ್ತ ರೀತಿಯ ಕ್ರಮ ವಹಿಸಬೇಕು. ಜೊತೆಗೆ ಈ ಹಿಂದೆ ಇದ್ದ ಮಾರ್ಗ ಸೂಚಿಯಂತೆ ಬಸ್ಸುಗಳು ತೆರಳುವಂತಾಗಬೇಕು. ಬಸ್ ನಲ್ಲಿ ಸಾಮಾಜಿಕ ಅಂತರವಿಲ್ಲದೆ ಪ್ರಯಾಣಿಕರು ಪ್ರಯಾಣಿಸುವುದಕ್ಕೆ ಸಂಬಂಧ ಪಟ್ಟ ಅಧಿಕಾರಿಗಳು ಉತ್ತರಿಸಬೆಕಿದೆ. ಕಾರುಗಳಲ್ಲಿ ಸಂಚರಿಸುವ ಜನಪ್ರತಿನಿಧಿಗಳೂ ಸಹ ಈ ಬಗ್ಗೆ ಗಮನಹರಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

Sidlaghatta Cocoon Market-16/02/2021

0
Silk cocoon Sidlaghatta Market February 16 2021

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 16/02/2021

CB Lots: 266
Qty: 14554 kgs
Max: 430
Min: 250
Avg: 387

BV Lots: NILL

ಶಾಸಕ ವಿ.ಮುನಿಯಪ್ಪ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಕೆಡಿಪಿ ಸಭೆ

0
Sidlaghatta MLA V Muniyappa KDP Meeting

ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ತಾಲ್ಲೂಕು ಮಟ್ಟದ ಕೆಡಿಪಿ ಸಭೆಯಲ್ಲಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.

ಈಗಾಗಲೇ 1.2 ಲಕ್ಷ ಕ್ಕಿಂತ ಹೆಚ್ಚು ಆದಾಯ ಹೊಂದಿರುವವರ ಪಡಿತರ ಚೀಟಿ ರದ್ದುಗೊಳಿಸಲು ಸರ್ಕಾರ ಮುಂದಾಗಿದೆ. ಮಾರ್ಚ್ ಅಂತ್ಯದೊಳಗೆ ಅಂತಹವರು ಸ್ವಯಂ ಪ್ರೇರಿತರಾಗಿ ಪಡಿತರ ಚೀಟಿ ವಾಪಸ್ಸು ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಪಡಿತರ ಅಕ್ಕಿಯ ದುರುಪಯೋಗದ ಬಗ್ಗೆ ಆರೋಪಗಳು ಕೇಳಿ ಬರುತ್ತಿದ್ದು ಪಡಿತರ ವಿತರಕರಿಂದ ಅಕ್ಕಿಯ ದುರ್ಬಳಕೆ ಹಾಗೂ ಕಳ್ಳತನದಂತಹ ಪ್ರಕರಣಗಳು ಕಂಡು ಬಂದಲ್ಲಿ ಪಡಿತರ ವಿತರಕರು ಸೇರಿದಂತೆ ಆಹಾರ ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದರು.

 ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ನೀಡಲಾಗುವ ಪಡಿತರ ಅಕ್ಕಿಯ ದುರುಪಯೋಗದ ಕುರಿತು ಆರೋಪಗಳು ಕೇಳಿ ಬರುತ್ತಿದ್ದು, ಪಡಿತರ ವಿತರಿಸುವ ಅಂಗಡಿಗಳಲ್ಲಿ, ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸುವ ಮೂಲಕ ಪಡಿತರ ಅಕ್ಕಿ ದುರ್ಬಳಕೆಯನ್ನು ತಡೆಯಬೇಕು ಎಂದರು.

 ನಗರದ ಹೊರವಲಯದ ಹೆದ್ದಾರಿಗಳಲ್ಲಿ ವಿದ್ಯುತ್ ದೀಪಗಳು ಕೆಟ್ಟು ತಿಂಗಳುಗಳು ಕಳೆದರೂ ದುರಸ್ತಿ ಪಡಿಸಿಲ್ಲ ಕೂಡಲೇ ದುರಸ್ತಿಗೊಳಿಸುವಂತೆ ನಗರಸಭೆ ಸೇರಿದಂತೆ ಹೆದ್ದಾರಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

 ನಗರದಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದು ಬಸ್ ನಿಲ್ದಾಣದಿಂದ ರೈಲ್ವೆ ನಿಲ್ದಾಣದವರೆಗೂ ರಸ್ತೆಯ ಒಂದು ಕಡೆ ಪಾರ್ಕಿಂಗ್ ವ್ಯವಸ್ಥೆ ಮಾಡುವುದು ಸೇರಿದಂತೆ ಫುಟ್ ಪಾತ್ ಮೇಲೆ ಸಾಮಗ್ರಿಗಳನ್ನು ಇಟ್ಟು ವ್ಯಾಪಾರ ಮಾಡುವುವವರನ್ನು ತೆರವುಗೊಳಿಸಿ ಎಂದರು.

 ಎಲ್ಲಾ ಇಲಾಖೆಗಳಿಂದ ಸರ್ಕಾರದ ಯೋಜನೆಗಳು ಅಥವಾ ಕಾಮಗಾರಿಗಳನ್ನು ಜಾರಿಗೊಳಿಸುವ ಮುನ್ನ ನಮ್ಮ ಗಮನಕ್ಕೆ ತರುವ ಜೊತೆಗೆ ಸಕಾಲದಲ್ಲಿ ಅನುದಾನ ಬಳಸಿಕೊಂಡು ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

 ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಂ.ಕೆ.ರಾಜಶೇಖರ್, ಇಓ ಚಂದ್ರಕಾಂತ್, ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Sidlaghatta Cocoon Market-15/02/2021

0
Silk cocoon Sidlaghatta Market February 15 2021

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 15/02/2021

CB Lots: 309
Qty: 16850 Kgs
Max: 460
Min: 250
Avg: 383

BV Lots: NILL

ನಲ್ಲಿಮರದಹಳ್ಳಿಯ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಪ್ರತಿಷ್ಠಾಪನೆ ಹಾಗೂ ಕುಂಭಾಭಿಷೇಕ

0
Sidlaghatta Nallimaradahalli Sri Lakshminarasimhaswami Temple

ಶಿಡ್ಲಘಟ್ಟ ನಗರದ ಹೊರವಲಯದ ನಲ್ಲಿಮರದಹಳ್ಳಿಯ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಾಲಯ ಸುಮಾರು ನಾಲ್ಕು ತಲೆಮಾರುಗಳಿಂದ ನಡೆದ ಪ್ರಯತ್ನದ ಫಲವಾಗಿ ಇದೀಗ ಸುಂದರವಾಗಿ ನಿರ್ಮಾಣವಾಗಿದೆ. ಫೆಬ್ರುವರಿ 16 ರಿಂದ 18 ರವರೆಗೂ ನೂತನ ದೇವಾಲಯದಲ್ಲಿ ಶ್ರೀಲಕ್ಷ್ಮೀನರಸಿಂಹಸ್ವಾಮಿ ಸ್ಥಿರಬಿಂಬ, ಶಿವಲಿಂಗ, ನಾಗರಾಜ, ಧ್ವಜಸ್ಥಂಬ, ವಿಮಾನಗೋಪುರ ಕಲಶ ಪ್ರತಿಷ್ಠಾಪನೆ ಹಾಗೂ ಕುಂಭಾಭಿಷೇಕ ನಡೆಯಲಿದೆ.

ಮುಜರಾಯಿ ಇಲಾಖೆಗೆ ಸೇರಿರುವ ಸುಮಾರು ಆರು ಶತಮಾನಕ್ಕೂ ಹಿಂದಿನದು ಎನ್ನಬಹುದಾದ ಈ ದೇವಾಲಯವನ್ನು ಗೋಪಾಲಸ್ವಾಮಿ ದೇವಾಲಯವೆಂದು ಹೆಸರಿಸಲಾಗಿದೆ. ಸುಮಾರು ಎಪ್ಪತ್ತು ಎಂಬತ್ತು ವರ್ಷಗಳ ಹಿಂದೆ ಅಜ್ಜಪ್ಪ ಎನ್ನುವವರು ತಮ್ಮ ಸ್ವಂತ ಹಣದಿಂದ ಇಲ್ಲಿ ಪುಟ್ಟ ಗುಡಿಯನ್ನು ನಿರ್ಮಿಸಿದ್ದರು. ಹಲವು ದಶಕಗಳಿಂದ ಇಲ್ಲಿ ದೇವಾಲಯ ನಿರ್ಮಿಸಲು ಪ್ರಯತ್ನಿಸಿದ್ದರೂ ಹಲವಾರು ವಿಘ್ನಗಳು ತಲೆದೋರಿದ್ದವು. ಶ್ರೀಲಕ್ಷ್ಮೀನರಸಿಂಹಸ್ವಾಮಿ ಸೇವಾ ಟ್ರಸ್ಟ್ ಸದಸ್ಯರು ಒಗ್ಗೂಡಿ ಇದೀಗ ಹಳೆಯ ವಿಗ್ರಹವನ್ನು ಹಾಗೆಯೇ ಇದ್ದ ಸ್ಥಳದಲ್ಲಿಯೇ ಉಳಿಸಿಕೊಂಡು ಅತ್ಯಂತ ಸುಂದರವಾದ ದೇವಾಲಯವನ್ನು ನಿರ್ಮಿಸುವಲ್ಲಿ ಸಫಲರಾಗಿದ್ದಾರೆ.

ಶಿವಾರಪಟ್ಟಣದ ಶಿಲ್ಪಿಗಳು ಕೆತ್ತಿರುವ ಆರು ಅದಿ ಎತ್ತರದ ಶ್ರೀಲಕ್ಷ್ಮೀನರಸಿಂಹಸ್ವಾಮಿ ವಿಗ್ರಹ ಮತ್ತು 22 ಅಡಿ ಎತ್ತರದ ಧ್ವಜಸ್ಥಂಭ ದೇವಲಯದ ಮುಕುಟಪ್ರಾಯವಾಗಿದೆ. ದೇವಾಲಯದ ಮೇಲೆ ದಶಾವತಾರದ ಶಿಲ್ಪಗಳು, ಗೋಪುರದ ಬಳಿ ಆಂಜನೆಯ, ಗರುಡ ಮತ್ತು ಲಕ್ಷ್ಮೀನರಸಿಂಹಸ್ವಾಮಿ, ದೇವಸ್ಥಾನದ ಒಳಗೆ ಜಯ ವಿಜಯರ ಮೂರ್ತಿಗಳು, ಧ್ವಾರದಲ್ಲಿನ ಸಿಂಹಗಳು, ಕಂಬಗಳ ಮೇಲೆ ಮಂಗಳ ವಾದ್ಯಗಳನ್ನು ನುಡಿಸುವವರ ಶಿಲ್ಪಗಳಿಗೆ ಬಣ್ಣಗಳನ್ನು ಬಳಿಯುವ ಮೂಲಕ ಆಕರ್ಷಕಗೊಳಿಸಲಾಗಿದೆ. ದೇವಾಲಯದ ಪಕ್ಕದಲ್ಲಿದ್ದ ಪುರಾತನ ಅತ್ತಿ ಮರವನ್ನು ಸಂರಕ್ಷಿಸಿದ್ದಾರೆ.

ಕಲ್ಲಿನ ಮುಖ್ಯಧ್ವಾರದ ಚೌಕಟ್ಟು, ಗರ್ಭಗುಡಿ, ಧ್ವಜಸ್ಥಂಭವನ್ನು ಕಾರ್ಕಳದ ಶಿಲ್ಪಿಗಳು ಕೆತ್ತಿದ್ದರೆ, ಗೋಪುರದ ಶಿಲ್ಪಗಳನ್ನು ಸಿಮೆಂಟಿನಲ್ಲಿ ನಾಗಪಟ್ನಂ ಶಿಲ್ಪಿಗಳು ರೂಪಿಸಿರುವರು. ದಕ್ಷಿಣ ಕನ್ನಡ ಶೈಲಿಯ ದೇವಾಲಯದಂತೆ ಗರ್ಭಗುಡಿಗೆ ಒಂಬತ್ತು ಮೆಟ್ಟಿಲು ಹತ್ತಿ ಹೋಗುವಂತೆ ಕಟ್ಟಿಸಲಾಗಿದೆ.

“ಇದೊಂದು ನೂರು ವರ್ಷದ ಪ್ರಯತ್ನ. ನಮ್ಮ ಟ್ರಸ್ಟ್ ವತಿಯಿಂದ 2016 ರಲ್ಲಿ ದೇವಸ್ಥಾನದ ಕೆಲಸವನ್ನು ಪ್ರಾರಂಭಿಸಿದೆವು. ಸರ್ಕಾರದ್ದಾಗಲೀ, ರಾಜಕಾರಣಿಗಳದ್ದಾಗಲೀ ಹಣ ಪಡೆದಿಲ್ಲ. ಜಾತಿ ಮತ್ತು ರಾಜಕಾರಣವನ್ನು ಬದಿಗಿಟ್ಟು ಕೇವಲ ಭಕ್ತರಿಂದಷ್ಟೇ ಹಣ ಸಂಗ್ರಹಿಸಿ ಪಾರದರ್ಶಕವಾಗಿ ದೇವರ ಕೆಲಸ ಮಾಡಿದ್ದೇವೆ. ಸುಮಾರು 60 ಲಕ್ಷಕ್ಕೂ ಮೀರಿ ವೆಚ್ಚವಾಗಿದೆ. ಶಿಡ್ಲಘಟ್ಟ ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಇದೂ ಒಂದಾಗಲಿದೆ” ಎನ್ನುತ್ತಾರೆ ಶ್ರೀಲಕ್ಷ್ಮೀನರಸಿಂಹಸ್ವಾಮಿ ಸೇವಾ ಟ್ರಸ್ಟ್ ಸದಸ್ಯರು.

ಪುಲ್ವಾಮ ದಾಳಿಯ ಹುತಾತ್ಮ ಯೋಧರಿಗೆ ನಮನ

0
Pulwama martyr homage Bhuvaneshwari Circle Paragon School Sidlaghatta

ಶಿಡ್ಲಘಟ್ಟದ ಭುವನೇಶ್ವರಿ ವೃತ್ತದಲ್ಲಿ (ಪ್ಯಾರಾಗಾನ್ ಶಾಲೆ ಬಳಿ) ಪುಲ್ವಾಮ ದಾಳಿಯಲ್ಲಿ ವೀರ ಸ್ವರ್ಗ ಸೇರಿದ ಹುತಾತ್ಮ ಯೋಧರಿಗೆ ಸಮಾನಮನಸ್ಕ ಯುವಕರು ಕ್ಯಾಂಡಲ್ ಹಚ್ಚಿ  ಮೌನಾಚರಣೆ ಮುಖಾಂತರ ನಮನ ಸಲ್ಲಿಸಿದರು.

Sidlaghatta Cocoon Market-14/02/2021

0
Silk cocoon Sidlaghatta Market February 14 2021

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 14/02/2021

CB Lots: 199
Qty: 10856 Kgs
Max: 427
Min: 220
Avg: 386

BV Lots: 02
Qty: 96 kgs
Max: 487
Min: 444
Avg: 472

Sidlaghatta Cocoon Market-13/02/2021

0
Silk cocoon Sidlaghatta Market February 13 2021

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 13/02/2021

CB Lots: 210
Qty: 11022 Kgs
Max: 430
Min: 255
Avg: 389

BV Lots: 03
Qty: 214 Kgs
Max: 444
Min: 430
Avg: 433

ಕೊಲೆ ಅರೋಪಿಯ ಬಂಧನ

0
Hanumantapura Gate Sidlaghatta Murder Arrest Accused Police

ನಗರದ ಹೊರವಲಯದ ಹನುಮಂತಪುರ ಗೇಟ್ ಬಳಿಯ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿದ ಆರೋಪಿಗಳಿಬ್ಬರ ಪೈಕಿ ಒಬ್ಬನನ್ನು ಪೊಲೀಸರು ಬಂಧಿಸಿದ್ದು ಇನ್ನೊಬ್ಬ ಪರಾರಿಯಾಗಿದ್ದು ಬಂಧನಕ್ಕೆ ಬಲೆ ಬೀಸಿದ್ದಾರೆ.

ನಗರದ ಅಜಾದ್ ನಗರದ ವಾಸಿ ರೇಷ್ಮೆ ವ್ಯಾಪಾರಿ 25 ವರ್ಷದ ಸಯ್ಯದ್ ಫರ್‌ಹಾನ್ ನಗರದ ಹೊರವಲಯದ ಹನುಮಂತಪುರ ಗೇಟ್‌ನ ಲೇಔಟ್‌ವೊಂದರಲ್ಲಿ ನಿರ್ಮಾಣ ಹಂತದ ಮನೆಯೊಂದರಲ್ಲಿ ಕೊಲೆಯಾಗಿದ್ದ.

https://www.sidlaghatta.com/news/hanumanthapura-gate-crime/

ಸೈಜುಗಲ್ಲಿನಿಂದ ಮುಖವನ್ನು ಜಜ್ಜಿ, ಮಾರಕಾಯುಧಗಳಿಂದ ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲಿಸಿದ್ದರು. ಶಿಡ್ಲಘಟ್ಟ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿತ್ತು.

ಕೊಲೆ ಆರೋಪಿಗಳ ಪೈಕಿ ಒಬ್ಬನಾದ ಮನ್ಸೂರ್ ಸಿಕ್ಕಿ ಹಾಕಿಕೊಂಡಿದ್ದು ನವಾಜ್ ತಲೆ ಮರೆಸಿಕೊಂಡಿದ್ದು, ಬಂಧನಕ್ಕೆ ಬಲೆ ಬೀಸಿದ್ದಾರೆ.

ಮನ್ಸೂರ್ ಬೈಕ್ ವ್ಹೀಲಿಂಗ್ ನಡೆಸುತ್ತಿದ್ದು ಬೈಕ್ ವ್ಹೀಲಿಂಗ್ ನಡೆಸದಂತೆ ಕೊಲೆಯಾದ ಸಯ್ಯದ್ ಪರ‍್ಹಾನ್ ಎಚ್ಚರಿಕೆ ನೀಡಿದ್ದ. ಆ ವಿಚಾರವಾಗಿಯೆ ಕೊಲೆ ಮಾಡಿದೆ ಎಂದು ಪೊಲೀಸರಿಗೆ ಸಿಕ್ಕಿ ಬಿದ್ದಿರುವ ಮನ್ಸೂರ್ ಹೇಳಿದ್ದಾನಾದರೂ ಅದನ್ನು ಕೊಲೆಯಾದ ಫರ‍್ಹಾನ್‌ನ ಕುಟುಂಬದವರು ಒಪ್ಪುತ್ತಿಲ್ಲ.

ಕೊಲೆಗೆ ಬೇರೆಯದೇ ಏನೋ ಕಾರಣ ಇದ್ದು ಅದನ್ನು ತನಿಖೆ ಮಾಡಿ ಪತ್ತೆ ಹಚ್ಚಬೇಕು, ಇಬ್ಬರೂ ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಅವರು ಒತ್ತಾಯಿಸಿದ್ದಾರೆ.

ತಮಿಳುನಾಡಿನ ಕನ್ನಡ ಸರ್ಕಾರಿ ಶಾಲೆಯಲ್ಲಿ ಕಸಾಪ ಕಾರ್ಯಕ್ರಮ

0
Kasapa Sidlaghatta Kannada Sahitya Parishat Tamilnadu Government School Medium

ತಮಿಳುನಾಡಿನಲ್ಲಿರುವ ಡೆಂಕಣಿಕೋಟೆ ತಾಲ್ಲೂಕು ಕೃಷ್ಣಗಿರಿ ಜಿಲ್ಲೆಯ ಅಚ್ಚ ಕನ್ನಡದ ಹಳ್ಳಿ ಗುಮ್ಮಳಾಪುರದ ಕನ್ನಡ ಮಾಧ್ಯಮದ ಸರ್ಕಾರಿ ಶಾಲೆಯಲ್ಲಿ ಶುಕ್ರವಾರ ಶಿಡ್ಲಘಟ್ಟ ಕಸಾಪ ತಾಲ್ಲೂಕು ಘಟಕದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಶಿಡ್ಲಘಟ್ಟ ತಾಲ್ಲೂಕು ಕಸಾಪ ಅಧ್ಯಕ್ಷ ಎ.ಎಂ.ತ್ಯಾಗರಾಜ್ ಮಾತನಾಡಿದರು.

ಕನ್ನಡಾಭಿಮಾನವನ್ನು ನಮ್ಮ ರಾಜ್ಯದ ಗಡಿಭಾಗದಲ್ಲಿ ಅದರಲ್ಲೂ ತಮಿಳುನಾಡಿನಲ್ಲಿ ಮೆರೆಸುತ್ತಿರುವ ಗುಮ್ಮಳಾಪುರದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಎಷ್ಟು ಮೆಚ್ಚುಗೆ ಸೂಚಿಸಿದರೂ ಸಾಲದು. ತಮಿಳುನಾಡಿಗೆ ಸೇರಿದರೂ ಈ ಹಳ್ಳಿಗಳಲ್ಲಿ 100 ಕ್ಕೆ 100 ರಷ್ಟು ಕನ್ನಡಿಗರೇ ಇದ್ದಾರೆ. ಕನ್ನಡ ಮಾಧ್ಯಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 160 ಮಕ್ಕಳು ಮತ್ತು ಪ್ರೌಢಶಾಲೆಯಲ್ಲಿ 250 ಮಕ್ಕಳು ಕಲಿಯುತ್ತಿರುವುದು ಕನ್ನಡ ಪ್ರೇಮದ ಕುರುಹಾಗಿದೆ ಎಂದು ಅವರು ತಿಳಿಸಿದರು.

 ನೀವು ಮುಂದೆ ಎಷ್ಟೇ ದೊಡ್ಡ ಸಾಧಕರಾದರೂ ತಾಯ್ನುಡಿ ಕನ್ನಡವನ್ನು, ತಂದೆ ತಾಯಿ ಗುರು ಹಿರಿಯರನ್ನು ಮರೆಯದಿರಿ. ಕನ್ನಡ ಭಾಷೆಗೆ ಮೊದಲ ಆದ್ಯತೆಯನ್ನು ನೀಡಿ. ಗುಮ್ಮಳಾಪುರದ ಕನ್ನಡ ಪ್ರೀತಿ ಮಾದರಿಯಾದದ್ದು. “ಎಲ್ಲಾದರೂ ಇರು, ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು” ಎಂಬ ರಾಷ್ಟ್ರಕವಿ ಕುವೆಂಪು ಅವರ ನುಡಿಯನ್ನು ಅಕ್ಷರಶಃ ಪಾಲಿಸುತ್ತಿರುವಿರಿ. ಇದೇ ಕನ್ನಡಾಭಿಮಾನ ನಮ್ಮ ಒಳನಾಡಿನಲ್ಲಿಯೂ ಕೂಡ ಪ್ರತಿಯೊಬ್ಬ ಕನ್ನಡಿಗನೂ ಕೂಡ ಹೊಂದಿರಬೇಕು ಎಂದರು.

 ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ರವಿ ಮಾತನಾಡಿ, ಈ ಗ್ರಾಮದಲ್ಲಿ ಕನ್ನಡ ಮಾಧ್ಯಮದ ಸರ್ಕಾರಿ ಶಾಲೆ ಮತ್ತು ಪ್ರೌಢಶಾಲೆಗಳಿವೆ. ಪ್ರತಿಯೊಂದು ಅಂಗಡಿ ಮುಂಗಟ್ಟುಗಳ ಮೇಲೆ, ಪ್ರತಿಯೊಂದು ಮನೆಯ ಮೇಲೆ ಕನ್ನಡದ ಬೋರ್ಡುಗಳು ರಾರಾಜಿಸುತ್ತವೆ. ಎಲ್ಲಿ ನೋಡಿದರೂ ಕೂಡ ಕನ್ನಡದ ಕಲರವ. ಎಲ್ಲರ ಮನೆಯಲ್ಲೂ ಕನ್ನಡದ ಚಾನೆಲ್‌ಗಳು. ತಮಿಳು ನೆಲದಲ್ಲಿದ್ದರೂ ಈ ಗ್ರಾಮದ ಜನರ ಕನ್ನಡ ಅಭಿಮಾನ ಅಮೋಘ. ಕನ್ನಡ ನೆಲ ಬೆಂಗಳೂರಿನಲ್ಲೇ ಸಿಗದ ಭಾಷಾಭಿಮಾನ ನಿಮಗೆ ನಮ್ಮ ಗ್ರಾಮದಲ್ಲಿ ಸಿಗುತ್ತದೆ. ಈ ಗ್ರಾಮದಲ್ಲಿ ಅಷ್ಟೇ ಅಲ್ಲ. ಇದರ ಸುತ್ತಮುತ್ತಲಿನ ಗ್ರಾಮಗಳಾದ ಗಂಗನಹಳ್ಳಿ, ಹಳೇವೂರು, ದೇವರಬೆಟ್ಟ ಗ್ರಾಮಗಳಲ್ಲೂ ಇದೇ ಭಾಷಾಭಿಮಾನ ಕಾಣಬಹುದು. ನಮ್ಮಲ್ಲಿ ಕನ್ನಡ ಮಾಧ್ಯಮದಲ್ಲಿ ಓದುವ ಮಕ್ಕಳಿಗೆ ಮೀಸಲಾತಿ ಸಿಗಬೇಕು. ಕರ್ನಾಟಕ ಸರ್ಕಾರ ಮತ್ತು ಸಂಘ ಸಂಸ್ಥೆಗಳು ಸಹಾಯಹಸ್ತವನ್ನು ಚಾಚಬೇಕು ಎಂದು ಹೇಳಿದರು.

 ಶಿಡ್ಲಘಟ್ಟ ಕಸಾಪ ತಾಲ್ಲೂಕು ಘಟಕದ ವತಿಯಿಂದ ಮಕ್ಕಳಿಗೆ ಕವನ ವಾಚನ, ಜಾನಪದ ಹಾಡು, ಪ್ರಬಂಧ ಮುಂತಾದ ಸ್ಪರ್ಧೆಗಳನ್ನು ನಡೆಸಿ ವಿಜೇತರಿಗೆ ಕನ್ನಡ ನಿಘಂಟುಗಳು, ಕನ್ನಡ ಸಾಧಕರ ಕುರಿತಾದ ಪುಸ್ತಕಗಳನ್ನು ನೀಡಲಾಯಿತು.

 ಕಸಾಪ ಸದಸ್ಯ ರಮೇಶ್, ಶಿಕ್ಷಕರಾದ ವಿ.ರವಿಚಂದ್ರ, ಪಿ.ವೆಂಕಟೇಶ್ ಹಾಜರಿದ್ದರು.

Sidlaghatta Cocoon Market-12/02/2021

0
Silk cocoon Sidlaghatta Market February 12 2021

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 12/02/2021

CB Lots: 158
Qty: 8565 Kgs
Max: 440
Min: 326
Avg: 402

BV Lots: 02
Qty: 100 Kgs
Max: 480
Min: 463
Avg: 472

ಭವಿಷ್ಯದ ಜೀವನ ಭದ್ರತೆಗೆ ನೆರವು

0
Dharmasthala Gramabhivruddi Yojane Trust Sidlaghatta Taluk SKDRDP Insurance Program

ನಗರದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚೇರಿಯಲ್ಲಿ ಮೈಕ್ರೊಬಚತ್ ಪಾಲಿಸಿ ಮಾಡಿ ಮರಣ ಹೊಂದಿದ ಇಬ್ಬರು ಸದಸ್ಯರ ಮನೆಯವರಿಗೆ 2,50,000 ರೂ ವಿಮಾ ಸಾಂತ್ವನ ಮೊತ್ತವನ್ನು ವಿತರಣೆ ಮಾಡಿ ಜೀವ ವಿಮಾ ಸಂಸ್ಥೆ ಬೆಂಗಳೂರು ಪ್ರಭಂದಕ ರವೀಂದ್ರ ಮಾತನಾಡಿದರು.

ಧರ್ಮಸ್ಥಳ ಸಂಸ್ಥೆಯ ಸಹಕಾರದೊಂದಿಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇದುವರೆಗೆ 13,000 ಮಂದಿ ಸದಸ್ಯರಿಗೆ ಭವಿಷ್ಯದ ಜೀವನ ಭದ್ರತೆಗೆ ಪಾಲಿಸಿಯನ್ನು ಮಾಡಿಸಿದ್ದು, ಈಗಾಗಲೇ ಮರಣ ಹೊಂದಿದ ಸದಸ್ಯರಿಗೆ ಕ್ಲಪ್ತ ಸಮಯದಲ್ಲಿ ಮರಣ ಸಾಂತ್ವನ ಮೊತ್ತವನ್ನು ದೊರಕಿಸಿಕೊಡಲಾಗಿದೆ ಎಂದು ಅವರು ತಿಳಿಸಿದರು.

 ಜಿಲ್ಲಾ ನಿರ್ದೇಶಕರಾದ ವಸಂತ್ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಮೈಕ್ರೊಬಚತ್ ಪಾಲಿಸಿಯನ್ನು ಮಾಡಿಸಿ ವೃದ್ಧಾಪ್ಯದಲ್ಲಿ ಮತ್ತೊಬ್ಬರನ್ನು ಅವಲಂಬಿಸದೇ ಬದುಕುವುದನ್ನು ಯೋಜನೆ ಕಲಿಸಿಕೊಟ್ಟಿದೆ ಎಂದರು.

ಜನಜಾಗೃತಿ ವೇದಿಕೆ ಸದಸ್ಯ ಎ.ಎಂ. ತ್ಯಾಗರಾಜ್ ಮಾತನಾಡಿ, ಧರ್ಮಸ್ಥಳ ಸಂಸ್ಥೆಯಲ್ಲಿ ಹುಟ್ಟಿನಿಂದ ಪ್ರಾರಂಭವಾಗಿ ಸಮಾಜದಲ್ಲಿ ಸ್ವಾವಲಂಬಿಯಾಗಿ ಬದುಕಲು ಹಾಗೂ ವೃದ್ಧಾಪ್ಯದಲ್ಲಿ ಯಾರನ್ನು ಆಶ್ರಯಿಸದೇ ಸಂತೃಪ್ತ ಜೀವನ ನಡೆಸಲು ನೂರಾರು ಕಾರ್ಯಕ್ರಮಗಳಿದ್ದು ಇದರ ಸದುಪಯೋಗವನ್ನು ಪಡೆದುಕೊಳ್ಳಿ ಎಂದರು.

 ಈ ಸಂದರ್ಭದಲ್ಲಿ ಹೌಸಿಂಗ್ ಬೋರ್ಡ್ ನ ಜಮೃದ್ದ್ ಅವರಿಗೆ 2,50,000 ರೂ ಮತ್ತು ಉಲ್ಲೂರುಪೇಟೆಯ ಪದ್ಮಾ ಅವರಿಗೆ 50,000 ರೂ ವಿಮಾ ಮರಣ ಸಾಂತ್ವನವನ್ನು ವಿತರಿಸಲಾಯಿತು.

ಪ್ರಗತಿಪರ ಕೃಷಿಕರಾದ ಹಿತ್ತಲಹಳ್ಳಿ ಸುರೇಶ್, ತಾಲ್ಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ವೆಂಕಟಸುಬ್ಬಯ್ಯ, ಜ್ಞಾನವಿಕಾಸ ಸಮನ್ವಯಾಧಿಕಾರಿ ಲಕ್ಷ್ಮಿ, ಎನ್.ಆರ್.ಎಲ್.ಎಂ ಸಮನ್ವಯಾಧಿಕಾರಿ ಮನು, ಮೇಲ್ವಿಚಾರಕರಾದ ಜ್ಯೋತಿ ಮತ್ತು ನಾರಪ್ಪ, ಸೇವಾಪ್ರತಿನಿಧಿ ಬೀಬಿಜಾನ್ ಹಾಜರಿದ್ದರು.

Sidlaghatta Cocoon Market-11/02/2021

0
Silk cocoon Sidlaghatta Market February 11 2021

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 11/02/2021

CB Lots: 140
Qty: 7309 Kgs
Max: 445
Min: 358
Avg: 405

BV Lots: 05
Qty: 305 Kgs
Max: 470
Min: 422
Avg: 444

ನಾಗಪ್ಪನ ಕುಂಟೆಯಲ್ಲಿ ನಿಷೇಧಿತ ಕ್ಯಾಟ್ ಫಿಶ್ ಸಾಕಣೆ

0
Illegal Catfish Sidlaghatta

ತಾಲ್ಲೂಕಿನ ಗಂಜಿಗುಂಟೆ ಗ್ರಾಮ ಪಂಚಾಯಿತಿಯ ದೇವ ಗುಟ್ಟಳ್ಳಿ ನಾಗಪ್ಪನ ಕುಂಟೆಯಲ್ಲಿ ಅಕ್ರಮವಾಗಿ ಕ್ಯಾಟ್ ಫಿಶ್ ಸಾಕಾಣಿಕೆ ನಡೆಸಲಾಗುತ್ತಿದೆ ಎಂದು ಸುತ್ತಲಿನ ಗ್ರಾಮಸ್ಥರಾದ ರಾಮರೆಡ್ಡಿ, ನರಸಿಂಹ ರೆಡ್ಡಿ, ಗಂಗಪ್ಪ, ಆನಂದರೆಡ್ಡಿ, ಬೈರಾರೆಡ್ಡಿ, ಸೀನಪ್ಪ, ನರಸಿಂಹ, ಕೃಷ್ಣಾರೆಡ್ಡಿ ಮುಂತಾದವರು ದೂರಿದ್ದಾರೆ.

ಮಾಂಸ ಹಾಗೂ ತ್ಯಾಜ್ಯಗಳನ್ನು ಕೆರೆಯಲ್ಲಿ ಬಿಸಾಡುತ್ತಿರುವ ಕಾರಣ ಅಕ್ಕಪಕ್ಕದ ಗ್ರಾಮಗಳ ಬೀದಿನಾಯಿಗಳು ಬೀಡು ಬಿಟ್ಟಿವೆ. ಅಕ್ರಮವಾಗಿ ಕಾನೂನುಬಾಹಿರ ದಂಧೆಯನ್ನು ಮಾಡುತ್ತಿದ್ದಾರೆ. ಜನರಿಗೆ ಹಾಗೂ ದನಕರುಗಳಿಗೆ ತೊಂದರೆಯಾಗುತ್ತಿಯಲ್ಲದೆ ಪರಿಸರಕ್ಕೆ ಕೂಡ ಹಾನಿಯಾಗುತ್ತಿದೆ. ಸುತ್ತಮುತ್ತಲ್ಲಿನ ಮೂರು – ನಾಲ್ಕು ಗ್ರಾಮಗಳ ದನಕರುಗಳು ನೀರು ಕುಡಿಯುವ ತಾಣವನ್ನು ಕಲುಷಿತಗೊಳಿಸಿದ್ದಾರೆ. ಇಲ್ಲಿ ನಾಯಿಗಳ ಕಾಟ ವಿಪರೀತವಾಗಿದ್ದು ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ ಎಂದು ದೇವಗುಟ್ಟಹಳ್ಳಿ ನರಸಿಂಹರೆಡ್ಡಿ ಆರೋಪಿಸಿದ್ದಾರೆ.

ಈ ಕೆರೆಯನ್ನು ಮೀನುಸಾಕಾಣಿಕೆಗೆಂದು ಹರಾಜಿನಲ್ಲಿ ಪಡೆದುಕೊಂಡು ಅಕ್ರಮವಾಗಿ ನಿಷೇಧಿತ ಕ್ಯಾಟ್ ಫಿಶ್ ಸಾಕುತ್ತಿದ್ದಾರೆ. ಕೋಳಿ ಮಾಂಸ ಹಾಗೂ ತ್ಯಾಜ್ಯಗಳನ್ನು ಸುರಿಯುತ್ತಿದ್ದಾರೆ. ನಾವುಗಳು ಎಷ್ಟು ವಿರೋಧಿಸಿದರೂ ಅವರ ಕೆಲಸ ನಿಲ್ಲಿಸಿಲ್ಲ ಎಂದು ಹತಾಶೆಯಿಂದ ನುಡಿದರು.

ಈ ಬಗ್ಗೆ ತಹಶೀಲ್ದಾರ್ ರಾಜೀವ್ ಅವರನ್ನು ಕೇಳಿದಾಗ, “ನಾಗಪ್ಪನ ಕುಂಟೆ ಹದಿನೈದು ಎಕರೆ ವಿಸ್ತೀರ್ಣವಿದೆ ಎಂದು ನಮ್ಮ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕ್ಯಾಟ್ ಫಿಶ್ ಸಾಕಾಣಿಕೆ ಬಗ್ಗೆ ಮಾಹಿತಿ ಬಂದಿದ್ದು, ರೆವಿನ್ಯೂ ಅಧಿಕಾರಿಗಳಿಗೆ ತಕ್ಷಣವೆ ತೆರವುಗೊಳಿಸಬೇಕೆಂದು ಸೂಚನೆ ನೀಡಿದ್ದೇನೆ” ಎಂದು ಹೇಳಿದರು.