Home Blog Page 290

Sidlaghatta Cocoon Market-09/02/2021

0
Silk cocoon Sidlaghatta Market February 9

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 09/02/2021

CB Lots: 164
Qty: 8677 Kgs
Max: 435
Min: 320
Avg: 384

BV Lots: 02
Qty: 65 Kgs
Max: 463
Min: 463
Avg: 463

ವೈ ಹುಣಸೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

0
Y Hunasenahalli Grama Panchayat President Election

ತಾಲ್ಲೂಕಿನ ವೈ ಹುಣಸೇನಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಕೆ.ಎ.ನೇತ್ರಾವತಿ ಹಾಗೂ ಉಪಾಧ್ಯಕ್ಷರಾಗಿ ಎ.ಎಸ್.ಸಿಂಧು ಆಯ್ಕೆಯಾಗಿದ್ದಾರೆ.

ಒಟ್ಟು 17 ಸದಸ್ಯ ಬಲ ಹೊಂದಿರುವ ವೈ ಹುಣಸೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮೀಸಲು ನಿಗದಿಪಡಿಸಲಾಗಿದ್ದು ಸೋಮವಾರ ಚುನಾವಣೆ ಪ್ರಕ್ರಿಯೆ ನಡೆಯಿತು.

ಅಧ್ಯಕ್ಷ ಸ್ಥಾನಕ್ಕೆ ವೈ ಹುಣಸೇನಹಳ್ಳಿಯ ಕೆ.ಎ.ನೇತ್ರಾವತಿ ಹಾಗೂ ಚಿಕ್ಕದಾಸೇನಹಳ್ಳಿಯ ಜಯಮ್ಮ ನಾಮಪತ್ರ ಸಲ್ಲಿಸಿದ್ದು ಉಪಾಧ್ಯಕ್ಷ ಸ್ಥಾನಕ್ಕೆ ಗೆಜ್ಜಿಗಾನಹಳ್ಳಿಯ ಎ.ಎಸ್.ಸಿಂಧು ಹಾಗೂ ವಾರಹುಣಸೇನಹಳ್ಳಿಯ ರಾಜಪ್ಪ ನಾಮಪತ್ರ ಸಲ್ಲಿಸಿದ್ದರು.

ಕೆ.ಎ.ನೇತ್ರಾವತಿ 9 ಮತಗಳನ್ನು ಪಡೆಯುವ ಮೂಲಕ ಅಧ್ಯಕ್ಷರಾಗಿ ಆಯ್ಕೆಯಾದರೆ, ಎ.ಎಸ್.ಸಿಂಧು 9 ಮತಗಳನ್ನು ಪಡೆದು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.

ಬಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

0
Bashettahalli Grama Panchayat President Election

ತಾಲ್ಲೂಕಿನ ಬಶೆಟ್ಟಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಕಮಲಮ್ಮ ಹಾಗೂ ಉಪಾಧ್ಯಕ್ಷರಾಗಿ ಡಿ.ಆರ್.ಧರ್ಮೇಂದ್ರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಒಟ್ಟು 17 ಸದಸ್ಯ ಬಲ ಹೊಂದಿರುವ ಗಂಜಿಗುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷಸ್ಥಾನ ಪರಿಶಿಷ್ಟ ಪಂಗಡ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಬ ಮೀಸಲು ನಿಗದಿಪಡಿಸಲಾಗಿದ್ದು ಸೋಮವಾರ ಚುನಾವಣೆ ಪ್ರಕ್ರಿಯೆ ನಡೆಯಿತು.

ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕೇವಲ ಒಂದೊಂದು ನಾಮಪತ್ರ ಸಲ್ಲಿಕೆಯಾದ ಹಿನ್ನಲೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಕೃಷಿ ಇಲಾಖೆಯ ಉಪನಿರ್ದೇಶಕ ಎಚ್.ಎಲ್.ಚಂದ್ರಕುಮಾರ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.

ಗಂಜಿಗುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

0
Ganjigunte Grama Panchayat President Election

ತಾಲ್ಲೂಕಿನ ಗಂಜಿಗುಂಟೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಎನ್.ವೆಂಕಟಲಕ್ಷ್ಮಮ್ಮ ಹಾಗೂ ಉಪಾಧ್ಯಕ್ಷರಾಗಿ ಜಿ.ನರಸಿಂಹಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಒಟ್ಟು 16 ಸದಸ್ಯ ಬಲ ಹೊಂದಿರುವ ಗಂಜಿಗುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮೀಸಲು ನಿಗದಿಪಡಿಸಲಾಗಿದ್ದು ಸೋಮವಾರ ಚುನಾವಣೆ ಪ್ರಕ್ರಿಯೆ ನಡೆಯಿತು.

ಅಧ್ಯಕ್ಷ ಹಾಗು ಉಪಾಧ್ಯಕ್ಷ ಸ್ಥಾನಕ್ಕೆ ಕೇವಲ ಒಂದೊಂದು ನಾಮಪತ್ರ ಸಲ್ಲಿಕೆಯಾದ ಹಿನ್ನಲೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ದಿನೇಶ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.

ಜೆ.ವೆಂಕಟಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

0
Sidlaghatta Taluk J Venkatapura Grama Panchayat Election Vice President Voting

ತಾಲೂಕಿನ ಜೆ ವೆಂಕಟಾಪುರ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಶಾಂತಮ್ಮ ಹಾಗೂ ಉಪಾಧ್ಯಕ್ಷರಾಗಿ ಡಿ.ನಾರಾಯಣಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಒಟ್ಟು 17 ಸದಸ್ಯ ಬಲ ಹೊಂದಿರುವ ಜೆ ವೆಂಕಟಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮೀಸಲು ನಿಗದಿಪಡಿಸಲಾಗಿದ್ದು ಸೋಮವಾರ ಚುನಾವಣೆ ಪ್ರಕ್ರಿಯೆ ನಡೆಯಿತು.

ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕೇವಲ ಒಂದೊಂದು ನಾಮಪತ್ರ ಸಲ್ಲಿಕೆಯಾದ ಹಿನ್ನಲೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ತಹಶೀಲ್ದಾರ್ ರಾಜೀವ್ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.

ಆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

0
Sidlaghatta Taluk Anuru Grama Panchayat Election Vice President Voting

ತಾಲ್ಲೂಕಿನ ಆನೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ನೇತ್ರಾವತಿ.ಪಿ ಹಾಗೂ ಉಪಾಧ್ಯಕ್ಷರಾಗಿ ಪಿ.ಎನ್.ವಿಜಯೇಂದ್ರ ಆಯ್ಕೆಯಾಗಿದ್ದಾರೆ.

ಒಟ್ಟು 16 ಸದಸ್ಯ ಬಲ ಹೊಂದಿರುವ ಆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷಸ್ಥಾನ ಪರಿಶಿಷ್ಟ ಜಾತಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮೀಸಲು ನಿಗದಿಪಡಿಸಲಾಗಿದ್ದು ಸೋಮವಾರ ಚುನಾವಣೆ ಪ್ರಕ್ರಿಯೆ ನಡೆಯಿತು.

ಅಧ್ಯಕ್ಷ ಹಾಗು ಉಪಾಧ್ಯಕ್ಷ ಸ್ಥಾನಕ್ಕೆ ಕೇವಲ ಒಂದೊಂದು ನಾಮಪತ್ರ ಸಲ್ಲಿಕೆಯಾದ ಹಿನ್ನಲೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ನಗರಸಭೆ ಪೌರಾಯುಕ್ತ ಶ್ರೀನಿವಾಸ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.

ಅಬ್ಲೂಡು ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

0
Sidlaghatta Taluk Abludu Grama Panchayat Election Vice President Voting

ತಾಲ್ಲೂಕಿನ ಅಬ್ಲೂಡು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಬಿ.ನಿರ್ಮಲ ಉಪಾಧ್ಯಕ್ಷರಾಗಿ ಆರ್.ನಂದಿನಿ ಆಯ್ಕೆಯಾಗಿದ್ದಾರೆ.

ಒಟ್ಟು 16 ಸದಸ್ಯ ಬಲ ಹೊಂದಿರುವ ಅಬ್ಲೂಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮೀಸಲು ನಿಗದಿಪಡಿಸಲಾಗಿದ್ದು ಸೋಮವಾರ ಚುನಾವಣೆ ಪ್ರಕ್ರಿಯೆ ನಡೆಯಿತು.

ಅಧ್ಯಕ್ಷ ಸ್ಥಾನಕ್ಕೆ ಸಾದಹಳ್ಳಿಯ ಬಿ.ನಿರ್ಮಲ ಹಾಗೂ ತಾತಹಳ್ಳಿಯ ಕೆ.ವೈದೇಹಿ ನಾಮಪತ್ರ ಸಲ್ಲಿಸಿದ್ದು ಉಪಾಧ್ಯಕ್ಷ ಸ್ಥಾನಕ್ಕೆ ಅಬ್ಲೂಡು ಗ್ರಾಮದ ಆರ್.ನಂದಿನಿ ಹಾಗೂ ಶೆಟ್ಟಹಳ್ಳಿಯ ಎನ್.ಗಂಗಮ್ಮ ನಾಮಪತ್ರ ಸಲ್ಲಿಸಿದ್ದರು.

ಬಿ.ನಿರ್ಮಲ 10 ಮತಗಳನ್ನು ಪಡೆಯುವ ಮೂಲಕ ಅಧ್ಯಕ್ಷರಾಗಿ ಆಯ್ಕೆಯಾದರೆ, ಆರ್.ನಂದಿನಿ 9 ಮತಗಳನ್ನು ಪಡೆದು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

 ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಆಂಜನೇಯ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. 

ನೀಲಗಿರಿ ತೋಪಿಗೆ ಬೆಂಕಿ, ಬೆಂಕಿ ನಂದಿಸಿದ ಅಗ್ನಿಶಾಮಕದಳ

0
Sidlaghatta Taluk sonnenahalli Fire Accident Fire fighters Put Off Flames

ತಾಲ್ಲೂಕಿನ ಸೊಣ್ಣೇನಹಳ್ಳಿಯ ಚೇತನ್ ಅವರಿಗೆ ಸೇರಿರುವ ನೀಲಗಿರಿ ತೋಪಿಗೆ ಸೋಮವಾರ ಬೆಂಕಿ ಬಿದ್ದಿದ್ದು, ಅಗ್ನಿಶಾಮಕ ದಳದವರು ಬಂದು ನಂದಿಸಿದ್ದಾರೆ.

 ಆರು ಎಕರೆ ನೀಲಗಿರಿ ತೋಪಿನಲ್ಲಿ ಒಂದೂವರೆ ಎಕರೆಯಷ್ಟು ಬೆಂಕಿಗೆ ಆಹುತಿಯಾಗಿದೆ. ಅಗ್ನಿಶಾಮಕ ದಳದವರು ಸಮಯಕ್ಕೆ ಬಂದು ನೀರು, ಹೊಂಗೆಸೊಪ್ಪು ಮತ್ತು ನೀಲಗಿರಿ ಸೊಪ್ಪಿನಿಂದ ಬೆಂಕಿ ನಂದಿಸಿದ್ದರೆ. ಸೊಣ್ಣೇನಹಳ್ಳಿ ಗ್ರಾಮಸ್ಥರೂ ಸಹ ಬೆಂಕಿ ನಂದಿಸಲು ನೆರವಾಗಿದ್ದಾರೆ.

 ಅಗ್ನಿಶಾಮಕ ದಳ ಠಾಣಾಧಿಕಾರಿ ಕೆ.ರಾಮಕೃಷ್ಣ, ಅಧಿಕಾರಿಗಳಾದ ಪಿ.ಆರ್.ಶ್ರೀನಿವಾಸ್, ಅಶೋಕ್, ಮಹಂತೇಶ್ ಹಾಜರಿದ್ದರು.

Sidlaghatta Cocoon Market-08/02/2021

0
Silk cocoon Sidlaghatta Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 08/02/2021

CB Lots: 183
Qty: 9501 Kgs
Max: 434
Min: 319
Avg: 386

BV Lots: 01
Qty: 10 Kgs
Max: 435
Min: 435
Avg: 435

Sidlaghatta Cocoon Market-07/02/2021

0
Silk cocoon Sidlaghatta Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 07/02/2021

CB Lots: 95
Qty: 5198 Kgs
Max: 430
Min: 362
Avg: 395

BV Lots: 03
Qty: 80 Kgs
Max: 430
Min: 390
Avg: 405

ದೊಡ್ಡತೇಕಹಳ್ಳಿ ಗ್ರಾ.ಪಂ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ

0
Sidlaghatta Doddatekahalli Grama Panchayat President Vice-President Elections

ತಾಲ್ಲೂಕಿನ ದೊಡ್ಡತೇಕಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಟಿ.ಎಸ್.ಗೋಪಾಲರೆಡ್ಡಿ ಉಪಾಧ್ಯಕ್ಷರಾಗಿ ಎಚ್.ಗೀತಾ ಆಯ್ಕೆಯಾಗಿದ್ದಾರೆ.

 ಒಟ್ಟು 17 ಸದಸ್ಯ ಬಲ ಹೊಂದಿರುವ ದೊಡ್ಡತೇಕಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷಸ್ಥಾನ ಸಾಮಾನ್ಯ,  ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆಗೆ ಮೀಸಲು ನಿಗದಿಪಡಿಸಲಾಗಿದ್ದು ಶನಿವಾರ ಚುನಾವಣೆ ಪ್ರಕ್ರಿಯೆ ನಡೆಯಿತು.

 ಅಧ್ಯಕ್ಷ ಸ್ಥಾನಕ್ಕೆ ದೊಡ್ಡತೇಕಹಳ್ಳಿಯ ಟಿ.ಎಸ್.ಗೋಪಾಲರೆಡ್ಡಿ ಹಾಗೂ ಚಿಕ್ಕತೇಕಹಳ್ಳಿಯ ವೆಂಕಟೇಶಪ್ಪ ನಾಮಪತ್ರ ಸಲ್ಲಿಸಿದ್ದು ಉಪಾಧ್ಯಕ್ಷ ಸ್ಥಾನಕ್ಕೆ ಮರಿಹಳ್ಳಿಯ ಎಚ್.ಗೀತಾ ಮಾತ್ರವೇ ನಾಮಪತ್ರ ಸಲ್ಲಿಸಿದ್ದರು.

 ಉಪಾಧ್ಯಕ್ಷ ಸ್ಥಾನಕ್ಕೆ ಕೇವಲ ಒಂದೇ ಒಂದು ನಾಮಪತ್ರ ಸಲ್ಲಿಕೆಯಾದ ಕಾರಣ ಉಪಾಧ್ಯಕ್ಷರಾಗಿ ಎಚ್.ಗೀತಾ ಅವಿರೋಧವಾಗಿ ಆಯ್ಕೆಯಾದರೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಟಿ.ಎಸ್.ಗೋಪಾಲರೆಡ್ಡಿ 11 ಮತಗಳನ್ನು ಪಡೆಯುವ ಮೂಲಕ ತನ್ನ ಪ್ರತಿಸ್ಫರ್ಧಿ ವೆಂಕಟೇಶಪ್ಪ (6 ಮತಗಳು) ರನ್ನು ಪರಾಭವಗೊಳಿಸುವ ಮೂಲಕ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

 ಕೃಷಿ ಇಲಾಖೆಯ ಉಪನಿರ್ದೇಶಕ ಎಚ್.ಎಲ್.ಚಂದ್ರಕುಮಾರ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಪಿಡಿಓ ಕೆ.ಎನ್.ರಮೇಶ್‌ರೆಡ್ಡಿ ಹಾಜರಿದ್ದರು.

ಬೆಂಕಿ ಅನಾಹುತ: ರೇಷ್ಮೆ ಹುಳು ಸಾಕಾಣಿಕಾ ಮನೆ ಹಾಗೂ ದ್ರಾಕ್ಷಿ ತೋಟಕ್ಕೆ ಹಾನಿ

0
Fire Chowdasandra Sidlaghatta Farmer Crop Burnt Silk Grapes

ತಾಲ್ಲೂಕಿನ ಚೌಡಸಂದ್ರ ಗ್ರಾಮದಲ್ಲಿ ಶನಿವಾರ ಆಕಸ್ಮಿಕವಾಗಿ ಬಿದ್ದ ಬೆಂಕಿಯಿಂದಾಗಿ ರೇಷ್ಮೆ ಹುಳು ಸಾಕಾಣಿಕಾ ಮನೆ ಹಾಗೂ ದ್ರಾಕ್ಷಿ ತೋಟಕ್ಕೆ ಹಾನಿಯುಂಟಾಗಿದೆ.

 ಅಕ್ಕಲಪ್ಪ ಅವರಿಗೆ ಸೇರಿದ ರೇಷ್ಮೆ ಹುಳು ಸಾಕಾಣಿಕಾ ಮನೆ ಸಂಪೂರ್ಣ ಸುಟ್ಟು ಕರಕಲಾಗಿದ್ದು ಸುಮಾರು ಆರು ಲಕ್ಷ ರೂಗಳಷ್ಟು ನಷ್ಟವಾಗಿದ್ದರೆ, ಪಕ್ಕದಲ್ಲಿಯೇ ಇರುವ ನಾರಾಯಣಮ್ಮ ಎಂಬುವವರ ಬೆಳೆ ಬಂದಿದ್ದ ದ್ರಾಕ್ಷಿ ತೋಟಕ್ಕೆ ಕೂಡ ಬೆಂಕಿ ಹರಡಿ ಸುಮಾರು ಒಂದೂವರೆ ಲಕ್ಷ ರೂಗಳಷ್ಟು ನಷ್ಟವಾಗಿದೆ.

 ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿಯನ್ನು ನಂದಿಸಿದ್ದಾರೆ.

 ತಾಲ್ಲೂಕು ಪಂಚಾಯಿತಿ ಇಒ ಚಂದ್ರಕಾಂತ್, ಆರ್.ಐ ಪ್ರಶಾಂತ್, ಪಿಡಿಒ ಶಾರದಾ, ಗ್ರಾಮ ಪಂಚಾಯಿತಿ ಸದಸ್ಯರಾದ ಆರ್.ಎ.ಉಮೇಶ್, ಸಿ.ಕೆ.ಗಜೇಂದ್ರ ಬಾಬು, ಗ್ರಾಮದ ಮಾರೇಗೌಡ, ನವೀನ್ ಸ್ಥಳಕ್ಕೆ ಭೇಟಿ ನೀಡಿದ್ದರು.

ಶಿಡ್ಲಘಟ್ಟ ಮಾರ್ಗದ ರೈಲು ಸಂಚಾರ ತಾತ್ಕಾಲಿಕವಾಗಿ ಸ್ಥಗಿತ

0
sidlaghatta bangalore yeshwantpur bangarpet train timings

ಶಿಡ್ಲಘಟ್ಟ ಮಾರ್ಗವಾಗಿ ಬಂಗಾರಪೇಟೆ, ಯಶವಂತಪುರ ಹಾಗೂ ಬೆಂಗಳೂರು ಕಂಟೋನ್ಮೆಂಟ್ ಸಂಚರಿಸುತ್ತಿದ್ದ ರೈಲು ಸಂಖ್ಯೆ 06270, 06280, 06269, 06279 ರೈಲುಗಳು ತಾಂತ್ರಿಕ ಕೆಲಸ ನಡೆಯುತ್ತಿರುವ ಕಾರಣ ದಿನಾಂಕ 08 ಫೆಬ್ರವರಿ 2021ರಿಂದ 24 ಫೆಬ್ರವರಿ 2021ರವರೆಗೆ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ ಎಂದು ರೈಲ್ವೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜನವರಿ 4 2021 ರಂದು ಶಿಡ್ಲಘಟ್ಟ ಮಾರ್ಗವಾಗಿ ಬಂಗಾರಪೇಟೆ, ಯಶವಂತಪುರ ಹಾಗೂ ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಗಳಿಗೆ ರೈಲು ಸಂಚಾರ ಪ್ರಾರಂಭಗೊಂಡಿದ್ದವು.

Sidlaghatta Cocoon Market-06/02/2021

0
Silk cocoon Sidlaghatta Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 06/02/2021

CB Lots: 109
Qty: 5874 Kgs
Max: 426
Min: 303
Avg: 395

BV Lots: 02
Qty: 102 Kgs
Max: 435
Min: 415
Avg: 431

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

ಕಚ್ಚಾ ರೇಷ್ಮೆಯನ್ನು ಮಾರಲು ಸರ್ಕಾರ ಮಾರುಕಟ್ಟೆಯನ್ನು ಸ್ಥಾಪಿಸಬೇಕು

0
Silk Govt cocoon Market e Transaction Reelers Press Meet

ರೇಷ್ಮೆ ನೂಲು ಬಿಚ್ಚಾಣಿಕೆದಾರರು ತಯಾರಿಸುವ ರೇಷ್ಮೆಯನ್ನು ಮಾರಲು ಸರ್ಕಾರ ಮಾರುಕಟ್ಟೆಯನ್ನು ಸ್ಥಾಪಿಸಬೇಕು. ಅದರಿಂದ ನಾವುಗಳು ಇ ಬಿಡ್ಡಿಂಗ್ ನಲ್ಲಿ ರೇಷ್ಮೆ ಗೂಡನ್ನು ಖರೀದಿಸಿ, ಇ ಪೇಮೆಂಟ್ ಮಾಡಲು ಅನುಕೂಲವಾಗುತ್ತದೆ ಎಂದು ರಾಜ್ಯ ರೇಷ್ಮೆ ನೂಲು ಬಿಚ್ಚಾಣಿಕೆದಾರರ ಸಂಘದ ಕಾರ್ಯಾಧ್ಯಕ್ಷ ಮೊಹಮ್ಮದ್ ಅನ್ವರ್ ಸರ್ಕಾರವನ್ನು ಆಗ್ರಹಿಸಿದರು.

 ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಗ್ಯವನ್ನು ಪಣಕ್ಕಿಟ್ಟು ರೇಷ್ಮೆ ಉದ್ಯಮದಲ್ಲಿ ತೊಡಗಿಸಿಕೊಂಡಿರುವ ರೇಷ್ಮೆ ನೂಲು ಬಿಚ್ಚಾಣಿಕೆದಾರರ ಆರ್ಥಿಕ ಅಭಿವೃದ್ದಿಗಾಗಿ ಸರ್ಕಾರಗಳು ವ್ಯಾಪಾರ ಮತ್ತು ವಹಿವಾಟಿಗೆ ಅನುಗುಣವಾಗಿ ವಿಶೇಷ ಯೋಜನೆಗಳನ್ನು ರೂಪಿಸಿಲ್ಲ ಎಂದು ದೂರಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದ ಅವಧಿಯಲ್ಲಿ ಬಜೆಟ್‌ನಲ್ಲಿ ಅನುಮೋದನೆಯಾಗಿದ್ದ 166 ಕೋಟಿ ರೂ.ಗಳ ಅನುದಾನವನ್ನು ಜಾರಿಗೊಳಿಸುವಲ್ಲಿ ಇಂದಿನ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.

 ರಾಜ್ಯದಲ್ಲಿ ರೇಷ್ಮೆ ನೂಲು ಬಿಚ್ಚಾಣಿಕೆದಾರರ ಅಭಿವೃದ್ದಿಗಾಗಿ ರಚಿಸಿರುವ ಬಸವರಾಜ್ ವರದಿಯ ಶಿಫಾರಸ್ಸುಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಬೇಕು. ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ರೇಷ್ಮೆ ಮತ್ತು ಹಾಲು ಉತ್ಪಾದನೆಯಲ್ಲಿ ಅಗ್ರ ಸ್ಥಾನವನ್ನು ಹೊಂದಿರುವ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆ ಸಹಿತ ರಾಜ್ಯಾದ್ಯಂತ ರೇಷ್ಮೆ ಉದ್ದಿಮೆಯನ್ನು ನೆಚ್ಚಿಕೊಂಡು ಸುಮಾರು 6 ಲಕ್ಷ ರೇಷ್ಮೆ ನೂಲು ಬಿಚ್ಚಾಣಿಕೆದಾರರು, ರೇಷ್ಮೆ ಬೆಳೆಗಾರರು, ಹುರಿಕಾರರು ಮತ್ತು ಕೂಲಿ ಕಾರ್ಮಿಕರು ಖಾಸಗಿ ಹಣಕಾಸಿನ ಸಂಸ್ಥೆಗಳ ಮೂಲಕ ಸುಮಾರು 15 ಸಾವಿರ ಕೋಟಿ ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ. ಆದರೆ ಸರ್ಕಾರ ಈ ಉದ್ಯಮದಲ್ಲಿ ತೊಡಗಿರುವ ಜನರು ಹೇಗೆ ಹಣಕಾಸಿನ ವ್ಯವಸ್ಥೆಯನ್ನು ಸರಿದೂಗಿಸುತ್ತಿದ್ದಾರೆ ಎಂಬುದನ್ನು ಕನಿಷ್ಟ ಇದುವರೆಗೆ ಚಿಂತನೆ ಮಾಡಿಲ್ಲ. ರೇಷ್ಮೆ ಮಾರುಕಟ್ಟೆಯ ಇಲಾಖೆಯ ಅಧಿಕಾರಿಗಳು ಹಿಂದೆ ಉದ್ಯಮದ ಅಭಿವೃದ್ದಿಗಾಗಿ ನೀಡಿದ ಸಹಕಾರ ಪ್ರಸ್ತುತ ದಿನಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ನೀಡುತ್ತಿಲ್ಲ. ರಾಮನಗರದಲ್ಲಿರುವ ವ್ಯವಸ್ಥೆಯನ್ನು ಶಿಡ್ಲಘಟ್ಟ ಮಾರುಕಟ್ಟೆಯಲ್ಲಿ ಸಹ ಜಾರಿಗೊಳಿಸಬೇಕೆಂದು ಒತ್ತಾಯಿಸಿದರು.

 ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಯಲ್ಲಿ ರೇಷ್ಮೆ ಬೆಳೆಗಾರರಿಗೆ ಉತ್ತಮ ಧಾರಣೆ ದೊರೆಯಬೇಕೆಂಬ ಉದ್ದೇಶದೊಂದಿಗೆ ಸರ್ಕಾರ ಜಾರಿಗೊಳಿಸಿದ ಇ-ಬಿಡ್ ವ್ಯವಸ್ಥೆಯಿಂದ ರೇಷ್ಮೆ ಬೆಳೆಗಾರರು ಮತ್ತು ನೂಲು ಬಿಚ್ಚಾಣಿಕೆದಾರರು ಪ್ರತಿನಿತ್ಯ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಇ-ಬಿಡ್ ವ್ಯವಸ್ಥೆಯಿಂದ ನೈಜ ನೂಲು ಬಿಚ್ಚಾಣಿಕೆದಾರರಿಗಿಂತಲೂ ಮಧ್ಯವರ್ತಿಗಳಿಗೆ ಅನುಕೂಲವಾಗಿದೆ. ಅಧಿಕಾರಿಗಳು ಸಹ ಸರ್ಕಾರಿ ವ್ಯವಸ್ಥೆಯಲ್ಲಿರುವ ಲೋಪದೋಷಗಳನ್ನು ಸರಿಪಡಿಸಲು ಇಲಾಖೆಯ ಮುಖ್ಯಸ್ಥರೊಂದಿಗೆ ಮತ್ತು ಸಚಿವರೊಂದಿಗೆ ಸಮಾಲೋಚನೆ ನಡೆಸುವ ವ್ಯವಸ್ಥೆಯನ್ನು ಜಾರಿಗೊಳಿಸಿಲ್ಲ ಎಂದರು.   

 ಮಾರುಕಟ್ಟೆಯಲ್ಲಿ ಇ-ಬಿಡ್ ವ್ಯವಸ್ಥೆಯಲ್ಲಿರುವ ಲೋಪದೋಷಗಳನ್ನು ಸರಿಪಡಿಸದೆ, ರೇಷ್ಮೆ ನೂಲು ಬಿಚ್ಚಾಣಿಕೆದಾರರು ಮತ್ತು ರೇಷ್ಮೆ ಬೆಳೆಗಾರರೊಂದಿಗೆ ಪೂರ್ವ ಸಿದ್ದತೆ ಸಭೆ ನಡೆಸದೇ, ಏಕಾಏಕಿಯಾಗಿ ಇ-ಪೇಮೆಂಟ್ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಇದರಿಂದ ಬಡ ಮತ್ತು ಸಣ್ಣ ರೇಷ್ಮೆ ನೂಲು ಬಿಚ್ಚಾಣಿಕೆದಾರರನ್ನು ಬೀದಿಪಾಲು ಮಾಡುವ ಹುನ್ನಾರ ನಡೆಸಲಾಗಿದೆ. ಪರೋಕ್ಷವಾಗಿ ರೇಷ್ಮೆ ಉದ್ದಿಮೆಯನ್ನು ಭವಿಷ್ಯದಲ್ಲಿ ಸರ್ವನಾಶ ಮಾಡಲು ಷಡ್ಯಂತರ ನಡೆಸಿದ್ದಾರೆ. ಇ-ಹರಾಜು ಮತ್ತು ಇ-ಪೇಮೆಂಟ್ ವ್ಯವಸ್ಥೆಯಿಂದ ಮಾರುಕಟ್ಟೆಯಲ್ಲಿ ಗೂಡು ಬಾರದೆ ಎಲ್ಲರೂ ಸಂಕಷ್ಟದಲ್ಲಿ ಜೀವನ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

 ಮಾರುಕಟ್ಟೆಯಲ್ಲಿ ರೇಷ್ಮೆ ಬೆಳೆಗಾರರಿಗೆ ತ್ವರಿತವಾಗಿ ಹಣ ಪಾವತಿಸುವ ಸಲುವಾಗಿ ಇ-ಪೇಮೆಂಟ್ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಅದನ್ನು ನಾವು ಸ್ವಾಗತಿಸುತ್ತೇವೆ. ಆದರೆ ಈ ವ್ಯವಸ್ಥೆಯಲ್ಲಿ ಇರುವ ಲೋಪದೋಷಗಳನ್ನು ಸರಿಪಡಿಸಬೇಕು. ಮಾರುಕಟ್ಟೆಯಲ್ಲಿ ರೇಷ್ಮೆ ನೂಲು ಬಿಚ್ಚಾಣಿಕೆದಾರರು ರೇಷ್ಮೆ ಬೆಳೆಗಾರರು ಮತ್ತು ಅಧಿಕಾರಿಗಳು ಹೊರತುಪಡಿಸಿ ಬೇರೆಯವರ ಪ್ರವೇಶವನ್ನು ನಿರ್ಬಂಧಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು. ರೇಷ್ಮೆ ನೂಲು ಬಿಚ್ಚಾಣಿಕೆದಾರರು ಉತ್ಪಾದನೆ ಮಾಡುವ ನೂಲು ಖರೀದಿ ಮಾಡಲು ಸೂಕ್ತ ಮಾರುಕಟ್ಟೆ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಆಗ್ರಹಿಸಿದರು.

 ಫೆಡರೇಷನ್‌ನ ಮಾಜಿ ಉಪಾಧ್ಯಕ್ಷ ಜಿ.ರೆಹಮಾನ್, ರೇಷ್ಮೆ ನೂಲು ಬಿಚ್ಚಾಣಿಕೆದಾರರ ಸಂಘದ ಹಿರಿಯ ಮುಖಂಡ ಮೇಲೂರು ಅಜೀಜ್, ರಾಜ್ಯ ರೀಲರುಗಳ ಸಂಘದ ಉಪಾಧ್ಯಕ್ಷ ರಾಮಕೃಷ್ಣ, ತಾಲ್ಲೂಕು ರೇಷ್ಮೆ ನೂಲು ಬಿಚ್ಚಾಣಿಕೆದಾರರ ಸಂಘದ ಅಧ್ಯಕ್ಷ ಅನ್ಸರ್‌ಖಾನ್, ಉಪಾಧ್ಯಕ್ಷ ಆನಂದ್, ಖಜಾಂಚಿ ಕೆವಿ ಮಂಜುನಾಥ್, ಸಿಎಂ ಬಾಬು, ಸನಾವುಲ್ಲಾ, ಮುಸ್ತಕೀಂ, ಮುನಿಕೃಷ್ಣ, ಬಾಷಾ, ವಿಜಯಪುರ ತಾಲ್ಲೂಕು ರೀಲರುಗಳ ಸಂಘದ ಅಧ್ಯಕ್ಷ ಸಾದಿಕ್‌ಪಾಷ, ಸಿಲ್ಕ್ ಸೊಸೈಟಿಯ ಅಧ್ಯಕ್ಷ ಆರ್ ಕಲೀಂ ಹಾಜರಿದ್ದರು.

Sidlaghatta Cocoon Market-05/02/2021

0
Silk cocoon Sidlaghatta Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 05/02/2021

CB Lots: 119
Qty: 6520 Kgs
Max: 422
Min: 334
Avg: 388

BV Lots: 03
Qty: 85 Kgs
Max: 456
Min: 352
Avg: 430

ಜ್ಞಾನತಾಣ ಕಾರ್ಯಕ್ರಮದಡಿಯಲ್ಲಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ವಿತರಣೆ

0
Dharmasthala Gramabhivruddi Yojane Trust Sidlaghatta Taluk

ಪುರುಷ ಪ್ರಧಾನವಾದ ಈ ಸಮಾಜದಲ್ಲಿ ಮಹಿಳೆಯೂ ಕೂಡಾ ಧೈರ್ಯವಾಗಿ ಸ್ವಾವಲಂಬಿಯಾಗಿ ಬದುಕಲು ಕಲಿಸಿಕೊಟ್ಟಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಎಂದು ಹಿರಿಯ ಸಾಹಿತಿಗಳಾದ ಸ ರಘುನಾಥ್ ತಿಳಿಸಿದರು.

ಶಿಡ್ಲಘಟ್ಟ ನಗರದಲ್ಲಿ ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜ್ಞಾನತಾಣ ಕಾರ್ಯಕ್ರಮದಡಿಯಲ್ಲಿ 31 ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಾಮಾಣಿಕತೆ ಹಾಗೂ ಲೆಕ್ಕಪತ್ರಗಳನ್ನು ಪಾರದರ್ಶಕವಾಗಿ ನೀಡುವ ಸಂಸ್ಥೆಯಿದ್ದರೆ ಅದು ಶ್ರೀ ಕ್ಷೇತ್ರ ಧರ್ಮಸ್ಥಳ. ಇಂತಹ ಸಂಸ್ಥೆಯಲ್ಲಿ ನೀಡುವ ಸೌಲಭ್ಯವನ್ನು ಉತ್ತಮ ರೀತಿಯಲ್ಲಿ ಉಪಯೋಗಿಸಿಕೊಂಡು ಸಮಾಜದಲ್ಲಿ ಆದರ್ಶಪ್ರಾಯರಾಗಿ ಬದುಕಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ತಾಲ್ಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳ ಮಾರ್ಗದರ್ಶನದಲ್ಲಿ ಯುವಜನತೆಗೆ ಸ್ವಉದ್ಯೋಗ ಶಿಕ್ಷಣದಿಂದ ಮೊದಲ್ಗೊಂಡು ವ್ಯಸನಿಗಳನ್ನು ವ್ಯಸನಮುಕ್ತರನ್ನಾಗಿ ಮಾಡುವ ಕಾರ್ಯಕ್ರಮಗಳವರೆಗೆ ಕ್ಷೇತ್ರದ ಕಾರ್ಯಕ್ರಮಗಳು ಹಲವಾರು. ಕರ್ನಾಟಕ ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳಿಗೆ ಮನೆಯಲ್ಲಿಯೇ ಕುಳಿತು ಶಿಕ್ಷಣ ಪಡೆಯುವ ತಂತ್ರಾಂಶ ಯೋಜನೆಯೇ ಈ ಜ್ಞಾನತಾಣ ಕಾರ್ಯಕ್ರಮ. ಅಂತರ್ಜಾಲದ ಮುಖಾಂತರ ತಮಗೆ ಬೇಕಾದ ಕೆಲಸಗಳನ್ನು ಮಾಡಿಕೊಳ್ಳುವ ಸಾಮರ್ಥ್ಯ ಗ್ರಾಮೀಣ ವಿದ್ಯಾರ್ಥಿಗಳಿಗೂ ಒದಗಿ ಬಂದಿದೆ. ಮನೆ ಪಾಠಗಳು ಕಣ್ಮರೆಯಾಗಿ ಮೊಬೈಲ್ ಪಾಠಗಳು ಆಕರ್ಷಣೆಯಾಗಿದೆ. ಆದರೂ ದುರ್ಬಲ ವರ್ಗದ ಕುಟುಂಬದ ಮಕ್ಕಳಿಗೆ ಈ ಸೌಲಭ್ಯವು ಕನಸಿನ ಮಾತಾಗಿದ್ದು ಶಿಕ್ಷಣ ವ್ಯವಸ್ಥೆಯಲ್ಲಿ ಶ್ರೀಮಂತ ಮತ್ತು ಬಡ ಮಕ್ಕಳ ನಡುವೆ ಅಂತರ್ಜಾಲ ಶಿಕ್ಷಣವೊಂದು ಕಂದರವಾಗಿ ಮೂಡಿ ಬರುತ್ತಿದೆ. ಇದನ್ನು ಗಮನಿಸಿದ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಗ್ರಾಮೀಣ ಮಕ್ಕಳಲ್ಲಿ ಅಂತರ್ಜಾಲ ಶಿಕ್ಷಣದ ಮಹತ್ವವನ್ನು ತಿಳಿಸಲು ಮಾಡಿದ ಪ್ರಯತ್ನವೇ ಜ್ಞಾನತಾಣ ಕಾರ್ಯಕ್ರಮ ಎಂದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ತ್ಯಾಗರಾಜ್ ರವರು ಮಾತನಾಡಿ ಆಡು ಮುಟ್ಟದ ಸೊಪ್ಪಿಲ್ಲ ಧರ್ಮಸ್ಥಳ ಸಂಸ್ಥೆಯಲ್ಲಿ ಇಲ್ಲದ ಯೋಜನೆಗಳಿಲ್ಲ. ಈ ಸಂಸ್ಥೆಯ ನೂರಾರು ಕಾರ್ಯಕ್ರಮಗಳು ಸಮಾಜಮುಖಿ ಕಾರ್ಯಕ್ರಮಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಿ ಎಂದರು.

ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ನಿರ್ದೇಶಕರಾದ ರವಿ ಕುಮಾರ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಹಣಕಾಸು ಪ್ರಭಂಧಕರಾದ ಕಿರಣ್ ಆಡಳಿತ ಪ್ರಭಂಧಕಿ ಚೈತ್ರಾ ಮೇಲ್ವಿಚಾರಕಿ ಲಕ್ಷ್ಮಿ, ಕೃಷಿ ಮೇಲ್ವಿಚಾರಕರಾದ ಹರೀಶ್ ಹಾಗೂ ವಿದ್ಯಾರ್ಥಿಗಳು ಹಾಗೂ ಪೋಷಕರು ಹಾಜರಿದ್ದರು.

ಇ-ಪೇಮೆಂಟ್ ಅವ್ಯವಸ್ಥೆ; ರೇಷ್ಮೆ ನೂಲು ಬಿಚ್ಚಾಣಿಕೆದಾರ ಪ್ರತಿಭಟನೆ

0
Sidlaghatta Government Govt silk cocoon Market Reelers Farmers Protest New e Auction Facility Problem

ನಗರದ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಯಲ್ಲಿ ಇ-ಪೇಮೆಂಟ್ ಅವ್ಯವಸ್ಥೆಯಿಂದ ಆಗುತ್ತಿರುವ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಆಗ್ರಹಿಸಿ ರೇಷ್ಮೆ ನೂಲು ಬಿಚ್ಚಾಣಿಕೆದಾರರು ಮಾರುಕಟ್ಟೆಯಲ್ಲಿ ಗುರುವಾರ ಸುಮಾರು 2 ಗಂಟೆಗಳ ಕಾಲ ಇ-ಹರಾಜು ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ ಉಪನಿರ್ದೇಶಕರನ್ನು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ ಅತೀ ದೊಡ್ಡ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಯಲ್ಲಿ ಇ-ಪೇಮೆಂಟ್ ವ್ಯವಸ್ಥೆಯನ್ನು ಜಾರಿಗೊಳಿಸುವ ಮೊದಲು ರೇಷ್ಮೆ ನೂಲು ಬಿಚ್ಚಾಣಿಕೆದಾರರು ಮತ್ತು ರೇಷ್ಮೆ ಬೆಳೆಗಾರರೊಂದಿಗೆ ಕನಿಷ್ಟ ಸೌಜನ್ಯಕ್ಕಾದರೂ ಸಭೆ ನಡೆಸದೆ ಮಾರುಕಟ್ಟೆಯ ಅಧಿಕಾರಿಗಳು ಸರ್ವಾಧಿಕಾರ ಧೋರಣೆಯನ್ನು ಅನುಸರಿಸಿದ್ದಾರೆ. ಇದರ ಫಲದಿಂದಾಗಿ ರೇಷ್ಮೆ ನೂಲು ಬಿಚ್ಚಾಣಿಕೆದಾರರು ಮತ್ತು ರೇಷ್ಮೆ ಬೆಳೆಗಾರರು ಪ್ರತಿನಿತ್ಯ ಸಂಕಷ್ಟವನ್ನು ಎದುರಿಸುವಂತಾಗಿದೆ ಎಂದು ಪ್ರತಿಭಟನಾಕಾರರು ಮಾರುಕಟ್ಟೆಯ ಉಪನಿರ್ದೇಶಕರನ್ನು ತರಾಟೆಗೆ ತೆಗೆದುಕೊಂಡರು.

ಮಾರುಕಟ್ಟೆಯಲ್ಲಿ ಇ-ಪೇಮೆಂಟ್ ವ್ಯವಸ್ಥೆಯನ್ನು ಜಾರಿಗೊಳಿಸಲು ತಮ್ಮ ಅಭ್ಯಂತರವಿಲ್ಲ, ಆದರೆ ಈ ವ್ಯವಸ್ಥೆಯಲ್ಲಿರುವ ಲೋಪದೋಷಗಳನ್ನು ಸರಿಪಡಿಸಲು ಮಾರುಕಟ್ಟೆಯ ಅಧಿಕಾರಿಗಳು ವಿಫಲರಾಗಿದ್ದಾರೆ. ಜೊತೆಗೆ ಈ ವ್ಯವಸ್ಥೆ ಜಾರಿಯಾದ ಬಳಿಕ ಮಾರುಕಟ್ಟೆಯಲ್ಲಿ ರೇಷ್ಮೆ ಗೂಡು ಬರುವುದೇ ಕಡಿಮೆಯಾಗಿದೆ. ರೇಷ್ಮೆ ಬೆಳೆಗಾರರು ಮಾರುಕಟ್ಟೆಯ ಹೊರಭಾಗದಲ್ಲಿ ತಮ್ಮ ರೇಷ್ಮೆ ಗೂಡುಗಳನ್ನು ಮಾರಾಟ ಮಾಡಿಕೊಳ್ಳುತ್ತಿದ್ದಾರೆ. ಇದರಿಂದಾಗಿ ಮಾರುಕಟ್ಟೆಗೆ ಬರುವ ನೂಲು ಬಿಚ್ಚಾಣಿಕೆದಾರರು ಸಂಕಷ್ಟವನ್ನು ಎದುರಿಸುವಂತಾಗಿದೆ ಎಂದು ಕಿಡಿಕಾರಿದರು.

ಮಾರುಕಟ್ಟೆಯಲ್ಲಿ ಉಪನಿರ್ದೇಶಕರ ಖಾತೆಗೆ 2 ಸಾವಿರ ರೂ.ಗಳನ್ನು ಮುಂಗಡವಾಗಿ ಪಾವತಿಸಿ ಇ ಬೀಟ್ ವ್ಯವಸ್ಥೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ಮಾರುಕಟ್ಟೆಯ ಉಪನಿರ್ದೇಶಕರ ಖಾತೆಗೆ ಹಣ ಪಾವತಿಸಿದರೂ ಸಹ ನೂಲು ಬಿಚ್ಚಾಣಿಕೆದಾರರ ಮೊಬೈಲ್‌ಗಳಿಗೆ ಸ್ವೀಕೃತಿಯ ಸಂದೇಶ ಬರುತ್ತಿಲ್ಲ. ಇದರಿಂದಾಗಿ ಆರ್ಥಿಕ ಭದ್ರತೆಯಿಲ್ಲದೆ, ನೂಲು ಬಿಚ್ಚಾಣಿಕೆದಾರರು ವ್ಯಾಪಾರ ವಹಿವಾಟು ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇ-ಪೇಮೆಂಟ್ ವ್ಯವಸ್ಥೆಯಿಂದ ಬಡ ನೂಲು ಬಿಚ್ಚಾಣಿಕೆದಾರರು ಜೀವನ ನಿರ್ವಹಣೆ ಮಾಡಲು ಕಷ್ಟಕರವಾಗಿದೆ. ಬಡವರ ಶಾಪ ಅಧಿಕಾರಿಗಳಿಗೆ ತಟ್ಟುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಹಲವಾರು ಸರ್ಕಾರಿ ರೇಷ್ಮೆ ಮಾರುಕಟ್ಟೆಗಳಲ್ಲಿ ಇ-ಪೇಮೆಂಟ್ ವ್ಯವಸ್ಥೆ ಜಾರಿಗೊಳಿಸಿಲ್ಲ. ಆದರೆ ಶಿಡ್ಲಘಟ್ಟದಲ್ಲಿ ಮಾತ್ರ ಯಾವುದೇ ರೀತಿಯ ಪೂರ್ವ ಸಿದ್ದತೆಯಿಲ್ಲದೆ, ವ್ಯವಸ್ಥೆಯಲ್ಲಿರುವ ಲೋಪದೋಷಗಳನ್ನು ಸರಿಪಡಿಸದೆ, ಅಧಿಕಾರಿಗಳು ತುಘಲಕ್ ದರ್ಬಾರು ನಡೆಸುತ್ತಿದ್ದಾರೆ. ಇದರಿಂದ ರೇಷ್ಮೆ ನೂಲು ಬಿಚ್ಚಾಣಿಕೆದಾರರು ಆರ್ಥಿಕವಾಗಿ ದಿವಾಳಿಯಾಗಲು ಹುನ್ನಾರ ನಡೆಸಿದ್ದಾರೆ ಎಂದು ಗಂಭಿರವಾಗಿ ಆರೋಪಿಸಿ ಮಾರುಕಟ್ಟೆಯಲ್ಲಿ ಬ್ಯಾಂಕ್ ಸ್ಥಾಪಿಸಿ ಇಂಟರ್‌ನೆಟ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಭದ್ರಗೊಳಿಸಿದ ನಂತರ ಇ-ಪೇಮೆಂಟ್ ವ್ಯವಸ್ಥೆಯನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿದರು.

ಮಾರುಕಟ್ಟೆಯ ಉಪನಿರ್ದೇಶಕ ಸುಭಾಷ್ ಮತ್ತು ಸಹಾಯಕ ನಿರ್ದೇಶಕ ನರಸಿಂಹಮೂರ್ತಿ ಅವರು ಮಾತನಾಡಿ, ರೇಷ್ಮೆ ನೂಲು ಬಿಚ್ಚಾಣಿಕೆದಾರರು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತು ತಮಗೆ ಅರಿವಿದೆ. ಈ ಸಂಬಂಧ ಹಿರಿಯ ಅಧಿಕಾರಿಗಳಿಗೆ ಪ್ರತಿನಿತ್ಯ ವರದಿಗಳನ್ನು ಸಲ್ಲಿಸುತ್ತಿದ್ದೇವೆ. ಬ್ಯಾಂಕಿನಲ್ಲಿ ಸರ್ವರ್ ಸಮಸ್ಯೆ ಮತ್ತು ತಾಂತ್ರಿಕ ದೋಷಗಳಿಂದ ಹಣ ಸಂದಾಯವಾಗಲು ವಿಳಂಬವಾಗುತ್ತಿದೆ. ವ್ಯವಸ್ಥೆಯ ಸುಧಾರಣೆಗಾಗಿ ಕ್ರಮ ಕೈಗೊಳ್ಳಲಾಗಿದೆ. ಮಾರುಕಟ್ಟೆಯಲ್ಲಿ ಇ-ಪೇಮೆಂಟ್ ಜೊತೆಗೆ ನೇರವಾಗಿ ಹಣಪಾವತಿಸಲು ಸಹ ಅನುಕೂಲ ಕಲ್ಪಿಸಲಾಗುವುದೆಂದು ಅವರು ಭರವಸೆ ನೀಡಿದ ಬಳಿಕ ರೀಲರುಗಳು ಪ್ರತಿಭಟನೆಯನ್ನು ವಾಪಸ್ ಪಡೆದರು.

ಈ ಸಂದರ್ಭದಲ್ಲಿ ರಾಜ್ಯ ರೇಷ್ಮೆ ನೂಲು ಬಿಚ್ಚಾಣಿಕೆದಾರರ ಸಂಘದ ಕಾರ್ಯಾಧ್ಯಕ್ಷ ಮೊಹಮ್ಮದ್ ಅನ್ವರ್, ಮೇಲೂರು ಅಜೀಜ್, ಸಿಲ್ಕ್ ಫಡರೇಷನ್ ಮಾಜಿ ಉಪಾಧ್ಯಕ್ಷ ಜಿ. ರೆಹಮಾನ್, ಶಿಡ್ಲಘಟ್ಟ ತಾಲ್ಲೂಕು ರೇಷ್ಮೆ ನೂಲು ಬಿಚ್ಚಾಣಿಕೆದಾರರ ಅಧ್ಯಕ್ಷ ಅನ್ಸರ್‌ಖಾನ್, ಉಪಾಧ್ಯಕ್ಷ ಆನಂದ್, ಬಾಂಬೆ ನವಾಜ್, ನವೀದ್‌ಪಾಷ, ಮುನಿರಾಜು ಹಜರಿದ್ದರು.

ನಗರ ಪೋಲೀಸ್ ಠಾಣೆಯ ಪಿಎಸ್‌ಐ ಸತೀಶ್ ಮತ್ತು ಸಿಬ್ಬಂದಿ ಸೂಕ್ತ ಪೋಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಕೈಗೊಂಡಿದ್ದರು.

Sidlaghatta Cocoon Market-04/02/2021

0
Silk cocoon Sidlaghatta Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 04/02/2021

CB Lots: 111
Qty: 5646 Kgs
Max: 510
Min: 195
Avg: 388

BV Lots: 04
Qty: 228 Kgs
Max: 490
Min: 471
Avg: 478

ರಾಷ್ಟ್ರಮಟ್ಟದ ಕರಾಟೆ ಮತ್ತು ಸ್ಕೇಟಿಂಗ್ ನಲ್ಲಿ ಪದಕ ಗೆದ್ದ ಶಿಡ್ಲಘಟ್ಟದ ಬಾಲಕರು

0
Karate Skating Champions Sidlaghatta Medal Winners National Level Competition

ಯುವ ಮತ್ತು ಕ್ರೀಡಾ ಅಭಿವೃದ್ಧಿ ಅಸೊಸಿಯೇಷನ್ ಆಫ್ ಇಂಡಿಯಾ ಗೋವಾ ರಾಜ್ಯದಲ್ಲಿ ಆಯೋಜಿಸಿದ್ದ ಮೂರನೇ ರಾಷ್ಟ್ರೀಯ ಫೆಡರೇಷನ್ ಕಪ್ ಕರಾಟೆ ಮತ್ತು ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ಶಿಡ್ಲಘಟ್ಟದ ದಿವ್ಯಭಾರತ್ ಡೊ ಅಸೊಸಿಯೇಷನ್ ಹಾಗೂ ಸ್ಪೀಡ್ ಸ್ಕೇಟಿಂಗ್ ಅಸೊಸಿಯೇಷನ್ ಕ್ರೀಡಾಪಟುಗಳು ಭಾಗವಹಿಸಿ ಪದಕಗಳನ್ನು ಗೆದ್ದಿದ್ದಾರೆ.

 ಕರಾಟೆ ಸ್ಪರ್ಧೆ

ಕುಮಿತೆ : 16 ವರ್ಷ – ಜಯಸಿಂಹ (ಪ್ರಥಮ), 15 ವರ್ಷ – ಟಿ.ಮೋಹಿತ್ (ದ್ವಿತೀಯ), 14 ವರ್ಷ – ಎಂ.ಓಜಸ್ (ಪ್ರಥಮ)

 ಸ್ಕೇಟಿಂಗ್ ಸ್ಪರ್ಧೆ

1000 ಮೀಟರ್ ರಿಂಕ್ ರೇಸ್ ನಲ್ಲಿ ಆರ್ಯ ರಿಶಿಲ್ ದ್ವಿತೀಯ ಸ್ಥಾನ ಪಡೆದಿದ್ದಾರೆಂದು ತರಬೇತುದಾರ ವಿ.ಅರುಣ್ ಕುಮಾರ್ ತಿಳಿಸಿದ್ದಾರೆ