Home Blog Page 292

ಹಂಡಿಗನಾಳ ಗ್ರಾಮ ಪಂಚಾಯಿತಿ ವತಿಯಿಂದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

0
Girl Child Day Handiganala Grama Panchayat sidlaghatta

ತಾಲ್ಲೂಕಿನ ಅಪ್ಪೇಗೌಡನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಹಂಡಿಗನಾಳ ಗ್ರಾಮ ಪಂಚಾಯಿತಿ ವತಿಯಿಂದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಪ್ರಯುಕ್ತ ಆರು ಮತ್ತು ಏಳನೇ ತರಗತಿ ಹೆಣ್ಣುಮಕ್ಕಳಿಗೆ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಿಗೆ ಚಾಲನೆ ನೀಡಿ ಕಸಾಪ ತಾಲ್ಲೂಕು ಅಧ್ಯಕ್ಷ ಎ.ಎಂ.ತ್ಯಾಗರಾಜ್ ಮಾತನಾಡಿದರು.

ಹೆಣ್ಣು ಮಕ್ಕಳಿಗೆ ರಕ್ಷಣೆ ಮತ್ತು ಅವಕಾಶಗಳನ್ನು ನೀಡುವುದರ ಜೊತೆಗೆ ಹೆಣ್ಣು ಮಕ್ಕಳು ಸಮಾಜದಲ್ಲಿ ಅನುಭವಿಸುವ ತೊಂದರೆಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಭಾರತದಲ್ಲಿ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತದೆ ಎಂದು ಅವರು ತಿಳಿಸಿದರು.

ಹೆಣ್ಣು ಮಗುವಿನ ಸುರಕ್ಷತೆ ಮತ್ತು ಶಿಕ್ಷಣದ ಬಗ್ಗೆ ಪ್ರತಿಯೊಬ್ಬರೂ ಯೋಚಿಸಬೇಕು. ಹೆಣ್ಣು ಭ್ರೂಣಹತ್ಯೆ, ವರದಕ್ಷಿಣೆ, ಬಾಲ್ಯವಿವಾಹ, ಅತ್ಯಾಚಾರ, ಅದರಲ್ಲೂ ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ, ಬಡತನ, ಅನಕ್ಷರತೆ, ಲಿಂಗತಾರತಮ್ಯ, ಅಪೌಷ್ಟಿಕತೆ ಮುಂತಾದ ಸಮಸ್ಯೆಗಳಿಂದ ಬಳಲುತ್ತಿರುವ ಹೆಣ್ಣಿಗೆ ರಕ್ಷಣೆ ಈ ಆಧುನಿಕ ಯುಗದಲ್ಲೂ ಅನಿವಾರ್ಯ. ಕಲಿತ ಹೆಣ್ಣೂ ಕೂಡ ಉದ್ಯೋಗದ ಸ್ಥಳದಲ್ಲಿ ದೌರ್ಜನ್ಯ ಅನುಭವಿಸುವುದು ನೋಡಿದ್ದೇವೆ. ನಮ್ಮ ಸುತ್ತಲಿನ ವಾತಾವರಣ ಹೇಗಿದೆ ಎಂದರೆ, ಬಾಲಕಿಯರನ್ನು ಆಟವಾಡಲು ಹೊರಗೆ ಕಳುಹಿಸಲು, ಶಾಲೆಗೆ ಕಳುಹಿಸಲು, ಸಂಬಂಧಿಕರ ಅಥವಾ ಸ್ನೇಹಿತರ ಮನೆಗೆ ಕಳುಹಿಸಲೂ ಕೂಡ ಯೋಚಿಸುವ ಪರಿಸ್ಥಿತಿ ಬಂದಿದೆ. ಈ ಎಲ್ಲ ಸಂಕಷ್ಟಗಳನ್ನೂ ಮೀರಿ ನಿಲ್ಲಲು ಹೆಣ್ಣುಮಕ್ಕಳನ್ನು ರಕ್ಷಿಸಿ, ಅವರಿಗೆ ಸೂಕ್ತ ಶಿಕ್ಷಣ ಕೊಡಿಸುವುದು ಮತ್ತು ಹೆಣ್ಣುಮಕ್ಕಳ ಹಕ್ಕುಗಳ ಬಗ್ಗೆ ನಾವೂ ಹೆಚ್ಚಿನ ಅರಿವು ಬೆಳೆಸಿಕೊಳ್ಳುವುದು ಅಗತ್ಯವಾಗಿದೆ ಎಂದರು.

 ಆರು ಮತ್ತು ಏಳನೇ ತರಗತಿ ಹೆಣ್ಣುಮಕ್ಕಳಿಗೆ ಗೋಣಿಚೀಲ ಓಟದ ಸ್ಪರ್ಧೆ, ಸಂಗೀತ ಕುರ್ಚಿ, ನಿಂಬೆಹಣ್ಣು ಮತ್ತು ಚಮಚ ಆಟಗಳನ್ನು ಆಡಿಸಲಾಯಿತು. ವಿಜೇತರಾದ ಇಂದುಶ್ರೀ, ಅಂಕಿತ, ಲಾವಣ್ಯ ಮುಂತಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಹಾಗೂ ಬಹುಮಾನಗಳನ್ನು ನೀಡಲಾಯಿತು.

 ಹಂಡಿಗನಾಳ ಗ್ರಾಮ ಪಂಚಾಯಿತಿ ಪಿಡಿಒ ಅಂಜನ್ ಕುಮಾರ್, ಕಾರ್ಯದರ್ಶಿ ಶ್ರೀನಿವಾಸ್, ಗ್ರಾಮ ಪಂಚಾಯಿತಿ ಸದಸ್ಯರಾದ ಗಂಗರತ್ನ, ದ್ಯಾವಪ್ಪ, ಮುನಿವೆಂಕಟಸ್ವಾಮಿ, ಎಸ್.ಡಿ.ಎಂ.ಸಿ ಅಧ್ಯಕ್ಷೆ ಮಮತಾ, ಉಪಾಧ್ಯಕ್ಷೆ ಶಿಲ್ಪ, ಮುನಿರತ್ನಮ್ಮ, ವೆಂಕಟಮ್ಮ, ಮುಖ್ಯಶಿಕ್ಷಕಿ ಎಂ.ವಿ. ವೆಂಕಟರತ್ನಮ್ಮ, ಎಸ್.ಚಾಂದ್ ಪಾಷ, ಸುಜಾತ ಹಾಜರಿದ್ದರು.

Sidlaghatta Cocoon Market-27/01/2021

0
Sidlaghatta Silk cocoon Market Daily Price Update Raw Silk Filature Business Online Bivoltine Crossbreed Prices

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 27/01/2021

Cross-breed (CB) – ಮಿಶ್ರತಳಿ
ಆವಕ – Lots: 196
ಪ್ರಮಾಣ – Quantity (Kg): 10723
ಗರಿಷ್ಠ – Max (Rs): 425
ಕನಿಷ್ಠ – Min (Rs): 325
ಸರಾಸರಿ – Avg (Rs): 381

Bivoltine (BV) – ದ್ವಿತಳಿ
ಆವಕ – Lots: 01
ಪ್ರಮಾಣ – Quantity (Kg): 31
ಗರಿಷ್ಠ – Max (Rs): 402
ಕನಿಷ್ಠ – Min (Rs): 402
ಸರಾಸರಿ – Avg (Rs): 402

ಕೊರೋನಾ ವಾರಿಯರ್ಸ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

0
Corona Warrior Award Sugaturu Sidlaghatta Taluk

ಮಕ್ಕಳು ಕೇವಲ ಪಠ್ಯಕಲಿಕೆಯ ಕಡೆಗೆ ಮಾತ್ರ ಒತ್ತು ನೀಡದೇ ಪಠ್ಯೇತರ ಚಟುವಟಿಕೆಗಳ ಮೂಲಕ ತಮ್ಮಲ್ಲಿರುವ ಪ್ರತಿಭೆಗಳನ್ನು ಅಭಿವ್ಯಕ್ತಿಪಡಿಸಿಕೊಳ್ಳುವಲ್ಲಿ ಲಭ್ಯ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳಬೇಕು. ಶಿಸ್ತು, ಸಂಯಮ, ವಿನಯತೆ ಮಕ್ಕಳಲ್ಲಿ ವೃದ್ಧಿಯಾಗಬೇಕು. ಉತ್ತಮ ಆರೋಗ್ಯಕ್ರಮಗಳನ್ನು ಅನುಸರಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಶರಣಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಎಚ್.ಎಸ್.ರುದ್ರೇಶಮೂರ್ತಿ ತಿಳಿಸಿದರು.

ತಾಲ್ಲೂಕಿನ ಸುಗಟೂರು ಮಜರೆ ಹಾಲ್ಕುಂಟೆ ಬಳಿಯ ಬಾಲಾಜಿ ವಿದ್ಯಾನಿಕೇತನ ಶಾಲೆಯ ಆವರಣದಲ್ಲಿ ಜಿಲ್ಲಾ ನೆಹರು ಯುವಕೇಂದ್ರ, ಕರ್ನಾಟಕ ಗಾಂಧೀಸ್ಮಾರಕ ನಿಧಿ, ರಾಷ್ಟ್ರೀಯ ಯುವಯೋಜನೆ, ಸುಗಟೂರು ಹಿರಿಯ ಪ್ರಾಥಮಿಕ ಶಾಲೆಯ ಸುಂದರಲಾಲ್‌ಬಹುಗುಣ ಇಕೋಕ್ಲಬ್ ವತಿಯಿಂದ ಜಂಟಿ ಕಾರ್ಯಕ್ರಮದಡಿ ಹಮ್ಮಿಕೊಳ್ಳಲಾಗಿದ್ದ ಕೊರೋನಾ ಜಾಗೃತಿ ಕಾರ್ಯಕ್ರಮ, ಆರೋಗ್ಯಸಿಬ್ಬಂದಿಗೆ ಕೊರೋನಾ ವಾರಿಯರ್ಸ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಮಕ್ಕಳು ಕಲಿಕೆಯಲ್ಲಿ ಆಸಕ್ತಿ ಮೂಡಿಸಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು, ಮಕ್ಕಳ ಸರ್ವಾಂಗೀಣ ಪ್ರಗತಿ ಕಾಣಲು ಪೋಷಕರು, ಶಿಕ್ಷಕರೊಂದಿಗೆ ಎಲ್ಲರೂ ಕೈಜೋಡಿಸಬೇಕು. ಕೊರೋನಾದಂತಹ ಸಾಂಕ್ರಾಮಿಕ ರೋಗಗಳ ತಡೆಯಲ್ಲಿ ಸಾರ್ವಜನಿಕರ ಪಾತ್ರ ಮಹತ್ವದ್ದು ಎಂದು ತಿಳಿಸಿದರು.

ಜಂಗಮಕೋಟೆ ಸರ್ಕಾರಿ ಪ್ರಾಥಮಿಕ ಆರೋಗ್ಯಕೇಂದ್ರದ ವೈದ್ಯಾಧಿಕಾರಿ ಡಾ.ಅಂಬಿಕಾ ಮಾತನಾಡಿ, ಕೊರೋನಾ ಲಸಿಕೆ ಬಂದಿದ್ದಾಗ್ಯೂ ರೋಗಹರಡದಂತೆ ಕ್ರಮವಹಿಸಬೇಕು. ದೇಹದ ಅಂಗಾಂಗಗಳಲ್ಲಿ ನಿರಂತರ ಸ್ವಚ್ಚತೆ ಕಾಯ್ದುಕೊಳ್ಳುವುದರಿಂದ ಅನೇಕ ಕಾಯಿಲೆಗಳನ್ನು ಮುಕ್ತಗೊಳಿಸಬಹುದು. ವೈರಸ್‌ಗಳಿಮದ ಹರಡುವ ಕಾಯಿಲೆಗಳು, ಪರಿಹಾರಗಳ ಕುರಿತು ಅರಿವು ಅಗತ್ಯ ಎಂದರು.

ರಾಷ್ಟ್ರೀಯ ಯುವಯೋಜನೆಯ ರಾಜ್ಯ ಸಂಯೋಜಕ ವಿ.ಪ್ರಶಾಂತ್ ಮಾತನಾಡಿ, ಕಲಿಕೆಯಲ್ಲಿ ಮಕ್ಕಳಿಗೆ ಆಸಕ್ತಿ ಕ್ಷೀಣಿಸದಂತೆ ಗಮನವಹಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗುರಿ ಮತ್ತು ಗುರುವಿನ ಮಾರ್ಗದರ್ಶನ ಒದಗಿಸಬೇಕು ಎಂದರು.

ಕೈತೊಳೆಯುವ ವಿಧಾನ ಮೊದಲಾದ ಸ್ವಚ್ಛತೆಯ ಕುರಿತು ಪ್ರಾತ್ಯಕ್ಷಿಕೆ ಪ್ರದರ್ಶಿಸಲಾಯಿತು. ಗರ್ಭಿಣಿಯರು, ಬಾಣಂತಿಯರು, ಮಕ್ಕಳ ಆರೋಗ್ಯ ಜಾಗೃತಿ ಕುರಿತು ಕಿರುಹೊತ್ತಿಗೆ, ಭಿತ್ತಿಪತ್ರಗಳನ್ನು ಬಿಡುಗಡೆಗೊಳಿಸಿ ಅಂಗನವಾಡಿಗಳಿಗೆ ವಿತರಿಸಲಾಯಿತು. ವಿದ್ಯಾಥಿಗಳಿಗೆ ವಿವಿಧ ಸ್ಫರ್ಧೆಗಳನ್ನು ನಡೆಸಿ ವಿಜೇತರಿಗೆ ಬಹುಮಾಣಗಳನ್ನು ವಿತರಿಸಲಾಯಿತು.

ಜಂಗಮಕೋಟೆ ಪ್ರಾಥಮಿಕ ಆರೋಗ್ಯಕೇಂದ್ರದ ವೈದ್ಯಾಧಿಕಾರಿ ಡಾ.ಅಂಬಿಕಾ, ವೈದ್ಯೆ ಮೇಘಶ್ರೀ, ಲ್ಯಾಬ್‌ ಟೆಕ್ನೀಶಿಯನ್ ಉಮಾ ಅವರಿಗೆ ಕೊರೋನಾ ವಾರಿಯರ್ಸ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮುಖ್ಯಶಿಕ್ಷಕಿ ಲಕ್ಷ್ಮಿ, ಶಿಕ್ಷಕ ಮಂಜುನಾಥ್, ಶಿಕ್ಷಕಿ ಬಿಂದು, ರೂಪಾ, ವಿಶಾಲಾಕ್ಷಿ, ಆರೋಗ್ಯ ಕಿರಿಯ ಶುಶ್ರೂಷಕಿ ಎನ್.ಆಶಾ, ಸ್ವಯಂಸೇವಕ ಮನೋಜ್ ಹಾಜರಿದ್ದರು.

ಶಿಡ್ಲಘಟ್ಟದಲ್ಲಿ 72 ನೇ ಗಣರಾಜ್ಯೋತ್ಸವ ಆಚರಣೆ

0
Sidlaghatta Republic Day Celebration Taluk Administration V Muniyappa Tehsildar

ನಗರದ ನೆಹರು ಕ್ರೀಡಾಂಗಣದಲ್ಲಿ ಮಂಗಳವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ 72 ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.

ರಾಷ್ಟ್ರೀಯ ಹಬ್ಬಗಳಲ್ಲಿ ಒಂದಾದ ಈ ದಿನ ವರ್ಷದ ಮೊದಲ ರಾಷ್ಟ್ರೀಯ ಹಬ್ಬ ಆಚರಿಸುತ್ತಿದ್ದೇವೆ. ಈ ಸಂದರ್ಭದಲ್ಲಿ ಮಹಾನ್‌ ವ್ಯಕ್ತಿಗಳು ಪರಿಶ್ರಮದಿಂದ ಕಟ್ಟಿ ಬೆಳೆಸಿರುವ ಭಾರತದ ಭವಿಷ್ಯವನ್ನು ಇನ್ನೂ ಎತ್ತರಕ್ಕೆ ಕೊಂಡೊಯ್ಯುವ ಜವಾಬ್ದಾರಿ ಯುವ ಜನತೆಯ ಮುಂದಿದೆ ಎಂದು ಅವರು ತಿಳಿಸಿದರು.

ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ನೀಡಿರುವ ಭಾರತದ ಸಂವಿಧಾನದ ಆಶಯಗಳನ್ನು ಅರಿತು ಅದರಂತೆ ನಡೆಯುವುದು ಇಂದಿನ ತುರ್ತು ಅಗತ್ಯ. ಈ ಬಗ್ಗೆ ಪ್ರತಿಯೊಬ್ಬರು ಎಚ್ಚರ ವಹಿಸಿದರೆ ದೇಶದ ಅಭಿವೃದ್ಧಿ, ಐಕ್ಯತೆ, ಸಮಗ್ರತೆ ತಾನಾಗಿಯೆ ಆಗುತ್ತದೆ ಎಂದರು.

ತಹಶೀಲ್ದಾರ್ ಬಿ.ಎನ್.ರಾಜೀವ್ ಮಾತನಾಡಿ, ನಗರದಲ್ಲಿ ಸ್ವಚ್ಛತೆಗೆ ಜನಪ್ರತಿನಿಧಿಗಳು ಆದ್ಯತೆ ನೀಡಬೇಕು. ಅತ್ಯಂತ ಸ್ವಚ್ಛವಾಗಿರಿಸಿಕೊಂಡಿರುವ ವಾರ್ಡುಗಳ ನಗರಸಭಾ ಸದಸ್ಯರನ್ನು ಪುರಸ್ಕರಿಸಲಾಗುವುದು ಎಂದು ಪ್ರಕಟಿಸಿದರು.

ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ದತ್ತಿ ಕಾರ್ಯಕ್ರಮದ ಅಡಿಯಲ್ಲಿ ಕೋವಿಡ್ ಸಮಯದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆಗಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಐವರು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಂ.ಕೆ.ರಾಜಶೇಖರ್, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ನಾರಾಯಣಸ್ವಾಮಿ, ಇಒ ಬಿ.ಕೆ.ಚಂದ್ರಕಾಂತ್, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಶ್ರೀನಿವಾಸ್, ಕಸಾಪ ತಾಲ್ಲೂಕು ಅಧ್ಯಕ್ಷ ಎ.ಎಂ.ತ್ಯಾಗರಾಜ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕಾರ್ಯದರ್ಶಿ ಸಿ.ಬಿ.ಪ್ರಕಾಶ್, ಸಿಡಿಪಿಒ ನಾಗವೇಣಿ, ಶಿಕ್ಷಕರಾದ ಅಗಜಾನನಮೂರ್ತಿ, ರಂಗನಾಥ್, ಕೆಂಪಣ್ಣ, ಆಂಜನೇಯ, ನಾರಾಯಣಸ್ವಾಮಿ, ನಗರಸಭಾ ಸದಸ್ಯರಾದ ಅನಿಲ್ ಕುಮಾರ್, ಕೃಷ್ಣಮೂರ್ತಿ ಹಾಜರಿದ್ದರು.

ಗೃಹರಕ್ಷಕದಳ ಸಿಬ್ಬಂದಿಯಿಂದ ಬೈಕ್ ರ್ಯಾಲಿ

0
Sidlaghatta Motor Vehicle Helmet Awareness Safety

ನಗರದ ಅಗ್ನಿಶಾಮಕ ಠಾಣೆಯ ಆವರಣದಲ್ಲಿ ಅಖಿಲ ಭಾರತ ಗೃಹ ರಕ್ಷಕದಳ ದಿನಾಚರಣೆ ಅಂಗವಾಗಿ ಕರ್ನಾಟಕ ಗೃಹ ರಕ್ಷಕ ಮತ್ತು ಪೌರ ರಕ್ಷಣಾ ಇಲಾಖೆ ಶಿಡ್ಲಘಟ್ಟ ಘಟಕದಿಂದ ಬೈಕ್ ರ‍್ಯಾಲಿಗೆ ಚಾಲನೆ ನೀಡಿ ಗೃಹ ರಕ್ಷಕದಳದ ತಾಲ್ಲೂಕು ಘಟಕ ಅಧಿಕಾರಿ ನಾರಾಯಣಸ್ವಾಮಿ ಮಾತನಾಡಿದರು.

ಗೃಹರಕ್ಷಕರು ಅಗ್ನಿಶಮನ ಮತ್ತು ಕಾನೂನು ಸುವ್ಯವಸ್ಥೆ ಕರ್ತವ್ಯ ಅಲ್ಲದೇ ಇತರ ಯಾವುದೇ ಇಲಾಖೆಗೆ ನಿಯೋಜಿಸಿದರೂ ಆ ಇಲಾಖೆಗೆ ಸಂಬಂಧಪಟ್ಟ ಕೆಲಸವನ್ನು ಮಾಡುವಲ್ಲಿ ಸಮರ್ಥರಾಗಿದ್ದೇವೆ ಎಂದು ಅವರು ಹೇಳಿದರು.

   ಸಮಾಜದಲ್ಲಿ ಗೃಹರಕ್ಷಕದಳ ಸಿಬ್ಬಂದಿಯ ಸೇವೆ ಶ್ಲಾಘನೀಯವಾದದ್ದು, ಗೃಹ ರಕ್ಷಕ ದಳವನ್ನು 1962 ರಲ್ಲಿ ಸ್ಥಾಪನೆ ಮಾಡಲಾಯಿತು. ಅಂದಿನಿಂದ ಇಂದಿನವರೆಗೆ ಗೃಹರಕ್ಷಕ ದಳದ ಸಿಬ್ಬಂದಿ ಪೊಲೀಸ್ ಇಲಾಖೆಯೊಂದಿಗೆ ಸಮಾಜದ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಹಿಂದೆ ಸ್ವಯಂ ಸೇವಕರಾಗಿ ದುಡಿಯಲು ಗೃಹರಕ್ಷಕ ದಳಕ್ಕೆ ಸೇರುವ ಜನರ ಸಂಖ್ಯೆ ವಿರಳವಾಗಿತ್ತು. ಆದರೆ ಕಾಲಕ್ರಮೇಣ ಭಾರತೀಯ ಸೈನ್ಯ, ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಇದ್ದು, ಅವಕಾಶದಿಂದ ವಂಚಿತರಾದವರು, ಗೃಹರಕ್ಷಕ ಸೇರಿದರೆ ಸೈನಿಕ, ಪೊಲೀಸರಂತೆ ಕೆಲಸ ಮಾಡಬಹುದು ಎಂಬ ದೃಷ್ಟಿಯಿಂದ ಇತ್ತೀಚಿನ ದಿನಗಳಲ್ಲಿ ಗೃಹರಕ್ಷಕ ದಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಿದ್ದಾರೆ ಎಂದರು.

  ಪೊಲೀಸ್ ಇಲಾಖೆಯು ಕೂಡ ಕಂಪ್ಯೂಟರ್, ಸಿಸಿಟಿವಿ ಆಪರೇಟರ್, ಸಂಚಾರ ನಿಯಂತ್ರಕ, ವಾಹನ ಚಾಲಕ ಮುಂತಾದ ಕ್ಷೇತ್ರಗಳಲ್ಲಿ ಪೊಲೀಸ್ ಸಮವಸ್ತ್ರ ಸಮೇತ ಸೇವೆ ಮಾಡಲು ಗೃಹರಕ್ಷಕರಿಗೆ ಅವಕಾಶ ನೀಡುತ್ತಿದೆ. ಪ್ರಕೃತಿ ವಿಕೋಪದ ಸಂದರ್ಭ ಹಾಗೂ ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಗೃಹರಕ್ಷಕ ದಳದ ಸ್ವಯಂ ಸೇವಕರ ತ್ಯಾಗ ಮೆಚ್ಚುವಂಥದ್ದು ಎಂದರು.

 ಗೃಹರಕ್ಷಕದಳ ಸಿಬ್ಬಂದಿ ಬೈಕ್ ರ‍್ಯಾಲಿಯ ಮೂಲಕ ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ವಾಹನ ಸವಾರರಿಗೆ ಜಾಗೃತಿ ಮೂಡಿಸಿದರು.

Sidlaghatta Cocoon Market-25/01/2021

0
Sidlaghatta Silk cocoon Market Daily Price Update Raw Silk Filature Business Online Bivoltine Crossbreed Prices

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 25/01/2021

ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ 11 ನೇ ರಾಷ್ಟ್ರೀಯ ಮತದಾರರ ದಿನಾಚರಣೆ

0
National Voters Day Celebration Taluk Office Sidlaghatta

ನಗರದ ತಾಲ್ಲೂಕು ಕಚೇರಿ ಆವರಣದಲ್ಲಿ ಸೋಮವಾರ ತಾಲ್ಲೂಕು ಕಾನೂನು ಸೇವಾ ಸಮಿತಿ, ಮತ್ತು ಕಂದಾಯ ಇಲಾಖೆ ಸಂಯುಕ್ತಾಶ್ರಯದಲ್ಲಿ 11 ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಡಿ.ಆರ್.ಮಂಜುನಾಥ್ ಮಾತನಾಡಿದರು.

ಮತದಾನದ ಪ್ರಾಮುಖ್ಯತೆ ಮತ್ತು ಪ್ರಜೆಗಳ ಮೇಲಿರುವ ಹೊಣೆಯ ಕುರಿತು ಜಾಗೃತಿ ಮೂಡಿಸುವುದಕ್ಕಾಗಿಯೇ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

 ಪ್ರತಿ ಪ್ರಜೆಯೂ ತನ್ನನ್ನು ಆಳುವ ಪ್ರತಿನಿಧಿಯನ್ನು ಆಯ್ಕೆಮಾಡಲು ಇರುವ ವ್ಯವಸ್ಥೆಯೇ ಮತದಾನ. ಪ್ರಜಾತಂತ್ರ ದೇಶದ ಪ್ರಜೆಗಳ ಪ್ರಮುಖ ಹಕ್ಕು ಇದು. ತಮ್ಮ ಒಳಿತನ್ನು ಬಯಸುವ ಜನಪರ ನಾಯಕನನ್ನು ತಾವೇ ಆಯ್ಕೆ ಮಾಡಿ ಕಳಿಸಲು ಮತದಾನ ಎಂಬ ಪ್ರಕ್ರಿಯೆ ಬೇಕು. ದೇಶಕ್ಕೆ ಒಳಿತುಮಾಡುವ ನಾಯಕನನ್ನು ಚುನಾಯಿಸುವುದು ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿ ಎಂದರು.

 ಯುವಜನತೆ ಪ್ರತಿ ವರ್ಷ ನಡೆಯುವ ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿ ಮತದಾರರಾಗಿ ನೋಂದಾವಣೆಗೊಳ್ಳಬೇಕು. ಪ್ರಜಾಪ್ರಭುತ್ವ ಬಲಗೊಳ್ಳಬೇಕಾದರೆ ಎಲ್ಲರ ಪಾಲ್ಗೊಳ್ಳುವಿಕೆ ಅಗತ್ಯವಾಗಿದೆ. ನಮ್ಮ ದೇಶ ಅಭಿವೃದ್ಧಿಯಾಗಬೇಕಾದರೆ, ನಾವು ನಮ್ಮ ಆಯ್ಕೆಯನ್ನು ಅಮೂಲ್ಯ ಮತದಾನದ ಮೂಲಕ ವ್ಯಕ್ತಪಡಿಸಬೇಕು ಎಂದು ಹೇಳಿದರು.

 “ಪ್ರಜಾಪ್ರಭುತ್ವದಲ್ಲಿ ದೃಢವಿಶ್ವಾಸವುಳ್ಳ ಭಾರತದ ಪೌರರಾದ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿಹಿಡಿಯುತ್ತೇವೆಂದು ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಮತ್ತು ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆಂದು ಈ ಮೂಲಕ ಪ್ರತಿಜ್ಞೆ ಸ್ವೀಕರಿಸುತ್ತೇವೆ” ಎಂದು ಈ ಸಂದರ್ಭದಲ್ಲಿ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.

 ಉತ್ತಮವಾಗಿ ಮತದಾನ ಪಟ್ಟಿ ಪರಿಷ್ಕರಣೆ ಕಾರ್ಯ ನೆರವೇರಿಸಿದ ಮತಗಟ್ಟೆ ಅಧಿಕಾರಿಗಳಿಗೆ ಪ್ರಶಂಸಾ ಪತ್ರವನ್ನು ನೀಡಲಾಯಿತು.

 ಪ್ರದಾನ ಸಿವಿಲ್ ನ್ಯಾಯಾಧೀಶರಾದ ಸಂಜುಕುಮಾರ್.ಎ.ಪಚ್ಚಾಪುರೆ, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಟಿ.ವಿ.ಚಂದ್ರಶೇಖರಗೌಡ, ಕಾರ್ಯದರ್ಶಿ ಎಂ.ಬಿ.ಲೋಕೇಶ್, ತಹಶೀಲ್ದಾರ್ ರಾಜೀವ್, ತಾಲ್ಲೂಕು ಪಂಚಾಯಿತಿ ಇಓ ಚಂದ್ರಕಾಂತ್ ಹಾಜರಿದ್ದರು. 

ಬೋದಗೂರು ಕೆರೆಯ ಪುನಶ್ಚೇತನ ಕಾರ್ಯಕ್ರಮ

0
Bodaguru Lake Rejuvenation Program

ತಾಲ್ಲೂಕಿನ ಬೋದಗೂರು ಕೆರೆಯಲ್ಲಿ ಭಾನುವಾರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬೋದಗೂರು ಕೆರೆ ಬಳಕೆದಾರರ ಸಂಘ ಹಾಗೂ ಆನೂರು ಗ್ರಾಮ ಪಂಚಾಯಿತಿ ಇವರ ಸಂಯುಕ್ತಾಶ್ರಯದಲ್ಲಿ “ನಮ್ಮೂರು ನಮ್ಮ ಕೆರೆ” ಯೋಜನೆಯಡಿಯಲ್ಲಿ ನಡೆಯುತ್ತಿರುವ ಕೆರೆಯ ಪುನಶ್ಚೇತನ ಕಾರ್ಯಕ್ರಮದ ವರದಿಯನ್ನು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕ ಬಿ.ವಸಂತ್ ವಿವರಿಸಿದರು.

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡ ಬೋದಗೂರು ಕೆರೆಯ ಅಭಿವೃದ್ಧಿ ಕಾಮಗಾರಿ ಪಾರದರ್ಶಕವಾಗಿ ನಡೆಯುತ್ತಿದೆ. ಇದರಿಂದ ಈ ಭಾಗದ ಜನರ ಆರ್ಥಿಕ ಅಭಿವೃದ್ಧಿ ಆಗುತ್ತದೆ ಎಂದು ಅವರು ತಿಳಿಸಿದರು.

ಕೆರೆಯಲ್ಲಿ ಹೂಳೆತ್ತುವುದರಿಂದ ತಟ್ಟೆಯಂತಿರುವ ಕೆರೆ ಪಾತ್ರೆಯಂತಾಲಿದೆ. ನೀರು ನಿಂತಾಗ, ಜನರಿಗಷ್ಟೇ ಅಲ್ಲದೆ ಜಾನುವಾರುಗಳಿಗೆ, ಪಕ್ಷಿಗಳಿಗೆ ಅನುಕೂಲವಾಗಲಿದೆ. ಕಳೆದ ಹದಿನೈದು ದಿನಗಳಲ್ಲಿ ಬೋದಗೂರು ಕೆರೆಯಲ್ಲಿ 15 ಸಾವಿರ ಲೋಡು ಕೆರೆಯ ಫಲವತ್ತಾದ ಮಣ್ಣನ್ನು, ಸುಮಾರು 600 ಮಂದಿ ರೈತರು ತಮ್ಮ ತೋಟಗಳಿಗೆ ಕೊಂಡೊಯ್ದಿದ್ದಾರೆ. 20 ಎಕರೆ ವಿಸ್ತೀರ್ಣದ ಕೆರೆಗೆ 18 ಲಕ್ಷ 25 ಸಾವಿರ ರೂಗಳಷ್ಟು ಹಣ ಈ ಯೋಜನೆಗೆ ಮಂಜೂರಾಗಿದ್ದು, 15 ದಿನಗಳಲ್ಲಿ 4 ಲಕ್ಷ ರೂಗಳು ಖರ್ಚು ಮಾಡಿ ಸುಮಾರು ಆರು ಎಕರೆಯಷ್ಟು ಪ್ರದೇಶದ ಹೂಳೆತ್ತಲಾಗಿದೆ. ಕಾಮಗಾರಿಯು ಪಾರದರ್ಶಕವಾಗಿ ಕೆರೆ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ನಡೆಯುತ್ತಿದೆ ಎಂದು ವಿವರಿಸಿದರು.

ಬೋದುಗೂರು ಕೆರೆಯಲ್ಲಿ 400 ಗಂಟೆಗಳ ಕಾಮಗಾರಿ ನಡೆದಿದ್ದು, 20 ಎಕರೆ ವಿಸ್ತೀರ್ಣದ ಕೆರೆಯಲ್ಲಿ ಮೂರುವರೆ ಅಡಿ ಆಳವಾದ ಮಣ್ಣನ್ನು ತೆಗೆಯಲಾಗಿದೆ. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ ಈಗಾಗಲೇ ಒಂಭತ್ತು ಕೆರೆಗಳ ಹೂಳೆತ್ತುವ ಕಾಮಗಾರಿ ಮುಗಿದಿದೆ. ಪ್ರಸ್ತುತ 5 ಕೆರೆಗಳ ಕಾಮಗಾರಿ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.

ಕೋಚಿಮುಲ್ ನಿರ್ದೇಶಕ ಆರ್.ಶ್ರೀನಿವಾಸ್ ಮಾತನಾಡಿ, ಸರ್ಕಾರದ ವತಿಯಿಂದ ಜಿಲ್ಲೆಯಲ್ಲಿ ಸಾಕಷ್ಟು ಕೆರೆ ಹೂಳೆತ್ತುವ ಕಾಮಗಾರಿಗಳು ನಡೆದಿದ್ದರೂ ಅವು ಪರಿಣಾಮಕಾರಿಯಾಗಿ ನಡೆದಿಲ್ಲ. ಹಣವೆಲ್ಲ ಕೆರೆಯಲ್ಲಿಯೇ ಇಂಗಿಹೋಗಿದೆ. ಆದರೆ ಪೂಜ್ಯ ಹೆಗ್ಗಡೆಯವರೆ ಮಾರ್ಗದರ್ಶನದಲ್ಲಿ ಮಂಜುನಾಥಸ್ವಾಮಿ ಆಶೀರ್ವಾದದೊಂದಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿಯಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಮತ್ತು ಪಾರದರ್ಶಕವಾಗಿ ಕೆಲಸಗಳು ನಡೆಯುತ್ತಿವೆ ಎಂದರು.

ಜನಜಾಗೃತಿ ವೇದಿಕೆ ಸದಸ್ಯ ಎ.ಎಂ.ತ್ಯಾಗರಾಜ್ ಮಾತನಾಡಿ, ಕೆರೆಕಟ್ಟೆಗಳು ನಾಡಿನ ಜೀವನಾಡಿ. ರೈತಾಪಿ ಜನರ ಉಸಿರು. ಇವನ್ನು ಈಗಂತೂ ನಿರ್ಮಿಸಲು ಆಗದು, ಹಾಗಾಗಿ ಇರುವುದನ್ನು ಉಳಿಸಿಕೊಳ್ಳಲೇಬೇಕು. ನಮ್ಮೂರು ನಮ್ಮ ಕೆರೆ’ ಕಾರ್ಯಕ್ರಮದಡಿ ಕೆರೆಯ ಹೂಳೆತ್ತಿ ಅವುಗಳಿಗೆ ಮರುಜೀವ ನೀಡಿ ಊರಿನವರಿಗೆ ವರ್ಗಾಯಿಸುವ ಮೂಲಕ ಕೆರೆಯ ಮಹತ್ವ, ಅಗತ್ಯತೆ, ಕೆರೆ ಸಂರಕ್ಷಣೆಯ ಕುರಿತ ಜಾಗೃತಿಯನ್ನು ಮೂಡಿಸುವ ಅಪೂರ್ವ ಕೆಲಸ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದೆ ಎಂದರು.

ಗ್ರಾಮ ಪಂಚಾಯಿತಿ ಸದಸ್ಯ ಬೆಳ್ಳೂಟಿ ಸಂತೋಷ್ ಮಾತನಾಡಿ, ಆನೂರು ಗ್ರಾಪಂ ವತಿಯಿಂದ ಮುಂಬರುವ 15ನೇ ಹಣಕಾಸು ಯೋಜನೆಯಲ್ಲಿ ಬೋದುಗೂರು ಗ್ರಾಮದ ಕೆರೆಯ ನೀರಿನ ಆಶ್ರಯವಾದ ರಾಜಕಾಲುವೆಗಳ ತೆರವು ಕಾರ್ಯಕ್ರಮಕ್ಕೆ ಆದ್ಯತೆ ನೀಡಲಾಗುವುದೆಂದರು.

ಕೆರೆ ಸಮಿತಿ ಅಧ್ಯಕ್ಷ ಬೋದಗೂರು ವೆಂಕಟಸ್ವಾಮಿರೆಡ್ಡಿ, ಯೋಜನಾಧಿಕಾರಿ ಪ್ರಕಾಶ್ ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯ ವಿಶ್ವಾಸ್ ಸುರೇಶ್, ನಾಗೇಶ್, ದೊಡ್ಡಮಾರಪ್ಪ, ಕೆರೆ ಸಮಿತಿ ಸದಸ್ಯರಾದ ನಾಗೇಶ್, ವೆಂಕಟರೆಡ್ಡಿ, ರಾಮಮೂರ್ತಿ, ಶ್ರೀನಿವಾಸ್, ಮೇಲ್ವಿಚಾರಕಿ ಜ್ಯೋತಿ, ಅನಿತಾ, ಲಕ್ಷ್ಮೀ, ಆಶಾ, ರಂಗಸ್ವಾಮಿ, ಸೇವಾ ಪ್ರತಿನಿಧಿ ವೆಂಕಟಲಕ್ಷ್ಮೀ ಹಾಜರಿದ್ದರು.

ಸಾದಲಿ ಬಳಿ ಪಶು ಆಹಾರ ಘಟಕ ಕಾಮಗಾರಿಗೆ ಶೀಘ್ರ ಗುದ್ದಲಿ ಪೂಜೆ

0
Kochimul KMF Milk Fedaration President R Srinivas Sidlaghatta Sadali Bodaguru

ನಗರದ ಕೋಚಿಮುಲ್ ಕಚೇರಿಯಲ್ಲಿ ಕ್ಯಾಲೆಂಡರ್ ಮತ್ತು ಡೈರಿಯನ್ನು ಬಿಡುಗಡೆ ಮಾಡಿ ಕೋಚಿಮುಲ್-ಕೆಎಂಎಫ್ ನಿರ್ದೇಶಕ ಆರ್.ಶ್ರೀನಿವಾಸ್ ಮಾತನಾಡಿದರು.

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಹಾಲು ಉತ್ಪಾದಕರಿಗೆ ಅನುಕೂಲ ಕಲ್ಪಿಸಲು ಶಿಡ್ಲಘಟ್ಟ ತಾಲ್ಲೂಕಿನ ಸಾದಲಿ ಬಳಿ ಪಶು ಆಹಾರ ಘಟಕವನ್ನು ನಿರ್ಮಿಸಲು ಅತಿ ಶೀಘ್ರದಲ್ಲಿ ಗುದ್ದಲಿ ಪೂಜೆಯನ್ನು ನೆರವೇರಿಸಲಾಗುವುದೆಂದು ಅವರು ತಿಳಿಸಿದರು.

   ಸಾದಲಿ ಬಳಿ ಪಶು ಆಹಾರ ಘಟಕವನ್ನು ನಿರ್ಮಿಸಲು 26 ಎಕರೆ ಜಮೀನು ಮಂಜೂರಾಗಿದೆ. ಆದರೆ ಜಮೀನಿನ ಸರ್ವೆ ಮಾಡಿದಾಗ 5 ಎಕರೆ ಕಡಿಮೆ ಬಂದಿದ್ದು ಈ ಸಂಬಂಧ ತಹಶೀಲ್ದಾರ್ ಅವರಿಗೆ ಮಾಹಿತಿ ನೀಡಿದ್ದೇವೆ. ಆ ಭಾಗದಲ್ಲಿ ಸಾಗುವಳಿ ಚೀಟಿ ಪಡೆಯಲು ಜನರು ಸಲ್ಲಿಸಿದ್ದ ಅರ್ಜಿಗಳನ್ನು ತಿರಸ್ಕೃತಗೊಂಡಿದೆ. ಅವರಿಗೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಲು ತಹಶೀಲ್ದಾರ್ ಭರವಸೆ ನೀಡಿದ್ದಾರೆ. ವ್ಯವಸ್ಥಿತವಾಗಿ ಘಟಕವನ್ನು ನಿರ್ಮಿಸಲು ಉಳಿಕೆ 5 ಎಕರೆ ಜಮೀನು ಮಂಜೂರು ಮಾಡಲು ಮನವಿ ಮಾಡಿದ್ದು ಅತಿ ಶೀಘ್ರದಲ್ಲಿ ಘಟಕದ ಕಾಮಗಾರಿಯನ್ನು ಆರಂಭಿಸಲಾಗುವುದೆಂದರು.

    ರಾಜ್ಯದ 5 ಭಾಗಗಳಲ್ಲಿ ಪಶು ಆಹಾರ ಘಟಕಗಳನ್ನು ಸ್ಥಾಪಿಸಲಾಗಿದ್ದು, ಅದರಿಂದ ಹಾಲು ಉತ್ಪಾದಕರಿಗೆ ಅನುಕೂಲವಾಗುತ್ತಿದೆ. ಸಾದಲಿ ಬಳಿ ಸುಸಜ್ಜಿತ ಪಶು ಆಹಾರ ಘಟಕ ನಿರ್ಮಾಣಗೊಂಡರೆ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆ ಸಹಿತ ಇನ್ನಿತರೆ ಜಿಲ್ಲೆಗಳ ರೈತರಿಗೆ ಅನುಕೂಲವಾಗಲಿದ್ದು, ಬೇರೆ ಕಡೆಯಿಂದ ಪಶು ಆಹಾರವನ್ನು ಸಾಗಾಣಿಕೆ ಮಾಡಲು ಆಗುತ್ತಿದ್ದ ಖರ್ಚು ಉಳಿತಾಯವಾಗಿ, ಸಾದಲಿ ಭಾಗದಲ್ಲಿ ವ್ಯಾಪಾರ-ವಹಿವಾಟು ನಡೆದು ಸ್ಥಳೀಯ ಜನರು ಆರ್ಥಿಕವಾಗಿ ಅಭಿವೃದ್ಧಿ ಹೊಂದಲಿದ್ದಾರೆ ಎಂದರು.

    ಹಾಲಿನ ದರ ಏರಿಕೆ ಸಾಧ್ಯತೆ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಒಕ್ಕೂಟದ ಆಡಳಿತ ಮಂಡಳಿ ನಿರ್ದೇಶಕರ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಹಾಲಿನ ದರವನ್ನು ಏರಿಸುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಸಂಸ್ಥೆಯ ಅಧ್ಯಕ್ಷರು ಹಾಗೂ ನಿರ್ದೇಶಕರು ಸ್ಪಷ್ಟ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ. ಹಾಲು ಉತ್ಪಾದಕರಿಗೆ ಸಂಕ್ರಾಂತಿ ಹಬ್ಬದ ಕೊಡುಗೆ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಈ ಸಂದರ್ಭದಲ್ಲಿ ಕೋಚಿಮುಲ್ ಉಪ ವ್ಯವಸ್ಥಾಪಕ ಡಾ.ಚಂದ್ರಶೇಖರ್, ವಿಸ್ತರಣಾಧಿಕಾರಿಗಳಾದ ಉಮೇಶ್‌ರೆಡ್ಡಿ, ವೈ.ಕುಮ್ಮಣ್ಣ, ಜಯಚಂದ್ರ, ವಿ.ಶ್ರೀನಿವಾಸ್, ಮಂಜುನಾಥ್, ಸಂತೋಷಕುಮಾರ್, ಶಂಕರ್‌ಕುಮಾರ್, ಗುಲಾಬ್‌ಜಾನ್, ಮುನೇಗೌಡ ಹಾಜರಿದ್ದರು.

Sidlaghatta Cocoon Market-24/01/2021

0
Sidlaghatta Silk cocoon Market Daily Price Update Raw Silk Filature Business Online Bivoltine Crossbreed Prices

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 24/01/2021

CB Lots: 157
Qty: 8502 Kgs
Max: 420
Min: 296
Avg: 368

BV Lots NILL

ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ 65 ದಿನಗಳ ತರಬೇತಿ

0
Police Subinspector Sidlaghatta Training Recruitment Examination Physical

ತಾಲ್ಲೂಕಿನ ಯುವ ಪದವೀಧರರಲ್ಲಿ ನಿಷ್ಠಾವಂತ ಪೊಲೀಸ್ ಅಧಿಕಾರಿಯಾಗಬೇಕೆಂಬ ಕನಸು ಹೊಂದಿದ್ದವರಿಗೆ ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯ ಬಹು ನಿರೀಕ್ಷಿತ ನೇಮಕಾತಿ ಪ್ರಕ್ರಿಯಾದ ಪೊಲೀಸ್ ಸಬ್ ಇನ್ಸ್ಪೆಕ್ಟರ್(ಸಿವಿಲ್) ಗಳ ಉದ್ಯೋಗಕ್ಕಾಗಿ ಪದವಿ ಮುಗಿಸಿ ಕಾಯುತ್ತಿದ್ದ ಆಸಕ್ತ ಯುವಕರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬೋಧನೆ ಹಾಗೂ ತರಬೇತಿಯನ್ನು ಆಯೋಜಿಸಿದ್ದೇವೆ ಎಂದು ಯೂನಿಟಿ ಸಿಲ್‌ಸಿಲಾ ಫೌಂಡೇಶನ್ ಅಧ್ಯಕ್ಷ ಮಹಮದ್ ಅಸದ್ ತಿಳಿಸಿದರು.

 ನಗರದಲ್ಲಿ ಮಾತನಾಡಿದ ಅವರು, ಹೊಸಕೋಟೆ ದೀನಿಯಾತ್ ಸುಪ್ಫಾ ಫೌಂಡೇಶನ್, ಮಂಗಳೂರು ಏಸ್ ಅಕಾಡೆಮಿ, ಯೂನಿಟಿ ಸಿಲ್‌ಸಿಲಾ ಫೌಂಡೇಶನ್, ಏರ್ಟೆಲ್ ಎ‍ಕ್ಸ್ಟ್ರೀಮ್ ಫೈಬರ್ ವಿತರಕರು ಹಾಗೂ ಮದೀನಾ ಮಸ್ಜಿದ್ ಇವರ ಸಂಯುಕ್ತ ಆಶ್ರಯದಲ್ಲಿ ನಗರದಲ್ಲಿ ತರಬೇತಿ ಶಿಬಿರವನ್ನು ಆಯೋಜಿಸಲಾಗುತ್ತಿದೆ.

ಶೈಕ್ಷಣಿಕ ವರ್ಷ 2018-19, 2019-20 ರಲ್ಲಿ ಯಾವುದೇ ಪದವಿಯಲ್ಲಿ ಉತ್ತೀರ್ಣರಾದ ಹಾಗೂ ಪ್ರಸಕ್ತ 2020-21 ನೆ ಶೈಕ್ಷಣಿಕ ವರ್ಷದಲ್ಲಿ ಕೊನೆಯ ಪದವಿಯ ವರ್ಷದಲ್ಲಿ ವ್ಯಾಸಾಂಗ ಮಾಡುತ್ತಿರುವ ಪದವಿಧರರ ಉಜ್ವಲ ಭವಿಷ್ಯದ ಸಂಕಲ್ಪದೊಂದಿಗೆ  ಜನವರಿ 24 ಭಾನುವಾರ ದಿಂದ ತರಬೇತಿ ಶಿಬಿರವನ್ನು ನಗರದ ಮದೀನಾ ಮಸೀದಿ ಹತ್ತಿರದ ದೀನಿಯಾತ್ ಬಿಲ್ಡಿಂಗ್ ನಲ್ಲಿ ಪ್ರಾರಂಭಿಸುತ್ತಿದ್ದೇವೆ.

 ಕರ್ನಾಟಕ ರಾಜ್ಯದಲ್ಲಿ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಆಸಕ್ತರಿರುವ ಪದವೀಧರರಿಗೆ ಉದ್ಯೋಗ ಒದಗಿಸುವ ಸಲುವಾಗಿ ರಾಜ್ಯ ಸರ್ಕಾರದಿಂದ 545 ನೇಮಕಾತಿಗಳನ್ನು ಬರ್ತಿ ಮಾಡಲು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದೆ. ಶಿಡ್ಲಘಟ್ಟ ತಾಲ್ಲೂಕಿನ ನಿರುದ್ಯೋಗಿ ಯುವಕರು ಇದರಲ್ಲಿ ಹೆಚ್ಚಾಗಿ ಪಾಲ್ಗೊಂಡು ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಲಿ, ನಮ್ಮ ತಾಲ್ಲೂಕಿಗೆ ಕೀರ್ತಿ ತರಲಿ ಎಂಬ ಆಶಾ ಭಾವನೆಯೊಂದಿಗೆ ತರಬೇತಿ ಶಿಬಿರವನ್ನು ನಡೆಸಲಾಗುತ್ತಿದೆ.

 ನಿಷ್ಠಾವಂತ ಪೊಲೀಸ್ ಸಬ್ ಇಸ್ಪೆಕ್ಟರ್ ಹುದ್ದೆಯನ್ನು ಹೇಗೆ ಅಲಂಕರಿಸಬೇಕೆಂಬ ವಿಷಯದಲ್ಲಿ ಭೋಧನೆ ನೀಡುವುದರ ಜೊತೆಗೆ, ಈ ಹುದ್ದೆಗೆ ಬೇಕಾದ ಶಾರೀರಿಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು ತರಬೇತಿ ನೀಡಲಾಗುವುದು. ಆಸಕ್ತ ಯುವಕ ಯುವತಿಯರು ಈ ಅವಕಾಶವನ್ನು ತಪ್ಪದೆ ಸದುಪಯೋಗ ಪಡೆದುಕೊಂಡು ನಮ್ಮ ಶಿಡ್ಲಘಟ್ಟ ತಾಲ್ಲೂಕಿನ ಕೀರ್ತಿ ಬೆಳಗಿಸುವುದರ ಜೊತೆಗೆ ಮಾದರಿ ಪೊಲೀಸ್ ಅಧಿಕಾರಿಗಳಾಗಿ ಸಮಾಜದ ಪರಿವರ್ತನೆಯ ಪರ್ವಕ್ಕೆ ನಾಂದಿ ಹಾಡಬೇಕು ಎಂದರು.

 ಸತತ 65 ದಿನಗಳವರೆಗೆ ಸಂಜೆ 6 ರಿಂದ 9 ಗಂಟೆಯವರೆಗೆ ಆನ್ಲೈನ್ ಲೈವ್ ಕ್ಲಾಸ್ ಜೊತೆಗೆ ಭೋದನೆ ಮಾಡಿದ ವಿಷಯಗಳಲ್ಲಿ 22 ವಿವಿದ ಬಗೆಯ ಪರೀಕ್ಷೆಗಳ ಜೊತೆಗೆ ಬೆಳಿಗ್ಗೆ ಮತ್ತು ಸಂಜೆ ಎರಡು ಗಂಟೆಗಳ ಕಾಲ ಶಾರೀರಿಕ (ಫಿಜಿಕಲ್) ಪರೀಕ್ಷಾ ತರಬೇತಿ ನೀಡಲಾಗುವುದು.

ಆಸಕ್ತರು, ಮೊಹಮ್ಮದ್ ಅಸದ್ (9342488006), ಅಫ್ಸರ್ ಪಾಷ.ಸಿ (9845324644) ಇವರನ್ನು ಸಂಪರ್ಕಿಸಲು ಕೋರಿದ್ದಾರೆ.

ಹೆಣ್ಣು ಮಕ್ಕಳಿಗಾಗಿ ವೇದಿಕೆ ಕಾರ್ಯಕ್ರಮ

0
Sidlaghatta Scouts and Guides Sports Event Program

ತಾಲ್ಲೂಕಿನ ಜಂಗಮಕೋಟೆ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಜಂಗಮಕೋಟೆ ಗ್ರಾಮ ಪಂಚಾಯಿತಿ ಮತ್ತು ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸಹಯೋಗದೊಂದಿಗೆ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಅಂಗವಾಗಿ ಹೆಣ್ಣು ಮಕ್ಕಳಿಗಾಗಿ ಆಯೋಜಿಸಲಾಗಿದ್ದ ವಿವಿಧ ಕ್ರೀಡಾ ಚಟುವಟಿಕೆಗಳು ಮತ್ತು ಸ್ಪರ್ಧೆಗಳಿಗೆ ಚಾಲನೆ ನೀಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಂಸ್ಥೆಯ ಕಾರ್ಯದರ್ಶಿ ಸಿ.ಬಿ. ಪ್ರಕಾಶ್ ಮಾತನಾಡಿದರು.

ಪ್ರತಿಯೊಂದು ಹೆಣ್ಣು ಸಹ ಸಾಧಕಿಯರೇ. ಈ ಪುರುಷ ಪ್ರಧಾನ ಸಮಾಜದಲ್ಲಿ ಎಲ್ಲವನ್ನೂ ಮೆಟ್ಟಿನಿಂತು ಪ್ರತಿಯೊಂದು ಕ್ಷೇತ್ರದಲ್ಲೂ ನಮ್ಮ ಹೆಣ್ಣುಮಕ್ಕಳು ಸಾಧನೆಯನ್ನು ಮಾಡುತ್ತಿದ್ದಾರೆ ಎಂದು ಅವರು ತಿಳಿಸಿದರು.

 ಒಲಿದರೆ ಮಾತೆಯಾಗುವ, ಮುನಿದರೆ ಮಾರಿಯಾಗುವ ಹೆಣ್ಣುಮಗಳ ಇರವು- ಅರಿವುಗಳನ್ನು ನೆನಪಿಸಿಕೊಳ್ಳುವ ದಿನವೇ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ. ಹೆಣ್ಣು ಮಕ್ಕಳಿಗೆ ರಕ್ಷಣೆ ಮತ್ತು ಅವಕಾಶಗಳನ್ನು ನೀಡುವುದರ ಜೊತೆಗೆ ಹೆಣ್ಣು ಮಕ್ಕಳು ಸಮಾಜದಲ್ಲಿ ಅನುಭವಿಸುವ ತೊಂದರೆಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಭಾರತದಲ್ಲಿ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತದೆ ಎಂದರು.

 ಓಟದ ಸ್ಪರ್ಧೆ, ಗೋಣಿಚೀಲ ಧರಿಸಿ ಓಟ, ರಂಗೋಲಿ, ಚಿತ್ರಕಲೆ ಮತ್ತು ಪದ್ಯವಾಚನ ಸ್ಪರ್ಧೆಗಳನ್ನು ನಡೆಸಲಾಯಿತು. ವಿಜೇತರಿಗೆ ಜನವರಿ 24 ರಂದು ನಡೆಯಲಿರುವ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಕಾರ್ಯಕ್ರಮದಲ್ಲಿ ಬಹುಮಾನ ಮತ್ತು ಪ್ರಶಸ್ತಿ ಪತ್ರಗಳನ್ನು ವಿಸ್ತರಿಸಲಾಗುವುದು.

 ಜಂಗಮಕೋಟೆ ಸರಾಸರಿ ಪ್ರೌಢಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ, ಗ್ರಾಮ ಪಂಚಾಯಿತಿ ಪಿ.ಡಿ.ಓ ವಜ್ರೇಶ್ ಕುಮಾರ್, ಶಿಕ್ಷಕರಾದ ಎಂ.ನಾರಾಯಣಸ್ವಾಮಿ, ಡಿ.ನಾಗರತ್ನ, ಜಿ.ಎನ್.ಲತಾ, ಮೇಘಾ, ಜ್ಯೋಶಿ, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಜೆ.ಎಂ.ಕೃಷ್ಣಪ್ಪ, ವಿಶ್ವನಾಥ್, ದೈಹಿಕ ಶಿಕ್ಷಕ ವಿಜಯಕುಮಾರ್ ಹಾಜರಿದ್ದರು.

ನೇತಾಜಿ ಸುಭಾಷ್‌ ಚಂದ್ರ ಬೋಸ್ ಜನ್ಮದಿನಾಚರಣೆ

0
Netaji Subhas chandra Bose Birth Anniversary

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರೋವರ್ ಘಟಕ ಮತ್ತು ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಡಾ.ಮುರಳಿ ಆನಂದ್ ಮಾತನಾಡಿದರು.

“ನೀವು ನನಗೆ ರಕ್ತ ಕೊಡಿ… ನಾನು ನಿಮಗೆ ಸ್ವಾತಂತ್ರ್ಯ ಕೊಡುತ್ತೇನೆ…” ಎಂದು ಅಬ್ಬರಿಸಿ ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ದೇಶಪ್ರೇಮದ ಕಿಚ್ಚು ಜಾಗೃತಿಗೊಳಿಸಿದ್ದು ಸ್ವಾತಂತ್ರ್ಯ ಸೇನಾನಿ ನೇತಾಜಿ ಸುಭಾಷ್‌ ಚಂದ್ರ ಬೋಸ್. ನೇತಾಜಿ ಅವರ 125 ನೇ ಜನ್ಮದಿನಾಚರಣೆ ಸಂದರ್ಭದಲ್ಲಿ ಆ ಮಹಾನ್ ನಾಯಕ ರಾಷ್ಟ್ರಕ್ಕೆ ನೀಡಿದ್ದ ಸರಿಸಾಟಿಯಿಲ್ಲದ ಕೊಡುಗೆಯನ್ನು ಸ್ಮರಿಸೋಣ ಎಂದು ಅವರು ತಿಳಿಸಿದರು.

 ರಾಷ್ಟ್ರಕ್ಕೆ ನೇತಾಜಿಯ ನಿಸ್ವಾರ್ಥ ಸೇವೆಯನ್ನು ಗೌರವಿಸುವ ಮತ್ತು ನೆನಪಿಸುವ ಸಲುವಾಗಿ, ವಿಶೇಷವಾಗಿ ಯುವಕರಿಗೆ ಸ್ಫೂರ್ತಿ ನೀಡುವ ಸಲುವಾಗಿ ಈ ವರ್ಷದಿಂದ ಪ್ರತಿ ವರ್ಷ ಜನವರಿ 23 ರಂದು “ಪರಾಕ್ರಮ ದಿನ” ಎಂದು ಆಚರಿಸಲು ಭಾರತ ಸರ್ಕಾರ ನಿರ್ಧರಿಸಿದೆ. ನೇತಾಜಿ ಅವರ ಮಾದರಿಯಲ್ಲೇ ದೇಶಭಕ್ತಿಯ ಉತ್ಸಾಹವನ್ನು ತುಂಬುವ ಉದ್ದೇಶ ಇದರ ಹಿಂದಿದೆ ಎಂದರು.

 ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕಾರ್ಯದರ್ಶಿ ಸಿ.ಬಿ.ಪ್ರಕಾಶ್ ಮಾತನಾಡಿ, ಕಾಲೇಜು ವಿದ್ಯಾರ್ಥಿಗಳು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ದೇಶಪ್ರೇಮ ಮತ್ತು ಹೋರಾಟ ಮನೋಭಾವವನ್ನು ಬೆಳೆಸಿಕೊಂಡು ದೇಶದ ಪ್ರಗತಿಗೆ ಶ್ರಮಿಸಬೇಕು. ದೇಶಭಕ್ತಿಯ ಭಾವನೆಯನ್ನು ಬೆಳೆಸಿಕೊಂಡು ರಾಷ್ಟ್ರಕ್ಕಾಗಿ ಸಮರ್ಪಣಾ ಮನೋಭಾವದಿಂದ ದುಡಿಯಬೇಕು ಎಂದು ಕಾಲೇಜು ವಿದ್ಯಾರ್ಥಿಗಳಿಗೆ ಕರೆ ನೀಡಿದರು .

 ಉಪನ್ಯಾಸಕರಾದ ಡಾ.ವೆಂಕಟರವಣಪ್ಪ, ಜಿ.ಕೆ. ರಮೇಶ್, ಶ್ರೀಹರಿ, ಡಾ.ವೆಂಕಟೇಶ್, ಡಾ.ನರಸಿಂಹಮೂರ್ತಿ, ಡಾ.ಉಮೇಶ್ ರೆಡ್ಡಿ, ಅಧೀಕ್ಷಕಿ ಪ್ರತಿಮಾ, ಕಾಲೇಜಿನ ರೋವರ್ ಗಳು, ವಿದ್ಯಾರ್ಥಿ,  ವಿದ್ಯಾರ್ಥಿನಿಯರು ಹಾಜರಿದ್ದರು.

Sidlaghatta Cocoon Market-23/01/2021

0
Sidlaghatta Silk cocoon Market Daily Price Update Raw Silk Filature Business Online Bivoltine Crossbreed Prices

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 23/01/2021

CB Lots: 218
Qty: 11353 Kgs
Max: 420
Min: 305
Avg: 364

BV Lots: NILL

“ವರ್ತುಲ” ಕಾದಂಬರಿ ಬಿಡುಗಡೆ

0
Vartula Kannada Literature Novel Release Sidlaghatta

ನಗರದ ನಗರೇಶ್ವರ ಕಲ್ಯಾಣ ಮಂಟಪದಲ್ಲಿ ತುಲನ ಪ್ರಕಾಶನ ಮತ್ತು ಚುಟುಕು ಸಾಹಿತ್ಯ ಪರಿಷತ್ತು ಸಹಯೋಗದೊಂದಿಗೆ ನಾಗವೇಣಿ ಹೊಸಕೋಟೆ ಬರೆದಿರುವ “ವರ್ತುಲ” ಕಾದಂಬರಿಯನ್ನು ಲೋಕಾರ್ಪಣೆ ಮಾಡಿ ಕೆ.ಎಂ.ಎಫ್ ನಿರ್ದೇಶಕ ಆರ್. ಶ್ರೀನಿವಾಸ್ ಮಾತನಾಡಿದರು.  

ಶಾಲೆಗಳಲ್ಲಿ ಶಿಕ್ಷಕರು ಮಕ್ಕಳಿಗೆ ಕವಿ, ಸಾಹಿತಿಗಳು ಬರೆದಿರುವ ಒಳ್ಳೆಯ ಪುಸ್ತಕಗಳನ್ನು ನೀಡಿ ಓದುವ ಹವ್ಯಾಸವನ್ನು ಬೆಳಸಬೇಕು ಎಂದು ಅವರು ತಿಳಿಸಿದರು. 

 ಇಂದು  ಪುಸ್ತಕ ಹಾಗೂ ದಿನಪತ್ರಿಕೆಗಳನ್ನು ಓದುವ ಹವ್ಯಾಸ ಕಡಿಮೆಯಾಗಿದೆ. ಮೊಬೈಲ್ ಗಳಿಗೆ ಎಲ್ಲರೂ ಮಾರು ಹೋಗಿದ್ದೇವೆ. ಕೈಯಲ್ಲಿ ಮೊಬೈಲ್ ಫೋನ್ ಇಟ್ಟುಕೊಂಡು ಎಲ್ಲವನ್ನು ಅದರಲ್ಲಿಯೇ ನೋಡಿ ತಿಳಿಯುವ ಭ್ರಮೆಯಲ್ಲಿ ಪುಸ್ತಕದ ರೂಪದಲ್ಲಿ ಸಾಹಿತ್ಯವನ್ನು ಓದುವ ಆನಂದವನ್ನು ಕಳೆದುಕೊಳ್ಳುತ್ತಿದ್ದೇವೆ ಎಂದರು.

 ಮನೆಗಳಲ್ಲಿ ತಂದೆತಾಯಿ ಮಕ್ಕಳಿಗೆ ಕನ್ನಡ ಪುಸ್ತಕ ಹಾಗೂ ಪತ್ರಿಕೆಗಳನ್ನು ಓದುವ ಹಾಗೂ ಸ್ವತಂತ್ರವಾಗಿ ಅಭಿಪ್ರಾಯವನ್ನು ಬರವಣಿಗೆಯ ಮೂಲಕ ವ್ಯಕ್ತಪಡಿಸಲು ಪ್ರೋತ್ಸಾಹಿಸಬೇಕು. ಆಗ ಮಾತ್ರ ಕನ್ನಡ ಭಾಷೆಯನ್ನು ಗಡಿನಾಡಿನ ಈ ಭಾಗಗಳಲ್ಲಿ ಉಳಿಸಿ, ಬೆಳೆಸಬಹುದು. ನಮ್ಮ ಗಡಿನಾಡಿನಲ್ಲಿ ಉತ್ತಮ ಸಾಹಿತಿಗಳು, ಕವಿಗಳು, ಕಾದಂಬರಿಕಾರರು ಹೆಚ್ಚಾಗಬೇಕು. ಅವರಿಗೆ ಪ್ರೋತ್ಸಾಹ ನೀಡುವ ವಾತಾವರಣವನ್ನು ಸೃಷ್ಟಿಸಬೇಕು ಎಂದರು.

 ಸಹೋದರಿ ನಾಗವೇಣಿ ಇನ್ನೂ ಹೆಚ್ಚು ಪುಸ್ತಕಗಳನ್ನು ಬರೆದು ಪ್ರಕಟಿಸಲಿ. ಅವರ ಪ್ರೇರಣೆ ಪಡೆದು ಇತರೆ ಹೆಣ್ಣು ಮಕ್ಕಳು ಸಾಹಿತ್ಯಾಸಕ್ತಿ ಹೊಂದಲಿ ಎಂದು ಅಭಿಪ್ರಾಯಪಟ್ಟರು.

 ಮಹಿಳೆಯರಿಗೆ ಶೇಕಡಾ 50 ಮೀಸಲಾತಿ ಇದೆ. ಆದರೆ ಕೆಲ ಕ್ಷೇತ್ರಗಳಲ್ಲಿ ಮಾತ್ರ ಮಹಿಳೆಯರು ತಮ್ಮ ವ್ಯಾಪ್ತಿಯಲ್ಲಿರುವ ಕೆಲಸವನ್ನು ನಾಜೂಕಾಗಿ ಮಾಡುತ್ತಾರೆ. ಮಿಕ್ಕ ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರ ಗಳಲ್ಲಿ ಬೆರಳೆಣಿಕೆಯಷ್ಟು ಮಹಿಳೆಯರನ್ನು ಕಾಣಬಹುದು ಎಂದರು.

ಕಾರ್ಯಕ್ರಮದಲ್ಲಿ ಕಾದಂಬರಿಗಾರ್ತಿ ನಾಗವೇಣಿ ಹೊಸಕೋಟೆ ಅವರು ತಮ್ಮ ಅತ್ತೆ ನಾರಾಯಣಮ್ಮ, ತಾಯಿ ಲಕ್ಷ್ಮಮ್ಮ ಹಾಗೂ ಗುರುಗಳಾದ ಹೇಮಾವತಿ ಅವರನ್ನು ಸನ್ಮಾನಿಸಿದರು.

  ತುಲನ ಪ್ರಕಾಶನ ಬಸವನಗುಡಿಯ ಅಚ್ಯುತ ಸಂಕೇತಿ,  ಕಾದಂಬರಿಗಾರ್ತಿ ನಾಗವೇಣಿ ಹೊಸಕೋಟೆ, ಮಂಜುನಾಥ್, ಕಾಗತಿ  ವಿ. ವೆಂಕಟರತ್ನಂ, ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಪಾತಮುತ್ತಕಪಲ್ಲಿ ಎಂ. ಚಲಪತಿ ಗೌಡ, ಕ.ಸಾ.ಪ ಮಾಜಿ ಜಿಲ್ಲಾಧ್ಯಕ್ಷ ಎಸ್.ವಿ.ನಾಗರಾಜ್ ರಾವ್, ತಾಲ್ಲೂಕು ಅಧ್ಯಕ್ಷ ಎ.ಎಂ.ತ್ಯಾಗರಾಜ್, ಕನ್ನಡ ಸಾರಸ್ವತ ಪರಿಚಾರಿಕೆ ಅಧ್ಯಕ್ಷ ಬಿ.ಆರ್.ಅನಂತ ಕೃಷ್ಣ, ಚುಟುಕು ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಈಧರೆ ಪ್ರಕಾಶ್, ವಸಾಪ ತಾಲ್ಲೂಕು ಅಧ್ಯಕ್ಷ ನಾರಾಯಣ ಸ್ವಾಮಿ, ಟಿ.ಟಿ.ನರಸಿಂಹಪ್ಪ, ಶಿಕ್ಷಕರಾದ ನಂಜುಂಡಪ್ಪ, ಮಂಜುನಾಥ್, ಮಾಲತಿ, ಸೊಣ್ಣೇನಹಳ್ಳಿಯ ವೆಂಕಟೇಶ್, ಪಿಂಡಪಾಪನಹಳ್ಳಿಯ ಆಂಜಿನಪ್ಪ ಹಾಜರಿದ್ದರು.

ಶಾಲಾಪರಿಸರ ಸ್ವಚ್ಚತಾ ಅಭಿಯಾನ

0
Sidlaghatta Sugaturu Government School cleanliness Drive

ತಾಲ್ಲೂಕಿನ ಸುಗಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಜಿಲ್ಲಾ ನೆಹರು ಯುವಕೇಂದ್ರ, ನವದೆಹಲಿಯ ರಾಷ್ಟ್ರೀಯ ಯುವಯೋಜನೆ, ಸುಂದರಲಾಲ್ ಬಹುಗುಣ ಇಕೋ ಕ್ಲಬ್, ರಾಷ್ಟ್ರೀಯ ಸೇವಾ ಯೋಜನಾ ರಾಜ್ಯಕೋಶಗಳ ವತಿಯಿಂದ ರಾಷ್ಟ್ರೀಯ ಯುವಸಪ್ತಾಹದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಶಾಲಾ ಪರಿಸರ ಸ್ವಚ್ಚತೆ ಅಭಿಯಾನ ಕಾರ್ಯಕ್ರಮದಲ್ಲಿ ಶಿಕ್ಷಕ ಎಚ್.ಎಸ್.ರುದ್ರೇಶಮೂರ್ತಿ ಮಾತನಾಡಿದರು.

ಪರಿಸರವನ್ನು ಉಳಿಸಲು ಪ್ರಯತ್ನಗಳು ನಡೆಯುತ್ತಲೇ ಇವೆ. ಸರ್ಕಾರಗಳು ಸ್ವಚ್ಚತಾ ಅಭಿಯಾನ, ಮಾಲಿನ್ಯತಡೆ ಕಾರ್ಯಕ್ರಮಗಳನ್ನು ಆಯೋಜಿಸುತ್ತಿವೆ. ಪ್ಲಾಸ್ಟಿಕ್‌ನಂತಹ ವಿಘಟನೆಗೊಳ್ಳದ ವಸ್ತುಗಳ ಬಳಕೆಯನ್ನು ಕನಿಷ್ಟಗೊಳಿಸಬೇಕು ಎಂದು ಅವರು ತಿಳಿಸಿದರು.

ದೇವಾಲಯ, ಚರ್ಚು, ಮಸೀದಿ, ಶಾಲೆಗಳಂತಹ ಶ್ರದ್ಧಾಕೇಂದ್ರಗಳ ಬಳಿ ಪಾವಿತ್ರತೆ ಕಾಪಾಡುವ ಹೊಣೆಗಾರಿಕೆಯನ್ನು ಎಲ್ಲರೂ ಹೊರಬೇಕು. ಸ್ವಚ್ಚತೆ, ನಿರ್ಮಲತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಸ್ವಚ್ಚತೆಯಲ್ಲಿ ವೈಯಕ್ತಿಕ ಜವಾಬ್ದಾರಿ ಹೆಚ್ಚಿದೆ. ದೇಶದ ಪ್ರತಿ ನಾಗರಿಕರಲ್ಲಿಯೂ ಸ್ವಚ್ಚತೆಯ ಕುರಿತು ಸಾಮಾಜಿಕ ಕಳಕಳಿ, ಬದ್ಧತೆಯ ಅಗತ್ಯವಿದೆ. ಧಾರ್ಮಿಕ ಕೇಂದ್ರಗಳಲ್ಲಿ ಭಕ್ತಿಯ ಜೊತೆಗೆ ಪ್ರತಿ ವ್ಯಕ್ತಿಯೂ ಶಕ್ತಿಯಾಗಿ ಸಮಷ್ಟಿಪ್ರಜ್ಞೆ ತೋರುವಂತಾಗಬೇಕು ಎಂದರು.

ರಾಷ್ಟ್ರೀಯ ಯುವಯೋಜನೆಯ ರಾಜ್ಯ ಸಂಯೋಜಕ ವಿ.ಪ್ರಶಾಂತ್ ಮಾತನಾಡಿ, ಪರಿಸರದ ಭಾಗವಾಗಿರುವ ನೀರು, ನೆಲ, ಕಾಡು, ವಾತಾವರಣ ಎಲ್ಲವನ್ನೂ ಸಂಪೂರ್ಣವಾಗಿ ಮಲಿನಗೊಳಿಸಿದ್ದು, ಅದರಿಂದಾಗಿ ಬಹುತೇಕ ಜೀವಸಂತತಿ ವಿನಾಶದ ಅಂಚಿನಲ್ಲಿವೆ. ಜೀವಿಗಳು ಬದುಕುಳಿಯಲು ಪರಿಸರದ ಘಟಕಗಳನ್ನು ಯತಾಸ್ಥಿತಿಯಲ್ಲಿ ಉಳಿಸಿಕೊಳ್ಳಬೇಕಾದ ಅನಿವಾರ್ಯತೆಯಿದೆ ಎಂದರು.

ಶಿಕ್ಷಕ ಎ.ಬಿ.ನಾಗರಾಜ ಮಾತನಾಡಿ, ಅಧಿಕವಾಗುತ್ತಿರುವ ಚಿಕುನ್‌ಗುನ್ಯಾ, ಡೆಂಗೆ, ಕೊರೋನಾದಂತಹ ಕಾಯಿಲೆಗಳ ವಿರುದ್ಧ ಸಮರ ಸಾರಲು ಜೀವಿಸುವ ನೆರೆಹೊರೆಯಲ್ಲಿ ಸ್ವಚ್ಚತೆಯನ್ನು ಕಾಯ್ದುಕೊಳ್ಳಲು ಎಲ್ಲರೂ ಶ್ರಮಿಸಬೇಕು ಎಂದರು.

 ವಿದ್ಯಾರ್ಥಿಗಳು, ಸ್ವಯಂಸೇವಕರಿಂದ ಶಾಲಾ ಆವರಣದ ಸ್ವಚ್ಚತೆ ಕೈಗೊಳ್ಳಲಾಯಿತು.

ಎಸ್‌ಡಿಎಂಸಿ ಅಧ್ಯಕ್ಷ ಎಂ.ಶಂಕರಪ್ಪ, ಉಪಾಧ್ಯಕ್ಷ ಜಗದೀಶ್, ಸದಸ್ಯೆ ನರಸಮ್ಮ, ಗ್ರಾಮಪಂಚಾಯಿತಿ ಮಾಜಿ ಸದಸ್ಯೆ ಭಾಗ್ಯಮ್ಮ ಅರುಣ್‌ಕುಮಾರ್, ಮುಖ್ಯಶಿಕ್ಷಕಿ ಉಮಾದೇವಿ, ಶಿಕ್ಷಕ ಬಿ.ನಾಗರಾಜು, ಎ.ಬಿ.ನಾಗರಾಜ, ಎಂ.ವೈ.ಲಕ್ಷ್ಮಯ್ಯ ಹಾಜರಿದ್ದರು. 

ವಾಲ್ಮೀಕಿ ಸಮುದಾಯಕ್ಕೆ ಶೇ 7.5 ಮೀಸಲಾತಿ ಘೋಷಿಸಿ – ಶ್ರೀ ಪ್ರಸನ್ನಾನಂದಸ್ವಾಮಿ

0
Valmiki Jatre Jayantotsava Sidlaghatta Samudaya Bhavana

ವಾಲ್ಮೀಕಿ ಸಮುದಾಯಕ್ಕೆ ನೀಡಿರುವ ಭರವಸೆಯಂತೆ ಶೇ 7.5 ಮೀಸಲಾತಿಯನ್ನು ಕೂಡಲೇ ಘೋಷಿಸುವ ಮೂಲಕ ಕೊಟ್ಟ ಮಾತನ್ನು ಮುಖ್ಯಮಂತ್ರಿಗಳು ಉಳಿಸಿಕೊಳ್ಳಬೇಕು ಎಂದು ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಸ್ವಾಮಿ ಹೇಳಿದರು.

 ಫೆಬ್ರುವರಿ 8 ಮತ್ತು 9 ರಂದು ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿರುವ ರಾಜನಹಳ್ಳಿಯ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ನಡೆಯಲಿರುವ ವಾಲ್ಮೀಕಿ ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ ನಗರಕ್ಕೆ ಭೇಟಿ ನೀಡಿದ ಶ್ರೀಗಳು ನಗರದ ಎಸ್.ಎಲ್.ಎನ್ ಪ್ಲಾಜಾ ದಲ್ಲಿ ಸಮುದಾಯದ ಮುಖಂಡರ ಸಭೆ ಹಾಗೂ ನೂತನವಾಗಿ ಗ್ರಾಮ ಪಂಚಾಯಿತಿಗೆ ಆಯ್ಕೆಯಾದ ಸಮುದಾಯದ ಸದಸ್ಯರನ್ನು ಸನ್ಮಾನಿಸಿ ಮಾತನಾಡಿದರು.

 ರಾಜ್ಯದ ನಾಲ್ಕನೇ ಅತಿದೊಡ್ಡ ಸಮುದಾಯವಾಗಿರುವ ವಾಲ್ಮೀಕಿ ಸಮುದಾಯದ ಮಕ್ಕಳಿಗೆ ಉದ್ಯೋಗ ಹಾಗು ಶಿಕ್ಷಣ ಕ್ಷೇತ್ರದಲ್ಲಿ ಶೇ 7.5 ಮೀಸಲಾತಿ ನೀಡುವಂತೆ ಕಳೆದ ಮೂರು ದಶಕಗಳಿಂದ ಹೋರಾಟ ಮಾಡಲಾಗುತ್ತಿದೆಯಾದರೂ ಈವೆರಗೂ ಅನುಷ್ಟಾನಕ್ಕೆ ಬಂದಿಲ್ಲ. ಮುಂಬರುವ ಫೆಬ್ರುವರಿ 8 ಮತ್ತು 9 ರಂದು ನಡೆಯಲಿರುವ ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೂ ಮುನ್ನ ಮೀಸಲಾತಿ ಘೋಷಿಸಬೇಕು ಇಲ್ಲವಾದಲ್ಲಿ ಸಮುದಾಯದೊಂದಿಗೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದರು.

 ಜಾತ್ರಾ ಮಹೋತ್ಸವದಲ್ಲಿ ರಾಜ್ಯದ ವಿವಿದೆಡೆಯಿಂದ ಲಕ್ಷಾಂತರ ಮಂದಿ ಆಗಮಿಸುವ ನಿರೀಕ್ಷೆಯಿದೆ. ಇದು ಕೇವಲ ಜಾತ್ರೆಯಾಗಿರದೇ ಸಮುದಾಯದ ಜಾಗೃತಿ ಮೂಡಿಸುವ ವೇದಿಕೆಯಾಗಬೇಕು. ಅಭಿವೃದ್ಧಿಯಲ್ಲಿ ಹಿಂದುಳಿದಿರುವ ನಾಯಕ ಸಮುದಾಯದ ನೋವು ಸರ್ಕಾರಗಳಿಗೆ ತಿಳಿಯುವಂತೆ ಮಾಡಬೇಕಾಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

 ನೂತನವಾಗಿ ಗ್ರಾಮ ಪಂಚಾಯಿತಿಗೆ ಆಯ್ಕೆಯಾದ ಸಮುದಾಯದ ಸದಸ್ಯರು ತಮ್ಮ ತಮ್ಮ ಗ್ರಾಮಗಳ ಅಭಿವೃದ್ದಿಗೆ ಶ್ರಮಿಸಬೇಕು. ಸಮುದಾಯದ ವಿಷಯ ಬಂದಾಗ ಆ ಪಕ್ಷ, ಈ ಪಕ್ಷ ಎಂಬುದನ್ನು ಬಿಟ್ಟು ಎಲ್ಲರೂ ಒಗ್ಗಟ್ಟಾಗಿ ಸಮುದಾಯದ ಏಳಿಗೆಗಾಗಿ ದುಡಿಯಬೇಕೆಂದರು.

 ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾದ ಜಿಲ್ಲಾಧ್ಯಕ್ಷ, ಜಿಲ್ಲಾ ಪಂಚಾಯಿತಿ ಸದಸ್ಯ ಬಂಕ್ ಮುನಿಯಪ್ಪ ಮಾತನಾಡಿ, ಸಮುದಾಯದ ಪ್ರತಿಯೊಬ್ಬರೂ ವರ್ಷಕ್ಕೊಮ್ಮೆಯಾದರೂ ಗುರುಪೀಠಕ್ಕೆ ಭೇಟಿ ನೀಡುವುದನ್ನು ರೂಢಿಸಿಕೊಳ್ಳಬೇಕು. ಇದರಿಂದ ರಾಜ್ಯಾಧ್ಯಂತ ಇರುವ ಸಮುದಾಯದವರು ಒಗ್ಗಟ್ಟಾಗಿರಲು ಸಾಧ್ಯವಾಗುತ್ತದೆ ಎಂದರು.

 ಇದೇ ಸಂದರ್ಭದಲ್ಲಿ ಜಾತ್ರಾ ಮಹೋತ್ಸವದ ಆಚರಣಾ ಸಮಿತಿಗೆ ತಾಲ್ಲೂಕಿನಿಂದ ಐದು ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾದ ತಾಲ್ಲೂಕು ಅಧ್ಯಕ್ಷ ರಾಮಚಂದ್ರಪ್ಪ, ಹಿರಿಯ ಮುಖಂಡರಾದ ಲಗುನಾಯಕನಹಳ್ಳಿ ಎನ್.ಮುನಿಯಪ್ಪ, ಗೊರಮಿಲ್ಲಹಳ್ಳಿ ವೆಂಕಟೇಶ್, ದ್ಯಾವಪ್ಪ, ರಾಜೇಂದ್ರ, ನಟರಾಜ್, ಬ್ಯಾಟರಾಯಪ್ಪ, ಶಿವಶಂಕರ್, ಜೆ.ಎಂ.ವೆಂಕಟೇಶ್, ತ್ಯಾಗರಾಜ್, ಮುಗಿಲಡಿಪಿ ನಂಜಪ್ಪ, ತಾಲ್ಲೂಕು ಘಟಕ, ಯುವಘಟಕ ಹಾಗೂ ಮಹಿಳಾ ಘಟಕದ ಪದಾಧಿಕಾರಿಗಳು ಹಾಜರಿದ್ದರು.

Sidlaghatta Cocoon Market-22/01/2021

0
Sidlaghatta Silk cocoon Market Daily Price Update Raw Silk Filature Business Online Bivoltine Crossbreed Prices

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 22/01/2021

CB Lots: 287
Qty: 15054 Kgs
Max: 402
Min: 107
Avg: 352

BV Lots: 01
Qty: 57 Kgs
Max: 388
Min: 388
Avg: 388

ಬೀದಿ ಬದಿ ವ್ಯಾಪಾರಸ್ಥರಿಗೆ ಡಿಜಿಟಲ್ ವಹಿವಾಟು ತರಬೇತಿ

0
Sidlaghatta Street Vendors Digital Payments Training Transaction

ನಗರದ ನಗರೇಶ್ವರ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ನಗರಾಭಿವೃದ್ದಿ ಕೋಶ, ನಗರಸಭೆ ಹಾಗೂ ಲೀಡ್ ಬ್ಯಾಂಕ್ ವತಿಯಿಂದ ಆಯೋಜಿಸಲಾಗಿದ್ದ ಪ್ರಧಾನಮಂತ್ರಿ ಆತ್ಮನಿರ್ಭರ ನಿಧಿ ಯೋಜನೆಯಡಿ ಬೀದಿ ಬದಿ ವ್ಯಾಪಾರಸ್ಥರಿಗೆ ಡಿಜಿಟಲ್ ವಹಿವಾಟು ಹಾಗೂ ಸಾಲ ಸೌಲಭ್ಯದ ಬಗ್ಗೆ ನಡೆದ ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಕೋಶದ ಸಮುದಾಯ ಸಂಘಟನಾ ತಜ್ಞ ವೆಂಕಟಾಚಲಪತಿ ಮಾತನಾಡಿದರು.

ಆರ್ಥಿಕವಾಗಿ ಹಿಂದುಳಿದವರು ಹಾಗೂ ಬೀದಿ ಬದಿ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಕಿರುಸಾಲ ನೀಡುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಅವರು ಹೇಳಿದರು.

 ರಾಜ್ಯ ಸರ್ಕಾರ ಈಗಾಗಲೇ ಡೇ-ನಲ್ಮ್ ಯೋಜನೆಯಡಿ ಬೀದಿ ಬದಿ ಹಾಗೂ ತಳ್ಳುಗಾಡಿ ವ್ಯಾಪಾರಿಗಳಿಗೆ ಅನೇಕ ಸೌಕರ್ಯಗಳನ್ನು ಮಾಡಿಕೊಡುತ್ತಿದೆ. ಸಣ್ಣ ವ್ಯಾಪಾರಸ್ಥರು ಮತ್ತಷ್ಟು ಜಾಗೃತರಾಗುವ ಮೂಲಕ ಸರ್ಕಾರದ ವಿವಿಧ ಯೋಜನೆಗಳ ಉಪಯೋಗ ಪಡೆದುಕೊಂಡು ತಮ್ಮ ಬದುಕನ್ನು ಹಸನು ಮಾಡಿಕೊಳ್ಳಬೇಕು ಎಂದರು.

ಲೀಡ್ ಬ್ಯಾಂಕ್ ಮೇನೇಜರ್ ಜಂಗಮಪ್ಪ ಮಾತನಾಡಿ ಬೀದಿ ಬದಿ ವ್ಯಾಪಾರಿಗಳು ಪ್ರಧಾನಮಂತ್ರಿ ಆತ್ಮ ನಿರ್ಭರ್ ಯೋಜನೆಯಡಿ ವ್ಯಾಪಾರ ವಹಿವಾಟು ಆರಂಭಿಸಲು ಪಡೆದ ಸಾಲವನ್ನು ಒಂದು ವರ್ಷದೊಳಗೆ ಮರುಪಾವತಿ ಮಾಡಿದಲ್ಲಿ ಹೆಚ್ಚಿನ ಬಡ್ಡಿ ವಿನಾಯಿತಿ ಸಿಗಲಿದೆ ಎಂದರು.

 ಕೋವಿಡ್ ನಿಂದ ದೇಶಾಧ್ಯಂತ ಲಾಕ್ ಡೌನ್ ಜಾರಿಯಾದಾಗ ಬಹಳಷ್ಟು ಬೀದಿ ಬದಿ ವ್ಯಾಪಾರಿಗಳು ಉದ್ಯೋಗವಿಲ್ಲದೆ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದರು. ಹಾಗಾಗಿ ವ್ಯಾಪಾರ ಮಾಡಲು ಬೇಕಾದ ಕಿರುಸಾಲವನ್ನು ನೀಡುತ್ತಿದ್ದು ಇದರ ಸದುಪಯೋಗ ಪಡಿಸಿಕೊಳ್ಳಿ ಎಂದರು.

 ನಗರಸಭೆ ಪೌರಾಯುಕ್ತ ಶ್ರೀನಿವಾಸ್, ಕೆನರಾ ಬ್ಯಾಂಕ್ ವ್ಯವಸ್ಥಾಪಕ ಶ್ರೀಧರ್, ಫೀಲ್ಡ್ ಆಫೀಸರ್ ಶಮಂತ್, ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕಿನ ಕೃಷ್ಣಾರೆಡ್ಡಿ, ಕಾರ್ಪೋರೇಷನ್ ಬ್ಯಾಂಕ್‌ನ ಮೋಹನ್‌ನಾಯಕ್, ನಗರಸಭೆಯ ಸಮುದಾಯ ಅಧಿಕಾರಿ ಕೆ.ಎಂ.ಸುಧ ಹಾಜರಿದ್ದರು.

ನಿಜಶರಣ ಅಂಬಿಗರ ಚೌಡಯ್ಯ ಜಯಂತ್ಯುತ್ಸವ

0
Ambigara Chowdayya Chowdaiah Birth Anniversary Jayanthi Sidlaghatta Taluk Office

ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಗುರುವಾರ ಆಯೋಜಿಸಿದ್ದ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿರಸ್ತೇದಾರ್ ಕೆ.ಎನ್.ಮಂಜುನಾಥ್ ಮಾತನಾಡಿದರು.

ವಚನ ಸಾಹಿತ್ಯದ ಮೂಲಕ ಸಾಮಾಜಿಕ ಮೌಢ್ಯತೆಯನ್ನು ಹೊಡೆದು ಹಾಕುವಲ್ಲಿ ಶ್ರಮಿಸಿದ ನಿಜಶರಣ ಅಂಬಿಗರ ಚೌಡಯ್ಯ ಅವರ ಸಾಧನೆ ಅವಿಸ್ಮರಣೀಯ ಎಂದು ಅವರು ಹೇಳಿದರು.

 ಅಂಬಿಗರ ಚೌಡಯ್ಯನವರು ತಮ್ಮ ವಚನಗಳಿಂದ ಸಮಾಜ ಪರಿವರ್ತನೆಗೆ ಶ್ರಮಿಸಿದ ಮಹಾನ್ ಶರಣರಾಗಿದ್ದರು. ಶರಣರ ಮಹತ್ವಗಳನ್ನು ತತ್ವಗಳನ್ನು ಮತ್ತು ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆದಾಗ ಮಾತ್ರ ಶರಣರ ಜಯಂತ್ಯುತ್ಸವ ಆಚರಿಸುವುದು ಸಾರ್ಥಕ ವಾಗುತ್ತದೆ. ನೇರ ನಡೆ ನುಡಿಗೆ ಹೆಸರಾದ ಚೌಡಯ್ಯನವರು ನಿಜ ಶರಣ ಎಂದೇ ಖ್ಯಾತಿಯನ್ನು ಗಳಿಸಿದ್ದರು ಎಂದರು.

 ತಾಲ್ಲೂಕು ಬೆಸ್ತರ ಸಂಘದ ಅಧ್ಯಕ್ಷ ಶಿವಣ್ಣ, ಮುಖಂಡರಾದ ಲಕ್ಷ್ಮಿನಾರಾಯಣ(ಲಚ್ಚಿ), ಗೋಪಾಲ್, ರಮೇಶ್, ನಗರಸಭೆ ಆರೋಗ್ಯಾಧಿಕಾರಿ ಶೋಭಾರಾಣಿ, ರಾಜಸ್ವ ನಿರೀಕ್ಷಕ ಪ್ರಶಾಂತ್, ಉಪನ್ಯಾಸಕ ಬಿ.ವಿ.ಪ್ರಕಾಶ್ ಹಾಜರಿದ್ದರು.