Home Blog Page 297

ಅಜಾತ ಶತ್ರು ವಾಜಪೇಯಿ ಜನ್ಮದಿನಾಚರಣೆ

0
Sidlaghatta BJP Vajpayee Birthday Government Hospital

ಶಿಡ್ಲಘಟ್ಟ ನಗರದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ಶನಿವಾರ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣುಗಳನ್ನು ವಿತರಿಸಿ, ನಗರೇಶ್ವರಸ್ವಾಮಿ ಕಲ್ಯಾಣಮಂಟಪದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಶಾಸಕ ಎಂ.ರಾಜಣ್ಣ ಮಾತನಾಡಿದರು.

ಧೀಮಂತ ನಾಯಕ, ಕವಿ ಹೃದಯಿ, ಅಜಾತ ಶತ್ರು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ದೇಶಪ್ರೇಮ, ಸೇವಾಮನೋಭಾವನೆ, ನಿಸ್ವಾರ್ಥ ಸೇವೆಯನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ದೇಶ ಕಂಡ ಅಪ್ರತಿಮ ನಾಯಕ. ರಾಷ್ಟ್ರೀಯ ಹೆದ್ದಾರಿಯ ಪರಿಕಲ್ಪನೆಯನ್ನು ಪೂರ್ಣಗೊಳಿಸಿದ ಸಾಧನೆ ಅವರದ್ದಾಗಿದೆ. ದೇಶದಲ್ಲಿ ಅನೇಕ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಎಲ್ಲಾ ರಾಜಕೀಯ ಪಕ್ಷಗಳ ಸಹಕಾರದೊಂದಿಗೆ ಅಜಾತಶತ್ರು ಎನಿಸಿಕೊಂಡ ಅವರು ದೇಶದಲ್ಲಿ ಅಭಿವೃದ್ಧಿ ಪರ್ವವನ್ನೆ ಹುಟ್ಟುಹಾಕಿದರು. ನಾವೆಲ್ಲರೂ ಇಂದು ಅವರ ಕನಸಿನ ಹಾದಿಯಲ್ಲಿಯೇ ಸಾಗಿ ದೇಶದ ಅಭಿವೃದ್ಧಿಯತ್ತ ಗಮನಹರಿಸಬೇಕಿದೆ ಎಂದು ಹೇಳಿದರು.

 ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬಿ.ಸಿ.ನಂದೀಶ್ ಮಾತನಾಡಿ, ನೆರೆಹೊರೆಯ ದೇಶಗಳಿಗೆ, “ಭಯೋತ್ಪಾದನೆ ಹಾಗೂ ನಂಬಿಕೆ ಒಟ್ಟಿಗೆ ಇರಲು ಸಾಧ್ಯವೇ ಇಲ್ಲ” ಎಂಬ ಸ್ಪಷ್ಟ ನೆಲೆಯನ್ನು ಅರ್ಥೈಸಿಯೇ ವಾಜಪೇಯಿ ಅವರು ಉತ್ತಮ ಬಾಂಧವ್ಯ ಹಾಗೂ ಸ್ನೇಹವನ್ನು ಹೊಂದಿದ್ದರು. 1998ರಲ್ಲಿ ಪೊಕ್ರಾನ್ ಪರಮಾಣು ಪರೀಕ್ಷೆ ಸಂಬಂಧ ವಾಜಪೇಯಿ ಅವರು ಕೈಗೊಂಡ ನಿರ್ಧಾರ ಎಂದಿಗೂ ಚಿರಸ್ಥಾಯಿಯಾಗಿರುವಂಥದ್ದು ಎಂದು ಸ್ಮರಿಸಿದರು.

 ಬಿಜೆಪಿ ಗ್ರಾಮಾಂತರ ಮಂಡಲಾಧ್ಯಕ್ಷ ಸುರೇಂದ್ರಗೌಡ ಮಾತನಾಡಿ, ಅಟಲ್ ಜೀ ಅವರ ಕನಸನ್ನು ಈಗಿನ ಪ್ರಧಾನಿ ನರೇಂದ್ರ ಮೋದಿ ಅವರು ಈಡೇರಿಸುತ್ತಿದ್ದಾರೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ– ಕಿಸಾನ್‌) ಯೋಜನೆ ಅಡಿಯಲ್ಲಿ 9 ಕೋಟಿ‌ಗೂ ಹೆಚ್ಚು ರೈತರಿಗೆ 18,000 ಕೋಟಿ ರೂ ಪರಿಹಾರವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಿಡುಗಡೆ ಮಾಡಿದ್ದಾರೆ. ಪಿಎಂ-ಕಿಸಾನ್‌ ಯೋಜನೆಯಡಿ ಸಣ್ಣ ಮತ್ತು ಅತಿಸಣ್ಣ ರೈತರಿಗೆ ವಾರ್ಷಿಕ 6000 ರೂ ಪರಿಹಾರವನ್ನು ನೀಡಲಾಗುತ್ತದೆ. ಈ ಮೊತ್ತವನ್ನು ಮೂರು ಕಂತುಗಳಲ್ಲಿ 2000 ರೂ ಗಳಂತೆ ರೈತರ ಬ್ಯಾಂಕ್‌ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗುತ್ತದೆ ಎಂದರು.

 ಬಿಜೆಪಿ ನಗರ ಮಂಡಲಾಧ್ಯಕ್ಷ ರಾಘವೇಂದ್ರ, ಸುಜಾತಮ್ಮ, ಮಂಜುಳಮ್ಮ, ರಮೇಶ್, ನರೇಶ್, ಮುಕೇಶ್, ಭರತ್, ಸುಹೇಲ್, ರಘು, ಕಿರಣ್, ಜನಾರ್ಧನ್, ತ್ರಿವೇಣಿ, ರತ್ನಮ್ಮ, ಅಶ್ವಿನಿ ಹಾಜರಿದ್ದರು.

Sidlaghatta Cocoon Market-26/12/2020

0
Sidlaghatta Silk cocoon Market Daily Price Update Raw Silk Filature Business Online Bivoltine Crossbreed Prices

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 26/12/2020

CB Lots: 312
Qty: 15503 Kgs
Max: 486
Min: 156
Avg: 360

BV Lots: 06
Qty: 427 Kgs
Max: 472
Min: 376
Avg: 438

ಜಾನಪದ ಕಲೆಗಳನ್ನು ಉಳಿಸಲು ಗುರುಶಿಷ್ಯ ಪರಂಪರೆ ತರಬೇತಿ ಶಿಬಿರ

0
Sidlaghatta Cultural Activities Art

ತಾಲ್ಲೂಕಿನ ವರದನಾಯಕನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಾಮಾನ್ಯ ಯೋಜನೆಯಲ್ಲಿ ಗುರುಶಿಷ್ಯ ಪರಂಪರೆ ತರಬೇತಿ ಶಿಬಿರವನ್ನು ಡೊಳ್ಳು ಬಾರಿಸುವ ಮೂಲಕ ಉದ್ಟಾಟಿಸಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ವರದನಾಯಕನಹಳ್ಳಿ ವಿ.ಜಿ ಕೃಷ್ಣಮೂರ್ತಿ ಮಾತನಾಡಿದರು.  

ಜಾನಪದ ಕಲೆಗಳು ಹಳ್ಳಿ ಜನರ ಬದುಕುಗಳನ್ನು ಸಾರಿ ಹೇಳುವ ಸಾಂಸ್ಕೃತಿಕ ಪರಂಪರೆಗಳು. ಇತ್ತೀಚೆಗೆ ಪೌರಾಣಿಕ ನಾಟಕಗಳ ಜೊತೆಗೆ ಹಲವಾರು ಜಾನಪದ ಕಲೆಗಳು ನಶಿಸಿಹೋಗುತ್ತಿವೆ. ಮರೆಯಾಗುತ್ತಿರುವ ಜಾನಪದ ಕಲೆಗಳನ್ನು ಉಳಿಸಿ ಬೆಳಸುವ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗುರುಗಳಿಗೆ ಮತ್ತು ತರಬೇತಿ ಪಡೆಯುವಂತ ಕಲಾವಿದರಿಗೆ ಅವಕಾಶ ಕಲ್ಪಿಸಿರುವುದನ್ನು ಈಗಿನ ಯುವ ಪೀಳಿಗೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

 ಜಾನಪದ, ಲಾವಣಿ, ಸೋಬಾನೆ ಬೀಸೊಕಲ್ಲಿನ ಪದ, ಗೀಗಿ ಪದ ಕೋಲಾಟ ಹಾಡುಗಳ ಮೂಲಕವಲ್ಲದೆ ವಿವಿಧ ಪ್ರಕಾರಗಳಾದ ಕಂಸಾಳೆ, ನಗಾರಿ, ಪಟ್ಟದ ಕುಣಿತ, ಡೊಳ್ಳುಕುಣಿತ, ವೀರಗಾಸೆ, ತಮಟೆ, ಸೋಮನಕುಣಿತ ಇನ್ನು ಅನೇಕ ಕಲಾ ಪ್ರಕಾರಗಳಿಂದ ಕಲಾವಿದರಿಗೆ ನೆಲೆಕೊಟ್ಟ ಜಾನಪದ ಕಲೆಗಳನ್ನು ಉಳಿಸಿ ಬೆಳೆಸಬೇಕೀಂದರು.

 ಈಧರೆ ತಿರುಮಲ ಪ್ರಕಾಶ್ ಮಾತನಾಡಿ, ಸುಮಾರು ಹದಿನೈದು ವರ್ಷಗಳಿಂದ ಕಲಾವಿದನಾಗಿ ಈಧರೆ ಡೊಳ್ಳು ಕುಣಿತ ತಂಡದ ಮುಖ್ಯಸ್ಥನಾಗಿ ಸೇವೆ ಸಲ್ಲಿಸಿರುವೆ. ಈ ಸೇವೆಯನ್ನು ಗುರುತಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಕುಮಾರ್ ಮೂಲ ಕಲೆಗಳನ್ನು ಉಳಿಸಿ ಬೆಳೆಸುವಂತ ಗುರುಶಿಷ್ಯ ಪರಂಪರೆ ಮೂಲಕ ಜಾನಪದ ಕಲೆಯನ್ನು ತರಬೇತಿ ನೀಡಲು ನನಗೆ ತರಬೇತಿದಾರನಾಗಿ ಅವಕಾಶ ಕಲ್ಪಿಸಿದ್ದಾರೆ. ಈ ಮೂಲಕ ಆಸಕ್ತ ಕಲಾವಿದರಿಗೆ ತರಬೇತಿ ನೀಡುತ್ತೇನೆ ಎಂದರು.

ಗ್ರಾಮದ ಹಿರಿಯ ವಿ.ಪಿ ಪಿಳ್ಳಮುನಿಶಾಮಪ್ಪ, ವಿ.ಎನ್ ಕೃಷ್ಣಮೂರ್ತಿ, ಮುನಿರೆಡ್ಡಿ, ದಲಿತ ಸಂಘರ್ಷ ಸಮಿತಿ ತಾಲ್ಲೂಕು ಶಿಸ್ತು ಮತ್ತು ಆಂತರಿಕ ಸಂಚಾಲಕ ತಾತಹಳ್ಳಿ ಚಲಪತಿ, ಹನುಮಂತಪುರ ರಾಮಸ್ವಾಮಿ, ಸಮತಾ ಸೈನಿಕ ದಳ ತಾಲ್ಲೂಕು ಉಪಾಧ್ಯಕ್ಷ ಅಬ್ಲೂಡು ಮಂಜುನಾಥ್, ಸಂಘಟನಾ ಕಾರ್ಯದರ್ಶಿ ತಾತಹಳ್ಳಿ ಗಂಗಧರ್, ಮೂರ್ತಿ, ಅಶೋಕ್, ಡೊಳ್ಳುಕುಣಿತ ಕಲಾವಿದ ವರದನಾಯಕನಹಳ್ಳಿ ಮಧು, ಶಶಿಕುಮಾರ್, ನರಸಿಂಹಮೂರ್ತಿ ಹಾಜರಿದ್ದರು.

ಸಡಗರ ಸಂಭ್ರಮದಿಂದ ಕ್ರಿಸ್ ಮಸ್ ಆಚರಣೆ

0
Christmas Celebration Sidlaghatta

ನಗರದ ಚಿಂತಾಮಣಿ ರಸ್ತೆಯ ಸೇಕ್ರೆಡ್ ಹಾರ್ಟ್ ಚರ್ಚ್, ದಿಬ್ಬೂರಹಳ್ಳಿ ರಸ್ತೆಯ ಎಬೆನೆಜರ್ ಮಾರ್ತೋಮ ಚರ್ಚ್, ನೆಲ್ಲೀಮರದಹಳ್ಳಿಯ ಇಮ್ಮಾನುವೇಲ್ ಚರ್ಚ್ ಹಾಗೂ ತಾಲ್ಲೂಕಿನ ವಿವಿದೆಡೆಗಳಲ್ಲಿರುವ ಚರ್ಚ್ ಗಳನ್ನು ಶುಕ್ರವಾರ ಕ್ರಿಸ್ ಮಸ್ ಪ್ರಯುಕ್ತ ಬಣ್ಣಬಣ್ಣದ ದೀಪಗಳಿಂದ ಅಲಂಕಾರ ಮಾಡಲಾಗಿತ್ತು. ಮೇಣದ ಬತ್ತಿಗಳನ್ನು ಬೆಳಗುವ ಮೂಲಕ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

ಜಾತಿ ಬೇಧವಿಲ್ಲದೆ ಹಲವಾರು ಮಂದಿ ವಿವಿಧ ಚರ್ಚ್ ಗಳಿಗೆ ಭೇಟಿ ನೀಡಿ ಮೇಣದ ಬತ್ತಿಗಳನ್ನು ಬೆಳಗಿ ಪ್ರಾರ್ಥನೆಯಲ್ಲಿ ಪಾಲ್ಗೊಂಡರು. ಪ್ರತಿ ಚರ್ಚ್‌ನ ಅಂಗಳದಲ್ಲಿ, ಕ್ರಿಶ್ಚಿಯನ್ನರ ಮನೆ ಏಸು ಜನಿಸಿದ ಗೋದಲಿಯ ಪ್ರತಿಕೃತಿಯನ್ನು ಮಾಡಲಾಗಿತ್ತು. ಕ್ರಿಬ್ ಅಥವಾ ಗೋದಲಿಯಲ್ಲಿ ಬೆತ್ಲೆಹೆಮ್‌ನ ಬೆಟ್ಟ ಗುಡ್ಡ, ಕಣಿವೆಗಳು, ಜಾರುವ ಝರಿ, ಇಳಿದು ಬರುವ ತೊರೆ, ಗದ್ದೆಗಳ ಹಸಿರಿನ ನಡುವೆ ದೈವಿಕ, ಮಾನವಿಕ ಪ್ರತಿಮೆಗಳು, ಪ್ರಾಣಿ, ಪಕ್ಷಿಗಳ ಮೂರ್ತಿಗಳು ಮರು ಸಷ್ಟಿಪಡೆದಿತ್ತು. ಸಿಂಗಾರಗೊಂಡ ಗೋದಲಿಯಲ್ಲಿ ಬಾಲ ಏಸುವಿನ ಮುಖವನ್ನು ಬಂದವರೆಲ್ಲ ಭಕ್ತಿಭಾವದಿಂದ ಕಾಣುತ್ತಿದ್ದರು.

“ವರ್ಷಕ್ಕೊಮ್ಮೆ ಬರುವ ಏಸುಕ್ರಿಸ್ತನ ಜಯಂತಿಯನ್ನು ಸಡಗರದಿಂದ, ಭಕ್ತಿ ಭಾವದಿಂದ ಕ್ರಿಶ್ಚಿಯನ್ನರು ಆಚರಿಸುತ್ತಾರೆ. ಕ್ರೈಸ್ತರಿಗೆ ಪವಿತ್ರ ಹಬ್ಬವಾಗಿರುವ ಕ್ರಿಸ್ ಮಸ್ ಅಥವಾ ಕ್ರಿಸ್ತ ಜಯಂತಿಯನ್ನು ಪ್ರತಿವರ್ಷ ವಿಶ್ವದಾದ್ಯಂತ ಸಂಭ್ರಮ ಸಡಗರಗಳಿಂದ ಆಚರಣೆ ಮಾಡಲಾಗುತ್ತದೆ. ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ತಾಲ್ಲೂಕಿನ ಎಲ್ಲಾ ಚರ್ಚುಗಳಲ್ಲಿ ವಿವಿಧ ರೀತಿಗಳಲ್ಲಿ ಆಚರಣೆ ಮಾಡುತ್ತಾ ಬಂದಿದ್ದು, ಏಸುವಿನ ಸಂದೇಶವನ್ನು ಜನರಿಗೆ ತಿಳಿಸಲಾಗುತ್ತಿದೆ.

ಕ್ರಿಸ್ ಮಸ್ ಸಮಯದಲ್ಲಿ ಕ್ರೈಸ್ತ ಕುಟುಂಬಗಳ ಮೇಲೆ ನಕ್ಷತ್ರಗಳನ್ನು ಕಟ್ಟುವುದು ವಾಡಿಕೆ. ಕ್ರೈಸ್ತರು ನಮಗಾಗಿ ಜನಿಸಿದ ರಕ್ಷಕನು ಏಸು ಎಂಬ ನಂಬಿಕೆಯಿಂದ ಕ್ರಿಸ್ ಮಸ್ ಹಬ್ಬವನ್ನು ಶ್ರದ್ಧಾಭಕ್ತಿಗಳಿಂದ ತಮ್ಮ ಮನೆಗಳನ್ನು ವಿವಿಧ ಬಣ್ಣದ ಕಾಗದಗಳಿಂದ ಅಲಂಕಾರ ಮಾಡಿ, ಸ್ನೇಹಿತರು, ಬಂಧುಗಳು, ಸೇರಿದಂತೆ ಎಲ್ಲರೊಂದಿಗೂ ಶುಭಾಶಯಗಳನ್ನು ಹಂಚಿಕೊಂಡು ಎಲ್ಲರ ಒಳಿತಾಗಿ ಪ್ರಾರ್ಥನೆ ಮಾಡುವುದು ರೂಢಿಯಲ್ಲಿದೆ. ಪ್ರತಿಯೊಂದು ಚರ್ಚ್ ನಲ್ಲಿಯೂ ಏಸುವಿನ ಜನ್ಮವೃತ್ತಾಂತವನ್ನು ಪ್ರತಿನಿಧಿಸುವಂತೆ ಪ್ರತಿಕೃತಿಗಳ ಮೂಲಕ ಅಲಂಕಾರವನ್ನು ಮಾಡಿರುತ್ತಾರೆ” ಎಂದು ಪೂಜೆ ಸಲ್ಲಿಸಲು ಬಂದಿದ್ದ ಜೋಸೆಫ್ ತಿಳಿಸಿದರು.

ಶ್ರದ್ಧಾಭಕ್ತಿಯಿಂದ ವೈಕುಂಠ ಏಕಾದಶಿಯ ಆಚರಣೆ

0
Mallur Sainatha Gnana Mandir

ಪುಷ್ಯಮಾಸ ಶುಕ್ಲಪಕ್ಷದ ಏಕಾದಶಿ ವೈಕುಂಠ ಏಕಾದಶಿ ಎಂಬ ವಿಶೇಷ ದಿನವೆಂದು ತಾಲ್ಲೂಕಿನ ಪ್ರಮುಖ ವೆಂಕಟೇಶ್ವರ, ಶ್ರೀನಿವಾಸ, ವಿಷ್ಣು ದೇವಸ್ಥಾನಗಳಲ್ಲಿ ಶುಕ್ರವಾರ ವಿಶೇಷ ಪೂಜೆಗಳನ್ನು ಏರ್ಪಡಿಸಿದ್ದರು.

 ಕೆಲವು ದೇವಸ್ಥಾನಗಳಲ್ಲಿ ನಿರ್ಮಿಸಿದ್ದ ವೈಕುಂಠ ದ್ವಾರದ ಒಳಗೆ ಹೋಗಿ ಬಂದರೆ ಮೋಕ್ಷ ಸಿಗುವುದೆಂಬ ನಂಬಿಕೆಯಿಂದ ಭಕ್ತರು ದೇವಾಲಯಗಳಿಗೆ ಭೇಟಿ ನೀಡಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.



 ತಾಲ್ಲೂಕಿನ ಮಳ್ಳೂರು ಸಮೀಪದ ಶ್ರೀ ಸಾಯಿನಾಥ ಜ್ಞಾನಮಂದಿರ, ಚೌಡಸಂದ್ರದ ಸೋಮೇಶ್ವರಸ್ವಾಮಿ ದೇವಸ್ಥಾನ, ತಲಕಾಯಲಬೆಟ್ಟದ ಲಕ್ಷ್ಮಿ ವೆಂಕಟರಮಣಸ್ವಾಮಿ ದೇವಾಲಯ, ಚಿಕ್ಕದಾಸರಹಳ್ಳಿ ಬಳಿಯ ಬ್ಯಾಟರಾಯಸ್ವಾಮಿ ದೇವಾಲಯ, ಜಂಗಮಕೋಟೆ ಬಳಿಯ ಮುತ್ಯಾಲಮ್ಮ ದೇವಸ್ಥಾನ, ನಗರದ ಹೌಸಿಂಗ್ ಬೋರ್ಡ್ ಕಾಲೋನಿಯ ಕಲ್ಯಾಣ ವೆಂಕಟೇಶ್ವರಸ್ವಾಮಿ ದೇವಾಲಯಗಳಲ್ಲಿ ಬೆಳಿಗ್ಗೆಯಿಂದಲೇ ವಿಶೇಷ ಪೂಜೆಗಳನ್ನು ನಡೆಸಲಾಗಿತ್ತು.

 ತಾಲ್ಲೂಕಿನ ಮಳ್ಳೂರು ಸಮೀಪದ ಶ್ರೀ ಸಾಯಿನಾಥ ಜ್ಞಾನಮಂದಿರದಲ್ಲಿ ಶುಕ್ರವಾರ ವೈಕುಂಠ ಏಕಾದಶಿಯ ಪ್ರಯುಕ್ತ ಸಪ್ತದ್ವಾರದ ವೈಕುಂಠವನ್ನೇ ಸೃಷ್ಟಿಸಲಾಗಿತ್ತು. ಸುತ್ತಮುತ್ತಲಿನ ಗ್ರಾಮಗಳಿಂದ ಹಾಗೂ ವಿವಿಧ ತಾಲ್ಲೂಕುಗಳಿಂದ ಭಕ್ತರು ಆಗಮಿಸಿ ದೇವರ ದರ್ಶನವನ್ನು ಪಡೆದರು. ದೇವಾಲಯದ ಸೇವಾಕರ್ತರು ಶ್ವೇತವಸ್ತ್ರಧಾರಿಗಳಾಗಿ ಸ್ವಯಂಸೇವಕರಾಗಿ ಸೇವೆ ಸಲ್ಲಿಸಿದರು. ಭಕ್ತರಿಗೆಲ್ಲ ಪ್ರಸಾದ ವಿನಿಯೋಗ ನಡೆಯಿತು. ಹೂವಿನಿಂದ ಅಲಂಕೃತಗೊಂಡ ಉಯ್ಯಾಲೆಯಲ್ಲಿ ವೆಂಕಟೇಶ್ವರ, ಶ್ರೀದೇವಿ, ಭೂದೇವಿಯ ಚಿನ್ನದ ಬಣ್ಣದ ವಿಗ್ರಹಗಳನ್ನಿಟ್ಟು ಭಕ್ತರು ತೂಗಲು ಅವಕಾಶ ಮಾಡಿಕೊಡಲಾಗಿತ್ತು. ವಿವಿಧ ಹೂಗಳಿಂದ ಅಲಂಕೃತಗೊಂಡ ವೈಕುಂಠದಲ್ಲಿ ವೆಂಕಟೇಶ್ವರ ಮತ್ತು ಲಕ್ಷ್ಮಿದೇವಿಯ ಬೃಹತ್ ಮೂರ್ತಿಗಳಿಗೆ ವಿಶೇಷ ಪೂಜೆ ನಡೆಯಿತು.

 “ವೈಕುಂಠ ಏಕಾದಶಿ ವಿಶೇಷ ದಿನ. ಈ ದಿನ ವೈಕುಂಠ ದ್ವಾರದ ಒಳಗೆ ಹೋಗಿ ಬಂದರೆ ಮೋಕ್ಷ ಸಿಗುವುದೆಂದು ನಂಬಿಕೆಯಿದೆ. ವೈಕುಂಠ ಏಕಾದಶಿಯಂದು ವೈಕುಂಠದ(ಸ್ವರ್ಗದ) ಬಾಗಿಲು ತೆರೆದಿರುತ್ತದೆ. ಆದರಿಂದ ವೆಂಕಟೇಶ್ವರ ಅಥವಾ ವಿಷ್ಣುವಿನ ದರ್ಶನ ಪಡೆಯುವುದರಿಂದ ಸ್ವರ್ಗ ಪ್ರಾಪ್ತಿಯಾಗುತ್ತದೆ ಎಂಬ ಭಾವನೆ ಭಕ್ತರಲ್ಲಿದೆ. “ವೆಂಕಟೇಶೋ ವಾಸುದೇವೋ ಪ್ರದ್ಯುಮ್ನೋ ಅಮಿತವಿಕ್ರಮಃ, ಸಂಕರ್ಷಣೋ ಅನಿರುದ್ಧಶ್ಚ ಶೇಶಾದ್ರಿಪತಿರೇವಚ” ಎಂದು ವೆಂಕಟೇಶ್ವರ ಸ್ತೋತ್ರವನ್ನು ಪಠಿಸುವುದರಿಂದ ಕಷ್ಟಗಳು ನಿವಾರಣೆಯಾಗುತ್ತದೆ. ಸಪ್ತ ದ್ವಾರಗಳನ್ನು ದಾಟಿ ವೈಕುಂಠದಲ್ಲಿ ವೆಂಕಟೇಶ್ವರಸ್ವಾಮಿಯ ದರ್ಶನ ಪಡೆದು, ವಿಘ್ನೇಶ್ವರ, ಸಾಯಿಬಾಬ ಮತ್ತು ಅಯ್ಯಪ್ಪಸ್ವಾಮಿಯರ ದರ್ಶನವನ್ನು ಪಡೆದು ಪ್ರಸಾದ ಸ್ವೀಕರಿಸಿ ದೇವರ ಅನುಗ್ರಹಕ್ಕೆ ಈ ಪವಿತ್ರ ದಿನ ಎಲ್ಲರೂ ಪಾತ್ರರಾಗಬೇಕೆಂಬುದು ನಮ್ಮ ಉದ್ದೇಶವಾಗಿದೆ” ಎಂದು ಶ್ರೀ ಸಾಯಿನಾಥ ಜ್ಞಾನಮಂದಿರ ದೇವಾಲಯ ಸಮಿತಿ ಅಧ್ಯಕ್ಷ ಎಂ.ನಾರಾಯಣಸ್ವಾಮಿ ತಿಳಿಸಿದರು.

Chintamani Agriculture Market-25/12/2020

0
Chintamani Agriculture Market Daily Vegetables Fruits Products Farming Rates Farmer Prices

ಚಿಂತಾಮಣಿ ಕೃಷಿ ಮಾರುಕಟ್ಟೆ ಧಾರಣೆ

Date: 25/12/2020

ಪ್ರಮಾಣ: ಕ್ವಿಂಟಲ್, ವರ್ಗ: ಸರಾಸರಿ

ಉತ್ಪನ್ನಗಳುಆವಕಕನಿಷ್ಠಗರಿಷ್ಠ
ಹುರುಳಿಕಾಯಿ (ವೋಲ್)420002500
ಬೀಟ್ರೂಟ್1020002500
ಬದನೆಕಾಯಿ510001500
ಎಲೆಕೋಸು20200300
ಕ್ಯಾರೆಟ್108001100
ಗೋಡಂಬಿ – ಲೋಕಲ್ (ರಾ)101700010500
ಹೂಕೋಸು (ಸ್ಥಳೀಯ)15100150
ಬಜ್ಜಿ ಮೆಣಸಿನಕಾಯಿ (ದಪ್ಪ ಮೆಣಸಿನಕಾಯಿ)208001000
ಧನಿಯಾ (ಸ್ಥಳೀಯ)101700010500
ನುಗ್ಗೆಕಾಯಿ230004000
ಬೆಳ್ಳುಳ್ಳಿ3040006000
ಹಸಿರು ಮೆಣಸಿನಕಾಯಿ420002500
ಹಸಿ ಶುಂಠಿ1015002000
ನವಿಲುಕೋಸು610001200
ಈರುಳ್ಳಿ (ಸ್ಥಳೀಯ)5020002500
ಆಲೂಗಡ್ಡೆ (ಸ್ಥಳೀಯ)2020002500
ಮೂಲಂಗಿ1510001100
ಅಕ್ಕಿ (ಹಂಸ)8020502250
ಅಕ್ಕಿ (ಸೋನ)35336005150
ಹೀರೇಕಾಯಿ520002100
ತೊಂಡೆಕಾಯಿ230003100
ಟೊಮ್ಯಾಟೊ2572333999

Sidlaghatta Cocoon Market-25/12/2020

0
Sidlaghatta Silk cocoon Market Daily Price Update Raw Silk Filature Business Online Bivoltine Crossbreed Prices

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 25/12/2020

CB Lots: 168
Qty: 8127 Kgs
Max: 480
Min: 300
Avg: 367

BV Lots: 05
Qty: 209 Kgs
Max: 454
Min: 375
Avg: 448

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮ

0
Sri Kshetra Dharmasthala Gramabhivruddi Sangha Sidlaghatta Chikkaballapur District Janamangala Program

ನಗರದ ಶ್ರೀ ಕಾಳಿಕಾಂಬ ಕಮ್ಮಠೇಶ್ವರ ಸಮುದಾಯ ಭವನದಲ್ಲಿ ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಆಯೋಜಿಸಲಾಗಿದ್ದ ಜನಮಂಗಳ ಕಾರ್ಯಕ್ರಮದಲ್ಲಿ ವಿಕಲಚೇತನರಿಗೆ ವಿವಿಧ ಸಲಕರಣೆಗಳನ್ನು ವಿತರಿಸಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಸೀನಪ್ಪ ಮಾತನಾಡಿದರು.

ವಿಕಲಚೇತನರಿಗೆ ಅನುಕಂಪ ಸೂಚಿಸುವ ಬದಲಿಗೆ ಅವರಲ್ಲಿರುವ ಸಾಮರ್ಥ್ಯವನ್ನು ಗುರುತಿಸಿ ಅವಕಾಶ ಕಲ್ಪಿಸಿದರೆ ವಿಕಲಚೇತನರು ಸಹ ಸ್ವಾಭಿಮಾನಿ ಜೀವನ ನಡೆಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು.

ಜನಮಂಗಳ ಯೋಜನೆಯಡಿ ಈಗಾಗಲೇ ಸುಮಾರು 8.5 ಲಕ್ಷ ಅನುದಾನದಲ್ಲಿ 436 ವ್ಹೀಲ್ ಚೇರ್ ಸೇರಿದಂತೆ ವಾಕಿಂಗ್ ಸ್ಞಿಕ್, ವಾಟರ್ ಬೆಡ್, ಟ್ರೈಸಿಕಲ್ ವಿತರಿಸಲಾಗಿದೆ. ರಾಜ್ಯಾಧ್ಯಂತ ಈಗಾಗಲೇ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಡಿ ಆರು ಲಕ್ಷ ಸ್ವಸಹಾಯ ಸಂಘಗಳಿದ್ದು ಸುಮಾರು 60 ಲಕ್ಷ ಮಂದಿ ಗ್ರಾಮಾಭಿವೃದ್ದಿ ಯೋಜನೆಯ ವಿವಿಧ ಸವಲತ್ತುಗಳನ್ನು ಪಡೆದುಕೊಂಡಿದ್ದಾರೆ ಎಂದರು.

ತಾ.ಪಂ ಇಓ ಚಂದ್ರಕಾಂತ್ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ಡಾ.ಡಿ.ವೀರೇಂದ್ರಹೆಗ್ಗಡೆ ಅವರ ದೂರದೃಷ್ಠಿಯ ಫಲವಾಗಿ ಇಂದು ರಾಜ್ಯಾಧ್ಯಂತ ಗ್ರಾಮಾಭಿವೃದ್ದಿ ಯೋಜನೆಯಡಿ ವಿವಿಧ ಸೇವಾ ಕಾರ್ಯಗಳನ್ನು ಮಾಡುತ್ತಿರುವುದು ಶ್ಲಾಘನೀಯ, ಕೊರೋನಾ ಹಿನ್ನಲೆಯಲ್ಲಿ ಸರ್ಕಾರ ಮಾಡಬೇಕಾದ ಕೆಲಸಗಳನ್ನು ಗ್ರಾಮಾಭಿವೃದ್ದಿ ಸಂಸ್ಥೆ ಮಾಡುತ್ತಿದೆ ಎಂದರು.

ಜಿಲ್ಲಾ ನಿರ್ದೇಶಕ ವಸಂತ್, ತಾಲ್ಲೂಕು ಯೋಜನಾಧಿಕಾರಿ ಪ್ರಕಾಶ್, ಜಿಲ್ಲಾ ಜನಜಾಗೃತಿ ಸಮಿತಿಯ ಸದಸ್ಯರಾದ ವೆಂಕಟಸ್ವಾಮಿರೆಡ್ಡಿ, ಎ.ಎಂ.ತ್ಯಾಗರಾಜ್, ನಾಗೇಂದ್ರ, ಶ್ರೀ ಸರಸ್ವತಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ್, ಮತ್ತಿತರರು ಹಾಜರಿದ್ದರು.

Sidlaghatta Cocoon Market-24/12/2020

0
Sidlaghatta Silk cocoon Market Daily Price Update Raw Silk Filature Business Online Bivoltine Crossbreed Prices


ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 24/12/2020

CB Lots: 227
Qty: 11408 Kgs
Max: 435
Min: 282
Avg: 365

BV Lots: 04
Qty: 241 Kgs
Max: 461
Min: 405
Avg: 439

Chintamani Agriculture Market-24/12/2020

0
Chintamani Agriculture Market Daily Vegetables Fruits Products Farming Rates Farmer Prices

ಚಿಂತಾಮಣಿ ಕೃಷಿ ಮಾರುಕಟ್ಟೆ ಧಾರಣೆ

Date: 24/12/2020

ಪ್ರಮಾಣ: ಕ್ವಿಂಟಲ್, ವರ್ಗ: ಸರಾಸರಿ

ಉತ್ಪನ್ನಗಳುಆವಕಕನಿಷ್ಠಗರಿಷ್ಠ
ಧನಿಯಾ (ಸ್ಥಳೀಯ)1650007500
ಅಕ್ಕಿ (ಹಂಸ)7520502250
ಅಕ್ಕಿ (ಸೋನ)34036505150
ಟೊಮ್ಯಾಟೊ23023331133

ಗಿಡಗಳನ್ನು ನೆಡುವ ಮೂಲಕ ರೈತ ದಿನಾಚರಣೆ

0
Farmers Day Celebration Planting Trees Plants Govt first Grade College Sidlaghatta

ಶಿಡ್ಲಘಟ್ಟದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಎನ್.ಎಸ್.ಯು.ಐ ಸದಸ್ಯರು ರೈತ ದಿನಾಚರಣೆಯನ್ನು ಅಚರಿಸಿದರು.

ಎನ್.ಎಸ್.ಯು.ಐ ರಾಜ್ಯ ಸಂಚಾಲಕ ಕುಂದಲಗುರ್ಕಿ ಮುನೀಂದ್ರ, ಪ್ರಾಂಶುಪಾಲ ಮುರಳಿಧರ್, ಉಪನ್ಯಾಸಕ ಉಮೇಶ್ ರೆಡ್ಡಿ ,ವಿದ್ಯಾರ್ಥಿ ಮುಖಂಡರಾದ ದೇವರಾಜ್, ತ್ಯಾಗರಾಜು, ಸುರೇಶ್ ಹಾಜರಿದ್ದರು

ರೈತ ದಿನಾಚರಣೆ ಮತ್ತು ಕಿಸಾನ್ ಗೋಷ್ಠಿ ಕಾರ್ಯಕ್ರಮ

0
Farmers Day Kisan Goshti Program Sidlaghatta

ನಗರದ ಸ್ತ್ರೀಶಕ್ತಿ ಭವನದಲ್ಲಿ ಬುಧವಾರ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ (ಆತ್ಮ), ಕೃಷಿ ಇಲಾಖೆ ಮತ್ತು ತಾಲ್ಲೂಕು ಕೃಷಿಕ ಸಮಾಜದ ಸಹಯೋಗದಲ್ಲಿ ನಡೆದ ರೈತ ದಿನಾಚರಣೆ ಮತ್ತು ಕಿಸಾನ್ ಗೋಷ್ಠಿ ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕಾ ವಿಜ್ಞಾನಿ ಸಿಂಧು ಮಾತನಾಡಿದರು.

ಸಾವಯವ ಕೃಷಿ ಪದ್ಧತಿ ಮತ್ತು ಮಿಶ್ರ ಬೆಳೆ ಬೇಸಾಯ ಕ್ರಮದಿಂದ ರೈತರ ಬದುಕು ಹಸನವಾಗಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

 ರೈತರು ಬದಲಾಗಬೇಕು. ಕೃಷಿಯಲ್ಲಿ ಯಂತ್ರೋಪಕರಣ ಬಳಕೆ, ಸಾವಯವ ಕೃಷಿ ಪದ್ಧತಿ, ಒಂದೇ ಬೆಳೆಯನ್ನು ಅವಲಂಬಿಸದೆ ಮಿಶ್ರ ಬೆಳೆ ಕ್ರಮವನ್ನು ಅನುಸರಿಸಿದರೆ ಲಾಭವಾಗುತ್ತದೆ. ಏಕ ಬೆಳೆ ಪದ್ಧತಿಯ ಬೇಸಾಯ ಕೃಷಿಕರ ಪಾಲಿಗೆ ಮಾರಕ. ಮಿಶ್ರ ಬೆಳೆ ಪದ್ಧತಿ ರೈತರ ರಕ್ಷಕನಿದ್ದಂತೆ. ಅದರಲ್ಲೂ ರಾಸಾಯನಿಕ ಮುಕ್ತ ಕೃಷಿ ಅಳವಡಿಸಿಕೊಂಡರೆ ಎಂದೂ ನಷ್ಟ ಎಂಬ ಮಾತೇ ಬೆಳೆಗಾರರ ಬಾಯಿಂದ ಹೊರ ಬರುವುದಿಲ್ಲ ಎಂದರು.

 ಆತ್ಮ ಯೋಜನಾ ನಿರ್ದೇಶಕ ಸತೀಶ್ ಕುಮಾರ್ ಮಾತನಾಡಿ, “ಆತ್ಮ” (ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ)ಯ ಕೃಷಿಗೆ ಸಂಬಂಧಿಸಿದ ವಿವಿಧ ಯೋಜನೆಗಳ ಅಡಿಯಲ್ಲಿ ಕೃಷಿಯನ್ನು ಆಧುನೀಕರಿಸಲು ರೈತರಿಗೆ ತರಬೇತಿ ನೀಡುತ್ತಿದೆ. ಇದರ ಅಡಿಯಲ್ಲಿ ರೈತರಿಗೆ ತರಬೇತಿ, ಪ್ರದರ್ಶನ, ಅಧ್ಯಯನ, ಭೇಟಿ, ಕೃಷಿ ಮೇಳಗಳು, ರೈತರ ಗುಂಪುಗಳನ್ನು ಆಯೋಜಿಸುವುದು ಮತ್ತು ಕೃಷಿ ಶಾಲೆಗಳನ್ನು ನಡೆಸಲಾಗುವುದು. ಕೃಷಿ ವಿಜ್ಞಾನಿಗಳು ಮತ್ತು ರೈತರ ನಡುವೆ ಉತ್ತಮ ಸಮನ್ವಯತೆಯನ್ನು ಸ್ಥಾಪಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಇದನ್ನು ಸರಿಯಾಗಿ ಅನುಷ್ಠಾನಗೊಳಿಸುವ ಮೂಲಕ ರೈತರ ಆದಾಯವನ್ನು ಹೆಚ್ಚಿಸಬಹುದು. ವೈಜ್ಞಾನಿಕ ರೀತಿಯಲ್ಲಿ ಕೃಷಿ ಮಾಡುವುದರಿಂದ ಕಡಿಮೆ ವೆಚ್ಚದಲ್ಲಿ ಹೆಚ್ಚು ಇಳುವರಿಯನ್ನು ಪಡೆಯಬಹುದು ಎಂದು ಹೇಳಿದರು.

 ಸಹಾಯಕ ಕೃಷಿ ನಿರ್ದೇಶಕ ಎಸ್.ವಿ.ಮಂಜುನಾಥ್, ಕೃಷಿ ಅಧಿಕಾರಿಗಳಾದ ಶ್ರೀನಿವಾಸ್, ಮೋಹನ್ ಕುಮಾರ್, ಆತ್ಮ ಯೋಜನೆಯ ತಾಂತ್ರಿಕ ವ್ಯವಸ್ಥಾಪಕ ಎನ್.ಅಶ್ವತ್ಥನಾರಾಯಣ್, ಸಹಾಯಕ ತಾಂತ್ರಿಕ ವ್ಯವಸ್ಥಾಪಕರಾದ ಸುಸ್ಮಿತಾ, ಆಶಾರಾಣಿ, ಪ್ರಗತಿಪರ ರೈತರಾದ ಎಚ್.ಜಿ.ಗೋಪಾಲಗೌಡ, ಬೋದಗೂರು ವೆಂಕಟಸ್ವಾಮಿರೆಡ್ಡಿ, ಮುತ್ತೂರು ಕೆಂಪೇಗೌಡ, ಜೆ.ಎಸ್.ವೆಂಕಟಸ್ವಾಮಿ, ತಾದೂರು ಮಂಜುನಾಥ್, ಮುನಿಕೆಂಪಣ್ಣ, ಮಂಜುನಾಥ್, ರವಿಪ್ರಕಾಶ್, ಬೆಳ್ಳೂಟಿ ನಾಗಪ್ಪ ಹಾಜರಿದ್ದರು. 

Chintamani Agriculture Market-23/12/2020

0
Chintamani Agriculture Market Daily Vegetables Fruits Products Farming Rates Farmer Prices

ಚಿಂತಾಮಣಿ ಕೃಷಿ ಮಾರುಕಟ್ಟೆ ಧಾರಣೆ

Date: 23/12/2020

ಪ್ರಮಾಣ: ಕ್ವಿಂಟಲ್, ವರ್ಗ: ಸರಾಸರಿ

ಉತ್ಪನ್ನಗಳುಆವಕಕನಿಷ್ಠಗರಿಷ್ಠ
ಧನಿಯಾ (ಸ್ಥಳೀಯ)1650007500
ರಾಗಿ (ಸ್ಥಳೀಯ)10018002000
ಅಕ್ಕಿ (ಹಂಸ)7020502250
ಅಕ್ಕಿ (ಸೋನ)24036005100
ಟೊಮ್ಯಾಟೊ21373331066

Sidlaghatta Cocoon Market-23/12/2020

0
Sidlaghatta Silk cocoon Market Daily Price Update Raw Silk Filature Business Online Bivoltine Crossbreed Prices

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 23/12/2020

CB Lots: 313
Qty: 16063 Kgs
Max: 435
Min: 272
Avg: 365

BV Lots: NILL

ಶಾಲಾ ಶುಲ್ಕದಲ್ಲಿ ಶೇ 20 ರಷ್ಟು ರಿಯಾಯಿತಿ ನೀಡಲು ಪ್ರಸ್ತಾವನೆ

0
Sidlaghatta Private School Fees concession

ತಾಲ್ಲೂಕಿನ ಕೆಲವು ಖಾಸಗಿ ಅನುದಾನರಹಿತ ಶಾಲೆಗಳ ಮುಖ್ಯಸ್ಥರು ಶಿಕ್ಷಣ ಸಚಿವರನ್ನು ಭೇಟಿ ಮಾಡಿ 2020-21 ನೇ ಸಾಲಿನ ಶಾಲಾ ಶುಲ್ಕದಲ್ಲಿ ಶೇ 20 ರಷ್ಟು ರಿಯಾಯಿತಿಯನ್ನು ನೀಡುವ ಬಗ್ಗೆ ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ.

 ಕೋವಿಡ್ 19 ರ ಸಂದರ್ಭದಲ್ಲಿ ಲಕ್ಷಾಂತರ ಪೋಷಕರು ಸಂಕಷ್ಟದಲ್ಲಿದ್ದಾರೆ. ಪೋಷಕರು ಶಾಲಾ ಶುಲ್ಕವನ್ನು ಕಡಿಮೆ ಮಾಡುವಂತೆ ಒತ್ತಾಯಿಸಿದ್ದಾರೆ. ಅದಕ್ಕೆ ಸ್ವಯಂ ಪ್ರೇರಣೆಯಿಂದ ಖಾಸಗಿ ಅನುದಾನರಹಿತ ಶಾಲೆಗಳ ಮುಖ್ಯಸ್ಥರು ಶಾಲಾ ಶುಲ್ಕದಲ್ಲಿ ಶೇ 20 ರಷ್ಟು ರಿಯಾಯಿತಿಯನ್ನು ನೀಡುವುದಾಗಿ ಹೇಳಿದ್ದಾರೆ.

  ಡಾಲ್ಫಿನ್ ವಿದ್ಯಾಸಂಸ್ಥೆ ಅಧ್ಯಕ್ಷ ಎ.ನಾಗರಾಜ್, ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಮಹಮದ್ ತಮೀಮ್ ಅನ್ಸಾರಿ ಹಾಜರಿದ್ದರು.

ಅಂತರರಾಜ್ಯ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಪದಕಗಳನ್ನು ಪಡೆದ ಶಿಡ್ಲಘಟ್ಟದ ಬಾಲಕರು

0
Sidlaghatta Skating National Championship Medals Arun Kumar

ತಾಡಪತ್ರಿಯಲ್ಲಿ ನಡೆದ ಅಂತರರಾಜ್ಯ ಸ್ಕೇಟಿಂಗ್ ಚಾಂಪಿಯನ್ ಷಿಪ್ ನಲ್ಲಿ ಶಿಡ್ಲಘಟ್ಟದ ಸ್ಪೀಡ್ ಸ್ಕೇಟಿಂಗ್ ಅಸೋಸಿಯೇಷನ್ ವಿದ್ಯಾರ್ಥಿಗಳು ಭಾಗವಹಿಸಿ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

 ಆಂಧ್ರದ ಯೂತ್ ಅಂಡ್ ಸ್ಪೋರ್ಟ್ಸ್ ಡೆವಲೆಪ್ ಮೆಂಟ್ ಅಸೋಸಿಯೇಷನ್ ಸ್ಕೇಟಿಂಗ್ ಸ್ಪರ್ಧೆಯನ್ನು ತಾಡಪತ್ರಿಯ ಸರ್ಕಾರಿ ಪ್ರೌಢಶಾಲೆಯ ಆಟದ ಮೈದಾನದಲ್ಲಿ ಆಯೋಜಿಸಿತ್ತು.

 ಮೋಹಿತ್ ಪ್ರಕಾಶ್, 100 ಮೀಟರ್ ರೋಡ್ ರೇಸ್ ನಲ್ಲಿ ಮತ್ತು 500 ಮೀಟರ್ ರಿಂಕ್ ರೇಸ್ ನಲ್ಲಿ ಪ್ರಥಮ ಸ್ಥಾನ ಪಡೆದರೆ, ಧನುಷ್, 100 ಮೀಟರ್ ರೋಡ್ ರೇಸ್ ನಲ್ಲಿ ದ್ವಿತೀಯ ಮತ್ತು 500 ಮೀಟರ್ ರಿಂಕ್ ರೇಸ್ ನಲ್ಲಿ ಪ್ರಥಮ ಸ್ಥಾನ ಪಡೆದಿರುವನು. ವಿಶ್ವಕ್ ಸೇನ್ 100 ಮೀಟರ್ ರೋಡ್ ರೇಸ್ ನಲ್ಲಿ ತೃತೀಯ ಮತ್ತು 500 ಮೀಟರ್ ರಿಂಕ್ ರೇಸ್ ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾನೆ ಎಂದು ಸ್ಕೇಟಿಂಗ್ ಶಿಕ್ಷಕ ವಿ.ಅರುಣ್ ಕುಮಾರ್ ತಿಳಿಸಿದ್ದಾರೆ.

ಶಾಂತಿಯುತವಾಗಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ಮತದಾನ

0
Sidlaghatta Grama Panchayat Election 2020 Chikkaballapur District

ಶಿಡ್ಲಘಟ್ಟ ತಾಲ್ಲೂಕಿನ 24 ಗ್ರಾಮ ಪಂಚಾಯಿತಿಗಳಿಗೆ ಇಂದು ನಡೆದ ಮತದಾನ ಪ್ರಕ್ರಿಯೆ ಬಹುತೇಕ ಶಾಂತಯುತವಾಗಿ ನಡೆದಿದೆ.

ಗ್ರಾಮ ಪಂಚಾಯಿತಿ ಚುನಾವಣೆಯ ಹಿನ್ನಲೆಯಲ್ಲಿ ಗ್ರಾಮೀಣ ಬಾಗದ ಜನತೆ ನಗರಕ್ಕೆ ಬಾರದೇ ಇದ್ದುದರಿಂದ ನಗರದ ಮುಖ್ಯ ರಸ್ತೆಗಳು ಸೇರಿದಂತೆ ಅಂಗಡಿ, ಮುಂಗಟ್ಟುಗಳಲ್ಲಿ ವ್ಯಾಪಾರವಿಲ್ಲದೇ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿತ್ತು.

ಬೆಳಿಗ್ಗೆ ಏಳು ಗಂಟೆಗೆ ಚುನಾವಣೆ ಪ್ರಕ್ರಿಯೆ ಪ್ರಾರಂಭವಾಗುತ್ತಿದ್ದಂತೆಯೇ ಕೆಲವೆಡೆ ಬೆಳಿಗ್ಗೆಯೇ ಉತ್ಸಾಹ ಭರಿತರಾಗಿ ಸರತಿಸಾಲುಗಳಲ್ಲಿ ನಿಂತು ಜನತೆ ಮತದಾನ ಮಾಡಿದರೆ, ಮತ್ತೆ ಕೆಲವೆಡೆ ಮತಗಟ್ಟೆಗಳಿಗೆ ಮಧ್ಯಾಹ್ನದ ವರೆಗೂ ಜನರು ಬರುವುದು ಕಡಿಮೆಯಾಗಿತ್ತು.

ಶಾಸಕ ವಿ.ಮುನಿಯಪ್ಪ ತಮ್ಮ ಸ್ವಗ್ರಾಮ ಹಂಡಿಗನಾಳ ಗ್ರಾಮದಲ್ಲಿ ಮತಚಲಾಯಿಸಿದರೆ, ಜೆಡಿಎಸ್ ಮುಖಂಡ ಬಿ.ಎನ್.ರವಿಕುಮಾರ್ ಸ್ವಗ್ರಾಮ ಮೇಲೂರಿನಲ್ಲಿ ಮತಚಲಾಯಿಸಿದರು. 

Sidlaghatta Cocoon Market-22/12/2020

0
Sidlaghatta Silk cocoon Market Daily Price Update Raw Silk Filature Business Online Bivoltine Crossbreed Prices

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 22/12/2020

CB Lots: 333
Qty: 17210 Kgs
Max: 480
Min: 193
Avg: 374

BV Lots: 02
Qty: 35 Kgs
Max: 388
Min: 372
Avg: 381

ಮತಗಟ್ಟೆಗಳಿಗೆ ಸಾಮಗ್ರಿಗಳನ್ನು ಹಾಗೂ ಸಿಬ್ಬಂದಿಯನ್ನು ಕಳುಹಿಸುವ ಕಾರ್ಯ

0
Grama Panchayat Election Sidlaghatta Mustering Program Tehsildar Anantaram

ತಾಲ್ಲೂಕಿನಲ್ಲಿ ಡಿಸೆಂಬರ್ 22 ರಂದು ಗ್ರಾಮಪಂಚಾಯಿತಿ ಚುನಾವಣೆ ನಡೆಯಲಿದ್ದು ಸರ್ವ ಸಿದ್ಧತೆಗಳನ್ನು ಮಾಡಿದ್ದು, ಮಸ್ಟರಿಂಗ್ ಅಂದರೆ ಮತಗಟ್ಟೆಗಳಿಗೆ ಸಾಮಗ್ರಿಗಳನ್ನು ಹಾಗೂ ಸಿಬ್ಬಂದಿಯನ್ನು ಕಳುಹಿಸುವ ಕಾರ್ಯವನ್ನು ಸೋಮವಾರ ನಡೆಸುತ್ತಿರುವುದಾಗಿ ತಹಶೀಲ್ದಾರ್ ಅನಂತರಾಮ್ ತಿಳಿಸಿದರು.

 ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಮತಗಟ್ಟೆಗಳಿಗೆ ಸಾಮಗ್ರಿಗಳನ್ನು ಹಾಗೂ ಸಿಬ್ಬಂದಿಯನ್ನು ಕಳುಹಿಸುವ ಕಾರ್ಯವನ್ನು ನಡೆಸಿ ಅವರು ಮಾತನಾಡಿದರು.

 ತಾಲ್ಲೂಕಿನ 24 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ. ಸರ್ಕಾರ ನೇಮಕ ಮಾಡಿರುವ ಆರ್.ಒ ಮತ್ತು ಎ.ಆರ್.ಒ ಗಳು ಚುನಾವಣಾ ಪ್ರಕ್ರಿಯೆಗಳಾದ ನಾಮಪತ್ರ ಸ್ವೀಕರಣೆಯಿಂದ ಹಿಡಿದು ಮತ ಎಣಿಕೆ ಮುಗಿಯುವವರೆಗೆ ಅವರು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ.  24 ಗ್ರಾಮ ಪಂಚಾಯಿತಿಗಳಿಂದ ಒಟ್ಟು 374 ಸದಸ್ಯರು ಆಯ್ಕೆ ಆಗಬೇಕಿದೆ. 177 ಮೂಲ ಮತಗಟ್ಟೆಗಳು ಮತ್ತು 27 ಹೆಚ್ಚುವರಿ ಮತಗಟ್ಟೆಗಳಿವೆ. ಆದರೆ ಏಳು ಮತಗಟ್ಟೆಗಳಲ್ಲಿ ಅವಿರೋಧವಾಗಿ ಆಯ್ಕೆ ನಡೆದಿರುವುದರಿಂದ 195 ಮತಗಟ್ಟೆಗಳಿಂದ ಚುನಾವಣೆಯನ್ನು ನಡೆಸಲಿದ್ದೇವೆ ಎಂದರು.

 24 ಗ್ರಾಮ ಪಂಚಾಯಿತಿಗಳಿಂದ ಒಟ್ಟು 1,16,668 ಮತದಾರರಿದ್ದಾರೆ. 195 ಮತಗಟ್ಟೆಗಳಿಗೆ ಮಸ್ಟರಿಂಗ್ ಅಂದರೆ ಮತಗಟ್ಟೆಗಳಿಗೆ ಸಾಮಗ್ರಿಗಳನ್ನು ಹಾಗೂ ಸಿಬ್ಬಂದಿಯನ್ನು ಕಳುಹಿಸುವ ಕಾರ್ಯವನ್ನು ನಡೆಸಿದ್ದೇವೆ. ದಿಸೆಂಬರ್ 30 ರಂದು ಮತ ಎಣಿಕೆ ನಡೆಯಲಿದೆ. ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ 195 ಮತಗಟ್ಟೆಗಳಲ್ಲಿ 30 ಸೂಕ್ಷ್ಮ, 20 ಅತಿಸೂಕ್ಷ್ಮ ಹಾಗೂ 152 ಸಾಮಾನ್ಯ ಎಂದು ಮತಗಟ್ಟೆಗಳನ್ನು ಗುರುತಿಸಿದ್ದೇವೆ. ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆಗಳಿಗೆ ಹೆಚ್ಚಿನ ಪೊಲೀಸ್ ಬಂದೋಬಸ್ತನ್ನು ಏರ್ಪಡಿಸಿದ್ದೇವೆ. ಒಟ್ಟು 303 ಪೊಲೀಸ್ ಸಿಬ್ಬಂದಿಯನ್ನು ವಿವಿಧ ಮತಗಟ್ಟೆಗಳಿಗೆ ನಿಯೋಜನೆ ಮಾಡಲಾಗಿದೆ ಎಂದು ವಿವರಿಸಿದರು.

 ಕೋವಿಡ್ 19 ತಡೆಗಟ್ಟುವ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರನ್ನು ಪ್ರತಿಯೊಂದು ಮತಗಟ್ಟೆಗೂ ನೇಮಕ ಮಾಡಿ ಅವರ ಮೂಲಕ ಥರ್ಮಲ್ ಸ್ಕಾನ್ ಮಾಡಿ, ತೊಂದರೆ ಕಂಡುಬಂದಲ್ಲಿ ಚಿಕಿತ್ಸೆ ಕೊಡಿಸಲು ಏರ್ಪಾಟು ಮಾಡಿದ್ದೇವೆ. 760 ಮತಗಟ್ಟೆ ಸಿಬ್ಬಂದಿ ಮತ್ತು 195 ಆಶಾ ಕಾರ್ಯಕರ್ತೆಯರು ಸೇರಿ ಒಟ್ಟು 955 ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ ಎಂದರು.

ತಾಲ್ಲೂಕಿನಲ್ಲಿ ಸೋಮವಾರ 9 ಕೊರೊನ ಪಾಸಿಟಿವ್ ಪ್ರಕರಣ ದಾಖಲು

0
Covid-19 sidlaghatta coronavirus Covid Positive Cases Taluk village

ತಾಲ್ಲೂಕಿನಲ್ಲಿ 21/12/2020 ಸೋಮವಾರ 9 ಕೊರೊನ ಪಾಸಿಟಿವ್ ಪ್ರಕರಣ ದಾಖಲಾಗಿದೆ

  1. ನಗರದ 33 ವರ್ಷದ ಮಹಿಳೆ,
  2. ಆಜಾದ್ ನಗರದ 40 ವರ್ಷದ ಗಂಡಸು, 33 ವರ್ಷದ ಮಹಿಳೆ,
  3. ಬೈಪಾಸ್ ರಸ್ತೆಯ 19 ವರ್ಷದ ಯುವಕ,
  4. K K ಪೇಟೆಯ 16 ವರ್ಷದ ಯುವತಿ, 36 ವರ್ಷದ ಮಹಿಳೆ,
  5. ವರದನಾಯಕನಹಳ್ಳಿಯ 25 ವರ್ಷದ ಮಹಿಳೆ, 48 ವರ್ಷದ ಮಹಿಳೆ,
  6. ಮಳ್ಳೂರಿನ 39 ವರ್ಷದ ಮಹಿಳೆಗೆ ಸೋಂಕು ತಗುಲಿರುವುದು ದೃಢಪಟ್ಟಿದೆ