Home Blog Page 306

Sidlaghatta Cocoon Market Watch – 30/10/2020

0

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 30/10/2020

CB Lots: 323
Qty: 16563 Kgs
Max: 360
Min: 185
Avg: 298
BV Lots: 02
Qty: 50 Kgs
Max: 311
Min: 311
Avg: 311

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

ನಾಲ್ಕು ಬಾರಿ ಅವಳಿ ಹೆಣ್ಣು ಕರುಗಳಿಗೆ ಜನ್ಮ ನೀಡಿದ ಹಸು

0

ಶಿಡ್ಲಘಟ್ಟ ತಾಲ್ಲೂಕಿನ ಭಕ್ತರಹಳ್ಳಿ ಗ್ರಾಮದ ಗಾಯಿತ್ರಿಮ್ಮ ಮತ್ತು ಸಂತೆಹನುಮೇಗೌಡ ಅವರ ಎಚ್.ಎಫ್ ತಳಿಯ ಹಸು ಅವಳಿ ಹೆಣ್ಣು ಕರುಗಳಿಗೆ ಜನ್ಮ ನೀಡಿದೆ. ನಾಲ್ಕನೆಯ ಬಾರಿ ಈ ಹಸು ಎರಡು ಹೆಣ್ಣು ಕರುಗಳಿಗೆ ಜನನ ನೀಡಿರುವುದು ಅಚ್ಚರಿಯ ಸಂಗತಿಯಾಗಿದೆ.

ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಗುರುವಾರ 5 ಕೊರೊನ ಪಾಸಿಟಿವ್ ಪ್ರಕರಣ ದಾಖಲು

0

ನಗರ ಸೇರಿದಂತೆ ತಾಲ್ಲೂಕಿನಲ್ಲಿ ಗುರುವಾರ 5 ಮಂದಿಗೆ ಕೊರೊನಾ ಸೋಂಕು ತಗುಲಿದೆ.

  1. ದಿಬ್ಬೂರಹಳ್ಳಿಯ 35 ವರ್ಷದ ಗಂಡಸು, 45 ವರ್ಷದ ಗಂಡಸು,
  2. ನಾರಾಯಣ ದಾಸರಹಳ್ಳಿಯ 27 ವರ್ಷದ ಗಂಡಸು, 55 ವರ್ಷದ ಗಂಡಸು,
  3. ಜಂಗಮಕೋಟೆಯ 43 ವರ್ಷದ ಗಂಡಸು,
  4. B ತಿಮ್ಮಸಂದ್ರದ ಮಹಿಳೆಗೆ ಸೋಂಕು ತಗುಲಿದೆ.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

Sidlaghatta Cocoon Market Watch – 29/10/2020

0

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 29/10/2020

CB Lots: 393
Qty: 20753 kgs
Max: 550
Min: 202
Avg: 297
BV Lots: 11
Qty: 892 kgs
Max: 326
Min: 165
Avg: 240

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

ಶಾಂತಿಯುತವಾಗಿ ನಡೆದ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ

0

ನಗರದ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯು ಬುಧವಾರ ಬಹುತೇಕ ಶಾಂತಿಯುತವಾಗಿ ನಡೆಯಿತು.

ಆಗ್ನೇಯ ಪದವೀಧರ ಕ್ಷೇತ್ರದ ಮತದಾನಕ್ಕಾಗಿ ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಎರಡು ಮತಗಟ್ಟೆ ಸೇರಿದಂತೆ ದಿಬ್ಬೂರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಒಂದು ಮತಗಟ್ಟೆ ಸ್ಥಾಪಿಸಿದ್ದ ತಾಲ್ಲೂಕು ಆಡಳಿತ ಶಾಂತಿಯುತ ಮತದಾನಕ್ಕೆ ಬೇಕಾದ ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿತ್ತು.

ಕೊರೋನಾ ಹಿನ್ನಲೆಯಲ್ಲಿ ಮತದಾರರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗಿತ್ತು.

ಬುಧವಾರ ಬೆಳಿಗ್ಗೆ ಎಂಟು ಗಂಟೆಗೆ ಮತದಾನ ಪ್ರಕ್ರಿಯೆ ಪ್ರಾರಂಭವಾಗುತ್ತಿದ್ದಂತೆ ಬೆಳಿಗ್ಗೆಯೇ ಉತ್ಸಾಹ ಭರಿತರಾಗಿ ಬೇಗ ಬಂದು ಸರತಿಸಾಲುಗಳಲ್ಲಿ ನಿಂತು ಪದವೀಧರ ಮತದಾರರು ಮತದಾನ ಮಾಡಿದರಾದರೂ ಮಧ್ಯಾಹ್ನದ ನಂತರ ಮತದಾನ ಪ್ರಕ್ರಿಯೆ ಬಿರುಸುಗೊಂಡಿತು.

ಚುನಾವಣೆ ಹಿನ್ನಲೆಯಲ್ಲಿ ನಗರದ ದಿಬ್ಬೂರಹಳ್ಳಿ ರಸ್ತೆಯಲ್ಲಿ ವಿವಿಧ ಪಕ್ಷಗಳ ಮುಖಂಡರು ತಮ್ಮ ತಮ್ಮ ಪಕ್ಷದ ಅಧಿಕೃತ ಅಭ್ಯರ್ಥಿಯ ಪರ ಮತಯಾಚಿಸಲು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಿಕೊಂಡು ಮತ ಯಾಚಿಸುತ್ತಿದ್ದುದು ವಿಶೇಷವಾಗಿತ್ತು.

ಮತದಾರರು ಮತಗಟ್ಟೆಯ ಸಮೀಪಕ್ಕೆ ಬರುತ್ತಿದ್ದಂತೆ ಮತದಾರನನ್ನು ಮುತ್ತಿಕೊಳ್ಳುತ್ತಿದ್ದ ವಿವಿಧ ಪಕ್ಷಗಳ ಮುಖಂಡರು ತಮ್ಮ ಅಭ್ಯರ್ಥಿಗಳ ಪರ ಮತ ಹಾಕಿ ಅವಕಾಶ ನೀಡುವಂತೆ ಮನವಿ ಮಾಡುತ್ತಾ ನಮಸ್ಕಾರ ಹಾಕುವ ಜೊತೆಗೆ ಮತದಾರರಿಗೆ ನೀರು, ಜ್ಯೂಸ್, ಸೇರಿದಂತೆ ಮಜ್ಜಿಗೆಯಂತಹ ಪಾನೀಯಗಳನ್ನು ವಿತರಿಸಿ ಮತ ಯಾಚಿಸುತ್ತಿದ್ದುದು ವಿಶೇಷವಾಗಿತ್ತು.

 

ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಬುಧವಾರ 3 ಕೊರೊನ ಪಾಸಿಟಿವ್ ಪ್ರಕರಣ ದಾಖಲು

0

ನಗರ ಸೇರಿದಂತೆ ತಾಲ್ಲೂಕಿನಲ್ಲಿ ಬುಧವಾರ 3 ಮಂದಿಗೆ ಕೊರೊನಾ ಸೋಂಕು ತಗುಲಿದೆ.

  1. ನಗರದ ಮಳ್ಳೂರಿನ 19 ವರ್ಷದ ಗಂಡಸು, 45 ವರ್ಷದ ಗಂಡಸು,
  2. ಸಡ್ಲವರಹಳ್ಳಿಯ 27 ವರ್ಷದ ಗಂಡಸಿಗೆ ಸೋಂಕು ತಗುಲಿದೆ.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

Sidlaghatta Cocoon Market Watch – 28/10/2020

0

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 28/10/2020

CB Lots: 428
Qty: 22447 Kgs
Max: 338
Min: 185
Avg: 290
BV Lots: 02
Qty: 116 Kgs
Max: 290
Min: 288
Avg: 289

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

ಪದವೀಧರರ ಕ್ಷೇತ್ರದ ಮತದಾರರ ವಿವರ

0

ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ-2020 ರ ಸಂಬಂಧ ಶಿಡ್ಲಘಟ್ಟ ತಾಲ್ಲೂಕಿನಲ್ಲಿ 3 ಮತಗಟ್ಟೆಗಳಿದ್ದುಮತದಾರರು CeoKarnataka.kar.nic.in/searchhome-TG.aspx ಲಿಂಕ್ ನಡಿಯಲ್ಲಿ ತಮ್ಮ ಪದವೀಧರರ ಕ್ಷೇತ್ರದ ಮತದಾರರ ವಿವರಗಳನ್ನು ಪಡೆಯಬಹುದಾಗಿರುತ್ತದೆ ಎಂದು ತಹಶೀಲ್ದಾರ್ ಕೆ.ಅರುಂಧತಿ ತಿಳಿಸಿದ್ದಾರೆ.

ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಮಂಗಳವಾರ 2 ಕೊರೊನ ಪಾಸಿಟಿವ್ ಪ್ರಕರಣ ದಾಖಲು

0

ನಗರ ಸೇರಿದಂತೆ ತಾಲ್ಲೂಕಿನಲ್ಲಿ ಮಂಗಳವಾರ 2 ಮಂದಿಗೆ ಕೊರೊನಾ ಸೋಂಕು ತಗುಲಿದೆ.

  1. ನಗರದ ಕೋಟೆ ವೃತ್ತದ 65 ವರ್ಷದ ಮಹಿಳೆ,
  2. ವಂಟೂರಿನ 27 ವರ್ಷದ ಗಂಡಸಿಗೆ ಸೋಂಕು ತಗುಲಿದೆ.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

Sidlaghatta Cocoon Market Watch – 27/10/2020

0

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 27/10/2020

CB Lots: 293
Qty: 15096 Kgs
Max: 325
Min: 181
Avg: 292
BV Lots: 02
Qty: 131 Kgs
Max: 243
Min: 242
Avg: 243

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

ಶ್ರೀ ವೀರಾಂಜನೇಯಸ್ವಾಮಿ ದೇವಾಲಯದ ಧ್ವಜಸ್ಥಂಬದ ಪ್ರತಿಷ್ಠಾಪನಾ ಕಾರ್ಯ

0

ನಗರದ ಹೊರವಲಯದಲ್ಲಿ ಚಿಂತಾಮಣಿ ರಸ್ತೆಯಲ್ಲಿರುವ ಸುಮಾರು 400 ವರ್ಷಕ್ಕೂ ಹಳೆಯದಾದ ಶ್ರೀ ವೀರಾಂಜನೇಯಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾರ್ಯ ನಡೆದಿದ್ದು ವಿಜಯ ದಶಮಿಯಂದು ಧ್ವಜಸ್ಥಂಬದ ಪ್ರತಿಷ್ಠಾಪನಾ ಕಾರ್ಯವನ್ನು ನಡೆಸಲಾಯಿತು.

 ಶ್ರೀ ವೀರಾಂಜನೇಯಸ್ವಾಮಿ ಬಲಿಜ ಸೇವಾ ಟ್ರಸ್ಟ್ ವತಿಯಿಂದ ನಡೆಯುತ್ತಿರುವ ಜೀರ್ಣೋದ್ಧಾರ ಕಾರ್ಯದಲ್ಲಿ ಹಲವಾರು ಮಂದಿ ಭಕ್ತರು ತೊಡಗಿಸಿಕೊಂಡಿದ್ದಾರೆ. ಸೋಮವಾರ ನಡೆದ ಧ್ವಜಸ್ಥಂಬದ ಪ್ರತಿಷ್ಠಾಪನಾ ಕಾರ್ಯದ ನಿಮಿತ್ತ ವಿವಿಧ ಹೋಮ, ಪೂಜೆಯನ್ನು ಶ್ರದ್ಧಾಭಕ್ತಿಯಿಂದ ನಡೆಸಲಾಯಿತು.

 ಶ್ರೀ ವೀರಾಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿವರ್ಷ ಶ್ರೀರಾಮನವಮಿಯಂದು ಉಟ್ಲು ಜಾತ್ರೋತ್ಸವವನ್ನು ಸುಮಾರು ತೊಂಬತ್ತು ವರ್ಷಗಳಿಂದ ನಡೆಸಿಕೊಂಡು ಬರಲಾಗುತ್ತಿದೆ. ಜೈ ಬಜರಂಗಬಲಿ ವ್ಯಾಯಾಮಶಾಲೆಯೂ ಸಹ ಇಲ್ಲಿಯೆ ಇದ್ದು ಹಿಂದಿನ ತಲೆಮಾರಿನ ಪ್ರಸಿದ್ಧ ಗರಡಿ ಮನೆ ಇದಾಗಿತ್ತು.

 ಶ್ರೀ ವೀರಾಂಜನೇಯಸ್ವಾಮಿ ಬಲಿಜ ಸೇವಾ ಟ್ರಸ್ಟ್ ಅಧ್ಯಕ್ಷ ಎಸ್.ಶಂಕರ್, ಉಪಾಧ್ಯಕ್ಷ ವೇಣುಗೋಪಾಲ್, ಕಾರ್ಯದರ್ಶಿಗಳಾದ ಆರ್.ಶ್ರೀನಿವಾಸ್, ಜೆರಾಕ್ಸ್ ಕೃಷ್ಣಯ್ಯ, ಕೆ.ವಿ.ಅನಂತು, ಮುರಳೀಧರ್, ಮಧುಸೂದನ್ ಹಾಜರಿದ್ದರು.

ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಸೋಮವಾರ 2 ಕೊರೊನ ಪಾಸಿಟಿವ್ ಪ್ರಕರಣ ದಾಖಲು

0

ನಗರ ಸೇರಿದಂತೆ ತಾಲ್ಲೂಕಿನಲ್ಲಿ ಸೋಮವಾರ 2 ಮಂದಿಗೆ ಕೊರೊನಾ ಸೋಂಕು ತಗುಲಿದೆ.

  1. ನಗರದ ಗಾಂಧಿನಗರದ 61 ವರ್ಷದ ಗಂಡಸು,
  2. ಮೇಲೂರಿನ 25 ವರ್ಷದ ಗಂಡಸಿಗೆ ಸೋಂಕು ತಗುಲಿದೆ.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

Sidlaghatta Cocoon Market Watch – 26/10/2020

0

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 26/10/2020

CB Lots: 237
Qty: 11345 Kgs
Max: 324
Min: 160
Avg: 268
BV Lots: 03
Qty: 307 Kgs
Max: 232
Min: 222
Avg: 224

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಭಾನುವಾರ 4 ಕೊರೊನ ಪಾಸಿಟಿವ್ ಪ್ರಕರಣ ದಾಖಲು

0

ನಗರ ಸೇರಿದಂತೆ ತಾಲ್ಲೂಕಿನಲ್ಲಿ ಭಾನುವಾರ 4 ಮಂದಿಗೆ ಕೊರೊನಾ ಸೋಂಕು ತಗುಲಿದೆ.

  1. ನಗರದ ಮಯೂರ ವೃತ್ತದ 25 ವರ್ಷದ ಗಂಡಸು,
  2. ಬೆಳ್ಳೂಟಿಯ 43 ವರ್ಷದ ಗಂಡಸು,
  3. ಹಿತ್ತಲಹಳ್ಳಿಯ 8 ವರ್ಷದ ಹುಡುಗ,
  4. ಮಳ್ಳೂರಿನ 70 ವರ್ಷದ ಗಂಡಸಿಗೆ ಸೋಂಕು ತಗುಲಿದೆ.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

Sidlaghatta Cocoon Market Watch – 25/10/2020

0

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 25/10/2020

CB Lots: 277
Qty: 13326 Kgs
Max: 320
Min: 166
Avg: 238
BV Lots: Nil

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

ಮನೆಯಲ್ಲಿದ್ದೇ ವೈದ್ಯರಿಂದ ಸಲಹೆ ಸೂಚನೆ ಪಡೆಯಿರಿ – ಡಾ.ವೆಂಕಟೇಶ್‌ಮೂರ್ತಿ

0

ಪ್ರತಿಯೊಬ್ಬರೂ ಇ ಸಂಜೀವಿನಿ ಓಪಿಡಿ ಆಪ್ ಡೌನ್ ಲಾಡ್ ಮಾಡಿಕೊಳ್ಳುವ ಮೂಲಕ ಮನೆಯಲ್ಲಿ ಕುಳಿತು ತಮ್ಮ ಖಾಯಿಲೆಗೆ ನುರಿತ ವೈದ್ಯರಿಂದ ಸಲಹೆ ಸೂಚನೆ ಪಡೆದು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್‌ಮೂರ್ತಿ ಹೇಳಿದರು.

ನಗರದ ತಾಲ್ಲೂಕು ವೈದ್ಯಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಇ ಸಂಜೀವಿನಿ ಟೆಲಿ ಮೆಡಿಸಿನ್ ಸೇವೆಗೆ ಈಗಾಗಲೇ ಉತ್ತಮ ಪ್ರತಿಕ್ರಿಯೆ ದೊರೆತಿದೆ. ರಾಜ್ಯಾದ್ಯಂತ ಸುಮಾರು 700 ಕ್ಕೂ ಹೆಚ್ಚು ವೈದ್ಯರು ಟೆಲಿ ಮೆಡಿಸಿನ್ ಸೇವೆ ನೀಡುತ್ತಿದ್ದಾರೆ. ಟೆಲಿ ಮೆಡಿಸಿನ್ ಸೇವೆಯಿಂದ ವಿನಾಕಾರಣ ಜನರು ಆಸ್ಪತ್ರೆಗಳಿಗೆ ಅಲೆಯುವುದು ತಪ್ಪುತ್ತದೆ. ಹಾಗಾಗಿ ಪ್ರತಿಯೊಬ್ಬರೂ ತಮ್ಮ ತಮ್ಮ ಫೋನ್‌ಗಳಲ್ಲಿ ಇ ಸಂಜೀವಿನಿ ಆಪ್ ಡೌನ್‌ಲೋಡ್ ಮಾಡಿಕೊಳ್ಳುವುದರಿಂದ ಮನೆಯಲ್ಲಿಯೇ ಕುಳಿತು ತಮ್ಮ ಹಾಗೂ ತಮ್ಮ ಸಂಬಂಧಿಕರ ಆರೋಗ್ಯ ಸುಧಾರಿಸಿಕೊಳ್ಳಬಹುದು. ಈಗಾಗಲೇ ಆರೋಗ್ಯ ಇಲಾಖೆಯ ಸಿಬ್ಬಂದಿ ಸೇರಿದಂತೆ ಆಶಾ ಕಾರ್ಯಕರ್ತೆಯರು ಜನರಿಗೆ ಮನವರಿಕೆ ಮಾಡಿಕೊಡುವ ಕೆಲಸ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇ ಸಂಜೀವಿನಿ ಮೂಲಕ ಟೆಲಿ ಮೆಡಿಸಿನ್ ಸೇವೆ ಬಳಸಿಕೊಳ್ಳುವವರ ಸಂಖ್ಯೆ ಹೆಚ್ಚಾಗಲಿದೆ ಎಂದರು.

ಮೊಬೈಲ್ ಮೂಲಕ ಚಿಕಿತ್ಸೆ :

ತಮ್ಮ ಮೊಬೈಲ್‌ನಲ್ಲಿ ಪ್ಲೇ ಸ್ಟೋರ್ ಮೂಲಕ ಇ ಸಂಜೀವಿನಿ ಆಪ್ ಡೌನ್ ಲೋಡ್ ಮಾಡಿಕೊಂಡಾಗ ಇ ಸಂಜೀವಿನಿ ಮುಖಪುಟ ತೆರೆದುಕೊಳ್ಳುತ್ತದೆ. ಇದರಲ್ಲಿ ನಿಮ್ಮ ಮೊಬೈಲ್ ಸಂಖ್ಯೆ ನೀಡಿ ಓಟಿಪಿ ಮೂಲಕ ನೋಂದಣಿ ಪಡೆದುಕೊಳ್ಳಬೇಕು. ಬಳಿಕ ನಿಮ್ಮ ಅಥವ ರೋಗಿಯ ಪ್ರಾಥಮಿಕ ಮಾಹಿತಿ ನಮೂದಿಸಿ ಖಾಯಿಲೆ ವಿಧ ಆಯ್ಕೆ ಮಾಡಿದಾಗ ರೋಗಿಯ ಐಡಿ ಹಾಗೂ ಟೋಕನ್ ಸಂಖ್ಯೆ ಸಿಗಲಿದೆ. ಇದನ್ನು ಬಳಸಿ ಲಾಗ್ ಇನ್ ಆದಲ್ಲಿ ಆಪ್‌ನಲ್ಲಿ ವಿಡಿಯೋ ಕಾಲ್ ಮುಖಾಂತರ ವೈದ್ಯರನ್ನು ಸಂಪರ್ಕಿಸಬಹುದು. ಪ್ರತಿನಿತ್ಯ ಬೆಳಗ್ಗೆ 10 ರಿಂದ ಸಂಜೆ ನಾಲ್ಕು ಗಂಟೆಯವರೆಗೂ ಸೇವೆ ಲಭ್ಯವಿರುತ್ತದೆ. ಸ್ಥಳೀಯ ಆರೋಗ್ಯ ಉಪಕೇಂದ್ರಗಳಿಗೆ ಭೇಟಿ ನೀಡಿಯೂ ಇ ಸಂಜೀವಿನಿಯ ಟೆಲಿ ಮೆಡಿಸಿನ್ ನೆರವು ಪಡೆಯಬಹುದು.

ಡೌನ್ಲೋಡ್ ಮಾಡಿಕೊಳ್ಳಲು : https://play.google.com/store/apps/details?id=in.hied.esanjeevaniopd&hl=en_IN&gl=US

ಶಿಡ್ಲಘಟ್ಟದ ಪ್ರತಿಭೆಗಳಿಂದ ಹೊಸ ಪಾಪ್ ಆಲ್ಬಮ್ ಹಾಡು

0

ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕ ಗಡಿನಾಡುಹುಲಿ ಪುನೀತ್ ಮಾತನಾಡಿ ತಾಲ್ಲೂಕಿನ ಗ್ರಾಮೀಣ ಭಾಗದ ಯುವ ಪ್ರತಿಭೆಗಳು ಒಗ್ಗೂಡಿ “2020 ಹುಡುಗಿ” ಎಂಬ ಪಾಪ್ ಆಲ್ಬಮ್ ಹಾಡನ್ನು ನಿರ್ಮಿಸಿದ್ದು ಶನಿವಾರ ಆನ್ ಲೈನ್ ನಲ್ಲಿ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.

ಕೊರೊನಾ ಸಂಕಷ್ಟದಲ್ಲಿಯೂ ಯುವ ಪ್ರತಿಭೆಗಳನ್ನು ಒಗ್ಗೂಡಿಸಿಕೊಂಡು, ನಾವುಗಳೇ ಹಣವನ್ನು ಖರ್ಚು ಮಾಡಿ ಈಗಿನ ಕಾಲಕ್ಕೆ ತಕ್ಕಹಾಗೆ ಯುವಪೀಳಿಗೆಯನ್ನು ಆಕರ್ಷಿಸುವ ಹಾಗೆ ಪಾಪ್ ಆಲ್ಬಮ್ ಹಾಡನ್ನು ನಿರ್ಮಿಸಿದ್ದೇವೆ. ಕನ್ನಡ, ತೆಲುಗು ಮತ್ತು ಹಿಂದಿ ಭಾಷೆಯಲ್ಲಿ ಇದನ್ನು ನಿರ್ಮಿಸಿದ್ದು, ಶನಿವಾರ ಕನ್ನಡದ್ದನ್ನು ಬಿಡುಗಡೆ ಮಾಡಲಿದ್ದೇವೆ. ಹದಿನೈದು ದಿನಗಳ ನಂತರ ತೆಲುಗು ಭಾಷೆಯನ್ನು ಬಿಡುಗಡೆ ಮಾಡಲಿದ್ದೇವೆ. ಕೆಲ ಸಮಯದ ನಂತರ ಹಿಂದಿಯದ್ದನ್ನೂ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದರು.

2020 ರಲ್ಲಿ ಯುವತಿಯ ಮನಸ್ಥಿಯನ್ನು ನಮ್ಮ ಪಾಪ್ ಆಲ್ಬಮ್ ಹಾಡು ಪ್ರತಿನಿಧಿಸುತ್ತದೆ. ಸಂಗೀತವನ್ನು ಧನುಶ್ ನೀಡಿದ್ದರೆ, ಧನುಶ್ರೀ ಸತೀಶ್ ಹಾಡನ್ನು ಹಾಡಿದ್ದಾರೆ. ಸಿರಿ ಮ್ಯೂಸಿಕ್ ಕಂಪೆನಿ ನಮ್ಮ ಹಾಡನ್ನು ಖರೀದಿಸಿದ್ದು, ಶನಿವಾರ ಬಿಡುಗಡೆ ಮಾಡಲಿದೆ. ನಗರ ಕೇಂದ್ರಿತವಾದ ಈ ರೀತಿಯ ಪಾಪ್ ಆಲ್ಬಮ್ ಹಾಡನ್ನು ಅಪ್ಪಟ ಗ್ರಾಮೀಣ ಪ್ರತಿಭೆಗಳೇ ನಿರ್ಮಿಸಿರುವುದರಿಂದ ಪ್ರೋತ್ಸಾಹದ ಅಗತ್ಯವಿದೆ ಎಂದರು.

 ಪಾಪ್ ಆಲ್ಬಮ್ ಹಾಡಿನ ತಂಡದ ಸಂತೋಷ್ ಮತ್ತು ಗಣೇಶ್ ಹಾಜರಿದ್ದರು.

Sidlaghatta Cocoon Market Watch – 24/10/2020

0

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 24/10/2020

CB Lots: 490
Qty: 24522 kgs
Max: 310
Min: 175
Avg: 217
BV Lots: 04
Qty: 182 kgs
Max : 275
Min : 245
Avg :266

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

ಸಾಧಕರನ್ನು ಸನ್ಮಾನಿಸಿ ಕನ್ನಡ ರಾಜ್ಯೋತ್ಸವ ಆಚರಣೆ

0

ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕನ್ನಡ ರಾಜ್ಯೋತ್ಸವ ಕುರಿತಂತೆ ನಡೆದ ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ್ ಕೆ.ಅರುಂಧತಿ ಮಾತನಾಡಿದರು.

ಕೊರೊನಾ ಸಂದರ್ಭದಲ್ಲಿ ಕನ್ನಡ ರಾಜ್ಯೋತ್ಸವವನ್ನು ತಾಲ್ಲೂಕು ಆಡಳಿತದಿಂದ ಅತ್ಯಂತ ಸರಳವಾಗಿ ಆಚರಿಸಲಾಗುವುದು. ಎಲ್ಲಾ ಕನ್ನಡಪರ ಸಂಘಟನೆಗಳು ಕೈಜೋಡಿಸಬೇಕು ಎಂದು ಅವರು ತಿಳಿಸಿದರು.

 ನಗರದ ಬಸ್ ನಿಲ್ದಾಣದ ಬಳಿ ಸಲ್ಲಾಪುರಮ್ಮ ದೇವಸ್ಥಾನದ ಬಳಿ ಧ್ವಜಾರೋಹಣ ಮಾಡಲಾಗುವುದು. ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸರಳವಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು. ಕನ್ನಡಪರ ಕೆಲಸ ಮಾಡಿದವರು, ಸಾಹಿತ್ಯ, ಸಂಸ್ಕೃತಿ, ಕಲೆ ಕ್ಷೇತ್ರಗಳನ್ನು ಸಾಧನೆ ಮಾಡಿರುವವರನ್ನು ತಾಲ್ಲೂಕು ಮಟ್ಟದಲ್ಲಿ ಗುರುತಿಸಿ ಸನ್ಮಾನ ಮಾಡಲಾಗುವುದು. ಸಾಧಕರ ಪಟ್ಟಿಯನ್ನು ತಯಾರಿಸುವ ಜವಾಬ್ದಾರಿ ಕಸಾಪ ತಾಲ್ಲೂಕು ಅಧ್ಯಕ್ಷರಿಗೆ ವಹಿಸಿದ್ದು, ಸಾಧಕರ ವಿವರವನ್ನು ಸಂಗ್ರಹಿಸಿದ ನಂತರ ತಾಲ್ಲೂಕು ಆಡಳಿತ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದರು.

 ಕನ್ನಡ ಭವನಕ್ಕೆ ಮನವಿ : ಶಿಡ್ಲಘಟ್ಟ ನಗರದಲ್ಲಿ ಕನ್ನಡಪರ ಕಾರ್ಯಕ್ರಮಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ಕನ್ನಡ ಭವನ ನಿರ್ಮಿಸಬೇಕೆಂದು ತಹಶೀಲ್ದಾರ್ ಕೆ.ಅರುಂಧತಿ ಅವರಿಗೆ ಕಸಾಪ ಹಾಗೂ ಕನ್ನಡಪರ ಸಂಘಟನೆಗಳ ವತಿಯಿಂದ ಮನವಿಯನ್ನು ಸಲ್ಲಿಸಲಾಯಿತು.

 ತಾಲ್ಲೂಕು ಪಂಚಾಯಿತಿ ಇಒ ಶಿವಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಶ್ರೀನಿವಾಸ್, ಕಸಾಪ ತಾಲ್ಲೂಕು ಅಧ್ಯಕ್ಷ ಎ.ಎಂ.ತ್ಯಾಗರಾಜ್, ಕನ್ನಡಪರ ಸಂಘಟನೆಗಳ ಮುಖಂಡರಾದ ಜೆ.ಎಸ್.ವೆಂಕಟಸ್ವಾಮಿ, ನಾರಾಯಣಸ್ವಾಮಿ, ಪ್ರತೀಶ್, ತಾದೂರು ಮಂಜುನಾಥ್, ಶಂಕರ್ ಹಾಜರಿದ್ದರು.

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರಚಾರ

0

ನಗರದ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯ ಹಿನ್ನಲೆಯಲ್ಲಿ ಕರೆಯಲಾಗಿದ್ದ ಸುದ್ದಿಘೋಷ್ಠಿಯಲ್ಲಿ ಶಿಡ್ಲಘಟ್ಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎಂ.ಮುನಿಯಪ್ಪ ಮಾತನಾಡಿದರು.

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿರುವ ಅಭ್ಯರ್ಥಿ ರಮೇಶ್‌ಬಾಬು ಅವರನ್ನು ಅತ್ಯಂತ ಹೆಚ್ಚಿನ ಮತಗಳಿಂದ ಗೆಲ್ಲಿಸಲು ಕಾಂಗ್ರೆಸ್ ಕಾರ್ಯಕರ್ತರೂ ಸೇರಿದಂತೆ ಮುಖಂಡರು ಶ್ರಮಿಸಬೇಕು ಎಂದು ಅವರು ಹೇಳಿದರು.

ರಾಜ್ಯದ ಶಿಕ್ಷಕರು ಸೇರಿದಂತೆ ಪದವೀಧರರ ಸಮಸ್ಯೆಗಳಿಗೆ ಸ್ಪಂದಿಸುವ ಸರಳ, ಸಜ್ಜನಿಕೆಯ ವ್ಯಕ್ತಿ ರಮೇಶ್‌ಬಾಬು ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು ತಾಲ್ಲೂಕಿನ ಪ್ರತಿಯೊಬ್ಬ ಪದವೀಧರರೂ ಸೇರಿದಂತೆ ಶಿಕ್ಷಕರು ತಮ್ಮ ಅಮೂಲ್ಯವಾದ ಮೊದಲನೇ ಪ್ರಾಶಸ್ತ್ಯದ ಮತವನ್ನು ರಮೇಶ್‌ಬಾಬು ರವರಿಗೆ ನೀಡುವ ಮೂಲಕ ಅಭಿವೃದ್ದಿಗೆ ಸಹಕಾರ ನೀಡುವಂತೆ ಮನವಿ ಮಾಡಿದರು.

ಅಭ್ಯರ್ಥಿ ರಮೇಶ್‌ಬಾಬು ಮಾತನಾಡಿ, ಈಗಾಗಲೇ ಆಗ್ನೇಯ ಪದವೀಧರ ಕ್ಷೇತ್ರದ ಐದು ಜಿಲ್ಲೆಗಳ ಕಾಂಗ್ರೆಸ್ ಮುಖಂಡರ ವಿಶ್ವಾಸವನ್ನು ಗಳಿಸಿಕೊಂಡಿದ್ದೇನೆ. ಎಲ್ಲರೂ ನನ್ನ ಪರ ಚುನಾವಣೆಯಲ್ಲಿ ಕೆಲಸ ಮಾಡುತ್ತಿದ್ದು ಈ ಚುನಾವಣೆಯಲ್ಲಿ ಜಯಗಳಿಸುವ ವಿಶ್ವಾಸವಿದೆ. ಈ ಹಿಂದೆ 15 ತಿಂಗಳ ಕಾಲ ಎಂಎಲ್‌ಸಿಯಾಗಿ ಕಾರ್ಯ ನಿರ್ವಹಿಸಿದ್ದೇನೆ. ಇದೀಗ ಪೂರ್ಣಾವಧಿಗಾಗಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದು ಪದವೀಧರರು ಹಾಗೂ ಶಿಕ್ಷಕರ ಪರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತೇನೆ. ಹಾಗಾಗಿ ಪ್ರತಿಯೊಬ್ಬರೂ ತಮ್ಮ ಮೊದಲ ಪ್ರಾಶಸ್ತ್ಯದ ಮತವನ್ನು ನನಗೆ ನೀಡಿ ಆಶೀರ್ವದಿಸಬೇಕು ಎಂದು ಮನವಿ ಮಾಡಿದರು.

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಓರ್ವ ಅಭ್ಯರ್ಥಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪಾಸಾದ ನಕಲಿ ಮತದಾರರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿರುವ ಕ್ರಮ ಪದವೀಧರರಿಗೆ ಮಾಡಿರುವ ಅವಮಾನ. ನಕಲಿ ಮತದಾರರನ್ನು ನೋಂದಾಯಿಸಿರುವ ಅಧಿಕಾರಿಗಳನ್ನು ಬಂಧಿಸಬೇಕು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಗೆ ದೂರು ಸಲ್ಲಿಸುವ ಜೊತಗೆ ಚುನಾವಣೆಯ ನಂತರವೂ ಹೋರಾಟ ನಡೆಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎ.ನಾಗರಾಜ್, ನಗರಸಭೆ ಸದಸ್ಯರಾದ ಮಂಜುನಾಥ್, ಮುನಿರಾಜು ಹಾಜರಿದ್ದರು.