ನಗರ ಸೇರಿದಂತೆ ತಾಲ್ಲೂಕಿನಲ್ಲಿ ಮಂಗಳವಾರ 5 ಮಂದಿಗೆ ಕೊರೊನಾ ಸೋಂಕು ತಗುಲಿದೆ.
- ನಗರದ ಟೌನ್ ಪೊಲೀಸ್ ಠಾಣೆಯ 47 ವರ್ಷದ ಗಂಡಸು,
- ದೇಶದಪೇಟೆಯ 37 ವರ್ಷದ ಗಂಡಸು,
- ನಲ್ಲಿಮರದಹಳ್ಳಿಯ 34 ವರ್ಷದ ಗಂಡಸು,
- S ಕುರುಬರಹಳ್ಳಿ, ಸಾದಲಿಯ 55 ವರ್ಷದ ಮಹಿಳೆ,
- ಸಾದಲಿಯ 63 ವರ್ಷದ ಗಂಡಸಿಗೆ ಸೋಂಕು ತಗುಲಿದೆ.
ನಗರ ಸೇರಿದಂತೆ ತಾಲ್ಲೂಕಿನಲ್ಲಿ ಮಂಗಳವಾರ 5 ಮಂದಿಗೆ ಕೊರೊನಾ ಸೋಂಕು ತಗುಲಿದೆ.
CB Lots: 415
Qty: 21340 Kgs
Max: 325
Min: 202
Avg: 270
BV Lots: 04
Qty: 196 Kgs
Max: 300
Min : 260
Avg: 272
ನಗರ ಸೇರಿದಂತೆ ತಾಲ್ಲೂಕಿನಲ್ಲಿ ಸೋಮವಾರ 12 ಮಂದಿಗೆ ಕೊರೊನಾ ಸೋಂಕು ತಗುಲಿದೆ.
CB Lots: 459
Qty: 24086 Kgs
Max: 331
Min: 202
Avg: 266
BV Lots: NILL
ನಗರಸಭೆ ವ್ಯಾಪ್ತಿಯಲ್ಲಿ ಅನುಮತಿ ಪಡೆಯದೇ ಅನಧಿಕೃತವಾಗಿ ಅಂಗಡಿ ಮುಂಗಟ್ಟುಗಳನ್ನು ನಿರ್ಮಿಸಿಕೊಂಡು ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡುವುದಿಲ್ಲ ಎಂದು ಪೌರಾಯುಕ್ತ ಶ್ರೀನಿವಾಸ್ ಎಚ್ಚರಿಸಿದ್ದಾರೆ.
ನಗರದ ಚಿಂತಾಮಣಿ ಬೈಪಾಸ್ ರಸ್ತೆಯಲ್ಲಿರುವ ಗೌಡನಕೆರೆ ಬಳಿ ಆನೂರು ಗೇಟ್ ಬಳಿ ಅನಧಿಕೃತವಾಗಿ ರಸ್ತೆ ಬದಿಯಲ್ಲಿ ಅಂಗಡಿಗಳನ್ನು ನಿರ್ಮಿಸಿಕೊಂಡು ಮಾಂಸ, ಮೀನು ಮಾರಾಟ ಮಾಡುತ್ತಿದ್ದ ಅಂಗಡಿಗಳನ್ನು ಶನಿವಾರ ತೆರವುಗೊಳಿಸಿ ಅವರು ಮಾತನಾಡಿದರು.
ರಸ್ತೆಯ ಬದಿಯಲ್ಲಿ ಈ ರೀತಿ ಅಂಗಡಿಗಳನ್ನು ನಿರ್ಮಿಸಿಕೊಂಡು ವ್ಯಾಪಾರ ಮಾಡುವುದರಿಂದ ಬೀದಿ ನಾಯಿಗಳ ಹಾವಳಿ ಹಾಗೂ ಹೆಚ್ಚಿನ ಜನಸಂದಣಿ ಉಂಟಾಗಿ ಅಪಘಾತಗಳಾಗುವ ಸಾಧ್ಯತೆಗಳಿವೆ. ಹಾಗಾಗಿ ಇಂತಹ ಅಂಗಡಿಗಳನ್ನು ಗುರುತಿಸಿ ತಾಲ್ಲೂಕು ಪಂಚಾಯಿತಿ ಮತ್ತು ಪೊಲೀಸ್ ಇಲಾಖೆಯ ಸಹಕಾರದಿಂದ ತೆರವುಗೊಳಿಸಿದ್ದೇವೆ ಎಂದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಇಓ ಬಿ.ಶಿವಕುಮಾರ್, ಸರ್ಕಲ್ ಇನ್ಸ್ ಪೆಕ್ಟರ್ ಸುರೇಶ್, ನಗರಠಾಣೆ ಪಿಎಸ್ಸೈ ಸಂಗಮೇಶ್ ಮೇಠಿ, ನಗರಸಭೆ ಆರೋಗ್ಯ ನಿರೀಕ್ಷಕಿ ಶೋಭ, ಪೊಲೀಸ್ ಸಿಬ್ಬಂದಿ ಹಾಜರಿದ್ದರು.
CB Lots: 604
Qty: 30343 Kgs
Max: 300
Min: 154
Avg: 240
BV Lots: NILL
ನಗರ ಸೇರಿದಂತೆ ತಾಲ್ಲೂಕಿನಲ್ಲಿ ಭಾನುವಾರ 5 ಮಂದಿಗೆ ಕೊರೊನಾ ಸೋಂಕು ತಗುಲಿದೆ.
ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದರಲ್ಲಿ ಉತ್ತರಪ್ರದೇಶ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದ್ದು ಕೂಡಲೇ ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು ಎಂದು ಸಮತಾ ಸೈನಿಕ ಧಳದ ಅಧ್ಯಕ್ಷ ಈಧರೆ ಪ್ರಕಾಶ್ ಆಗ್ರಹಿಸಿದರು.
ಉತ್ತರಪ್ರದೇಶದ ಹತ್ರಾಸ್ ನಲ್ಲಿ ನಡೆದ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಸಮತಾ ಸೈನಿಕ ದಳದ ಪದಾಧಿಕಾರಿಗಳು ನಗರದ ಬಸ್ ನಿಲ್ದಾಣದ ಬಳಿಯಿಂದ ಕೋಟೆ ವೃತ್ತ, ಮಯೂರ ವೃತ್ತದ ಮೂಲಕ ತಾಲ್ಲೂಕು ಕಚೇರಿಯವರೆಗೂ ಬೈಕ್ ರ್‍ಯಾಲಿ ಮೂಲಕ ಪ್ರತಿಭಟನೆ ನಡೆಸಿ ಶಿರಸ್ತೇದಾರ್ ಕೆ.ಎನ್.ಮಂಜುನಾಥ್‌ರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.
ಉತ್ತರಪ್ರದೇಶದ ಹತ್ರಾಸ್‌ನಲ್ಲಿ ದಲಿತ ಯುವತಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾದ ಆರೋಪಿಗಳನ್ನು ಪ್ರಕರಣದಿಂದ ತಪ್ಪಿಸಲು ರಾತ್ರೋ ರಾತ್ರಿ ಮೃತ ದೇಹವನ್ನು ಕುಟುಂಬದವರಿಗೂ ನೀಡದೇ ಹೀನಾಯವಾಗಿ ಸುಟ್ಟುಹಾಕುವ ಮೂಲಕ ಧಾರ್ಮಿಕ ಸಂಪ್ರದಾಯಗಳನ್ನು ಬೂದಿ ಮಾಡಿದ ಅಲ್ಲಿನ ಸರ್ಕಾರದ ಕ್ರಮ ಖಂಡನೀಯ. ಇದು ದೇಶದ ಎಲ್ಲರ ಆತ್ಮಸಾಕ್ಷಿಯನ್ನು ಕಲಕಿದೆ. ಪದೇ ಪದೇ ದೇಶದಲ್ಲಿ ಇಂತಹ ಪ್ರಕರಣಗಳು ನಡೆಯುತ್ತಿದ್ದರೂ ಅಲ್ಲಿನ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ. ಪ್ರಜಾ ಪ್ರಭುತ್ವದ ಕಗ್ಗೊಲೆ ಮಾಡುತ್ತಾ ಅಧಿಕಾರ ನಡೆಸುತ್ತಿರುವ ಉತ್ತರಪ್ರದೇಶದ ಸರ್ಕಾರವನ್ನು ಕೂಡಲೇ ರಾಷ್ಟ್ರಪತಿಗಳು ತಮ್ಮ ಸುಪರ್ಧಿಗೆ ಪಡೆದುಕೊಳ್ಳಬೇಕು. ಅತ್ಯಾಚಾರ ಆರೋಪಿಗಳನ್ನು ಕೂಡಲೇ ಗಲ್ಲಿಗೇರಿಸುವ ಮೂಲಕ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿ ರಾಷ್ಟ್ರಪತಿಗಳಿಗೆ ತಾಲ್ಲೂಕು ಆಡಳಿತದ ಮೂಲಕ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಮತಾ ಸೈನಿಕ ದಳ ಹಾಗು ಆರ್‌ಪಿಐ ಜಿಲ್ಲಾಧ್ಯಕ್ಷ ಜಿ.ಸಿ.ವೆಂಕಟರೋಣಪ್ಪ, ಜಿಲ್ಲಾ ಉಪಾಧ್ಯಕ್ಷ ಜಿ.ಈಶ್ವರಪ್ಪ, ಜಿ.ಅಶ್ವತ್ಥಪ್ಪ, ತಾಲ್ಲೂಕು ಮುಖಂಡರಾದ ಮುನಿಆಂಜನಪ್ಪ, ಎಂ.ವಿಜಯ್‌ಕುಮಾರ್, ವೆಂಕಟೇಶಪ್ಪ, ರಾಮಾಂಜಿನಪ್ಪ ಹಾಜರಿದ್ದರು.

ಉತ್ತರಪ್ರದೇಶದ ಹತ್ರಾಸ್‌ನಲ್ಲಿ ದಲಿತ ಹೆಣ್ಣು ಮಗುವಿನ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣ ಇಡೀ ವಿಶ್ವವೇ ತಲೆ ತಗ್ಗಿಸುವಂತದ್ದು ಎಂದು ದಸಂಸ ತಾಲ್ಲೂಕು ಸಂಚಾಲಕ ಎನ್.ಎ.ವೆಂಕಟೇಶ್ ಹೇಳಿದರು.
ನಗರದ ತಾಲ್ಲೂಕು ಕಚೇರಿ ಮುಂಭಾಗ ಶನಿವಾರ ದಸಂಸ, ಕರ್ನಾಟಕ ರಾಜ್ಯ ವಾಲ್ಮೀಕಿ ನಾಯಕರ ಯುವಪಡೆ ಹಾಗೂ ಕರ್ನಾಟಕ ರಾಜ್ಯ ನಾಯಕರ ಯುವಸೇನೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದರಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಂಪೂರ್ಣ ವಿಫಲವಾಗಿದೆ. ನೆರೆಯ ತೆಲಂಗಾಣದ ಪ್ರಿಯಾಂಕರೆಡ್ಡಿ ರನ್ನು ಹತ್ಯೆಗೈದಿದ್ದ ಆರೋಪಿಗಳನ್ನು ಎನ್ ಕೌಂಟರ್ ಮಾಡಿದ ರೀತಿಯಲ್ಲಿಯೇ ಎನ್ ಕೌಂಟರ್ ಮಾಡಬೇಕಾಗಿತ್ತು. ಆದರೆ ಉತ್ತರ ಪ್ರದೇಶ ಸರ್ಕಾರ ಅಲ್ಲಿನ ಪೊಲೀಸರಿಗೆ ಕುಮ್ಮಕ್ಕು ನೀಡುವ ಮೂಲಕ ಹಂತಕರ ರಕ್ಷಣೆಗೆ ಮುಂದಾಗಿರುವುದು ಖಂಡನೀಯ ಎಂದರು.
ಮಾನ್ಯ ರಾಷ್ಟ್ರಪತಿಗಳು ಸೇರಿದಂತೆ ಪ್ರಧಾನ ಮಂತ್ರಿಗಳು ಅತ್ಯಾಚಾರ ಕೃತ್ಯದಲ್ಲಿ ಪಾಲ್ಗೊಂಡ ಆರೋಪಿಗಳನ್ನು ಗಲ್ಲಿಗೇರಿಸಬೇಕು.
ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ಸೇರಿದಂತೆ, ಗೃಹಮಂತ್ರಿ ಹಾಗೂ ಪೊಲೀಸ್ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುವ ಮೂಲಕ ಮೃತ ಹೆಣ್ಣು ಮಗಳ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿ ಮಾನ್ಯ ರಾಷ್ಟ್ರಪತಿಗಳಿಗೆ ಶಿರಸ್ತೇದಾರ್ ಕೆ.ಎನ್.ಮಂಜುನಾಥ್ ಮೂಲಕ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ದಸಂಸ ತಾಲ್ಲೂಕು ಸಂಘಟನಾ ಸಂಚಾಲಕರಾದ ಟಿ.ಎ.ಚಲಪತಿ, ಎಲ್.ವಿ.ವೆಂಕಟೇಶ್, ಮಾದಿಗ ದಂಡೋರ ಮುಖಂಡ ಜೆ.ಎಂ.ದೇವರಾಜ್, ವಾಲ್ಮೀಕಿ ನಾಐಕರ ಯುವಪಡೆಯ ತಾಲ್ಲೂಕು ಅಧ್ಯಕ್ಷ ಟಿ.ಬಿ.ಮುನಿಕೃಷ್ಣ, ಅಂಬರೀಶ್.ಟಿ, ನಾಯಕರ ಯುವಸೇನೆಯ ಎ.ವೆಂಕಟೇಶ್, ಅಣ್ಣಯ್ಯಪ್ಪ, ಮುನಿಯಪ್ಪ, ಎಚ್.ಎಂ.ಮುರಳಿ ಹಾಜರಿದ್ದರು.
ನಗರ ಸೇರಿದಂತೆ ತಾಲ್ಲೂಕಿನಲ್ಲಿ ಶನಿವಾರ 21 ಮಂದಿಗೆ ಕೊರೊನಾ ಸೋಂಕು ತಗುಲಿದೆ.
ಶಿಡ್ಲಘಟ್ಟ ತಾಲ್ಲೂಕಿನ ಸುಗಟೂರು ಸರ್ಕಾರಿ ಹಿರಿಯ ಪ್ರಥಮಿಕ ಶಾಲೆಯ ಶಿಕ್ಷಕ ಎಚ್.ಎಸ್.ರುದ್ರೇಶಮೂರ್ತಿ ಅವರಿಗೆ ಬೆಂಗಳೂರಿನ ಗಾಂಧಿಭವನದ ಮೈಲಾರ ಮಹಾದೇವ ಸಭಾಂಗಣದಲ್ಲಿ ನಡೆದ ಗಾಂಧಿಜಯಂತಿ ಕಾರ್ಯಕ್ರಮದಲ್ಲಿ ಕೊರೋನಾ ವಾರಿಯರ್‍ಸ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಹಿರಿಯ ಗಾಂಧಿವಾದಿ ಡಾ.ಎಸ್.ಎನ್.ಸುಬ್ಬರಾವ್, ಎನ್‌ಎಸ್‌ಎಸ್ ಜಂಟಿ ಕಾರ್ಯದರ್ಶಿ ಡಾ.ಗಣನಾಥಶೆಟ್ಟಿಎಕ್ಕಾರು, ರಾ.ಸೇ.ಯೋ. ರಾಜ್ಯ ಕಾರ್ಯಕ್ರಮಾಧಿಕಾರಿ ಡಾ.ಪೂರ್ಣಿಮಾಜೋಗಿ ಹಾಜರಿದ್ದರು
CB Lots: 554
Qty: 28944 Kgs
Max: 300
Min: 151
Avg: 250
BV Lots: 06
Qty: 575 Kgs
Max: 261
Min: 220
Avg: 244
ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಭೂ ಸುದಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ಖಾಸಗೀಕರಣ, ಮಸೂದೆ ಇವುಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವುದರಿಂದ ಕೃಷಿಕರ ಮೇಲೆ ಮರಣ ಶಾಸನವನ್ನು ಬರೆಯಲು ಹೊರಟಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಅಧ್ಯಕ್ಷ ಎಸ್.ಎಂ.ರವಿಪ್ರಕಾಶ್ ಆರೋಪಿಸಿದರು.
ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳನ್ನೊಳಗೊಂಡ ಐಕ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ನಗರದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಉಪವಾಸ ಸತ್ಯಾಗ್ರಹ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣೆ ಕಾಯಿದೆಯಿಂದ ದೇಶದಲ್ಲಿರುವ ಹಣವಂತರಿಗೆ ಅನುಕೂಲವಾಗಲಿದೆ. ಬಲಾಡ್ಯರ ಬಳಿಯಿರುವ ಕಪ್ಪು ಹಣವನ್ನು ತಂದು ಭೂಮಿಯ ಮೇಲೆ ಹಾಕಲು ಸರ್ಕಾರ ಅನುವು ಮಾಡಿಕೊಟ್ಟಿದೆ. ಈ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿರುವ ಕಪ್ಪುಹಣವನ್ನು ವಶಪಡಿಸಿಕೊಂಡು ಎಲ್ಲಾ ಜನರಿಗೂ ನೀಡುವ ಭರವಸೆ ನೀಡಿದ್ದರಾದರೂ ಇದೀಗ ಅದೇ ಕಪ್ಪು ಹಣವನ್ನು ಕಾರ್ಪೊರೇಟ್ ಸಂಸ್ಥೆಗಳ ಮೂಲಕ ವೈಟ್ ಮನಿ ಮಾಡಲು ಅನುವು ಮಾಡಿಕೊಟ್ಟಿದ್ದಾರೆ ಎಂದರು.
ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ (ಸಾಮೂಹಿಕ ನಾಯಕತ್ವ) ಯ ಜಿಲ್ಲಾಧ್ಯಕ್ಷ ಬೆಳ್ಳೂಟಿ ಮುನಿಕೆಂಪಣ್ಣ ಮಾತನಾಡಿ, ರೈತರ ಹೆಸರಿನಲ್ಲಿ ಪ್ರಮಾಣ ಮಾಡಿ ಅಧಿಕಾರ ಹಿಡಿದ ಯಡಿಯೂರಪ್ಪನವರು ಇಂದು ರೈತರ ಬೆನ್ನು ಮೂಳೆ ಮುರಿಯುವ ಕೆಲಸಕ್ಕೆ ಮುಂದಾಗುವ ಮೂಲಕ ತಾನು ರೈತರ ಪರ ಅಲ್ಲ, ಕಾರ್ಪೊರೇಟ್ ಪರ ಎಂಬುದನ್ನು ರುಜುವಾತು ಪಡಿಸಿಕೊಂಡಿದ್ದಾರೆ ಎಂದರು.
ಭೂ ಸುದಾರಣೆ ಕಾಯಿದೆ ಸೇರಿದಂತೆ ಎಪಿಎಂಸಿ ಕಾಯಿದೆ ತಿದ್ದಪಡಿ, ಬೆಸ್ಕಾಂ ಖಾಸಗೀರಣ ಮಾಡಿರುವುದನ್ನು ಸರ್ಕಾರ ಕೂಡಲೇ ಕೈಬಿಡಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್ ಕೆ.ಅರುಂಧತಿ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ರೈತ ಮುಖಂಡರಾದ ಪ್ರತೀಶ್, ಸಿ.ಬಿ.ಶ್ರೀನಿವಾಸ್, ಸತೀಶ್‌ಕುಮಾರ್, ಪ್ರಭಾಕರ್, ವಿ.ಮುನಿಯಪ್ಪ, ಮುದ್ದುರಾಜ್, ಅನಿತ ಹಾಜರಿದ್ದರು.
ನಗರ ಸೇರಿದಂತೆ ತಾಲ್ಲೂಕಿನಲ್ಲಿ ಶುಕ್ರವಾರ 10 ಮಂದಿಗೆ ಕೊರೊನಾ ಸೋಂಕು ತಗುಲಿದೆ.
ನಗರದ ತಾಲ್ಲೂಕು ಕಚೇರಿಯಲ್ಲಿ ಶುಕ್ರವಾರ ಗಾಂಧಿ ಜಯಂತಿ ಪ್ರಯುಕ್ತ ಗಾಂಧೀಜಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ತಹಶೀಲ್ದಾರ್ ಕೆ.ಆರುಂಧತಿ ಮಾತನಾಡಿದರು.
ಗಾಂಧಿಯವರ ಬದುಕೊಂದು ಶಾಂತಿ- ಹೋರಾಟಗಳ ಮಹಾಗಾಥೆ. ಸತ್ಯಕ್ಕಾಗಿ ನಿರಂತರ ಅನ್ವೇಷಣೆ ಎಂದು ಅವರು ತಿಳಿಸಿದರು.
ಗಾಂಧಿಯವರು ಅಹಿಂಸೆಯ ಮೂಲಕವೇ ಹೋರಾಟದ ನೇತೃತ್ವ ವಹಿಸಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಅವರ ಬದುಕು ಮತ್ತು ಹೋರಾಟ ನಮ್ಮೆಲ್ಲರಿಗೂ ಮಾದರಿ. ಸ್ವಚ್ಛತೆ, ಸ್ವಾವಲಂಬನೆಗಳ ಪ್ರತಿಪಾದಕರಾಗಿದ್ದ ಗಾಂಧೀಜಿಯವರ ಕನಸನ್ನು ನನಸು ಮಾಡುವ ಸಂಕಲ್ಪ ತೊಡೋಣ ಎಂದರು.
ಆಹಾರ ನಿರೀಕ್ಷಕಿ ಧನಲಕ್ಷ್ಮಿ , ನಾರಾಯಣಸ್ವಾಮಿ, ಪ್ರಶಾಂತ್, ಸೋಣ್ಣೆಗೌಡ ಹಾಜರಿದ್ದರು.
CB Lots: 380
Qty: 19511 Kgs
Max: 300
Min: 206
Avg: 262
BV Lots: NILL
ತಾಲ್ಲೂಕಿನಾದ್ಯಂತ ಕೊರೋನಾ ಪ್ರಕರಣಗಳು ಪ್ರತಿನಿತ್ಯ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸುವ ಜೊತೆಗೆ ಸಾಮಾಜಿಕ ಅಂತರ ಹಾಗೂ ಸ್ವಚ್ಚತೆ ಕಾಪಾಡಿಕೊಳ್ಳಬೇಕು ಎಂದು ತಹಶೀಲ್ದಾರ್ ಕೆ.ಅರುಂಧತಿ ತಿಳಿಸಿದರು.
ನಗರದ ತಾಲ್ಲೂಕು ಕಚೇರಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸರ್ಕಾರ ವಿಧಿಸಿದ್ದ ಲಾಕ್ ಡೌನ್ ಸಡಿಲಗೊಂಡ ಮಾತ್ರಕ್ಕೆ ಖಾಯಿಲೆ ಬರುವುದಿಲ್ಲ ಎಂಬ ಭಾವನೆಗೆ ಜನರು ಬಂದಿದ್ದು ವಿನಾಕಾರಣ ರಸ್ತೆಗಳಲ್ಲಿ ಓಡಾಡುವುದು, ಗುಂಪು ಗುಂಪಾಗಿ ಜನ ಸೇರುವಂತಹದ್ದನ್ನು ಮಾಡುತ್ತಿದ್ದಾರೆ. ಇದರಿಂದ ಪ್ರತಿನಿತ್ಯ ತಾಲೂಕಿನಲ್ಲಿ ಕೊರೋನಾ ಪಾಸಿಟೀವ್ ಪ್ರಕರಣಗಳು ಹೆಚ್ಚಾಗುತ್ತಿದೆ. ಮೃತ ಪಡುವವರ ಸಂಖ್ಯೆಯೂ ಹೆಚ್ಚುತ್ತಿದೆ. ಹಾಗಾಗಿ ಪ್ರತಿಯೊಬ್ಬರೂ ತಮ್ಮ ಆರೋಗ್ಯದ ದೃಷ್ಠಿಯಿಂದ ಮಾಸ್ಕ್ ಧರಿಸುವ ಜೊತೆಗೆ ಮನೆಗೆ ಹೋದ ತಕ್ಷಣ ಕೈ ತೊಳೆಯುವುದು ಇಲ್ಲವಾದಲ್ಲಿ ಸ್ಯಾನಿಟೈಸ್ ಮಾಡಿಕೊಳ್ಳಿ. ಇದರಿಂದ ನಿಮ್ಮ ಆರೋಗ್ಯವಷ್ಟೇ ಕಾಪಾಡುವುದಲ್ಲ, ಬದಲಿಗೆ ಸುತ್ತಲೂ ಇರುವ ಸಮಾಜದ ಸ್ವಾಸ್ಥ್ಯ ಕಾಪಾಡಿದಂತಾಗುತ್ತದೆ. ವಾಹನಸವಾರರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಇಲ್ಲವಾದಲ್ಲಿ ತಾಲ್ಲೂಕು ಆಡಳಿತದಿಂದ ದಂಡ ವಿಧಿಸುವ ಜೊತೆಗೆ ಪ್ರಕರಣ ದಾಖಲಿಸಲಾಗುವುದು. ಮುಖ್ಯವಾಗಿ ಪ್ರತಿಯೊಬ್ಬರೂ ಪ್ರತಿ 14 ದಿನಗಳಿಗೊಮ್ಮೆ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಗಂಟಲುದ್ರವ ಪರೀಕ್ಷೆ ಮಾಡಕೊಳ್ಳಬೇಕು ಎಂದರು.
ಕೋವಿಡ್ 19, ನೋಡಲ್ ಅಧಿಕಾರಿ ಶಿವಕುಮಾರ್ ಮಾತನಾಡಿ ಇತ್ತೀಚೆಗೆ ಜನರಲ್ಲಿ ಕೊರೋನಾ ಬರುತ್ತೆ ಹೋಗುತ್ತೆ ಎಂಬ ಭಾವನೆ ಬಂದು ಬಿಟ್ಟಿದೆ. ದಯವಿಟ್ಟು ಈ ಭಾವನೆ ಜನರು ಬಿಡಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸುವ ಜೊತೆಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದರಿಂದ ರೋಗ ಹರಡದಂತೆ ತಡೆಗಟ್ಟಬಹುದು.
ನಗರಸಭೆ ಪೌರಾಯುಕ್ತ ಶ್ರೀನಿವಾಸ್ ಮಾತನಾಡಿ, ಕೊರೋನಾ ಹರಡದಂತೆ ತಡೆಯಲು ಬೇಕಾದ ಅಗತ್ಯ ಕ್ರಮಗಳನ್ನು ನಗರಸಭೆ ಯಿಂದ ಕೈಗೊಂಡಿದೆ. ನಗರದಲ್ಲಿ ಗುಟ್ಕಾ, ಸಿಗರೇಟ್ ಮಾರುವ ಅಂಗಡಿಗಳ ಮೇಲೆ ದಾಳಿ ನಡೆಸಿ ದಂಡ ವಿಧಿಸುವ ಜೊತೆಗೆ ಮಾಸ್ಕ್ ಧರಿಸದೇ ಪ್ರಯಾಣಿಸುವ ವಾಹನ ಸವಾರರಿಗೆ ದಂಡ ವಿಧಿಸುವ ಕೆಲಸ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇದನ್ನು ಇನ್ನಷ್ಟು ಚುರುಕುಗೊಳಿಸುವ ಮೂಲಕ ಹೆಚ್ಚಿನ ದಂಡ ವಿಧಿಸಲಾಗುವುದು. ಹಾಗಾಗಿ ಪ್ರತಿಯೊಬ್ಬರೂ ಕೊರೋನಾ ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವ ಮೂಲಕ ತಾಲ್ಲೂಕು ಆಡಳಿತದ ಜೊತೆ ಸಹಕಾರ ನಿಡಬೇಕು ಎಂದರು.
ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್‌ಮೂರ್ತಿ, ನೋಡಲ್ ಅಧಿಕಾರಿ ಶಿವಕುಮಾರ್ ಹಾಜರಿದ್ದರು.
ನಗರ ಸೇರಿದಂತೆ ತಾಲ್ಲೂಕಿನಲ್ಲಿ ಗುರುವಾರ 12 ಮಂದಿಗೆ ಕೊರೊನಾ ಸೋಂಕು ತಗುಲಿದೆ.
CB Lots: 528
Qty: 26273 Kgs
Max: 323
Min: 170
Avg: 256
BV Lots: 08
Qty: 312 Kgs
Max: 366
Min: 225
Avg: 254
ತಾಲ್ಲೂಕಿನ ಕಾಚಹಳ್ಳಿ ಗ್ರಾಮದ ಪುರಾತನ ವೆಂಕಟರಮಣಸ್ವಾಮಿ ದೇವಾಲಯವನ್ನು ಜೀರ್ಣೋದ್ಧಾರಗೊಳಿಸಲಾಗಿದ್ದು, 48 ದಿನಗಳ ನಿತ್ಯ ಪೂಜೆಗಳ ನಂತರ ಬುಧವಾರ ಮಂಡಲ ಪೂಜೆ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಫೂಜಾ ಕಾರ್ಯಕ್ರಮಗಳು ನಡೆದವು.
ಸುಮಾರು 300 ರಿಂದ 400 ವರ್ಷಗಳಷ್ಟು ಹಳೆಯದಾದ ದೇವಾಲಯ ಶಿಥಿಲಗೊಂಡಿತ್ತು. ಗ್ರಾಮಸ್ಥರು ಹಾಗೂ ಮನೆದೇವರನ್ನಾಗಿ ಹೊಂದಿರುವ ಕುಲಬಾಂದವರು ಸೇರಿ ದೇವಾಲಯವನ್ನು ಜೀರ್ಣೋದ್ಧಾರಗೊಳಿಸಿದ್ದಾರೆ. ನೂತನ ಗರ್ಭಗುಡಿ, ಪ್ರಭಾವಳಿ, ಗೋಪುರ ನಿರ್ಮಿಸಲಾಗಿದೆ. 48 ದಿನಗಳ ಕಾಲ ಪೂಜಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾಚಹಳ್ಳಿ ಗ್ರಾಮದ ಪ್ರತಿಯೊಂದು ಮನೆಯವರೂ ಒಂದೊಂದು ದಿನದ ಪೂಜೆಯ ಜವಾಬ್ದಾರಿಯನ್ನು ಹೊತ್ತಿದ್ದರು.
ವಿವಿಧ ಹೋಮಗಳನ್ನು ನಡೆಸಲಾಯಿತು. ಉತ್ಸವ ಮೂರ್ತಿಗಳನ್ನು ಹಾಗೂ ದೀಪವನ್ನು ಹೊತ್ತ ಮಹಿಳೆಯರು ಮೆರವಣಿಗೆಯಲ್ಲಿ ಸಾಗಿ ಬಂದು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ದೇವರನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು.
ನೆರೆಹೊರೆಯ ಗ್ರಾಮಸ್ಥರು, ಯುವ ಸಮೂಹ ಹಾಗೂ ಮನೆದೇವರನ್ನಾಗಿ ಹೊಂದಿರುವ ಸೇವಾಕರ್ತರು ಪೂಜೆಯಲ್ಲಿ ಭಾಗವಹಿಸಿದ್ದರು.
ನಗರದಲ್ಲಿ ಕೊರೋನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ನಗರಸಭೆಯ ಅಧಿಕಾರಿಗಳು ಮಾಸ್ಕ್ ಧರಿಸದೇ ವಾಹನದಲ್ಲಿ ಸಂಚರಿಸುವವರನ್ನು ತಡೆದು ದಂಡ ವಿಧಿಸುತ್ತಿದ್ದಾರೆ.
ಪೊಲೀಸ್ ಇಲಾಖೆಯ ಸಹಯೋಗದಲ್ಲಿ ನಗರಸಭೆ ಸಿಬ್ಬಂದಿ ನಗರದ ಬಸ್ ನಿಲ್ದಾಣ ಸೇರಿದಂತೆ ವಿವಿಧ ಮುಖ್ಯರಸ್ತೆಗಳಲ್ಲಿ ಮಾಸ್ಕ್ ಹಾಕದೇ ಸಂಚರಿಸುವ ದ್ವಿಚಕ್ರವಾಹನ ಸವಾರರನ್ನು ತಡೆದು 100 ರೂ ದಂಡ ವಿಧಿಸುವ ಜೊತೆಗೆ ಕೊರೊನಾ ಬಗ್ಗೆ ಜನರಲ್ಲಿ ಮತ್ತಷ್ಟು ಅರಿವು ಮೂಡಿಸುತ್ತಿದ್ದಾರೆ.
ನಗರಸಭೆ ಪರಿಸರ ಎಂಜಿನಿಯರ್ ವೈಶಾಲಿ ಮಾತನಾಡಿ, ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಜನರಿಗೆ ಕೊರೊನಾ ಬಗ್ಗೆ ಸಾಕಷ್ಟು ಅರಿವು ಮೂಡಿಸುತ್ತಿದ್ದರೂ ಅನವಶ್ಯಕವಾಗಿ ಮಾಸ್ಕ್ ಧರಿಸದೇ ಜನತೆ ರಸ್ತೆಗಳಲ್ಲಿ ಓಡಾಡುವುದು, ಅಂತರ ಕಾಯ್ದುಕೊಳ್ಳದಿರುವುದರಿಂದ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ದಯವಿಟ್ಟು ಎಲ್ಲರೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಜೊತೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು. ರಸ್ತೆಗಿಳಿಯುತ್ತಿದ್ದಂತೆ ಕಡ್ಡಾಯವಾಗಿ ಎಲ್ಲರೂ ಮಾಸ್ಕ್ ಹಾಕಿಕೊಳ್ಳಿ ಇದರಿಂದ ಕೊರೊನಾ ಹರಡದಂತೆ ತಡೆಗಟ್ಟಲು ಸಹಕಾರಿಯಾಗುತ್ತದೆ.
ನಾವು ಅಧಿಕಾರಿಗಳು ಸಾರ್ವಜನಿಕರ ಸುರಕ್ಷತೆಗೆ. ಸೋಂಕು ಬರದಂತೆ ಕಾಪಾಡಲು ನಾವು ಹಗಲಿರುಳು ಶ್ರಮಿಸುತ್ತಿದ್ದೇವೆ. ಪೊಲೀಸ್, ಆರೋಗ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ನಿರಂತರವಾಗಿ ಅರಿವು ಮೂಡಿಸುತ್ತಿದ್ದಾರೆ. ಸಾರ್ವಜನಿಕರು ಇದನ್ನು ಅರ್ಥ ಮಾಡಿಕೊಳ್ಳಬೇಕು” ಎಂದರು.