2020-21 ಸಾಲಿನ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟವಾಗಿದ್ದು ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದಲ್ಲಿ ಶಿಕ್ಷಕರನ್ನು ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ.
ಕಿರಿಯ ಪ್ರಾಥಮಿಕ ಶಾಲಾ ವಿಭಾಗ
ಮಹಮ್ಮದ್ ಜಬೀವುಲ್ಲಾ ಸ.ಶಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಅಬಕವಾರಿಪಲ್ಲಿ, ಬಾಗೇಪಲ್ಲಿ ತಾ
ರಾಧಾಮಣಿ ಟಿ ಸ.ಶಿ ನೆಲಮಾಕನಹಳ್ಳಿ, ಚಿಕ್ಕಬಳ್ಳಾಪುರ ತಾ
ನಾಗರಾಜ ಎನ್ ಸ.ಶಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಾಂತಿನಗರ, ಚಿಂತಾಮಣಿ ತಾ
ಚಂದ್ರಕಲಾ ಡಿ ಪಿ ಸ.ಶಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ದ್ರೋಣಕುಂಟೆ, ಗೌರಿಬಿದನೂರು ತಾ
ರಾಜಶೇಖರರೆಡ್ಡಿ ಸ.ಶಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮರವೇನಹಳ್ಳಿ, ಗುಡಿಬಂಡೆ ತಾ
ಮನೋರ್ ಮಣಿ ಸ.ಶಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಿರೇಬಲ್ಲ, ಶಿಡ್ಲಘಟ್ಟ ತಾ
ಹಿರಿಯ ಪ್ರಾಥಮಿಕ ಶಾಲಾ ವಿಭಾಗ
ರಾಮರೆಡ್ಡಿ ಸಿ ಸ.ಶಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಚೆಪಲ್ಲಿ, ಬಾಗೇಪಲ್ಲಿ ತಾ
ಲಕ್ಷ್ಮೀನಾರಾಯಣ ಎನ್ ಸ.ಶಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಾಯನಹಳ್ಳಿ, ಚಿಕ್ಕಬಳ್ಳಾಪುರ ತಾ
ಶ್ರೀನಿವಾಸ ಬ ಮು ಶಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಟ್ಲಹಳ್ಳಿ, ಚಿಂತಾಮಣಿ ತಾ
ಸುಜಾತ ಸ.ಶಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಾದೇನಹಳ್ಳಿ, ಗೌರಿಬಿದನೂರು ತಾ
ಅಶ್ವತ್ಥಪ್ಪ ಸ.ಶಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವರ್ಲಕೊಂಡ, ಗುಡಿಬಂಡೆ ತಾ
ದಾವೂದ್ ಪಾಷಾ ಎಸ್ ಸ.ಶಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುತ್ತೂರು, ಶಿಡ್ಲಘಟ್ಟ ತಾ
ಪ್ರೌಢಶಾಲಾ ವಿಭಾಗ
ಕುಮಾರ್ ಎನ್ ಆರ್ ಸ.ಶಿ ಸರ್ಕಾರಿ ಪ್ರೌಢಶಾಲೆ ಬಿಳ್ಳೂರು, ಬಾಗೇಪಲ್ಲಿ ತಾ
ಸಂತೋಷ್ ಎನ್ ಆರ್ ಚಿತ್ರಕಲಾ ಶಿಕ್ಷಕರು ಸರ್ಕಾರಿ ಪ್ರೌಢಶಾಲೆ ದಿಬ್ಬೂರು, ಚಿಕ್ಕಬಳ್ಳಾಪುರ ತಾ
ಸತ್ಯಭಾಮ ಮು.ಶಿ ಸರ್ಕಾರಿ ಪ್ರೌಢಶಾಲೆ ಮುರುಗಮಲ್ಲ, ಚಿಂತಾಮಣಿ ತಾ
ಪವನ್ ಕುಮಾರ್ ಹೆಚ್ ಎನ್ ಸ.ಶಿ ಸರ್ಕಾರಿ ಪ್ರೌಢಶಾಲೆ ನಕ್ಕಲಹಳ್ಳಿ, ಗೌರಿಬಿದನೂರು ತಾ
ಶಶಿಕಲಾ ಡಿ ದೈಹಿಕ ಶಿಕ್ಷಣ ಶಿಕ್ಷಕರು ಸರ್ಕಾರಿ ಪ್ರೌಢಶಾಲೆ ಚೆಂಡೂರು, ಗುಡಿಬಂಡೆ ತಾ
ಮಾಲತಿ ಎಸ್ ಸ.ಶಿ ಸರ್ಕಾರಿ ಪ್ರೌಢಶಾಲೆ ತುಮ್ಮನಹಳ್ಳಿ, ಶಿಡ್ಲಘಟ್ಟ ತಾ
ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರಿಗೆ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆಯಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಎಸ್. ಜಿ. ನಾಗೇಶ್, (ಉಪನಿರ್ದೇಶಕರು – ಆಡಳಿತ ಸಾರ್ವಜನಿಕ ಶಿಕ್ಷಣ ಇಲಾಖೆ, ಚಿಕ್ಕಬಳ್ಳಾಪುರ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಶಿಡ್ಲಘಟ್ಟ ನಗರದ ಆಗ್ನೇಯ ದಿಕ್ಕಿನಲ್ಲಿರುವ “ಗೌಡನ ಕೆರೆ”ಗೆ 480 ವರ್ಷಗಳ ಇತಿಹಾಸವಿದೆ. ಶಿಡ್ಲಘಟ್ಟ ನಗರದ ನಿರ್ಮಾತೃ ಹಲಸೂರಮ್ಮನ ಮಗ ಶಿವನೇಗೌಡ ಈ ಕೆರೆಯನ್ನು ಕಟ್ಟಿಸಿದ್ದರಿಂದಾಗಿ ಇದಕ್ಕೆ “ಗೌಡನ ಕೆರೆ” ಎಂಬ ಹೆಸರು ಬಂತೆಂದು ದಾಖಲಾಗಿದೆ. “ಗೌಡನ ಕೆರೆ” ಸರಿಸುಮಾರು 99 ಹೆಕ್ಟೇರ್ ವಿಸ್ತೀರ್ಣ ಹೊಂದಿದ್ದು, ಸುತ್ತಮುತ್ತ ನೂರಾರು ಹೆಕ್ಟೇರ್ ಪ್ರದೇಶಕ್ಕೆ ನೀರುಣಿಸುವ ಅವಕಾಶವಿದೆ. ಈ ಕೆರೆಯಲ್ಲಿ ನೀರು ಸಂಗ್ರಹಗೊಂಡರೆ ನಗರಕ್ಕೆ ನೀರು ಸರಬರಾಜು ಮಾಡುವ ಹಲವಾರು ಕೊಳವೆ ಬಾವಿಗಳು ಹಾಗೂ ಸುತ್ತಲಿನ ಗ್ರಾಮಗಳ ಅಂತರ್ಜಲದ ಮಟ್ಟ ಹೆಚ್ಚಾಗುತ್ತದೆ. ಆದರೆ, ದಶಕಗಳಿಂದಲೂ ಮಳೆಯ ಕೊರತೆಯಿಂದ ಕೆರೆಗೆ ನೀರು ಬಾರದೆ ಯಥೇಚ್ಛವಾಗಿ ಜಾಲಿಗಿಡಗಳು ಬೆಳೆದಿವೆ. ಕಾಲಕಾಲಕ್ಕೆ ಇವುಗಳನ್ನು ತೆರವು ಮಾಡದ ಪರಿಣಾಮ ಇಡೀ ಕೆರೆಯನ್ನೇ ಜಾಲಿ ಗಿಡಗಳು ಆಕ್ರಮಿಸಿವೆ.
ಅರಣ್ಯ ಇಲಾಖೆಗೆ ಸೇರಿದ ಕೆರೆ ಎಚ್.ಎನ್. ವ್ಯಾಲಿ ನೀರು ಹರಿದು ಬರುವ ನಮ್ಮ ತಾಲ್ಲೂಕಿನ ಅಮ್ಮನ ಕೆರೆ ಮತ್ತು ಭದ್ರನ ಕೆರೆಯಲ್ಲಿ ಜಾಲಿ ಮರಗಳನ್ನು ತೆರವು ಮಾಡಲು ಮುಂದಾದಾಗ ಅರಣ್ಯ ಇಲಾಖೆಯವರು ತಡೆಯೊಡ್ಡಿ, ಕೇಸ್ ದಾಖಲಿಸಿದ್ದಾರೆ. ಗೌಡನ ಕೆರೆಯು ಡೀಮ್ಡ್ ಅರಣ್ಯಕ್ಕೆ ಸೇರಿರುವುದರಿಂದ ಜಾಲಿ ಮರಗಳನ್ನು ತೆರವು ಮಾಡಲು ಆಗುತ್ತಿಲ್ಲ. -ಭಕ್ತರಹಳ್ಳಿ ಬೈರೇಗೌಡ, ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ
ಪ್ರತಿ ವರ್ಷ ಬೀಳುವ ಅಲ್ಪಸ್ವಲ್ಪ ಮಳೆಗೆ ಕೆರೆಯ ಕೆಲ ಗುಂಡಿಗಳಿಗೆ ನೀರು ತುಂಬುತ್ತವಾದರೂ ಕೆರೆಯಲ್ಲಿ ಜಾಲಿ ಮರಗಳು ಪೊದೆಗಳಂತೆ ಇರುವುದರಿಂದ ಜಾನುವಾರುಗಳು ಕೆರೆಗೆ ಹೋಗಿ ನೀರು ಕುಡಿಯಲಾಗದ ಸ್ಥಿತಿ ಏರ್ಪಟ್ಟಿದೆ. ಅಪ್ಪಿತಪ್ಪಿ ಜಾನುವಾರುಗಳು ಕೆರೆಗೆ ಇಳಿದರೆ ಕೆರೆಯಿಂದ ವಾಪಸ್ಸು ಬರುತ್ತವೆ ಎನ್ನುವ ನಂಬಿಕೆ ಇಲ್ಲದಾಗಿದೆ. ಒಂದೆಡೆ ಇತಿಹಾಸ ಪ್ರಸಿದ್ಧ “ಗೌಡನ ಕೆರೆ” ಈಗ ಜಾಲಿಗಿಡಗಳ ಕಾರುಬಾರಾಗಿದ್ದು ಕೆರೆ ಒಳಗೆ ಮನುಷ್ಯರಿರಲಿ ಜಾನುವಾರುಗಳೂ ಸಹ ಹೋಗದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದರೆ, ಮತ್ತೊಂದೆಡೆ ಒತ್ತುವರಿಗೆ ಈಡಾಗಿ ತನ್ನ ವಿಸ್ತೀರ್ಣವನ್ನು ಕಳೆದುಕೊಳ್ಳುತ್ತಿದೆ. ಕೆರೆ ಈಗ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ತುತ್ತಾಗಿದೆ. ಪರಿಣಾಮ ಕೆರೆಯ ತುಂಬ ಹೆಮ್ಮರವಾಗಿ ಜಾಲಿ ಗಿಡಗಳು ಬೆಳೆದು ಕೆರೆಯ ಅಸ್ಥಿತ್ವವನ್ನೇ ಅಣಕ ಮಾಡುತ್ತಿದೆ. ಇದೇನು ಕೆರೆಯೋ ಅಥವಾ ಜಾಲಿ ಗಿಡಗಳ ವನವೋ ಎಂಬ ಅನುಮಾನ ಕಾಡುವಂತಿದೆ. ಸಣ್ಣ ನೀರಾವರಿ ಇಲಾಖೆಯಿಂದ ಅದು ಹೇಗೋ ತಪ್ಪಿ ಹೋಗಿ ಡೀಮ್ಡ್ ಅರಣ್ಯಕ್ಕೆ ಸೇರಿಕೊಂಡಿದೆ. ಆದರೆ ಅರಣ್ಯ ಇಲಾಖೆಯವರು ಒತ್ತುವರಿ ತೆರವಿಗೂ ಮುಂದಾಗದೆ, ಜಾಲಿ ಮರಗಳನ್ನೂ ತೆಗೆಯದೆ ಕೆರೆ ನುರುಪಯುಕ್ತವಾಗಿದೆ.
ಒತ್ತುವರಿಯ ತೆರವು ಮಾಡುತ್ತಿಲ್ಲ ಶಿಡ್ಲಘಟ್ಟ ತಾಲ್ಲೂಕಿನ ಭದ್ರನ ಕೆರೆಯನ್ನು ನಾಲ್ಕು ವರ್ಷದ ಹಿಂದೆಯೇ ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆ ಜಂಟಿಯಾಗಿ ಒತ್ತುವರಿಯನ್ನು ತೆರವು ಮಾಡಿದ್ದರು. ಆದರೆ ನಗರಕ್ಕೆ ಅಂಟಿಕೊಂಡಂತಿರುವ ಗೌಡನ ಕೆರೆಯ ಒತ್ತುವರಿ ಮಾತ್ರ ತೆರವುಗೊಳಿಸಿಲ್ಲ. ಗೌಡನ ಕೆರೆಯನ್ನು ಹಲವಾರು ಮಂದಿ ಪ್ರಮುಖರೇ ಒತ್ತುವರಿ ಮಾಡಿಕೊಂಡಿದ್ದಾರೆ. ನಗರದ ಅಂಚಿನಲ್ಲಿರುವುದರಿಂದ ಇಲ್ಲಿ ಭೂಮಿಯ ಬೆಲೆ ಹೆಚ್ಚಿದೆ. ಕಳೆದ ನಾಲ್ಕು ತಹಶೀಲ್ದಾರ್ ಗಳಿಗೆ ರೈತ ಸಂಘದಿಂದ ಮನವಿ ಸಲ್ಲಿಸಿದ್ದರೂ ಒತ್ತುವರಿ ತೆರವು ಮಾಡುತ್ತಿಲ್ಲ. -ರವಿಪ್ರಕಾಶ್, ರೈತ ಸಂಘ (ಪುಟ್ಟಣ್ಣಯ್ಯ ಬಣ) ತಾಲ್ಲೂಕು ಅಧ್ಯಕ್ಷ
MGNREGA (ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆ)ಯಡಿ ಸೆಪ್ಟೆಂಬರ್ ತಿಂಗಳಿನಲ್ಲಿ ಸೋಕ್ ಪಿಟ್ (ಬಚ್ಚಲ ಗುಂಡಿ), ಪೌಷ್ಟಿಕ ತೋಟ ಹಾಗೂ ಅಣಬೆ ಬೇಸಾಯ ಸಮುದಾಯ ಶೆಡ್ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಇಓ ಬಿ.ಶಿವಕುಮಾರ್ ತಿಳಿಸಿದರು. ತಾಲ್ಲೂಕಿನ 28 ಗ್ರಾಮ ಪಂಚಾಯಿತಿಗಳಲ್ಲಿ ವೈಯಕ್ತಿಕ ಮತ್ತು ಸಮುದಾಯ ಸೋಕ್ ಪಿಟ್ ಕಾಮಗಾರಿಗಳನ್ನು ನಡೆಸಲು ಈಗಾಗಲೆ ಸೂಚನೆ ನೀಡಲಾಗಿದೆ. ವೈಯಕ್ತಿಕ ಬಚ್ಚಲ ಗುಂಡಿ ನಿರ್ಮಿಸಿಕೊಳ್ಳುವ ಫಲಾನುಭವಿಗಳಿಗೆ 17 ಸಾವಿರ ಸಹಾಯಧನವನ್ನು ನೀಡಲಾಗುತ್ತದೆ. ಅದೇ ರೀತಿ ಪೌಷ್ಟಿಕ ತೋಟ ನಿರ್ಮಾಣ ಮಾಡಲು ವೈಯಕ್ತಿಕವಾಗಿ 2,397 ರೂ ಮತ್ತು ಸಮುದಾಯದ ತೋಟ ನಿರ್ಮಾಣಕ್ಕೆ 37,391 ರೂ ಸಹಾಯಧನವನ್ನು ನೀಡಲಾಗುತ್ತದೆ. ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ಅಣಬೆ ಬೇಸಾಯ ಶೆಡ್ ನಿರ್ಮಿಸಿ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ ಅಣಬೆ ಬೇಸಾಯ ಕುರಿತು ತರಬೇತಿ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು. ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ ಮಾತನಾಡಿ ಜಿಲ್ಲಾ ಪಂಚಾಯಿತಿ ಸಿಇಒ ಸೂಚನೆ ಮತ್ತು ಮಾರ್ಗದರ್ಶನಗಳಲ್ಲಿ ತಾಲ್ಲೂಕಿನಾದ್ಯಂತ ನರೇಗಾ ಯೋಜನೆಯಡಿ ರೈತರಿಗೆ ಹೆಚ್ಚಿನ ಅನುಕೂಲ ಕಲ್ಪಿಸಲು ಸೆಪ್ಟೆಂಬರ್ ಮಾಹೆಯಲ್ಲಿ ಬಚ್ಚಲಗುಂಡಿ ಪೌಷ್ಟಿಕ ತೋಟ ನಿರ್ಮಾಣ ಮತ್ತು ಅಣಬೆ ಬೇಸಾಯ ಶೆಡ್‌ಗಳನ್ನು ನಿರ್ಮಿಸಲು ಅಭಿಯಾನ ನಡೆಸಲಾಗುವುದು. ರೈತರು ಮತ್ತು ನಾಗರಿಕರು ಈ ಸೌಲಭ್ಯವನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ಮನವಿ ಮಾಡಿದರು.
ನಗರದಲ್ಲಿ ದಲಿತ ಸಂಘರ್ಷ ಸಮಿತಿಯ ನಗರ ಶಾಖೆಯ ನೂತನ ಪದಾಧಿಕಾರಿಗಳನ್ನು ಗುರುವಾರ ಆಯ್ಕೆ ಮಾಡಿ ತಾಲ್ಲೂಕು ಸಂಚಾಲಕ ಎನ್.ಎ.ವೆಂಕಟೇಶ್ ಮಾತನಾಡಿದರು. ಸಮಾಜದಲ್ಲಿರುವ ಎಲ್ಲಾ ಜಾತಿ ಮತ್ತು ಧರ್ಮಗಳ ಬಡವರಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್‌ರವರು ಶ್ರಮಿಸಿದ್ದು, ಅವರು ತೋರಿಸಿಕೊಟ್ಟ ಮಾರ್ಗದಲ್ಲಿ ನಡೆದು ಆದರ್ಶ ಸಮಾಜವನ್ನು ನಿರ್ಮಿಬೇಕೆಂದು ನೂತನ ಪದಾಧಿಕಾರಿಗಳಿಗೆ ಸಲಹೆ ನೀಡಿದರು. ಸಮಾಜದಲ್ಲಿ ಶೋಷಿತರು ಮತ್ತು ತುಳಿತಕ್ಕೆ ಒಳಗಾದ ಜನರ ಧ್ವನಿಯಾಗಿ ದಲಿತ ಸಂಘರ್ಷ ಸಮಿತಿ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ತಿಳಿಸಿದರು. ನಗರ ಘಟಕದ ಸಂಚಾಲಕರಾಗಿ ನರೇಶ್‌ಬಾಬು, ಸಂಘಟನಾ ಸಂಚಾಲಕರಾಗಿ ಎನ್.ಮಂಜುನಾಥ್, ದೇವರಾಜು, ರಾಜು (ವಿಕ್ಟರ್), ಖಜಾಂಚಿ ಕೆ.ರವಿ, ಕಲಾ ಮಂಡಳಿ ಸಂಚಾಲಕರಾದ ವೆಂಕಟರಾಜು, ಸುಂದರ್‌ರಾಜು, ನರಸಿಂಹ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕೃಷ್ಣ, ಅಖಿಲ್, ಓಬಳೇಶ್, ರಾಮಚಂದ್ರ, ಆನಂದ್, ಮುರಳಿ, ಎಂ.ಮAಜುನಾಥ್, ಶ್ರೀನಿವಾಸ್, ಮುರಳಿ ಅವರನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ತಾಲೂಕು ಸಂಘಟನಾ ಸಂಚಾಲಕರಾದ ಟಿ.ಎ.ಚಲಪತಿ, ಹುಜುಗೂರು ವೆಂಕಟೇಶ್, ಲಕ್ಕೇನಹಳ್ಳಿ ವೆಂಕಟೇಶ್, ಚಿಕ್ಕದಾಸರಹಳ್ಳಿ ಜಿ.ವೆಂಕಟೇಶ್, ಮುನಿಕೃಷ್ಣಪ್ಪ, ದಲಿತ ಸಂಘರ್ಷ ಸಮಿತಿಯ ನಗರ ಸಂಚಾಲಕ ನರೇಶ್‌ಬಾಬು ಮತ್ತಿತರರು ಉಪಸ್ಥಿತರಿದ್ದರು.
ಸರ್ಕಾರ ರೈತರೇ ಬೆಳೆ ಸಮೀಕ್ಷೆ ನಡೆಸಲು ತಿಳಿಸಿದೆ. ಆದರೆ, ಎಂಟ್ರಿ ಮಾಡುವ ತಂತ್ರಜ್ಞಾನ ಕೊರತೆ ಮತ್ತು ಕೆಲ ರೈತರಲ್ಲಿ ಮೊಬೈಲ್ ಇಲ್ಲದಿರುವುದರಿಂದ ಬೆಳೆ ಸಮೀಕ್ಷೆ ಆಮೆಗತಿಯಲ್ಲಿ ಸಾಗುತ್ತಿದೆ. ಬೆಳೆ ಸಮೀಕ್ಷೆಯಂಥ ಸರ್ಕಾರಿ ಕಾರ್ಯಕ್ರಮ ಯಶಸ್ವಿಯಾಗಲು ರೈತ ಮುಖಂಡರ ಹಾಗೂ ಎಲ್ಲಾ ರೈತರ ಸಹಕಾರ ಅತ್ಯಗತ್ಯ ಎಂದು ತಹಶೀಲ್ದಾರ್ ಕೆ.ಅರುಂಧತಿ ತಿಳಿಸಿದರು.
ನಗರದ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ರೈತ ಮುಖಂಡರು, ಕೃಷಿ, ತೋಟಗಾರಿಕೆ, ರೇಷ್ಮೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಆಗಸ್ಟ್ 24ರವರೆಗೆ ರೈತರು ಎಂಟ್ರಿ ಮಾಡಬೇಕು ಎಂದು ಸರ್ಕಾರ ತಿಳಿಸಿತ್ತು. ಆದರೆ ಬೆರಳೆಣಿಕೆಯಷ್ಟು ಸಮೀಕ್ಷೆ ಆಗಿದ್ದರಿಂದ ಮತ್ತೆ ಒಂದು ತಿಂಗಳ ಗಡುವು ವಿಸ್ತರಿಸಿದೆ. ಈಗ ಸಂಪೂರ್ಣ ರೈತರ ಪಾಲ್ಗೊಳ್ಳುವಿಕೆ ಅತ್ಯಗತ್ಯವಾಗಿದೆ. ಗ್ರಾಮಗಳಲ್ಲಿ ಸಮೀಕ್ಷೆ ನಡೆಸಲು ಸ್ಥಳೀಯ ಪ್ರತಿನಿಧಿಗಳನ್ನು ನೇಮಿಸಿದ್ದು, ಅವರುಗಳು ಸಮೀಕ್ಷೆ ಕಾರ್ಯ ಆರಂಭಿಸಿದ್ದಾರೆ, ರೈತರು ಅವರಿಗೆ ಸಹಕರಿಸಬೇಕೆಂದರು.
ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್ ಮಾತನಾಡಿ, ತೋಟಗಾರಿಕೆ ಬೆಳೆಗಾರರಾದ ರೈತರು ತಮ್ಮ ಗ್ರಾಮಕ್ಕೆ ಆಯ್ಕೆಯಾದ ಸ್ಥಳೀಯ ಪ್ರತಿನಿಧಿ ಯಾರೆಂದು ಕಂದಾಯ, ಕೃಷಿ ಅಥವಾ ತೋಟಗಾರಿಕೆ ಇಲಾಖೆಗಳ ಅಧಿಕಾರಿಗಳ ಬಳಿ ಮಾಹಿತಿ ಪಡೆದುಕೊಳ್ಳಬೇಕು. ಸ್ಥಳೀಯ ಪ್ರತಿನಿಧಿ ಸಮೀಕ್ಷೆ ನಡೆಸಲು ಬಂದಾಗ ತಮ್ಮ ಜಮೀನಿನ ಎಲ್ಲಾ ಸರ್ವೆ ನಂಬರುಗಳು ಹಾಗೂ ಬೆಳೆಗಳ ಸಮೀಕ್ಷೆ ಮಾಡಿಸಿಕೊಳ್ಳಬೇಕು. ಇಲಾಖೆಗಳಲ್ಲಿ ಯೋಜನೆಗಳ ಸದುಪಯೋಗ ಪಡೆಯಲು ರೈತರಿಗೆ ಇದು ಅತ್ಯಂತ ಉಪಯುಕ್ತವಾದ ಸಮೀಕ್ಷೆ ಆಗಿದೆ. ಎಲ್ಲಾ ರೈತರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಕೋರಿದರು.
ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ರಾಮಕೃಷ್ಣಪ್ಪ ಮಾತನಾಡಿ, ಬೆಳೆ ಮಾಹಿತಿ ನೀಡದ ರೈತರಿಗೆ ಮುಂದಿನ ದಿನಗಳಲ್ಲಿ ಕೃಷಿ, ತೋಟಗಾರಿಕೆ ಇಲಾಖೆಯ ಸವಲತ್ತುಗಳು ಸಿಗುವುದಿಲ್ಲ. ಪ್ರಕೃತಿ ವಿಕೋಪದಡಿ ಪ್ರವಾಹ, ಬರಗಾಲ ಸಂದರ್ಭ ನೀಡುವ ನಷ್ಟ ಪರಿಹಾರ ವಿತರಣೆ, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು, ಬೆಳೆ ವಿಮಾ ಯೋಜನೆಯಡಿ ಬೆಳೆ ವಿವರ ಪರಿಶೀಲನೆಗೆ ಬೆಳೆ ಸಮೀಕ್ಷೆ ವರವಾಗಲಿದೆ.
ಸಾಂಖ್ಯಿಕ ಇಲಾಖೆ, ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಗಳ ಬೆಳೆ ವಿಸ್ತೀರ್ಣ ವರದಿ, ಬೆಳೆ ಕಟಾವು ಪ್ರಯೋಗ, ಬೆಳೆ ಮಾನದಂಡಕ್ಕೆ ಅನುಗುಣವಾಗಿ ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಗಳ ಫಲಾನುಭವಿ ಆಧರಿತ ಯೋಜನೆಗಳ ಅನುಷ್ಠಾನ, ಪಹಣಿಯಲ್ಲಿ ಬೆಳೆ ವಿವರ ದಾಖಲಿಸಬಹುದು ಎಂದು ಅವರು ವಿವರಿಸಿದರು.
ಸ್ಥಳೀಯ ಪ್ರತಿನಿಧಿಗಳಿಗೆ ಎಲ್ಲರ ಸರ್ವೆ ನಂಬರ್, ಸಬ್ ಸರ್ವೆ ನಂಬರ್ ತಿಳಿದಿರುವುದಿಲ್ಲ. ಇದರಿಂದ ಸಹಾಯಧನ ನೀಡಲು ಸಾಧ್ಯವಾಗುವುದಿಲ್ಲ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಲಾಭ ಪಡೆಯಲೂ ಇದು ಅಗತ್ಯ. ರೈತರು ಜಾಗೃತರಾಗಿ ಈ ಯೋಜನೆಯಲ್ಲಿ ಪಾಲ್ಗೊಳ್ಳುವಂತೆ ಅವರು ವಿನಂತಿಸಿದರು.
ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿ ಶ್ರೀನಿವಾಸ್, ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ, ತಾಲ್ಲೂಕು ಅಧ್ಯಕ್ಷ ತಾದೂರು ಮಂಜುನಾಥ್, ಎಸ್.ಎಂ.ನಾರಾಯಣಸ್ವಾಮಿ, ರೈತ ಸಂಘ (ಪುಟ್ಟಣ್ಣಯ್ಯ ಬಣ) ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ.ಎಸ್.ವೆಂಕಟಸ್ವಾಮಿ, ತಾಲ್ಲೂಕು ಅಧ್ಯಕ್ಷ ರವಿಪ್ರಕಾಶ್, ಚನ್ನೇಗೌಡ, ರವಿಕುಮಾರ್ ಹಾಜರಿದ್ದರು.
cooperation of the farmer leaders and all farmers is essential for the success of crop survey program
The government has asked farmers to conduct crop surveys. However, due to lack of entry technology and lack of mobile access for some farmers, crop surveys are moving on. Tehsildar K. Arundhati said the cooperation of the farmers leaders and all farmers is essential for the success of a government program such as a crop survey. She was speaking at a meeting of farmer leaders, agriculture, horticulture, silk and revenue department officials at Sidlaghatta town’s taluk office on Wednesday. The government had earlier said that farmers should complete survey by August 24. But a handful of surveys recorded and technical issues have once again made the deadline extended for a month (September 24). Involvement of the entire peasantry is essential. Local representatives have been appointed to survey the villages and they have begun the survey – Tehsildar said. Manjunath, assistant director of the agriculture department, said that “farmers who are horticultural growers should consult with the officials of the Revenue, Agriculture or Horticulture Departments to know local survey representatives for their village. When a survey representative visit for survey, all survey numbers and crops on their land should be surveyed. This is a very useful step for farmers to get access to schemes from the concerned departments. All farmers are requested to participate actively”. Agriculture Department Technical Officer Srinivas, State Secretary General of Farmers’ Union Bhaktarahalli Biregowda, Taluk President Tadoor Manjunath, SM Narayanaswamy, Farmers Association (Puttannayya faction) District Secretary General JS Venkataswamy, Taluk president Raviprakash, Channegowda, Ravikumar were present in the meeting.
“ವಿಶ್ವ ಸೊಳ್ಳೆ ದಿನ” ದ ಅಂಗವಾಗಿ ಮಂಗಳವಾರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ವತಿಯಿಂದ ಜಾಥಾಗೆ ಚಾಲನೆ ನೀಡಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ ಮಾತನಾಡಿದರು. ಜೈವಿಕ ವಿಧಾನವನ್ನು ನಾವೀಗ ಹೆಚ್ಚು ಅಳವಡಿಸಿಕೊಂಡು ಸೊಳ್ಳೆಯನ್ನು ನಿಯಂತ್ರಿಸಬೇಕಿದೆ. ಸೊಳ್ಳೆಗಳಿಂದ ಹರಡುವ ಡೆಂಗ್ಯು, ಚಿಕುಂಗುನ್ಯಾ ರೋಗಗಳ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆ ಸೊಳ್ಳೆಗಳ ಲಾರ್ವ ತಿನ್ನುವ ಗಪ್ಪಿ ಮತ್ತು ಗಂಬೂಸಿಯಾ ಮೀನುಗಳನ್ನು ಸಮಸ್ಯಾತ್ಮಕ ಗ್ರಾಮಗಳಲ್ಲಿ ವಿತರಿಸಲು ಕ್ರಮ ಕೈಗೊಂಡಿದ್ದೇವೆ ಎಂದು ಅವರು ತಿಳಿಸಿದರು. ಮಾರಣಾಂತಿಕ ಕಾಯಿಲೆಗಳಿಗೆ ದಾರಿ ಮಾಡುವ ಮಹಾಮಾರಿ ಸೊಳ್ಳೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿವರ್ಷ ಆ. 20ರ ದಿನವನ್ನು ಸೊಳ್ಳೆ ದಿನವಾಗಿ ಆಚರಿಸಲಾಗುತ್ತದೆ. ಮಲೇರಿಯಾ, ಹಳದಿ ಜ್ವರ, ಡೆಂಘಿ, ಎನ್ಸಾಫಲಿಟಿಸ್ (ಮೆದುಳಿನ ಉರಿಯೂತ), ಆನೆ ಕಾಲು ರೋಗ ಸೇರಿದಂತೆ ನೂರಕ್ಕೂ ಹೆಚ್ಚು ಮಾರಕ ರೋಗಗಳನ್ನು ಈ ಹೆಣ್ಣು ಸೊಳ್ಳೆಗಳು ಒಬ್ಬರಿಂದ ಒಬ್ಬರಿಗೆ ಹರಡುತ್ತಾ ಸಾವಿಗೆ ಕಾರಣವಾಗುತ್ತವೆ. ಡೆಂಗ್ಯೂ ನಿಯಂತ್ರಣ ಹಾಗೂ ಜಾಗೃತಿ ಮನೆ ಮಾತಾಗಬೇಕು. ಸಾರ್ವಜನಿಕರು ಅನೈರ್ಮಲ್ಯ ಕುರಿತು ಬೇರೆಯವರನ್ನು ದೂರುವ ಮೊದಲು, ತಮ್ಮ ತಮ್ಮ ಮನೆಯ ಸುತ್ತಮುತ್ತಲಿನ ಪರಿಸರ ನೈರ್ಮಲ್ಯ ಕಾಪಾಡಲು ಮುಂದಾಗುವ ಮೂಲಕ ಸೊಳ್ಳೆಗಳ ನಿಯಂತ್ರಣಕ್ಕೆ ಸಹಕರಿಸಬೇಕು ಎಂದರು. ವೈದ್ಯಾಧಿಕಾರಿ ಡಾ.ವಾಣಿ ಮಾತನಾಡಿ, ನೀರು ಅಮೂಲ್ಯವಾದದ್ದು. ನೀರನ್ನು ಸಂಗ್ರಹಿಸುವಾಗ ಸಂಗ್ರಹಗಾರಗಳು, ತೊಟ್ಟಿಗಳನ್ನು ಚೆನ್ನಾಗಿ ತೊಳೆದು ನೀರು ಸಂಗ್ರಹಿಸಿಡಬೇಕು. ಸೊಳ್ಳೆಗಳು ಮರಿ ಮಾಡದಂತೆ ಸಂಗ್ರಹಗಾರಗಳನ್ನು ಮುಚ್ಚಬೇಕು. ಕಾಯಿಲೆ ಬಂದ ನಂತರ ಒದ್ದಾಡುವ ಬದಲು, ರೋಗವೇ ಬಾರದಹಾಗೆ ಮುನ್ನೆಚ್ಚರಿಕೆ ವಹಿಸಿ. ಜ್ವರ ಸಮೀಕ್ಷೆ, ಲಾರ್ವಾ ಸಮೀಕ್ಷೆ ಪ್ರತೀ ದಿನವೂ ನಡೆಯುತ್ತಿದೆ. ಮನೆಗಳಲ್ಲಿ ಲಾರ್ವಾ ಸಾಂದ್ರತೆ ಹೆಚ್ಚು ಇರುವುದರಿಂದ ಈ ಗ್ರಾಮದ ಮನೆಗಳಿಗೆ ಲಾರ್ವಾಹಾರಿ ಗಪ್ಪಿ ಮತ್ತು ಗಂಬೂಸಿಯಾ ಮೀನು ವಿತರಿಸಲಾಗುತ್ತಿದೆ. ಸಾರ್ವಜನಿಕರು ಸಹಕರಿಸಿ ಎಂದರು. ಡಾ.ಸೊನಾಲಿ, ಆಸ್ಪತ್ರೆಯ ಸಿಬ್ಬಂದಿ ಲೋಕೇಶ್, ವಿಜಯಮ್ಮ, ಮುನಿಲಕ್ಷ್ಮಮ್ಮ, ಅಕ್ಕಲರೆಡ್ಡಿ, ನಂದಿನಿ, ಗೀತಾ, ಜಾಯಿದಾ ಹಾಜರಿದ್ದರು.
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮೂಲಕ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಮಳೆ ನೀರು ಸಂರಕ್ಷಣೆ ಮತ್ತು ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾಗಿರುವ ಕಾಮಗಾರಿಗಳನ್ನು ನಡೆಸಿರುವುದಕ್ಕೆ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಮಹಾದೇವನ್ ಮೆಚ್ಚುಗೆ ವ್ಯಕ್ತಪಡಿಸಿದರು.
ಉದ್ಯೋಗಖಾತ್ರಿ ಯೋಜನೆಯಡಿ ತಾಲ್ಲೂಕಿನ ಕುಂಬಿಗಾನಹಳ್ಳಿ ಗ್ರಾಮ ಪಂಚಾಯಿತಿಯ ಹೇಮಾರ‍್ಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ನಿರ್ಮಿಸಿರುವ ಗ್ರಾಮೀಣ ಉದ್ಯಾನವನ ಹಾಗೂ ಹಾರಡಿ ಗ್ರಾಮದಲ್ಲಿ ನಿರ್ಮಿಸುತ್ತಿರುವ ಕುಂಟೆ ಕಾಮಗಾರಿಯನ್ನು ಸೋಮವಾರ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶದಲ್ಲಿ ಮೂಲಭೂತ ಸೌಲಭ್ಯಗಳನ್ನು ವೃದ್ಧಿಗೊಳಿಸಲು ಮತ್ತು ಅಂರ್ತಜಲಮಟ್ಟ ವೃದ್ಧಿಗೊಳಿಸುವ ಕಾಮಗಾರಿಗಳನ್ನು ನಡೆಸಲಾಗಿದೆ. ಇದೇ ರೀತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿರುವ ಗ್ರಂಥಾಲಯಗಳನ್ನು ಹೈಟೆಕ್ ಮಾದರಿಯಲ್ಲಿ ಅಭಿವೃದ್ಧಿಗೊಳಿಸಿ ಜ್ಞಾನರ್ಜನೆ ಕೇಂದ್ರಗಳಾಗಿ ಪರಿವರ್ತಿಸಬೇಕೆಂದು ಸೂಚಿಸಿದರು.
ತಾಲ್ಲೂಕಿನಲ್ಲಿ ಕೊರೊನಾ ಸೋಂಕು ತಡೆಗಟ್ಟಲು ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಿ. ಕೊರೊನಾ ನಿಯಂತ್ರಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆರಂಭಿಸಿರುವ ಸಹಾಯವಾಣಿ ಕೇಂದ್ರಗಳಿಂದ ಹೆಚ್ಚಿನ ಅನುಕೂಲ ಕಲ್ಪಿಸಬೇಕು. ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಲು ವ್ಯಾಪಕವಾಗಿ ಜಾಗೃತಿ ಮೂಡಿಸಬೇಕೆಂದರು.
ಜಿಲ್ಲಾ ಪಂಚಾಯಿತಿ ಸಿಇಓ ಫೌಝೀಯಾ ತರುನ್ನುಮ್ ಮಾತನಾಡಿ, ಜಿಲ್ಲೆಯಲ್ಲಿ 38 ಸರ್ಕಾರಿ ಪ್ರೌಢಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳನ್ನು ಮಾದರಿಯಾಗಿ ಅಭಿವೃದ್ಧಿಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಖಾಸಗಿ ಶಾಲೆಗಿಂತಲೂ ಸರ್ಕಾರಿ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳನ್ನು ಚೆನ್ನಾಗಿ ಅಭಿವೃದ್ಧಿಗೊಳಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಗಿರಿಜಾ ಶಂಕರ್, ಶಿಡ್ಲಘಟ್ಟ ತಾಲ್ಲೂಕು ಪಂಚಾಯಿತಿ ಇಓ ಬಿ.ಶಿವಕುಮಾರ್, ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಚಂದ್ರಪ್ಪ, ಕುಂಬಿಗಾನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಓ ನೈನಾ ನಿಖತ್ ಆರಾ ಹಾಜರಿದ್ದರು.
Uma Mahadevan, IAS,. Principal Secretary, Rural Development & Panchayat Raj, commended the rain water conservation and educational development works completed under Mahatma Gandhi National Rural Employment Guarantee Scheme in Sidlaghatta Taluk. She spoke on Monday to media about the rural park built in the premises of the Hemarlahalli Primary Health Center of the Kumbiganahalli Gram Panchayat in Haradi village of Sidalghatta Taluk under the Udyoga Khatri scheme. Principal Secretary said infrastructural projects have been carried out In rural areas and suggested that libraries at Gram Panchayat level should be developed in high tech mode and converted into knowledge centers. In order to combat coronavirus pandemic Secretary suggested to government’s guidelines should be widely publicized in order to raise awareness among people and control of the virus should be facilitated by help of centers starting at the village panchayat level. Chikkaballapur District Zilla Panchayat CEO Fauzia Tarunnum spoke on the occasion and said “The government has taken steps to develop 38 government high schools and Anganwadi centers in the district. Government schools and Anganwadi centers are better developed than private schools.” Zilla Panchayat Planning Director Girija Shankar, Sidlaghatta Taluk Panchayat EO B. Shivakumar, MNREGA Project Assistant Director Chandrappa and Kumbiganahalli Village Panchayat PDO Naina Nikhat Ara were also present on the occasion.
ತಾಲ್ಲೂಕಿನ ಹಂಡಿಗನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಪ್ಪೇಗೌಡನಹಳ್ಳಿ ಗ್ರಾಮದಲ್ಲಿ ಸೋಮವಾರ ಅವರು ಗ್ರಾಮಸ್ಥರನ್ನು ಪರೀಕ್ಷಿಸಿ ಆಶಾ ಕಾರ್ಯಕರ್ತೆ ಪ್ರೇಮಾ ಮಾತನಾಡಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂದು ಹಳ್ಳಿಯನ್ನೂ ಒಂದೊಂದು ದಿನ ಆಯ್ಕೆ ಮಾಡಿಕೊಂಡು, ದಿನಕ್ಕೆ ಇಪ್ಪತ್ತು ಮಂದಿಯ ಬಿಪಿ, ಆಮ್ಲಜನಕ ಪ್ರಮಾಣ ಮತ್ತು ದೇಹದ ಉಷ್ಣಾಂಶವನ್ನು ಪರೀಕ್ಷೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಪಲ್ಸ್ ಆಕ್ಸಿಮೀಟರ್ ರಕ್ತದಲ್ಲಿನ ಆಮ್ಲಜನಕ ಮಟ್ಟವನ್ನು ಅಳೆಯಲು ಬಳಸುತ್ತಾರೆ. ಆಕ್ಸಿಜನ್ ಮಟ್ಟ 94ಕ್ಕಿಂತ ಕಡಿಮೆ ಇದ್ದರೆ ಕೂಡಲೇ ವೈದ್ಯಕೀಯ ನೆರವು ಪಡೆಯಬೇಕು. ಈ ಯಂತ್ರವನ್ನು ಸಾಮಾನ್ಯವಾಗಿ ಯಾವುದೇ ವ್ಯಕ್ತಿಯ ಬೆರಳ ತುದಿಗೆ, ಕಿವಿಗೆ ಕ್ಲಿಪ್ ಮಾಡಿದರೆ ಆ ವ್ಯಕ್ತಿಯ ದೇಹದಲ್ಲಿರುವ ರಕ್ತದ ಆಕ್ಸಿಜನ್ ಸ್ಯಾಚುರೇಶನ್ ಹಾಗೂ ನಾಡಿ ಬಡಿತವನ್ನು ಯಂತ್ರದ ಮೇಲಿರುವ ಬೋರ್ಡ್‌ನಲ್ಲಿ ತತ್‌ಕ್ಷಣ ನೋಡಬಹುದು ಎಂದರು.
ಗ್ರಾಮಸ್ಥರನ್ನು ಪರೀಕ್ಷಿಸುವಾಗ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ವಾಟರ್ ಮ್ಯಾನ್ ನಮಗೆ ಸಹಕಾರ ನೀಡುತ್ತಾರೆ. ವರದಿಯನ್ನು ನಾವು ಸಂಬಂಧಪಟ್ಟ ಆರೋಗ್ಯ ಇಲಾಖೆಯ ವೈದ್ಯರಿಗೆ ನೀಡುತ್ತೇವೆ ಎಂದರು.
ಹೊಸಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಂಗಮಕೋಟೆ ಕ್ರಾಸ್ ನಲ್ಲಿರುವ ಅಂಗಡಿಗಳ ಮುಂದೆ ಸ್ವಚ್ಚ ಭಾರತ ಯೋಜನೆ ಅಡಿಯಲ್ಲಿ ಕಸ ವಿಲೇವಾರಿ ಮಾಡುವ ಬಗ್ಗೆ ಅಂಗಡಿ ಮಾಲೀಕರಿಗೆ ಅರಿವು ಮೂಡಿಸಿ ತಾಲ್ಲೂಕು ಪಂಚಾಯಿತಿ ಇಒ ಶಿವಕುಮಾರ್ ಮಾತನಾಡಿದರು.
ನಮ್ಮ ಅಂಗಡಿ, ನಮ್ಮ ಮನೆ, ನಮ್ಮ ಬೀದಿ, ನಮ್ಮ ಗ್ರಾಮ ಎಂಬ ಭಾವನೆ ಎಲ್ಲರಲ್ಲೂ ಮೂಡಬೇಕು. ಯಾರೋ ಬಂದು ಸ್ವಚ್ಛಗೊಳಿಸುತ್ತಾರೆ ಎಂಬ ಧೋರಣೆ ಬಿಟ್ಟು, ನಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡಲ್ಲಿ ಇಡೀ ಗ್ರಾಮ ಹಾಗೆಯೇ ಗ್ರಾಮ ಪಂಚಾಯಿತಿ ಸುಂದರವಾಗಿರುತ್ತದೆ ಎಂದು ಅವರು ತಿಳಿಸಿದರು.
ತಮ್ಮ ಅಂಗಡಿಗಳ ಮುಂದೆ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ. ಅಂಗಡಿ ಮತ್ತು ಮನೆಗಳ ಸುತ್ತಮುತ್ತ ಸ್ಚಚ್ಛತೆ ಕಾಪಾಡಿಕೊಳ್ಳುವುದು ನಿಮ್ಮೆಲ್ಲರ ಕರ್ತವ್ಯ. ಒಂದೊಂದು ಗ್ರಾಮದಲ್ಲೂ ಈ ರೀತಿಯ ಸ್ವಚ್ಛತಾ ಕಾರ್ಯ ಆಂದೋಲನದಂತೆ ಪ್ರಾರಂಭವಾದರೆ ನಾಡೆಲ್ಲಾ ಸ್ವಚ್ಛವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಇ.ಓ.ಶಿವಕುಮಾರ್ ಗ್ರಾಮ ಪಂಚಾಯಿತಿ ಸದಸ್ಯರು, ಅಧಿಕಾರಿಗಳೊಂದಿಗೆ ತಾವೇ ಸ್ವಚ್ಛತೆಯ ಕಾರ್ಯವನ್ನು ನಡೆಸಿದರು. ಅವರೊಂದಿಗೆ ಗ್ರಾಮಸ್ಥರೂ ಕೈಜೋಡಿಸಿದರು. ನಂತರ ಗ್ರಾಮ ಪಂಚಾಯಿತಿ ವತಿಯಿಂದ ಇಒ ಅವರನ್ನು ಸನ್ಮಾನಿಸಲಾಯಿತು.
ಗ್ರಾಮ ಪಂಚಾಯಿತಿ ಪಿ.ಡಿ ಓ ಮಧು, ಗ್ರಾಮ ಪಂಚಾಯತಿ ಅಧ್ಯಕ್ಷ ಶ್ರೀನಿವಾಸ್, ಉಪಾದ್ಯಕ್ಷೆ ಸುಜಾತ ನರಸಿಂಹ ಮೂರ್ತಿ, ಸದಸ್ಯರಾದ ಮಂಜುನಾಥಗೌಡ, ಸುರೇಶ್, ರಾಜಶೇಖರ್, ಎಸ್.ವೈ.ನಾರಾಯಣಸ್ವಾಮಿ, ನರಸಿಂಹಮೂರ್ತಿ, ಮೀನಾಕ್ಷಿಬಸಪ್ಪ, ಸುಶೀಲಮ್ಮನಾರಾಯಣಸ್ವಾಮಿ, ರಜಿನಿ, ಯಶೋದಮ್ಮ ಹಾಜರಿದ್ದರು.