Home Blog Page 321

Sidlaghatta Cocoon Market Watch – 14/08/2020

0

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 14/08/2020

CB Lots: 599
Qty: 31170 Kgs
Max: 360
Min: 215
Avg: 306
BV Lots: 04
Qty: 259 Kgs
Max: 375
Min: 205
AVG: 234
 

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

ಕೊರೊನಾ ಆತಂಕದ ನಡುವೆಯೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸಾಧನೆ

0

ಎಸ್ಸೆಸ್ಸೆಲ್ಸಿ ಪರೀಕ್ಷೆ ಕೊರೊನಾ ಕಾರಣದಿಂದ ನಡೆಯುತ್ತದೆಯೋ ಇಲ್ಲವೋ ಎಂಬ ಆತಂಕದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಇದ್ದರು. ಆದರೂ ಶಿಕ್ಷಣ ಇಲಾಖೆಯ ಸಾಂಘಿಕ ಪ್ರಯತ್ನದಿಂದ ಪರೀಕ್ಷೆಗಳು ಯಶಸ್ವಿಯಾಗಿ ನಡೆಯಿತಲ್ಲದೆ, ನಮ್ಮ ಜಿಲ್ಲೆ ಮೊದಲ ಸ್ಥಾನವನ್ನು ಪಡೆಯುವಂತಾಯಿತು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಶ್ರೀನಿವಾಸ್ ತಿಳಿಸಿದರು.

 ಎಸ್ಸೆಸ್ಸೆಲ್ಸಿ ಪರೀಕ್ಷೆ ತಾಲ್ಲೂಕಿಗೆ ಮೊದಲಿಗಲಾಗಿರುವ ಬಿಜಿಎಸ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಎಂ.ಎಸ್.ಮಹಿಮಾ (ಶೇ 99.2)  ಅವರ ಮನೆಗೆ ಗುರುವಾರ ತೆರಳಿ ಅಭಿನಂದಿಸಿದ ಅವರು ಮಾತನಾಡಿದರು.

 ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳು ಇತರರಿಗೆ ಪ್ರೇರಣೆಯಾಗಲಿ ಹಾಗೂ ಅವರನ್ನು ಬೆನ್ನು ತಟ್ಟಿ ಅಭಿನಂದಿಸುವ ಮೂಲಕ ಅವರು ಭವಿಷ್ಯದಲ್ಲಿ ಇನ್ನಷ್ಟು ಸಾಧನೆ ಮಾಡುವಂತಾಗಲಿ ಎಂಬುದು ಶಿಕ್ಷಣ ಇಲಾಖೆಯ ಆಶಯ. ಅದಕ್ಕಾಗಿ ಸಾಧಕ ವಿದ್ಯಾರ್ಥಿಯ ಮನೆಗೆ ತೆರಳಿ ವಿದ್ಯಾರ್ಥಿ, ಪೋಷಕರು ಹಾಗೂ ಶಿಕ್ಷಕರನ್ನು ಅಭಿನಂದಿಸುತ್ತಿರುವುದಾಗಿ ಹೇಳಿದರು.

 ವಿದ್ಯಾರ್ಥಿನಿ ಎಂ.ಎಸ್.ಮಹಿಮಾ ಮಾತನಾಡಿ, ಅಂದಂದಿನ ಪಾಠಗಳನ್ನು ಅಂದಂದೇ ಓದಿಕೊಳ್ಳುತ್ತಿದ್ದೆ. ಕೊರೊನಾ ಲಾಕ್ ಡೌನ್ ಸಮಯದಲ್ಲಿ ಶಿಕ್ಷಕರು ವ್ಯಾಟ್ಸಪ್ ಗ್ರೂಪ್ ಮಾಡಿ ನಮ್ಮ ಓದಿಗೆ ನೆರವಾದರು. ಆನ್ ಲೈನ್ ಮೂಲಕ ಪರೀಕ್ಷೆಗಳನ್ನು ನಡೆಸಿದರು. ಮಾನಸಿಕವಾಗಿ ಕುಗ್ಗದಂತೆ ನೋಡಿಕೊಂಡರು. ಮುಂದೆ ಪಿಯುಸಿಯನ್ನು ಬಿಜಿಎಸ್ ಸಂಸ್ಥೆಯಲ್ಲೇ ಮುಂದುವರೆಸುವೆನು ಹಾಗೂ ವೈದ್ಯೆಯಾಗುವ ಕನಸಿದೆ ಎಂದು ನುಡಿದಳು.

 ಬಿಜಿಎಸ್ ಶಾಲೆಯ ಪ್ರಾಂಶುಪಾಲ ಮಹದೇವಯ್ಯ, ಶಿಕ್ಷಕರಾದ ಪ್ರಸನ್ನಕುಮಾರ್, ಎಚ್‌.ವೈ.ನಾಗೇಶ್, ರವಿಕುಮಾರ್, ಮಂಜುನಾಥ್ ಹಾಗೂ ಪೋಷಕರಾದ ಕುಸುಮಾ, ಸತೀಶ್ ಬಾಬು ಹಾಜರಿದ್ದರು.

 

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

ರೈತರ ಕ್ರಾಪ್ ಸರ್ವೇ ಆಪ್ ಸದುಪಯೋಗಪಡಿಸಿಕೊಳ್ಳಿ (ಮೊಬೈಲ್ ಆಪ್ ಡೌನ್ಲೋಡ್ ಲಿಂಕ್ ನೀಡಿದೆ)

0

ನಗರದ ತಾಲ್ಲೂಕು ಕಚೇರಿಯಲ್ಲಿ ಬೆಳೆ ಸಮೀಕ್ಷೆಗೆ ಸಂಬಂಧಿಸಿದಂತೆ ಕೈಗೊಂಡಿರುವ ಸಿದ್ದತೆಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ರೈತರು ಯಾವ ಬೆಳೆ ಬೆಳೆದಿದ್ದಾರೆ ಅದರ ನಿಖರ ಮಾಹಿತಿಯನ್ನು ಅಪಡೇಟ್ ಮಾಡಲು ಸರ್ಕಾರ ಆಪ್ ಪರಿಚಯಿಸಿದ್ದು ರೈತರು ಈ ಅವಕಾಶವನ್ನು ಸದುಪಯೋಗ ಮಾಡಿಕೊಂಡು ಸಹಕರಿಸಬೇಕೆಂದು ತಹಶೀಲ್ದಾರ್ ಕೆ.ಅರುಂಧತಿ ಕೋರಿದರು.

2020-21 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಜಿಲ್ಲಾದ್ಯಂತ ಆಗಸ್ಟ್  11 ರಿಂದ ಆರಂಭವಾಗಿದ್ದು, ರೈತರು ಸ್ವತಃ ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆ ವಿವರಗಳನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ತಾಲ್ಲೂಕಿನ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ದಾಖಲಿಸಲು “ರೈತರ ಬೆಳೆ ಸಮೀಕ್ಷೆ” ಎಂಬ ಹೆಸರಿನ ಮೊಬೈಲ್ ಆಪ್‌ನ್ನು ಗೋಗಲ್ ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಹೇಳಿದರು.

 ತಾಲ್ಲೂಕು ಕೃಷಿ ಸಹಾಯಕ ನಿರ್ದೇಶಕ ಡಾ.ಎಸ್.ವಿ.ಮಂಜುನಾಥ್ ಮಾತನಾಡಿ, ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಮೊಬೈಲ್ ಆಪ್‌ಅನ್ನು ಡೌನ್‌ಲೋಡ್ ಮಾಡಿಕೊಂಡು ಬಳಿಕ ರೈತರ ಹೆಸರು, ಮೊಬೈಲ್ ಸಂಖ್ಯೆ ಮತ್ತು  ಓಟಿಪಿ  ಸಂಖ್ಯೆಯನ್ನು ನಮೂದಿಸಿ ರೈತರು ತಮ್ಮ ನೋಂದಣಿ ಮಾಡಿಕೊಳ್ಳಬೇಕು ಎಂದರು.

 ಮೊಬೈಲ್ ಆಪ್‌ನಲ್ಲಿ

  1. ಮೊದಲು ಮಾಸ್ಟರ್ ವಿವರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು ನಂತರ
  2. ತಮ್ಮ ಜಮೀನಿನ ಸರ್ವೆ ನಂಬರ್‌ಗಳನ್ನು ಆಪ್‌ಗೆ ಸೇರಿಸಿಕೊಂಡು ಮುಂದಿನ ಹಂತದಲ್ಲಿ
  3. ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರಗಳನ್ನು ದಾಖಲಿಸಬೇಕು. ಈ ಹಂತದಲ್ಲಿ ರೈತರು ತಮ್ಮ ಜಮೀನಿನಲ್ಲಿ ಪಾಳು ಬಿದ್ದಿರುವ ಪ್ರದೇಶ, ಈಗಾಗಲೇ ಕಟಾವಾದ ಪ್ರದೇಶ, ಕೃಷಿಯೇತರ ಬಳಕೆಗೆ (ಕೊಟ್ಟಿಗೆ, ಕೃಷಿ, ಹೊಂಡ,ಮನೆ ಇತರೆ) ಬಳಕೆಯಾದ ಪ್ರದೇಶ ವಿವರಗಳನ್ನು ಸಹಾ ದಾಖಲಿಸುವ ಜೊತೆಗೆ ರೈತರು ತಾವು ಬೆಳೆದ ಪ್ರತಿ ಬೆಳೆಯ ವಿಸ್ತೀರ್ಣದ ಜೊತೆಗೆ 20 ಛಾಯಾ ಚಿತ್ರಗಳನ್ನು ತೆಗೆದು ಅಪ್ಲೋಡ್ ಮಾಡಬೇಕಾಗಿರುತ್ತದೆ ಎಂದರು.

 ಅಪ್ಲೋಡ್ ಮಾಡಲಾದ ಮಾಹಿತಿಯನ್ನು ಪ್ರತಿ ಗ್ರಾಮಕ್ಕೆ ನೇಮಿಸಲಾದ ಸರ್ಕಾರಿ ಅಧಿಕಾರಿಗಳು (ಮೇಲ್ವಿಚಾರಕರು) ಪರಿಶೀಲಿಸಿ ಅನುಮೋದಿಸುತ್ತಾರೆ. ರೈತರು ಸ್ವತಃ ತಮ್ಮ ಬೆಳೆ ವಿವರಗಳನ್ನು ಆಗಸ್ಟ್ 24 ರೊಳಗೆ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.

 ಸಭೆಯಲ್ಲಿ ಕೃಷಿ ಇಲಾಖೆಯ ಅಧಿಕಾರಿ ಶ್ರೀನಿವಾಸ್, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್, ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ರಾಮಕೃಷ್ಣಪ್ಪ ಹಾಗೂ ವಿವಿಧ ಕಂದಾಯ ವೃತ್ತದ ಗ್ರಾಮ ಲೆಕ್ಕಾಧಿಕಾರಿಗಳು, ರಾಜಸ್ವ ನಿರೀಕ್ಷಕರು ಹಾಜರಿದ್ದರು.

ಮೊಬೈಲ್ ಆಪ್‌ ಇಲ್ಲಿ Download ಮಾಡಬಹುದು

https://play.google.com/store/apps/details?id=com.csk.KariffTPKfarmer.cropsurvey
 
 

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಗುರುವಾರ 5 ಕೊರೊನ ಪಾಸಿಟಿವ್ ಪ್ರಕರಣ ದಾಖಲು

0

ತಾಲ್ಲೂಕಿನಲ್ಲಿ August 13 ಗುರುವಾರ 5 ಜನರಿಗೆ ಕೊರೊನಾ ಸೋಂಕು ತಗುಲಿದೆ. ತಾಲ್ಲೂಕಿನ

  1. ಯಣ್ಣಂಗೂರು – 30(ಗಂ)
  2. J ಕುರುಬರಹಳ್ಳಿ – 28(ಗಂ)
  3. ಜಂಗಮಕೋಟೆ – 33(ಹೆಂ), 14(ಹೆಂ), 12(ಗಂ) ಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

Sidlaghatta Cocoon Market Watch – 13/08/2020

0

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 13/08/2020

CB Lots: 457
Qty:. 24719 kgs
Max: 370
Min: 240
Avg: 317
BV Lots: 12
Qty: 660 Kgs
Max: 335
Min: 162
AVG:. 306
 

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

ನಮ್ಮೂರ ಭೂಮಿ ನಮಗಿರಲಿ ಅನ್ಯರಿಗಲ್ಲ – ಅಂಚೆಪತ್ರ ಚಳುವಳಿಗೆ ಚಾಲನೆ

0

ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡಿರುವುದನ್ನು ವಿರೋಧಿಸಿ ನಮ್ಮೂರ ಭೂಮಿ ನಮಗಿರಲಿ ಅನ್ಯರಿಗಲ್ಲವೆಂಬ ಘೋಷಣೆಯೊಂದಿಗೆ ರೈತ ಸಂಘ ಹಾಗೂ ಹಸಿರುಸೇನೆಯ(ಜಿ.ಜಿ.ಹಳ್ಳಿ ಬಿ.ನಾರಾಯಣಸ್ವಾಮಿ ಬಣದ) ಕಾರ್ಯಕರ್ತರು ನಗರದ ತಾಲೂಕು ಕಚೇರಿ ಮುಂದೆ ಕಾಯ್ದೆಯ ಪ್ರತಿಯನ್ನು ಸುಡುವ ಮೂಲಕ ಬುಧವಾರ ಆಕ್ರೋಶ ವ್ಯಕ್ತಪಡಿಸಿದರು.
ರೈತ ಸಂಘ ಹಾಗೂ ಹಸಿರುಸೇನೆಯ ರಾಜ್ಯಾಧ್ಯಕ್ಷ ಜಿ.ಜಿ.ಹಳ್ಳಿ ಬಿ.ನಾರಾಯಣಸ್ವಾಮಿ ನೇತೃತ್ವದಲ್ಲಿ ತಾಲೂಕು ಕಚೇರಿ ಮುಂದೆ ರೈತರು ಪ್ರತಿಭಟನೆ ನಡೆಸಿ ರೈತರಿಗೆ ಮಾರಕವಾಗಿರುವ ಭೂ ಸುಧಾರಣೆ ತಿದ್ದುಪಡಿ ಕಾಯ್ದೆಯ ಪ್ರತಿಗಳನ್ನು ಅಗ್ನಿಸ್ಪರ್ಶ ಮಾಡಿ ಈ ಕಾಯ್ದೆಯನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ಅಂಚೆಪತ್ರ ಚಳುವಳಿಗೆ ಚಾಲನೆ ನೀಡಿದರು.
ರೈತ ಸಂಘ ಹಾಗೂ ಹಸಿರುಸೇನೆಯ ರಾಜ್ಯಾಧ್ಯಕ್ಷ ಜಿ.ಜಿ.ಹಳ್ಳಿ ಬಿ.ನಾರಾಯಣಸ್ವಾಮಿ ಮಾತನಾಡಿ ರಾಜ್ಯ ರಾಜ್ಯ ಅವೈಜ್ಞಾನಿಕವಾಗಿ ಹಾಗೂ ರೈತರಿಗೆ ಮಾರಕವಾಗಿರುವ ಭೂ ಸುಧಾರಣೆ ಕಾಯ್ದೆಯನ್ನು ಜಾರಿಗೊಳಿಸಿದರೆ ಸಿಎಂ ಬಿ.ಎಸ್.ಯಡಿಯೂರಪ್ಪ ಅಧಿಕಾರವನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ ಅವರು ರೈತರ ಮಕ್ಕಳು ಎಂದು ಮತ ಪಡೆದುಕೊಂಡು ಶಾಸಕರಾಗಿರುವ ೨೨೪ ಜನ ಏಕೆ ಮೌನವಾಗಿದ್ದಾರೆ ಎಂದು ಪ್ರಶ್ನಿಸಿದರು.
ರೈತರ-ಕಾರ್ಮಿಕ ಮತ್ತು ಜನಪರವಾಗಿರುವ ಜನಪ್ರತಿನಿಧಿಗಳನ್ನು ನಾವು ಆಯ್ಕೆ ಮಾಡಿದರೆ ಸರ್ಕಾರ ಜಾರಿಗೊಳಿಸಲು ಹೊರಟಿರುವ ಭೂಸುಧಾರಣಾ ಕಾಯ್ದೆ ವಿರುಧ್ಧ ವಿಧಾನಸಭೆಯ ಒಳಗೆ ಮತ್ತು ಹೊರಗೆ ಧ್ವನಿ ಎತ್ತುವ ಕೆಲಸವನ್ನು ಮಾಡುತ್ತಿದ್ದರು ಎಂದರು.
ಸುಗ್ರೀವಾಜ್ಞೆಯ ಮುಖಾಂತರ ಅನೇಕ ತಿದ್ದುಪಡಿಗಳನ್ನು ತಂದು ರಾಜ್ಯಪಾಲರ ಸಹಿಯನ್ನೂ ಪಡೆದಿರುವುದು ರಾಜ್ಯದ ರೈತರನ್ನು, ಗ್ರಾಮೀಣ ಜನರನ್ನು ಮಾತ್ರವಲ್ಲ, ಇಡೀ ನಾಗರೀಕ ಸಮಾಜವನ್ನೇ ಬೆಚ್ಚಿ ಬೀಳಿಸಿದೆ. ಸಮಾನತೆಯ ಆಶಯವುಳ್ಳ ‘ಕರ್ನಾಟಕ ಭೂಸುಧಾರಣಾ ಕಾಯ್ದೆ’ ಕರ್ನಾಟಕದ ಹೆಮ್ಮೆಯ ಕಿರೀಟದಂತಿದ್ದು ಆದರೇ ಕಾಯ್ದೆಯಲ್ಲಿ ಅನೇಕ ತಿದ್ದುಪಡಿ ತಂದು ರೈತರು ಭೂಮಿ ಕಳೆದುಕೊಳ್ಳುವ ಅಪಾಯ ತಂದಿಟ್ಟು ಕಾರ್ಪೋರೇಟ್ ಕಂಪನಿಗಳಿಗೆ ಅನುಕೂಲ ಮಾಡಿಕೊಡಲು ಕಾಯ್ದಯನ್ನು ಜಾರಿಗೊಳಿಸಲು ಯಾವ ಕಾರಣಕ್ಕೂ ಬಿಡುವುದಿಲ್ಲ. ಇದರ ವಿರುಧ್ಧ ರಾಜ್ಯ-ಜಿಲ್ಲೆ-ತಾಲೂಕು-ಹೋಬಳಿ ಮತ್ತು ಪ್ರತಿ ಗ್ರಾಮ ಮಟ್ಟದಲ್ಲಿ ಹೋರಾಟ ನಡೆಸಿ ಸರ್ಕಾರದ ಕಣ್ಣು ತೆರೆಸುವ ಕೆಲಸವನ್ನು ಸಂಘಟನೆ ಮಾಡುತ್ತದೆ ಎಂದರು.
ತಹಸೀಲ್ದಾರ್ ಕೆ.ಅರುಂಧತಿ ಅವರಿಗೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಮನವಿ ಪತ್ರವನ್ನು ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ನಮ್ಮೂರ ಭೂಮಿ ನಮಗಿರಲಿ ಅನ್ಯರಿಗಲ್ಲ ಸಂಚಾಲಕ ಗಂಗಾಧರ್, ರೈತ ಸಂಘದ ಜಿಲ್ಲಾಧ್ಯಕ್ಷ ಯಣ್ಣೂರು ಬಸವರಾಜು, ತಾಲೂಕು ಅಧ್ಯಕ್ಷ ಟಿ.ಮಂಜುನಾಥ್, ಬಾಗೇಪಲ್ಲಿ ತಾಲೂಕು ಅಧ್ಯಕ್ಷ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣಗೌಡ, ಗೌರವಾಧ್ಯಕ್ಷ ಬೈರಪ್ಪ, ಯಣ್ಣೂರು ಎಂ.ಶ್ರೀನಿವಾಸ್, ಚಿಂತಾಮಣಿ ಸತ್ಯನಾರಾಯಣ, ಜಯರಾಂ ಮತ್ತಿತರರು ಉಪಸ್ಥಿತರಿದ್ದರು.

ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಬುಧವಾರ 4 ಕೊರೊನ ಪಾಸಿಟಿವ್ ಪ್ರಕರಣ ದಾಖಲು

0

ತಾಲ್ಲೂಕಿನಲ್ಲಿ August 12 ಬುಧವಾರ 4 ಜನರಿಗೆ ಕೊರೊನಾ ಸೋಂಕು ತಗುಲಿದೆ. ತಾಲ್ಲೂಕಿನ

  1. ಸಾದಲಿ – 60(ಹೆಂ)
  2. ಚೊಕ್ಕಂಡಹಳ್ಳಿ – 49(ಗಂ), 22(ಗಂ) ಮತ್ತು
  3. ನಗರದ ಆಜಾದ್ ನಗರದ – 40(ಗಂ) ಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

Sidlaghatta Cocoon Market Watch – 12/08/2020

0

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 12/08/2020

CB Lots: 440
Qty: 23347 Kgs
Max: 367
Min: 200
Avg: 320
BV Lots: 05
Qty: 290 Kgs
Max: 338
Min: 300
AVG: 332
 

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಮಂಗಳವಾರ 8 ಕೊರೊನ ಪಾಸಿಟಿವ್ ಪ್ರಕರಣ ದಾಖಲು

0

ತಾಲ್ಲೂಕಿನಲ್ಲಿ August 11 ಮಂಗಳವಾರ 8 ಜನರಿಗೆ ಕೊರೊನಾ ಸೋಂಕು ತಗುಲಿದೆ. ತಾಲ್ಲೂಕಿನ

  1. ಗ್ರಾಮಾಂತರ ಪೊಲೀಸ್ ಠಾಣೆ – 24(ಗಂ), 39(ಗಂ)
  2. ಮುನೇಶ್ವರ ಸ್ವಾಮಿ ದೇವಸ್ಥಾನ ಬಳಿ – 28(ಗಂ)
  3. ಯಣ್ಣಂಗೂರು – 45(ಹೆಂ)
  4. ಚೊಕ್ಕಂಡಹಳ್ಳಿ – 45(ಹೆಂ)
  5. ಮುತ್ತೂರು – 30(ಹೆಂ)
  6. ಮೇಲೂರು – 24(ಗಂ) ಮತ್ತು
  7. ಹಾರಡಿ – 55(ಗಂ) ಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

Sidlaghatta Cocoon Market Watch – 11/08/2020

0

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 11/08/2020

CB Lots: 344
Qty: 18395 kgs
Max: 352
Min: 250
Avg: 323
BV Lots: 01
Qty: 14 Kgs
Max: 350
Min: 350
AVG:. 350
 

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

ರೈತವಿರೋಧಿ ಕಾಯ್ದೆಗಳನ್ನು ರದ್ದುಪಡಿಸಲು ರೈತಸಂಘದಿಂದ ಆಗ್ರಹ

0

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮತ್ತು ರೈತವಿರೋಧಿ ಕಾಯ್ದೆಗಳನ್ನು ರದ್ದುಪಡಿಸಲು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸದಸ್ಯರು ಸೋಮವಾರ ಮುಖ್ಯಮಂತ್ರಿಗಳಿಗೆ ಮನವಿಯನ್ನು ಶಿರಸ್ತೆದಾರ್ ಮಂಜುನಾಥ್ ಅವರ ಮೂಲಕ ಸಲ್ಲಿಸಿದರು.

 ತಾವು ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದೇ ಕಂಗಾಲಾಗಿ ಶೇಕಡಾ 75 ರಷ್ಟು ರೈತರು ಇಂದು ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಹೈನುಗಾರಿಕೆಯನ್ನು ಉಪಕಸುಬಾಗಿ, ಕೆಲವೆಡೆ ಮುಖ್ಯ ಕಸುಬಾಗಿ ಅವಲಂಬಿದ್ದರೆ, ಅದಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಈ ಕಸುಬು ಕೂಡ ಬಿಡುವಂತಾಗಿದೆ. ರೈತರಿಗೆ ಅತ್ಯಗತ್ಯವಾದ ಭೂಮಿ, ನೀರು, ವಿದ್ಯುತ್ ಮತ್ತು ವೈಜ್ಞಾನಿಕ ಬೆಲೆಯನ್ನು ಕೊಡಲು ಎಲ್ಲಾ ಸರ್ಕಾರಗಳು ವಿಫಲವಾಗಿವೆ. ಕೊರೊನಾ ಬಂದು ಜನ ತತ್ತರಿಸುತ್ತಿರುವ ಹೊತ್ತಿನಲ್ಲಿ ಸರ್ಕಾರ ಭೂಸ್ವಾಧೀನ ಕಾಯ್ದೆ, ಭೂಸುಧಾರಣೆ ಕಾಯ್ದೆ, ಎ.ಪಿ.ಎಂ.ಸಿ ಮತ್ತು ಬೀಜ ಕಾಯ್ದೆಗಳಂತಹ ರೈತ ವಿರೋಧಿ ಕಾಯ್ದೆಗಳ ಮೂಲಕ ರೈತರ ಸರ್ವನಾಶ ಮಾಡಲು ಮುಂದಾಗಿದೆ. ರೈತರ ಕೃಷಿಯಲ್ಲಿ ಕಾರ್ಪೋರೇಟ್ ಕಂಪೆನಿಗಳಿಗೆ ಅವಕಾಶ ಮಾಡಿಕೊಡಬಾರದು ಎಂದು ಆಗ್ರಹಿಸಿದರು.

  ಎ.ಪಿ.ಎಂ.ಸಿ ಕಾಯ್ದೆ ತಿದ್ದುಪಡಿಯನ್ನು ಕೂಡಲೆ ವಾಪಸ್ ಪಡೆಯಬೇಕು. ಭೂಸುಧಾರಣೆ ತಿದ್ದುಪಡಿಯಿಂದ ಸಣ್ಣ ಮತ್ತು ಮಧ್ಯಮ ವರ್ಗದ ರೈತರು ತಮ್ಮ ಜಮೀನುಗಳನ್ನು ಕಳೆದುಕೊಳ್ಳುವರು. ಕೂಡಲೇ ಭೂಸುಧಾರಣೆ ತಿದ್ದುಪಡಿಯನ್ನು ವಾಪಸ್ಸು ಪಡೆಯಬೇಕು. ವಿದ್ಯುತ್ ಕಾಯ್ದೆ ತಿದ್ದುಪಡಿಯಿಂದ ರೈತರು ಕೃಷಿಯನ್ನೇ ಬಿಡಬೇಕಾಗುತ್ತದೆ. ತಕ್ಷಣ ಆ ಕಾಯ್ದೆಯನ್ನು ವಾಪಸ್ಸು ಪಡೆಯಬೇಕು. ಯಾವುದೇ ಕಾರಣಕ್ಕೂ ಬೀಜ ಹಕ್ಕು ರೈತನ ಕೈತಪ್ಪಬಾರದು. ಬೀಜ ಕಾಯ್ದೆ 2019, ಭೂಸ್ವಾಧೀನ ಕಾಯ್ದೆ  2019, ಅಗತ್ಯ ವಸ್ತುಗಳ ಕಾಯ್ದೆ ತಿದ್ದುಪಡಿ, ಮಾದರಿ ಭೂ ಮಸೂದೆ 2016 ಕೂಡಲೇ ವಾಪಸ್ಸು ಪಡೆಯಬೇಕು ಎಂದು ಒತ್ತಾಯಿಸಿದರು.

 ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಅಧ್ಯಕ್ಷ ತಾದೂರು ಮಂಜುನಾಥ್, ಉಪಾಧ್ಯಕ್ಷ ಮುನಿನಂಜಪ್ಪ, ಟಿ.ಕೃಷ್ಣಪ್ಪ, ಆರ್.ರಮೇಶ್, ಎಸ್.ಎಂ.ನಾರಾಯಣಸ್ವಾಮಿ, ವೇಣುಗೋಪಾಲ್, ರಾಮಕೃಷ್ಣಪ್ಪ, ರಾಮಚಂದ್ರಪ್ಪ, ಪಿ.ವಿ.ದೇವರಾಜ್, ಬೀರಪ್ಪ, ಅಶ್ವತ್ಥನಾರಾಯಣ, ಶ್ರೀಧರ್, ರವಿ ಹಾಜರಿದ್ದರು.

ಆಶಾಕಿರಣ ಅಂಧಮಕ್ಕಳ ಶಾಲೆಗೆ ಶೇ 100 ಫಲಿತಾಂಶ

0

ಶಿಡ್ಲಘಟ್ಟದ ಆಶಾಕಿರಣ ಅಂಧಮಕ್ಕಳ ಶಾಲೆಯ ಏಳು ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಎಲ್ಲರೂ ಉತ್ತೀರ್ಣರಾಗಿದ್ದಾರೆ. ಅವರಲ್ಲಿ

  • ಪವನ್ ಕುಮಾರ್ (ಶೇ 88.16),
  • ಎಚ್.ಸತೀಶ (ಶೇ 82.4),
  • ಪುಷ್ಪ (ಶೇ 82.08),
  • ವಿ.ಸುಮಾ (ಶೇ 79.2),
  • ಎಚ್.ಎಸ್.ರಂಜಿತ್ ಕುಮಾರ್ (ಶೇ 77.12),
  • ವಿ.ಬಾಲಕೃಷ್ಣ (ಶೇ 76),
  • ಕೆ.ಎನ್. ಹರ್ಷಿತ್ (ಶೇ 72.48) ಅಂಕಗಳನ್ನು ಗಳಿಸಿದ್ದಾರೆ.

 

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

ಎಸ್ಸೆಸ್ಸೆಲ್ಸಿ ಫಲಿತಾಂಶ – ರೈತ ಕುಟುಂಬದ ಹೆಣ್ಣುಮಕ್ಕಳು ಮೊದಲಿಗರು

0

ಎಸ್ಸೆಸ್ಸೆಲ್ಸಿ 2020 ಫಲಿತಾಂಶ ಪ್ರಕಟವಾಗಿದ್ದು ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಹೆಣ್ಣುಮಕ್ಕಳು ಮೊದಲ ನಾಲ್ಕು ಸ್ಥಾನಗಳನ್ನು ತಮ್ಮದಾಗಿಸಿಕೊಂಡು ಪಾರಮ್ಯ ಮೆರೆದಿದ್ದಾರೆ. ಶಿಕ್ಷಕರ ಮಗಳು ಬಿ.ಜಿ.ಎಸ್ ಶಾಲೆಯ ಮಹಿಮಾ (ಶೇ 99.2) ಪ್ರಥಮಳಾಗಿದ್ದರೆ, ರೈತರ ಮಕ್ಕಳಾದ ದ್ವಿತೀಯ ಸ್ಥಾನ ಪಡೆದಿರುವ ಚೇತನಾ ಶಾಲೆಯ ಟಿ.ಕೆ.ಜನನಿ (ಶೇ 98.72), ತೃತೀಯ ಸ್ಥಾನ ಪಡೆದಿರುವ ಬಿ.ಜಿ.ಎಸ್ ಶಾಲೆಯ ಅನೂಷಾ (ಶೇ 98.56), ಬಿ.ಜಿ.ಎಸ್ ಶಾಲೆಯ ಟಿ.ರಕ್ಷಿತಾ (ಶೇ 98.24) ಮತ್ತು ಬಿ.ಜಿ.ಎಸ್ ಶಾಲೆಯ ನೇಹಲ (ಶೇ 98.8) ಪಡೆದು ಸಾಧನೆ ಮಾಡಿದ್ದಾರೆ.

 ತಾಲ್ಲೂಕಿನ ಸರ್ಕಾರಿ ಶಾಲೆಗಳಲ್ಲಿ ಮೇಲೂರು, ಕುಂದಲಗುರ್ಕಿ ಮತ್ತು ಈ.ತಿಮ್ಮಸಂದ್ರ ಸರ್ಕಾರಿ ಪ್ರೌಢಶಾಲೆಗಳು ಹಾಗೂ ಕಿತ್ತೂರು ರಾಣಿ ಚನ್ನಮ್ಮ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಶೇಕಡಾ ನೂರರಷ್ಟು ಫಲಿತಾಂಶ ದಾಖಲಿಸಿವೆ. ಕುಂದಲಗುರ್ಕಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿ ಕೆ.ವಿ.ತೇಜಸ್ (ಶೇ 96.48) ಗಳಿಸಿ ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಗಳಲ್ಲಿ ಅತಿ ಹೆಚ್ಚು ಅಂಕಗಳಿಸಿರುವ ವಿದ್ಯಾರ್ಥಿಯಾಗಿದ್ದಾನೆ. ಕುಂದಲಗುರ್ಕಿ ಸರ್ಕಾರಿ ಪ್ರೌಢಶಾಲೆಯ ಕೆ.ಸಿ.ಪಲ್ಲವಿ (ಶೇ 93.44)  ಪಡೆದಿದ್ದಾಳೆ. ನಗರದ ಆಶಾಕಿರಣ ಅಂಧಮಕ್ಕಳ ಶಾಲೆಯ ಏಳು ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಎಲ್ಲರೂ ಉತ್ತೀರ್ಣರಾಗಿದ್ದಾರೆ. ಅವರಲ್ಲಿ ಪವನ್ ಕುಮಾರ್ (ಶೇ 88.16), ಎಚ್.ಸತೀಶ (ಶೇ 82.4), ಪುಷ್ಪ (ಶೇ 82.08) ಅಂಕಗಳನ್ನು ಗಳಿಸಿದ್ದಾರೆ.

 

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಸೋಮವಾರ 2 ಕೊರೊನ ಪಾಸಿಟಿವ್ ಪ್ರಕರಣ ದಾಖಲು

0

ತಾಲ್ಲೂಕಿನಲ್ಲಿ August 10 ಸೋಮವಾರ ಇಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ತಾಲ್ಲೂಕಿನ

  1. H ಕ್ರಾಸ್ 60 (ಗಂ) ಮತ್ತು
  2. ಕನ್ನಪ್ಪನಹಳ್ಳಿ 27 (ಹೆಂ) ಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

Sidlaghatta Cocoon Market Watch – 10/08/2020

0

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 10/08/2020

CB Lots: 358
Qty: 18549 kgs
Max: 335
Min: 226
Avg: 305
BV Lots: 09
Qty: 263 Kgs
Max: 328
Min: 321
AVG:. 324
 

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

ಕ್ಯಾಪ್ಸಿಕಂ ಬೆಳೆಗೆ ಸೋಂಕು

0

ಕೋವಿಡ್ ಸಂಕಷ್ಟದಲ್ಲಿರುವ ರೈತರಿಗೆ ಮತ್ತೊಂದು ಆಘಾತ ಉಂಟಾಗಿದ್ದು, ತಾಲ್ಲೂಕಿನ ಚೀಮನಹಳ್ಳಿ ಗ್ರಾಮದ  ಗೋಪಾಲ ಎಂಬ ರೈತರ ಕ್ಯಾಪ್ಸಿಕಂ ಬೆಳೆಗೆ ರೋಗ ಆವರಿಸಿದೆ.

 ಲಕ್ಷಾಂತರ ಬಂಡವಾಳ ಹೂಡಿ ಬೆಳೆದಿರುವ ಕ್ಯಾಪ್ಸಿಕಮ್ (ದೊಣ್ಣೆ ಮೆಣಸಿನಕಾಯಿ) ಬೆಳೆಗೆ ಸೋಂಕು ಕಾಣಿಸಿಕೊಂಡಿದ್ದು ರೈತರು ಆತಂಕಗೊಂಡಿದ್ದು, ಹೂಡಿರುವ‌ ಬಂಡವಾಳ ಕೈ ಗಟುಕುವುದೇ ಎಂದು ಚಿಂತಿತರಾಗಿದ್ದಾರೆ.

 ಈಗಾಗಲೇ ಕರೋನಾ ಲಾಕ್ಡೌನ್ ಅವಧಿಯಲ್ಲಿ ಬೆಳೆದಿದ್ದ ಕ್ಯಾಪ್ಸಿಕಾಮ್ ಬೆಳೆಗೆ ಸಾಗಾಣಿಕೆಗೆ ಅವಕಾಶ ಇಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದ ರೈತ ಗೋಪಾಲ್ ಇದೀಗ ವಿಚಿತ್ರ ರೋಗ ಬಂದಿದ್ದು ಅದರಿಂದಾಗಿ ಗಾಯದ ಮೇಲೆ ಬರೆ ಪರಿಸ್ಥಿತಿ ನಿರ್ಮಾಣವಾಗಿದೆ ಎಂದಿದ್ದಾರೆ.

 ಕ್ಯಾಪ್ಸಿಕಂ ಬೆಳಗ್ಗೆ ಕೀಟಬಾಧೆಯಿಂದ ಸಂಕಷ್ಟದಲ್ಲಿ ಸಿಲುಕಿರುವ ರೈತನ ನೆರವಿಗೆ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಬರಬೇಕು ಅಥವಾ ವಿಜ್ಞಾನಿಗಳು ರೈತರ ಈ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಬೇಕಿದೆ ಎಂದು ಅವರು ಕೋರಿದ್ದಾರೆ.

ಬಿಜೆಪಿ ಹಾಗೂ ರಾಷ್ಟ್ರೋತ್ಥಾನ ರಕ್ತ ನಿಧಿ ಸಹಯೋಗದೊಂದಿಗೆ ರಕ್ತದಾನ ಶಿಬಿರ

0

ತಾಲ್ಲೂಕಿನ ಚೀಮಂಗಲ ಗ್ರಾಮದ ಕುವೆಂಪು ಶತಮಾನೋತ್ಸವ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಭಾನುವಾರ ಭಾರತೀಯ ಜನತಾ ಪಕ್ಷ ಹಾಗೂ ರಾಷ್ಟ್ರೋತ್ಥಾನ ರಕ್ತನಿಧಿಯ ಸಹಯೋಗದಲ್ಲಿ ಕ್ರಾಂತಿವೀರ ಚಂದ್ರಶೇಖರ್‌ಆಜಾದ್ ಜನ್ಮದಿನಾಚರಣೆ ಹಾಗೂ ಕಾರ್ಗಿಲ್ ವಿಜಯೋತ್ಸವದ ಸವಿನೆನಪಿನಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸುರೇಂದ್ರಗೌಡ ಮಾತನಾಡಿದರು.

ಅಪಘಾತ ಹಾಗೂ ತುರ್ತು ಸಂದರ್ಭಗಳಲ್ಲಿ ರಕ್ತ ಸಿಗದೇ ಬಹಳಷ್ಟು ಮಂದಿ ಮೃತ ಪಡುವ ಸಾಧ್ಯತೆಯಿದೆ. ಇಂತಹ ಪರಿಸ್ಥಿತಿ ತಪ್ಪಿಸುವ ಉದ್ದೇಶದಿಂದ ರಕ್ತದಾನ ಶಿಬಿರಗಳಲ್ಲಿ ಉಚಿತ ರಕ್ತದಾನ ಮಾಡುವ ಪ್ರವೃತ್ತಿಯನ್ನು ಯುವಜನತೆ ರೂಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಯುವಕರಲ್ಲಿ ರಾಷ್ಟ್ರಪ್ರೇಮ ಬೆಳಸುವುರ ಜೊತೆಗೆ ರಕ್ತ ಅವಶ್ಯಕವಿರುವವರಿಗೆ ಸಕಾಲದಲ್ಲಿ ರಕ್ತ ದೊರೆಯುವಂತೆ ಮಾಡುವ ಉದ್ದೇಶದಿಂದ ಕಳೆದ ಹಲವು ವರ್ಷಗಳಿಂದ ಬಿಜೆಪಿ ಹಾಗೂ ರಾಷ್ಟ್ರೋತ್ಥಾನ ರಕ್ತನಿಧಿ ಸಂಸ್ಥೆಯಿಂದ ಉಚಿತ ರಕ್ತದಾನ ಶಿಬಿರಗಳನ್ನು ಆಯೋಜನೆ ಮಾಡುತ್ತಿದ್ದು, ತಾಲ್ಲೂಕಿನ ಯುವಜನತೆಯಿಂದ ಉತ್ತಮವಾದ ಬೆಂಬಲ ವ್ಯಕ್ತವಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಸುಮಾರು 95 ಯೂನಿಟ್ ರಕ್ತ ಸಂಗ್ರಹವಾಯಿತು.

ಬಿಜೆಪಿ ಜಿಲ್ಲಾಧ್ಯಕ್ಷ ರಾಮಲಿಂಗಪ್ಪ, ಮಾಜಿ ಶಾಸಕ ಎಂ.ರಾಜಣ್ಣ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಎಸ್.ರಾಘವೇಂದ್ರ, ಜಿಲ್ಲಾ ಕಾರ್ಯದರ್ಶಿ ಬಿ.ಸಿ.ನಂದೀಶ್, ಮುಖಂಡರಾದ ದಾಮೋದರ್, ಸುಜಾತಮ್ಮ, ಅರಕೆರೆ ಮುನಿರಾಜು, ಶ್ರೀಧರ್ ಹಾಜರಿದ್ದರು.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಭಾನುವಾರ 7 ಕೊರೊನ ಪಾಸಿಟಿವ್ ಪ್ರಕರಣ ದಾಖಲು

0

ತಾಲ್ಲೂಕಿನಲ್ಲಿ August 9 ಭಾನುವಾರ 7 ಜನರಿಗೆ ಕೊರೊನಾ ಸೋಂಕು ತಗುಲಿದೆ. ತಾಲ್ಲೂಕಿನ

  1. ಗಡಿಮಿಂಚೇನಹಳ್ಳಿ 25 (ಹೆಂ)
  2. ಮುತ್ತೂರು 50 (ಗಂ)
  3. ಮೇಲೂರು 68 (ಗಂ)
  4. ಸಾದಲಿ 20(ಹೆಂ)
  5. E ತಿಮ್ಮಸಂದ್ರ 28 (ಹೆಂ)
  6. ಆನೆಮಡುಗು 65(ಗಂ) ಮತ್ತು
  7. ಕಾಸಿಂ ಪಾಳ್ಯ 20 (ಹೆಂ) ಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

Sidlaghatta Cocoon Market Watch – 09/08/2020

0

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 09/08/2020

CB Lots: 284
Qty: 14698 kgs
Max: 340
Min: 170
Avg: 295
BV Lots: NILL
 

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನ ವಿರೋಧಿ ಧೋರಣೆಯನ್ನು ಖಂಡಿಸಿ ಆಗಸ್ಟ್ 10 ರಂದು ಮುಷ್ಕರ

0

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನ ವಿರೋಧಿ ಧೋರಣೆಯನ್ನು ಖಂಡಿಸಿ ಆಗಸ್ಟ್ 10 ರಂದು ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ್ದು ಸಾರ್ವಜನಿಕರು ಮತ್ತು ಸಂಘ ಸಂಸ್ಥಗಳ ಪದಾಧಿಕಾರಿಗಳು ಬೆಂಬಲಿಸಿ ಸಹರಿಸಬೇಕೆಂದು ಸಿಐಟಿಯು ಸಂಯೋಜಿತ ಗ್ರಾಮ ಪಂಚಾಯಿತಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸುದರ್ಶನ್ ಮನವಿ ಮಾಡಿದರು.

 ನಗರದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶ ಆರ್ಥಿಕವಾಗಿ ದಿವಾಳಿಯಾಗಿದೆ. ಜೊತೆಗೆ ದೇಶಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡಿ ಜನ ಮತ್ತು ಕೂಲಿ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನಲೆಯಲ್ಲಿ ಕಾರ್ಮಿಕರು, ಆಶಾ, ಅಂಗನವಾಡಿ ಕಾರ್ಯಕರ್ತರು ಹಾಗೂ ಗ್ರಾಮ ಪಂಚಾಯಿತಿ ನೌಕರರು ಕೊರೊನಾ ವಾರಿಯರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಸರ್ಕಾರಗಳ ನಿರ್ಲಕ್ಷ್ಯದಿಂದ ಗ್ರಾಮ ಪಂಚಾಯಿತಿಗಳ ನೌಕರರು ವೇತನ ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಜೊತೆಗೆ ಗ್ರಾಮ ಪಂಚಾಯಿತಿ ನೌಕರರ ಮೇಲೆ ಮಾರಣಾಂತಿಕ ಹಲ್ಲೆಗಳು ನಡೆಯುತ್ತಿದೆ. ಸರ್ಕಾರ ನೌಕರರಿಗೆ ಸೇವಾ ಭದ್ರತೆಯ ಜೊತೆಗೆ ಸೂಕ್ತ ರಕ್ಷಣೆ ನೀಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಈಡೇರಿಸಲು ರೈತರು ಸಹಿತ ಕಾರ್ಮಿಕ ಸಂಘಟನೆಗಳು ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಶಿಡ್ಲಘಟ್ಟ ತಾಲೂಕು ಕಚೇರಿಯ ಮುಂದೆ ಆಗಸ್ಟ್ 10ರ ಸೋಮವಾರದಂದು ಪ್ರತಿಭಟನೆ ನಡೆಸಲಿದ್ದೇವೆ ಎಂದರು.

 ಗ್ರಾಮ ಪಂಚಾಯಿತಿ ನೌಕರರ ಸಂಘದ ಗೌರವಾಧ್ಯಕ್ಷೆ ಮಧುಲತಾ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ಕ್ವಿಟ್ ಇಂಡಿಯಾ ಚಳುವಳಿ ನಡೆಸಿದ ಮಾದರಿಯಲ್ಲಿ ದೇಶವನ್ನು ಉಳಿಸುವ ಹೋರಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಭೂ ಸುಧಾರಣೆಯ ನೆಪದಲ್ಲಿ ಕಾರ್ಪೋರೇಟ್ ಕಂಪನಿಗಳಿಗೆ ಅನುಕೂಲ ಕಲ್ಪಿಸುವ ಕಾಯ್ದೆಯನ್ನು ಜಾರಿಗೆ ತಂದು ರೈತರಿಂದ ಭೂಮಿ ಕಿತ್ತುಕೊಳ್ಳುವ ಹುನ್ನಾರ ನಡೆಸಿದ್ದಾರೆ. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಕೊರೊನಾ ವಾರಿಯರ್ಸ್ ಎಂದು ಪಾದಪೂಜೆ ಮಾಡಿ ಪುಷ್ಟಗಳನ್ನು ಸಮರ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆಯೇ ಹೊರತು ಆಶಾ ಕಾರ್ಯಕರ್ತರು-ಬಿಸಿಯೂಟ ನೌಕರರು, ಅಂಗನವಾಡಿ ಕಾರ್ಯಕರ್ತರು, ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ಸೇವಾ ಭದ್ರತೆ ಒದಗಿಸಲು ಸರ್ಕಾರಗಳು ವಿಫಲವಾಗಿದೆ. ಹೊಟ್ಟೆಗೆ ಊಟ ಇಲ್ಲದಿದ್ದರೆ ಸನ್ಮಾನ ಏತಕ್ಕೆ ಎಂದು ಪ್ರಶ್ನಿಸಿ, ಇದೇ 10 ರಂದು ನಡೆಯುವ ಹೋರಾಟಕ್ಕೆ ಸಾರ್ವಜನಿಕರು ಬೆಂಬಲಿಸಬೇಕೆಂದು ಮನವಿ ಮಾಡಿದರು.

 ಬಿಸಿಯೂಟ ನೌಕರರ ಸಂಘದ ಅಧ್ಯಕ್ಷೆ ಮುನಿಲಕ್ಷ್ಮಮ್ಮ ಮಾತನಾಡಿ, ತಾಲ್ಲೂಕಿನಲ್ಲಿ ಬಿಸಿಯೂಟ ನೌಕರರಿಗೆ 7 ತಿಂಗಳಿಂದ ವೇತನವಿಲ್ಲ ಜೊತೆಗೆ ಕೆಲಸ ಸಹ ಇಲ್ಲ. ಸರ್ಕಾರ ನಮ್ಮ ಸಮಸ್ಯೆಗಳನ್ನು ಬಗೆಹರಿಸಲು ಕನಿಷ್ಠ ಸೌಜನ್ಯ ತೋರಿಸುತ್ತಿಲ್ಲ. ಆದರೇ ಬಿಸಿಯೂಟ ಯೋಜನೆಯನ್ನು ಖಾಸಗಿಕರಣ ಮಾಡಲು ಹೊರಟಿದೆ. ಈಗಾಗಲೇ ಜಿಲ್ಲೆಯ ಪೆರೆಸಂದ್ರದಲ್ಲಿ ಖಾಸಗಿಕರಣ ಮಾಡಿದ್ದು ಕೂಡಲೆ ಅದನ್ನು ವಾಪಸ್ಸು ಪಡೆಯಬೇಕು. ಬಿಸಿಯೂಟ ನೌಕರರ ಬೇಡಿಕೆಗಳನ್ನು ಈಡೇರಿಸಲು ಆಗಸ್ಟ್ 11 ರಿಂದ ಅನಿರ್ಧಿಷ್ಠಾವಧಿ ಮುಷ್ಕರ ನಡೆಸಲು ತೀರ್ಮಾನ ಕೈಗೊಂಡಿದ್ದೇವೆ ಎಂದರು.

  ಈ ಸಂದರ್ಭದಲ್ಲಿ ಅಂಗನವಾಡಿ ನೌಕರರ ಸಂಘದ ಖಜಾಂಚಿ ಮಂಜುಳಾ, ಮಾಜಿ ಅಧ್ಯಕ್ಷೆ ಸುನಂದಮ್ಮ, ಗ್ರಾಮ ಪಂಚಾಯಿತಿ ನೌಕರರ ಸಂಘದ ಅಧ್ಯಕ್ಷ ಸುಭ್ರಮಣಿ, ಪದಾಧಿಕಾರಿಗಳಾದ ಭಕ್ತರಹಳ್ಳಿ ನಾರಾಯಣಸ್ವಾಮಿ, ಬಶೆಟ್ಟಹಳ್ಳಿ ನರಸಿಂಹಮೂರ್ತಿ, ಕೊತ್ತನೂರು ದೇವೇಂದ್ರ, ಸಾದಲಿ ನಾಗರಾಜ್ ಹಾಜರಿದ್ದರು.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi