ನಗರ ಮತ್ತು ತಾಲ್ಲೂಕಿನಲ್ಲಿ ಮಂಗಳವಾರ 4 ಮಂದಿಗೆ ಕೊರೊನಾ ಸೋಂಕು ತಗುಲಿದೆ. ನಗರದ ವಾಸವಿ ರಸ್ತೆಯ 80 ವರ್ಷದ ಮಹಿಳೆ, ತಾಲ್ಲೂಕಿನ ಮೇಲೂರಿನ 41 ವರ್ಷದ ಮಹಿಳೆ, ಗಂಭೀರನಹಳ್ಳಿಯ 45 ವರ್ಷದ ಮಹಿಳೆ, ಚಿಕ್ಕದಾಸರಹಳ್ಳಿಯ 11 ವರ್ಷದ ಬಾಲಕಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
Sidlaghatta Cocoon Market Watch – 28/07/2020
ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ
Date: 28/07/2020
CB Lots: 514
Qty: 27395 Kgs
Max: 270
Min: 175
Avg: 232
BV Lots: NILL
SUBSCRIBE, LIKE & SHARE ನಮ್ಮ ಶಿಡ್ಲಘಟ್ಟ
Facebook 👍🏻
http://www.facebook.com/sidlaghatta
Instagram 📷
http://www.instagram.com/sidlaghatta
Youtube ▶️
https://www.youtube.com/c/sidlaghatta
Website 🌐
http://www.sidlaghatta.com
📱 Join WhatsApp
https://wa.me/917406303366?text=Hi
ಗ್ರಾಮ ಪಂಚಾಯಿತಿಯ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೂಮಿಪೂಜೆ
ತಾಲ್ಲೂಕಿನ ಜಂಗಮಕೋಟೆ ಕ್ರಾಸ್ ಬಳಿ ಒಂದು ಎಕರೆ ಪ್ರದೇಶದಲ್ಲಿ ಘನ ತ್ಯಾಜ್ಯ ವಿಲೇವಾರಿ ಹಾಗೂ ನಿರ್ವಹಣಾ ಘಟಕಕ್ಕೆ ಸೋಮವಾರ ಭೂಮಿಪೂಜೆ ನೆರವೇರಿಸಿ ತಾಲ್ಲೂಕು ಪಂಚಾಯಿತಿ ಇಒ ಶಿವಕುಮಾರ್ ಮಾತನಾಡಿದರು.
ಸ್ವಚ್ಛ ಭಾರತ್ ಯೋಜನೆಯಡಿ ಶಿಡ್ಲಘಟ್ಟ ತಾಲ್ಲೂಕಿನ ಮೂರು ಗ್ರಾಮ ಪಂಚಾಯಿತಿಯ 17 ಗ್ರಾಮಗಳಲ್ಲಿ ಸಂಗ್ರಹವಾದ ಘನ ತ್ಯಾಜ್ಯವನ್ನು ಸ್ಥಳೀಯವಾಗಿಯೇ ವಿಲೇವಾರಿ ಮಾಡುವ ಸಲುವಾಗಿ ಘನ ತ್ಯಾಜ್ಯ ವಿಲೇವಾರಿ ಹಾಗೂ ನಿರ್ವಹಣಾ ಘಟಕವನ್ನು ಪ್ರಾರಂಭಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಹೊಸಪೇಟೆ, ಜಂಗಮಕೋಟೆ ಮತ್ತು ಜೆ.ವೆಂಕಟಾಪುರ ಗ್ರಾಮ ಪಂಚಾಯಿತಿಗಳು ಒಳಗೊಂಡು ತಾಲ್ಲೂಕಿನ ಜಂಗಮಕೋಟೆ ಹೋಬಳಿಯ ಹೊಸಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ಮತ್ತು ದ್ರವ ತ್ಯಾಜ್ಯ ವಿಲೇವಾರಿ ಘಟಕವನ್ನು 50 ಲಕ್ಷರೂಗಳ ವೆಚ್ಚದಲ್ಲಿ ಪ್ರಾರಂಭಿಸಲಾಗುತ್ತಿದೆ. ಇಣ ಕಸ ಹಸಿ ಕಸ ಬೇರ್ಪಡಿಸುವ ತ್ಯಾಜ್ಯ ನಿರ್ವಹಣಾ ಘಟಕದೊಂದಿಗೆ, ಹಸಿ ಕಸದಿಂದ ಗೊಬ್ಬರ ತಯಾರು ಘಟಕದ ನಿರ್ಮಾಣಕ್ಕೆ ತಯಾರಿ ನಡೆಸಲಾಗಿದೆ. ಇದು ಆದಾಯದ ಮೂಲವೂ ಆಗಲಿದೆ ಎಂದರು.
ಗ್ರಾಮಗಳಲ್ಲಿಯೂ ಶುಚಿತ್ವ ಕಾಪಾಡಲು ಮತ್ತು ಘನ, ದ್ರವ ತ್ಯಾಜ್ಯವನ್ನು ಹೇಗೆ ನಿರ್ವಹಣೆ ಮಾಡಬೇಕು ಎಂಬುದನ್ನು ಗ್ರಾಮೀಣ ಜನರಿಗೆ ಮನವರಿಕೆ ಮಾಡಿಕೊಡಲಾಗುವುದು. ಗ್ರಾಮಗಳನ್ನು ಸ್ವಚ್ಛವಾಗಿಡುವ ನಿಟ್ಟಿನಲ್ಲಿ ಜನತೆಗೆ ಅರಿವು ಮೂಡಿಸಲು ಮೊದಲು ಒತ್ತು ನೀಡಲಾಗುತ್ತಿದೆ. ಜನರು ಘನ ಮತ್ತು ದ್ರವ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುತ್ತಾರೆ. ಇದರಿಂದ ಗ್ರಾಮಗಳಲ್ಲಿ ಉಂಟಾಗುತ್ತಿರುವ ಅನೈರ್ಮಲ್ಯದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಾವು ಇದೀಗ ಮೊದಲ ಹೆಜ್ಜೆ ಇಡಬೇಕಾಗಿದೆ ಎಂದು ಹೇಳಿದರು.
ಗ್ರಾಮಗಳ ಮನೆ ಮನೆಯಿಂದಲೇ ಕಸ ಸಂಗ್ರಹಿಸಲು ಕ್ರಮ ಕೈಗೊಳ್ಳಲಾಗುವುದು. ಪ್ರತಿ ಮನೆಯಲ್ಲಿ ಕಸ ಹಾಕುವ ಮೊದಲು ಹಸಿ, ಒಣ, ಮರು ಬಳಕೆಯಾಗುವ ಕಸ ಎಂದು ವಿಂಗಡಣೆ ಮಾಡುವಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಅರಿವು ಮೂಡಿಸಲಿದ್ದಾರೆ. ಗ್ರಾಮ ಪಂಚಾಯಿತಿ ಸಿಬ್ಬಂದಿ ಕಸ ಸಾಗಣೆ ವಾಹನಗಳ ಮೂಲಕ ಮನೆಗಳ ಬಳಿಗೆ ಹೋಗಿ ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ಸಂಗ್ರಹಿಸಲಿದ್ದಾರೆ. ಹಸಿ ಕಸದಿಂದ ಎರೆಹುಳು ಗೊಬ್ಬರ ತಯಾರಿಸಲು ಸಹ ಉದ್ದೇಶಿಸಲಾಗಿದೆ. ಈ ಕುರಿತು ಈಗಾಗಲೇ ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರವನ್ನು ನಡೆಸಲಾಗಿದೆ ಎಂದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಮಧು, ವಜ್ರೇಶ್, ಗ್ರಾಮ ಪಂಚಾಯತಿ ಅಧ್ಯಕ್ಷ ಬಿ.ಎಂ.ಶ್ರೀನಿವಾಸ್, ಉಪಾಧ್ಯಕ್ಷೆ ಸುಜಾತ, ಸದಸ್ಯರಾದ ಎಸ್.ಜಿ.ನಾರಾಯಣಸ್ವಾಮಿ, ಗಂಗರೆಡ್ಡಿ, ಯಶೋಧ ನಾರಾಯಣಸ್ವಾಮಿ, ಎಂಜಿನಿಯರ್ ಗೌತಮ್, ಕಂದಾಯ ನಿರೀಕ್ಷಕ ಸುಪ್ರೀತ್ ಹಾಗೂ ಗ್ರಾಮಸ್ಥರು ಹಾಜರಿದ್ದರು.
Sidlaghatta Cocoon Market Watch – 27/07/2020
ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ
Date: 27/07/2020
CB Lots: 665
Qty: 37194 Kgs
Max: 290
Min: 135
Avg: 227
BV Lots: 03
Qty: 281 Kgs
Max: 250
Min: 211
AVG: 235
SUBSCRIBE, LIKE & SHARE ನಮ್ಮ ಶಿಡ್ಲಘಟ್ಟ
Facebook 👍🏻
http://www.facebook.com/sidlaghatta
Instagram 📷
http://www.instagram.com/sidlaghatta
Youtube ▶️
https://www.youtube.com/c/sidlaghatta
Website 🌐
http://www.sidlaghatta.com
📱 Join WhatsApp
https://wa.me/917406303366?text=Hi
ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಸೋಮವಾರ 2 ಕೊರೊನ ಪಾಸಿಟಿವ್ ಪ್ರಕರಣ ದಾಖಲು
ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಸೋಮವಾರ 2 ಕೊರೊನ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ನಗರದ ಷರಾಫ್ ಬೀದಿಯ 57 ವರ್ಷದ ಮಹಿಳೆ ಮತ್ತು 20 ವರ್ಷದ ಯುವತಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಚಂದ್ರಂಕಿಗಳ ಶೆಡ್ ಮೇಲೆ ಬಿದ್ದ ಮರ, ರೇಷ್ಮೆ ಬೆಳೆ ನಾಶ
ತಾಲ್ಲೂಕಿನ ಬಸವಾಪಟ್ಟಣದ ರೇಷ್ಮೆ ಬೆಳೆಗಾರ ನಾರಾಯಣಸ್ವಾಮಿ ಅವರ ಚಂದ್ರಂಕಿಗಳ ಶೆಡ್ ಮೇಲೆ ಅರಳಿ ಮರವೊಂದು ಉರುಳಿಬಿದ್ದಿದ್ದು ಸುಮಾರು ಏಳರಿಂದ ಎಂಟು ಲಕ್ಷ ರೂಗಳ ನಷ್ಟವಾಗಿದೆ.
ಶನಿವಾರ ರಾತ್ರಿ ಬಿದ್ದ ಮಳೆಗೆ ಅರಳಿ ಮರವು ಬುಡ ಸಮೇತ ಚಂದ್ರಂಕಿಗಳ ಶೆಡ್ ಮೇಲೆ ಉರುಳಿದೆ. ರಾತ್ರಿ ವೇಳೆ ಇಲ್ಲಿ ಯಾರೂ ಇರದಿದ್ದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
“ಕೊರೊನಾ ಕಾರಣದಿಂದಾಗಿ ಕಳೆದ ನಾಲ್ಕು ತಿಂಗಳುಗಳಿಂದಲೂ ರೇಷ್ಮೆ ಬೆಳೆಯಲ್ಲಿ ನಷ್ಟವನ್ನೇ ಅನುಭವಿಸುತ್ತಿದ್ದೇವೆ. ಈಗ ರೇಷ್ಮೆಯನ್ನೇ ನಂಬಿರುವ ನಮಗೆ ಮರ ಉರುಳಿರುವುದರಿಂದ ಇರುವ ಅಪಾರ ನಷ್ಟವುಂಟಾಗಿದೆ. ಸರ್ಕಾರ ನಮ್ಮ ಕೈಹಿಡಿಯಬೇಕು. ತಾಲ್ಲೂಕು ಆಡಳಿತ ನೆರವಾಗಬೇಕು” ಎಂದು ರೇಷ್ಮೆ ಬೆಳೆಗಾರ ನಾರಾಯಣಸ್ವಾಮಿ ತಿಳಿಸಿದರು.
ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಭಾನುವಾರ 1 ಕೊರೊನ ಪಾಸಿಟಿವ್ ಪ್ರಕರಣ ದಾಖಲು
ನಗರದಲ್ಲಿ ಭಾನುವಾರ ಒಬ್ಬರಿಗೆ ಕೊರೊನ ಸೋಂಕು ತಗುಲಿದೆ. ಅಜಾದ್ ನಗರದ 35 ವರ್ಷದ ಮಹಿಳೆಗೆ ಕೊರೊನ ಸೋಂಕು ತಗುಲಿರುವುದು ದೃಢಪಟ್ಟಿದೆ.
Sidlaghatta Cocoon Market Watch – 25/07/2020
Sidlaghatta Cocoon Market Watch
Date: 25/07/2020
CB Lots: 538
Qty: 28905 Kgs
Max: 281
Min: 153
Avg: 231
BV Lots: 10
Qty: 421 Kgs
Max: 235
Min: 184
AVG: 215
SUBSCRIBE, LIKE & SHARE ನಮ್ಮ ಶಿಡ್ಲಘಟ್ಟ
Facebook 👍🏻
http://www.facebook.com/sidlaghatta
Instagram 📷
http://www.instagram.com/sidlaghatta
Youtube ▶️
https://www.youtube.com/c/sidlaghatta
Website 🌐
http://www.sidlaghatta.com
📱 Join WhatsApp
https://wa.me/917406303366?text=Hi
ಕೊರೊನಾ ಸಂಕಷ್ಟದಲ್ಲಿರುವ ಕೂಲಿ ಕಾರ್ಮಿಕರಿಗೆ ಮಗನರೇಗಾ ಯೋಜನೆ ಮೂಲಕ ಉದ್ಯೋಗ
ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಮೂಲಕ ಕೊರೊನಾ ಸಂಕಷ್ಟದಲ್ಲಿರುವ ಕೂಲಿ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಓ ಫೌಝೀಯಾ ತರುನ್ನುಮ್ ತಿಳಿಸಿದರು.
ತಾಲ್ಲೂಕಿನ ಗಂಜಿಗುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳನ್ನು ವೀಕ್ಷಿಸಿ ಅವರು ಮಾತನಾಡಿದರು. ಜಗತ್ತಿನಾದ್ಯಂತ ಕೊರೊನಾ ಸೋಂಕು ಕಾಡುತ್ತಿದೆ. ಈ ಸೋಂಕು ನಿವಾರಿಸಲು ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಇಂತಹ ಕಷ್ಟದಲ್ಲಿ ಕೂಲಿಗಾಗಿ ವಲಸೆ ಹೋಗುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕೆಂದು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನರೇಗಾ ಯೋಜನೆಯ ಮೂಲಕ ದುಡಿಯುವ ಕೈಗಳಿಗೆ ಕೆಲಸದ ರೂಪದಲ್ಲಿ ಉದ್ಯೋಗ ಕಲ್ಪಿಸಲಾಗಿದೆ. ನರೇಗಾ ಯೋಜನೆ ಕೂಲಿ ಕಾರ್ಮಿಕರಿಗೆ ವರದಾನವಾಗಿದೆ ಎಂದರು.
ಜಿಲ್ಲೆಯ ಕೆಲ ಭಾಗಗಳಲ್ಲಿ ಉತ್ತಮವಾಗಿ ಮಳೆಯಾಗುತ್ತಿದೆ. ನರೇಗಾ ಯೋಜನೆಯಡಿ ನಿರ್ಮಿಸಿರುವ ಬಹುಕಮಾನ್ ಚೆಕ್‌ಡ್ಯಾಂಗಳು, ಕಲ್ಯಾಣಿಗಳು ಮತ್ತು ಕುಂಟೆಗಳಲ್ಲಿ ನೀರು ಶೇಖರಣೆಯಾಗಿದೆ. ಜೊತೆಗೆ ರೈತರು ನಿರ್ಮಿಸಿಕೊಂಡಿರುವ ಬದುಗಳಲ್ಲಿ ಸಹ ಮಳೆನೀರು ಶೇಖರಣೆಯಾಗಿದ್ದರಿಂದ ಅಂರ್ತಜಲಮಟ್ಟ ವೃದ್ಧಿಯಾಗಿದೆ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ನರೇಗಾ ಯೋಜನೆಯ ಮೂಲಕ ರೈತರಿಗೆ ಹೆಚ್ಚಿನ ಅನುಕೂಲ ಕಲ್ಪಿಸಬೇಕೆಂದು ಸೂಚಿಸಿದರು.
ಇದೇ ವೇಳೆಯಲ್ಲಿ ಹಕ್ಕಿಪಿಕ್ಕಿ ಕಾಲೋನಿಗೆ ಭೇಟಿ ನೀಡಿದ ಜಿಲ್ಲಾ ಪಂಚಾಯಿತಿ ಸಿಇಓ ಅವರಿಗೆ ಗ್ರಾಮಸ್ಥರು ನೀರಿಗಾಗಿ ಕೊಳವೆಬಾವಿ ಕೊರೆಸಿ ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಡಬೇಕೆಂದು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಧಾನಮಂತ್ರಿ ಆವಾಝ್ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳಲು ಅಗತ್ಯ ಸಹಕಾರ ಮತ್ತು ನೆರವು ಕಲ್ಪಿಸಲಾಗುವುದೆಂದು ಭರವಸೆ ನೀಡಿದರು.
ಗ್ರಾಮ ಪಂಚಾಯಿತಿಗೆ ಭೇಟಿ: ನರೇಗಾ ಯೋಜನೆಯಡಿ ನಡೆದಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ ಬಳಿಕ ಕೊರೊನಾ ಸೋಂಕು ನಿಯಂತ್ರಿಸಲು ಸ್ಥಾಪಿಸಿರುವ ಸಹಾಯವಾಣಿ ಕೇಂದ್ರಗಳಿಗೆ ಎಷ್ಟು ದೂರುಗಳು ಬಂದಿದೆ ಅಧಿಕಾರಿಗಳು ಹೇಗೆ ಸ್ಪಂದಿಸಿದ್ದಾರೆ ಎಂಬುದನ್ನು ಪರಿಶೀಲಿಸಿದರು. ಕೊರೊನಾ ಸೋಂಕು ನಿಯಂತ್ರಿಸಲು ಆರೋಗ್ಯ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃಧ್ಧಿ ಅಧಿಕಾರಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ. ಗ್ರಾಮಸ್ಥರು ಸಹ ಮನೆಯಿಂದ ಹೊರಬರುವುದನ್ನು ಸ್ವಯಂ ನಿಯಂತ್ರಿಸಿಕೊಂಡು ಸಾಮಾಜಿಕ ಅಂತರ ಕಾಯ್ದುಕೊಂಡು ಕೊರೊನಾ ಸೋಂಕು ನಿಯಂತ್ರಿಸಲು ಸಹಕರಿಸಬೇಕೆಂದು ಕೋರಿದರು.
ತಾಲ್ಲೂಕು ಪಂಚಾಯಿತಿ ಇಓ ಶಿವಕುಮಾರ್, ಗಂಜಿಗುಂಟೆ ಗ್ರಾಪಂ ಪಿಡಿಓ ರಮೇಶ್, ರಾಮಬಾಬು ಹಾಜರಿದ್ದರು.
ಮಹಿಳಾ ಸ್ವಸಹಾಯ ಸಂಘಗಳಿಗೆ ಬಡ್ಡಿ ರಹಿತ ಸಾಲ ವಿತರಣೆ
ಡಾಲ್ಫಿನ್ ಶಾಲಾ ಆವರಣದಲ್ಲಿ ಶನಿವಾರ ನಡೆದ ಈ.ತಿಮ್ಮಸಂದ್ರ ರೇಷ್ಮೆ ಬೆಳೆಗಾರರ ವ್ಯವಸಾಯ ಸೇವಾ ಸಹಕಾರ ಸಂಘ (ಎಸ್.ಎಫ್.ಸಿ.ಎಸ್) ಬ್ಯಾಂಕ್ ಮೂಲಕ 18 ಮಹಿಳಾ ಸ್ವಸಹಾಯ ಸಂಘಗಳಿಗೆ 82 ಲಕ್ಷ 89 ಸಾವಿರ ರೂಗಳ ಸಾಲ ವಿತರಣೆ ಕಾರ್ಯಕ್ರಮದಲ್ಲಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.
ಕೊರೊನಾ ಸಂಕಷ್ಟದಲ್ಲಿ ಡಿಸಿಸಿ ಬ್ಯಾಂಕ್ ಜಿಲ್ಲೆಯ ಸುಮಾರು ಇಪ್ಪತ್ತು ಸಾವಿರ ಮಹಿಳೆಯರಿಗೆ ಬಡ್ಡಿ ರಹಿತ ಸಾಲವನ್ನು ನೀಡುವ ಮೂಲಕ ನೆರವಿಗೆ ನಿಂತಿದೆ. ಪಡೆದ ಸಾಲವನ್ನು ನಿಗತಿತ ಸಮಯಕ್ಕೆ ಕಟ್ಟುವ ಮೂಲಕ ಪುನಃ ಸಾಲವನ್ನು ಪಡೆಯಬಹುದು. ಮಹಿಳೆಯರು ಕುಟುಂಬವನ್ನು ರಕ್ಷಿಸಲು ಇದು ಸಹಾಯವಾಗಲಿದೆ ಎಂದು ಅವರು ತಿಳಿಸಿದರು.
ಡಿಸಿಸಿ ಬ್ಯಾಂಕ್ ಅವಿಭಜಿತ ಜಿಲ್ಲೆಯ ಮಹಿಳಾ ಸ್ವಸಹಾಯ ಸಂಘಗಳಿಗೆ ಶೂನ್ಯಬಡ್ಡಿದರದಲ್ಲಿ ಆರ್ಥಿಕ ನೆರವು ನೀಡುವ ಮೂಲಕ ಮಹಿಳೆಯರ ಪಾಲಿಗೆ ಆತ್ಮಬಂಧುವಾಗಿದೆ. ವಾಣಿಜ್ಯ ಬ್ಯಾಂಕುಗಳು, ಲೇವಾದೇವಿಯವರು ಬಡವರಿಗೆ ಸಾಲ ನೀಡುವುದಿಲ್ಲ. ಆದರೆ ಡಿಸಿಸಿ ಬ್ಯಾಂಕ್ ಅಂಥಹವರಿಗೇ ಸಾಲ ನೀಡುವ ಮೂಲಕ ಲಕ್ಷಾಂತರ ಕುಟುಂಬಗಳ ಕೈಹಿಡಿದಿದೆ ಎಂದರು.
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದೇಗೌಡ ಮಾತನಾಡಿ, ಬಡತನಕ್ಕೆ ಪಕ್ಷಬೇಧವಿಲ್ಲ. ಮಹಿಳಾ ಆರ್ಥಿಕ ಸಬಲೀಕರಣದ ಈ ಕಾರ್ಯಕ್ರಮಕ್ಕೆ ಯಾವುದೇ ರಾಜಕೀಯ ಪಕ್ಷದವರಾಗಲಿ ನಮ್ಮೊಂದಿಗೆ ಕೈಜೋಡಿಸಿ ಸಹಕಾರ ನೀಡಿ. ರಾಜಕಾರಣ ಬಿಟ್ಟು ಆಲೋಚಿಸೋಣ, ದೀನದಲಿತರ ಪಾಲಿನ ದೇವಾಲಯವಾಗಿ ಬ್ಯಾಂಕ್ ಕೆಲಸ ಮಾಡುತ್ತಿದೆ, ದಿನದ 24 ಗಂಟೆಯೂ ಕೆಲಸ ಮಾಡುತ್ತಿರುವ ಬ್ಯಾಂಕನ್ನು ಉಳಿಸಿ, ಶಕ್ತಿ ತುಂಬಲು ಪಡೆದ ಸಾಲವನ್ನು ಪ್ರಾಮಾಣಿಕತೆಯಿಂದ ಮರುಪಾವತಿಸಿ ಎಂದರು.
ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎ.ನಾಗರಾಜು, ಸುಬ್ರಮಣಿ, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಆನಂದ್, ಎಸ್.ಎಫ್.ಸಿ.ಎಸ್ ಕಾರ್ಯನಿರ್ವಾಹಣಾಧಿಕಾರಿ ಅಕ್ಕಲಪ್ಪ, ದೇವರಾಜು, ರಾಜೇಶ್, ಪ್ರಸನ್ನ, ನಾಗರಾಜು, ನವೀನ್, ವೆಂಕರೋಣಪ್ಪ, ನರಸಿಂಹಮೂರ್ತಿ ಹಾಜರಿದ್ದರು.
ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಶನಿವಾರ 17 ಪಾಸಿಟಿವ್ ಪ್ರಕರಣ ದಾಖಲು
ನಗರ ಮತ್ತು ತಾಲ್ಲೂಕಿನಲ್ಲಿ ಶನಿವಾರ 17 ಮಂದಿಗೆ ಕೊರೊನಾ ಸೋಂಕು ತಗುಲಿದೆ. ನಗರದ ಶರಾಫ್ ರಸ್ತೆಯ 45 ವರ್ಷದ ಮಹಿಳೆ, 24 ವರ್ಷದ ಮಹಿಳೆ, 26 ವರ್ಷದ ಗಂಡಸು, 24 ವರ್ಷದ ಗಂಡಸು, 54 ವರ್ಷದ ಗಂಡಸು, 55 ವರ್ಷದ ಗಂಡಸು, ಹೌಸಿಂಗ್ ಬೋರ್ಡ್ ಕಾಲೋನಿಯ 32 ವರ್ಷದ ಗಂಡಸು, 57 ವರ್ಷದ ಮಹಿಳೆ, ಅಶೋಕ ರಸ್ತೆಯ 25 ವರ್ಷದ ಮಹಿಳೆ, 58 ವರ್ಷದ ಮಹಿಳೆ, ಆಜಾದ್ ನಗರದ 29 ವರ್ಷದ ಗಂಡಸು, ತಾಲ್ಲೂಕಿನ ಚಿಕ್ಕದಾಸರಹಳ್ಳಿಯ 22 ವರ್ಷದ ಗಂಡಸು, ಎಚ್.ಕ್ರಾಸ್ ನ 33 ವರ್ಷದ ಗರ್ಭಿಣಿ, ಮಳ್ಳೂರು ಗ್ರಾಮದ 55 ವರ್ಷದ ಗಂಡಸು, 55 ವರ್ಷದ ಮಹಿಳೆ, 48 ವರ್ಷದ ಮಹಿಳೆ, ಬೈರಗಾನಹಳ್ಳಿಯ 25 ವರ್ಷದ ವ್ಯಕ್ತಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಟಾಸ್ಕ್ ಫೋರ್ಸ್ ಸದಸ್ಯರು ಚುರುಕಾಗಿ ಕಾರ್ಯನಿರ್ವಹಿಸಬೇಕು – ಜಿಲ್ಲಾಧಿಕಾರಿ ಆರ್.ಲತಾ
ಜಿಲ್ಲಾದ್ಯಂತ ಎಂಟೂವರೆ ಸಾವಿರ ರ‍್ಯಾಪಿಡ್ ಆಂಟಿಜನ್ ಕಿಟ್ ಗಳನ್ನು ವಿತರಿಸಲಾಗಿದ್ದು, ಕೊರೊನಾ ಪಾಸಿಟಿವ್ ಅಥವಾ ನೆಗೆಟಿವ್ ಬಂದಿರುವ ಬಗ್ಗೆ ವರದಿ ವಿಳಂಬವಾಗದೇ ಕೇವಲ ಅರ್ಧಗಂಟೆಯೊಳಗೆ ತಿಳಿದುಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು.
ತಾಲ್ಲೂಕಿನ ಹಂಡಿಗನಾಳ ಗ್ರಾಮ ಮತ್ತು ನಗರದ 11 ಮತ್ತು 21 ನೇ ವಾರ್ಡ್ ಗಳಿಗೆ ಶುಕ್ರವಾರ ಭೇಟಿ ನೀಡಿ, ಮನೆಗಳ ಹತ್ತಿರ ಹೋಗಿ ಆರೋಗ್ಯ ಇಲಾಖೆ, ಗ್ರಾಮ ಪಂಚಾಯಿತಿ ಅಥವಾ ನಗರಸಭೆ, ಆರೋಗ್ಯ ಕಾರ್ಯಕರ್ತರು ಭೇಟಿ ನೀಡುತ್ತಿರುವ ಬಗ್ಗೆ ಖುದ್ದಾಗಿ ಮಾಹಿತಿ ಪಡೆದು ನಂತರ ಅವರು ಮಾತನಾಡಿದರು.
ಗ್ರಾಮಮಟ್ಟದಲ್ಲಿ ಮತ್ತು ವಾರ್ಡ್ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಮಾಡಲಾಗಿದೆ. ಟಾಸ್ಕ್ ಫೋರ್ಸ್ ಸದಸ್ಯರಿಗೆ ಆಯಾ ವಾರ್ಡ್ ಅಥವಾ ಗ್ರಾಮದ ಮನೆಗಳನ್ನು ಹಂಚಿಕೆ ಮಾಡಿದೆ. ಪ್ರತಿಯೊಬ್ಬ ಸದಸ್ಯರೂ ಅವರುಗಳಿಗೆ ಸಂಬಂಧಿಸಿದ ಮನೆಗಳವರ ವಾಟ್ಸಪ್ ನಂಬರನ್ನು ಹೊಂದಿರಬೇಕು. ಯಾವುದೇ ಸಮಸ್ಯೆಗಳಿದ್ದರೂ ಹಂಚಿಕೊಂಡು, ಅಕಸ್ಮಾತ್ ಜ್ವರ, ಕೆಮ್ಮು, ನೆಗಡಿ ಮುಂತಾದ ಕೊರೊನಾ ಲಕ್ಷಣಗಳು ಯಾರಿಗೇ ಬಂದರೂ ತಕ್ಷಣ ಮನೆಗಳ ಬಳಿ ಹೋಗಿ ರ‍್ಯಾಪಿಡ್ ಆಂಟಿಜನ್ ಕಿಟ್ ಮೂಲಕ ಪರೀಕ್ಷೆ ನಡೆಸಬೇಕು. ಮುಖ್ಯವಾಗಿ ಜನರಲ್ಲಿ ಆತಂಕ ದೂರ ಮಾಡಿ ಧೈರ್ಯ ತುಂಬುವ ಕೆಲಸ ಮಾಡಬೇಕಿದೆ. ಟಾಸ್ಕ್ ಫೋರ್ಸ್ ಸದಸ್ಯರ ಕಾರ್ಯ ವೈಖರಿಯನ್ನು ಇನ್ನಷ್ಟು ಉತ್ತಮಗೊಳಿಸುವ ನಿಟ್ಟಿನಲ್ಲಿ ಪೊಲೀಸ್ ಎಸ್.ಪಿ ಅವರೊಂದಿಗೆ ಖುದ್ದಾಗಿ ಹಲವು ಮನೆಗಳವರನ್ನು ಭೇಟಿ ಮಾಡಿದ್ದಾಗಿ ಹೇಳಿದರು.
ಕಂಟೈನ್ ಮೆಂಟ್ ಜೋನ್ ನಲ್ಲಿರುವವರು ಅಕಸ್ಮಾತ್ ಬಡವರಾಗಿದ್ದ ಪಕ್ಷದಲ್ಲಿ ಜಿಲ್ಲಾಡಳಿತ ಅವರಿಗೆ ದಿನಸಿಯನ್ನು ನೀಡುತ್ತದೆ. ಇಲ್ಲವಾದಲ್ಲಿ ಆ ಪ್ರದೇಶದವರು ಅವಶ್ಯಕ ವಸ್ತುಗಳನ್ನು ಕೊಳ್ಳಲು ನೆರವಾಗುತ್ತದೆ ಎಂದರು.
ನಗರದ ಹನ್ನೊಂದನೇ ವಾರ್ಡಿನ ಕೆಲವು ಮನೆಗಳವರು ನಮ್ಮನ್ನು ಯಾರೂ ಭೇಟಿ ನೀಡಿಲ್ಲ, ನಮ್ಮ ವಾಟ್ಸಪ್ ನಂಬರನ್ನು ತೆಗೆದುಕೊಂಡಿಲ್ಲ ಎಂದು ತಿಳಿಸಿದಾಗ, ತ್ವರಿತವಾಗಿ ಎಲ್ಲಾ ಕುಟುಂಬದವರ ಮಾಹಿತಿ ಇರಬೇಕು. ಮುನ್ನೆಚ್ಚರಿಕೆ ವಹಿಸುವುದರಿಂದ ನಾವು ಸಾಕಷ್ಟು ತೊಂದರೆಗಳನ್ನು ತಪ್ಪಿಸಬಹುದು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಪೊಲೀಸ್ ಎಸ್.ಪಿ ಮಿಥುನ್ ಕುಮಾರ್, ತಹಶೀಲ್ದಾರ್ ಕೆ.ಅರುಂಧತಿ, ತಾಲ್ಲೂಕು ಪಂಚಾಯಿತಿ ಇಒ ಶಿವಕುಮಾರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ಡಾ.ವಾಣಿ, ನೋಡಲ್ ಅಧಿಕಾರಿ ಶಿವಕುಮಾರ್ ಹಾಜರಿದ್ದರು.
ಆರ್.ಎಫ್.ಒ ವರ್ಗಾವಣೆ ರದ್ದುಗೊಳಿಸಲು ಒತ್ತಾಯ
ಶಿಡ್ಲಘಟ್ಟ ವಲಯ ಅರಣ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀಲಕ್ಷ್ಮಿ ರವರ ವರ್ಗಾವಣೆಯನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರುಸೇನೆ (ಪುಟ್ಟಣ್ಣಯ್ಯ ಬಣ) ಪದಾಧಿಕಾರಿಗಳು ಶುಕ್ರವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ತಾಲ್ಲೂಕಿನಲ್ಲಿ ಕಳೆದ ಎರಡು ವರ್ಷಗಳಿಂದ ನಿಷ್ಟಾವಂತ ಅಧಿಕಾರಿಯಾಗಿ, ಅರಣ್ಯ ಇಲಾಖೆಗೆ ಸೇರಿದ ಭೂಮಿಯನ್ನು ಉಳಿಸುವಲ್ಲಿ ದುಡಿದ ಅಧಿಕಾರಿಯನ್ನು ಕೆಲ ಪಟ್ಟ ಭದ್ರ ಹಿತಾಸಕ್ತಿಗಳ ಒತ್ತಡಕ್ಕೆ ಮಣಿದು ವರ್ಗಾವಣೆ ಮಾಡಿರುವ ಕ್ರಮ ಸರಿಯಲ್ಲ. ತಾಲ್ಲೂಕಿನ ವಿವಿದೆಡೆ ಅರಣ್ಯ ಇಲಾಖೆಗೆ ಸೇರಿದ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದಂತಹ ವ್ಯಕ್ತಿಗಳ ವಿರುದ್ದ ಹೋರಾಟ ನಡೆಸಿ ಭೂಮಿಯನ್ನು ಅರಣ್ಯ ಇಲಾಖೆಗೆ ಉಳಿಸುವಲ್ಲಿ ನಡೆಸಿದ ಯತ್ನಕ್ಕೆ ಮುಖ್ಯಮಂತ್ರಿಗಳ ಪದಕ ಪಡೆದಿದ್ದೇ ಸಾಕ್ಷಿಯಾಗಿದೆ. ಇಂತಹ ದಕ್ಷ ಅಧಿಕಾರಿಯನ್ನು ವರ್ಗಾವಣೆ ಮಾಡಿರುವುದನ್ನು ಕೂಡಲೇ ಹಿಂಪಡೆದು ತಾಲ್ಲೂಕಿನಲ್ಲಿಯೇ ಅವರ ಸೇವೆಯನ್ನು ಮುಂದುವರೆಸಬೇಕು ಎಂದು ಒತ್ತಾಯಿಸಿ ವಲಯ ಅರಣ್ಯಾಧಿಕಾರಿ ಕಚೇರಿಯ ಮೂಲಕ ಉಪ ಅರಣ್ಯ ಸಂರಕ್ಷಾಣಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಜಿಲ್ಲಾ ಉಪಾಧ್ಯಕ್ಷ ಟಿ.ಕೆ.ಅರುಣ್‌ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ.ಎಸ್.ವೆಂಕಟಸ್ವಾಮಿ, ತಾಲ್ಲೂಕು ಅಧ್ಯಕ್ಷ ಎಸ್.ಎಂ.ರವಿಪ್ರಕಾಶ್, ಪದಾಧಿಕಾರಿಗಳಾದ ವೆಂಕಟರಾಯಪ್ಪ, ಮುದ್ದುಕೃಷ್ಣ, ಎಂ.ನಾರಾಯಣಸ್ವಾಮಿ ಹಾಜರಿದ್ದರು.
ನರೇಗಾ ಯೋಜನೆಯನ್ನು ರೈತರು ಸದುಪಯೋಗ ಮಾಡಿಕೊಳ್ಳಬೇಕು – ಫೌಝೀಯಾ ತರುನ್ನುಮ್
ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ನರೇಗಾ ಯೋಜನೆಯಡಿ ನಡೆದಿರುವ ಕಾಮಗಾರಿಗಳನ್ನು ಮತ್ತು ಕೊರೊನಾ ಸೋಂಕು ನಿಯಂತ್ರಿಸಲು ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿ ಜಿಲ್ಲಾ ಪಂಚಾಯಿತಿ ಸಿಇಓ ಫೌಝೀಯಾ ತರುನ್ನುಮ್ ಮಾತನಾಡಿದರು.
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ರೈತರು ಸದುಪಯೋಗ ಮಾಡಿಕೊಳ್ಳಬೇಕೆಂದು ಅವರು ಮನವಿ ಮಾಡಿದರು.
ನರೇಗಾ ಯೋಜನೆಯಡಿ ದೋರೆಯುವ ಸೌಲಭ್ಯಗಳು ಮತ್ತು ಕೈಗೊಳ್ಳಬಹುದಾದ ಕಾಮಗಾರಿಗಳ ಕುರಿತು ಈಗಾಗಲೇ ಜಿಲ್ಲಾದ್ಯಂತ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜನಜಾಗೃತಿ ಮತ್ತು ಅರಿವು ಮೂಡಿಸಲಾಗಿದೆ ಎಂದರು.
ನರೇಗಾ ಯೋಜನೆಯಡಿ ಸರ್ಕಾರಿ ಶಾಲೆಗಳಿಗೆ ಕಾಂಪೌಂಡ್ ನಿರ್ಮಿಸಲಾಗಿದೆ, ಜೊತೆಗೆ ಪೂರ್ವ ಪ್ರಾಥಮಿಕ ಶಿಕ್ಷಣದ ವ್ಯವಸ್ಥೆಯನ್ನು ಬಲಗೊಳಿಸಲು ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸಲು ಪ್ರಥಮ ಆದ್ಯತೆ ನೀಡಲಾಗಿದೆ. ನಗರ ಪ್ರದೇಶದ ಮಾದರಿಯಲ್ಲಿ ಗ್ರಾಮೀಣ ಪ್ರದೇಶಗಳನ್ನು ಸುಂದರವಾಗಿ ಅಭಿವೃದ್ಧಿಗೊಳಿಸಲು ಯೋಜನೆಯನ್ನು ರೂಪಿಸಿ ಅನುಷ್ಟಾನಗೊಳಿಸಲಾಗುತ್ತಿದೆ. ಅಂರ್ತಜಲಮಟ್ಟವನ್ನು ವೃದ್ಧಿಗೊಳಿಸಲು ಕಲ್ಯಾಣಿಗಳು, ಕರೆ-ಕುಂಟೆಗಳನ್ನು ಅಭಿವೃದ್ಧಿಗೊಳಿಸಿ ಬದುಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ನರೇಗಾ ಯೋಜನೆಯಡಿ ಶಾಲಾ ಆವರಣ ಮತ್ತು ಸರ್ಕಾರಿ ಕಚೇರಿಗಳಲ್ಲಿ ಮಳೆ ನೀರು ಸಂರಕ್ಷಣೆ ಮಾಡಲು ಮಳೆನೀರು ಕೊಯ್ಲು ಪದ್ದತಿಯನ್ನು ಅಳವಡಿಸಿ ಮಳೆನೀರನ್ನು ಸಂರಕ್ಷಣೆ ಮಾಡಲಾಗಿದೆ. ಜೊತೆಗೆ ಇಂಗುಗುಂಡಿಗಳನ್ನು ನಿರ್ಮಿಸಿ ನೀರು ಇಂಗಿಸಲು ಕ್ರಮ ಕೈಗೊಳ್ಳಲಾಗಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಆಟದ ಮೈದಾನಗಳನ್ನು ಅಭಿವೃದ್ಧಿಗೊಳಿಸಿ ಗಿಡ-ಮರಗಳನ್ನು ಉಳಿಸಿ ಗ್ರಾಮೀಣ ಪ್ರದೇಶದಲ್ಲಿ ಉದ್ಯಾನವನವನ್ನು ನಿರ್ಮಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಇಓ ಬಿ.ಶಿವಕುಮಾರ್, ಕುಂದಲಗುರ್ಕಿ ಗ್ರಾಮ ಪಂಚಾಯಿತಿ ಪಿಡಿಓ ಶ್ರೀನಿವಾಸ್ ಹಾಜರಿದ್ದರು.
ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಶುಕ್ರವಾರ 10 ಪಾಸಿಟಿವ್ ಪ್ರಕರಣ ದಾಖಲು
ನಗರ ಮತ್ತು ತಾಲ್ಲೂಕಿನಲ್ಲಿ ಶುಕ್ರವಾರ 10 ಮಂದಿಗೆ ಕೊರೊನಾ ಸೋಂಕು ತಗುಲಿದೆ. ನಗರದ ವಾಸವಿ ರಸ್ತೆಯ 80 ವರ್ಷದ ವೃದ್ಧ, 42 ವರ್ಷದ ವ್ಯಕ್ತಿ, 49 ವರ್ಷದ ಮಹಿಳೆ, 18 ವರ್ಷದ ಯುವಕ, ತಾಲ್ಲೂಕು ಕಚೇರಿಯ ಉದ್ಯೋಗಿ 39 ವರ್ಷದ ಗಂಡಸು, ತಾಲ್ಲೂಕಿನ ಮೇಲೂರಿನ 42 ವರ್ಷದ ಮಹಿಳೆ, 39 ವರ್ಷದ ಮಹಿಳೆ, 19 ವರ್ಷದ ಯುವತಿ ಮತ್ತು 17 ವರ್ಷದ ಯುವತಿ ಮತ್ತು ಮೇಲೂರು ಬೆಸ್ಕಾಂ ನ 23 ವರ್ಷದ ವ್ಯಕ್ತಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
Sidlaghatta Cocoon Market Watch – 24/07/2020
Sidlaghatta Cocoon Market Watch
Date: 24/07/2020
CB Lots: 509
Qty: 26712 kgs
Max: 270
Min: 160
Avg: 220
BV Lots: 15
Qty: 922 Kgs
Max: 230
Min: 150
AVG: 174
SUBSCRIBE, LIKE & SHARE ನಮ್ಮ ಶಿಡ್ಲಘಟ್ಟ
Facebook 👍🏻
http://www.facebook.com/sidlaghatta
Instagram 📷
http://www.instagram.com/sidlaghatta
Youtube ▶️
https://www.youtube.com/c/sidlaghatta
Website 🌐
http://www.sidlaghatta.com
📱 Join WhatsApp
https://wa.me/917406303366?text=Hi
ಶಿಡ್ಲಘಟ್ಟ ತಾಲ್ಲೂಕಿನಲ್ಲಿ 9 ಕೊರೊನಾ ಪಾಸಿಟೀವ್ ಪ್ರಕರಣಗಳು ದಾಖಲು
ನಗರ ಮತ್ತು ತಾಲ್ಲೂಕಿನಲ್ಲಿ ಗುರುವಾರ 9 ಮಂದಿಗೆ ಕೊರೊನಾ ಸೋಂಕು ತಗುಲಿದೆ. ನಗರದ ಫಿಲೇಚರ್ ಕ್ವಾಟರ್ಸ್ ನ 50 ವರ್ಷದ ಮಹಿಳೆ, ಶೆಟ್ಟಿಹಳ್ಳಿಯ 57 ವರ್ಷದ ವ್ಯಕ್ತಿ, ಮೇಲೂರಿನ ಏಳು ಮಂದಿಗೆ ಕೊರೊನಾ ಸೋಂಕು ತಗುಲಿದೆ.
ತಾಲ್ಲೂಕಿನ ಮೇಲೂರಿನ 43 ವರ್ಷದ ಗಂಡಸು, 70 ವರ್ಷದ ವೃದ್ಧ, 54 ವರ್ಷದ ಗಂಡಸು, 40 ವರ್ಷದ ಮಹಿಳೆ, 46 ವರ್ಷದ ಗಂಡಸು, 48 ವರ್ಷದ ಗಂಡಸು, 55 ವರ್ಷದ ಗಂಡಸಿಗೆ ಸೋಂಕು ತಗುಲಿದೆ.
ರ್ಯಾಪಿಡ್ ಆಂಟಿಜನ್ ಕಿಟ್‌ನ ಮೂಲಕ ಮೇಲೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಸಿದ ಪರೀಕ್ಷೆಯಿಂದಾಗಿ ಮೇಲೂರಿನ 45 ವರ್ಷದ ವ್ಯಕ್ತಿಯೊಬ್ಬರಿಗೆ ಪಾಸಿಟಿವ್ ಎಂಬುದು ತಿಳಿದು ಬಂದಿದೆ. ಆರೋಗ್ಯ ಸಿಬ್ಬಂದಿ ಸೋಂಕಿತರನ್ನು ಕೋವಿಡ್ ಆಸ್ಪತ್ರೆಗೆ ಆಂಬುಲೆನ್ಸ್ ನಲ್ಲಿ ಕಳುಹಿಸಿದ್ದಾರೆ. ಸೋಂಕಿತರು ವಾಸಿಸುತ್ತಿದ್ದ ಪ್ರದೇಶವನ್ನು ಸೀಲ್ ಡೌನ್ ಮಾಡಿ, ಸೂಕ್ಷ್ಮಾಣು ನಾಶಕವನ್ನು ಸಿಂಪಡಣೆ ಮಾಡಿಸಿದ್ದಾರೆ.
Sidlaghatta Cocoon Market Watch – 23/07/2020
Sidlaghatta Cocoon Market Watch
Date: 23/07/2020
CB Lots: 364
Qty: 19697 Kgs
Max: 282
Min: 159
Avg: 229
BV Lots: 02
Qty: 112 Kgs
Max: 216
Min: 214
AVG: 215
SUBSCRIBE, LIKE & SHARE ನಮ್ಮ ಶಿಡ್ಲಘಟ್ಟ
Facebook 👍🏻
http://www.facebook.com/sidlaghatta
Instagram 📷
http://www.instagram.com/sidlaghatta
Youtube ▶️
https://www.youtube.com/c/sidlaghatta
Website 🌐
http://www.sidlaghatta.com
📱 Join WhatsApp
https://wa.me/917406303366?text=Hi
ರಾಜ್ಯ ಸರ್ಕಾರ ಕೊರೊನಾ ಸೋಂಕು ನಿಯಂತ್ರಿಸಲು ಕಠಿಣ ಕ್ರಮ ಕೈಗೊಂಡಿದೆ – ನಳಿನ್‌ಕುಮಾರ್ ಕಟೀಲ್
ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಕೊರೊನಾ ಸೋಂಕು ನಿಯಂತ್ರಿಸಲು ಕಠಿಣ ಕ್ರಮ ಕೈಗೊಂಡಿದೆ. ಬಿಜೆಪಿ ಪಕ್ಷದಿಂದ ಈಗಾಗಲೇ 1.5 ಕೋಟಿ ಜನಗಳಿಗೆ ಆಹಾರ ಸಾಮಾಗ್ರಿಗಳು ವಿತರಿಸಿದ್ದೇವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ತಿಳಿಸಿದರು.
ಬುಧವಾರ ನಗರದ ಹೊರವಲಯದ ಹಂಡಿಗನಾಳದ ಬಾಲಾಜಿ ಕಲ್ಯಾಣಮಂಟಪದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿದರು. ಕೊರೊನಾ ಸೋಂಕು ನಿಯಂತ್ರಿಸಲು ಪರಿಕರಗಳ ಖರೀದಿಯಲ್ಲಿ ಭ್ರಷ್ಟಚಾರ ನಡೆದಿದೆ ಎಂಬ ಆರೋಪದಲ್ಲಿ ಹುರುಳಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ನಮ್ಮ ಸಚಿವರು ಈಗಾಗಲೇ ಉತ್ತರಿಸಿದ್ದಾರೆ. ಭ್ರಷ್ಟಚಾರ ಮಾಡಿ ಯಾರು ಎಲ್ಲಿಗೆ ಹೋಗಿ ಬಂದಿದ್ದಾರೆ ಎಂಬುದು ರಾಜ್ಯದ ಜನರಿಗೆ ತಿಳಿದಿದೆ ಎಂದು ಲೇವಡಿ ಮಾಡಿದರು.
ಕರೊನಾ ಸಂಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಲು ಬೂತ್ ಮಟ್ಟದಲ್ಲಿ ಸಮಿತಿಗಳನ್ನು ರಚಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಸಂಬಂಧ ರಾಜ್ಯಾದ್ಯಂತ ಪ್ರವಾಸವನ್ನು ಕೈಗೊಳ್ಳಲು ನಿರ್ಧರಿಸಿ ಈಗಾಗಲೇ ಮೈಸೂರು ಭಾಗದಲ್ಲಿ ಪ್ರವಾಸವನ್ನು ಮುಗಿಸಿ, ಕೋಲಾರ ಜಿಲ್ಲಾ ಭಾಗದಲ್ಲಿ ಪ್ರವಾಸವನ್ನು ಕೈಗೊಂಡು, ಚಿಕ್ಕಬಳ್ಳಾಪುರ ಜಿಲ್ಲಾ ಪದಾಧಿಕಾರಿಗಳ ಸಭೆಗಳನ್ನು ನಡೆಸಿದ್ದೇನೆ ಎಂದರು.
ರಾಜ್ಯದಲ್ಲಿ ತಜ್ಞರ ಸಲಹೆಯಂತೆ ಲಾಕ್‌ಡೌನ್ ತೆರವುಗೊಳಿಸಲಾಗಿದೆ. ಇದರಿಂದ ಕೊರೊನಾ ಸೋಂಕು ಹೆಚ್ಚಳವಾಗುತ್ತದೆ ಎಂಬ ಪ್ರಶ್ನೆ ಉದ್ಭವಿಸುವುದಿಲ್ಲ. ಸರ್ಕಾರದ ನಿರ್ಧಾರವನ್ನು ಪಕ್ಷ ಸ್ವಾಗತಿಸುತ್ತದೆ. ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಪಕ್ಷದ ಕಾರ್ಯಕರ್ತರು ಹಗಲಿರುಳು ಶ್ರಮಿಸಿ ಅವರಿಗೆ ಸಾಥ್ ನೀಡುತ್ತಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್‌ಕುಮಾರ್, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಮಲಿಂಗಪ್ಪ, ಮಾಜಿ ಅಧ್ಯಕ್ಷ ಡಾ.ಮಂಜುನಾಥ್, ಶಿಡ್ಲಘಟ್ಟ ಗ್ರಾಮಾಂತರ ಮಂಡಲ ಅಧ್ಯಕ್ಷ ಸುರೇಂದ್ರಗೌಡ, ನಗರ ಮಂಡಲ ಅಧ್ಯಕ್ಷ ರಾಘವೇಂದ್ರ, ಬಿ.ಸಿ.ನಂದೀಶ್, ರಮೇಶ್ ಬಾಯಿರಿ ಹಾಗೂ ಜಿಲ್ಲಾ ಪದಾಧಿಕಾರಿಗಳು ಹಾಜರಿದ್ದರು.
ಆನೂರು ಪಿ.ವಿ.ನಾಗರಾಜ್
ಮಾಜಿ ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ, ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯ ಹಾಗೂ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಆನೂರು ಪಿ.ವಿ.ನಾಗರಾಜ್ (70), ಬುಧವಾರ ನಿಧನರಾಗಿದ್ದಾರೆ. ಮೂತ್ರಪಿಂಡದ ಸಮಸ್ಯೆಯಿಂದ ಅವರು ಬಳಲುತ್ತಿದ್ದರು. ಮೃತರು ಪತ್ನಿ ಹಾಗೂ ಮೂವರು ಗಂಡು ಮಕ್ಕಳು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಅಂತ್ಯಸಂಸ್ಕಾರವನ್ನು ಗುರುವಾರ ಬೆಂಗಳೂರಿನಲ್ಲಿ ನಡೆಸುವುದಾಗಿ ಕುಟುಂಬದವರು ತಿಳಿಸಿದ್ದಾರೆ.

