25.1 C
Sidlaghatta
Saturday, December 27, 2025
Home Blog Page 41

ಮಾಜಿ ಮುಖ್ಯಮಂತ್ರಿ ದಿ.ದೇವರಾಜು ಅರಸು ಅವರ 110ನೇ ಜನ್ಮ ದಿನಾಚರಣೆ

0
Devaraj Urs Birth Anniversary Celebration

Sidlaghatta : ಈ ನಾಡಿನಲ್ಲಿ ಹಿಂದುಳಿದ ವರ್ಗಗಳ ಸಮುದಾಯದ ಶ್ರೇಯಸ್ಸು, ಅಭಿವೃದ್ದಿಗೆ ಶ್ರಮಿಸಿದ ಮಹನೀಯರಲ್ಲಿ ಶ್ರೀದೇವರಾಜು ಅರಸು ಅವರು ಮುಂಚೂಣಿಯಲ್ಲಿ ನಿಲ್ಲುತ್ತಾರೆ ಎಂದು ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಮೇಲೂರು ಮಂಜುನಾಥ್ ಅಭಿಪ್ರಾಯಪಟ್ಟರು.

ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಶ್ರಯದಲ್ಲಿ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಶ್ರೀದೇವರಾಜು ಅರಸು ಅವರ 110 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇವರಾಜು ಅರಸು ಮುಖ್ಯಮಂತ್ರಿ ಆಗಿದ್ದಾಗ ಕೇವಲ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗಷ್ಟೆ ಹಾಸ್ಟೆಲ್‌ ಗಳು ಇದ್ದವು. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಹಾಗೂ ಅವರ ಕುಟುಂಬಗಳ ಆರ್ಥಿಕ, ಸಾಮಾಜಿಕ ಸಮಸ್ಯೆ ಅರಿತು ಹಿಂದುಳಿದ ವರ್ಗಗಳ ಹಾಸ್ಟೆಲ್‌ ಗಳನ್ನು ಆರಂಭಿಸಿದರು. ಇದೀಗ ಲಕ್ಷ ಲಕ್ಷ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗಿದ್ದು ಅದರ ಕೀರ್ತಿ ಅರಸು ಅವರಿಗೆ ಸಲ್ಲಬೇಕು ಎಂದರು.

ಇದಲ್ಲದೆ ಅವರು ಜಾರಿಗೆ ತಂದ ಕ್ರಾಂತಿಕಾರಿ ಯೋಜನೆ, ಉಳುವವನೆ ಭೂಮಿಯ ಒಡೆಯ ಭೂ ಕಾಯಿದೆಯಿಂದ ರಾಜ್ಯದಲ್ಲಿ ಲಕ್ಷಾಂತರ ಕುಟುಂಬಗಳಿಗೆ ಭೂಮಿ ದೊರೆತು ಅದರಿಂದ ಅವರು ಬದುಕು ಕಟ್ಟಿಕೊಳ್ಳಲು ಸಾಧ್ಯವಾಯಿತು. ಇಂತಹ ಕ್ರಾಂತಿಕಾರಕ ಯೋಜನೆಗಳಿಂದ ಅರಸು ಅವರು ಈ ನಾಡಿನ ಜನಮಾನಸದಲ್ಲಿ ಇಂದಿಗೂ ಉಳಿದಿದ್ದಾರೆ ಎಂದು ಹೇಳಿದರು.

ದೇವರಾಜು ಅರಸು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪ ನಮನಗಳನ್ನು ಸಲ್ಲಿಸಲಾಯಿತು. ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿನ ಎಸ್.ಎಸ್.ಎಲ್.ಸಿ ಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಲಾಯಿತು. ನಿವೃತ್ತ ಶಿಕ್ಷಕ ವಿ.ಕೃಷ್ಣ ಅವರು ದೇವರಾಜು ಅರಸು ಅವರ ಜೀವನ ಚರಿತ್ರೆ ಕುರಿತು ಪ್ರಧಾನ ಭಾಷಣ ಮಾಡಿದರು.

ತಹಶೀಲ್ದಾರ್ ಎನ್.ಗಗನ ಸಿಂಧು, ತಾಲ್ಲೂಕು ಪಂಚಾಯಿತಿ ಇಒ ಆರ್.ಹೇಮಾವತಿ, ಬಿಇಒ ನರೇಂದ್ರ ಕುಮಾರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ನಾಗರಾಜ್, ಹಿಂದುಳಿದ ವರ್ಗಗಳ ಮೀಸಲಾತಿ ಕಲ್ಪಿಸುವ ಸಮಿತಿ ಸದಸ್ಯ ಅರಿಕೆರೆ ಶ್ರೀನಿವಾಸ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಚ್.ಬಿ.ನವೀನ್ ಕುಮಾರ್, ವೀಣಾ, ಮುನಿರಾಜು, ವೆಂಕಟೇಶ್, ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ಸಂಘ ಸಂಸ್ಥೆಗಳ ಮುಖಂಡರು ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ಶಿಡ್ಲಘಟ್ಟಕ್ಕೆ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಅಧಿಕಾರಿಗಳ ತಂಡ ಭೇಟಿ

0
Sidlaghatta govt regional imbalance study team visit

Sidlaghatta : ಜೀವನ್ ಜ್ಯೋತಿ ವಿಮಾ ಯೋಜನೆ ಮತ್ತು ಸುರಕ್ಷಾ ವಿಮೆ ಯೋಜನೆ ಬಗ್ಗೆ ನಾಗರಿಕರಲ್ಲಿ ಹೆಚ್ಚು ಜನ ಜಾಗೃತಿ ಮೂಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಪ್ರೊ.ಗೋವಿಂದರಾವ್ ಸಮಿತಿ(ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ)ಯ ಸದಸ್ಯ ಕಾರ್ಯದರ್ಶಿ ಡಾ.ಆರ್.ವಿಶಾಲ್ ಸೂಚಿಸಿದರು.

ನಗರಕ್ಕೆ ಭೇಟಿ ನೀಡಿದ ಅವರು, ಸಾರ್ವಜನಿಕ ಆಸ್ಪತ್ರೆ, ನೆಹರೂ ಕ್ರೀಡಾಂಗಣ, ಹಲವೆಡೆ ಜಲ ಜೀವನ್ ಮಿಷನ್‌ ನಡಿ ಕಾಮಗಾರಿಗಳನ್ನು ವೀಕ್ಷಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಶಿಡ್ಲಘಟ್ಟವು ಹಿಂದುಳಿದ ತಾಲ್ಲೂಕು ಆಗಿದೆ. ನಗರ ಮತ್ತು ಗ್ರಾಮೀಣ ಭಾಗಗಳಲ್ಲಿ ಇನ್ನೂ ಏನೇನು ಅಭಿವೃದ್ದಿ ಕಾರ್ಯಗಳು ಆಗಬೇಕಿದೆ. ಮುಖ್ಯವಾಗಿ ಏನೇನು ಕೊರತೆಗಳಿವೆ.ಕಳೆದ ಹತ್ತು ವರ್ಷಗಳಲ್ಲಿ ಏನೆಲ್ಲಾ ಬದಲಾವಣೆಗಳು ಆಗಿವೆ ಎಂಬುದರ ಬಗ್ಗೆ ಸಂಬಂಧಿಸಿದವರಿಂದ ಮಾಹಿತಿ ಪಡೆದು ಖುದ್ದು ಪರಿಶೀಲಿಸಲು ಬಂದಿರುವುದಾಗಿ ತಿಳಿಸಿದರು.

ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ್ದು ಆಸ್ಪತ್ರೆಯಲ್ಲಿ ಸ್ವಚ್ಚತೆ ಕಾಪಾಡಿಕೊಂಡಿದ್ದು, ನಾಯಿ ಕಡಿತ, ಹಾವು ಕಡಿತಕ್ಕೆ ಚುಚ್ಚು ಮದ್ದು ಸೇರಿದಂತೆ ಔಷಗಳು ಲಭ್ಯವಿವೆ. ವೈದ್ಯರು ಮತ್ತು ಸಿಬ್ಬಂದಿಯ ನೇಮಕಾತಿ ಇನ್ನಷ್ಟು ಆಗಬೇಕಿದೆ. ಸರ್ಕಾರವು 100 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಿ ಎಂದು ಆದೇಶಿಸಿದ್ದರೂ ಆಗಿರಲಿಲ್ಲ. ಇತ್ತೀಚೆಗೆ ಆಗಿದೆ ಎಂದರು.

ಹಾಗೆಯೆ ಆರ್ಥಿಕ ಇಲಾಖೆಯಡಿಯಲ್ಲಿ ನಬಾರ್ಡ್ ಮೂಲಕ ನಡೆಯುತ್ತಿರುವ ಆರ್‌.ಐ.ಡಿ.ಎಫ್ ಯೋಜನೆಗಳು, ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ, ಪಶು ಚಿಕಿತ್ಸಾ ಆಸ್ಪತ್ರೆಯ ಕಾರ್ಯವೈಖರಿ ಕುರಿತು ಪರಿಶೀಲನೆ ನಡೆಸಲಾಗುವುದು ಎಂದರು.

ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಜಂಗಮಕೋಟೆ ವ್ಯಾಪ್ತಿಯ ಹೊಸಪೇಟೆ ಪಂಚಾಯತ್‌ ನಲ್ಲಿ ಓವರ್ ಹೆಡ್ ಟ್ಯಾಂಕ್‌ ನ್ನು ವೀಕ್ಷಿಸಿದೆ. ಜನರಿಗೆ ಈ ಯೋಜನೆಗಳು ಎಷ್ಟು ಪ್ರಯೋಜನಕಾರಿಯಾಗಿವೆ ಎನ್ನುವುದನ್ನು ತಿಳಿಯಲು ಸ್ಥಳ ಪರಿಶೀಲನೆ, ಅಧಿಕಾರಿಗಳಿಂದ ಮಾಹಿತಿ ಸಂಗ್ರಹ ಮತ್ತು ನಾಗರಿಕರ ಅಭಿಪ್ರಾಯವನ್ನು ಪಡೆಯಲಾಗುವುದು ಎಂದು ಹೇಳಿದರು.

ಮುಖ್ಯವಾಗಿ ಜನಜೀವನ ಮಟ್ಟ ಸುಧಾರಣೆಗಾಗಿ ಸರ್ಕಾರ ಹಾಗೂ ಆಡಳಿತದಿಂದ ಇನ್ನಷ್ಟು ಬೆಂಬಲ ನೀಡಲಾಗುವುದು ಎಂದು ಭರವಸೆ ನೀಡಿದ ಅವರು, ಜೀವನ್ ಜ್ಯೋತಿ ಭೀಮಾ ಯೋಜನೆ, ಸುರಕ್ಷಾ ಭೀಮಾ ಹಾಗೂ ಆರೋಗ್ಯ ವಿಮೆ ಯೋಜನೆಗಳ ಬಗ್ಗೆ ಹೆಚ್ಚಿನ ಪ್ರಚಾರ ಆಗಬೇಕಿದೆ ಎಂದರು.

ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು, ಬ್ಯಾಂಕ್‌ ನವರಿಗೂ ಸೂಚಿಸಿದ್ದು ಮಾಧ್ಯಮದವರು ಕೂಡ ಸಾರ್ವಜನಿಕರ ಹಿತಾಸಕ್ತಿಯಡಿ ಈ ನಿಟ್ಟಿನಲ್ಲಿ ಹೆಚ್ಚು ಪ್ರಚಾರ ಮಾಡಬೇಕು. ಜನರಿಗೆ ಆರೋಗ್ಯ ವಿಮೆ ಯೋಜನೆ ಉಪಯೋಗ ಸಿಗಬೇಕು. ಇದರಿಂದ ಸಾರ್ವಜನಿಕರಿಗೂ, ವ್ಯವಸ್ಥೆಗೂ ಒಳ್ಳೆಯದು ಎಂದರು.

ಸಾರ್ವಜನಿಕ ಆಸ್ಪತ್ರೆಯಲ್ಲಿ ಸಿಗುವ ಸವಲತ್ತುಗಳ ಬಗ್ಗೆ ಆಸ್ಪತ್ರೆಗೆ ಬಂದಿದ್ದ ರೋಗಿಗಳು ಮತ್ತು ಅವರ ಜತೆಗಿದ್ದವರನ್ನು, ಕ್ರೀಡಾಂಗಣದಲ್ಲಿ ಕೈಗೊಳ್ಳಬೇಕಾದ ಅಭಿವೃದ್ದಿ, ಮೂಲ ಸೌಕರ್ಯಗಳ ಬಗ್ಗೆ ಅಲ್ಲಿದ್ದ ಕ್ರೀಡಾಪಟುಗಳು, ಸಾರ್ವಜನಿರ ಬಳಿ ಅಭಿಪ್ರಾಯ ಸಂಗ್ರಹಿಸಿದರು. ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್, ತಹಶೀಲ್ದಾರ್ ಗಗನ ಸಿಂಧು, ಪೌರಾಯುಕ್ತೆ ಜಿ.ಅಮೃತ, ತಾಲ್ಲೂಕು ಪಂಚಾಯಿತಿ ಇಒ ಆರ್.ಹೇಮಾವತಿ ಜತೆಗಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-20/08/2025

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 20/08/2025

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 353
Qty: 18378 Kg
Mx : ₹ 700
Mn: ₹ 405
Avg: ₹ 597

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 27
Qty: 1513 Kg
Mx : ₹ 763
Mn: ₹ 525
Avg: ₹ 627


For Daily Updates WhatsApp ‘HI’ to 7406303366

ಕೋಳಿ ಸಾಕಾಣಿಕೆಯನ್ನು ಕೃಷಿಯೆಂದು ಪರಿಗಣಿಸಿ

0
Sidlaghatta farmers urge govt to designate Chicken Farming

Sidlaghatta : ಕೋಳಿ ಸಾಕಾಣಿಕೆಯನ್ನು ಕೃಷಿಯೆಂದು ಪರಿಗಣಿಸಿ ಕುಕ್ಕುಟ ಉದ್ಯಮದ ಸಮರ್ಪಕ ನಿರ್ವಹಣೆಗೆ ನೂತನ ಕಾನೂನು ರೂಪಿಸುವ ಜೊತೆಗೆ ಸಹಕಾರಿ ಕ್ಷೇತ್ರವನ್ನಾಗಿ ಮಾಡಬೇಕು ಎಂದು ರಾಜ್ಯ ಕೋಳಿ ಸಾಕಾಣಿಕೆದಾರ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಅಧ್ಯಕ್ಷ ಮಳಮಾಚನಹಳ್ಳಿ ಮುನೇಗೌಡ ಒತ್ತಾಯಿಸಿದರು.

ತಾಲ್ಲೂಕು ತಹಶೀಲ್ದಾರ್ ಗಗನಸಿಂಧು ಅವರ ಮುಖಾಂತರ ರಾಜ್ಯದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿಯನ್ನು ಸಲ್ಲಿಸಿ ಮಾತನಾಡಿದರು.

ಕೋಳಿ ಸಾಕಾಣಿಕೆಯನ್ನು ಕೃಷಿಯೆಂದು ಪರಿಗಣಿಸಬೇಕು ಎಂದು ಒತ್ತಾಯಿಸಿ ಕಳೆದ ಹಲವಾರು ವರ್ಷಗಳಿಂದ ಹೋರಾಟ ಮಾಡುತ್ತಾ ಬಂದಿದ್ದೇವಾದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಕೋಳಿ ಸಾಕಾಣಿಕೆದಾರರಿಗೆ ಸರ್ಕಾರದಿಂದ ಯಾವುದೇ ರೀತಿಯಾದಂತಹ ಸವಲತ್ತುಗಳು ದೊರಕುತ್ತಿಲ್ಲ.

ಕೋಳಿ ಸಾಕಾಣಿಕೆದಾರರು ಹಲವು ಸಂಕಷ್ಟಗಳನ್ನು ಎದುರಿಸುತ್ತಿದ್ದು, ಕೃಷಿಗೆ ಸಿಗುವಂತಹ ಹಲವು ಸೌಲಭ್ಯಗಳು ಕೋಳಿ ಸಾಕಾಣಿಕೆದಾರರಿಗೆ ಸಿಗಬೇಕು. ರೈತರಿಗೆ ಕೋಳಿ ಸಾಕಣಿಕೆ ದರ ಪ್ರತಿ ಕೆಜಿಗೆ ಕನಿಷ್ಠ ದರ 12 ರೂಪಾಯಿಗಳನ್ನು ನಿಗಧಿ ಮಾಡಬೇಕೆಂದು ಒತ್ತಾಯಿಸಿ ತಹಶೀಲ್ದಾರ್ ಮುಖಾಂತರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ತಾಲ್ಲೂಕು ಉಪಾಧ್ಯಕ್ಷ ರಾಮಚಂದ್ರಪ್ಪ ಮಾತನಾಡಿ, ನಮ್ಮ ರಾಜ್ಯ ಕೋಳಿ ಸಾಕಾಣಿಕೆದಾರರ ಕ್ಷೇಮಾಭಿವೃದ್ಧಿ ಸಂಘದ ನಿರ್ದೇಶನದಂತೆ ರಾಜ್ಯದ್ಯಂತ ಪ್ರತಿ ತಾಲ್ಲೂಕಿನಲ್ಲಿಯೂ ತಹಶೀಲ್ದಾರ್ ಮುಕೇನ ರಾಜ್ಯ ಸರ್ಕಾರಕ್ಕೆ ಮನವಿ ಪತ್ರಗಳನ್ನು ಸಲ್ಲಿಸುತ್ತಿದ್ದು, ರಾಜ್ಯದ ಮುಖ್ಯಮಂತ್ರಿಗಳು ಕೋಳಿ ಸಾಕಾಣಿಕೆದಾರರ ಹಿತ ಕಾಪಾಡುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಸಂಘದ ತಾಲೂಕು ಕಾರ್ಯದರ್ಶಿ ಬಿ.ಪಿ.ಶಿವಾಜಿ, ಕೋಳಿ ಸಾಕಾಣಿಕೆದಾರರಾದ ಕೋಟಹಳ್ಳಿ ಶ್ರೀನಿವಾಸ್, ಬೋದಗೂರು ನಾಗೇಶ್, ಬಶೆಟ್ಟಹಳ್ಳಿ ಡಿ.ಬಿ.ವೆಂಕಟೇಶ್, ಮುತ್ತೂರು ಜಯಚಂದ್ರ, ತಾದೂರು ಮಹೇಶ್, ಬಸವಾಪಟ್ಟಣ ಬೈರೇಗೌಡ, ಮಂಜುನಾಥ್ ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ಬೀದಿ ನಾಯಿಗಳ ದಾಳಿ – 13 ವರ್ಷದ ಬಾಲಕನಿಗೆ ತೀವ್ರ ಗಾಯ

0
Street dogs Bite Injured 13 year old boy

Sidlaghatta : ಶಿಡ್ಲಘಟ್ಟ ನಗರದ ನೆಹರು ಕ್ರೀಡಾಂಗಣದಲ್ಲಿ ಬೀದಿ ನಾಯಿಗಳು ದಾಳಿ ನಡೆಸಿದ್ದರಿಂದಾಗಿ 13 ವರ್ಷದ ಬಾಲಕನಿಗೆ ತೀವ್ರ ಗಾಯಗಳಾಗಿವೆ. ಚರಣ್ (13) ಎಂಬ ಬಾಲಕ ಸೋಮವಾರ ಕ್ರೀಡಾಂಗಣದಲ್ಲಿ ಆಟವಾಡುತ್ತಿದ್ದಾಗ, ಇದ್ದಕ್ಕಿದ್ದಂತೆ 15 ಕ್ಕೂ ಹೆಚ್ಚು ಬೀದಿ ನಾಯಿಗಳ ಹಿಂಡು ಆತನ ಮೇಲೆ ದಾಳಿ ಮಾಡಿ ಕಚ್ಚಿದೆ.

ಆಟದಲ್ಲಿ ತಲ್ಲೀನನಾಗಿದ್ದ ಬಾಲಕನ ಮೇಲೆ ಏಕಾಏಕಿ ಹಾವಳಿ ಮಾಡಿದ ನಾಯಿಗಳ ಹಿಂಡು, ಚರಣ್‌ ನ ಕಾಲು, ಕೈ ಮತ್ತು ಬೆನ್ನಿನ ಭಾಗಗಳಲ್ಲಿ ಆಳವಾದ ಗಾಯಗಳನ್ನು ಉಂಟುಮಾಡಿದೆ. ಬಾಲಕನ ಕಿರುಚಾಟ ಕೇಳಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡುತ್ತಿದ್ದ ಯುವಕರು ಧಾವಿಸಿ ನಾಯಿಗಳನ್ನು ಓಡಿಸಿ ಬಾಲಕನನ್ನು ರಕ್ಷಿಸಿದ್ದಾರೆ. ತಕ್ಷಣವೇ ಗಾಯಾಳುವನ್ನು ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಪೌರಾಯುಕ್ತೆ ಜಿ. ಅಮೃತ ಆಸ್ಪತ್ರೆಗೆ ಭೇಟಿ ನೀಡಿ ಬಾಲಕನ ಆರೋಗ್ಯ ವಿಚಾರಿಸಿದರು. ಬಳಿಕ ಮಾತನಾಡಿದ ಅವರು, “ನಗರದಲ್ಲಿ ನಿರ್ಬಂಧವಿಲ್ಲದೆ ಹೆಚ್ಚುತ್ತಿರುವ ಬೀದಿ ನಾಯಿಗಳ ನಿಯಂತ್ರಣಕ್ಕೆ ಈಗಾಗಲೇ ಟೆಂಡರ್ ಕರೆದಿದ್ದು, ಅತೀ ಶೀಘ್ರದಲ್ಲೇ ಕ್ರಮ ಜರುಗಿಸಲಾಗುತ್ತದೆ. ಜೊತೆಗೆ ಮಾಂಸಾಹಾರಿ ಅಂಗಡಿಗಳನ್ನು ಒಂದೇ ಪ್ರದೇಶಕ್ಕೆ ಒಗ್ಗೂಡಿಸಲು ಶಾಸಕರ ಜೊತೆ ಚರ್ಚೆ ನಡೆಯಲಿದೆ” ಎಂದು ಭರವಸೆ ನೀಡಿದರು.

ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೊಸದಿಲ್ಲ. ಕಳೆದ ಕೆಲ ತಿಂಗಳಲ್ಲೇ ಹಲವರು ಗಾಯಗೊಂಡಿದ್ದಾರೆ. ಆದರೂ ಸಮಸ್ಯೆ ಬಗೆಹರಿಯದೇ ಇರುವುದರಿಂದ ಸಾರ್ವಜನಿಕರಲ್ಲಿ ಭೀತಿ ಹೆಚ್ಚಾಗಿದೆ. ಸ್ಥಳೀಯರು ಮಾತನಾಡಿ, “ಅಧಿಕಾರಿಗಳು ಮಾತಿನ ಭರವಸೆ ನೀಡುವುದರಲ್ಲೇ ಸೀಮಿತವಾಗಿದ್ದಾರೆ. ಯಾವುದೇ ಸ್ಪಷ್ಟ ಕ್ರಮ ಗೋಚರಿಸುತ್ತಿಲ್ಲ. ಇದೇ ರೀತಿ ಮುಂದುವರೆದರೆ ಉಗ್ರ ಹೋರಾಟ ನಡೆಸುವುದು ಅನಿವಾರ್ಯ” ಎಂದು ಎಚ್ಚರಿಕೆ ನೀಡಿದ್ದಾರೆ.

ಸ್ಥಳೀಯರು ನಗರಸಭೆಯ ನಿರ್ಲಕ್ಷ್ಯ, ನಾಯಿಗಳಿಗೆ ಆಹಾರ ಒದಗಿಸುವ ಮಾಂಸ ಅಂಗಡಿಗಳ ನಿರ್ಬಂಧವಿಲ್ಲದಿರುವುದು ಮತ್ತು ನಾಯಿಗಳಿಗೆ ಸಮರ್ಪಕ ಶಸ್ತ್ರಚಿಕಿತ್ಸಾ ಕಾರ್ಯಕ್ರಮಗಳ ಕೊರತೆ ಪ್ರಮುಖ ಕಾರಣವೆಂದು ಆರೋಪಿಸುತ್ತಿದ್ದಾರೆ. ಈ ಘಟನೆ ಬಳಿಕ ನಗರದಲ್ಲಿ ಒಂದೆಡೆ ಭೀತಿ, ಆತಂಕ, ಮತ್ತೊಂದೆಡೆ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿದೆ.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-19/08/2025

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 19/08/2025

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 364
Qty: 19142 Kg
Mx : ₹ 699
Mn: ₹ 357
Avg: ₹ 580

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 07
Qty: 449 Kg
Mx : ₹ 690
Mn: ₹ 559
Avg: ₹ 623


For Daily Updates WhatsApp ‘HI’ to 7406303366

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾಮಟ್ಟದ ಪರೀಕ್ಷಾ ಶಿಬಿರ

0
Scouts and Guides District Level Camp

Sidlaghatta : ಶಿಡ್ಲಘಟ್ಟ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ಜಿಲ್ಲಾ ಮಟ್ಟದ ನಿಪುಣ, ತೃತೀಯ ಸೋಪಾನ ಪರೀಕ್ಷಾ ಶಿಬಿರ ಮತ್ತು ರಾಜ್ಯ ಪುರಸ್ಕಾರ ಪೂರ್ವ ಸಿದ್ಧತಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಾಲಿನಲ್ಲಿ ರಾಜ್ಯಪಾಲರ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸುವ ಸ್ಕೌಟ್ಸ್ ಮತ್ತು ಗೈಡ್ಸ್ ರೋವರ್ಸ್ ಮತ್ತು ರೇಂಜರ್ಸ್ ಅವರಿಗಾಗಿ ಪೂರ್ವ ಸಿದ್ಧತಾ ಪರೀಕ್ಷೆಯನ್ನು ಹಾಗೂ ಜಿಲ್ಲಾ ಪುರಸ್ಕಾರಕ್ಕಾಗಿ ತೃತೀಯ ಸೋಪಾನ ಪರೀಕ್ಷಾ ಶಿಬಿರವನ್ನು ನಡೆಸಲಾಯಿತು.

ತೃತೀಯ ಸೋಪಾನ ಶಿಬಿರದಲ್ಲಿ ಉತ್ತೀರ್ಣ ಗೊಳ್ಳುವ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಮುಂದಿನ ಸಾಲಿಗೆ ರಾಜ್ಯಪಾಲರ ಪ್ರಮಾಣ ಪತ್ರಕ್ಕಾಗಿ ರಾಜ್ಯ ಪುರಸ್ಕಾರ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಪಡೆಯಲಿದ್ದಾರೆ.

ಜಿಲ್ಲಾ ಸಂಸ್ಥೆಯ ಕಾರ್ಯದರ್ಶಿ ಸಿ.ಬಿ ಪ್ರಕಾಶ್ ಮಾತನಾಡಿ, ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆಯು ಕೇವಲ ಸೇವ ಕಾರ್ಯಗಳಿಗೆ ಮಾತ್ರ ಸೀಮಿತವಾಗಿರದೆ ವಿದ್ಯಾರ್ಥಿಗಳ ಪ್ರಗತಿಪರ ಬೆಳವಣಿಗೆಗೆ ಹಾಗೂ ಕೌಶಲ್ಯಯುಕ್ತ ಜೀವನ ನಡೆಸಲು ಅನೇಕ ಹಲವಾರು ಅಂಶಗಳನ್ನು ಒಳಗೊಂಡಿದೆ. ಅಪಘಾತದ ಸಮಯದಲ್ಲಿ ಚಿಕಿತ್ಸೆ ನೀಡಲು ಪ್ರಥಮ ಚಿಕಿತ್ಸೆ ತರಬೇತಿ, ಸ್ಕೌಟಿಂಗ್ ನ ಇತಿಹಾಸ, ಸಮಾಜದೊಂದಿಗೆ ವಿದ್ಯಾರ್ಥಿಗಳ ಸಂವಹನ, ಸ್ವಯಂಶಿಸ್ತು ಹೀಗೆ ಹಲವಾರು ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರತಿದಿನ ಶಾಲೆಗಳಲ್ಲಿ ತರಬೇತಿಯನ್ನು ನೀಡಲಾಗುತ್ತಿದ್ದು, ಈ ಅಂಶಗಳನ್ನು ಪರೀಕ್ಷಾ ಶಿಬಿರದಲ್ಲಿ ಪರೀಕ್ಷಿಸಲಾಗುವುದು ಎಂದು ತಿಳಿಸಿದರು.

ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ಜಗತ್ತಿನ 216 ದೇಶಗಳಲ್ಲಿ ಒಂದೇ ನಿಯಮ ಮತ್ತು ತತ್ವಗಳ ಆಧಾರದಲ್ಲಿ ನಡೆಯುತ್ತಿರುವ ಏಕ ಮಾತ್ರ ಸಮವಸ್ತ್ರಧಾರಿ ಸಂಸ್ಥೆಯಾಗಿದ್ದು ಸದೃಢ ರಾಷ್ಟ್ರ ನಿರ್ಮಾಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪೋಷಕರು ಸ್ಕೌಟ್ಸ್ ಮತ್ತು ಗೈಡ್ ಸಂಸ್ಥೆಗೆ ತಮ್ಮ ಮಕ್ಕಳನ್ನು ಸೇರಿಸಬೇಕೆಂದು ಮನವಿ ಮಾಡಿದರು.

ಈ ಶಿಬಿರದಲ್ಲಿ ಜಿಲ್ಲೆಯ ವಿವಿಧ ತಾಲ್ಲೂಕುಗಳ 30 ರೋವರ್ಸ್ ಮತ್ತು ರೇಂಜರ್ಸ್ ಗಳು, 140 ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, 18 ಶಿಕ್ಷಕರು, ಎಲ್ಲ ತಾಲ್ಲೂಕು ಸಂಸ್ಥೆಗಳ ಕಾರ್ಯದರ್ಶಿಗಳು, ಪದಾಧಿಕಾರಿಗಳು ಸೇರಿದಂತೆ ಸುಮಾರು 200 ಜನ ಭಾಗವಹಿಸಿದ್ದರು.

ಶಿಬಿರದಲ್ಲಿ ಪ್ರಥಮ ದರ್ಜೆ ಕಾಲೇಜಿನ ರೋವರ್ ಲೀಡರ್ ರವಿಕುಮಾರ್, ಚಿಕ್ಕಬಳ್ಳಾಪುರ ತಾಲ್ಲೂಕು ಕಾರ್ಯದರ್ಶಿ ನಾರಾಯಣಸ್ವಾಮಿ, ಗೌರಿಬಿದನೂರು ತಾಲ್ಲೂಕು ಕಾರ್ಯದರ್ಶಿ ಗಿರಿಧರ್, ಶಿಡ್ಲಘಟ್ಟ ತಾಲ್ಲೂಕು ಕಾರ್ಯದರ್ಶಿ ಮುನಿರಾಜು, ಸಹಕಾರ್ಯದರ್ಶಿ ನಾಗರಾಜು, ಜಿಲ್ಲಾ ಸಮಿತಿ ಸದಸ್ಯ ನರಸಿಂಹಮೂರ್ತಿ, ಜಿಲ್ಲಾ ಸಮಿತಿ ಸದಸ್ಯೆ ಕೀರ್ತಿ ಬಸಪ್ಪ ಲಗಳಿ, ಬಾಗೇಪಲ್ಲಿ ತಾಲ್ಲೂಕು ಕಾರ್ಯದರ್ಶಿ ಉಮಾ, ಜಿಲ್ಲಾ ತರಬೇತಿ ಆಯುಕ್ತರುಗಳಾದ ಲಕ್ಷ್ಮಿ ಹೊನ್ನಪ್ಪ ನಾಯ್ಕ , ರಾಮಪ್ರಸಾದ್ ಶಿಕ್ಷಕರಾದ ರಾಕೇಶ್, ಅಮಲಾ ,ಗಂಗರತ್ನಮ್ಮ, ನರಸಿಂಹಮೂರ್ತಿ ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ದಲಿತ ಸಂಘರ್ಷ ಸಮಿತಿಯಿಂದ ಮನವಿ

0
Sidlaghatta DSS Protest

Sidlaghatta : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು, ಕಾರ್ಯಕರ್ತರು ತಾಲ್ಲೂಕು ಕಚೇರಿ ಆವರಣದಲ್ಲಿ ಸೋಮವಾರ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದರು.

ತಾಲ್ಲೂಕಿನಲ್ಲಿ ನಿವೇಶನ ಮತ್ತು ಮನೆ ಇಲ್ಲದ ದಲಿತ ಕುಟುಂಬಗಳ ಅಂಕಿ ಸಂಖ್ಯೆಗಳನ್ನು ಸಮೀಕ್ಷೆ ಮೂಲಕ ಕಲೆ ಹಾಕಲಾಗಿದೆ. ಅಂತಹ ಎಲ್ಲರಿಗೂ ಸರ್ಕಾರವೇ ಜಮೀನು ಗುರ್ತಿಸಿ ನಿವೇಶನಗಳನ್ನು ನೀಡಬೇಕು ಮತ್ತು ವಸತಿ ಯೋಜನೆಯಡಿ ಮನೆ ಮಂಜೂರು ಮಾಡಬೇಕೆಂದು ಒತ್ತಾಯಿಸಿದರು.

ಬಗರ್ ಹುಕುಂ ಸಮಿತಿಯನ್ನು ಕೂಡಲೆ ರಚಿಸಬೇಕು. ನಮೂನೆ 50, 51, 53 ಮತ್ತು 57 ರ ಅರ್ಜಿಗಳನ್ನು ವಿಲೇವಾರಿ ಮಾಡಿ ರೈತರಿಗೆ ಜಮೀನನ್ನು ಮಂಜೂರು ಮಾಡಬೇಕು. ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಯು ಅರಣ್ಯದಂಚಿನ ರೈತರಿಗೆ ವಿನಾಕಾರಣ ಕಿರುಕುಳ ನೀಡುವುದನ್ನು ನಿಲ್ಲಿಸಬೇಕು.

ಸಾರ್ವಜನಿಕ ಆಸ್ಪತ್ರೆಯಲ್ಲಿ ಅವ್ಯವಸ್ಥೆಗಳನ್ನು ಸರಿಪಡಿಸಿ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ತಾಲ್ಲೂಕಿನ ಬಹುತೇಕ ಗ್ರಾಮಗಳಲ್ಲಿ ದಲಿತರು ಮೃತಪಟ್ಟರೆ ಶವ ಸಂಸ್ಕಾರ ಮಾಡಲು ಸ್ಮಶಾನ ಇಲ್ಲ. ಸ್ಮಶಾನ ಇದ್ದರೂ ಅದಕ್ಕೆ ಹೋಗಲು ದಾರಿಯಿಲ್ಲ. ಕೂಡಲೆ ಸ್ಮಶಾನ ಇಲ್ಲದ ಕಡೆ ಸ್ಮಶಾನ ನೀಡಬೇಕು, ದಾರಿ ನಿರ್ಮಿಸಿಕೊಡಬೇಕೆಂದು ಒತ್ತಾಯಿಸಿದರು.

ತಾಲ್ಲೂಕಿನಲ್ಲಿನ ಎಲ್ಲ ದಲಿತ ಕಾಲೋನಿಗಳಲ್ಲಿನ ದಲಿತರ ಮನೆಗಳಿಗೆ ನಿವೇಶನಗಳಿಗೆ ಇ ಖಾತೆಯನ್ನು ನೀಡಬೇಕು. ತಾತಹಳ್ಳಿ ಸೇರಿದಂತೆ ತಾಲ್ಲೂಕಿನಲ್ಲಿ ಅನೇಕ ಗ್ರಾಮಗಳಿಗೆ ಸೂಕ್ತ ರಸ್ತೆಯನ್ನು ಅಭಿವೃದ್ದಿ ಪಡಿಸಿ ಡಾಂಬರು ಮಾಡಬೇಕು ಎಂದು ಮನವಿ ಮಾಡಿದರು.

ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ದಾಸ್ ಅವರ ವರದಿಯಂತೆ ಒಳ ಮೀಸಲಾತಿಯನ್ನು ಜಾರಿ ಮಾಡಬೇಕು ಮತ್ತು ಗಾಂಡ್ಲಚಿಂತೆ ಗ್ರಾಮದ ಸರ್ಕಾರಿ ಶಾಲೆಯ ಆಟದ ಮೈದಾನವನ್ನ ಒತ್ತುವರಿ ಮಾಡಿಕೊಂಡಿದ್ದು ಒತ್ತುವರಿ ತೆರವುಗೊಳಸಬೇಕೆಂದು ಒತ್ತಾಯಿಸಿ ತಹಶೀಲ್ದಾರ್ ಗಗನಸಿಂಧು ಅವರಿಗೆ ಮನವಿ ಸಲ್ಲಿಸಿದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ಜಮೀನು ವಿಚಾರವಾಗಿ ಮಹಿಳೆ ಮೇಲೆ ಹಲ್ಲೆ

0
Sidlaghatta Kakachokkandahalli Land Dispute

Kakachokkandahalli, Sidlaghatta : ಜಮೀನು ವಿಚಾರವಾಗಿ ಮಹಿಳೆಯೊಬ್ಬರ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಿರುವ ಘಟನೆ ತಾಲ್ಲೂಕಿನ ಚೊಕ್ಕಂಡಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ತಾಲ್ಲೂಕಿನ ಚೊಕ್ಕಂಡಹಳ್ಳಿ ಗ್ರಾಮದ ಪರಿಶಿಷ್ಟ ಪಂಗಡ ನಾಯಕ ಸಮುದಾಯಕ್ಕೆ ಸೇರಿದ ಲಕ್ಷ್ಮಮ್ಮ ಕೋಂ ಆಂಜಿನಪ್ಪ ಹಲ್ಲೆಗೊಳಗಾಗಿರುವ ಮಹಿಳೆಯಾಗಿದ್ದು ಹಲ್ಲೆಯಲ್ಲಿ ಲಕ್ಷ್ಮಮ್ಮನ ಹಲ್ಲು ಮುರಿದಿದ್ದು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗ್ರಾಮದ ಸರ್ವೇ ನಂ 92 ರಲ್ಲಿನ 30 ಗುಂಟೆ ಜಮೀನಿಗೆ ಸಂಬಂಧಿಸಿದಂತೆ ಗ್ರಾಮದ ಸವರ್ಣೀಯರು ಹಾಗೂ ಎಸ್‌.ಟಿ ಜನಾಂಗದ ಲಕ್ಷ್ಮಮ್ಮ ಎಂಬುವವರ ಕುಟುಂಬಗಳಿಗೆ ಹಿಂದಿನಿಂದಲೂ ತಗಾದೆ ಇದೆ. ಅದನ್ನೆ ನೆಪ ಮಾಡಿಕೊಂಡು ಭಾನುವಾರ ಸಂಜೆ ಗ್ರಾಮದ ಸರ್ಕಾರಿ ಶಾಲೆ ಪಕ್ಕದ ರಸ್ತೆಯಲ್ಲಿ ಬರುತ್ತಿದ್ದ ಲಕ್ಷ್ಮಮ್ಮನ ಮೇಲೆ ಅದೇ ಗ್ರಾಮದ ಸಿ.ಬಿ.ದೇವರಾಜ್, ನಾಗೇಶ್‌ ಬಾಬು, ಸಿ.ಬಿ.ವೆಂಕಟೇಶ್, ಲಕ್ಷ್ಮೀಪತಿ, ನಾರಾಯಣಸ್ವಾಮಿ, ನವೀನ್, ಅಶೋಕ್ ಹಾಗೂ ಕಾರ್ತಿಕ್ ದೊಣ್ಣೆಯಿಂದ ಹಲ್ಲೆ ಮಾಡುವ ಜೊತೆಗೆ ಜಾತಿ ನಿಂದನೆ ಮಾಡಿದ್ದಾರೆ ಎನ್ನಲಾಗಿದೆ.

ಹಳೇ ವೈಷಮ್ಯವೇ ಹಲ್ಲೆಗೆ ಕಾರಣ :

ಕಳೆದ ಮೂವತ್ತು ವರ್ಷಗಳ ಹಿಂದೆ ಗ್ರಾಮದ ಪರಿಶಿಷ್ಟ ಪಂಗಡಕ್ಕೆ ಸೇರಿದವರ ಹುಲ್ಲಿನ ಮನೆಗಳ ಮೇಲೆ ಬೆಂಕಿ ಹಾಕಿದ್ದ ಪ್ರಕರಣದಲ್ಲಿ ಸಿ.ಬಿ.ದೇವರಾಜ್ ಮತ್ತಿತರರ ಮೇಲೆ 307 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಅದೇ ಹಳೇ ದ್ವೇಷದ ಹಿನ್ನಲೆಯಲ್ಲಿ ಜಮೀನು ವಿವಾದದ ಖ್ಯಾತೆ ತೆಗೆದು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಸ್ಥಳೀಯ ಗ್ರಾಮಾಂತರ ಠಾಣೆ ಪೊಲೀಸರು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಮೀನು ವಿವಾದದ ಹಿನ್ನಲೆಯಲ್ಲಿ ಮಹಿಳೆ ಎಂಬುವುದನ್ನು ಸಹ ನೋಡದೇ ನಡು ರಸ್ತೆಯಲ್ಲಿ ಎಳೆದಾಡಿ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ಸಾಲದ್ದಕ್ಕೆ ನೀವು ಬೇಡರು ಎಂದು ಜಾತಿನಿಂದನೆ ಮಾಡಿದ್ದು ಈ ಹಿಂದೆ ನಿಮ್ಮ ಹುಲ್ಲು ಮನೆಗಳಿಗೆ ಬೆಂಕಿ ಹಾಕಿದ್ದು ಮರೆತು ಹೋಗಿದ್ದೀರಾ, ನಿಮ್ಮನ್ನು ಊರಲ್ಲಿ ಇರಲು ಬಿಡುವುದಿಲ್ಲ ಎನ್ನುತ್ತಾ ಮನಸೋ ಇಚ್ಚೆ ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ಶಿಡ್ಲಘಟ್ಟ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದು ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಜರುಗಿಸುವ ಜೊತೆಗೆ ಪೊಲಿಸರು ನಮಗೆ ಸೂಕ್ತ ರಕ್ಷಣೆ ನೀಡಬೇಕು

ಲಕ್ಷ್ಮಮ್ಮ, ಹಲ್ಲೆಗೊಳಗಾದ ಮಹಿಳೆ

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-18/08/2025

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 18/08/2025

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 355
Qty: 17920 Kg
Mx : ₹ 701
Mn: ₹ 377
Avg: ₹ 571

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 08
Qty: 551 Kg
Mx : ₹ 700
Mn: ₹ 555
Avg: ₹ 661


For Daily Updates WhatsApp ‘HI’ to 7406303366

error: Content is protected !!