25.1 C
Sidlaghatta
Saturday, December 27, 2025
Home Blog Page 42

11 ನೇ ವಾರ್ಡ್‌ ನ ನಾಗರಿಕರಿಂದ ನಗರಸಭೆ ಸದಸ್ಯರಿಗೆ “ಸೇವಾ ರತ್ನ” ಪ್ರಶಸ್ತಿ ಪ್ರದಾನ

0
sidlaghatta ward 11 municipal councillor award

Sidlaghatta : ಜನಪ್ರತಿನಿಧಿಯಾದವರು ಮೊದಲು ತಮ್ಮ ನಡೆ ನುಡಿಯನ್ನು ಬದಲಿಸಿಕೊಳ್ಳಬೇಕು, ಮುಖ್ಯವಾಗಿ ಜನರೊಂದಿಗೆ ನಿಕಟ ಸಂಪರ್ಕ ಇರಿಸಿಕೊಂಡು ಸಮಸ್ಯೆಗಳನ್ನು ತಾಳ್ಮೆಯಿಂದ ಕೇಳುವಂತಾಗಬೇಕು ಎಂದು ನಗರದ 11 ನೇ ವಾರ್ಡ್‌ ನ ನಗರಸಭೆ ಸದಸ್ಯ ಅನಿಲ್ ಕುಮಾರ್ ತಿಳಿಸಿದರು.

ನಗರದಲ್ಲಿನ ನಗರೇಶ್ವರ ಕಲ್ಯಾಣ ಮಂಟಪದಲ್ಲಿ 11 ನೇ ವಾರ್ಡ್‌ ನ ನಾಗರಿಕರು ನೀಡಿದ “ಸೇವಾ ರತ್ನ” ಪ್ರಶಸ್ತಿಯನ್ನು ಸ್ವೀಕರಿಸಿ ಅವರು ಮಾತನಾಡಿದರು.

ನಾನು ಮೊದಲು ಚುನಾವಣೆಗೆ ಸ್ಪರ್ಧಿಸಿದಾಗ ಮತ ಕೇಳಲು ಮನೆ ಮನೆಗೆ ಹೋದಾಗ “ಏಯ್ ಹೋಗಪ್ಪ ಯಾರು ಬಂದರೂ ಅಷ್ಟೇ ಬಂದಾಗ ಎಲ್ಲರೂ ಅಂಗೈಲಿ ಸ್ವರ್ಗ ತೋರಿಸ್ತಾರೆ ಗೆದ್ದ ಮೇಲೆ ಅವರ ಬಂಡವಾಳ ಗೊತ್ತಾಗುತ್ತೆ” ಎಂದಾಗ ಅಪಮಾನ ಆಯಿತು. ಆದರೆ ಚುನಾವಣೆಯಲ್ಲಿ ನಿಮ್ಮೆಲ್ಲರ ಆಶೀರ್ವಾದದಿಂದ ಗೆದ್ದೆ. ಚುನಾವಣೆ ಸಮಯದಲ್ಲಿ ನಾನು ಭರವಸೆ ಕೊಟ್ಟಂತೆ ನಮ್ಮ ಮನೆ ಬಾಗಿಲಿಗೆ ನೀವು ಬರಬೇಡಿ ನಿಮ್ಮ ಮನೆ ಬಾಗಿಲಿಗೆ ನಾನೇ ಬರುತ್ತೇನೆ ಎಂದು ಹೇಳಿದಂತೆ ನಾನೇ ನಿಮ್ಮ ಮನೆ ಬಾಗಿಲಿಗೆ ಬಂದೆ. ನಿಮ್ಮ ಸಮಸ್ಯೆಯನ್ನು ಆಲಿಸಿದೆ. ನನ್ನ ಇತಿಮಿತಿಯಲ್ಲಿ ತಡಮಾಡದೆ ಸಮಸ್ಯೆ ಪರಿಹರಿಸಿಕೊಂಡು ಬಂದೆ ಎಂದರು.

ನಾನು ಮಾಡಿದ್ದು ಇಷ್ಟೆ. ಕೊರೊನಾ ಕಾಲದಲ್ಲಿ ಲಸಿಕೆ ಹಾಕಿಸಿಕೊಳ್ಳಲು ಜನರು ಹಿಂದೇಟು ಹಾಕಿದಾಗ ಮೊದಲು ನಮ್ಮಪ್ಪನಿಗೆ ಲಸಿಕೆ ಹಾಕಿಸಿ ನಿಮ್ಮಲ್ಲಿ ಲಸಿಕೆ ಬಗ್ಗೆ ಭರವಸೆ ಮೂಡಿಸಿದೆ. ಇದರಿಂದ ಇಡೀ ಜಿಲ್ಲೆಯಲ್ಲೆ ನಮ್ಮ ವಾರ್ಡಿನಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಲಸಿಕೆ ಹಾಕಿಸಲಾಯಿತು ಎಂದರು.

ವಾಟ್ಸಾಪ್ ಗ್ರೂಪ್ ರಚಿಸಿ ಅದರಲ್ಲಿ ವಾರ್ಡಿನಲ್ಲಿನ ಸಮಸ್ಯೆಗಳನ್ನು ಮುಕ್ತವಾಗಿ ಹಂಚಿಕೊಳ್ಳುವಂತೆ ಮಾಡಿ ಅದರಿಂದ ಸಮಸ್ಯೆ ನಿವಾರಣೆಗೆ ಅನುಕೂಲವಾಯಿತು. ಇದರಿಂದ ವಾರ್ಡಿನ ನಾಗರಿಕರಿಗೆ ಇನ್ನಷ್ಟು ಹತ್ತಿರ ಆಗಲು ಸಾಧ್ಯವಾಯಿತು ಎಂದು ಹೇಳಿದರು.

ಇಂದು ನಾನು ಏನೇನೂ ಸಾಧಿಸಿಲ್ಲ. ನಗರಸಭಾ ಸದಸ್ಯನಾಗಿ ನನ್ನ ಮೇಲಿನ ಜವಾಬ್ದಾರಿಯನ್ನು ನಿರ್ವಹಿಸುವ ಪ್ರಯತ್ನ ಮಾಡಿದ್ದೇನೆ. ನೀರು, ಸ್ವಚ್ಛತೆ, ಬೀದಿ ದೀಪ ಮುಂತಾದ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ನಮ್ಮ ಕೆಲಸ. ಅದನ್ನು ಪ್ರಾಮಾಣಿಕವಾಗಿ ಮಾಡಿರುವೆ. ನಾನು ನಿಮ್ಮ ಸಮಸ್ಯೆಗಳನ್ನು ಬಗೆಹರಿಸುವ ಸಣ್ಣ ಪ್ರಯತ್ನ ಮಾಡಿದ್ದೇನೆ. ಆದರೂ ನಿಮ್ಮ ಈ ಪ್ರೀತಿಗೆ ನಾನು ಬದುಕಿನಲ್ಲಿ ಸದಾ ಚಿರ ಋಣಿಯಾಗಿರುತ್ತೇನೆ ಎಂದರು.

ವಾರ್ಡಿನ ನಾಗರೀಕರು “ಸೇವಾ ರತ್ನ” ಪ್ರಶಸ್ತಿ ನೀಡಿ ಸನ್ಮಾನಿಸಿದರು. ವಾರ್ಡಿನ ಎಲ್ಲ ಮನೆಗಳಿಂದಲೂ ಕಾರ್ಯಕ್ರಮಕ್ಕೆ ಆಗಮಿಸಿ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.

Sidlaghatta WhatsApp Channel Group

For Daily Updates WhatsApp ‘HI’ to 7406303366

ಸಾವಯವ ಗೊಬ್ಬರ, ಎರೆಹುಳು ಗೊಬ್ಬರ ತಯಾರಿಕೆ ಕುರಿತು ಮಾಹಿತಿ

0
Sidlaghatta Kothanur Organic Manure Preparation Workshop

Kothanur, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಕೊತ್ತನೂರು ಗ್ರಾಮದಲ್ಲಿ ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದಡಿಯಲ್ಲಿ 3 ತಿಂಗಳುಗಳ ಕಾಲ ವಾಸ್ತವ್ಯವಿದ್ದು, ಗ್ರಾಮದ ಕೃಷಿ ಚಿತ್ರಣವನ್ನು ದಾಖಲಿಸುತ್ತಾ, ಗ್ರಾಮಸ್ಥರೊಂದಿಗೆ ವಿವಿಧ ರೀತಿಯಲ್ಲಿ ಸಂವಾದ ನಡೆಸಿ, ತಾಂತ್ರಿಕ ಹಾಗೂ ಮಾಹಿತಿಯನ್ನು ರೈತರಿಗೆ ತಿಳಿಸುತ್ತಿದ್ದಾರೆ.

ಸಾವಯವ ಗೊಬ್ಬರ ಹಾಗೂ ಎರೆಹುಳು ಗೊಬ್ಬರ ತಯಾರಿಕೆ ಕುರಿತು ಗುಂಪು ಚರ್ಚಾ ಸಭೆಯನ್ನು ನಡೆಸಿ ರೈತರಿಗೆ ನಾಡೆಪ್ ಹಾಗೂ ಜಪಾನೀಸ್ ವಿಧಾನದ ಗೊಬ್ಬರ ತಯಾರಿಕೆಯ ಕುರಿತು ಮಾಹಿತಿ ನೀಡಿದರು. ಸಾವಯವ ಗೊಬ್ಬರ ಬಳಕೆಯಿಂದ ರೈತರು ತಮ್ಮ ಹೊಲಗಳಿಗೆ ಉತ್ತಮ ಪೋಷಕಾಂಶವುಳ್ಳ ಗೊಬ್ಬರವವನ್ನೇ ಬಳಸಬಹುದು ಹಾಗೂ ಎರೆಹುಳು ಗೊಬ್ಬರ ತಯಾರಿಸುವುದರಿಂದ ತಮ್ಮಲ್ಲಿ ಉದ್ಯಮಶೀಲತೆಯನ್ನು ಬೆಳೆಸಿಕೊಳ್ಳಬಹುದು ಎಂದು ವಿದ್ಯಾರ್ಥಿಗಳು ತಿಳಿಸಿದರು. ಸಾವಯವ ಗೊಬ್ಬರವನ್ನು ಬಳಸುವುದರಿಂದ ದೊರೆಯುವ ಲಾಭವನ್ನು ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಾದ ದೀಕ್ಷಿತ, ಇಮಾಮ್, ಅನುಷಾ ಹಾಗೂ ಫಾತಿಮಾ ವಿವರಿಸಿದರು. ರೈತರೂ ತಮ್ಮ ಸಂದೇಹಗಳನ್ನು ಕೇಳಿ ,ಆಸಕ್ತಿಯನ್ನು ವ್ಯಕ್ತಪಡಿಸಿದರು.

ರೈತ ಉತ್ಪಾದಕ ಸಂಸ್ಥೆ ಮತ್ತು ಅದರ ಮಹತ್ವದ ಕುರಿತು ಸಭೆಯನ್ನು ಹಮ್ಮಿಕೊಂಡಿದ್ದರು . 10-15 ರೈತರು ಸೇರಿ ನಡೆಸುವ ಈ ರೈತ ಉತ್ಪಾದಕ ಸಂಸ್ಥೆಯ ರಚನೆ, ನೋಂದಣಿಗೆ ರೈತರು ಸಲ್ಲಿಸಬೇಕಾದ ಅರ್ಜಿ, ಇದರಿಂದ ರೈತರಿಗೆ ದೊರೆಯುವ ಲಾಭ ಹಾಗು ಸಹಾಯಧನಗಳ ಕುರಿತು ವಿಸ್ತೃತ ಮಾಹಿತಿಯನ್ನು ನೀಡಿದರು .ಈ ಸಂಸ್ಥೆಯನ್ನು ರೈತರು ರಚಿಸುವುದರಿಂದ ಉತ್ತಮ ಮಾರುಕಟ್ಟೆ ಬೆಲೆ, ಕಡಿಮೆ ವೆಚ್ಚದಲ್ಲಿ ಗೊಬ್ಬರ, ಬಿತ್ತನೆ ಬೀಜಗಳ ಖರೀದಿ ಇತ್ಯಾದಿ ಉಪಯೋಗಗಳ ಕುರಿತು ಕೃಷಿ ವ್ಯವಹಾರ ನಿರ್ವಹಣಾ ವಿದ್ಯಾರ್ಥಿಗಳಾದ ಅಭಿಷೇಕ್, ಅಚಿಂತ್ಯ, ಅಗಸ್ಸಿ ನಿಶಾಂತ್ ಹಾಗೂ ಭಾಗ್ಯಶ್ರೀ ತಿಳಿಸಿಕೊಟ್ಟರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-17/08/2025

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 17/08/2025

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 387
Qty: 20131 Kg
Mx : ₹ 686
Mn: ₹ 300
Avg: ₹ 551

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 08
Qty: 470 Kg
Mx : ₹ 725
Mn: ₹ 555
Avg: ₹ 658


For Daily Updates WhatsApp ‘HI’ to 7406303366

ಶಿಡ್ಲಘಟ್ಟದಲ್ಲಿ ಅದ್ದೂರಿ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ

0
Sidlaghatta Sri Krishna Janmashtami Celebration

Sidlaghatta : ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ನಗರದ ಟಿ.ಬಿ. ರಸ್ತೆಯಲ್ಲಿರುವ ಕೃಷ್ಣಸ್ವಾಮಿ ದೇವಸ್ಥಾನ ಸೇರಿದಂತೆ ಉಲ್ಲೂರುಪೇಟೆಯ ಶ್ರೀರಾಮ ಭಜನೆ ಮಂದಿರದಲ್ಲಿ ಶನಿವಾರ ವಿಶೇಷ ಹೂವಿನ ಅಲಂಕಾರ, ಹೋಮ, ಪೂಜೆ ನಡೆಸಲಾಯಿತು.

ಯಾದವ ಕುಲಸ್ಥರು ಕುಟುಂಬ ಸಮೇತರಾಗಿ ಪೂಜೆಯಲ್ಲಿ ಪಾಲ್ಗೊಂಡರು. ಮಹಿಳೆಯರು ತಂಬಿಟ್ಟು ದೀಪಗಳನ್ನು ಮೆರವಣಿಗೆಯಲ್ಲಿ ತಂದು ಪೂಜೆಯನ್ನು ನೆರವೇರಿಸಿದರು.

ತಾಲ್ಲೂಕಿನ ಯಾದವ ಕುಲಸ್ಥರಿಂದ ಕೃಷ್ಣಸ್ವಾಮಿ ದೇವಸ್ಥಾನದಿಂದ ಪಲ್ಲಕ್ಕಿಯ ಮೆರವಣಿಗೆಯನ್ನು ಆಯೋಜಿಸಿದ್ದು, ಶ್ರೀಕೃಷ್ಣ ಮೂರ್ತಿಗಳಿರುವ ಮುತ್ತಿನ ಪಲ್ಲಕ್ಕಿಗಳು, ಸಪ್ತಾಶ್ವದ ರಥಗಳು, ಕೀಲುಕುದುರೆ, ಗಾರ್ಡಿಬೊಂಬೆ, ಯಕ್ಷಗಾನ ವೇಷದ ಬೊಂಬೆ, ತಮಟೆ ವಾದನ, ನಾದಸ್ವರ, ಶ್ರೀಕೃಷ್ಣ ವೇಷಧಾರಿಗಳಾದ ಮಕ್ಕಳು, ದೀಪಗಳನ್ನು ಹೊತ್ತ ಮಹಿಳೆಯರು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಲ್ಲಿ ಸಾಗಿದ್ದು ಆಕರ್ಷಕವಾಗಿತ್ತು.

ನಗರದ ಉಲ್ಲೂರುಪೇಟೆಯ ಭಜನೆ ಮಂದಿರದಲ್ಲಿರುವ ಪುರಾತನ ತಂಜಾವೂರು ಚಿತ್ರಕಲೆಯ ಬಾಲಕೃಷ್ಣನ ಚಿತ್ರಪಟಕ್ಕೆ ವಿಶೇಷ ಅಲಂಕಾರವನ್ನು ಮಾಡಿ ಪೂಜೆಯನ್ನು ನೆರವೇರಿಸಲಾಯಿತು. ಉಯ್ಯಾಲೆಯಲ್ಲಿ ಕೃಷ್ಣನ ಮೂರ್ತಿಯನ್ನಿರಿಸಿ ವಿವಿಧ ತಿಂಡಿಗಳನ್ನು ಕಟ್ಟಿ ತೂಗಿದರು.

ಶಾಸಕ ಬಿ.ಎನ್.ರವಿಕುಮಾರ್, ಬಿಜೆಪಿ ಜಿಲ್ಲಾ ಅಧ್ಯಕ್ಷ ಸೀಕಲ್ ರಾಮಚಂದ್ರ ಗೌಡ, ತಾಲ್ಲೂಕು ಅಧ್ಯಕ್ಷ ಸೀಕಲ್ ಆನಂದಗೌಡ, ಮಾಜಿ ಶಾಸಕರಾದ ವಿ.ಮುನಿಯಪ್ಪ, ಎಂ.ರಾಜಣ್ಣ, ಕಾಂಗ್ರೆಸ್ ಮುಖಂಡರಾದ ರಾಜೀವ್ ಗೌಡ, ಟಿ.ಕೆ.ನಟರಾಜ್, ಆಂಜಿನಪ್ಪ, ತಹಶೀಲ್ದಾರ್ ಗಗನಸಿಂಧು, ತಾಲ್ಲೂಕು ಪಂಚಾಯಿತಿ ಇಒ ಹೇಮಾವತಿ, ನಗರಸಭಾ ಸದಸ್ಯರಾದ ಬಿ.ಎಂ.ಮುನಿರಾಜು, ಎನ್.ಲಕ್ಷ್ಮಣ, ಮನೋಹರ್, ಎಲ್.ಅನಿಲ್ ಕುಮಾರ್, ನಾರಾಯಣಸ್ವಾಮಿ, ನವೀನ್, ತಾಲ್ಲೂಕು ಯಾದವ ಸಂಘದ ಅಶ್ವತ್ಥಪ್ಪ, ಕೆ.ಕೇಶವಮೂರ್ತಿ, ವೈ.ರಾಮಕೃಷ್ಣಪ್ಪ, ವೆಂಕಟೇಶ್, ಆಂಜನೇಯಗೌಡ, ನಾಗರಾಜ್ ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-16/08/2025

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 16/08/2025

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 391
Qty: 20300 Kg
Mx : ₹ 700
Mn: ₹ 250
Avg: ₹ 552

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 00
Qty: 00 Kg
Mx : ₹ 00
Mn: ₹ 00
Avg: ₹ 00


For Daily Updates WhatsApp ‘HI’ to 7406303366

ಸ್ವಾತಂತ್ರ್ಯ ದಿನಾಚರಣೆ: 79 ಮಹಿಳಾ ಸಾಧಕರ ಕುರಿತ ಕೃತಿ ಬಿಡುಗಡೆ

0
Sidlaghatta Dolphin's Public School Independence Day

Sidlaghatta : ಶಿಡ್ಲಘಟ್ಟ ನಗರದ ಡಾಲ್ಫಿನ್ ವಿದ್ಯಾ ಸಂಸ್ಥೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮ ಭವ್ಯವಾಗಿ ಜರುಗಿತು. ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎ. ನಾಗರಾಜ್ ಹಾಗೂ ನಿವೃತ್ತ ಸೈನಿಕ ಮಂಜುನಾಥ್ ಆರ್.ವಿ. ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣದ ಬಳಿಕ ಮಾತನಾಡಿದ ಎ. ನಾಗರಾಜ್, ಶಿಕ್ಷಣ ಸಂಸ್ಥೆಗಳು ಕೇವಲ ಅಂಕಗಳಿಗೆ ಮಾತ್ರ ಸೀಮಿತವಾಗದೇ, ವಿದ್ಯಾರ್ಥಿಗಳಿಗೆ ಬಾಲ್ಯದಿಂದಲೇ ದೇಶಭಕ್ತಿ ಮತ್ತು ನೈತಿಕ ಮೌಲ್ಯಗಳನ್ನು ಬೆಳೆಸಬೇಕು ಎಂದು ಒತ್ತಿಹೇಳಿದರು. ದೇಶಕ್ಕಾಗಿ ಹೋರಾಡಿದ ಮಹನೀಯರ ಆದರ್ಶಗಳನ್ನು ಅನುಸರಿಸುವ ಮೂಲಕ ಉತ್ತಮ ವ್ಯಕ್ತಿತ್ವ ವಿಕಸನ ಸಾಧ್ಯವೆಂದರು.

ಈ ಸಂದರ್ಭದಲ್ಲಿ “Freedom to Glory: 79 Women Stories of Courage and Achievements” ಎಂಬ ಆಂಗ್ಲ ಸಂಕಲನ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು. 79 ಮಹಿಳೆಯರ ಸಾಧನೆಗಳನ್ನು ಒಳಗೊಂಡ ಈ ಕೃತಿಗೆ ಮಾಹಿತಿಯನ್ನು ವಿದ್ಯಾರ್ಥಿಗಳೇ ಸಂಗ್ರಹಿಸಿದ್ದು, ಪ್ರಾಂಶುಪಾಲರು ಮುನ್ನುಡಿ ಬರೆದಿದ್ದಾರೆ. ಚಿತ್ರಸಂಗ್ರಹಣೆ ಹಾಗೂ ಮಾಹಿತಿಯನ್ನು ಸಮರ್ಪಕವಾಗಿ ನೀಡಿರುವುದು ವಿಶೇಷ.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎನ್. ಅಶೋಕ್ ಮಾತನಾಡಿ, ಸಮಾಜದಲ್ಲಿ ಏಕತೆ, ಐಕ್ಯತೆ ಮತ್ತು ಭ್ರಾತೃತ್ವದ ಗುಣಗಳನ್ನು ಬೆಳೆಸುವ ಮೂಲಕ ಮಾತ್ರ ನಿಜವಾದ ಸ್ವಾತಂತ್ರ್ಯ ಸಾಧ್ಯವಿದೆ ಎಂದು ಹೇಳಿದರು. ಆಂತರಿಕ ಕಲಹಗಳಿಂದಲೇ ಬ್ರಿಟೀಷರು ಭಾರತವನ್ನು ಆಳಲು ಸಾಧ್ಯವಾಯಿತು. ಇಂದಿನ ವಿದ್ಯಾರ್ಥಿಗಳು ನವಸಮಾಜದ ನಿರ್ಮಾತೃಗಳಾಗಬೇಕಾದರೆ ವಿಶ್ವಭ್ರಾತೃತ್ವದ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ NCC ವಿದ್ಯಾರ್ಥಿಗಳಿಂದ ಪಥಸಂಚಲನ, ಧ್ವಜ ವಂದನೆ ಹಾಗೂ ಡಾಲ್ಫಿನ್ ಸಿಬಿಎಸ್‌ಸಿ ಮತ್ತು ರಾಜ್ಯ ಪಠ್ಯಕ್ರಮ ವಿಭಾಗದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. NCC ಅಧಿಕಾರಿಗಳಾದ ಸುಬೇದಾರ್ ಜಯದೇವ್ ಸಿಂಗ್ ಮತ್ತು ಯೋಗೇಶ್ ಪ್ರನಸಾಯಿ, CBSE ವಿಭಾಗದ ಪ್ರಾಂಶುಪಾಲ ಎಲ್. ಮುನಿಕೃಷ್ಣಪ್ಪರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

ನಿರೂಪಣೆಯನ್ನು ಆಂಗ್ಲದಲ್ಲಿ ನಿಹಾರಿತ ವಿಜಯ್, ನಯನ ಮತ್ತು ತೇಜಶ್ರೀ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ವರ್ಗ, ಎಲ್ಲಾ ಪ್ರಾಂಶುಪಾಲರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ಸಂವಿಧಾನ ರಕ್ಷಿಸಿ-ಪ್ರಜಾಪ್ರಭುತ್ವ ಉಳಿಸಿ ಜಾಥಾ

0
Sidlaghatta Save Constitution Save Democracy Rally

Sidlaghatta : ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ಬಂದಾಗ ಪ್ರಜ್ಞಾವಂತರಾದ ನಾವೆಲ್ಲರೂ ಸಂವಿಧಾನ ಹಾಗೂ ಪ್ರಜಾಪ್ರಭುತ್ವವನ್ನು ಉಳಿಸಲು ಮುಂದಾಗಬೇಕು ಎಂದು ಕೆಪಿಸಿಸಿ ಸಂಯೋಜಕ, ಶಿಡ್ಲಘಟ್ಟ ಕ್ಷೇತ್ರದ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡ ತಿಳಿಸಿದರು.

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕಾಂಗ್ರೆಸ್ ಭವನದಿಂದ ತಾಲ್ಲೂಕು ಕಚೇರಿಯವರೆಗೂ ನಡೆದ “ಸಂವಿಧಾನ ರಕ್ಷಿಸಿ-ಪ್ರಜಾಪ್ರಭುತ್ವ ಉಳಿಸಿ” ಕಾಲ್ನಡಿಗೆ ಜಾಥಾದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಬಿಜೆಪಿ ಸರ್ಕಾರದಲ್ಲಿ ಸಂವಿಧಾನಕ್ಕೆ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೂ ಧಕ್ಕೆ ಬರುವಂತಾಗಿದೆ. ಇದರಿಂದ ಅಂಬೇಡ್ಕರ್ ಅವರು ಕಂಡಿದ್ದ ಕನಸು, ಸಂವಿಧಾನದ ಆಶಯಗಳು ಈಡೇರದಂತಾಗಿವೆ. ಪ್ರಜಾಪ್ರಭುತ್ವ ವ್ಯವಸ್ಥೆಯ ಕೂಡ ಹಳ್ಳ ಹಿಡಿಯುವಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಬಿಜೆಪಿಯು ತನಗೆ ಅನುಕೂಲ ಆಗುವಂತೆ ಚುನಾವಣಾ ಆಯೋಗವನ್ನು ದುರುಪಯೋಗಪಡಿಸಿಕೊಂಡು ದೇಶಾದ್ಯಂತ ಅಕ್ರಮವಾಗಿ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸಿ ಅಕ್ರಮವಾಗಿ ಗೆಲುವು ಸಾಧಿಸಿ ಅಧಿಕಾರ ಹಿಡಿದಿದೆ. ಇದನ್ನು ನಮ್ಮ ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಅವರು ಪ್ರಶ್ನಿಸಿದ್ದಾರೆ.

ಅಷ್ಟೇ ಅಲ್ಲ ದೇಶದ ಉದ್ದಗಲಕ್ಕೂ ಹೋರಾಟ ನಡೆಸಲು ತೀರ್ಮಾನಿಸಿದ್ದು ಕರ್ನಾಟಕದಿಂದಲೆ ಆ ಹೋರಾಟದ ಕಹಳೆ ಊದಿದ್ದಾರೆ. ನಾವೆಲ್ಲರೂ ಕಳ್ಳ ಮತದಾರರ ಪಟ್ಟಿ ಬಗ್ಗೆ ಸಾರ್ವಜನಿಕರಲ್ಲಿ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲಿ ಅರಿವು ಮೂಡಿಸಿ ಹೋರಾಟಕ್ಕೆ ಇನ್ನಷ್ಟು ಶಕ್ತಿ ತುಂಬಬೇಕಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಉದಯ ಕುಮಾರ್ ಮಾತನಾಡಿ, ಅಕ್ರಮ ಮತದಾರರ ಪಟ್ಟಿ ತಯಾರಿಸಿ ಅಕ್ರಮವಾಗಿ ಬಿಜೆಪಿ ಅವರು ಅಧಿಕಾರಕ್ಕೆ ಬಂದಿದ್ದು ಈ ಬಗ್ಗೆ ನಾವು ಜನ ಸಾಮಾನ್ಯರಲ್ಲಿ ಅರಿವು ಮೂಡಿಸಬೇಕಿದೆ. ಇದು ಬಿಜೆಪಿಯ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯ ಕಗ್ಗೊಲೆಯಾಗಿದೆ ಎಂದು ದೂರಿದರು.

ರಾಹುಲ್ ಗಾಂಧಿ ಅವರು ಕರೆ ಕೊಟ್ಟಿರುವಂತೆ ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಈ ದಿನ ಸಂವಿಧಾನ ರಕ್ಷಿಸಿ-ಪ್ರಜಾಪ್ರಭುತ್ವ ಉಳಿಸಿ ಕಾಲ್ನಡಿಗೆ ಜಾಥಾ ನಡೆಸುತ್ತಿದ್ದು ಎಲ್ಲ ದೇಶ ಪ್ರೇಮಿ, ಪ್ರಜಾಪ್ರಭುತ್ವ ಪ್ರೇಮಿ ಹಾಗೂ ಸಂವಿಧಾನ ಪ್ರೇಮಿಗಳು ಭಾಗವಹಿಸಲಿದ್ದೇವೆ ಎಂದರು.

ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಯಾಸ್ಮೀನ್ ತಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸಹನಾರಾಜೀವ್‌ಗೌಡ, ಡಿಸಿಸಿ ಬ್ಯಾಂಕ್ ನಿರ್ದೇಶಕ ಡಾಲ್ಫಿನ್ ನಾಗರಾಜ್, ಮುಖಂಡ ಟಿ.ಕೆ.ನಟರಾಜ್, ನಗರಸಭೆ ಸದಸ್ಯ ಅಫ್ಸರ್‌ಪಾಷ, ವಕೀಲ ಮುನಿರಾಜು, ಕುಂದಲಗುರ್ಕಿ ಮುನೀಂದ್ರ, ದೊಡ್ಡತೇಕಹಳ್ಳಿ ಗೋಪಾಲರೆಡ್ಡಿ, ಶ್ರೀನಾಥ್, ರಾಮಾಂಜಿನಪ್ಪ ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

79 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ

0
Sidlaghatta 79 independence Day Celebration

Sidlaghatta : ಈ ನಾಡಿನ ಭವಿಷ್ಯದ ಪ್ರಜೆಗಳಾದ ಮಕ್ಕಳು, ವಿದ್ಯಾರ್ಥಿಗಳು ಹಾಗೂ ಯುವಜನರು ತಮಗೆ ಜನ್ಮ ನೀಡಿದ ತಾಯಿ ತಂದೆ ಹಾಗೂ ಅಕ್ಷರ ಕಲಿಸಿದ ಗುರುಗಳನ್ನು ಗೌರವಿಸಬೇಕು ಮತ್ತು ಜನ್ಮಭೂಮಿಗೆ ಋಣಿಯಾಗಿರಬೇಕು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.

ತಾಲ್ಲೂಕು ರಾಷ್ಟೀಯ ಹಾಗೂ ನಾಡ ಹಬ್ಬಗಳ ಆಚರಣಾ ಸಮಿತಿಯಿಂದ ನಗರದಲ್ಲಿನ ನೆಹರೂ ಕ್ರೀಡಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ 79 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಹಾಗೂ ಯುವ ಜನರ ಮೇಲೆ ಈ ನಾಡು, ದೇಶದ ಅಭಿವೃದ್ದಿ ಪ್ರಗತಿ ನಿಂತಿದೆ. ನೀವು ಸರಿಯಾದ ದಾರಿಯಲ್ಲಿ ಸಾಗಬೇಕಿದೆ. ಹೆತ್ತವರು, ಅಕ್ಷರ ಕಲಿಸಿದವರಿಗೆ ಗೌರವ ನೀಡಿ ಉತ್ತಮ ಸಂಸ್ಕಾರವಂತರಾಗಿ ದೇಶ ಪ್ರೇಮಿಗಳಾಗಿ ಬೆಳೆಯಬೇಕಿದೆ ಎಂದರು.

ಈ ದೇಶದ 145 ಕೋಟಿ ಜನರು ಸುರಕ್ಷತೆ ಸುಭದ್ರತೆಯ ಭಾವದಿಂದ ಹಾಗೂ ಸೌಹಾರ್ಧತೆಯಿಂದ ನೆಮ್ಮದಿಯ ಬದುಕು ನಡೆಸುತ್ತಿದ್ದೇವೆ ಎಂದರೆ ಅದಕ್ಕೆ ಸ್ವಾತಂತ್ರ್ಯ ಮತ್ತು ನಮ್ಮ ಸಂವಿಧಾನ ಕಾರಣವಾಗಿದೆ ಎಂದು ನುಡಿದರು.

ಮಹಾತ್ಮಗಾಂಧೀಜಿ, ವಲ್ಲಭಬಾಯಿ ಪಟೇಲರು, ನೇತಾಜಿ ಸುಭಾಷ್ ಚಂದ್ರ ಬೋಸ್, ಲಾಲ್ ಬಹುದ್ದೂರ್ ಶಾಸ್ತ್ರಿಯಂತ ಅನೇಕ ಮಹನೀಯರು, ದೇಶ ಭಕ್ತರು, ದಾರ್ಶನಿಕರು ಸ್ವಾತಂತ್ರ್ಯಕ್ಕಾಗಿ ತನು ಮನ ಧನವನ್ನು ಅರ್ಪಿಸಿ ಹುತಾತ್ಮರಾಗಿದ್ದಾರೆ. ಅವರ ಹೋರಾಟದ ಫಲವಾಗಿ ಬಂದ ಸ್ವಾತಂತ್ರ್ಯವನ್ನು ನಾವು ಅನುಭವಿಸುತ್ತಿರುವ ಈ ಸುಸಮಯದಲ್ಲಿ ಅವರೆಲ್ಲರನ್ನೂ ನಾವು ಸ್ಮರಿಸಬೇಕು ಎಂದು ಹೇಳಿದರು.

ಈ ನಾಡಿನ ಎಲ್ಲರಿಗೂ ಉತ್ತಮ ಆರೋಗ್ಯ ಸವಲತ್ತುಗಳು ಮತ್ತು ಉತ್ತಮ ಶಿಕ್ಷಣ ದೊರೆಯುವಂತಾಗಬೇಕು. ಆ ನಿಟ್ಟಿನಲ್ಲಿ ಸರ್ಕಾರ, ಜನಪ್ರತಿನಿಗಳು, ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ನಡೆಸಬೇಕು ಎಂದು ಆಶಿಸಿದರು.

ತಹಶೀಲ್ದಾರ್ ಎನ್.ಗಗನ ಸಿಂಧು ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಹುತಾತ್ಮರಾದ ಎಲ್ಲರನ್ನೂ ನಾವು ಸ್ಮರಿಸಬೇಕು, ಸೌಹಾರ್ಧತೆಯಿಂದ ಬದುಕು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ನಾವೆಲ್ಲರೂ ಪ್ರಾಮಾಣಿಕ ಪ್ರಯತ್ನ ಸಾಗಬೇಕೆಂದು ನುಡಿದರು.

ನಗರದ ಶಾಲಾ ವಿದ್ಯಾರ್ಥಿಗಳು, ಎನ್‌ಸಿಸಿ ವಿದ್ಯಾರ್ಥಿಗಳ ತಂಡ, ಪೊಲೀಸರು, ಗೃಹ ಇಲಾಖೆ ಸಿಬ್ಬಂದಿಯ ತಂಡ ಧ್ವಜ ವಂದನೆ ಸಲ್ಲಿಸಿದರು.

ವಿಕಲಚೇತನ ಮಕ್ಕಳಿಗೆ ದಿನ ನಿತ್ಯದ ಕಲಿಕೆ, ನಡೆದಾಡಲು ಅನುಕೂಲ ಆಗುವಂತ ಕಲಿಕಾ ಹಾಗೂ ದೈಹಿಕ ಚಟುವಟಿಕೆಗಳ ಸಾಮಗ್ರಿಗಳ ಕಿಟ್ ವಿತರಿಸಲಾಯಿತು.

ಶಾಲಾ ಮಕ್ಕಳಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಲಡ್ಡು ಸಿಹಿ ಹಂಚಲಾಯಿತು.

ನಗರಸಭೆ ಅಧ್ಯಕ್ಷ ವೆಂಕಟಸ್ವಾಮಿ, ತಾಲ್ಲೂಕು ಪಂಚಾಯಿತಿ ಇಒ ಆರ್.ಹೇಮಾವತಿ, ನಗರಸಭೆ ಆಯುಕ್ತೆ ಜಿ.ಅಮೃತ, ಸರ್ಕಲ್ ಇನ್ಸ್‌ಪೆಕ್ಟರ್ ಎಂ.ಶ್ರೀನಿವಾಸ್, ಬಿಇಒ ನರೇಂದ್ರ ಕುಮಾರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ಪಿ.ಎಲ್‌.ಡಿ ಬ್ಯಾಂಕ್ ಅಧ್ಯಕ್ಷ ಬಂಕ್ ಮುನಿಯಪ್ಪ, ವಕೀಲರ ಸಂಘದ ಅಧ್ಯಕ್ಷ ಎ.ನಾರಾಯಣಸ್ವಾಮಿ, ಮೇಲೂರು ಮಂಜುನಾಥ್, ಲಕ್ಷ್ಮಣರಾಜು, ಭಕ್ತರಹಳ್ಳಿ ಬೈರೇಗೌಡ ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ನನ್ನ ರೇಷ್ಮೆ ನನ್ನ ಹೆಮ್ಮೆ ಜಾಗೃತಿ ಕಾರ್ಯಕ್ರಮ

0
Sidlaghatta Hosapete Sericulture Farmers Awareness Programme

Hosapete, Sidlaghatta : ದ್ವಿತಳಿ ರೇಷ್ಮೆಗೂಡು ಉತ್ಪಾದನೆ ಮಾಡುವ ಕಡೆಗೆ ರೈತರು ಹೆಚ್ಚಿನ ಚಿಂತನೆ ನಡೆಸಬೇಕು. ಇದರಿಂದ ರೈತರು ಆರ್ಥಿಕವಾಗಿ ಸದೃಢರಾಗಲು ಸಹಕಾರಿಯಾಗುತ್ತದೆ ಎಂದು ಕೇಂದ್ರ ರೇಷ್ಮೆ ಮಂಡಳಿ ವಿಜಯಪುರದ ವಿಜ್ಞಾನಿ ಡಾ.ಪಿ.ಎಂ.ಮುನಿಶಾಮಿರೆಡ್ಡಿ ಹೇಳಿದರು.

ತಾಲ್ಲೂಕಿನ ಹೊಸಪೇಟೆ ಗ್ರಾಮದ ರೇಷ್ಮೆ ವಿಸ್ತರಣಾ ಕೇಂದ್ರದಲ್ಲಿ, ಕೇಂದ್ರ ರೇಷ್ಮೆ ಮಂಡಳಿ, ಮತ್ತು ರಾಜ್ಯ ರೇಷ್ಮೆ ಇಲಾಖೆಯ ಜಂಟಿ ಸಹಯೋಗದಲ್ಲಿ ಆಯೋಜಿಸಲಾಗಿದ್ದ ನನ್ನ ರೇಷ್ಮೆ ನನ್ನ ಹೆಮ್ಮೆ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನನ್ನ ರೇಷ್ಮೆ ನನ್ನ ಹೆಮ್ಮೆ ಎಂಬ ಮಹಾತಂತ್ರಜ್ಞಾನ ಹಂಚಿಕೆ ಅಭಿಯಾನವನ್ನು ಕೇಂದ್ರ ರೇಷ್ಮೆ ಮಂಡಳಿ ದೇಶವ್ಯಾಪ್ತಿ ಅಭಿಯಾನ ಆರಂಭಿಸಿದೆ. ಕೇಂದ್ರ ರೇಷ್ಮೆ ಮಂಡಳಿಯಿಂದ ಅಭಿವೃದ್ಧಿಪಡಿಸಲಾದ ಅತ್ಯಾಧುನಿಕ ತಂತ್ರಜ್ಞಾನಗಳು ಲಭ್ಯವಿದ್ದರೂ ರೇಷ್ಮೆ ಕೃಷಿ ರೈತರು ಇನ್ನೂ ಹಳೆಯ ಪದ್ಧತಿಗಳನ್ನೇ ಅವಲಂಬಿಸಿದ್ದಾರೆ. ಇದಕ್ಕೆ ಪ್ರಮುಖ ಕಾರಣ ತಂತ್ರಜ್ಞಾನಗಳ ಪರಿಚಯದ ಕೊರತೆಯಿದೆ. ಹಾಗಾಗಿ ರೈತರು ಇಂತಹ ತರಬೇತಿ ಕಾರ್ಯಾಗಾರಗಳಲ್ಲಿ ಸಿಕ್ಕುವಂತಹ ಮಾಹಿತಿಗಳನ್ನು ಹೆಚ್ಚಾಗಿ ಬಳಕೆ ಮಾಡಿಕೊಳ್ಳಬೇಕು ಎಂದರು

ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ಅಕ್ಮಲ್ ಪಾಷ ಮಾತನಾಡಿ, ರೇಷ್ಮೆ ಉಧ್ಯಮದಲ್ಲಿ ರೈತರು, ಹೆಚ್ಚು ಲಾಭ ಗಳಿಸಲು ಸಾಕಷ್ಟು ಅವಕಾಶಗಳಿವೆ. ಚೀನಾದಿಂದ ಆಮದಾಗುತ್ತಿದ್ದ ರೇಷ್ಮೆಯ ಪ್ರಮಾಣ ಕಡಿಮೆಯಾಗಿದೆ. ಇತ್ತಿಚೆಗೆ ರೇಷ್ಮೆಗೂಡಿಗೂ ಉತ್ತಮ ಬೆಲೆಯಿದೆ. ರೈತರು, ಯಾವುದೇ ಕಾರಣಕ್ಕೂ ರೇಷ್ಮೆ ಉಧ್ಯಮದಿಂದ ಹಿಂದೆ ಸರಿಯಬಾರದು. ರಾಜ್ಯದಲ್ಲಿ ಪ್ರಮುಖ ಬೆಳೆಯಾಗಿ ರೇಷ್ಮೆ ಅನೇಕ ವರ್ಷಗಳಿಂದ ರೈತರ ಕೈ ಹಿಡಿಯುತ್ತಿದೆ. ಇಂತಹ ಸಂದರ್ಭದಲ್ಲಿ ರೈತರು ರೇಷ್ಮೆ ಬೆಳೆಗೆ ತಂತ್ರಜ್ಞಾನವನ್ನ ಜೋಡಿಸಿದರೆ ಮತ್ತಷ್ಟು ಲಾಭವನ್ನು ಪಡೆಯಬಹುದು. ಇಲಾಖೆಯಿಂದ ರೈತರಿಗೆ ಸಿಗುತ್ತಿರುವ ಎಲ್ಲಾ ಸೌಲಭ್ಯಗಳನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದರು.

ವಿಜ್ಞಾನಿಗಳು, ರೇಷ್ಮೆ ಬೆಳೆಗೆ ಬರುವಂತಹ ರೋಗಗಳು, ಅವುಗಳ ನಿವಾರಣೆಗೆ ಕೈಗೊಳ್ಳಬಹುದಾದ ಮಾರ್ಗೋಪಾಯಗಳ ಕುರಿತು, ರೈತರಿಗೆ ಮಾಹಿತಿ ನೀಡಿದರು.

ಡಾ.ಪರಮೇಶ್‌ ನಾಯಕ್, ಜಂಗಮಕೋಟೆ ರೇಷ್ಮೆ ವಿಸ್ತರಣಾ ಇನ್‌ಸ್ಪೆಕ್ಟರ್ ಸೋಮಣ್ಣ, ರೇಷ್ಮೆ ವಿಸ್ತರಣಾಧಿಕಾರಿ ಹರೀಶ್‌ ಗೌಡ, ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ರೇಷ್ಮೆ ಬೆಳೆಗಾರರು ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-14/08/2025

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 14/08/2025

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 362
Qty: 18245 Kg
Mx : ₹ 720
Mn: ₹ 270
Avg: ₹ 558

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 12
Qty: 696 Kg
Mx : ₹ 703
Mn: ₹ 51
Avg: ₹ 644


For Daily Updates WhatsApp ‘HI’ to 7406303366

error: Content is protected !!