24.1 C
Sidlaghatta
Saturday, December 27, 2025
Home Blog Page 44

ರಾಯರ 354 ನೇ ಆರಾಧನಾ ಮಹೋತ್ಸವ

0
Sidlaghatta Raghavendra Swamy Aradhane

Sidlaghatta : ಶಿಡ್ಲಘಟ್ಟ ನಗರದ ಮುತ್ತೂರು ಬೀದಿಯ ರಾಘವೇಂದ್ರಸ್ವಾಮಿ ಮಠದಲ್ಲಿ ರಾಯರ 354 ನೇ ಆರಾಧನಾ ಮಹೋತ್ಸವವನ್ನು ಶ್ರದ್ಧಾ ಭಕ್ತಿಯಿಂದ ಸೋಮವಾರ ಆಚರಿಸಲಾಯಿತು.

ಈ ಸಂದರ್ಭದಲ್ಲಿ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮೂರು ದಿನಗಳ ಕಾಲ ನಡೆಸುವ ಆರಾಧನಾ ಮಹೋತ್ಸವವು ಭಾನುವಾರ ಪ್ರಾರಂಭವಾಯಿತು.

ಸುಪ್ರಭಾತ ಸೇವೆ, ಪಂಚಾಮೃತ ಅಭಿಷೇಕ, ಸಹಸ್ರನಾಮಾರ್ಚನೆ, ಹಸ್ತೋದಕ, ಮಹಾಮಂಗಳಾರತಿ ನಡೆಯಿತು. ರಾಯರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಸುಪ್ರಭಾತ ಸೇವೆ, ಪಂಚಾಮೃತ ಅಭಿಷೇಕ, ಸಹಸ್ರ ನಾಮಾರ್ಚನೆ, ಉತ್ಸವವನ್ನು ನೆರವೇರಿಸಲಾಯಿತು.

ಭಾನುವಾರ ಸಂಜೆ ಶ್ರೀ ಗಾಯಿತ್ರಿ ಮಹಿಳಾ ಮಂಡಳಿಯವರಿಂದ ಭಕ್ತಿಗೀತೆಗಳು ಮತ್ತು ಶ್ರೀಕಾಂತಂ ನಾಗೇಂದ್ರ ಶಾಸ್ತ್ರಿ, ಆನೂರು ಅನಂತಕೃಷ್ಣ ಶರ್ಮ ತಂಡದಿಂದ ಶಾಸ್ತ್ರೀಯ ಸಂಗೀತ ಆಯೋಜಿಸಲಾಗಿತ್ತು.

ಸೋಮವಾರ ನಗರದ ಪ್ರಮುಖ ರಸ್ತೆಗಳಲ್ಲಿ ರಾಯರ ಮೆರವಣಿಗೆಯನ್ನು ಆಯೋಜಿಸಲಾಗಿತ್ತು. ಉತ್ಸವ ಮೂರ್ತಿಗೆ ಭಕ್ತರು ಪೂಜೆ ಸಲ್ಲಿಸಿದರು. ಮೆರವಣಿಗೆ ಹಾದು ಹೋದ ರಸ್ತೆಗಳನ್ನು ಸಾರಿಸಿ ರಂಗವಲ್ಲಿ ಹಾಕಿ ಉತ್ಸವಕ್ಕೆ ಸ್ವಾಗತ ಕೋರಲಾಗಿತ್ತು.

ದೇವಾಲಯದ ಆವರಣದಲ್ಲಿ ರಾಘವೇಂದ್ರ ಸೇವಾ ಟ್ರಸ್ಟ್ ವತಿಯಿಂದ ಸಾಮೂಹಿಕ ಅನ್ನಸಂತರ್ಪಣೆಯನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ರಾಘವೇಂದ್ರ ಸೇವಾ ಟ್ರಸ್ಟ್ ಅಧ್ಯಕ್ಷ ಎಸ್.ವಿ. ನಾಗರಾಜರಾವ್, ಕಾರ್ಯದರ್ಶಿ ಎನ್. ಶ್ರೀಕಾಂತ್, ಖಜಾಂಚಿ ಆರ್. ಮಧುಸೂದನ್, ಟ್ರಸ್ಟೀಗಳಾದ ಎ.ಎಸ್. ರವಿ, ಬಿ.ಕೃಷ್ಣಮೂರ್ತಿ, ಬಿ. ಆರ್. ಸುಧೀಂದ್ರ, ಬಿ. ಆರ್. ರವಿ, ವಿ.ಕೃಷ್ಣ , ಮಧು, ಹರೀಶ್, ವೆಂಕಟೇಶ್, ಬಾಸ್ಕರ್ , ಮಂಜುನಾಥ್ ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ಚೌಡೇಶ್ವರಿ ದೇವಾಲಯ ಕಟ್ಟಡ ನಿರ್ಮಾಣಕ್ಕೆ ಸಹಾಯಧನ

0
Melur Chhowdeshwari Temple SKDRDP

Melur, Sidlaghatta : ದೇವಾಲಯಗಳು ಸಾಮರಸ್ಯ ಕೇಂದ್ರಗಳಾಗಿದ್ದು, ಅವುಗಳನ್ನು ಜೀರ್ಣೋದ್ಧಾರಗೊಳಿಸುವುದು ಸೇರಿದಂತೆ ನೂತನ ದೇವಾಲಯಗಳ ನಿರ್ಮಾಣ ಕಾರ್ಯಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸುವ ಕೆಲಸವಾಗಬೇಕಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಪ್ರಸಾದ್ ಹೇಳಿದರು.

ತಾಲ್ಲೂಕಿನ ಮೇಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಗನಹಳ್ಳಿ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಚೌಡೇಶ್ವರಿ ದೇವಾಲಯ ಕಟ್ಟಡ ನಿರ್ಮಾಣಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ೨ ಲಕ್ಷ ಸಹಾಯಧನದ ಚೆಕ್ ವಿತರಿಸಿ ಮಾತನಾಡಿದರು.

ಗ್ರಾಮೀಣ ಭಾಗಗಳಲ್ಲಿ ನಿರ್ಮಾಣವಾಗುವಂತಹ ಇಂತಹ ದೇವಾಲಯಗಳ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಕೇವಲ ಮಹಿಳಾ ಸಬಲೀಕರಣಕ್ಕೆ ಮಾತ್ರವಲ್ಲದೆ, ಹಲವಾರು ಸಾಮಾಜಿಕ ಕಾರ್ಯಕ್ರಮಗಳನ್ನೂ ಕೈಗೊಳ್ಳುತ್ತಿದೆ. ಪಿಂಚಣಿ ಯೋಜನೆ, ದೇವಾಲಯಗಳ ಅಭಿವೃದ್ಧಿ, ಮದ್ಯವರ್ಜನ ಶಿಬಿರಗಳು, ಶೈಕ್ಷಣಿಕ ಬೆಳವಣಿಗೆಗಾಗಿ ಸಹಾಯ ಮಾಡುವುದು, ಸೇರಿದಂತೆ ಹಲವಾರು ಕಾರ್ಯಕ್ರಮಗಳ ಮೂಲಕ ಸಮಾಜದಲ್ಲಿ ಉತ್ತಮ ಕಾರ್ಯಗಳನ್ನು ಮಾಡುತ್ತಿದ್ದು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಸಿ.ಪ್ರಮೀಳಾವೆಂಕಟೇಶ್, ಗ್ರಾ.ಪಂ ಮಾಜಿ ಸದಸ್ಯ ಬಿ.ಸಿ.ವೆಂಕಟೇಶಪ್ಪ, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಜಿ.ವಿ.ಸುರೇಶ್, ಮುಖಂಡರಾದ ಜಿ.ಎನ್.ಅಶ್ವಥಪ್ಪ, ಜಿ.ವಿ.ರಾಜೇಶ್, ವೆಂಕಟರೆಡ್ಡಿ, ಪಾರ್ವತಮ್ಮ, ಪ್ರಭಾವತಿ, ಜಿ.ಎನ್.ನಿರ್ಮಲ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಧನಂಜಯ್, ಸೇವಾ ಪ್ರತಿನಿಧಿ ಮುನಿರತ್ನ ಮತ್ತಿತರರು ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-11/08/2025

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 11/08/2025

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 335
Qty: 17791 Kg
Mx : ₹ 700
Mn: ₹ 311
Avg: ₹ 585

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 18
Qty: 1057 Kg
Mx : ₹ 752
Mn: ₹ 519
Avg: ₹ 608


For Daily Updates WhatsApp ‘HI’ to 7406303366

ಮಣ್ಣಿನ ಪರೀಕ್ಷೆ ಮಾಡಿಸುವುದು ಅತ್ಯಗತ

0
Sidlaghatta Kothanur GKVK Students Soil Test awareness

Kothanur, Sidlaghatta : ಶಿಡ್ಲಘಟ್ಟ ತಾಲೂಕಿನ ಕೊತ್ತನೂರು ಗ್ರಾಮದಲ್ಲಿ 3 ತಿಂಗಳುಗಳ ಕಾಲ ವಾಸ್ತವ್ಯವಿರುವ ಜಿ ಕೆ ವಿ ಕೆ ಕೃಷಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಮಣ್ಣಿನ ಪರೀಕ್ಷೆ ಮಾಡುವ ವಿಧಾನ ಹಾಗು ಮಣ್ಣಿನ ಪರೀಕ್ಷೆಯಿಂದ ರೈತರಿಗಾಗುವ ಉಪಯೋಗದ ಕುರಿತು ಪದ್ಧತಿ ಪ್ರಾತ್ಯಕ್ಷಿಕೆ ಹಾಗೂ ಗುಂಪು ಚರ್ಚಾ ಸಭೆಯನ್ನು ಹಮ್ಮಿಕೊಂಡಿದ್ದರು.

ಮಣ್ಣಿನ ಪರೀಕ್ಷೆಯನ್ನು ಮಾಡುವುದರಿಂದ ಮಣ್ಣಿನ ಆರೋಗ್ಯವನ್ನು ತಿಳಿದುಕೊಂಡು ಅಗತ್ಯವಿದ್ದಷ್ಟು ಗೊಬ್ಬರವನ್ನಷ್ಟೇ ಬಳಸಬಹುದು ,ಇದರಿಂದ ರೈತರೂ ಹೆಚ್ಚಿನ ಲಾಭ ಪಡೆಯಬಹುದು ಎಂದು ವಿದ್ಯಾರ್ಥಿಗಳು ತಿಳಿಸಿದರು.

ಊರಿನ ರೈತರಿಗೆ ಉಚಿತವಾಗಿ ಮಣ್ಣಿನ ಪರೀಕ್ಷೆ ಮಾಡಿಸಲು ಮಣ್ಣಿನ ಮಾದರಿ ಸಂಗ್ರಹಣೆಯನ್ನು ಮಾಡಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಾದ ಗಗನ್, ಚೆನ್ನಯ್ಯ, ಇಮಾಮ್ ಹಾಗೂ ಅನುಷಾ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು .ಊರಿನ ಮುಖ್ಯಸ್ಥರು , ರೈತರು ಉಪಸ್ಥಿತರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ

0
Sidlaghatta Padmasali Student Toppers Felicitation

ತಂದೆ ತಾಯಿಯನ್ನು ಗೌರವದಿಂದ ಕಾಣುವವರು ಸಾಧಕರಾಗಿ ಸಮಾಜದ ಗೌರವಕ್ಕೆ ಪಾತ್ರರಾಗುತ್ತಾರೆಂದು ಜಿಲ್ಲೆಯ ಚಿಂತಾಮಣಿ ನಗರದ ಸರ್ಕಾರಿ ಮಹಿಳಾ ಪದವಿ ಕಾಲೇಜಿನ ಸಹ ಪ್ರಾಧ್ಯಾಪಕರಾದ ನರಸಪ್ಪ ಅಭಿಪ್ರಾಯಪಟ್ಟರು.

ನಗರದಲ್ಲಿ ಭಾನುವಾರ ಜಿಲ್ಲಾ  ಪದ್ಮಶಾಲಿ ನೌಕರರ ಸ್ವಯಂ ಸೇವಾ ಬಳಗದ  ವತಿಯಿಂದ  ಹಮ್ಮಿಕೊಂಡಿದ್ದ ಪದ್ಮಶಾಲಿ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.

ಟಿವಿ, ಮೊಬೈಲ್  ಗೆ ಅಂಟಿಕೊಂಡರೆ ವಿದ್ಯಾರ್ಥಿಗಳ ಬದುಕು ಖಂಡಿತ ಉಧ್ಧಾರ ಆಗುವುದಿಲ್ಲ. ವಿದ್ಯಾಭ್ಯಾಸಕ್ಕೆ ಎಷ್ಟು ಬೇಕೋ ಅಷ್ಟು ಸೀಮಿತವಾಗಿ ಮೊಬೈಲ್ ನೋಡಬೇಕು. ಬೇರೆಯವರು ನಿಮ್ಮನ್ನು ಯೂಟೂಬ್ನಲ್ಲಿ ನೋಡುವ ರೀತಿ ಸಾಧಕರಾಗಿ ಬೆಳೆಯಬೇಕೆಂದು  ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. 

ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳನ್ನು ಮೊಬೈಲ್ಗಳು ಹಾದಿ ತಪ್ಪಿಸುತ್ತಿವೆ  ಈ ಬಗ್ಗೆ ಪೋಷಕರು ಎಚ್ಚರಿಕೆ ವಹಿಸಬೇಕು. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರತಿ ಕ್ಷೇತ್ರದಲ್ಲಿಯು ಸ್ಪರ್ಧೆ ಇದ್ದು, ಗುಣಮಟ್ಟದ ಶಿಕ್ಷಣಕ್ಕೆ, ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಆದ್ಯತೆ ನೀಡಬೇಕೆಂದರು. ಯಾವುದೇ ಸಾಧನೆ ಮಾಡಬೇಕಾದರೆ ಗುರು ಹಿರಿಯರ, ಪೋಷಕರ ಆರ್ಶೀವಾದ ಬಹಳ ಮುಖ್ಯ. ಸಂಕಲ್ಪ ತೊಟ್ಟರೆ ಯಾವುದೇ ಕಾರ್ಯವನ್ನು ನಾವು ಸಿದ್ದಿಸಿಕೊಳ್ಳಬಹುದೆಂದ ಅವರು, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹೇಳಿದಂತೆ ಯಾರು ತಲೆ ಬಗ್ಗಿಸಿ ಓದುತ್ತಾರೆ,  ಅವರು ಜಗತ್ತಿನಲ್ಲಿ ತಲೆ ಎತ್ತಿ ನಡೆಯುವಂತೆ ಮಾಡುವರು  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಳಗದ ಅಧ್ಯಕ್ಷರಾದ ಶ್ರೀನಿವಾಸ ಮೂರ್ತಿ ವಹಿಸಿದ್ದರು.

ಈ ವೇಳೆ  24-25ನೇ ಸಾಲಿನ ಎಸ್,ಎಸ್, ಎಲ್ , ಸಿ ಮತ್ತು ಪಿಯುಸಿಯಲ್ಲಿ 80 ಶೇಕಡ  ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳಿಗೆ  ಪ್ರತಿಭಾ ಪುರಸ್ಕಾರವನ್ನು ನೀಡಲಾಯಿತು. ಪದ್ಮಶಾಲಿ ನೌಕರರ  ಸ್ವಯಂ ಸೇವಾ ಬಳಗದಿಂದ ಸೂರ್ಯ ಪ್ರಕಾಶ್ ಮತ್ತು ಜಯಮ್ಮನವರಿಗೆ  ಆರ್ಥಿಕ ಸಹಾಯವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಶಿಡ್ಲಘಟ್ಟ ತಾಲೂಕು ಪದ್ಮಶಾಲಿ ಸಂಘದ ಅಧ್ಯಕ್ಷರಾದ  ನಾಗರಾಜ್, ಕಾರ್ಯದರ್ಶಿ ಅಮರನಾಥ್, ಕಾರ್ಯಕಾರಿ ಬಳಗದ ರೆಡ್ಡಿ ರಮೇಶ್, ಗೋಪಾಲ, ರಘುನಾಥ್, ಶಂಕರ್ ಕುಮಾರ್, ಚಿಂತಾಮಣಿಯ  ನಾಗರಾಜ್, ಕೇಶವ ಮೂರ್ತಿ  ಉಪಸ್ಥಿತರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-10/08/2025

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 10/08/2025

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 352
Qty: 18496 Kg
Mx : ₹ 740
Mn: ₹ 236
Avg: ₹ 554

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 05
Qty: 262 Kg
Mx : ₹ 707
Mn: ₹ 518
Avg: ₹ 554


For Daily Updates WhatsApp ‘HI’ to 7406303366

ಅಜೋಲಾ ಪಶುಗಳಿಗೆ ಪೌಷ್ಟಿಕ ಆಹಾರದೊಂದಿಗೆ ಇಳುವರಿಯೂ ಹೆಚ್ಚು

0
Sidlaghatta Azola cattle feed Awareness

Malamachanahalli, Sidlaghatta : ಅಜೋಲಾ ಒಂದು ಪಾಚಿ ಜಾತಿಗೆ ಸೇರಿದ ಪೌಷ್ಟಿಕಾಂಶಯುಕ್ತ , ಹೆಚ್ಚಿನ ಪ್ರೋಟೀನ್ ಅಂಶ ಹೊಂದಿದ್ದು ಹೈನು ರಾಸುಗಳಿಗೆ ಉತ್ತಮ ಆಹಾರವಾಗಿದ್ದು, ಪ್ರತಿ ದಿನ ರಾಸುಗಳಿಗೆ ಅಜೋಲವನ್ನು ನೀಡಿದ್ದೆ ಆದಲ್ಲಿ ಗುಣ ಮಟ್ಟದ ಹಾಲನ್ನು ಪಡೆಯಬಹುದು ಹಾಗೂ ರಾಸುಗಳಿಗೆ ನೀಡುವ ಪಶು ಆಹಾರದ ವೆಚ್ಚವು ಕಡಿಮೆಯಾಗಿ ಹೈನುಗಾರರಿಗೆ ಅನುಕೂಲವಾಗುತ್ತದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಒಕ್ಕೂಟದ ಶಿಡ್ಲಘಟ್ಟ ಉಪವ್ಯವಸ್ಥಾಪಕ ಡಾ. ಬಿ. ಆರ್ ರವಿ ಕಿರಣ್ ತಿಳಿಸಿದರು.

ಶಿಡ್ಲಘಟ್ಟ ತಾಲ್ಲೂಕಿನ ಮಳಮಾಚನಹಳ್ಳಿ ಗ್ರಾಮದಲ್ಲಿ ಹೈನುಗಾರ ಪ್ರವೀಣ್ ರವರು ನೂತನವಾಗಿ ಅಜೋಲಾ ಬೆಳೆಯಲು ಪ್ರಾರಂಭಿಸಿದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ ಡಾ. ಬಿ. ಆರ್ ರವಿ ಕಿರಣ್ ರವರು, ಹೈನುಗಾರರು ಅಜೋಲಾ ಬೆಳೆಯಲು ನಮ್ಮ ಒಕ್ಕೂಟದಿಂದ ಮೂರುಸಾವಿರ ಪ್ರೋತ್ಸಾಹ ಧನ ನೀಡಲಾಗುತ್ತಿದ್ದು ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕೆಂದು ತಿಳಿಸಿದರು.

ಕೃಷಿ ಅಧಿಕಾರಿ ಕರಿಸಿದ್ದ ರವರು ಮಾತನಾಡಿ ಅಜೋಲದಲ್ಲಿ ಹೆಚ್ಚಿನ ಪ್ರೋಟೀನ್ ಅಂಶ ಇದ್ದು, ಅಜೋಲವನ್ನು ರಾಸುಗಳಿಗೆ ನೀಡುವುದರಿಂದ ಉತ್ತಮ ಆಹಾರವಾಗುತ್ತದೆ. ರಾಸುಗಳಿಗೆ ನೀಡುವ ಆಹಾರವನ್ನು ಹೆಚ್ಚಿನ ಪ್ರಮಾಣದಲ್ಲಿ ವ್ಯಯಕ್ತಿಕವಾಗಿ ಬೆಳೆದುಕೊಂಡಾಗ ಹೈನುಗಾರಿಕೆಯಲ್ಲಿ ಲಾಭಾಂಶವವು ಹೆಚ್ಚಾಗುತ್ತದೆ ಎಂದು ತಿಳಿಸಿದರು.

ನಂತರ ಪ್ರವೀಣ್ ರವರು ನೂತನವಾಗಿ ಕೋಳಿ ಸಾಕಾಣಿಕೆಯನ್ನು ಪ್ರಾರಂಭಿಸಿದ್ದು ಅದನ್ನು ವೀಕ್ಷಣೆ ಮಾಡಿ ಕೋಳಿ ಸಾಕಾಣಿಕೆ ಬಗ್ಗೆಯೂ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ವಿಸ್ತರಣಾಧಿಕಾರಿ ವಿ. ಶ್ರೀನಿವಾಸ್ , ಎನ್.ಜಿ.ಜಯಚಂದ್ರ ,ಕೆ.ನಾರಾಯಣ ಸ್ವಾಮಿ, ಮಳಮಾಚನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಆರ್ ಸತೀಶ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ ವಿನಯ್ ಕುಮಾರ್, ನಿರ್ದೇಶಕರಾದ ಎಂ ಕೆ ರಾಜಶೇಖರ್,ಎಂ ಮನೋಹರ್ , ಗ್ರಾಮಸ್ಥರಾದ ಪ್ರವೀಣ್, ಜಯರಾಮ್, ಶ್ರೀನಿವಾಸ್ ಸೇರಿದಂತೆ ಇನ್ನು ಮುಂತಾದವರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-09/08/2025

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 09/08/2025

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 311
Qty: 16471 Kg
Mx : ₹ 706
Mn: ₹ 250
Avg: ₹ 567

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 07
Qty: 382 Kg
Mx : ₹ 736
Mn: ₹ 625
Avg: ₹ 682


For Daily Updates WhatsApp ‘HI’ to 7406303366

ಬರಡು ರಾಸುಗಳ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

0
Sidlaghatta Anemadugu Cattle Health Camp

Anemadugu, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಆನೆಮಡುಗು ಗ್ರಾಮದಲ್ಲಿ ಅಂತಿಮ ವರ್ಷದ BSc(ಆನರ್ಸ್) ಕೃಷಿ ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮ 2025-26 ರ ಅಡಿಯಲ್ಲಿ, ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ, ಚಿಂತಾಮಣಿಯ ಕುರುಬೂರಿನ ರೇಷ್ಮೆ ಕೃಷಿ ಮಹಾವಿದ್ಯಾಲಯ, ಆನೆಮಡುಗು ಹಾಲು ಉತ್ಪಾದಕರ ಸಂಘದ ಸಹಯೋಗದಲ್ಲಿ ಬರಡು ರಾಸುಗಳ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಏರ್ಪಡಿಸಲಾಗಿತ್ತು.

ಚಿಮುಲ್ ಶಿಭಿರ ಘಟಕದ ವ್ಯವಸ್ಥಾಪಕ ಡಾ.ರವಿಕಿರಣ್.ಬಿ.ಆರ್ ಮಾತನಾಡಿ, ಗ್ರಾಮೀಣ ಪ್ರದೇಶದ ಪ್ರಮುಖ ಆದಾಯ ಮೂಲ ಪಶುಸಂಗೋಪನೆ, ಹಾಲಿನ ಉತ್ಪಾದನೆ ಮತ್ತು ಗುಣಮಟ್ಟ ಹೆಚ್ಚಿಸಲು ಹಸುಗಳಿಗೆ ಪ್ರೋಟಿನ್ ಯುಕ್ತ ಆಹಾರವನ್ನ ನೀಡಬೇಕು. ಇದರಿಂದ ಹಾಲಿನಲ್ಲಿ ಫ್ಯಾಟ್ ಪ್ರಮಾಣ ಹೆಚ್ಚುವುದರಿಂದ ರೈತರಿಗೆ ಹೆಚ್ಚಿನ ಆದಾಯ ಸಿಗಲಿದೆ ಎಂದು ಹೇಳಿದರು.

ಹಾಲಿನ ಉತ್ಪಾದನೆ ಹೆಚ್ಚಿಸುವುದರಿಂದ ರೈತರು ಹೆಚ್ಚಿನ ಆದಾಯ ಗಳಿಸಬಹುದು, ಕ್ಯಾಲ್ಸಿಯಂ ಮತ್ತು ಮಿನರಲ್ಸ್ ಇರುವ ನ್ಯೂಟ್ರಿಷನ್ ಆಹಾರವನ್ನ ಹಸುಗಳಿಗೆ ಕೊಡಬೇಕು. ಸೀಮೆ ಹುಲ್ಲಿನ ಜೊತೆ ದ್ವಿದಳ ಧಾನ್ಯಗಳ ಹುಲ್ಲನ್ನು ಕೊಡಬೇಕು. ಇದರ ಜೊತೆ ಅಜೋಲವನ್ನ ಕೊಡಬೇಕು. ಹಸುಗಳು ಕೊಡುವ ಹಾಲಿನ ಪ್ರಮಾಣಕ್ಕೆ ತಕ್ಕಂತೆ ಪ್ರೋಟಿನ್ ಯುಕ್ತ ಆಹಾರವನ್ನ ಕೊಡುವುದರಿಂದ ಹಸುವಿನ ಹಾಲಿನಲ್ಲಿ ಫ್ಯಾಟ್ (ಡಿಗ್ರಿ) ಹೆಚ್ಚಾಗುವುದಾಗಿ ಹೇಳಿದರು.

ಗ್ರಾಮದ 12 ಹಸು, 10 ಎಮ್ಮೆ ಸೇರಿದಂತೆ 60 ಕ್ಕೂ ಹೆಚ್ಚು ಕುರಿ ಹಾಗು ಮೇಕೆಗಳಿಗೆ ಚಿಕಿತ್ಸೆ ನೀಡಲಾಯಿತು. ನಾಯಿಗಳಿಗೆ ರೇಬಿಸ್ ಲಸಿಕೆಯನ್ನು ಹಾಕಿಸಲಾಯಿತು.

GKVK ಪ್ರಾಧ್ಯಾಪಕರಾದ ಡಾ.ಸಿ.ಎಂ.ಸವಿತಾ, ಕೆ.ನಾರಾಯಣಸ್ವಾಮಿ, ಪಶು ವೈದ್ಯಾಧಿಕಾರಿ ಡಾ.ಶ್ರೀನಾಥರೆಡ್ಡಿ, ವಿಸ್ತರಣಾಧಿಕಾರಿ ಶಶಿಕುಮಾರ್, ರೈತರು, ಗ್ರಾಮಸ್ಥರು, ರೈತ ಮಹಿಳೆಯರು ಹಾಗು ವಿದ್ಯಾರ್ಥಿಗಳು ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ಸವಿತಾ ಸಮಾಜದಿಂದ ಬೆಳ್ಳಿ ರಥೋತ್ಸವದ ಮೆರವಣಿಗೆ

0
Sidlaghatta Savita Samaja Silver Chariot

Sidlaghatta : ಶಿಡ್ಲಘಟ್ಟ ನಗರದ ಕೋಟೆ ವೃತ್ತದಲ್ಲಿರುವ ಶ್ರೀ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರಾವಣ ಮಾಸದ ಮೂರನೇ ಶನಿವಾರದ ಪ್ರಯುಕ್ತ ತಾಲ್ಲೂಕು ಸವಿತಾ ಸಮಾಜ ಸಂಘದ ವತಿಯಿಂದ ದೇವರಿಗೆ ವಿಶೇಷ ಪೂಜೆ ಹಾಗೂ ಬೆಳ್ಳಿ ರಥೋತ್ಸವದ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು.

ಮುಂಜಾನೆಯಿಂದಲೂ ದೇವಾಲಯದಲ್ಲಿ ವಿಶೇಷ ಪೂಜೆ, ಅಲಂಕಾರ, ಅಭಿಷೇಕ,ಮಹಾಮಂಗಳಾರತಿ ಪ್ರಸಾದ ವಿನಿಯೋಗವನ್ನು ಮಾಡಲಾಯಿತು.  ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು. ಶ್ರಾವಣ ಶನಿವಾರ ಪ್ರಯುಕ್ತ  ದೇವರಿಗೆ ಮಾಡಿದ್ದ ವಿಶೇಷ ಅಲಂಕಾರ ಭಕ್ತರ ಕಣ್ಮನ ಸೆಳೆಯುವಂತಿತ್ತು. ದೇವರ ಬೆಳ್ಳಿ ರಥೋತ್ಸವವನ್ನು ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು. ದೇವರ ಮೆರವಣಿಗೆಯಲ್ಲಿ ಸವಿತಾ ಸಮಾಜದವರು ನಾದಸ್ವರ ಮತ್ತು ಡೋಲು ವಾದನಗಳನ್ನು ನಡೆಸಿಕೊಟ್ಟರು. 

ಸವಿತಾ ಸಮಾಜದ ತಾಲ್ಲೂಕು ಅಧ್ಯಕ್ಷ ಎಚ್.ನಾರಾಯಣಸ್ವಾಮಿ, ಮುಖಂಡರಾದ ಟಿ.ಮುನಿಸ್ವಾಮಿ, ಟಿ.ಕೃಷ್ಣಪ್ಪ ಹಾಗು ಸಮುದಾಯದ ಮುಖಂಡರು ಭಾಗವಹಿಸಿದ್ದರು. 

Sidlaghatta WhatsApp Channel Group

For Daily Updates WhatsApp ‘HI’ to 7406303366

error: Content is protected !!