Home Blog Page 441

ಕ್ರೀಡಾಪಟುಗಳಿಗೆ ಸನ್ಮಾನ

0

ತಾಲ್ಲೂಕಿನಲ್ಲಿ ಪ್ರತಿಭಾವಂತ ಕ್ರೀಡಾಪಟುಗಳು ಹೊರಹೊಮ್ಮಬೇಕು, ಅವರಿಗೆ ಸೂಕ್ತ ವೇದಿಕೆ, ಪ್ರೋತ್ಸಾಹ ಮತ್ತು ಉತ್ತೇಜನ ನೀಡಿ ಹುರಿದುಂಬಿಸುವ ಕೆಲಸವನ್ನು ಮಾಡಬೇಕು ಎಂದು ಲಯನ್ ಯುವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಗೌರವಾಧ್ಯಕ್ಷ ಎಂ.ಮುನಿರಾಜು ತಿಳಿಸಿದರು.
ನಗರದ ನೆಹರೂ ಕ್ರೀಡಾಂಗಣದಲ್ಲಿ ಭಾನುವಾರ ಲಯನ್ ಯುವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ಕರಾಟೆ, ರೋಬಾಲ್‌, ಅಥ್ಲೆಟಿಕ್ಸ್‌, ಕುಸ್ತಿ ಮುಂತಾದ ಕ್ರೀಡೆಗಳಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಪ್ರದರ್ಶನ ನೀಡಿರುವ ತಾಲ್ಲೂಕಿನ 21 ಕ್ರೀಡಾಪಟುಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.
ಬಹುತೇಕ ಶಾಲಾ ಕಾಲೇಜುಗಳಲ್ಲಿ ಕ್ರೀಡೆಗೆ ಮಹತ್ವ ನೀಡುತ್ತಿಲ್ಲವಾದ್ದರಿಂದ ಕ್ರೀಡಾ ಪ್ರತಿಭೆಗಳು ಕಮರಿಹೋಗುತ್ತಿವೆ. ಎಳೆ ವಯಸ್ಸಿನಿಂದಲೇ ಮಕ್ಕಳ ಆಸಕ್ತಿಯನ್ನು ಮನಗಂಡು ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲ್ಲೂಕಿನ 21 ಕ್ರೀಡಾಪಟುಗಳನ್ನು ಲಯನ್ ಯುವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಲಯನ್ ಯುವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಲಕ್ಷ್ಮೀಪತಿ, ಆರ್‌.ಆರ್‌.ಸುರೇಶ್‌, ಪುರುಷೋತ್ತಮ್‌, ರಾಜಶೇಖರ್‌, ಬ್ಯಾಸ್ಕೆಟ್‌ಬಾಲ್‌ ಆಟಗಾರ ಮುನಿಕೃಷ್ಣ, ವೆಂಕಟೇಶ್‌, ಮಂಜುನಾಥ, ಕರಾಟೆ ಶಿಕ್ಷಕ ಜಬೀವುಲ್ಲ, ಅರುಣ್‌ಕುಮಾರ್‌, ಶ್ರೀನಿವಾಸ್‌, ಟಿ.ಟಿ.ನರಸಿಂಹಪ್ಪ, ರವಿ, ಉಮೈತ್‌ಖಾನ್‌, ಶಿವಣ್ಣ, ದಾಕ್ಷಾಯಿಣಿ, ಶ್ರೀನಾಥ್‌, ಲಿಟಲ್‌ ಸ್ಟಾರ್‌ ಡ್ಯಾನ್ಸ್‌ ಶಾಲೆಯ ಶ್ರೀನಿವಾಸ್‌ ಮತ್ತು ತಂಡದವರು ಹಾಜರಿದ್ದರು.

ಪುಟಾಣಿ ಮಕ್ಕಳ ವೇಷಭೂಷಣ

0

ಪುಟಾಣಿ ಮಕ್ಕಳ ಆಟವನ್ನು ಕಣ್ತುಂಬಾ ನೋಡುತ್ತಾ, ಅವುಗಳ ಚೇಷ್ಟೆ, ಮುದ್ದು ಮಾತುಗಳಿಗೆ ಸ್ಪಂದಿಸುತ್ತಾ, ಅದರ ಜತೆ ಜತೆಗೇ ನಮ್ಮ ಜೀವನವನ್ನೂ ಸಿಹಿಸಿಹಿಯಾಗಿಸಿಕೊಳ್ಳುವ ಮೂಲಕ ಜೀವನೋತ್ಸಾಹವನ್ನು ಹೆಚ್ಚಿಸಿಕೊಳ್ಳಬಹುದಾಗಿದೆ ಎಂದು ಡಾಲ್ಫಿನ್‌ ವಿದ್ಯಾಸಂಸ್ಥೆ ಅಧ್ಯಕ್ಷ ನಾಗರಾಜ್‌ ತಿಳಿಸಿದರು.
ನಗರದ ಡಾಲ್ಫಿನ್‌ ವಿದ್ಯಾಸಂಸ್ಥೆಯಲ್ಲಿ ನರ್ಸರಿ ವಿದ್ಯಾರ್ಥಿಗಳಿಗಾಗಿ ಶನಿವಾರ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳು ಆಟವಾಡುತ್ತಿರುವುದನ್ನು ನೋಡುವುದನ್ನೇ ಈಗ ಮರೆತುಬಿಟ್ಟಿದ್ದೇವೆ. ಮಕ್ಕಳ ಆಟವನ್ನೊಂದು ಬಿಟ್ಟು ಬೇರೆಲ್ಲಾ ನಮಗೆ ಬೇಕಿದೆ, ಟೀವಿ ಧಾರಾವಾಹಿಗಳು, ಕ್ರಿಕೆಟ್ ಪಂದ್ಯ, ಸಿನೆಮಾ ಇತ್ಯಾದಿಗಳೆಲ್ಲವನ್ನೂ ನಾವು ತಪ್ಪದೆ ನೋಡುತ್ತೇವೆ. ಆದರೆ ಮಕ್ಕಳಾಟ, ಮಕ್ಕಳೊಂದಿಗೆ ಮಕ್ಕಳಾಗಿ ಆಡಲು ಸಮಯವಿಲ್ಲದಂತಾಗಿದೆ. ಜಗತ್ತಿನ ಆಗು ಹೋಗುಗಳು, ಅನ್ಯಾಯ ಅಕ್ರಮಗಳು, ಅಸತ್ಯ, ವಂಚನೆ ಇತ್ಯಾದಿ ಏನೂ ಅರಿಯದ ಮುಗ್ಧ ಮನಸ್ಸು ಅವುಗಳದು. ಮಕ್ಕಳೊಂದಿಗೆ ಮಗುವಾದಾಗ ನಮ್ಮ ಮನಸ್ಸುಗಳು ತಿಳಿಯಾಗುತ್ತವೆ ಎಂದು ಹೇಳಿದರು.
ಪುಟ್ಟ ಪುಟ್ಟ ಮಕ್ಕಳು ಒನಕೆ ಓಬವ್ವ, ಸ್ವಾಮಿ ವಿವೇಕಾನಂದ, ಟಿಪ್ಪುಸುಲ್ತಾನ್‌, ಅಕ್ಕಮಹಾದೇವಿ, ನೆಹರು, ಸೈನಿಕ, ಸಂಗೊಳ್ಳಿ ರಾಯಣ್ಣ ಮೊದಲಾದ ವೇಷಗಳನ್ನು ಧರಿಸಿ ತೊದಲು ಮಾತುಗಳಿಂದ ತಮ್ಮ ವೇಷಗಳ ಬಗ್ಗೆ ವಿವರಣೆ ನೀಡಿದರು.
ಈ ಸಂದರ್ಭದಲ್ಲಿ ಮಕ್ಕಳಿಗೆ ಸಿಹಿ ಹಂಚಲಾಯಿತು.

ಟಿಪ್ಪುಸುಲ್ತಾನ್ ಜಯಂತಿ ಮಹೋತ್ಸವ

0

ಕರ್ನಾಟಕವನ್ನು ತಮಿಳುನಾಡಿನ ದಿಂಡಿಗಲ್‍ವರೆಗೂ ಹಾಗು ಕೇರಳದ ಗಡಿಯವರೆಗೂ ದೇಶವನ್ನು ವಿಸ್ತರಿಸಿ ಅನೇಕ ಪಾಳೇಗಾರರು ಆಳುತ್ತಿದ್ದ ಸಣ್ಣ ಸಣ್ಣ ಸಾಮ್ರಾಜ್ಯಗಳನ್ನು ಒಕ್ಕೂಟ ಮಾಡಿ ಅಖಂಡತೆಯನ್ನು ತಂದುಕೊಟ್ಟ ಕೀರ್ತಿ ಟಿಪ್ಪುಸುಲ್ತಾನ್‍ಗೆ ಸಲ್ಲುತ್ತದೆ ಎಂದು ಸೈಯ್ಯದ್ ಯೂಸುಫ್ ಹೇಳಿದರು.
ನಗರದ ತಾಲೂಕು ಕಛೇರಿ ಮುಂಭಾಗದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಟಿಪ್ಪುಸುಲ್ತಾನ್ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದರು.
ವಿವಿಧ ಧರ್ಮಗಳ ರಾಜರು ಭಾರತದಲ್ಲಿ ಆಳ್ವಿಕೆ ಮಾಡಿದ್ದು ಉತ್ತಮವಾಗಿ ಕೆಲಸವನ್ನು ಮಾಡಿದ ಅನೇಕರ ಹೆಸರುಗಳು ಇಂದಿಗೂ ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ. ಅವುಗಳಲ್ಲಿ ಟಿಪ್ಪುಸುಲ್ತಾನ್ ಸಹ ಒಬ್ಬರು ಎಂದರು. ಇನ್ನು ಈ ಭಾಗದ ರೈತರ ಜೀವನಾಡಿಯಾಗಿರುವ ರೇಷ್ಮೆ ಬೆಳೆಯನ್ನು ಪರಿಚಯಿಸಿದ್ದು ಇದೇ ಟಿಪ್ಪುಸುಲ್ತಾನ್ ಹಾಗಾಗಿ ಈ ಭಾಗದ ಜನ ಅವರನ್ನು ಸದಾ ಸ್ಮರಿಸಬೇಕು ಎಂದರು.

ನಗರದ ತಾಲೂಕು ಕಛೇರಿ ಮುಂಭಾಗದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಟಿಪ್ಪುಸುಲ್ತಾನ್ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಸಮುದಾಯದ ಹಿರಿಯ ಮುಖಂಡರನ್ನು ಸನ್ಮಾನಿಸಿ ಗೌರವಿಸಲಾಯಿತು.
ನಗರದ ತಾಲೂಕು ಕಛೇರಿ ಮುಂಭಾಗದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಟಿಪ್ಪುಸುಲ್ತಾನ್ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಸಮುದಾಯದ ಹಿರಿಯ ಮುಖಂಡರನ್ನು ಸನ್ಮಾನಿಸಿ ಗೌರವಿಸಲಾಯಿತು.

ಇಡೀ ಭಾರತವಷ್ಟೇ ಅಲ್ಲದೇ ಇಡೀ ವಿಶ್ವದ ಇತಿಹಾಸದಲ್ಲಿ ದೇಶಕ್ಕೋಸ್ಕರ ತಮ್ಮ ಸ್ವಂತ ಮಕ್ಕಳನ್ನು ಒತ್ತೆಯಿಟ್ಟು ಸಾಯುವ ತನಕ ಹೋರಾಡಿ ಹುತಾತ್ಮರಾದಂತಹ ರಾಜ ಇನ್ನೊಬ್ಬರಿದ್ದರೆ ಯಾರಾದರೂ ಸಾಬಿತುಪಡಿಸಲಿ ಎಂದರು.
ಇಂತಹ ಒಬ್ಬ ರಾಜ ಕೆಲವರಿಗೆ ದೇಶದ್ರೋಹಿಯಾಗಿ ಕಾಣುತ್ತಾನೆ. ದೇಶದ್ರೋಹಿ, ದೇಶಪ್ರೇಮಿ ಎಂಬುದನ್ನು ಕೇವಲ ಒಂದು ಜಾತಿಯನ್ನು ನೋಡಿ ಗುರುತಿಸುವುದಾದರೆ ಬಹುಶಃ ಅದರಂತಹ ದುರಂತ ಇನ್ನೊಂದಿಲ್ಲ. ಎಂದರು.
ಮೊಟ್ಟಮೊದಲು ಯುದ್ಧದಲ್ಲಿ ಕ್ಷಿಪಣಿಯ ಪ್ರಯೋಗಿಸಿದ್ದ ಎಂಬ ಕಾರಣಕ್ಕೆ ಅಮೆರಿಕಾದ ಬಾಹ್ಯಾಕಾಶ ಸಂಸ್ಥೆಯವರು ಟಿಪ್ಪುವಿನ ಭಾವಚಿತ್ರವನ್ನು ಪ್ರದರ್ಶಿಸಿದ್ದಾರೆ. ಆದರೆ ದೇಶಕ್ಕಾಗಿ ಹೋರಾಡಿ ಮಡಿದ ಟಿಪ್ಪು ಸುಲ್ತಾನ್ ಭಾವಚಿತ್ರವೇ ನಮ್ಮಲ್ಲಿಲ್ಲದಿರುವುದು ದೊಡ್ಡ ದುರಂತ ಎಂದ ಅವರು ಎರಡನೇ ವರ್ಷದ ಟಿಪ್ಪುಸುಲ್ತಾನ್ ಜಯಂತಿಯನ್ನು ಸರಕಾರದ ವತಿಯಿಂದ ಆಚರಿಸುತ್ತಿರುವುದಕ್ಕೆ ಅಭಿನಂದನೆ ಸಲ್ಲಿಸಿದರು.
ಶಾಸಕ ಎಂ.ರಾಜಣ್ಣ ಮಾತನಾಡಿ ಪ್ರಜಾಪ್ರಭುತ್ವದ ಹೆಸರಿನಲ್ಲಿ ಸಂವಿಧಾನದ ಅಡಿಯಲ್ಲಿ ಬದುಕುತ್ತಿದ್ದೇವೆ. ಇಲ್ಲಿ ಎಲ್ಲಾ ಸಮುದಾಯಗಳಿಗೂ ಅವರದೇ ಆದ ಜಯಂತಿಗಳನ್ನು ಆಚರಿಸುವ ಹಕ್ಕಿರುವಂತೆ ಟಿಪ್ಪುಸುಲ್ತಾನ್ ಜಯಂತಿಯನ್ನು ಆಚರಿಸಲಾಗುತ್ತಿದೆ.
ಎಲ್ಲಾ ಜಾತಿ ಧರ್ಮಗಳವರು ಶಾಂತಿಯಿಂದ ಜೀವನ ನಡೆಸಬೇಕು ಎಂದ ಅವರು ನಾವೆಲ್ಲರೂ ಸೇರಿ ಸಮಾಜ ಕಟ್ಟುವ ಕೆಲಸಕ್ಕೆ ಮುಂದಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಸಮುದಾಯದ ವಿದ್ಯಾರ್ಥಿಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಜನಾಂಗದ ಮುಖಂಡರನ್ನು ಸನ್ಮಾನಿಸಿ ಗೌರವಿಸಲಾಯಿತು.
ತಹಸೀಲ್ದಾರ್ ಕೆ.ಎಂ.ಮನೋರಮಾ, ತಾ.ಪಂ ಇಓ ವೆಂಕಟೇಶ್, ನಗರಸಭೆ ಅಧ್ಯಕ್ಷ ಅಪ್ಸರ್ ಪಾಷ, ನಗರಸಭಾ ಆಯುಕ್ತ ಹೆಚ್.ಎ.ಹರೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ರಘುನಾಥರೆಡ್ಡಿ, ಆರಕ್ಷಕ ವೃತ್ತ ನಿರೀಕ್ಷಕ ವೆಂಕಟೇಶ್, ನಗರಸಭೆ ಸದಸ್ಯರಾದ ಸಿಕಂದರ್, ಶಫಿ, ಮುಖಂಡರಾದ ಸಾಧಿಕ್, ರೆಹಮತ್ ಉಲ್ಲಾ, ಜೆ.ರೆಹಮಾನ್, ಅಜೀಜ್‍ಸಾಬ್, ಆದಿಲ್‍ಪಾಷ, ಕದಿರಿ ಯೂಸುಫ್, ಸೈಯ್ಯದ್ ಮತ್ತಿತರರು ಹಾಜರಿದ್ದರು.

ರಸ್ತೆ ಡಾಂಬರೀಕರಣ

0

ಕಾಮಗಾರಿಯ ಗುಣಮಟ್ಟದಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗಕೂಡದು ಎಂದು ಶಾಸಕ ಎಂ. ರಾಜಣ್ಣ ಹೇಳಿದರು.
ತಾಲ್ಲೂಕಿನ ಚೀಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಕೆರೆ ಹಾಗು ಹೆಣ್ಣೂರು ಗ್ರಾಮಗಳಲ್ಲಿ ಸುಮಾರು 14.80 ಲಕ್ಷ ರೂಗಳ ವೆಚ್ಚದಲ್ಲಿ ಕೈಗೊಂಡಿರುವ ರಸ್ತೆ ಡಾಂಬರೀಕರಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.
ಅರಕೆರೆ ಗ್ರಾಮದ ಬೈಲಾಂಜನೇಯ ಸ್ವಾಮಿ ದೇವಾಲಯದ ರಸ್ತೆ ಡಾಂಬರೀಕರಣ ಕಾಮಗಾರಿ ಹಾಗು ಹೆಣ್ಣೂರು ಗ್ರಾಮದ ಮೆಟ್ಲಿಂಗ್ ಕಾಮಗಾರಿ ನಡೆಯುವಾಗ ಪಕ್ಷಾತೀತವಾಗಿ ಜನರು ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಿ ಗ್ರಾಮದ ಅಭಿವೃದ್ದಿಗೆ ಸಹಕರಿಸಬೇಕು. ಗ್ರಾಮಗಳಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳಬೇಕು. ಇದರಿಂದ ಗ್ರಾಮ ಸುಂದರವಾಗಿರುವುದರ ಜೊತೆಗೆ ಗ್ರಾಮಸ್ಥರ ಆರೋಗ್ಯವೂ ಸುಧಾರಿಸುತ್ತದೆ ಎಂದು ಹೇಳಿದರು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ. ಲಕ್ಷ್ಮಿನಾರಾಯಣ, ಜಿಲ್ಲಾ ಪಂಚಾಯಿತಿ ಸದಸ್ಯೆ ತನುಜಾ ರಘು, ತಾ.ಪಂ ಸದಸ್ಯ ರಾಜಶೇಖರ್, ಚೀಮಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಳಿನ ಮಂಜುನಾಥ್, ಮುಖಂಡರಾದ ಹೆಚ್. ಕ್ರಾಸ್ ರವಿ, ಚನ್ನರಾಯಪ್ಪ, ಮುನಿಶಾಮಿಗೌಡ, ವೆಂಕಟೇಶಪ್ಪ, ಆರ್. ನಾಗರಾಜು, ಸಿ.ಎಂ. ನಾರಾಯಣಸ್ವಾಮಿ, ಚೌಡಪ್ಪ, ವೆಂಕಟೇಶ್, ಮಂಜುನಾಥ್, ಶ್ರೀನಿವಾಸ್, ಮೋಹನ್ ಹಾಗೂ ಮುಂತಾದವರು ಹಾಜರಿದ್ದರು.

ಕಾನೂನು ಸೇವಾ ಪ್ರಾಧಿಕಾರ ದಿನಾಚರಣೆ

0

ಬಡ ವರ್ಗದ ಜನರಿಗೂ ಕಾನೂನು ಸೇವೆಗಳು ಸಿಗಬೇಕು ಎಂಬ ಉದ್ದೇಶದಿಂದ ಜಾರಿಗೆ ತರಲಾಗಿರುವ ಉಚಿತ ಕಾನೂನು ಸೇವೆ ಕಾಯಿದೆಯಿಂದ ಸಾಮಾಜಿಕ ಬದಲಾವಣೆಗಳಲ್ಲಿ ಕಾನೂನು ಸೇವಾ ಪ್ರಾಧಿಕಾರ ಪ್ರಮುಖ ಪಾತ್ರ ವಹಿಸಿದೆ ಎಂದು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಟಿ.ಎಲ್. ಸಂದೀಶ್ ಹೇಳಿದರು.
ನಗರದ ನ್ಯಾಯಾಲಯ ಸಂಕೀರ್ಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಹಾಗು ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಕಾನೂನು ಸೇವಾ ಪ್ರಾಧಿಕಾರ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಆರ್ಥಿಕವಾಗಿ ಹಿಂದುಳಿದ ಬಡವರಿಗೆ ಕಾನೂನು ಸೇವೆಗಳನ್ನು ಒದಗಿಸಲು ಉಚಿತವಾಗಿ ವಕೀಲರನ್ನು ನೇಮಿಸಿಕೊಡಲಾಗುವುದು ಹಾಗು ಬಹುತೇಕ ಪ್ರಕರಣಗಳನ್ನು ಮಧ್ಯಸ್ಥಿಕೆ ಕೇಂದ್ರಗಳ ಮೂಲಕ ರಾಜಿ ಮಾಡಿಸುವ ಕೆಲಸವನ್ನು ಕಾನೂನು ಸೇವಾ ಪ್ರಾಧಿಕಾರ ಮಾಡುತ್ತಾ ಬಂದಿದೆ.
ಇನ್ನು ಗ್ರಾಮೀಣ ಪ್ರದೇಶಗಳಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಕಾನೂನು ಅರಿವು ನೆರವು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಗ್ರಾಮೀಣ ಪ್ರದೇಶದ ಜನತೆಗೆ ಕಾನೂನಿನ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದ್ದೇವೆ ಹಾಗಾಗಿ ನಾಗರೀಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ತಾಲೂಕು ವಕೀಲರ ಸಂಘದ ಅಧ್ಯಕ್ಷ ಎಂ. ಪಾಪಿರೆಡ್ಡಿ, ಸಹಾಯಕ ಸರ್ಕಾರಿ ಅಭಿಯೋಜಕರಾದ ಎಸ್. ಕುಮುದಿನಿ, ವಕೀಲರಾದ ಜಿ.ಎನ್. ವಿಶ್ವನಾಥಪ್ಪ, ಸುಬ್ರಮಣ್ಯಪ್ಪ, ತಾಲೂಕು ವಕೀಲರ ಸಂಘದ ಕಾರ್ಯದರ್ಶಿ ವಿ.ಎಂ. ಬೈರಾರೆಡ್ಡಿ, ಯಣ್ಣಂಗೂರು ಮಂಜುನಾಥ್, ಎಂ.ಬಿ. ಲೋಕೇಶ್, ವೀಣಾ, ಲಕ್ಷ್ಮಿ, ಮತ್ತಿತರರು ಹಾಜರಿದ್ದರು.

ಟಿಪ್ಪುಜಯಂತಿ ಅಂಗವಾಗಿ ಪೊಲೀಸ್ ಪಥಸಂಚಲನ

0

ನಗರದ ಆರಕ್ಷಕ ವೃತ್ತ ಸೇರಿದಂತೆ ನಗರ, ಗ್ರಾಮಾಂತರ ಹಾಗು ದಿಬ್ಬೂರಹಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿಗಳಿಂದ ಸಾರ್ವಜನಿಕರ ರಕ್ಷಣೆ ಸೇರಿದಂತೆ ಟಿಪ್ಪುಜಯಂತಿಯಂದು ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯುವ ಸಲುವಾಗಿ ಮಂಗಳವಾರ ಬೆಳಗ್ಗೆ ಪಥಸಂಚಲನ ಆಯೋಜಿಸಲಾಗಿತ್ತು.
ನಗರದ ನಾಗರೀಕರಲ್ಲಿ ಭಯಮುಕ್ತ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ನಡೆಸಿದ ಪಥಸಂಚಲನ ನಗರದ ಕೋರ್ಟ್ ಆವರಣದಿಂದ ಹೊರಟು ದಿಬ್ಬೂರಹಳ್ಳಿ ರಸ್ತೆ ಸೇರಿದಂತೆ ಪ್ರವಾಸಿಮಂದಿರ ರಸ್ತೆ ಹಾಗು ಅಶೋಕರಸ್ತೆಯಲ್ಲಿ ಸಂಚರಿಸಿ ನಾಗರೀಕರು ಯಾವುದೇ ಊಹಾಪೋಹ ಗಳು ಹಾಘು ವದಂತಿಗಳಿಗೆ ಕಿವಿಗೊಡಬಾರದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಅಗತ್ಯ ಪೊಲೀಸ್ ಸಿಬ್ಬಂದಿ ಹಾಗು ಕೆಎಸ್‍ಆರ್‍ಪಿ ತುಕಡಿ ಲಭ್ಯವಿರುವುದನ್ನು ಪ್ರದರ್ಶಿಸಿದರು.
ಇದೇ ನ 10 ರಂದು ನಗರದಲ್ಲಿ ನಡೆಯಲಿರುವ ಟಿಪ್ಪುಜಯಂತಿ ಆಚರಣೆಯ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಪೊಲೀಸ್ ಸಿಬ್ಬಂದಿ ಸೂಕ್ತ ಕ್ರಮ ಕೈಗೊಂಡಿದ್ದು ಹೆಚ್ಚಿನ ಭದ್ರತೆಗಾಗಿ ಹೆಚ್ಚುವರಿಯಾಗಿ ಎರಡು ಕೆಎಸ್‍ಆರ್‍ಪಿ ತುಕಡಿಗಳು ನಗರದಲ್ಲಿಯೇ ಇರುತ್ತದೆ ಎಂದು ಆರಕ್ಷಕ ವೃತ್ತ ನಿರೀಕ್ಷಕ ವೆಂಕಟೇಶ್ ತಿಳಿಸಿದ್ದಾರೆ.
ಪಥಸಂಚಲನದಲ್ಲಿ ನಗರಠಾಣೆ ಪಿಎಸ್ಸೈ ನವೀನ್, ಗ್ರಾಮಾಂತರ ಠಾಣೆಯ ಪಿಎಸ್ಸೈ ಪ್ರದೀಪ್‍ಪೂಜಾರಿ, ದಿಬ್ಬೂರಹಳ್ಳಿ ಠಾಣೆ ಪಿಎಸ್ಸೈ ವಿಜಯ್ ಹಾಗು ಸಿಬ್ಬಂದಿ ಪಾಲ್ಗೊಂಡಿದ್ದರು.

ಮಲತಾಯಿ ಧೊರಣೆ

0

ಬಯಲುಸೀಮೆ ಭಾಗದ ರೈತರ ಸಮಸ್ಯೆಗಳ ಬಗ್ಗೆ ಕೇಂದ್ರ ಹಾಗು ರಾಜ್ಯ ಸರ್ಕಾರಗಳೆರಡೂ ತಾರತಮ್ಯ ನೀತಿ ಅನುಸರಿಸುತ್ತಿದೆ. ಈ ಭಾಗದÀ ರೈತರನ್ನು ಮಲತಾಯಿ ಮಕ್ಕಳಂತೆ ನೋಡುತ್ತಿರುವ ರಾಜ್ಯ ಹಾಗು ಕೇಂದ್ರ ಸರ್ಕಾರ ತಮ್ಮ ವರ್ತನೆಯನ್ನು ತಿದ್ದಿಕೊಳ್ಳಬೇಕು ಎಂದು ರಾಜ್ಯ ರೈತ ಸಂಘ ಹಾಗು ಹಸಿರುಸೇನೆ ಜಿಲ್ಲಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ ಹೇಳಿದರು.
ತಾಲೂಕಿನ ಗ್ರಾಮೀಣ ಪ್ರದೇಶÀ ಹಾಗು ರೈತರಿಗೆ ಸಮರ್ಪಕ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರುಸೇನೆ ತಾಲೂಕು ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಬೆಸ್ಕಾಂ ಕಛೇರಿ ಮುತ್ತಿಗೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಕಳೆದ ಏಳು ವರ್ಷಗಳಿಂದ ಸತತ ಬರಗಾಲ ಅನುಭವಿಸುತ್ತಿರುವ ಜಿಲ್ಲೆಯ ರೈತ ಕೊಳವೆಬಾವಿಗಳಿಂದ ತೆಗೆದ ನೀರಿನಿಂದ ಬೆಳೆದ ಬೆಳೆಗಳು ವಿದ್ಯುತ್ ಸಮಸ್ಯೆಯಿಂದ ಸಂಪೂರ್ಣ ಒಣಗಿಹೋಗಿ ಹಾಳಾಗಿರುವುದರಿಂದ ರೈತ ಬೀದಿಗೆ ಬರುವ ಸ್ಥಿತಿ ನಿರ್ಮಾಣವಾಗಿದೆ.
ಇನ್ನು ಮಾನ್ಯ ಇಂಧನ ಸಚಿವರು ಕೃಷಿ ಪಂಪ್ ಸೆಟ್ಟುಗಳಿಗೆ ಯಾವುದೇ ಕಾರಣಕ್ಕೂ ಹಗಲಿನಲ್ಲಿ ವಿದ್ಯುತ್ ನೀಡುವುದಿಲ್ಲ ರಾತ್ರಿ ಹತ್ತು ಗಂಟೆಯ ನಂತರ ಕೃಷಿಗೆ ವಿದ್ಯುತ್ ನೀಡುವುದಾಗಿ ಹೇಳಿರುವ ಹೇಳಿಕೆ ಕೂಡಲೇ ವಾಪಸ್ ಪಡೆಯಬೇಕು ಇಲ್ಲವಾದಲ್ಲಿ ರಾಜ್ಯಾಧ್ಯಂತ ರೈತರು ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದರು.

ತಾಲೂಕಿನ ಗ್ರಾಮೀಣ ಪ್ರದೇಶÀ ಹಾಗು ರೈತರಿಗೆ ಸಮರ್ಪಕ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರುಸೇನೆ ತಾಲೂಕು ಘಟಕದ ಪದಾಧಿಕಾರಿಗಳು ಹಮ್ಮಿಕೊಂಡಿದ್ದ ಬೆಸ್ಕಾಂ ಕಛೇರಿ ಮುತ್ತಿಗೆ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ ಮಾತನಾಡಿದರು.
ತಾಲೂಕಿನ ಗ್ರಾಮೀಣ ಪ್ರದೇಶÀ ಹಾಗು ರೈತರಿಗೆ ಸಮರ್ಪಕ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರುಸೇನೆ ತಾಲೂಕು ಘಟಕದ ಪದಾಧಿಕಾರಿಗಳು ಹಮ್ಮಿಕೊಂಡಿದ್ದ ಬೆಸ್ಕಾಂ ಕಛೇರಿ ಮುತ್ತಿಗೆ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ ಮಾತನಾಡಿದರು.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನವೊಂದಕ್ಕೆ 3-4 ತಾಸು ವಿದ್ಯುತ್ ಕಡಿತಗೊಳಿಸದರೆ ಬಯಲುಸೀಮೆ ಭಾಗದ ರೈತರಿಗೆ ಬೇಕಾಗುವಷ್ಟು ವಿದ್ಯುತ್ ಪೂರೈಸಬಹುದು ಆದರೆ ಸರ್ಕಾರ ಈ ಬಗ್ಗೆ ಚಿಂತನೆ ನಡೆಸುವುದನ್ನು ಬಿಟ್ಟು ದೇಶದ ಬೆನ್ನೆಲುಬಾಗಿರುವ ರೈತನಿಗೆ ನೀಡುವ ವಿದ್ಯುತ್ ಕಡಿತಗೊಳಿಸಿ ರೈತನ ಬೆನ್ನು ಮೂಳೆ ಮುರಿಯುವ ಕೆಲಸಕ್ಕೆ ಮುಂದಾಗಿದೆ ಎಂದರು.
ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಎಸ್.ಎಂ. ನಾರಾಯಣಸ್ವಾಮಿ ಮಾತನಾಡಿ ಈ ಭಾಗದ ರೈತರು ಬದುಕಲು ಕೊಳವೆಬಾವಿಗಳನ್ನೇ ಅವಲಂಬಿಸಿ ಬದುಕು ನಡೆಸುವ ಮೂಲಕ ಕೊಳವೆ ಬಾವಿಯಲ್ಲಿ ಬರುವ ಅಲ್ಪ ಸ್ವಲ್ಪ ನೀರಿನಿಂದಲೇ ಇಡೀ ದೇಶಕ್ಕೆ ಹಾಲು, ತರಕಾರಿ, ಹಣ್ಣು ಸೇರಿದಂತೆ ರೇಷ್ಮೆ ಬೆಳೆದು ನೀಡುತ್ತಿದ್ದರೂ ಬೆಸ್ಕಾಂ ಇಲಾಖೆ ನೀಡುತ್ತಿರುವ ವಿದ್ಯುತ್ ಕಣ್ಣಾ ಮುಚ್ಚಾಲೆಯಿಂದ ಬೆಳೆದ ಎಲ್ಲಾ ಬೆಳೆಗಳು ನಾಶವಾಗುತ್ತಿರುವುದಷ್ಟೇ ಅಲ್ಲದೇ ಲಕ್ಷಾಂತರ ರೂ ವೆಚ್ಚ ಮಾಡಿ ಕೊರೆಸಿರುವ ಕೊಳವೆಬಾವಿಯ ಮೋಟರ್ ಪಂಪುಗಳು ಸುಟ್ಟು ಹೋಗುವುದರಿಂದ ರೈತ ಇನ್ನಷ್ಟು ಆರ್ಥಿಕವಾಗಿ ಕುಸಿಯುತ್ತಿದ್ದಾನೆ ಎಂದರು.
ರೈತರಿಗೆ ಹಗಲಿನಲ್ಲಿ ಕನಿಷ್ಟ 10 ಗಂಟೆಗಳ ಕಾಲ ತ್ರಿಫೇಸ್ ವಿದ್ಯುತ್ ಹಾಗು ಸಂಜೆ 06 ರಿಂದ ಬೆಳಗ್ಗೆ 06 ರವರೆಗೂ ಸಿಂಗಲ್ ಫೇಸ್ ವಿದ್ಯುತ್ ನೀಡಬೇಕು. ರೇಷ್ಮೆ ನೂಲು ಬಿಚ್ಚುವ ಘಟಕಗಳು ಸೇರಿದಂತೆ ರೇಷ್ಮೆ ಹುರಿ ಮಾಡುವ ಘಟಕಗಳಿಗೆ ಅನುಕೂಲವಾಗುವಂತೆ ನಗರದಲ್ಲಿ ನಿರಂತರ ವಿದ್ಯುತ್ ಸರಬರಾಜು ಮಾಡಬೇಕು. ರೈತರ ವಿದ್ಯುತ್ ಪರಿವರ್ತಕಗಳು ಸುಟ್ಟುಹೋದ 24 ಗಂÀಟೆಗಳೊಳಗೆ ದುರಸ್ತಿ ಮಾಡಿಸುವುದು ತಪ್ಪಿದಲ್ಲಿ ರೈತನಿಗಾಗುವ ನಷ್ಟ ಭರಿಸಬೇಕು ಎಂದು ಒತ್ತಾಯಿಸಿದರು.
ಬೆಸ್ಕಾಂ ಇಲಾಖೆಯ ಗ್ರಾಮಾಂತರ ಎಇಇ ಅನ್ವರ್‍ಪಾಷ ಹಾಗು ಚಿಂತಾಮಣಿ ಇಇ ದತ್ತಾತ್ರೇಯ ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಲೆತ್ನಿಸಿದರಾದರೂ ಸಮಾಧಾನಗೊಳ್ಳದ ಪ್ರತಿಭಟನಾಕಾರರು ಮೇಲಾಧಿಕಾರಿಗಳು ಸ್ಥಳಕ್ಕೆ ಬರಬೇಕು ಎಂದು ಪಟ್ಟುಹಿಡಿದರು.
ನಂತರ ಸ್ಥಳಕ್ಕೆ ಕೋಲಾರ ವಿಭಾಗದ ಅಧೀಕ್ಷಕ ಅಭಿಯಂತರ ಪ್ರಸನ್ನ ಭೇಟಿ ನೀಡಿ ಪ್ರತಿಭಟನಾಕಾರರ ಬೇಡಿಕೆಗಳನ್ನು ಆಲಿಸಿ ಕೂಡಲೇ ಈ ಬಗ್ಗೆ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಮಾಹಿತಿ ನೀಡುವುದರೊಂದಿಗೆ ಈ ಭಾಗದ ರೈತರಿಗೆ ಸಕಾರಾತ್ಮಕವಾಗಿ ವಿದ್ಯುತ್ ಪೂರೈಸಲು ಬೇಕಾದ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರುಸೇನೆ ತಾಲೂಕು ಘಟಕದ ಪದಾಧಿಕಾರಿಗಳು ಹಮ್ಮಿಕೊಂಡಿದ್ದ ಬೆಸ್ಕಾಂ ಕಛೆರಿ ಮುತ್ತಿಗೆ ಕಾರ್ಯಕ್ರಮದಲ್ಲಿ ಕಛೇರಿಯ ಆವರಣದಲ್ಲಿ ಅಡುಗೆ ತಯಾರಿಸುತ್ತಿರುವ ರೈತ ಮುಖಂಡರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರುಸೇನೆ ತಾಲೂಕು ಘಟಕದ ಪದಾಧಿಕಾರಿಗಳು ಹಮ್ಮಿಕೊಂಡಿದ್ದ ಬೆಸ್ಕಾಂ ಕಛೆರಿ ಮುತ್ತಿಗೆ ಕಾರ್ಯಕ್ರಮದಲ್ಲಿ ಕಛೇರಿಯ ಆವರಣದಲ್ಲಿ ಅಡುಗೆ ತಯಾರಿಸುತ್ತಿರುವ ರೈತ ಮುಖಂಡರು.

ತಾಲೂಕು ಅಧ್ಯಕ್ಷ ತಾದೂರು ಮಂಜುನಾಥ್, ಗೌರವಾಧ್ಯಕ್ಷ ಎಸ್.ಎಂ. ನಾರಾಯಣಸ್ವಾಮಿ, ರಾಮಕೃಷ್ಣಪ್ಪ, ವೇಣು, ರಾಮಚಂದ್ರಪ್ಪ, ನಗರ ಘಟಕದ ಅಧ್ಯಕ್ಷ ಬಿ. ನಾರಾಯಣಸ್ವಾಮಿ, ಅಬ್ಲೂಡು ದೇವರಾಜ್, ಅಶ್ವತ್ಥಪ್ಪ, ದ್ಯಾವಪ್ಪ, ಅಂಬರೀಷ, ಶ್ರೀರಾಮಯ್ಯ ಮತ್ತಿತರರು ಹಾಜರಿದ್ದರು.
ನಗರದ ಬಸ್ ನಿಲ್ದಾಣದಿಂದ ಮೆರವಣಿಗೆ ಮೂಲಕ ಸಾಗಿದ ನೂರಾರು ರೈತರು ಬೆಸ್ಕಾಂ ಕಛೇರಿಯ ಮುಂಭಾಗ ಜಮಾಯಿಸಿ ಈ ಭಾಗದ ರೈತರ ಸಮಸ್ಯೆ ಪರಿಹಾರ ಒದಗಿಸಬಲ್ಲ ಮೇಲಾಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತರು.
ಕಛೇರಿಯ ಮುಂಭಾಗದಲ್ಲಿಯೇ ಬೆಂಕಿ ಹಾಕಿ ಅಡುಗೆ ತಯಾರಿಸಿ ಬೆಸ್ಕಾಂ ಕಛೇರಿ ಆವರಣದಲ್ಲಿ ಕುಳಿತು (ಅನ್ನ&ಗೊಜ್ಜು) ಊಟವನ್ನು ಸವಿದರು.

ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಅರ್ಜಿ ಆಹ್ವಾನ

0

ತಾಲೂಕಿನ ಕಿತ್ತೂರು ರಾಣಿ ಚೆನ್ನಮ್ಮ ಹಾಗು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 2017-18 ನೇ ಸಾಲಿನ 6 ನೇ ತರಗತಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ ವರ್ಷ 5 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು ತಾಲೂಕಿನ ಕೊಂಡಪ್ಪಗಾರಹಳ್ಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ನಿಲಯ ಹಾಗು 11 ನೇ ಮೈಲಿಯ ಮೊರಾರ್ಜಿ ದೇಸಾಯಿ ವಸತಿ ನಿಲಯ ಸೇರಿದಂತೆ ತಾಲೂಕು ಸಮಾಜ ಕಲ್ಯಾಣ ಇಲಾಖೆ ಹಾಗು ಹಿಂದುಳಿದ ವರ್ಗಗಳ ಇಲಾಖೆಯ ಕಛೇರಿಗಳಲ್ಲಿ ಅರ್ಜಿ ವಿತರಿಸಲಾಗುತ್ತಿದೆ.
ಅರ್ಜಿ ಪಡೆದ ವಿದ್ಯಾರ್ಥಿಗಳು ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಲು ಡಿ 15 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ವಿವರಗಳಿಗೆ ವಸತಿ ನಿಲಯದ ಪ್ರಾಂಶುಪಾಲರಾದ ವಿಜಯಶ್ರೀ 9986890290, ಕುಬ್ರಾಮುಬೀನಾ 7760858959 ಸಂಪರ್ಕಿಸಿ.

ಅವಿರೋಧವಾಗಿ ಆಯ್ಕೆ

0

ಶಿಡ್ಲಘಟ್ಟ ಟೌನ್ ರೇಷ್ಮೆ ಬೆಳೆಗಾರರ ಹಾಗು ರೈತರ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಬಿ. ನಾರಾಯಣಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಗರದ ಅಶೋಕ ರಸ್ತೆಯಲ್ಲಿರುವ ಶಿಡ್ಲಘಟ್ಟ ಟೌನ್ ರೇಷ್ಮೆ ಬೆಳೆಗಾರರ ಹಾಗು ರೈತರ ಸೇವಾ ಸಹಕಾರ ಸಂಘದ ಕಛೇರಿಯಲ್ಲಿ ಸೋಮವಾರ ನಡೆದ ಅಧ್ಯಕ್ಷ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿ. ನಾರಾಯಣಸ್ವಾಮಿ ಹಾಗು ಎ. ನಾಗರಾಜ್ ನಾಮಪತ್ರ ಸಲ್ಲಿಸಿದ್ದರಾದರೂ ಅಂತಿಮ ಕ್ಷಣದಲ್ಲಿ ಎ. ನಾಗರಾಜ್ ತಮ್ಮ ನಾಮಪತ್ರ ಹಿಂಪಡೆದಿದ್ದರಿಂದ ಬಿ. ನಾರಾಯಣಸ್ವಾಮಿಯನ್ನು ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಆಡಳಿತ ಮಂಡಳಿಯ ಎಲ್ಲಾ ಸದಸ್ಯರು ಹಾಜರಿದ್ದರು.

ಟಿಪ್ಪುಜಯಂತಿ

0

ಟಿಪ್ಪು ಜಯಂತಿ ಆಚರಣೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಗಟ್ಟಲು ಸಮುದಾಯದ ಮುಖಂಡರು ಹಾಗು ಯುವಕರು ಸಹಕರಿಸಬೇಕು ಎಂದು ಆರಕ್ಷಕ ವೃತ್ತ ನಿರೀಕ್ಷಕ ವೆಂಕಟೇಶ್ ಹೇಳಿದರು.
ನಗರದ ಆರಕ್ಷಕ ವೃತ್ತ ನಿರೀಕ್ಷಕರ ಕಛೇರಿಯಲ್ಲಿ ಟಿಪ್ಪುಜಯಂತಿ ಅಂಗವಾಗಿ ಸೋಮವಾರ ಆಯೋಜಿಸಲಾಗಿದ್ದ ಶಾಂತಿಸಭೆಯಲ್ಲಿ ಅವರು ಮಾತನಾಡಿದರು.
ಇದೇ ನ 10 ರಂದು ಆಚರಿಸಲಿರುವ ಟಿಪ್ಪುಜಯಂತಿಯಂದು ಯಾವುದೇ ಮೆರವಣಿಗೆ ನಡೆಸುವಂತಿಲ್ಲ. ಬದಲಿಗೆ ತಾಲೂಕು ಆಡಳಿತದ ವತಿಯಿಂದ ಆಯೋಜಿಸಲಾಗುವ ವೇದಿಕೆ ಕಾರ್ಯಕ್ರಮದಲ್ಲಿ ಸಮುದಾಯದವರು ಪಾಲ್ಗೊಂಡು ಶಾಂತಿಯುತವಾಗಿ ಆಚರಿಸಲು ಸಹಕರಿಸಬೇಕು ಎಂದರು.
ಸಮುದಾಯದ ಕೆಲ ಮುಖಂಡರು ಮಾತನಾಡಿ ಸರ್ಕಾರ ಯಾವ ರೀತಿ ಜಯಂತಿ ಆಚರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದೆಯೋ ಹಾಗೆಯೇ ನಡೆಸಲಿ ನಮಗೆ ಯಾವುದೇ ಅಡಿಯಿಲ್ಲ ಬದಲಿಗೆ ನಾವೆಲ್ಲರೂ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಹಕರಿಸುವುದಾಗಿ ಸಮ್ಮತಿ ಸೂಚಿಸಿದರು.
ನಗರ ಠಾಣೆ ಪಿಎಸ್ಸೈ ನವೀನ್, ಗ್ರಾಮಾಂತರ ಠಾಣೆಯ ಪಿಎಸ್ಸೈ ಪ್ರದೀಪ್ ಪೂಜಾರಿ, ದಿಬ್ಬೂರಹಳ್ಳಿ ಠಾಣೆಯ ಪಿಎಸ್ಸೈ ವಿಜಯ್, ಸೇರಿದಂತೆ ಸಮುದಾಯದ ಮುಖಂಡರು ಹಾಜರಿದ್ದರು.

ಗ್ರಾಮೀಣ ಪ್ರದೇಶದಲ್ಲಿ ಮಾತ್ರ ಕನ್ನಡ ಭಾಷೆ

0

ರಾಜ್ಯದಲ್ಲಿ ಕನ್ನಡ ಭಾಷೆ ಇನ್ನೂ ಉಳಿದಿದೆಯೆಂದರೆ ಅದು ಕೇವಲ ಗ್ರಾಮೀಣ ಪ್ರದೇಶಗಳಿಂದ ಮಾತ್ರ ಎಂದು ತಾಲೂಕು ಕಸಾಪ ಅಧ್ಯಕ್ಷ ಬಿ.ಆರ್. ಅನಂತಕೃಷ್ಣ ಹೇಳಿದರು.
ತಾಲೂಕಿನ ಹರಳಹಳ್ಳಿ ಗ್ರಾಮದಲ್ಲಿ ಶನಿವಾರ ಗ್ರಾಮದ ಜೈ ಭುವನೇಶ್ವರಿ ಕನ್ನಡ ಕಲಾ ಸಂಘದ ವತಿಯಿಂದ ಆಯೋಜಿಸಲಾಗಿದ್ದ 3 ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕನ್ನಡ ನಾಡು, ನುಡಿಯ ರಕ್ಷಣೆ ಹಾಗೂ ಗಡಿಭಾಗಗಳ ರಕ್ಷಣೆ ಪ್ರತಿಯೊಬ್ಬ ಯುವಕರ ಆದ್ಯ ಕರ್ತವ್ಯ ಎಂದ ಅವರು ರಾಜ್ಯದ ಗಡಿ, ನೆಲ, ಜಲ, ಭಾಷೆ, ಸಂಸ್ಕøತಿ, ಪರಂಪರೆಯನ್ನು ಉಳಿಸಿಬೆಳೆಸುವಂತಹ ಹೊಣೆಗಾರಿಕೆ ಪ್ರತಿಯೊಬ್ಬ ನಾಗರೀಕರ ಮೇಲಿದೆ. ಅದರಲ್ಲೂ ವಿಶೇಷವಾಗಿ ಯುವಜನತೆ ನಾಡಿನ ಬಗ್ಗೆ ಹೆಚ್ಚು ಕಾಳಜಿ ವಹಿಸಿ ಕೆಲಸ ಮಾಡಬೇಕಾಗಿದೆ ಎಂದರು.
ಇಂದು ಬದಲಾಗುತ್ತಿರುವ ಜನರ ಜೀವನಶೈಲಿಯಿಂದಾಗಿ ನಗರ ಪ್ರದೇಶಗಳಲ್ಲಿ ಕನ್ನಡ ಭಾಷೆಯನ್ನು ಹುಡುಕಾಡಬೇಕಾದಂತಹ ದುಸ್ಥಿತಿ ಒದಗಿ ಬಂದಿದೆ. ಕನ್ನಡ ಭಾಷೆಯ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸುವ ಮೂಲಕ ರಾಜ್ಯದಲ್ಲಿನ ಎಲ್ಲಾ ಸರ್ಕಾರಿ ಆದೇಶಗಳನ್ನು ಕನ್ನಡ ಭಾಷೆಯಲ್ಲಿಯೆ ಹೊರಡಿಸಬೇಕು ಎಂದರು.
ತಾಲೂಕು ಕಸಾಪ ಕಾರ್ಯದರ್ಶಿ ಎ.ಎಂ. ತ್ಯಾಗರಾಜ್, ಗ್ರಾಮದ ರಾಮೇಗೌಡ, ಸೊಣ್ಣೇಗೌಡ, ಕೃಷ್ಣಪ್ಪ, ಕೆ.ವಿ. ನಾರಾಯಣಸ್ವಾಮಿ, ನಂದೀಶ್, ಮಹೇಶ್, ಶ್ರೀನಿವಾಸ್, ಶ್ರೀನಾಥ್, ಚನ್ನಪ್ಪ ಮತ್ತಿತರರು ಹಾಜರಿದ್ದರು.

ಸ್ವಯಂ ಪ್ರೇರಿತ ರಕ್ತದಾನದ ಮೂಲಕ ಪ್ರಾಣ ರಕ್ಷಣೆ

0

ಸ್ವಯಂ ಪ್ರೇರಿತ ರಕ್ತದಾನದ ಮೂಲಕ ಸಂಗ್ರಹಿಸುವಂತಹ ರಕ್ತವನ್ನು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರ ಪ್ರಾಣ ರಕ್ಷಣೆಗಾಗಿ ಉಪಯೋಗ ಮಾಡಲಾಗುತ್ತದೆ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಎನ್.ಕೆ. ಗುರುರಾಜರಾವ್ ಹೇಳಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಭಾನುವಾರ ಟಿಪ್ಪು ಸೆಕ್ಯುಲರ್ ಸೇನೆ, ಎಸ್.ಎನ್. ಕ್ರಿಯಾ ಟ್ರಸ್ಟ್ ಹಾಗು ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ಟಿಪ್ಪು ಜಯಂತಿ ಪ್ರಯುಕ್ತ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.
ರಕ್ತದಾನದ ಜೊತೆಗೆ ಇತ್ತಿಚೆಗೆ ದೇಹದ ಅಂಗಾಂಗ ದಾನ ಮಾಡುವಲ್ಲಿ ಹೆಚ್ಚು ಪ್ರಖ್ಯಾತಿಯನ್ನು ಗಳಿಸುತ್ತಿರುವ ದೇಶದಲ್ಲಿ ಜನತೆ ಮಾನವೀಯತೆಯನ್ನು ಮೆರೆಯುತ್ತಿರುವುದು ಶ್ಲಾಘನೀಯ ಎಂದ ಅವರು ರಕ್ತದಾನದಂತಹ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಜನತೆ ಪಾಲ್ಗೊಳ್ಳುವುದರೊಂದಿಗೆ ರಕ್ತದಾನದಿಂದ ಆಗುವಂತಹ ಉಪಯೋಗಗಳ ಬಗ್ಗೆ ತಿಳಿದು ಇನ್ನೊಬ್ಬರಿಗೆ ಮನವರಿಕೆ ಮಾಡಿಕೊಡುವಂತಹ ಕೆಲಸ ಮಾಡಬೇಕು ಎಂದರು. ತಾಲೂಕಿನಾಧ್ಯಂತ ಉಚಿತ ರಕ್ತದಾನ ಶಿಬಿರಗಳನ್ನು ಏರ್ಪಡಿಸಿ ಈಗಾಗಲೇ ಸುಮಾರು ಸಾವಿರಾರು ಯೂನಿಟ್ ರಕ್ತ ಸಂಗ್ರಹಿಸಿರುವ ಕೀರ್ತಿಗೆ ಪಾತ್ರವಾಗಿದೆ.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಭಾನುವಾರ ಟಿಪ್ಪು ಸೆಕ್ಯುಲರ್ ಸೇನೆ, ಎಸ್.ಎನ್.ಕ್ರಿಯಾ ಟ್ರಸ್ಟ್ ಹಾಗು ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ಟಿಪ್ಪು ಜಯಂತಿ ಪ್ರಯುಕ್ತ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ಭಾಘವಹಿಸಿದ ರಕ್ತದಾನಿಗಳಿಗೆ ಎಸ್.ಎನ್.ಕ್ರಿಯಾ ಟ್ರಸ್ಟ್ ಅಧ್ಯಕ್ಷ ಆಂಜಿನಪ್ಪ ಪ್ರಶಂಸನಾ ಪತ್ರ ವಿತರಿಸಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಭಾನುವಾರ ಟಿಪ್ಪು ಸೆಕ್ಯುಲರ್ ಸೇನೆ, ಎಸ್.ಎನ್.ಕ್ರಿಯಾ ಟ್ರಸ್ಟ್ ಹಾಗು ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ಟಿಪ್ಪು ಜಯಂತಿ ಪ್ರಯುಕ್ತ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ಭಾಘವಹಿಸಿದ ರಕ್ತದಾನಿಗಳಿಗೆ ಎಸ್.ಎನ್.ಕ್ರಿಯಾ ಟ್ರಸ್ಟ್ ಅಧ್ಯಕ್ಷ ಆಂಜಿನಪ್ಪ ಪ್ರಶಂಸನಾ ಪತ್ರ ವಿತರಿಸಿದರು.

ಎಸ್.ಎನ್.ಕ್ರಿಯಾ ಟ್ರಸ್ಟ್ ಅಧ್ಯಕ್ಷ ಆಂಜಿನಪ್ಪ ಮಾತನಾಡಿ ಯುವಜನತೆ ರಕ್ತದಾನ ಮಾಡುವುದರಿಂದ ಯಾವುದೇ ತೊಂದರೆಯಾಗುವುದಿಲ್ಲ ಬದಲಿಗೆ ದೇಹದಲ್ಲಿ ಹೊಸರಕ್ತ ಕಣಗಳು ಉತ್ಪತ್ತಿಯಾಗುವುದರಿಂದ ಆರೋಗ್ಯ ಇನ್ನಷ್ಟು ಸುಧಾರಿಸುತ್ತದೆ ಎಂದರು.
ಅಪಘಾತಗಳು ಸಂಭವಿಸಿದಾಗ ರಕ್ತಸ್ರಾವ ಹೆಚ್ಚಾಗಿ ಅಪಘಾತಕ್ಕೀಡಾದವರು ಮೃತ ಪಡುವುದು ಸೇರಿದಂತೆ ಹೆರಿಗೆ ಹಾಗು ಶಸ್ತ್ರಚಿಕಿತ್ಸೆ ಸಮಯದಲ್ಲಿ ರಕ್ತದ ಅಗತ್ಯತೆ ಹೆಚ್ಚಾಗಿರುತ್ತದೆ. ಹಾಗಾಗಿ 18 ವರ್ಷಕ್ಕೂ ಮೇಲ್ಪಟ್ಟ ಎಲ್ಲರೂ ರಕ್ತದಾನ ಮಾಡುವುದರಿಂದ ಬಹಳಷ್ಟು ಜೀವಗಳನ್ನು ಉಳಿಸಲು ಸಹಕಾರಿಯಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಟಿಪ್ಪು ಸೆಕ್ಯುಲರ್ ಸೇನೆಯ ತಾಲೂಕು ಅಧ್ಯಕ್ಷ ಎಂ. ಮೌಲಾ, ಅಫ್ಜಲ್ ಪಾಷ, ಅಜೀಜ್ ಸಾಬ್, ಮುಜೀಬ್ ಸಾಬ್, ಮೈದಿನ್ ಸಾಬ್, ಜಭೀವುಲ್ಲಾ ಮತ್ತಿತರರು ಹಾಜರಿದ್ದರು.

ಸವಲತ್ತುಗಳಿಲ್ಲವಾದರೂ ಕ್ರೀಡೆಯಲ್ಲಿ ಕಿರೀಟ

0

ತಾಲೂಕಿನಲ್ಲಿ ಕ್ರೀಡಾಪಟುಗಳಿಗೆ ಬೇಕಾದಂತಹ ಯಾವುದೇ ಸವಲತ್ತುಗಳಿಲ್ಲವಾದರೂ ಬಹಳಷ್ಟು ಕ್ರೀಡಾಪಟುಗಳು ಜಿಲ್ಲೆ, ರಾಜ್ಯ ಹಾಗು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳುವ ಮೂಲಕ ತಾಲೂಕಿಗೆ ಕೀರ್ತಿ ತಂದಿರುವುದು ಸಂತಸದ ವಿಷಯ ಎಂದು ರಾಷ್ಟ್ರೀಯ ಅಥ್ಲೆಟಿಕ್ ಪಟು ನಾರಾಯಣಸ್ವಾಮಿ ಹೇಳಿದರು.
ಈಚೆಗೆ ಗುಜರಾತ್‍ನ ಸೂರತ್‍ನಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ(ಕುಡೊ) ಸ್ವರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಹಾಗು ಐದನೇ ಸ್ಥಾನ ಪಡೆದಿರುವ ತಾಲೂಕಿನ ಇಬ್ಬರು ಕಿರಿಯ ಕ್ರೀಡಾಪಟುಗಳಾದ ಟಿ.ಎನ್. ಹೇಮಂತ್ ಹಾಗು ಗೋಕುಲ್‍ಗೌಡ ರನ್ನು ಶನಿವಾರ ನಗರದ ನೆಹರೂ ಕ್ರೀಡಾಂಗಣದಲ್ಲಿ ಸನ್ಮಾನಿಸಿ ಮಾತನಾಡಿದರು.
ತಾಲೂಕಿನಾಧ್ಯಂತ ಸಾಕಷ್ಟು ಮಂದಿ ಕ್ರೀಡಾಸಕ್ತರಿದ್ದು ಸರಕಾರ ಹಾಗು ಕ್ರೀಡಾ ಇಲಾಖೆ ಕ್ರೀಡಾಪಟುಗಳಿಗೆ ಬೇಕಾದ ಇನ್ನಷ್ಟು ಪ್ರೋತ್ಸಾಹ ನೀಡಿದಲ್ಲಿ ಮತ್ತಷ್ಟು ಕ್ರೀಡಾಪಟುಗಳು ತಾಲೂಕಿಗೆ ಕೀರ್ತಿ ತರುವಂತಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಕ್ರೀಡಾಪಟುಗಳಾದ ಟಿ.ಟಿ. ನರಸಿಂಹಪ್ಪ, ಜಯಚಂದ್ರ, ಮಧು, ಜಬಿವುಲ್ಲಾ, ಜಯಚಂದ್ರ, ನಿರಂಜನ್, ಸುರೇಶ್, ಮುರಳಿ, ಮುಕೇಶ್ ಮತ್ತಿತರರು ಹಾಜರಿದ್ದರು.

ಟಿಪ್ಪುಸುಲ್ತಾನ್ ಜಯಂತಿ

0

ಟಿಪ್ಪು ಸುಲ್ತಾನ್ ಜನ್ಮ ದಿನಾಚರಣೆಯನ್ನು ನವೆಂಬರ್ 10 ರಂದು ತಾಲ್ಲೂಕು ಆಡಳಿತ ಹಾಗು ಸಮುದಾಯದ ಸಹಕಾರದೊಂದಿಗೆ ನಗರದ ತಾಲೂಕು ಕಛೇರಿ ಮುಂಭಾಗದಲ್ಲಿ ಸರ್ಕಾರದ ನಿರ್ದೇಶನ ಹಾಗೂ ಶಿಷ್ಟಾಚಾರದಂತೆ ಆಚರಿಸಲು ನಿರ್ಧರಿಸಲಾಯಿತು.
ನಗರದ ತಾಲ್ಲೂಕು ಕಛೇರಿ ಸಭಾಂಗಣದಲ್ಲಿ ಶನಿವಾರ ನಡೆದ ಟಿಪ್ಪು ಸುಲ್ತಾನ್ ಜನ್ಮ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಸಮುದಾಯದ ಮುಖಂಡರೊಂದಿಗೆ ಚರ್ಚಿಸಿದ ತಹಸೀಲ್ದಾರ್ ಕೆ.ಎಂ. ಮನೋರಮಾ ಮಾತನಾಡಿ ಈ ಭಾರಿಯ ಟಿಪ್ಪುಸುಲ್ತಾನ್ ಜಯಂತಿಯನ್ನು ಸರ್ಕಾರದ ನಿರ್ದೇಶನದಂತೆ ಆಚರಿಸಲು ಸಮುದಾಯದ ಮುಖಂಡರು ಹಾಗು ನಾಗರೀಕರು ಹೆಚ್ಚಿನ ಸಹಕಾರ ನೀಡಬೇಕು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಚರಿಸಲಾಗುವ ಬೇರೆ ಜಯಂತಿಗಳಂತೆಯೇ ಟಿಪ್ಪು ಜಯಂತಿಯನ್ನು ಆಚರಿಸಲಾಗುವುದು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸೂಚನೆಯ ಮೇರೆಗೆ ಟಿಪ್ಪುಜಯಂತಿ ಅಂಗವಾಗಿ ಯಾವುದೇ ಬೈಕ್ ರ್ಯಾಲಿ, ಮೆರವಣಿಗೆ ನಡೆಸುವುದಕ್ಕೆ ಅವಕಾಶಗಳಿರುವುದಿಲ್ಲ, ಬದಲಿಗೆ ತಾಲೂಕು ಕಚೇರಿ ಮುಂಭಾಗದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಚರಿಸಲಾಗುವ ಕಾರ್ಯಕ್ರಮದಲ್ಲಿ ಸಮುದಾಯದವರು ಭಾಗವಹಿಸಬಹುದು ಎಂದು ನಗರಠಾಣೆ ಪಿಎಸ್ಸೈ ನವೀನ್ ತಿಳಿಸಿದರು.
ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಟಿಪ್ಪುಸುಲ್ತಾನ್ ಅವರ ಭಾವಚಿತ್ರಕ್ಕೆ ಕಡ್ಡಾಯವಾಗಿ ಪೂಜೆ ಸಲ್ಲಿಸಬೇಕು ಎಂದು ಸಮುದಾಯದ ಕೆಲ ಯುವಕರು ಒತ್ತಾಯಿಸಿದ್ದರಿಂದ ಈ ಬಗ್ಗೆ ಸರ್ಕಾರದ ಸೂಚನೆಯ ಮೇರೆಗೆ ಕ್ರಮ ವಹಿಸುವುದಾಗಿ ತಿಳಿಸಿದರು.
ತಾಲ್ಲೂಕು ಪಂಚಾಯಿತಿ ಇಓ ವೆಂಕಟೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ರಘುನಾಥರೆಡ್ಡಿ, ನಗರಸಭೆ ಅಧ್ಯಕ್ಷ ಅಪ್ಸರ್‍ಪಾಷ, ನಗರಠಾಣೆಯ ಪಿಎಸೈ ನವೀನ್, ಗ್ರಾಮಾಂತರ ಠಾಣೆಯ ಪಿಎಸೈ ಪ್ರದೀಪ್ ಪೂಜಾರಿ, ದಿಬ್ಬೂರಹಳ್ಳಿ ಠಾಣೆ ಪಿಎಸೈ ಆರ್. ವಿಜಯ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ದೇವೇಗೌಡ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಆನಂದ್, ರೇಷ್ಮೆ ಇಲಾಖೆಯ ನಾರಾಯಣಸ್ವಾಮಿ ಮತ್ತಿತರರು ಹಾಜರಿದ್ದರು.
ಟಿಪ್ಪುಸುಲ್ತಾನ್ ಜಯಂತಿ ಆಚರಿಸುವ ಕುರಿತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಪೂರ್ವ ಭಾವಿ ಸಭೆಯನ್ನು ನ 07 ರ ಸೋಮವಾರದಂದು ನಿಗದಿಪಡಿಸಲಾಗಿತ್ತು.
ಆದರೆ ಇಂದು ತರಾತುರಿಯಲ್ಲಿ ಕೆಲವರಿಗೆ ದೂರವಾಣಿ ಮೂಲಕ ಆಹ್ವಾನ ನೀಡಿ ಸಭೆ ಕರೆದ ತಹಸೀಲ್ದಾರರು ಸಭೆಯ ನಡುವೆ ಜಿಲ್ಲಾಧಿಕಾರಿಗಳು ಬಂದಿದ್ದಾರೆ ಎಂದು ಹೇಳಿ ತಮ್ಮ ಕೊಠಡಿಗೆ ಹೋಗಿ ಕುಳಿತರು.
ಸಭೆಯಿಂದ ಅರ್ಧದಲ್ಲಿ ಎದ್ದು ಹೋದ ತಹಸೀಲ್ದಾರರು ಸುಮಾರು 20 ನಿಮಿಷವಾದರೂ ಪೂರ್ವಭಾವಿ ಸಭೆಗೆ ಬಾರದ ಕ್ರಮ ಖಂಡಿಸಿ ಸಮುದಾಯದ ಕೆಲ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು. ಮುಖಂಡರನ್ನು ಸಮಾಧಾನಗೊಳಿಸಿದ ಪಿಎಸ್ಸೈ ನವೀನ್ ತೆರಳಿ ತಹಸೀಲ್ದಾರರನ್ನು ಸಭೆಗೆ ಕರೆದುಕೊಂಡು ಬಂದರು.

ಭಾರತ ಪರಿಕ್ರಮ ಯಾತ್ರೆ

0

ನಾಗರೀಕ ಸಮಾಜದಲ್ಲಿ ಮರೆಯಾಗುತ್ತಿರುವ ಭಾರತೀಯ ಸಂಸ್ಕøತಿ ಉಳಿಯಬೇಕಾದರೆ ಅದು ಹಳ್ಳಿಗಳಿಂದ ಮಾತ್ರ ಸಾಧ್ಯ, ಹಳ್ಳಿಗಳು ಉಳಿದರೆ ಮಾತ್ರ ದೇಶದ ಉಳಿವು ಸಾಧ್ಯ ಎಂದು ಅಖಿಲ ಭಾರತ ಸೇವಾ ಪ್ರಮುಖ್ ಸೀತಾರಾಮ ಕೆದಿಲಾಯ ಹೇಳಿದರು.
ಗ್ರಾಮ ವಿಕಾಸದ ಧ್ಯೇಯದೊಂದಿಗೆ ಕಾಲ್ನಡಿಗೆಯ ಮೂಲಕ ದೇಶದಾಧ್ಯಂತ ಸಂಚರಿಸುತ್ತಿರುವ ಭಾರತ ಪರಿಕ್ರಮ ಯಾತ್ರೆ ಶುಕ್ರವಾರ ತಾಲೂಕಿನ ಹಂಡಿಗನಾಳ ಗ್ರಾಮದಿಂದ ಹೊರಟು ಚಿಕ್ಕದಾಸೇನಹಳ್ಳಿ ಗ್ರಾಮಕ್ಕೆ ತಲುಪಿದೆ.
ಹಂಡಿಗನಾಳದಿಂದ ಮುಂಜಾನೆ ಹೊರಟ ಪಾದಯಾತ್ರೆ ನಗರಕ್ಕೆ ಆಗಮಿಸುತ್ತಿದ್ದಂತೆ ನೂರಾರು ಸ್ವಯಂಸೇವಕರು ಸೇರಿದಂತೆ ಪತಂಜಲಿ ಯೋಗ ಪಟುಗಳು ಅವರನ್ನು ಬರಮಾಡಿಕೊಂಡು ಅವರೊಂದಿಗೆ ಚಿಕ್ಕದಾಸೇನಹಳ್ಳಿಯವರೆಗೂ ಯೋಗನಡೆಯ ಮೂಲಕ ಸಾಗಿದರು.
ಮಾರ್ಗ ಮಧ್ಯ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಶ್ರೀಗಳು ಗ್ರಾಮಗಳು ಅಭಿವೃದ್ಧಿ ಹೊಂದಿದಾಗ ಮಾತ್ರ ದೇಶದ ಅಭಿವೃದ್ಧಿ ಹೊಂದಲು ಸಾಧ್ಯ ಹಾಗಾಗಿ ಪ್ರತಿಯೊಬ್ಬರೂ ಗ್ರಾಮಗಳ ಅಭಿವೃದ್ಧಿಯತ್ತ ಗಮನಹರಿಸಬೇಕು. ನಗರ ಜೀವನದ ಮೇಲಿರುವ ವ್ಯಾಮೋಹವನ್ನು ಬಿಟ್ಟು ಹಳ್ಳಿಗಳಲ್ಲಿನ ಗೋ ಸಂಪತ್ತು, ಗ್ರಾಮದ ಕುಲಕಸುಬು, ಸಂಸ್ಕøತಿ ಹಾಗು ಗ್ರಾಮೀಣ ಆಚಾರ ವಿಚಾರ, ವೈದ್ಯ ಪದ್ದತಿ ಮತ್ತಿತರ ವಿಚಾರಗಳ ಬಗ್ಗೆ ಸಾರ್ವಜನಿಕರೊಂದಿಗೆ ಸಂವಾದ ನಡೆಸಿ ಗ್ರಾಮ ಸೇವೆಯೇ ರಾಮ ಸೇವೆ ಎನ್ನುವುದನ್ನು ಅರಿತು ಎಲ್ಲರೂ ಹಳ್ಳಿಗಳ ಏಳಿಗೆಗಾಗಿ ಶ್ರಮಿಸಬೇಕು ಎಂದರು.
ಈ ಸಂದರ್ಭದಲ್ಲಿ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಶ್ರೀಕಾಂತ್, ಕೇಶವಮೂರ್ತಿ, ಸರಸ್ವತಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಶ್ರೀಕಾಂತ್, ಆರ್‍ಎಸ್‍ಎಸ್ ನ ಅಶ್ವತ್ಥ್, ಮತ್ತಿತರರು ಹಾಜರಿದ್ದರು.

ವಾರ್ಷಿಕೋತ್ಸವ ಕಾರ್ಯಕ್ರಮ

0

ನಗರದ ಟಿ.ಬಿ ರಸ್ತೆಯಲ್ಲಿರುವ ಶ್ರೀ ರೇಣುಕಾ ಎಲ್ಲಮ್ಮ ದೇವಾಲಯಲ್ಲಿ 3 ನೇ ವರ್ಷದ ಅನ್ನ ಸಂತರ್ಪಣಾ ವಾರ್ಷಿಕೋತ್ಸವ ಕಾರ್ಯಕ್ರಮದ ಅಂಗವಾಗಿ ಶುಕ್ರವಾರ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು.
ವಾರ್ಷಿಕೋತ್ಸವದ ಅಂಗವಾಗಿ ಶುಕ್ರವಾರ ದೇವಿಗೆ ವಿಶೇಷ ಹೂವಿನ ಅಲಂಕಾರವನ್ನು ಮಾಡಲಾಗಿತ್ತು, ವಿಧ ವಿಧವಾದ ಹೂಗಳಿಂದ ದೇವಾಲಯವನ್ನು ಸಿಂಗಾರಗೊಳಿಸಲಾಗಿತ್ತು, ಅನ್ನಸಂತರ್ಪಣಾ ವಾರ್ಷಿಕೋತ್ಸವದ ಅಂಗವಾಗಿ ಭಕ್ತಾದಿಗಳು ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು.
ವಾರ್ಷಿಕೋತ್ಸವದ ಅಂಗವಾಗಿ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.

ಕಪ್ಪುಬಟ್ಟೆ ಧರಿಸಿ ವಿರೋಧ

0

ಕನ್ನಡ ರಾಜ್ಯೋತ್ಸವದ ಸಂಧರ್ಭದಲ್ಲಿ ಕಪ್ಪುಬಟ್ಟೆಗಳನ್ನು ಧರಿಸಿಕೊಂಡು ಕನ್ನಡರಾಜ್ಯೋತ್ಸವಕ್ಕೆ ವಿರೋಧ ವ್ಯಕ್ತಪಡಿಸಿರುವ ಬೆಳಗಾವಿಯ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಅವರನ್ನು  ಗಡಿಪಾರು ಮಾಡಿ, ಮಹಾನಗರಪಾಲಿಕೆಯನ್ನು ವಿಸರ್ಜನೆ ಮಾಡಬೇಕು ಎಂದು ಒತ್ತಾಯಿಸಿ ಸಮಾನ ಮನಸ್ಕರ ಹೋರಾಟ ಸಮಿತಿಯ ಪದಾಧಿಕಾರಿಗಳು ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರವನ್ನು ಸಲ್ಲಿಸಿದರು.
ನಗರದ ತಾಲ್ಲೂಕು ಕಛೇರಿಯ ಆವರಣದಲ್ಲಿ ಪ್ರತಿಭಟನೆ ನಡೆಸಿದ ಅವರು, ಕರ್ನಾಟಕ ಏಕೀಕರಣ ಆದ ನಂತರ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಬೇಕೆಂದು, ನಾಡು, ನುಡಿ, ಕಲೆ, ಸಾಹಿತ್ಯ, ಸಂಸ್ಕøತಿಯನ್ನು ಸಾರುವಂತಹ ಸರ್ವರಲ್ಲೂ ಬಾತೃತ್ವವನ್ನು ಹಿಮ್ಮಡಿಗೊಳಿಸುವ ಉದ್ದೇಶದಿಂದ ಮಾಡುವಂತಹ ನಾಡಹಬ್ಬದಂದು ರಾಜ್ಯದಲ್ಲಿದ್ದುಕೊಂಡು ರಾಜ್ಯದ್ರೋಹದ ಕೆಲಸ ಮಾಡಿರುವ ಬೆಳಗಾವಿ ಮಹಾನಗರಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಅವರ ಕ್ರಮವನ್ನು ಸಮಿತಿ ಖಂಡಿಸುತ್ತದೆ.
ಇವರಿಗೆ ಬೆಂಬಲವಾಗಿ ನಿಂತಿರುವ ಎಂ.ಇ.ಎಸ್. ಸಂಘಟನೆಯನ್ನು ವಿಸರ್ಜನೆಗೊಳಿಸಿ ಅದರ ಅಸ್ತಿತ್ವವನ್ನು ಕೊನೆಗಾಣಿಸಬೇಕು. ರಾಜ್ಯದ ನಾಡು, ನುಡಿ, ನೆಲ, ಜಲ, ಸಂಸ್ಕøತಿಗೆ ದಕ್ಕೆಯುಂಟು ಮಾಡುವ ಯಾವುದೇ ವ್ಯಕ್ತಿಯಾಗಲಿ ಅಂತಹವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಅಂತಹವರನ್ನು ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.
ಮನವಿ ಪತ್ರವನ್ನು ಸ್ವೀಕರಿಸಿದ ಶಿರಸ್ತೆದಾರ್ ನರೇಂದ್ರಬಾಬು, ಮನವಿಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಕಳುಹಿಸಿಕೊಡಲಾಗುತ್ತದೆ ಎಂದರು.
ತಾಲ್ಲೂಕು ಅಧ್ಯಕ್ಷ ಜೆ.ಎಸ್. ವೆಂಕಟಸ್ವಾಮಿ, ಕಾರ್ಯದರ್ಶಿ ಭಕ್ತರಹಳ್ಳಿ ಪ್ರತೀಶ್, ಉಪಾಧ್ಯಕ್ಷ ಜಿ.ಎಸ್.ಅಕ್ರಂಪಾಷಾ, ಸಂಘಟನಾಧ್ಯಕ್ಷ ಜಗದೀಶ್‍ಬಾಬು, ರೈತ ಸಂಘದ ಅಧ್ಯಕ್ಷ ಎಸ್.ಎಂ.ರವಿಪ್ರಕಾಶ್, ಕರವೇ ಶಿವರಾಮೇಗೌಡ ಬಣದ ಅಧ್ಯಕ್ಷ ಮೇಲೂರು ಶ್ರೀಧರ್, ಅಂಬರೀಶ್, ಇಮ್ತಿಯಾಜ್‍ಪಾಷ, ಇನ್ನಿತರರು ಹಾಜರಿದ್ದರು.

ಸನ್ನಡತೆಯಿಂದ ಕೇಸು ಮುಕ್ತಿ

0

ಸನ್ನಡತೆಯನ್ನು ಮೈಗೂಡಿಸಿಕೊಂಡು ಎಲ್ಲರೊಟ್ಟಿಗೆ ಉತ್ತಮ ವಿಶ್ವಾಸವನ್ನು ರೂಢಿಸಿಕೊಂಡು ಬದುಕು ರೂಪಿಸಿಕೊಂಡರೆ ಅಂತಹವರ ಮೇಲಿರುವ ಕೇಸುಗಳಿಂದ ಮುಕ್ತಿಸಿಗಲಿದೆ ಎಂದು ಚಿಂತಾಮಣಿ ವಿಭಾಗದ ಡಿ.ವೈ.ಎಸ್.ಪಿ. ಕೃಷ್ಣಮೂರ್ತಿ ಹೇಳಿದರು.
ನಗರ ಪೊಲೀಸ್ ಠಾಣೆಯ ಆವರಣದಲ್ಲಿ, ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವವರೊಂದಿಗೆ ಸಭೆಯನ್ನು ನಡೆಸಿದ ಅವರು ಮಾತನಾಡಿದರು.
ಹಳ್ಳಿಗಳಲ್ಲಿ ಶಾಂತಿ ಕಾಪಾಡುವುದು, ಕಾನೂನು ಸುವ್ಯವಸ್ಥೆಗೆ ದಕ್ಕೆಯುಂಟಾಗದಂತೆ ನಡೆದುಕೊಳ್ಳುವುದು. ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗದೆ ಇರುವುದು. ಹಾಗೂ ಯಾವುದೇ ಗಲಾಟೆಗಳಿಗೆ ಪ್ರಚೋದನೆ ಮಾಡದೇ ಉತ್ತಮವಾದ ನಡುವಳಿಕೆಯನ್ನು ರೂಢಿಸಿಕೊಂಡು ಸಮಾಜದಲ್ಲಿ ಒಳ್ಳೆಯ ವ್ಯಕ್ತಿಗಳಾಗಿ ಬಾಳುವವರ ಮೇಲೆ ಇರುವ ಕೇಸುಗಳನ್ನು ಸನ್ನಡತೆಯ ಆಧಾರದಲ್ಲಿ ವಜಾಗೊಳಿಸುವಂತಹ ಚಿಂತನೆಗಳು ನಡೆಯುತ್ತಿವೆ. ಎಲ್ಲರೂ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಿ ಎಂದರು.
ಪೊಲೀಸ್ ವೃತ್ತ ನಿರೀಕ್ಷಕ ವೆಂಕಟೇಶ್ ಮಾತನಾಡಿ, ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವುದು ಕೆಲವರಿಗೆ ರೂಢಿಯಾಗಿಬಿಟ್ಟಿದೆ. ಆದರೆ ತಂದೆ ತಾಯಿಗಳು ಅಫರಾಧ ಪ್ರಕರಣಗಳಲ್ಲಿ ಭಾಗಿಯಾದರೆ ಅವರ ಜೀವನದುದ್ದಕ್ಕೂ ಜನರು ಕೆಟ್ಟಮನೋಭಾವನೆಯಿಂದ ನೋಡುತ್ತಾರೆ. ಮುಂದೆ ಅಂತಹವರ ಮಕ್ಕಳ ಭವಿಷ್ಯದ ಮೇಲೆ ಹೊಡೆತಬೀಳಲಿದೆ. ಇದರಿಂದ ಮಕ್ಕಳು ಜೀವನ ಪೂರ್ತಿ ಸಂಕಷ್ಟಕ್ಕೆ ಒಳಗಾಗಲಿದ್ದಾರೆ ಆದ್ದರಿಂದ ಪ್ರತಿಯೊಬ್ಬರು ತಮ್ಮ ಕುಟುಂಬಗಳ ಬಗ್ಗೆ ಚಿಂತನೆ ನಡೆಸಬೇಕು ಎಂದರು.
ಗ್ರಾಮಾಂತರ ಠಾಣೆಯ ಸಬ್ ಇನ್ಸ್‍ಪೆಕ್ಟರ್ ಪ್ರದೀಪ್ ಪೂಜಾರಿ, ನಗರಠಾಣೆ ಸಬ್ ಇನ್ಸ್‍ಪೆಕ್ಟರ್ ನವೀನ್, ದಿಬ್ಬೂರಹಳ್ಳಿ ಠಾಣೆ ಸಬ್ ಇನ್ಸ್‍ಪೆಕ್ಟರ್ ಆರ್. ವಿಜಯ್‍ರೆಡ್ಡಿ, ಇನ್ನಿತರರು ಹಾಜರಿದ್ದರು.

ಗ್ರಾಮಾಭಿವೃದ್ಧಿಗಾಗಿ ಅನುಧಾನ ಬಿಡುಗಡೆ

0

ಯಾವ ಯಾವ ವಿಧದಲ್ಲಿ ಅನುಧಾನಗಳು ಬರುತ್ತವೆ ಎನ್ನುವುದರ ಬಗ್ಗೆ ಮಾಹಿತಿ ಕೊರತೆಯಾದರೆ ಅಭಿವೃದ್ಧಿ ಕುಂಠಿತವಾಗುತ್ತದೆ ಎಂದು 4 ನೇ ಹಣಕಾಸು ಆಯೋಗದ ಅಧ್ಯಕ್ಷ ಸಿ.ಜಿ.ಚಿನ್ನಸ್ವಾಮಿ ಹೇಳಿದರು.
ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜನೆ ಮಾಡಲಾಗಿದ್ದ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಗ್ರಾಮಾಂತರ ಪ್ರದೇಶಗಳ ಅಭಿವೃದ್ಧಿಗಾಗಿ ನೇರವಾಗಿ ಸ್ಥಳೀಯ ಗ್ರಾಮ ಪಂಚಾಯಿತಿಗಳಿಗೆ ಹೆಚ್ಚಿನ ಅನುಧಾನಗಳನ್ನು ಬಿಡುಗಡೆ ಮಾಡಲಾಗುತ್ತಿದ್ದು ಈ ಅನುಧಾನಗಳ ಜೊತೆಗೆ ಸ್ಥಳೀಯವಾಗಿ ಸಂಪನ್ಮೂಲಗಳನ್ನು ಕ್ರೋಢಿಕರಣ ಮಾಡಿಕೊಂಡು ಜನರಿಗೆ ಮೂಲಸೌಕರ್ಯಗಳಾದ ಶುದ್ಧ ಕುಡಿಯುವ ನೀರು, ರಸ್ತೆ, ಚರಂಡಿ, ಬೀದಿದೀಪ, ಸ್ವಚ್ಛವಾದ ಪರಿಸರ ಮುಂತಾದ ಸೌಕರ್ಯಗಳನ್ನು ಕಲ್ಪಿಸಿಕೊಡುವುದು ನಿಮ್ಮ ಜವಾಬ್ದಾರಿಯಾಗಿದೆ. ಆಯೋಗದಿಂದ ಪ್ರತಿ ಜಿಲ್ಲೆಗೆ ಪ್ರವಾಸ ಕೈಗೊಳ್ಳಲಾಗುತ್ತಿದ್ದು ಇನ್ನೂ 15 ಜಿಲ್ಲೆಗಳಿಗೆ ಬೇಟಿ ನೀಡಬೇಕಾಗಿದೆ. 2017 ನೇ ಸಾಲಿನ ಜನವರಿಯೊಳಗೆ ಪ್ರವಾಸ ಪೂರ್ಣಗೊಳ್ಳಲಿದೆ. ಅಧಿಕಾರಿಗಳು ಸ್ಥಳೀಯ ಜನಪ್ರತಿನಿಧಿಗಳಿಗೆ ಕಾರ್ಯಾಗಾರವನ್ನು ನಡೆಸುವ ಮೂಲಕ ಯಾವ ಯಾವ ಮೂಲಗಳಿಂದ ಅನುಧಾನಗಳು ಬರುತ್ತವೆ. ಈ ಅನುಧಾನಗಳನ್ನು ಹೇಗೆ ಖರ್ಚು ಮಾಡಬೇಕು. ಅನುಧಾನಗಳನ್ನು ಖರ್ಚು ಮಾಡಬೇಕಾದರೆ ಏನೇನು ಮಾನದಂಡಗಳನ್ನು ಅನುಸರಿಸಬೇಕು. ಸ್ಥಳೀಯ ಜನರ ಪಾತ್ರವೇನು ಎನ್ನುವ ಬಗ್ಗೆ ಜನಪ್ರತಿನಿಧಿಗಳಿಗೆ ಮನವರಿಕೆ ಮಾಡಿಕೊಡಬೇಕು ಎಂದರು.
4 ನೇ ಹಣಕಾಸು ಆಯೋಗದ ಸದಸ್ಯ ಹೆಚ್. ಶಶಿಧರ್ ಮಾತನಾಡಿ, ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯಕ್ಷಮತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎನ್ನುವ ಚಿಂತನೆಗಳು ನಡೆದಿವೆ. ಜನಪ್ರತಿನಿಧಿಗಳು ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕವಿಟ್ಟುಕೊಂಡು ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಬೇಕು. ಕ್ರೀಯಾಶೀಲರಾಗಿ ಕೆಲಸ ನಿರ್ವಹಿಸಬೇಕು. ಜನಸಾಂದ್ರತೆ ಎಸ್ ಸಿ, ಎಸ್ ಟಿ, ಸಮುದಾಯದ ಸಂಖ್ಯೆ, ಅನಕ್ಷರಸ್ಥರ ಪ್ರಮಾಣ, ಒಟ್ಟು ಜನಸಂಖ್ಯೆ, ಬೌಗೊಳಿಕ ವಿಸ್ತೀರ್ಣ, ಮುಂತಾದ ಅಂಶಗಳನ್ನು ವರದಿ ಶಿಫಾರಸ್ಸು ಸಂಧರ್ಭದಲ್ಲಿ ಪರಿಗಣಿಸಲಾಗುವುದು. ಸೂಚ್ಯಂಕ ಆಧಾರದಲ್ಲಿ ಶಿಫಾರಸ್ಸು ಮಾಡುವ ಕುರಿತು ಚಿಂತನೆ ನಡೆಸಲಾಗುವುದು. ಆಯೋಗ ಕುಡಿಯುವ ನೀರು, ಒಳಚರಂಡಿ, ತ್ಯಾಜ್ಯವಿಲೇವಾರಿ, ಬೀದಿದೀಪ ನಿರ್ವಹಣೆ, ಮುಂತಾದ ಸೌಲಭ್ಯಗಳ ಕುರಿತು ಗಮನಹರಿಸಲಿದೆ ಎಂದರು.
ಶಾಸಕ ಎಂ.ರಾಜಣ್ಣ ಮಾತನಾಡಿ, ಬಹುತೇಕ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿ ಇರುವುದಿಲ್ಲ ಇದರಿಂದಾಗಿ ಅಭಿವೃದ್ಧಿ ಕೆಲಸಗಳು ಕುಂಠಿತವಾಗುತ್ತಿರುವುದರ ಜೊತೆಗೆ ಅವರ ಸಹವರ್ತಿಗಳು ಎಲ್ಲಾ ಜವಾಬ್ದಾರಿಗಳನ್ನು ನಿರ್ವಹಣೆ ಮಾಡಿಕೊಳ್ಳುತ್ತಾರೆ ಎಂದರು.
ಸಭೆಯಲ್ಲಿ ಹಾಜರಿದ್ದ ತಾಲ್ಲೂಕು ಪಂಚಾಯಿತಿ ಸದಸ್ಯರು, ನೀರಿನ ಸಮಸ್ಯೆ ಹೆಚ್ಚಾಗಿದೆ. ವಸತಿ ಯೋಜನೆಯಡಿಯಲ್ಲಿ ಒಂದು ವರ್ಷಕ್ಕೆ ಒಬ್ಬ ಸದಸ್ಯರಿಗೆ ಒಂದು ಮನೆ ಮಾತ್ರ ನೀಡಲಾಗುತ್ತಿದೆ ಇದರಿಂದ ಅಭಿವೃದ್ಧಿ ಸಾಧ್ಯವಿಲ್ಲ. ತಾಲ್ಲೂಕು ಪಂಚಾಯಿತಿಗೆ ಹೆಚ್ಚಿನ ಅಧಿಕಾರ ಕೊಡಬೇಕು. ಕನಿಷ್ಟ ಗ್ರಾಮ ಪಂಚಾಯಿತಿಗಳಿಗಿರುವಷ್ಟು ಅಧಿಕಾರವೂ ಇಲ್ಲ. ಸಿಬ್ಬಂದಿಯ ಕೊರತೆ ಕಾಡುತ್ತಿದೆ. ಇರುವ ಸಿಬ್ಬಂದಿಯಿಂದ ಎಲ್ಲಾ ಕೆಲಸ ಮಾಡಿಸಲು ಸಾದ್ಯವಾಗುತ್ತಿಲ್ಲ. ಗ್ರಾಮ ಪಂಚಾಯಿತಿಗಳಿಂದ ಹಿಡಿದು ಜಿಲ್ಲಾ ಪಂಚಾಯಿತಿವರೆಗೆ ಅಧಿಕಾರ ವಿಕೇಂದ್ರೀಕರಣ ಮಾಡಿದ್ದೇವೆ ಎನ್ನುತ್ತಾರೆ. ಆದರೆ ನಾವು ಹೆಚ್ಚಿನ ಪ್ರಮಾಣದಲ್ಲಿ ಶಾಸಕರ ಅನುಧಾನಗಳ ಮೇಲೆ ಅವಲಂಬಿತರಾಗುವಂತಾಗಿದೆ. ತಾಲ್ಲೂಕು ಪಂಚಾಯಿತಿಗೆ ಹೆಚ್ಚಿನ ಅನುಧಾನಗಳನ್ನು ಬಿಡುಗಡೆ ಮಾಡಬೇಕು ಎಂದು ಆಯೋಗದ ಅಧ್ಯಕ್ಷರ ಗಮನಕ್ಕೆ ತಂದರು.
ಆಯೋಗದ ಸದಸ್ಯ ಹೆಚ್.ಡಿ. ಅಮರನಾಥ್, ಶ್ರೀಕಾಂತ್, ಶಾಸಕ ಎಂ.ರಾಜಣ್ಣ, ತಾ.ಪಂ. ಅಧ್ಯಕ್ಷ ಕೆ. ಲಕ್ಷ್ಮೀನಾರಾಯಣರೆಡ್ಡಿ, ಉಪಾಧ್ಯಕ್ಷ ಹೆಚ್.ನರಸಿಂಹಯ್ಯ, ಕಾರ್ಯನಿರ್ವಾಹಕ ಅಧಿಕಾರಿ ವೆಂಕಟೇಶ್, ನರೇಗಾ ಯೋಜನಾಧಿಕಾರಿ ಶ್ರೀನಾಥ್‍ಗೌಡ, ಹಾಗೂ ತಾ.ಪಂ.ಸದಸ್ಯರು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಉಚಿತ ಕಣ್ಣಿನ ಪೊರೆ ತಪಾಸಣೆ

0

ತಾಲೂಕಿನ ಅಪ್ಪೇಗೌಡನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘ ಹಾಗು ಕೃಷ್ಣ ನೇತ್ರಾಲಯ ಬೆಂಗಳೂರು ಮತ್ತು ಜನಹಿತ ಐಕೇರ್ ಸೆಂಟರ್ ಯಲಹಂಕ ಇವರ ಸಂಯುಕ್ತಾಶ್ರಯದಲ್ಲಿ ತಾಲೂಕಿನ ಅಪ್ಪೇಗೌಡನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ಏರ್ಪಡಿಸಲಾಗಿದ್ದ ಉಚಿತ ಕಣ್ಣಿನ ಪೊರೆ ತಪಾಸಣೆ ಶಿಬಿರದಲ್ಲಿ ಪುಟಾಣಿಯೊಬ್ಬಳ ಕಣ್ಣಿನ ತಪಾಸಣೆ ನಡೆಸುತ್ತಿರುವ ವೈದ್ಯರು.