Home Blog Page 442

ಕಾಲ್ನಡಿಗೆಯಲ್ಲಿ ದೇಶ ಸಂಚಾರ

0

ಗ್ರಾಮ ವಿಕಾಸದ ಧ್ಯೇಯದೊಂದಿಗೆ ಕಾಲ್ನಡಿಗೆಯ ಮೂಲಕ ದೇಶದಾಧ್ಯಂತ ಸಂಚರಿಸುತ್ತಿರುವ ಆರ್‍ಎಸ್‍ಎಸ್ ನ ಮಾಜಿ ಆಖಿಲ ಭಾರತ ಸೇವಾ ಪ್ರಮುಖ್ ಸೀತಾರಾಮ ಕೆದಿಲಾಯರ ನೇತೃತ್ವದ ಭಾರತ ಪರಿಕ್ರಮ ಯಾತ್ರೆ ಗುರುವಾರ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮಕ್ಕೆ ಬಂದು ತಲುಪಿದೆ.
ಗ್ರಾಮಕ್ಕೆ ಪಾದಯಾತ್ರೆ ಬರುತ್ತಿದ್ದಂತೆ ಗ್ರಾಮಸ್ಥರು ಹಾಗು ಶಾಲಾ ಮಕ್ಕಳು ಅವರನ್ನು ಬರಮಾಡಿಕೊಂಡರು. ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿದ ಶ್ರೀಗಳು ಗ್ರಾಮಗಳು ಅಭಿವೃದ್ಧಿ ಹೊಂದಿದಾಗ ಮಾತ್ರ ದೇಶದ ಅಭಿವೃದ್ದಿ ಹೊಂದಲು ಸಾಧ್ಯ ಹಾಗಾಗಿ ಪ್ರತಿಯೊಬ್ಬರೂ ಗ್ರಾಮಗಳ ಅಭಿವೃದ್ಧಿಯತ್ತ ಗಮನಹರಿಸಬೇಕು. ನಗರ ಜೀವನದ ವ್ಯಾಮೋಹದ ಮೇಲೆ ಈಚೆಗೆ ಹಳ್ಳಿಗಳಿಂದ ನಗರಕ್ಕೆ ಹೋಗುವವರ ಸಂಖ್ಯೆ ಹೆಚ್ಚಾಗುತ್ತಿದ್ದು ಯಾವುದೇ ಕಾರಣಕ್ಕೂ ಹಳ್ಳಿಗಳನ್ನು ತೊರೆದು ಯಾರೂ ಹೋಗಬೇಡಿ ಎಂದರು.

ಆರ್ ಎಸ್ ಎಸ್ ನ ಮಾಜಿ ಆಖಿಲ ಭಾರತ ಸೇವಾ ಪ್ರಮುಖ್ ಸೀತಾರಾಮ ಕೆದಿಲಾಯರ ನೇತೃತ್ವದ ಭಾರತ ಪರಿಕ್ರಮ ಯಾತ್ರೆ ಗುರುವಾರ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮಕ್ಕೆ ತಲುಪಿದಾಗ ಗ್ರಾಮಸ್ಥರು ಸೇರಿದಂತೆ ಶಾಲಾ ಮಕ್ಕಳು ಬರಮಾಡಿಕೊಂಡರು.
ಆರ್ ಎಸ್ ಎಸ್ ನ ಮಾಜಿ ಆಖಿಲ ಭಾರತ ಸೇವಾ ಪ್ರಮುಖ್ ಸೀತಾರಾಮ ಕೆದಿಲಾಯರ ನೇತೃತ್ವದ ಭಾರತ ಪರಿಕ್ರಮ ಯಾತ್ರೆ ಗುರುವಾರ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮಕ್ಕೆ ತಲುಪಿದಾಗ ಗ್ರಾಮಸ್ಥರು ಸೇರಿದಂತೆ ಶಾಲಾ ಮಕ್ಕಳು ಬರಮಾಡಿಕೊಂಡರು.

ಅಗಸ್ಟ್ 09, 2012 ರಂದು ಕನ್ಯಾಕುಮಾರಿಯಿಂದ ಆರಂಭಗೊಂಡ 69 ವರ್ಷದ ಸೀತಾರಾಮ ಕೆದಿಲಾಯರ ಪಾದಯಾತ್ರೆ ಇದೀಗ 1540 ದಿನಗಳನ್ನು ಪೂರೈಸಿದ್ದು ಕರ್ನಾಟಕ ಸೇರಿದಂತೆ ದೇಶದ 23 ರಾಜ್ಯಗಳ ಸುಮಾರು 2000 ಹಳ್ಳಿಗಳನ್ನು ಸಂಪರ್ಕಿಸಿದ್ದಾರೆ.
ಈಗಾಗಲೇ ಸುಮಾರು 21,300 ಕಿ.ಮೀ ಪಾದಯಾತ್ರೆ ಮಾಡಿರುವ ಇವರು ಇಂದು ತಾಲೂಕಿನ ಹಂಡಿಗನಾಳದಲ್ಲಿ ಹಾಗು ಶುಕ್ರವಾರ ತಾಲೂಕಿನ ಚಿಕ್ಕದಾಸೇನಹಳ್ಳಿ ಹಾಗು ಶನಿವಾರ ಗಂಜಿಗುಂಟೆ ಗ್ರಾಮದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಈ ಸಂದರ್ಭದಲ್ಲಿ ಸರಸ್ವತಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಶ್ರೀಕಾಂತ್, ಆರ್‍ಎಸ್‍ಎಸ್ ನ ಅಶ್ವತ್ಥ್, ಹಂಡಿಗನಾಳದ ಮಂಜುನಾಥ್ ಮತ್ತಿತರರು ಹಾಜರಿದ್ದರು.

ಕೆಂಪೇಗೌಡ ಯುವಕ ಸಂಘದಿಂದ ರಾಜ್ಯೋತ್ಸವ

0

ಶಿಡ್ಲಘಟ್ಟ ತಾಲ್ಲೂಕಿನ ಸುಗಟೂರು ಗ್ರಾಮದಲ್ಲಿ ಕೆಂಪೇಗೌಡ ಯುವಕ ಸಂಘದ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಲಾಮಕ್ಕಳು ಕನ್ನಡ ಧ್ವಜಾರೋಹಣ ನೆರವೇರಿಸಿದರು. ಕೆಂಪೇಗೌಡ ಕನ್ನಡ ಸಂಘದ ಪದಾಧಿಕಾರಿಗಳು, ಗ್ರಾಮಪಂಚಾಯಿತಿ ಸದಸ್ಯರು ಇದ್ದರು.

ಕಲಿಯಲು ಅನ್ಯಭಾಷೆಗಳಿಗಿಂತ ಮಾತೃಭಾಷೆಯೇ ಮೇಲು

0

ಮಕ್ಕಳ ಕಲಿಕೆಗೆ ಅನ್ಯಭಾಷೆಗಳಿಗಿಂತ ಮಾತೃಭಾಷೆಯೇ ಉತ್ತಮವಾದ ಮಾಧ್ಯಮ ಎಂದು ಶಿಕ್ಷಕ ಎ.ಬಿ. ನಾಗರಾಜು ತಿಳಿಸಿದರು.
ತಾಲ್ಲೂಕಿನ ಸುಗಟೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬದಲಾದ ಸನ್ನಿವೇಶದಲ್ಲಿ ಪೋಷಕರಲ್ಲಿ ಇಂಗ್ಲೀಷ್ ವ್ಯಾಮೋಹ ಹೆಚ್ಚುತ್ತಿದ್ದು, ಮಕ್ಕಳು ಚಿಕ್ಕವಯಸ್ಸಿನಲ್ಲಿ ತಮ್ಮ ಭಾವನೆಗಳನ್ನು ಅಭಿವ್ಯಕ್ತಗೊಳಿಸಲು ಸಾಧ್ಯವಾಗದೇ ಮಾನಸಿಕವಾಗಿ ಕುಂಠತವಾಗುತ್ತಿದೆ ಎಂದು ಅವರು ವಿವರಿಸಿದರು.
ಮುಖ್ಯಶಿಕ್ಷಕ ಎಚ್.ಎಸ್. ರುದ್ರೇಶಮೂರ್ತಿ ಅವರು ಮಾತನಾಡಿ, ಕನ್ನಡ ಸಾಹಿತ್ಯವು ವಿಪುಲವಾಗಿದ್ದು, ಮಕ್ಕಳು ಕನ್ನಡ ಸಾಹಿತ್ಯವನ್ನು ಅಧ್ಯಯನ ಮಾಡಬೇಕು ಎಂದು ಕರೆನೀಡಿದರು.
ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಆರ್. ನಾಗೇಶ್ ಅಧ್ಯಕ್ಷತೆ ವಹಿಸಿದ್ದರು. ಗ್ರಾಮಪಂಚಾಯಿತಿ ಸದಸ್ಯ ಶಿವಶಂಕರಪ್ಪ, ಷಣ್ಮುಗಪ್ಪ, ಎನ್. ಅಶ್ವತ್ಥಪ್ಪ, ಎಂ. ದೇವರಾಜು, ಎಸ್‍ಡಿಎಂಸಿ ಸದಸ್ಯ ಎಂ. ಶಂಕರಪ್ಪ, ಎನ್.ಪಿ. ನಾಗರಾಜಪ್ಪ, ಚಂದ್ರಪ್ಪ, ಎಸ್.ಟಿ. ಬಚ್ಚೇಗೌಡ, ಎಸ್.ಪಿ. ನಾರಾಯಣಸ್ವಾಮಿ, ಶಿಕ್ಷಕ ಬಿ.ನಾಗರಾಜು, ಎಂ.ವೈ. ಲಕ್ಷ್ಮಯ್ಯ, ಶಿಕ್ಷಕಿ ತಾಜೂನ್, ಅನಿತಾ, ಮತ್ತಿತರರು ಇದ್ದರು. ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು.

ಭ್ರಷ್ಟಾಚಾರದ ಬಗ್ಗೆ ಅರಿವು

0

ಭ್ರಷ್ಟಾಚಾರದ ಬಗ್ಗೆ ನಾಗರೀಕರಲ್ಲಿ ಅರಿವು ಮೂಡಿಸುವ ಸಲುವಾಗಿ ನಗರದ ಡಾಲ್ಫಿನ್ ವಿದ್ಯಾಸಂಸ್ಥೆಯ ಮಕ್ಕಳಿಂದ ಏರ್ಪಡಿಸಲಾಗಿದ್ದ ಜಾಥದಲ್ಲಿ ಭ್ರಷ್ಟಾಚಾರ ವಿರೋಧಿ ಘೋಷಣೆಗಳನ್ನು ಕೂಗುತ್ತಾ ನಗರದ ಮುಖ್ಯರಸ್ತೆಗಳಲ್ಲಿ ವಿದ್ಯಾರ್ಥಿಗಳು ಮೆರವಣಿಗೆ ನಡೆಸಿದರು.

ರಾಜ್ಯೋತ್ಸವ ನವೆಂಬರ್‍ಗೆ ಮಾತ್ರ ಸೀಮಿತವಲ್ಲ

0

ಕನ್ನಡ ರಾಜ್ಯೋತ್ಸವ ಎಂದರೆ ಕೇವಲ ನವೆಂಬರ್ ತಿಂಗಳಿಗೆ ಮಾತ್ರ ಸೀಮಿತಗೊಳಿಸದೇ ನಮ್ಮ ನಾಡು, ನುಡಿ, ಜಲ ರಕ್ಷಣೆಗೆ ನಾವೇನು ಮಾಡಬೇಕು ಎನ್ನುವುದರ ಕುರಿತು ಎಲ್ಲರೂ ಯೋಚಿಸುವ ಕೆಲಸವಾಗಬೇಕು ಎಂದು ಆದಿಚುಂಚನಗಿರಿ ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳಾನಂದನಾಥ ಸ್ವಾಮೀಜಿ ಹೇಳಿದರು.
ನಗರದ ಕೋಟೆ ವೃತ್ತದಲ್ಲಿ ಸಮಾನ ಮನಸ್ಕರ ವೇದಿಕೆ ವತಿಯಿಂದ 61 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಮಂಗಳವಾರ ಸಂಜೆ ಆಯೋಜಿಸಲಾಗಿದ್ದ ನಗೆಹಬ್ಬ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ನಮ್ಮ ದಿನನಿತ್ಯದ ಜೀವನದಲ್ಲಿ ನಮ್ಮ ಮಾತೃಭಾಷೆಯನ್ನು ಹೆಚ್ಚಾಗಿ ಬಳಸುವುದು ಸೇರಿದಂತೆ ನಮ್ಮ ಉಡುಗೆ ತೊಡುಗೆಯಲ್ಲಿಯೂ ನಮ್ಮ ಸಂಸ್ಕøತಿಯನ್ನು ಬೆಳಸುವ ಕೆಲಸವನ್ನು ಮಾಡಬೇಕು. ನಾಡು, ನುಡಿ, ಹಾಗು ನಮ್ಮ ಭಾಗದಲ್ಲಿರುವ ನೀರಿನ ಸಮಸ್ಯೆಗೆ ಪರಿಹಾರ ಸಿಗಬೇಕಾದರೆ ಕನ್ನಡಿಗರೆಲ್ಲರೂ ಒಗ್ಗಟ್ಟಾಗಬೇಕು ಎಂದರು.
ರಾಜ್ಯೋತ್ಸವದ ಹೆಸರಿನಲ್ಲಿ ಕನ್ನಡ ತೇರುಗಳ ಮೆರವಣಿಗೆ ಮಾಡಿ ನಗೆಹಬ್ಬ, ರಸಸಂಜೆಯಂತಹ ಕಾರ್ಯಕ್ರಮಗಳನ್ನು ಆಯೋಜಿಸಿ ಸಂಭ್ರಮಿಸುವುದರಿಂದ ರಾಜ್ಯೋತ್ಸವ ಆಚರಣೆಗೆ ಕಳೆ ಬರುವುದಿಲ್ಲ ಬದಲಿಗೆ ಪ್ರತಿಯೊಬ್ಬರೂ ಕನ್ನಡ ಭಾಷೆ, ನಾಡು, ಕಾಪಾಡುವ ಪಣ ತೊಡಬೇಕು ಎಂದರು.
ಕಾರ್ಯಕ್ರಮದಲ್ಲಿ ಹಾಸ್ಯ ಕಲಾವಿದರಾದ ಎಂ.ಎಸ್. ನರಸಿಂಹಮೂರ್ತಿ, ಅಸಾದುಲ್ಲಾ ಬೇಗ್, ಬೆಣ್ಣೆ ಬಸವರಾಜ್, ಜೀವನ್ ಸಾಬ್ ರಿಂದ ನಗೆ ಹಬ್ಬ ಆಯೋಜಿಸಲಾಗಿತ್ತು.
ಮಾಜಿ ಜಿ.ಪಂ ಸದಸ್ಯ ಎಸ್.ಎಂ. ನಾರಾಯಣಸ್ವಾಮಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಂದ್ರಗೌಡ, ಸಮಾನ ಮನಸ್ಕರ ವೇಧಿಕೆಯ ಅಧ್ಯಕ್ಷ ಜೆ.ಎಸ್. ವೆಂಕಟಸ್ವಾಮಿ, ಎ.ಎಂ. ತ್ಯಾಗರಾಜ್, ಪುರುಷೋತ್ತಮ್, ಕರವೇ ಅಧ್ಯಕ್ಷ ಶ್ರೀಧರ್, ತಾಲೂಕು ಬಿಜೆಪಿ ಅಧ್ಯಕ್ಷ ಬಿ.ಸಿ. ನಂದೀಶ್, ರೈತ ಸಂಘದ ತಾಲೂಕು ಅಧ್ಯಕ್ಷ ರವಿಪ್ರಕಾಶ್, ಅಪ್ಜಲ್ ಪಾಷ ಮತ್ತಿತರರು ಹಾಜರಿದ್ದರು.

ಪುಟಾಣಿ ಮಕ್ಕಲಿಂದ ಧ್ವಜಾರೋಹಣ

0

ತಾಲ್ಲೂಕಿನ ಮೇಲೂರಿನ ಚಂಗಲಾಯರೆಡ್ಡಿ ವೃತ್ತದಲ್ಲಿ ಮಂಗಳವಾರ ಡಾ. ರಾಜ್‍ಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ 61ನೇ ಕನ್ನಡ ರಾಜ್ಯೋತ್ಸವವನ್ನು ಪುಟಾಣಿ ಮಕ್ಕಲಿಂದ ಧ್ವಜಾರೋಹಣ, ಭುವನೇಶ್ವರಿ ಪಟಕ್ಕೆ ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಯಿತು.
ಡಾ. ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಸುದರ್ಶನ್, ಧರ್ಮೇಂದ್ರ, ಶ್ರೀನಿವಾಸ್‍ಮೂರ್ತಿ(ಪುಲಿ), ಕಸಾಪ ಹೋಬಳಿ ಘಟಕದ ಅಧ್ಯಕ್ಷ ಆರ್.ಎ. ಉಮೇಶ್, ರೂಪೇಶ್, ಕುಮಾರಸ್ವಾಮಿ, ಆನಂದ್, ಶಿವಕುಮಾರ್, ಶ್ರೀನಿವಾಸ್, ಗೋಪಾಲ್, ಕಸಾಪ ಉಪಾಧ್ಯಕ್ಷ ಸಿ.ಪಿ.ಇ ಕರಗಪ್ಪ, ಮತ್ತಿತರರು ಹಾಜರಿದ್ದರು.

ಕನ್ನಡ ರಾಜ್ಯೋತ್ಸವ

0

ನಗರದ ಸಮಾನ ಮನಸ್ಕರ ಹೋರಾಟ ಸಮಿತಿ ವತಿಯಿಂದ ಏರ್ಪಡಿಸಲಾಗಿದ್ದ 61 ನೇ ಕನ್ನಡ ರಾಜ್ಯೋತ್ಸವ ಹಾಗು ಕನ್ನಡ ಸಿರಿ ಹಬ್ಬ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ಹಾಗು ಮೆರವಣಿಗೆಗೆ ಚಾಲನೆ ನೀಡಿ ಕನ್ನಡ ನಾಡು, ನುಡಿಯ ರಕ್ಷಣೆ ಹಾಗೂ ಗಡಿಭಾಗಗಳ ರಕ್ಷಣೆ ಪ್ರತಿಯೊಬ್ಬ ಯುವಕರ ಆದ್ಯ ಕರ್ತವ್ಯವೆಂದು ಶಾಸಕ ಎಂ.ರಾಜಣ್ಣ ಮಾತನಾಡಿದರು.
ರಾಜ್ಯದ ಗಡಿ, ನೆಲ, ಜಲ, ಭಾಷೆ, ಸಂಸ್ಕøತಿ, ಪರಂಪರೆಯನ್ನು ಉಳಿಸಿಬೆಳೆಸುವಂತಹ ಹೊಣೆಗಾರಿಕೆ ಪ್ರತಿಯೊಬ್ಬ ನಾಗರೀಕರ ಮೇಲಿದೆ. ಅದರಲ್ಲೂ ವಿಶೇಷವಾಗಿ ಯುವಜನತೆ ನಾಡಿನ ಬಗ್ಗೆ ಹೆಚ್ಚು ಕಾಳಜಿ ವಹಿಸಿ ಕೆಲಸ ಮಾಡಬೇಕಾಗಿದೆ ಎಂದರು.

ನಗರದ ಸಮಾನ ಮನಸ್ಕರ ಹೋರಾಟ ಸಮಿತಿ ವತಿಯಿಂದ ಏರ್ಪಡಿಸಲಾಗಿದ್ದ 61 ನೇ ಕನ್ನಡ ರಾಜ್ಯೋತ್ಸವ ಹಾಗು ಕನ್ನಡ ಸಿರಿ ಹಬ್ಬ ಕಾರ್ಯಕ್ರಮದಲ್ಲಿ ವೀರಗಾಸೆ, ಗಾರುಡಿಗೊಂಬೆ ಮುಂತಾದ ಕಲಾತಂಡಗಳು ತಮಟೆ ನಾದದೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದುದು ನೋಡುಗರ ಮನಸೆಳೆಯುವಂತಿತ್ತು.
ನಗರದ ಸಮಾನ ಮನಸ್ಕರ ಹೋರಾಟ ಸಮಿತಿ ವತಿಯಿಂದ ಏರ್ಪಡಿಸಲಾಗಿದ್ದ 61 ನೇ ಕನ್ನಡ ರಾಜ್ಯೋತ್ಸವ ಹಾಗು ಕನ್ನಡ ಸಿರಿ ಹಬ್ಬ ಕಾರ್ಯಕ್ರಮದಲ್ಲಿ ವೀರಗಾಸೆ, ಗಾರುಡಿಗೊಂಬೆ ಮುಂತಾದ ಕಲಾತಂಡಗಳು ತಮಟೆ ನಾದದೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದುದು ನೋಡುಗರ ಮನಸೆಳೆಯುವಂತಿತ್ತು.

ರಾಜ್ಯೋತ್ಸವದ ಅಂಗವಾಗಿ ನಾಡಿನ ಹಿರಿಮೆ ಗರಿಮೆಗಳನ್ನು ಸಾರುವ ಸ್ತಬ್ಧ ಚಿತ್ರಗಳು ಸೇರಿದಂತೆ ವೇಷಭೂಷಣಗಳು, ಜಾನಪದ ಕಲಾ ಪ್ರದರ್ಶನ, ಮಂಗಳ ವಾದ್ಯಗಳೊಡನೆ ಭುವನೇಶ್ವರಿಯ ಮೆರವಣಿಗೆಯನ್ನು ಆಯೋಜಿಸಲಾಗಿತ್ತು.
ತಾಲ್ಲೂಕಿನ ವಿವಿದೆಡೆಯಿಂದ ಬಂದಿದ್ದ ಅಲಂಕೃತವಾದ ಟ್ರಾಕ್ಟರ್‍ಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು. ವೀರಗಾಸೆ, ಗಾರುಡಿಗೊಂಬೆ ಮುಂತಾದ ಕಲಾತಂಡಗಳು ತಮಟೆ ನಾದದೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದುದು ವಿಶೇಷವಾಗಿತ್ತು.
ಮೆರವಣಿಗೆಯಲ್ಲಿ ತಹಸೀಲ್ದಾರ್ ಕೆ.ಎಂ. ಮನೋರಮಾ, ತಾ.ಪಂ ಇಓ ವೆಂಕಟೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ರಘುನಾಥರೆಡ್ಡಿ, ಜಿ.ಪಂ ಸದಸ್ಯ ಬಂಕ್ ಮುನಿಯಪ್ಪ, ತಾ.ಪಂ ಅಧ್ಯಕ್ಷ ಲಕ್ಷ್ಮಿನಾರಾಯಣ, ನಗರಸಭೆ ಅಧ್ಯಕ್ಷ ಅಪ್ಸರ್ ಪಾಷ, ಸಮಾನ ಮನಸ್ಕರ ಹೋರಾಟ ಸಮಿತಿಯ ಜೆ.ಎಸ್. ವೆಂಕಟಸ್ವಾಮಿ, ಎ.ಎಂ. ತ್ಯಾಗರಾಜು, ಪುರುಷೋತ್ತಮ್, ಕರವೇ ತಾಲೂಕು ಅಧ್ಯಕ್ಷ ಶ್ರೀಧರ್, ರಾಜ್ಯ ರೈತ ಸಂಘ ಹಾಗು ಹಸಿರುಸೇನೆ ತಾಲ್ಲೂಕು ಅಧ್ಯಕ್ಷ ತಾದೂರು ಮಂಜುನಾಥ್, ರವಿಕುಮಾರ್, ಕಾರ್ಯದರ್ಶಿ ಪ್ರತೀಶ್, ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

ಪ್ರಾಚೀನ ಭಾಷೆ ಕನ್ನಡವನ್ನು ಉಳಿಸಿಕೊಳ್ಳಬೇಕು

0

ಕರ್ನಾಟಕದ ಗತಕಾಲದ ವೈಭವವನ್ನು ಸ್ಮರಿಸುವುದರೊಂದಿಗೆ ನಮ್ಮ ಮಾತೃ ಭಾಷೆಯ ಅಭಿವೃಧ್ದಿಗಾಗಿ ಎಲ್ಲರೂ ಶ್ರಮಿಸಬೇಕು ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ರಾಷ್ಟ್ರೀಯ/ನಾಡ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ನಗರದ ತಾಲ್ಲೂಕು ಕಛೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ 61 ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕನ್ನಡ ಭಾಷೆಗೆ ಬಹಳ ಪುರಾತನವಾದ ಹಿನ್ನೆಲೆಯಿದೆ, ದೇಶಕ್ಕೆ ಅನೇಕ ಮಂದಿ ದಿಗ್ಗಜರನ್ನು ನೀಡಿರುವಂತಹ ನಾಡಿನಲ್ಲಿ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಿ ಎಂದು ಹೇಳುವ ನಾವೇ ನಮ್ಮ ಮಾತೃಭಾಷೆಯಾದ ಕನ್ನಡವನ್ನು ಕಡೆಗಣಿಸುತ್ತಿದ್ದೇವೆ.
ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ಕೇರಳ ರಾಜ್ಯಗಳಿಗೆ ಹೋದರೆ ಅಲ್ಲಿನ ಸ್ಥಳೀಯ ಭಾಷೆಯಲ್ಲಿಯೆ ವ್ಯವಹರಿಸಬೇಕಾಗುತ್ತದೆ ಎಂದ ಅವರು ಅತ್ಯಂತ ಪ್ರಾಚೀನ ಭಾಷೆಯಾದ ಕನ್ನಡವನ್ನು ನಮ್ಮ ರಾಜ್ಯದಲ್ಲಿ ಉಳಿಸಿಕೊಳ್ಳಲು ಹೋರಾಟದ ಹಾದಿ ಹಿಡಿದಿರುವುದು ಶೋಚನೀಯ ಸಂಗತಿಯಾಗಿದೆ ಎಂದರು.

ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಏರ್ಪಡಿಸಲಾಗಿದ್ದ 61 ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಾಲೂಕು ಕಸಾಪ ವತಿಯಿಂದ ಕನ್ನಡ ಭಾಷೆಯಲ್ಲಿ ಶೇ 100 ರಷ್ಟು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಹಾಗು ಪ್ರಮಾಣಪತ್ರ ನೀಡಿ ಗೌರವಿಸಲಾಯಿತು.
ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಏರ್ಪಡಿಸಲಾಗಿದ್ದ 61 ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಾಲೂಕು ಕಸಾಪ ವತಿಯಿಂದ ಕನ್ನಡ ಭಾಷೆಯಲ್ಲಿ ಶೇ 100 ರಷ್ಟು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಹಾಗು ಪ್ರಮಾಣಪತ್ರ ನೀಡಿ ಗೌರವಿಸಲಾಯಿತು.

ನಿವೃತ್ತ ಪ್ರಾಂಶುಪಾಲ ಮಹಮ್ಮದ್ ಖಾಸಿಂ ಮಾತನಾಡಿ ವರ್ಷಕ್ಕೊಮ್ಮೆ ನವೆಂಬರ್ ತಿಂಗಳಲ್ಲಿ ಮಾತ್ರ ಕನ್ನಡ ಮಂತ್ರ ಜಪಿಸುವ ನಾವುಗಳು ನಮ್ಮ ಮಕ್ಕಳನ್ನು ಕನ್ನಡ ಭಾಷೆಯಿಂದ ದೂರವಿಡುವುದಷ್ಟೇ ಅಲ್ಲದೇ ಇಂಗ್ಲೀಷ್ ವ್ಯಾಮೋಹ ಬೆಳೆಸುತ್ತಿದ್ದೇವೆ ಎಂದರು.
ನಾವು ವರ್ಷಕ್ಕೊಮ್ಮೆ ರಾಜ್ಯೋತ್ಸವದ ಹೆಸರಿನಲ್ಲಿ ಹಬ್ಬ ಆಚರಿಸಿದ ಮಾತ್ರಕ್ಕೆ ಭಾಷೆ ಉಳಿಯುವುದಿಲ್ಲ ಬದಲಿಗೆ ಪ್ರತಿಯೊಬ್ಬರೂ ಕನ್ನಡ ಭಾಷೆಯನ್ನು ಮಾತನಾಡುವುದು ಸೇರಿದಂತೆ ಮಾತೃಭಾಷೆಯಲ್ಲಿ ವ್ಯವಹರಿಸಿದಾಗ ಮಾತ್ರ ಭಾಷೆ ಉಳಿಯುತ್ತದೆ ಎಂದರು.
ಮಾತೃ ಭಾಷೆಯ ಬಗ್ಗೆ ಅಭಿಮಾನ ಶೂನ್ಯರಾಗಿ, ಅನ್ಯ ಭಾಷೆಗಳನ್ನು ಪ್ರೀತಿಸುವ ಧೋರಣೆಯನ್ನು ಬದಿಗಿರಿಸಿ. ಕನ್ನಡ ಭಾಷೆಗೆ ನೀಡಬೇಕಾದ ಗೌರವ ನೀಡುವುದನ್ನು ಎಲ್ಲಿಯವರೆಗೆ ಕೊಡುವುದಿಲ್ಲವೋ ಅಲ್ಲಿಯವರೆಗೆ ನಮ್ಮ ಭಾಷೆ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ ಎಂದರು.
ಕಾರ್ಯಕ್ರಮದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ಭಾಷೆಯಲ್ಲಿ ಶೇ 100 ರಷ್ಟು ಅಂಕಗಳನ್ನು ಪಡೆದ ಮೂವರು ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ತಹಸೀಲ್ದಾರ್ ಕೆ.ಎಂ. ಮನೋರಮಾ, ಕ್ಷೇತ್ರಶಿಕ್ಷಣಾಧಿಕಾರಿ ಎಸ್. ರಘುನಾಥರೆಡ್ಡಿ, ಜಿಲ್ಲಾ ಪಂಚಾಯಿತಿ ಸದಸ್ಯ ಬಂಕ್ ಮುನಿಯಪ್ಪ, ನಗರಸಭೆ ಅಧ್ಯಕ್ಷ ಅಪ್ಸರ್‍ಪಾಷ, ತಾಲೂಕು ಪಂಚಾಯಿತಿ ಅಧ್ಯಕ್ಷೆ ಕೆ. ಲಕ್ಷ್ಮಿನಾರಾಯಣ, ಕ.ಸಾ.ಪ. ಅಧ್ಯಕ್ಷ ಬಿ.ಆರ್. ಅನಂತಕೃಷ್ಣ, ರಾಜ್ಯ ರೈತ ಸಂಘ ಹಾಗು ಜಿಲ್ಲಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, ಸರಕಾರಿ ನೌಕರರ ಸಂಘದ ಅಧ್ಯಕ್ಷ ಕೇಶವರೆಡ್ಡಿ, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಸಿ.ಎಂ.ಗೋಪಾಲ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಎಸ್.ಎಂ.ನಾರಾಯಣಸ್ವಾಮಿ ಮತ್ತಿತರರು ಹಾಜರಿದ್ದರು.

ಕಿಡಿಗೇಡಿಗಳಿಂದ ತೊಂದರೆ

0

ತಾಲ್ಲೂಕಿನ ಎಲ್. ಮುತ್ತುಕದಹಳ್ಳಿ ಗ್ರಾಮದ ಎಂ.ಮಂಜುನಾಥ್ ಎಂಬುವರಿಗೆ ಸೇರಿದ ಹಿಪ್ಪುನೇರಳೆ ಹಾಗು ಗುಲಾಬಿ ತೋಟಕ್ಕೆ ಅಳವಡಿಸಿದ್ದ ಹನಿ ನೀರಾವರಿ ಪೈಪುಗಳು ಸೇರಿದಂತೆ ಗೇಟ್ ವಾಲ್‍ಗಳನ್ನು ಕಿಡಿಗೇಡಿಗಳು ಒಡೆದುಹಾಕಿ ಪೈಪುಗಳನ್ನು ನಾಶಪಡಿಸಿರುವುದಷ್ಟೇ ಅಲ್ಲದೇ ಸುಮಾರು100-150 ಗಿಡಗಳನ್ನು ಬೇರು ಸಮೇತ ಕತ್ತುಹಾಕಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.
ಮಂಜುನಾಥ್ ತಂದೆ ಮುನಿಕೆಂಪಣ್ಣ ನವರ ಹೆಸರಿನಲ್ಲಿ ಗ್ರಾಮದ ಸರ್ವೇ ನಂ 4/1 ರಲ್ಲಿ 0-22 ಗುಂಟೆ, ಸರ್ವೇ ನಂ 4/2 ರಲ್ಲಿ 0-09 ಗುಂಟೆ ಹಾಗು ಸರ್ವೇ ನಂ 10ರಲ್ಲಿ 1-28 ಗುಂಟೆ ಜಮೀನಿದ್ದು ಈ ಪೈಕಿ ಅರ್ಧದಷ್ಟು ಜಮೀನಿನಲ್ಲಿ ಹಿಪ್ಪುನೇರಳೆ ಹಾಗು ಇನ್ನರ್ಧದಲ್ಲಿ ಗುಲಾಬಿ ಹೂವಿನ ಗಿಡಗಳನ್ನು ನಾಟಿ ಮಾಡಿದ್ದರು ಎನ್ನಲಾಗಿದ್ದು ಜಮೀನಿನಲ್ಲಿ ಅಳವಡಿಸಿದ್ದ ಹನಿ ನೀರಾವರಿ ಪೈಪುಗಳನ್ನು ಕಿತ್ತು ಹಾಕಿರುವುದು ಸೇರಿದಂತೆ ಸುಮಾರು 100-150 ಹೂವಿನ ಗಿಡಗಳನ್ನು ಬುಡ ಸಮೇತ ಕಿತ್ತುಹಾಕಿರುವ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು ಹಾಗು ನಮಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಮಂಜುನಾಥ್ ಶಿಡ್ಲಘಟ್ಟ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸ್ಥಳಕ್ಕೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಕನ್ನಡ ರಾಜ್ಯೋತ್ಸವ

0

ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ದೊರಕಿದ್ದರೂ ಕೂಡಾ ಇಂದಿಗೂ ಭಾಷೆಯ ಉಳಿವಿಗಾಗಿ ಹೋರಾಟ ನಡೆಸಬೇಕಾದಂತಹ ದುಸ್ಥಿತಿ ಒದಗಿ ಬಂದಿರುವುದು ಶೋಚನೀಯ ಸಂಗತಿಯಾಗಿದೆ ಎಂದು ಕಸಾಪ ಅಧ್ಯಕ್ಷ ಬಿ.ಆರ್. ಅನಂತಕೃಷ್ಣ ಹೇಳಿದರು.
ನಗರದ ಉಲ್ಲೂರು ಪೇಟೆಯಲ್ಲಿ ಸ್ನೇಹ ಯುವಕ ಸಂಘ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಕನ್ನಡ ನಾಡು, ನುಡಿಯ ರಕ್ಷಣೆ ಹಾಗೂ ಗಡಿಭಾಗಗಳ ರಕ್ಷಣೆ ಪ್ರತಿಯೊಬ್ಬ ಯುವಕರ ಆದ್ಯ ಕರ್ತವ್ಯ ಎಂದ ಅವರು ರಾಜ್ಯದ ಗಡಿ, ನೆಲ, ಜಲ, ಭಾಷೆ, ಸಂಸ್ಕøತಿ, ಪರಂಪರೆಯನ್ನು ಉಳಿಸಿಬೆಳೆಸುವಂತಹ ಹೊಣೆಗಾರಿಕೆ ಪ್ರತಿಯೊಬ್ಬ ನಾಗರೀಕರ ಮೇಲಿದೆ. ಅದರಲ್ಲೂ ವಿಶೇಷವಾಗಿ ಯುವಜನತೆ ನಾಡಿನ ಬಗ್ಗೆ ಹೆಚ್ಚು ಕಾಳಜಿ ವಹಿಸಿ ಕೆಲಸ ಮಾಡಬೇಕಾಗಿದೆ ಎಂದರು.
ರಾಜ್ಯದಲ್ಲಿ ಕನ್ನಡ ಭಾಷೆ ಉಳಿದಿದೆಯೆಂದರೆ ಅದು ಕೇವಲ ಗ್ರಾಮೀಣ ಪ್ರದೇಶಗಳಿಂದ ಮಾತ್ರ, ಇಂದು ಬದಲಾಗುತ್ತಿರುವ ಜನರ ಜೀವನಶೈಲಿಯಿಂದಾಗಿ ನಗರ ಪ್ರದೇಶಗಳಲ್ಲಿ ಕನ್ನಡ ಭಾಷೆಯನ್ನು ಹುಡುಕಾಡಬೇಕಾದಂತಹ ದುಸ್ಥಿತಿ ಒದಗಿ ಬಂದಿದೆ. ಎಲ್ಲಾ ರಾಜ್ಯಗಳ ಜನತೆಗೆ ಆಸರೆಯನ್ನು ನೀಡುತ್ತಾ ಸಹೃದಯತೆಯಿಂದ ಎಲ್ಲರನ್ನೂ ಸ್ವಾಗತಿಸುವಂತಹ ರಾಜ್ಯದಲ್ಲಿ ಅನ್ಯ ಬಾಷಿಕರಿಂದ ಕನ್ನಡಿಗರ ಮೇಲೆ ನಿರಂತರವಾಗಿ ದೌರ್ಜನ್ಯಗಳು, ದಬ್ಬಾಳಿಕೆಗಳು ನಡೆಯುತ್ತಲೇ ಇವೆ. ಈ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸುವ ಮೂಲಕ ರಾಜ್ಯದಲ್ಲಿನ ಎಲ್ಲಾ ಸರ್ಕಾರಿ ಆದೇಶಗಳನ್ನು ಕನ್ನಡ ಭಾಷೆಯಲ್ಲಿಯೆ ಹೊರಡಿಸಬೇಕು ಎಂದರು.

ಟ್ರೋಫಿ ಗೆದ್ದ ಕೋಲಾರ ಜಗದೀಶ್‌ ತಂಡ

0

ರಾಷ್ಟ್ರಕ್ಕೆ ಅತ್ಯುತ್ತಮ ವಾಲಿಬಾಲ್‌ ಕ್ರೀಡಾಪಟುಗಳನ್ನು ನೀಡಿದ ಕೀರ್ತಿ ಶಿಡ್ಲಘಟ್ಟದ್ದು. ಯುವಕರಿಗೆ ಉತ್ತೇಜನ ನೀಡಿದಲ್ಲಿ ಭವಿಷ್ಯದಲ್ಲಿ ಒಳ್ಳೆಯ ಕ್ರೀಡಾಳುಗಳು ನಮ್ಮ ತಾಲ್ಲೂಕಿನಿಂದ ಹೊರಹೊಮ್ಮುತ್ತಾರೆ ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ನಗರದ ನೆಹರೂ ಕ್ರೀಡಾಂಗಣದಲ್ಲಿ ಭಾನುವಾರ ರಾತ್ರಿ ದೀಪಾವಳಿ ಹಬ್ಬ ಹಾಗೂ ಎಸ್‌.ಮುನಿಶಾಮಪ್ಪನವರ ಜ್ಞಾಪಕಾರ್ಥ ನಡೆದ ಹೊನಲು ಬೆಳಕಿನ ರಾಜ್ಯಮಟ್ಟದ ವಾಲಿಬಾಲ್‌ ಪಂದ್ಯದಲ್ಲಿ ವಿಜೇತರಿಗೆ ಬಹುಮಾನವನ್ನು ವಿತರಿಸಿ ಅವರು ಮಾತನಾಡಿದರು.
ಕ್ರೀಡೆಯಲ್ಲಿ ಆರೋಗ್ಯಕರವಾದ ಸ್ಪರ್ಧೆಯಿರಬೇಕು. ಕ್ರೀಡೆಯಲ್ಲಿ ಕೆಲವರಿಗೆ ಅಪಾರ ಪ್ರತಿಭೆ ಮತ್ತು ಆಸಕ್ತಿ ಇರುತ್ತದೆ. ಅಂಥಹವರನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಹಿಂದಿನಿಂದಲೂ ಶಿಡ್ಲಘಟ್ಟದಲ್ಲಿ ವಾಲಿಬಾಲ್‌ ಕ್ರೀಡೆಗೆ ಅಪಾರ ಜನಮನ್ನಣೆಯಿದೆ. ಅಷ್ಟೇ ಪ್ರಮಾಣದಲ್ಲಿ ಕ್ರೀಡಾಪಟುಗಳು ಸಹ ಇದ್ದಾರೆ. ಹೊಸ ಪೀಳಿಗೆಯು ತಾಲ್ಲೂಕಿನ ಕೀರ್ತಿ ಹೆಚ್ಚಿಸುವಂತಾಗಲಿ ಎಂದು ಹೇಳಿದರು.
ಪ್ರಥಮ ಬಹುಮಾನ 30 ಸಾವಿರ ರೂ ಮತ್ತು ಟ್ರೋಫಿಯನ್ನು ಕೋಲಾರ ಜಗದೀಶ್‌ ತಂಡ ಗೆದ್ದರೆ, ದ್ವಿತೀಯ ಬಹುಮಾನ 20 ಸಾವಿರ ರೂ ಮತ್ತು ಟ್ರೋಫಿಯನ್ನು ತಾಲ್ಲೂಕಿನ ಭಗತ್‌ಸಿಂಗ್‌ ಅಥ್ಲೆಟಿಕ್‌ ಅಸೋಸಿಯೇಷನ್‌ ತಂಡ ಪಡೆಯಿತು. ತೃತೀಯ ಬಹುಮಾನ 15 ಸಾವಿರ ರೂಗಳನ್ನು ಬೆಂಗಳೂರಿನ ಕೆ.ಎಸ್‌.ಪಿ ತಂಡ ಮತ್ತು ನಾಲ್ಕನೆಯ ಬಹುಮಾನ 7,500 ರೂಗಳನ್ನು ಶಿಡ್ಲಘಟ್ಟ ಫ್ರೆಂಡ್ಸ್‌ ಪಡೆದವು.
ತಾಲ್ಲೂಕು ಪಂಚಾಯತಿ ಅಧ್ಯಕ್ಷ ಕೆ.ಲಕ್ಷ್ಮೀನಾರಾಯಣರೆಡ್ಡಿ, ನಗರಸಭಾ ಅಧ್ಯಕ್ಷ ಅಫ್ಸರ್‌ಪಾಷ, ಸದಸ್ಯ ಲಕ್ಷ್ಮಣ್‌, ಜಿಲ್ಲಾ ಪಂಚಾಯತಿ ಸದಸ್ಯ ಬಂಕ್‌ ಮುನಿಯಪ್ಪ, ಮೇಲೂರು ಆರ್‌.ಎ.ಉಮೇಶ್‌ ಮತ್ತಿತರರು ಹಾಜರಿದ್ದರು.

ಮಹಿಳೆಯರಿಗೆ ಕಾನೂನಿನ ಅರಿವು ಅತ್ಯಗತ್ಯ

0

ಬದಲಾಗುತ್ತಿರುವ ಸಾಮಾಜಿಕ ಹಾಗು ಕೌಟುಂಬಿಕ ವ್ಯವಸ್ಥೆಗೆ ಅನುಗುಣವಾಗಿ ಮಹಿಳೆಯರಿಗೆ ಕಾನೂನಿನ ಅರಿವು ಅತ್ಯಗತ್ಯ, ಈ ವಿಷಯದಲ್ಲಿ ಅರಿವು ಮೂಡಿಸಲು ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಇದರ ಸದುಪಯೋಗವನ್ನು ಮಹಿಳೆಯರು ಪಡೆದುಕೊಳ್ಳಬೇಕು ಎಂದು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಟಿ.ಎಲ್.ಸಂದೀಶ್ ಹೇಳಿದರು.
ನಗರದ ಬಸ್ ನಿಲ್ದಾಣದ ಬಳಿಯಿರುವ ಬಿವಿಆರ್ ಕಾಂಪ್ಲೆಕ್ಸ್‌ನಲ್ಲಿ ಗುರುವಾರ ಸೌಂದರ್ಯ ಗ್ರಾಮೀಣ ಹಾಗೂ ಪಟ್ಟಣ ಅಭಿವೃದ್ಧಿ ಸಂಸ್ಥೆ ವತಿಯಿಂದ ಜಿಲ್ಲಾ ಪಂಚಾಯತಿಯ ರಾಜೀವ್‌ಗಾಂಧಿ ಚೈತನ್ಯ ಯೋಜನೆಯಡಿಯಲ್ಲಿ ಆಯೋಜಿಸಲಾಗಿರುವ ಗ್ರಾಮೀಣ ಪ್ರದೇಶದ ನಿರುದ್ಯೋಗಿ ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ ಹಾಗೂ ಬ್ಯುಟೀಷಿಯನ್ ತರಬೇತಿ ಶಿಬಿರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕೌಟುಂಬಿಕ ದೌರ್ಜನ್ಯಕೊಳ್ಳಗಾದ ಯಾವುದೇ ಮಹಿಳೆ ನೇರವಾಗಿ ತಾಲ್ಲೂಕು ಕಾನೂನು ಸೇವಾ ಪ್ರಾಧಿಕಾರಕ್ಕೆ ದೂರು ಸಲ್ಲಿಸಿದಲ್ಲಿ ಆಕೆಗೆ ಬೇಕಾದ ರಕ್ಷಣೆ ಸೇರಿದಂತೆ ಯಾವುದೇ ಶುಲ್ಕವಿಲ್ಲದೇ ಉಚಿತವಾಗಿ ಆಕೆಗೆ ನ್ಯಾಯ ದೊರಕಿಸಲು ವಕೀಲರನ್ನು ನೇಮಿಸಿಕೊಡಲಾಗುವದು ಎಂದರು.
ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎಂ.ಪಾಪಿರೆಡ್ಡಿ ಮಾತನಾಡಿ ಮಹಿಳೆಯರಿಗಾಗಿ ಇಂದು ಅನೇಕ ಕಾನೂನುಗಳು ಜಾರಿಯಲ್ಲಿದ್ದು ಅದರ ಸದುಪಯೋಗ ಪಡೆದುಕೊಳ್ಳಬೇಕು. ಕಾನೂನು ಚೌಕಟ್ಟಿನಲ್ಲಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡಾಗ ಮಾತ್ರ ಸಮಾಜದಲ್ಲಿ ಹೆಚ್ಚಾಗುತ್ತಿರುವ ಅಪರಾಧ ಪ್ರಕರಣಗಳು ಕಡಿಮೆಯಾಗುತ್ತವೆ, ಮಹಿಳೆಯರಲ್ಲಿ ಭಾವನಾತ್ಮಕ ಸಂಬಂಧಗಳು ಕಡಿಮೆಯಾಗುತ್ತಿರುವುದರಿಂದ ಕೌಟುಂಬಿಕ ಕಲಹಗಳು ಹೆಚ್ಚಾಗುತ್ತಿದ್ದು, ಮಹಿಳೆಯರು ಮಕ್ಕಳಿಗೆ ಉತ್ತಮವಾದ ಶಿಕ್ಷಣವನ್ನು ನೀಡುವ ಮೂಲಕ ಸಮಾಜದಲ್ಲಿ ಉತ್ತಮವಾದ ಪ್ರಜೆಗಳನ್ನಾಗಿ ರೂಪಿಸಬೇಕು ಎಂದರು.
ಮಹಿಳೆಯರ ಆರೋಗ್ಯದ ಬಗ್ಗೆ ಡಾ.ವಿಜಯ್‌ಕುಮಾರ್ ಮಾತನಾಡಿದರೆ ಬಾಲ್ಯವಿವಾಹದ ಬಗ್ಗೆ ವಕೀಲೆ ಆರ್.ವೀಣಾ ಮಾತನಾಡಿದರು.
ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕ ಭಾಸ್ಕರ್, ಸೌಂದರ್ಯ ಗ್ರಾಮೀಣ ಹಾಗು ಪಟ್ಟಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷೆ ಡಾ.ವಿಜಯಾ, ಕಾರ್ಯದರ್ಶಿ ವೆಂಕಟರೋಣಪ್ಪ, ಮುಖಂಡರಾದ ಬಿ.ವಿ.ಮುನೇಗೌಡ, ವೆಂಕಟಮೂರ್ತಿ, ತಾಲ್ಲೂಕು ವಕೀಲರ ಸಂಘದ ಕಾರ್ಯದರ್ಶಿ ಬೈರಾರೆಡ್ಡಿ, ವಕೀಲರಾದ ಯಣ್ಣಂಗೂರು ಮಂಜುನಾಥ್, ಎಂ.ಬಿ.ಲೋಕೇಶ್, ಚಂದ್ರೇಗೌಡ, ವೆಂಕಟರೆಡ್ಡಿ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ರೈತ ಸಂಘದಿಂದ ವಿದ್ಯುತ್‌ ಸಮಸ್ಯೆಯನ್ನು ಬಗೆಹರಿಸಲು ಮನವಿ

0

ವಿದ್ಯುತ್‌ ಸಮಸ್ಯೆ ತೀವ್ರವಾಗಿದ್ದು ತಕ್ಷಣ ಸರಿಪಡಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಸದಸ್ಯರು ತಾಲ್ಲೂಕಿನ ಜಂಗಮಕೋಟೆ ಉಪವಿಭಾಗದ ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಅವರಿಗೆ ಗುರುವಾರ ಮನವಿಯನ್ನು ಸಲ್ಲಿಸಿದರು.
ಜಿಲ್ಲೆಯು ಬರಪೀಡಿತವಾಗಿದ್ದು, ತಾಲ್ಲೂಕಿನ ಜಂಗಮಕೋಟೆಯಾದ್ಯಂತ ವಿದ್ಯುತ್‌ ಅಭಾವ ತೀವ್ರವಾಗಿದೆ. ಜನ ಜಾನುವಾರುಗಳಿಗೆ ನೀರಿನ ಸಮಸ್ಯೆ ತಲೆದೋರಿದೆ. ಲಕ್ಷಾಂತರ ರೂಗಳಷ್ಟು ಸಾಲ ಮಾಡಿ ಇಟ್ಟ ಬೆಳೆಗಳು ನೀರು ಹರಿಸದೆ ಒಣಗುತ್ತಿವೆ. ರೈತರು ನಗರ ಪ್ರದೇಶಕ್ಕೆ ಗುಳೆ ಹೋಗುವ ಪರಿಸ್ಥಿತಿ ಮೂಡಿದೆ. ವಿದ್ಯಾರ್ಥಿಗಳಿಗೆ ಸಹ ವ್ಯಾಸಂಗಕ್ಕೆ ತೊಂದರೆಯಾಗುತ್ತಿದೆ. ರೈತರು ಅಕ್ರಮ ಸಕ್ರಮ ಯೋಜನೆಯಲ್ಲಿ 18 ಸಾವಿರ ರೂಗಳನ್ನು ಕಟ್ಟಿದ್ದರೂ ಇದುವರೆಗೂ ವಿದ್ಯುತ್‌ ಪರಿವರ್ತಕವನ್ನು ಅಳವಡಿಸಿಲ್ಲ. ತಕ್ಷಣವೇ ಅಳವಡಿಸಬೇಕೆಂದು ಒತ್ತಾಯಿಸಿದರು.
ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ತಾಲ್ಲೂಕು ಅಧ್ಯಕ್ಷ ಎಸ್‌.ಎಂ.ರವಿಪ್ರಕಾಶ್‌, ಕಾರ್ಯದರ್ಶಿ ಪ್ರತೀಶ್‌, ರಮೇಶ, ದೇವರಾಜ್, ವೆಂಕಟೇಶ್‌, ನಾರಾಯಣಸ್ವಾಮಿ ಮತ್ತಿತರರು ಹಾಜರಿದ್ದರು.

ತಾಲ್ಲೂಕು ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷರ ಆಯ್ಕೆ

0

ತಾಲ್ಲೂಕು ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷರಾಗಿ ದೇವರಮಳ್ಳೂರು ಎ.ವೆಂಕೋಬರಾವ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ತಾಲ್ಲೂಕು ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷರಾಗಿದ್ದ ಎಂ.ಮುನಿಗುರ್ರಪ್ಪ ನಿಧನರಾದ ಕಾರಣ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಪ್ರಕ್ರಿಯೆ ನಡೆದಿತ್ತು. ಕಾರ್ಯದರ್ಶಿಯಾಗಿ ಎಸ್‌.ಎನ್‌.ಸತ್ಯನಾರಾಯಣಶೆಟ್ಟಿ, ಖಜಾಂಚಿಯಾಗಿ ಎಂ.ಶ್ರೀನಿವಾಸಮೂರ್ತಿ, ನಿರ್ದೇಶಕರಾಗಿ ಬಿ.ಕೆ.ಮುನಿರತ್ನಾಚಾರ್‌, ಎಂ.ಕೃಷ್ಣಪ್ಪ, ಕೆ.ಜಯರಾಮ್‌, ಎನ್‌.ಸರೋಜಮ್ಮ, ಭ್ರಮರಾಂಭ, ಎಸ್‌.ಹನುಮಪ್ಪ, ಜಿ.ಆರ್‌.ರಂಗಪ್ಪ ಮತ್ತು ಡಿ.ಆರ್‌.ನರಸಿಂಹರಾಜು ಆಯ್ಕೆಯಾಗಿದ್ದಾರೆ.

ಪಟಾಕಿಗಳ ಶಬ್ದ ಬಾವಲಿಗಳ ನೆಮ್ಮದಿ ಕೆಡಿಸಿದೆ

0

ನಗರದ ಹೊರವಲಯದಲ್ಲಿನ ಬಾವಲಿ ಮರಗಳ ಕೆಳಗೆ ಜನ ವಿವೇಚನಾ ರಹಿತವಾಗಿ ಸಿಡಿಸುವ ಪಟಾಕಿಗಳ ಶಬ್ದ ಬಾವಲಿಗಳ ನೆಮ್ಮದಿ ಕೆಡಿಸಿದೆ.
ಪಟಾಕಿ ಸಿಡಿಸಿದಾಗ ಉಂಟಾಗುವ ಭಾರಿ ಶಬ್ದ ಮತ್ತು ಹೊಗೆಯಿಂದ ಕಂಗೆಟ್ಟ ಬಾವಲಿಗಳು ಭಯದಿಂದ ಕೊಂಬೆಗಳನ್ನು ಬಿಟ್ಟು ಬಾನೆತ್ತರದಲ್ಲಿ ಚೀರುತ್ತಾ ಹಾರುವ ದೃಶ್ಯ ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿದೆ.
ಈ ಮರಗಳು ನಗರದ ಚಿಂತಾಮಣಿ ರಸ್ತೆಯಲ್ಲಿನ ನಗರ ಸಭೆ ಉದ್ಯಾನವನದ ಆಸುಪಾಸಿನಲ್ಲಿವೆ. ಇಲ್ಲಿ ಸಾವಿರಾರು ಬಾವಲಿಗಳು ಬೀಡುಬಿಟ್ಟಿವೆ. ದೀಪಾವಳಿ ಹಬ್ಬ ಹತ್ತಿರ ಬರುತ್ತಿದ್ದಂತೆ ಪಟಾಕಿ ಸಿಡಿಸುವುದು ಮಾಮೂಲಾಗಿದೆ.
ಬಾವಲಿಗಳು ಎಲ್ಲೆಂದರಲ್ಲಿ ಇರುವುದಿಲ್ಲ. ಎತ್ತರವಾದ, ಆದರೆ ಅಲ್ಲಿನ ಎತ್ತರದ ಮರಗಳಲ್ಲಿ ಮನೆ ಮಾಡಿಕೊಂಡಿರುವ ಬಾವಲಿಗಳು ಸಿಡಿ ಮದ್ದಿನ ಶಬ್ದ, ಹೊಗೆ ಮತ್ತು ವಾಸನೆ ಯಿಂದ ಬಳಲಿ ರೆಕ್ಕೆ ಬಿಚ್ಚಿ ಚೀರುತ್ತ ಹಾರಿ ಮನುಷ್ಯನ ವಿವೇಚನಾ ರಹಿತ ಕೃತ್ಯದ ಬಗ್ಗೆ ಸಾರುತ್ತವೆ.
ಇಷ್ಟಾದರೂ ಈ ಅಪರೂಪದ ಹಾರಾಡುವ ಸಸ್ತನಿಗಳು ಮರಗಳು ಹಾಗೂ ತಮಗೆ ತೊಂದರೆ ಇರದ ಕಡೆ ಅವು ಗುಂಪು ಗುಂಪಾಗಿ ಜಮಾಯಿಸುತ್ತವೆ. ನಿಶಾಚರ ಜೀವಿಗಳಾದ ಇವು ರಾತ್ರಿ ವೇಳೆ ತಮ್ಮ ಆಹಾರವನ್ನು ಹುಡುಕಿಕೊಂಡು ಹೋಗುತ್ತವೆ. ಹಗಲಿನಲ್ಲಿ ಈ ಎತ್ತರದ ಮರಗಳಲ್ಲಿ ಬೀಡು ಬಿಡುತ್ತವೆ. ರೈತನಿಗೆ ಮಾರಕವಾದ ಕೀಟಗಳನ್ನು ಇವು ತಿನ್ನುವುದರಿಂದ ಉಪಕಾರಿ ಪ್ರಾಣಿಯಾಗಿದೆ. ಬಾವಲಿಗಳು ನಗರದ ಹೆಮ್ಮೆ. ಹಗಲು ಹೊತ್ತಿನಲ್ಲಿ ಮರಗಳಿಗೆ ತಲೆ ಕೆಳಗಾಗಿ ಜೋತು ಬಿದ್ದಿರುವ ಸಾವಿರಾರು ಬಾವಲಿಗಳು ಹೊರ ಊರುಗಳಿಂದ ಬರುವ ಪ್ರಯಾಣಿಕರ ಗಮನ ಸೆಳೆಯುತ್ತವೆ.
ಜನಸಂದಣಿಯಿಂದಾಗಿ ರಕ್ಷಣೆ ದೊರೆಯುವುದರಿಂದ ಅವು ಕೆಲವು ದಶಕಗಳಿಂದ ಈ ಮರಗಳನ್ನು ಆಶ್ರಯಿಸಿವೆ. ಬಾವಲಿ ಮರಗಳ ಹತ್ತಿರ ಪಟಾಕಿ ಸಿಡಿಸುವುದನ್ನು ನಿಷೇಧಿಸಬೇಕು. ಅವು ವಾಸಿಸುವ ಪ್ರದೇಶವನ್ನು ರಕ್ಷಿತ ಪ್ರದೇಶ ಎಂದು ಘೋಷಿಸಬೇಕು ಎಂಬುದು ಪರಿಸರವಾದಿಗಳ ಆಶಯ. ಇದಕ್ಕೆ ನಗರಸಭೆ ಕ್ರಮಕೈಗೊಳ್ಳಬೇಕು.

ಹುಲ್ಲಿನ ಮೆದೆಗೆ ಬೆಂಕಿ

0

ಬೆಸ್ಕಾಂ ಇಲಾಖೆಯ ನಿರ್ಲಕ್ಷ್ಯದಿಂದಾಗಿ ಸುಮಾರು ೩೦ ಸಾವಿರ ರೂ ಬೆಲೆಬಾಳುವ ಒಣಹುಲ್ಲು ಸುಟ್ಟುಹೋಗಿರುವ ಘಟನೆ ತಾಲ್ಲೂಕಿನ ಗೆಜ್ಜಿಗಾನಹಳ್ಳಿ ಗ್ರಾಮದಲ್ಲಿ ಬುಧವಾರ ಮದ್ಯಾಹ್ನ ನಡೆದಿದೆ.
ತಾಲ್ಲೂಕಿನ ವೈ ಹುಣಸೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗೆಜ್ಜಿಗಾನಹಳ್ಳಿ ಗ್ರಾಮದ ಶಂಕರಪ್ಪ ಎಂಬುವವರಿಗೆ ಸೇರಿದ ಹುಲ್ಲಿನ ಮೆದೆಗೆ ಬೆಂಕಿ ಬಿದ್ದು ಸಂಪೂರ್ಣ ಸುಟ್ಟುಹೋಗಿದೆ.
ಘಟನೆಯ ಬಗ್ಗೆ ಬೆಸ್ಕಾಂ ಇಲಾಖೆ ಹಾಗು ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿ ಗಂಟೆಗಳಾದರೂ ಸ್ಥಳಕ್ಕೆ ಬಾರದೇ ಇದ್ದುದರಿಂದ ಹುಲ್ಲಿನ ಮೆದೆ ಸಂಪೂರ್ಣವಾಗಿ ಸುಟ್ಟುಹೋಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ದುಷ್ಕರ್ಮಿಗಳು ಔಷಧಿ ಸಿಂಪಡಿಸಿದ್ದರಿಂದ ಬೆಳೆ ನಾಶ

0

ದುಷ್ಕರ್ಮಿಗಳು ಔಷಧಿಯನ್ನು ಸಿಂಪಡಣೆ ಮಾಡಿರುವ ಪರಿಣಾಮವಾಗಿ ಸುಮಾರು ಒಂದು ಲಕ್ಷ ರೂಪಾಯಿಗಳ ಮೌಲ್ಯದ ರೇಷ್ಮೆಬೆಳೆ ನಷ್ಟವಾಗಿದೆ ಎಂದು ಆನೂರು ಗ್ರಾಮದ ರೈತ ನಾಗರಾಜು ತಿಳಿಸಿದ್ದಾರೆ.
ತಾಲ್ಲೂಕಿನ ಆನೂರು ಗ್ರಾಮದ ನಾಗರಾಜು ಎಂಬ ರೈತ ೩೦೦ ಮೊಟ್ಟೆ ರೇಷ್ಮೆಹುಳುಗಳನ್ನು ಸಾಕಾಣಿಕೆ ಮಾಡಿದ್ದು, ಹುಳುಗಳು ಹಣ್ಣಾಗುವ ಹಂತಕ್ಕೆ ಬಂದಿದ್ದಾಗ, ರಾತ್ರಿಯ ವೇಳೆಯಲ್ಲಿ ದುಷ್ಕರ್ಮಿಗಳು ಹಿಪ್ಪುನೇರಳೆ ತೋಟಕ್ಕೆ ಔಷಧಿ ಸಿಂಪಡಣೆ ಮಾಡಿದ್ದಾರೆ. ಔಷಧಿ ಸಿಂಪಡಣೆಗೊಂಡಿರುವ ಸೊಪ್ಪು ತಿಂದ ಹುಳುಗಳು ಹಣ್ಣಾಗಿಲ್ಲ, ಅಲ್ಪಸ್ವಲ್ಪ ಹಣ್ಣಾಗಿದ್ದು ಅವು ಗೂಡುಕಟ್ಟುತ್ತಿಲ್ಲ. ಇದರಿಂದಾಗಿ ಮಕ್ಕಳ ವಿದ್ಯಾಭ್ಯಾಸಕ್ಕೆ ಹಣವನ್ನು ಒದಗಿಸುವ ಆಸೆಯನ್ನಿಟ್ಟುಕೊಂಡಿದ್ದ ರೈತ ನಾಗರಾಜು ಕುಟುಂಬ ಆತಂಕಕ್ಕೆ ಒಳಗಾಗಿದ್ದಾರೆ.
ಸ್ಥಳಕ್ಕೆ ಬೇಟಿ ನೀಡಿದ್ದ ರೇಷ್ಮೆ ಇಲಾಖೆಯ ವಿಸ್ತರಣಾಧಿಕಾರಿ ಎಂ.ನಾರಾಯಣಸ್ವಾಮಿ ಪರಿಶೀಲನೆ ನಡೆಸಿ ಇಲಾಖೆಯಿಂದ ಯಾವುದೇ ಪರಿಹಾರ ಸಿಗುವುದಿಲ್ಲವೆಂದು ತಿಳಿಸಿದ್ದಾರೆ.

ಅಪಘಾತ ಬಬ್ಬ ಮೃತ

0

ನಗರದ ಹೊರವಲಯದ ಚಿಂತಾಮಣಿ ಹಾಗೂ ಹೊಸಕೋಟೆ ಬೈಪಾಸ್‌ ರಸ್ತೆಯ ಬಳಿ ಟ್ರಾಕ್ಕರ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ಬಬ್ಬ ವ್ಯಕ್ತಿ ಮೃತಪಟ್ಟಿರು ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.
ತಾಲ್ಲೂಕಿನ ದೇವರಮಳ್ಳೂರು ನಿವಾಸಿಯಾದ ಚಿಕ್ಕಮುನಿತಾಯಪ್ಪ(೫೨) ಮೃತ ವ್ಯಕ್ತಿ. ನಗರದ ಬಸ್ ನಿಲ್ದಾಣದ ಬಳಿ ಚರಂಡಿಯಲ್ಲಿ ಗೊಬ್ಬರವನ್ನು ತುಂಬಿಸಿಕೊಂಡು ನಗರದ ಹೊರ ವಲಯಕ್ಕೆ ಸಾಗಿಸಿಕೊಂಡು ಹೊಗುತ್ತಿದ್ದ, ಟ್ಯಾಕ್ಕರ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಚಿಕ್ಕಮುನಿತಾಯಪ್ಪಗೆ ತಲೆಯ ಮೇಲೆ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಟ್ಯಾಕ್ಕರ್ ತಾಲ್ಲೂಕಿನ ಇದ್ದಲೂಡು ಗ್ರಾಮಕ್ಕೆ ಸೇರಿದ್ದು, ಟ್ಯಾಕ್ಕರ್ ಚಾಲಕ ಸ್ಥಳದಲ್ಲೇ ಟ್ಯಾಕ್ಕರ್ ಬಿಟ್ಟು ಪರಾರಿಯಾಗಿದ್ದಾನೆ. ಮೃತ ವ್ಯಕ್ತಿಗೆ ಇಬ್ಬರು ಮಕ್ಕಳು ಹಾಗೂ ಪತ್ನಿ ಇದ್ದಾರೆ. ಇಬ್ಬರು ಮಕ್ಕಳು ವ್ಯಾಸಂಗ ಮಾಡುತ್ತೀದ್ದಾರೆ. ಸ್ಥಳಕ್ಕೆ ಆಗಮಿಸಿದ ನಗರದ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳವನ್ನು ಪರಿಶೀಲಿಸಿ ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಜಿಲ್ಲಾ ಪಂಚಾಯತಿ ಅಧ್ಯಕ್ಷರ ವರ್ತನೆಗೆ ದ.ಸಂ.ಸ ಆಕ್ರೊಶ

0

ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ ಅಧ್ಯಕ್ಷ ಪಿ.ಎಂ.ಕೇಶವರೆಡ್ಡಿಯವರು ಇತರ ಜಿ.ಪಂ ಸದಸ್ಯರೊಂದಿಗೆ ಸೌಜನ್ಯವಾಗಿ ವರ್ತಿಸುವುದು ಸೇರಿದಂತೆ ಗೌರವಿಸುವುದನ್ನು ಮೊದಲು ರೂಡಿಸಿಕೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಸಿ.ಎಂ.ಮುನಿಯಪ್ಪ (ಮುನಯ್ಯ) ಹೇಳಿದರು.
ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಘೋಷ್ಠಿ ನಡೆಸಿ ಮಾತನಾಡಿದ ಅವರು ಕಳೆದ ಅ ೨೧ ರಂದು ಜಿಲ್ಲಾ ಕೇಂದ್ರವಾದ ಚಿಕ್ಕಬಳ್ಳಾಫುರ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರಗತಿ ಪರಿಶಿಲನಾ ಸಭೆಯಲ್ಲಿ ಜಿಲ್ಲಾ ಪಂಚಾಯತಿ ಸದಸ್ಯ ರಾಜಾಕಾಂತ್ ಮಾತನಾಡಿ ಜಿಲ್ಲೆಯಾದ್ಯಂತ ಎಸ್ ಸಿ ಪಿ ಹಾಗೂ ಟಿ ಎಸ್ ಪಿ ಯೋಜನೆಯಡಿ ಭಾರೀ ಅವ್ಯವಹಾರ ನಡೆದಿದೆ. ಗ್ರಾಮ ಪಂಚಾಯತಿಗಳಲ್ಲಿ ನಡೆಯುವ ಗ್ರಾಮಸಭೆಗಳಲ್ಲಿ ಯಾವುದೇ ಅಧಿಕಾರಿಗಳು ಭಾಗವಹಿಸಲ್ಲ ಎಂದು ಹೇಳುತ್ತಿದ್ದಂತೆ ಮಧ್ಯ ಪ್ರವೇಶಿಸಿದ ಅಧ್ಯಕ್ಷರು ಗ್ರಾಮ ಸಭೆಗೆ ಯಾವುದೇ ಅಧಿಕಾರಿ ಭಾಗವಹಿಸಬೇಕಾಗಿಲ್ಲ, ಬದಲಿಗೆ ನನಗೆ ನಲವತ್ತು ವರ್ಷಗಳ ರಾಜಕೀಯ ಅನುಭವವಿದೆ, ಇಷ್ಟವಿದ್ದರೆ ಸಭೆಯಲ್ಲಿರಿ, ಇಲ್ಲವಾದಲ್ಲಿ ಸಭೆಯಿಂದ ಹೊರನಡೆಯಿರಿ ಎಂದು ಹೇಳುವ ಮೂಲಕ ದರ್ಪ ಪ್ರದರ್ಶಿಸಿ ಕೀಳು ಮಟ್ಟದ ರಾಜಕೀಯ ಮಾಡಿದ್ದಾರೆ.
ಒಬ್ಬ ಜಿಲ್ಲಾ ಪಂಚಾಯತಿ ಸದಸ್ಯರನ್ನು ಏರುಧ್ವನಿಯಲ್ಲಿ ಮಾತನಾಡುವುದು ಸೇರಿದಂತೆ ಸಭೆಯಿಂದ ಹೊರನಡೆಯಿರಿ ಎನ್ನುವ ಮೂಲಕ ದರ್ಪ ಪ್ರದರ್ಶಿಸುವ ತಮ್ಮ ವರ್ತನೆಯನ್ನು ಬದಲಿಸಿಕೊಳ್ಳಬೇಕು. ಇಲ್ಲವಾದಲ್ಲಿ ಜಿಲ್ಲೆಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಯಾವುದೇ ಸಭೆ, ಸಮಾರಂಭಗಳನ್ನು ನಡೆಸಲು ಬಿಡುವುದಿಲ್ಲ ಎಂದರು.
ದಸಂಸ ತಾಲ್ಲೂಕು ಸಂಚಾಲಕ ಎನ್.ಎ.ವೆಂಕಟೇಶ್ ಮಾತನಾಡಿ, ಕೆ.ಸಿ.ರಾಜಾಕಾಂತ್ ರವರು ದಲಿತ ಸಂಘರ್ಷ ಸಮಿತಿಯಲ್ಲಿ ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡು ತಮ್ಮಂತೆಯೇ ಚುನಾವಣೆಯಲ್ಲಿ ಸ್ಪರ್ಧಿಸಿ ಜನರ ಆಶೀರ್ವಾದದಿಂದ ಗೆದ್ದು ಜಿಲ್ಲಾ ಪಂಚಾಯತಿ ಸದಸ್ಯರಾಗಿದ್ದಾರೆ. ಕನಿಷ್ಠ ಜಿಲ್ಲಾ ಪಂಚಾಯತಿ ಸದಸ್ಯ ಎಂಬುದಕ್ಕಾದರೂ ಗೌರವಿಸದೆ ಕೇವಲ ರಾಜಕೀಯ ದುರುದ್ದೇಶದಿಂದ ಓರ್ವ ದಲಿತ ಮುಖಂಡ ಎನ್ನುವ ಕಾರಣಕ್ಕೆ ಬೇಕಾಬಿಟ್ಟಿಯಾಗಿ ಮಾತನಾಡುವುದು ಸೇರಿದಂತೆ ಧರ್ಪ ಪ್ರದರ್ಶಿಸುವುದನ್ನು ಕೂಡಲೇ ಬಿಡಬೇಕು. ಜಿಲ್ಲೆಯಾಧ್ಯಂತ ಎಸ್ಸಿಪಿ ಹಾಗು ಟಿಎಸ್ಪಿ ಯೋಜನೆಯಡಿ ನಡೆದಿರುವ ಅವ್ಯವಹಾರದ ತನಿಖೆ ನಡೆಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ದಲಿತ ಸಂಘರ್ಷ ಸಮಿತಿ ವತಿಯಿಂದ ತಮ್ಮ ವಿರುದ್ದ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ದಸಂಸ ಪದಾಧಿಕಾರಿಗಳಾದ ಟಿ.ಎ.ಚಲಪತಿ, ಸಿ.ಎಂ.ಲಕ್ಷ್ಮಿನಾರಾಯಣ, ಜೆ.ಎಂ.ವೆಂಕಟೇಶ್, ದೊಡ್ಡತಿರುಮಲಯ್ಯ, ಅನಿಲ್, ಮುನಿಕೃಷ್ಣಪ್ಪ, ಮಂಜುನಾಥ್ ಮತ್ತಿತರರು ಹಾಜರಿದ್ದರು.

ರೈತರ ಜಮೀನಿನಲ್ಲಿ ವಿದ್ಯುತ್‌ ಕಂಬಗಳ ಅಳವಡಿಕೆಗೆ ವಿರೋಧ

0

ತಾಲ್ಲೂಕಿನ ಜಂಗಮಕೋಟೆ ಹೋಬಳಿಯ ತೊಟ್ಟಿಬಾವಿ ಗ್ರಾಮದಲ್ಲಿ ಕೇಂದ್ರ ಸರ್ಕಾರದ ಪವರ್ ಗ್ರೀಡ್ ಕಾರ್ಪೊರೇಷನ್ ವತಿಯಿಂದ ಅಳವಡಿಸುತ್ತಿರುವ ಪವರ್ ಲೈನ್ ನಿರ್ಮಾಣಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಲು ರೈತರ ಜಮೀನಿನಲ್ಲಿ ದೊಡ್ಡ ಗಾತ್ರದ ಕಂಬಗಳನ್ನು ನಿರ್ಮಿಸಿ ವಿದ್ಯುತ್ ತಂತಿಯನ್ನು ಎಳೆಯಲು ಮುಂದಾದಾಗ ರಾಜ್ಯ ರೈತ ಸಂಘ ಹಾಗು ಹಸಿರುಸೇನೆ ಪದಾಧಿಕಾರಿಗಳು ಅಡ್ಡಿಪಡಿಸಿದ ಘಟನೆ ಮಂಗಳವಾರ ನಡೆದಿದೆ.
ಬಯಲುಸೀಮೆ ಭಾಗದಲ್ಲಿ ಅಂತರ್ಜಲ ಕುಸಿದು ನೀರಿನ ಸಮಸ್ಯೆಯು ಹೆಚ್ಚಾಗಿದ್ದು ಕಷ್ಟ ಪಟ್ಟು ಲಕ್ಷಾಂತರ ರೂ ಹಣ ಖರ್ಚು ಮಾಡಿ ಕೊರೆಸಿರುವ ಕೊಳವೆಬಾವಿಗಳಿಂದ ಬರುವ ಅಲ್ಪ ಸ್ವಲ್ಪ ನೀರನ್ನೇ ನಂಬಿಕೊಂಡು ವ್ಯವಸಾಯ ಮಾಡುವಂತಾಗಿದೆ. ಇಂತಹ ಸಂದರ್ಭದಲ್ಲಿ ರೈತರಿಗೆ ಯಾವುದೇ ಮಾಹಿತಿ ನೀಡದೇ ಮತ್ತು ನೋಟಿಸ್ ನೀಡದೆ ಏಕಾಏಕಿ ಯಂತ್ರಗಳನ್ನು ರೈತರ ಜಮೀನಿನಲ್ಲಿ ಬೆಳೆಗಳು ಇದ್ದರೂ ಸಹ ಜಮೀನಿನ ಮದ್ಯೆ ಬೃಹತ್ ವಿದ್ಯುತ್ ಕಂಬಗಳನ್ನು ನೆಡುವುದು ಸರಿಯಲ್ಲ. ಇದರಿಂದ ತಾವು ಬೆಳೆದ ಬೆಳೆಗಳು ಹಾಳಾಗುತ್ತದೆ. ಈ ಬೆಳೆಗಳನ್ನೇ ನಂಬಿ ಬದುಕು ನಡೆಸುತ್ತಿರುವ ನಾವು ಜೀವನ ನಡೆಸುವುದಾದರು ಹೇಗೆ ಎಂದು ತಮ್ಮ ಅಳಲನ್ನು ತೋಡಿಕೊಂಡ ರೈತರು ಜಮೀನಿನೊಳಗೆ ಅಳವಡಿಸುವ ವಿದ್ಯುತ್ ಕಂಬವನ್ನು ತಮ್ಮದೇ ಜಮೀನಿನ ಅಂಚಿನಲ್ಲಿ ಅಳವಡಿಸುವಂತೆ ರೈತ ಕೃಷ್ಣಪ್ಪ ಮನವಿ ಮಾಡಿದರು.
ಸ್ಥಳಕ್ಕೆ ತಹಶೀಲ್ದಾರ್ ಕೆ.ಎಂ.ಮನೋರಮ ಸೇರಿದಂತೆ ಪವರ್ ಗ್ರೀಡ್ ಕಾರ್ಪೊರೇಷನ್ ಕಿಶೋರ್ ಭೇಟಿ ನೀಡಿ ರೈತ ಮುಖಂಡರ ಮನವಿಯನ್ನು ಸ್ವೀಕರಿಸಿ ರೈತ ಕೃಷ್ಣಪ್ಪ ತಾನು ಬೆಳೆದಿರುವ ದ್ರಾಕ್ಷಿ ಬೆಳೆಯ ಫಸಲು ಪಡೆಯಲು ಕೋರಿರುವ ಒಂದು ತಿಂಗಳ ಕಾಲ ಕಾಮಗಾರಿ ಸ್ಥಗಿತಗೊಳಿಸುವುದು ಸೇರಿದಂತೆ ನಂತರ ಇದೀಗ ಕಂಬ ನೆಡಲು ಉದ್ದೇಶಿಸಿರುವ ಜಾಗಕ್ಕಿಂತ ೧೫ ಅಡಿಗಳ ದೂರದಲ್ಲಿ ಕಂಬ ನೆಡುವುದಾಗಿ ತಿಳಿಸಿ ಕಾಮಗಾರಿ ಸ್ಥಗಿತಗೊಳಿಸಿದರು.
ಈ ಸಂದರ್ಭದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, ತಾಲ್ಲೂಕು ಅಧ್ಯಕ್ಷ ತಾದೂರು ಮಂಜುನಾಥ್, ಉಪಾಧ್ಯಕ್ಷ ಮುನಿನಂಜಪ್ಪ, ದೇವರಾಜ್, ಈರಪ್ಪ, ವೆಂಕಟರೋಣಪ್ಪ, ತಲದುಮ್ಮನಹಳ್ಳಿ ದೇವರಾಜ್ ಮತ್ತಿತರರು ಹಾಜರಿದ್ದರು.