15.1 C
Sidlaghatta
Thursday, December 25, 2025
Home Blog Page 6

ಕಾಳನಾಯಕನಹಳ್ಳಿ ಸರ್ಕಾರಿ ಶಾಲೆ ನೂತನ ಮಾದರಿ ಅಂಗನವಾಡಿ ಉದ್ಘಾಟನೆ

0
Sidlaghatta Kalanayakanahalli Govt school Anganwadi Inauguration

Kalanayakanahalli, Sidlaghatta : ನಮ್ಮೂರಿನ ಸರ್ಕಾರಿ ಶಾಲೆಯಲ್ಲಿ 240ಕ್ಕೂ ಹೆಚ್ಚು ಮಕ್ಕಳಿದ್ದು, ಇಡೀ ತಾಲ್ಲೂಕಿನಲ್ಲಿ ಅತಿ ಹೆಚ್ಚು ಮಕ್ಕಳಿರುವ ಎರಡನೇ ಸರ್ಕಾರಿ ಶಾಲೆ ನಮ್ಮದಾಗಿದೆ. ಇಲ್ಲಿ ಪ್ರೌಢಶಾಲೆ (High School) ಆರಂಭಿಸುವಂತೆ ಸರ್ಕಾರಕ್ಕೆ ಪ್ರಸ್ತಾವವನ್ನು ಕಳುಹಿಸಲಾಗಿದೆ ಎಂದು ಪಿ.ಎಲ್‌.ಡಿ ಬ್ಯಾಂಕ್ ನಿರ್ದೇಶಕ ಕಾಳನಾಯಕನಹಳ್ಳಿ ಭೀಮೇಶ್ ಅವರು ತಿಳಿಸಿದರು.

ತಾಲ್ಲೂಕಿನ ಕುಂಭಿಗಾನಹಳ್ಳಿ (ಎಚ್. ಕ್ರಾಸ್) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಳನಾಯಕನಹಳ್ಳಿಯಲ್ಲಿ ನೂತನವಾಗಿ ನಿರ್ಮಿಸಿರುವ ಮಾದರಿ ಅಂಗನವಾಡಿ ಕೇಂದ್ರ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರೌಢಶಾಲೆ ಪ್ರಸ್ತಾವ:

ಕಾಳನಾಯಕನಹಳ್ಳಿ ಹಾಗೂ ಸುತ್ತಮುತ್ತಲ ಸರ್ಕಾರಿ ಶಾಲೆಗಳ ನಡುವಿನ ಅಂತರ, ಶಾಲಾ ಮಕ್ಕಳ ಸಂಖ್ಯೆ ಸೇರಿದಂತೆ ಅಗತ್ಯ ಮಾಹಿತಿಯನ್ನು ಸಂಬಂಧಿಸಿದ ಅಧಿಕಾರಿಗಳಿಗೆ ನೀಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಬಳಿಯೂ ಈ ಕುರಿತು ಚರ್ಚಿಸಲಾಗಿದ್ದು, ಅವರು ಈ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಭೀಮೇಶ್ ಹೇಳಿದರು.

ಶಾಲೆಯ ಬಗ್ಗೆ ಕಾಳಜಿಯುಳ್ಳ ಶಿಕ್ಷಕರು, ಪೋಷಕರು, ಎಸ್‌ಡಿಎಂಸಿ ಸಮಿತಿ ಮತ್ತು ಅಧಿಕಾರಿಗಳಿಂದ ಶಾಲೆಯು ಉತ್ತಮವಾಗಿ ನಡೆಯುತ್ತಿದೆ. ಶಾಲೆಯ ಪ್ರಗತಿಯಲ್ಲಿ ರಾಜಕೀಯ ಬೆರೆಸದೆ ನಾವೆಲ್ಲರೂ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು. ಪ್ರಾಥಮಿಕ ಪೂರ್ವ ಹಂತದಲ್ಲೇ ಕಲಿಕೆಗೆ ಭದ್ರ ಬುನಾದಿ ಹಾಕುವ ಕೆಲಸ ಅಂಗನವಾಡಿ ಕೇಂದ್ರಗಳಲ್ಲಿ ಆಗಲಿದೆ. ಸದೃಢ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೂ ಅಂಗನವಾಡಿ ಕೇಂದ್ರಗಳು ಪೂರಕವಾಗಿ ಕಾರ್ಯನಿರ್ವಹಿಸಲಿವೆ ಎಂದರು.

ಅಂಗನವಾಡಿ ಅಥವಾ ಶಾಲಾ ಮಕ್ಕಳು ಕೇಳಿ ತಿಳಿಯುವುದಕ್ಕಿಂತಲೂ ನೋಡಿ ಕಲಿಯುವುದೇ ಹೆಚ್ಚು. ಹಾಗಾಗಿ ಪೋಷಕರು ಮಕ್ಕಳ ಮುಂದೆ ಉತ್ತಮ ನಡೆ-ನುಡಿಯನ್ನು ರೂಢಿಸಿಕೊಳ್ಳಬೇಕು. ಸರ್ಕಾರವು ಉತ್ತಮ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿದ್ದರೂ ಪೋಷಕರು ಖಾಸಗಿ ಶಾಲೆಗಳತ್ತ ಹೆಚ್ಚು ವ್ಯಾಮೋಹ ಬೆಳೆಸುತ್ತಿದ್ದಾರೆ. ಸರ್ಕಾರಿ ಸವಲತ್ತುಗಳನ್ನು ಬಳಸಿಕೊಳ್ಳುವಂತಾಗಬೇಕು ಎಂದು ಭೀಮೇಶ್ ಅವರು ಹೇಳಿದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ಮಕ್ಕಳ ಸಂತೆ: ಮಾರಾಟದ ಮೂಲಕ ವ್ಯಾವಹಾರಿಕ ಜ್ಞಾನ ಹೆಚ್ಚಳ

0
Sidlaghatta Nagartha Mandali Makkala Sante

Sidlaghatta : ಅಯೋಧ್ಯನಗರ ಶಿವಾಚಾರ್ಯ ವೈಶ್ಯ ನಗರ್ತ ಮಂಡಳಿ ಹಾಗೂ ಮಹಿಳಾ ಮಂಡಳಿ ವತಿಯಿಂದ ನಗರದ ಶ್ರೀ ನಗರೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಮಕ್ಕಳ ಸಂತೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಈ ಕಾರ್ಯಕ್ರಮದಲ್ಲಿ ಮಕ್ಕಳು ವಿವಿಧ ಬಗೆಯ ಹಣ್ಣುಗಳು, ತಿಂಡಿ-ತಿನಿಸುಗಳು ಹಾಗೂ ತಂಪು ಪಾನೀಯಗಳನ್ನು ಮಾರಾಟ ಮಾಡುವ ಮೂಲಕ ಹಣ ಗಳಿಸಿ, ವ್ಯಾವಹಾರಿಕ ಜ್ಞಾನವನ್ನು ಹೆಚ್ಚಿಸಿಕೊಂಡರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ನಗರ್ತ ಮಂಡಳಿ ಅಧ್ಯಕ್ಷ ಶಿವಶಂಕರ್ ಅವರು ಮಾತನಾಡಿ, ದೈನಂದಿನ ಬದುಕಿನಲ್ಲಿ ಹಣದ ಮಹತ್ವ, ಲಾಭ ಮತ್ತು ನಷ್ಟದ ಬಗ್ಗೆ ಮಕ್ಕಳಿಗೆ ಪ್ರಾಯೋಗಿಕ ಜಾಗೃತಿ ಮೂಡಿಸಲು ಈ ರೀತಿಯ ಮಕ್ಕಳ ಸಂತೆಗಳು ಬಹಳ ಉಪಯುಕ್ತವಾಗಿವೆ ಎಂದು ಅಭಿಪ್ರಾಯಪಟ್ಟರು.

ಮಕ್ಕಳು ಬಹಳ ಉತ್ಸಾಹದಿಂದ ವಿವಿಧ ರೀತಿಯ ತಿಂಡಿ ತಿನಿಸುಗಳಾದ ಪಾನಿಪುರಿ, ಬೇಲ್‌ಪುರಿ, ತಂಪು ಪಾನೀಯಗಳು ಮತ್ತು ಇತರ ಪದಾರ್ಥಗಳನ್ನು ಮಾರಾಟ ಮಾಡಿ ಸಂಭ್ರಮಿಸಿದರು. ಪಾಲಕರು ಸಹ ತಮ್ಮ ಮಕ್ಕಳು ತಯಾರಿಸಿದ ಮತ್ತು ಮಾರಾಟ ಮಾಡಿದ ಪದಾರ್ಥಗಳ ರುಚಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ನಗರ್ತ ಮಂಡಳಿ ಉಪಾಧ್ಯಕ್ಷ ಎಸ್.ಎಸ್. ನಾಗರಾಜ್, ಕಾರ್ಯದರ್ಶಿ ಕೆ.ಎಂ. ವಿನಾಯಕ, ಶುಭ, ಮೃತ್ಯುಂಜಯ, ಕಿರಣ್, ಲಕ್ಷ್ಮಿ, ಸುಚಿತ್ರಾ, ಶೋಭಾ ರಾಣಿ, ಶಶಿಕಲಾ, ಚೇತನ, ದಿವ್ಯ ಬಿ, ಮೆಡಿಕಲ್ ಎಸ್ ಮಂಜುನಾಥ್, ದೇವರಾಜ್ ಸೇರಿದಂತೆ ನಗರ್ತ ಮಂಡಳಿಯ ಸದಸ್ಯರುಗಳು, ನಗರ್ತ ಯುವಕ ಮಂಡಳಿ, ಮಹಿಳಾ ಮಂಡಳಿಯ ಪದಾಧಿಕಾರಿಗಳು ಹಾಗೂ ಅನೇಕ ಯುವಕರು ಮಕ್ಕಳ ಸಂತೆಯಲ್ಲಿ ಭಾಗವಹಿಸಿ ಯಶಸ್ವಿಗೆ ಸಹಕರಿಸಿದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ಜಾತಿ-ಧರ್ಮದ ತಾರತಮ್ಯ ಮೀರಿದ ಶಕ್ತಿ ಕ್ರೀಡೆ, ಸಂಗೀತ ಮತ್ತು ಮಾನವೀಯತೆಗಿದೆ

0
Sidlaghatta Devaramallur Rajeev Gowda Volleyball Cup

Devaramallur, Sidlaghatta : ಜಾತಿ, ಧರ್ಮ, ಭಾಷೆಯ ತಾರತಮ್ಯವಿಲ್ಲದೆ ಎಲ್ಲರನ್ನೂ ಕೂಡ ಒಗ್ಗೂಡಿಸುವ ಶಕ್ತಿ ಕೇವಲ ಸಂಗೀತ, ಕ್ರೀಡೆ, ಕಲೆ ಮತ್ತು ಮಾನವೀಯತೆಗೆ ಮಾತ್ರ ಇದೆ ಎಂದು ಕಾಂಗ್ರೆಸ್ ಮುಖಂಡ ನಿರಂಜನ್ ಅವರು ತಿಳಿಸಿದರು.

ತಾಲ್ಲೂಕಿನ ದೇವರಮಳ್ಳೂರು ಗ್ರಾಮದಲ್ಲಿ ಶ್ರೀಮಳ್ಳೂರಾಂಭೆಯ ಬ್ರಹ್ಮ ರಥೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ರಾಜೀವ್‌ ಗೌಡ ವಾಲೀಬಾಲ್ ಕಪ್-ಸೀಸನ್ 1ರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ವಿಜೇತ ತಂಡಗಳಿಗೆ ನಗದು ಹಾಗೂ ಟ್ರೋಫಿ ವಿತರಿಸಿ ಅವರು ಮಾತನಾಡಿದರು.

ಕಾಲ ಬದಲಾದಂತೆ ನಾಗರೀಕತೆಯ ರಭಸದಲ್ಲಿ ಗ್ರಾಮೀಣ ಭಾಗದ ಕಲೆ, ಸಂಪ್ರದಾಯ, ಆಚಾರ-ವಿಚಾರಗಳು ಕಡಿಮೆಯಾಗುತ್ತಿದ್ದು, ಯುವ ಪೀಳಿಗೆಯು ಆಸಕ್ತಿ ಕಳೆದುಕೊಳ್ಳುತ್ತಿದೆ ಎಂದು ನಿರಂಜನ್ ಬೇಸರ ವ್ಯಕ್ತಪಡಿಸಿದರು. ಆದರೂ ಗ್ರಾಮೀಣ ಭಾಗದಲ್ಲಿ ಇಂದಿಗೂ ಸಂಪ್ರದಾಯಗಳು ಉಳಿದುಕೊಂಡಿವೆ. ಜಾತ್ರೆ, ಪರಿಷೆ, ಪೂಜೆ-ಪುನಸ್ಕಾರಗಳು ಎಲ್ಲರನ್ನೂ ಒಗ್ಗೂಡಿಸುತ್ತವೆ ಮತ್ತು ಪರಸ್ಪರ ಒಗ್ಗಟ್ಟಿನಿಂದ ಬದುಕು ಬಾಳಲು ನೆರವಾಗುತ್ತವೆ. ಪರಸ್ಪರ ಕಷ್ಟ-ಸುಖಕ್ಕೆ ಸ್ಪಂದಿಸುವ ಮನೋಭಾವ ಹೆಚ್ಚಿದೆ ಎಂದರು.

ಕೆಪಿಸಿಸಿ ಕೋ-ಆರ್ಡಿನೇಟರ್ ರಾಜೀವ್ ಗೌಡ ಅವರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುತ್ತಿದ್ದು, ಸಮುದಾಯ ಭವನ ನಿರ್ಮಾಣ, ಕ್ರೀಡಾ ಕೂಟಗಳ ಆಯೋಜನೆ ಮತ್ತು ಕಷ್ಟದಲ್ಲಿರುವವರಿಗೆ ನೆರವು ನೀಡುತ್ತಾ ಸಂಕಷ್ಟದಲ್ಲಿ ಇರುವವರ ಪರವಾಗಿ ನಿಲ್ಲುತ್ತಿದ್ದಾರೆ. ಈ ವಾಲಿಬಾಲ್ ಕ್ರೀಡಾಕೂಟಕ್ಕೆ ಸಂಪೂರ್ಣ ನೆರವು ನೀಡಿ ಯಶಸ್ವಿಯಾಗಲು ಅವರ ಬೆಂಬಲ ಹೆಚ್ಚಿದೆ ಎಂದು ಅವರು ಕೃತಜ್ಞತೆ ಸಲ್ಲಿಸಿದರು. ನಿರೀಕ್ಷೆಗೂ ಮೀರಿ ಹೆಚ್ಚಿನ ತಂಡಗಳು ಆಗಮಿಸಿ, ಗ್ರಾಮಸ್ಥರ ಸಹಕಾರದಿಂದ ಪಂದ್ಯಾವಳಿ ಯಶಸ್ವಿಯಾಗಿದೆ ಎಂದು ಧನ್ಯವಾದಗಳನ್ನು ಅರ್ಪಿಸಿದರು.

ಎಬಿಡಿ ಟ್ರಸ್ಟ್‌ನ ಅಧ್ಯಕ್ಷ ರಾಜೀವ್‌ ಗೌಡ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸಹನಾ ರಾಜೀವ್‌ ಗೌಡ ಅವರು ನಗದು ಬಹುಮಾನ ಹಾಗೂ ಟ್ರೋಫಿಗಳನ್ನು ಪ್ರಾಯೋಜಿಸಿದ್ದರು. ನಾನಾ ಕಡೆಯಿಂದ 25ಕ್ಕೂ ಹೆಚ್ಚು ತಂಡಗಳು ಆಗಮಿಸಿದ್ದವು.

  • ಪ್ರಥಮ ಬಹುಮಾನ: ಗುಡಿಬಂಡೆ ತಂಡಕ್ಕೆ – 50,000 ರೂ. ನಗದು ಮತ್ತು ಟ್ರೋಫಿ.
  • ದ್ವಿತೀಯ ಬಹುಮಾನ: ಹಾಸನ ತಂಡಕ್ಕೆ – 25,000 ರೂ. ನಗದು ಮತ್ತು ಟ್ರೋಫಿ.
  • ತೃತೀಯ ಬಹುಮಾನ: ಕೋಲಾರ ತಂಡಕ್ಕೆ – 10,000 ರೂ. ನಗದು ಮತ್ತು ಟ್ರೋಫಿ.
  • ನಾಲ್ಕನೇ ಬಹುಮಾನ: ಶಿಡ್ಲಘಟ್ಟ ತಂಡಕ್ಕೆ – 5,000 ರೂ. ನಗದು.

ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಎಸ್. ರವಿ, ಗ್ರಾಮ ಪಂಚಾಯಿತಿ ಸದಸ್ಯ ಎನ್. ವೆಂಕಟೇಶ್, ಬೆಳ್ಳೂಟಿ ವೆಂಕಟೇಶ್ ಸೇರಿದಂತೆ ಹಲವು ಮುಖಂಡರು ಹಾಗೂ ಕ್ರೀಡಾಭಿಮಾನಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-07/12/2025

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 07/12/2025

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 326
Qty: 16475 Kg
Mx : 762
Mn: 351
Avg: 624

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 08
Qty: 424 Kg
Mx : ₹ 903
Mn: ₹ 738
Avg: ₹ 825


For Daily Updates WhatsApp ‘HI’ to 7406303366

ಶಿಡ್ಲಘಟ್ಟದಲ್ಲಿ DSS ನಿಂದ ಮೋಂಬತ್ತಿ ಮೆರವಣಿಗೆ

0
Sidlaghatta DSS Ambedkar Parinirvana Day

Sidlaghatta, Chikkaballapur : ನಾವು, ನೀವು ಎಲ್ಲರೂ ಕೂಡ ಸಮಾಜದಲ್ಲಿ ಸರ್ವ ಸಮಾನತೆಯಿಂದ ಮತ್ತು ಸ್ವಾಭಿಮಾನದ ಬದುಕನ್ನು ನಡೆಸುತ್ತಿದ್ದೇವೆ. ಬಡವ-ಬಲ್ಲಿದ ಎನ್ನದೆ ಎಲ್ಲರಿಗೂ ಸಮಾನ ಕಾನೂನು ರಕ್ಷಣೆ ಇದೆ ಎಂದಾದರೆ, ಅದು ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರು ನಮಗೆ ನೀಡಿದ ಸಂವಿಧಾನದಿಂದಾಗಿ ಎಂದು ದಲಿತ ಸಂಘರ್ಷ ಸಮಿತಿ (ಡಿಎಸ್‌ಎಸ್) ಭೀಮ ಮಾರ್ಗದ ರಾಜ್ಯ ಸಂಚಾಲಕ ಬಿ.ಎನ್. ವೆಂಕಟೇಶ್ ಅವರು ತಿಳಿಸಿದರು.

ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿನಿರ್ವಾಣ ದಿನಾಚರಣೆ ಅಂಗವಾಗಿ ದಲಿತ ಸಂಘರ್ಷ ಸಮಿತಿ (ಭೀಮ ಮಾರ್ಗ) ಸಂಘಟನೆಯಿಂದ ನಗರದ ಟಿ.ಬಿ. ರಸ್ತೆಯ ಓಟಿ ವೃತ್ತದಿಂದ ರೈಲ್ವೇ ನಿಲ್ದಾಣದವರೆಗೂ ಶನಿವಾರ ಹಮ್ಮಿಕೊಂಡಿದ್ದ ಮೋಂಬತ್ತಿ ಮೆರವಣಿಗೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಂವಿಧಾನದ ಮಹತ್ವ:

ಇಡೀ ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠವಾದ ಮತ್ತು ಸರ್ವ ಸಮಾನತೆಯನ್ನು ಸಾರುವ ಲಿಖಿತ ಸಂವಿಧಾನವನ್ನು ನೀಡಿದ ಮಹಾನ್ ಮಾನವತಾವಾದಿ ಡಾ. ಅಂಬೇಡ್ಕರ್ ಅವರ ಸಂವಿಧಾನದಲ್ಲಿನ ಎಲ್ಲ ಅಂಶಗಳನ್ನು ನಾವು ತಿಳಿದುಕೊಂಡು ಅವುಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡರೆ, ನಮ್ಮ ಬದುಕು ಇನ್ನಷ್ಟು ಉತ್ತಮವಾಗಲಿದೆ ಮತ್ತು ಉತ್ತಮ ಸಮಾಜವೂ ನಿರ್ಮಾಣವಾಗಲಿದೆ ಎಂದು ಅವರು ಹೇಳಿದರು.

ಅಸಮಾನತೆಯ ಬಗ್ಗೆ ಬೇಸರ:

ಇನ್ನೂ ಎಲ್ಲೋ ಒಂದು ಕಡೆ ಅಸಮಾನತೆ ಮತ್ತು ಜಾತಿ ಪದ್ಧತಿಯ ವ್ಯವಸ್ಥೆ ಜೀವಂತವಾಗಿದೆ. ಓದಿ ಬುದ್ಧಿವಂತರಾದವರು ಈ ಅಸಮಾನತೆ ಮತ್ತು ಜಾತಿ ಪದ್ಧತಿಯನ್ನು ಪ್ರಶ್ನಿಸುವಂತಾಗಬೇಕು. ಆದರೆ, ಇಂದಿನ ಯುವ ಪೀಳಿಗೆಯಲ್ಲಿ ಪ್ರಶ್ನಿಸುವ ಮನೋಸ್ಥೈರ್ಯ ಕಡಿಮೆಯಾಗುತ್ತಿದೆ ಎಂದು ವೆಂಕಟೇಶ್ ಅವರು ಬೇಸರ ವ್ಯಕ್ತಪಡಿಸಿದರು.

ಮೋಂಬತ್ತಿ ಮೆರವಣಿಗೆ: ಈ ಸಂದರ್ಭದಲ್ಲಿ ಸಂಘಟನೆಯ ಕಾರ್ಯಕರ್ತರು ಡಾ. ಅಂಬೇಡ್ಕರ್ ಅವರ ಭಾವಚಿತ್ರವನ್ನು ಹಿಡಿದು ಮೋಂಬತ್ತಿ ಬೆಳಗಿಸಿಕೊಂಡು ಮೆರವಣಿಗೆ ನಡೆಸಿದರು. ಅಂಬೇಡ್ಕರ್ ಅವರಿಗೆ ಜೈಕಾರಗಳನ್ನು ಕೂಗುತ್ತಾ ಸಾಗಿದರು. ರೈಲ್ವೇ ನಿಲ್ದಾಣದ ಬಳಿ ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ನಮಿಸಿ ಪುಷ್ಪ ನಮನ ಸಲ್ಲಿಸಲಾಯಿತು.

ರಾಜ್ಯ ಸಂಘಟನಾ ಸಂಚಾಲಕಿ ನಾಗವೇಣಿ, ಜಿಲ್ಲಾ ಸಂಚಾಲಕ ನರಸಿಂಹಮೂರ್ತಿ, ಸಂಘಟನಾ ಸಂಚಾಲಕ ಶ್ಯಾಮ್, ಗಾಯಿತ್ರಿ, ತಾಲ್ಲೂಕು ಮುಖಂಡರಾದ ಅಂಬರೀಶ್, ರಾಜೇಶ್, ಪ್ರಭು, ಪ್ರತೀಶ್, ರಾಮದಾಸ್ ಸೇರಿದಂತೆ ಹಲವರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ಬೃಹತ್ ಉದ್ಯೋಗ ಮೇಳದಲ್ಲಿ 3 ಸಾವಿರಕ್ಕೂ ಹೆಚ್ಚು ಯುವಕರು ಭಾಗಿ

0
Sidlaghatta Jangamakote Gnana Jyothi school Job Mela

Jangamakote Cross, Sidlaghatta, Chikkaballapur : ಅವಕಾಶಗಳನ್ನು ಸದುಪಯೋಗಪಡಿಸಿಕೊಂಡವರು ಬುದ್ಧಿವಂತರಾಗುತ್ತಾರೆ ಮತ್ತು ಅವರಿಗೆ ಮುಂದೆ ಅವಕಾಶಗಳನ್ನು ಸೃಷ್ಟಿಸುವ ಶಕ್ತಿಯೂ ಲಭಿಸುತ್ತದೆ ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಜಗದ್ಗುರು ಶ್ರೀ ಡಾ. ನಿಶ್ಚಲಾನಂದನಾಥ ಮಹಾಸ್ವಾಮೀಜಿ ತಿಳಿಸಿದರು.

ತಾಲ್ಲೂಕಿನ ಜಂಗಮಕೋಟೆ ಕ್ರಾಸ್‌ನಲ್ಲಿರುವ ಜ್ಞಾನ ಜ್ಯೋತಿ ಶಾಲೆ ಮತ್ತು ಪಿಯು ಕಾಲೇಜಿನಲ್ಲಿ ಶನಿವಾರ ಗ್ರಾಮೀಣ ವಿದ್ಯಾಭಿವೃದ್ಧಿ ಸಂಸ್ಥೆ ಸಂಸ್ಥಾಪಕ ಬಿ.ಎಂ. ಮೂರ್ತಿ ಅವರ 25ನೇ ಪುಣ್ಯಸ್ಮರಣೆಯ ಸ್ಮರಣಾರ್ಥವಾಗಿ, ಉದ್ಯೋಗದಾತ ಫೌಂಡೇಶನ್ ಸಹಯೋಗದೊಂದಿಗೆ ಆಯೋಜಿಸಿದ್ದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸ್ವಾಮೀಜಿಯವರ ಸಂದೇಶ: ಗ್ರಾಮೀಣ ಮಕ್ಕಳಿಗೆ ದುಡಿಯುವ ಛಲವಿದ್ದರೂ, ಸೂಕ್ತ ಅವಕಾಶಗಳು ಸಿಗುವುದು ಮುಖ್ಯ. ಈ ಉದ್ಯೋಗ ಮೇಳದ ಮೂಲಕ ಅವಕಾಶಗಳನ್ನು ಕಲ್ಪಿಸಲಾಗಿದೆ. ಯುವಕರು ದೊರೆತ ಉದ್ಯೋಗವನ್ನು ಅನುಭವಕ್ಕೆ ಸಿಕ್ಕ ಅವಕಾಶ ಎಂದು ತಿಳಿದುಕೊಳ್ಳಬೇಕು. ಆಲೋಚನೆ, ಯೋಜನೆ, ಬುದ್ಧಿಮತ್ತೆ, ಶ್ರಮ, ನಿಷ್ಠೆ ಮತ್ತು ಬದ್ಧತೆಯು ಯುವಜನರಲ್ಲಿರಬೇಕು. ಕಷ್ಟಪಟ್ಟವರು ಮಾತ್ರ ಜೀವನದಲ್ಲಿ ಏಳಿಗೆ ಸಾಧಿಸಬಲ್ಲರು ಎಂದು ಸ್ವಾಮೀಜಿಯವರು ನುಡಿದರು.

ಉದ್ಯೋಗದಾತ ಫೌಂಡೇಶನ್ ಮಾಹಿತಿ: ಉದ್ಯೋಗದಾತ ಫೌಂಡೇಶನ್ ಅಧ್ಯಕ್ಷ ರುಕ್ಮಾಂಗದ ಮಾತನಾಡಿ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಸುತ್ತಮುತ್ತಲಿನ 70 ಕಂಪನಿಗಳನ್ನು ಮೇಳಕ್ಕೆ ಕರೆಸಲಾಗಿದೆ. ಈ ಕಂಪನಿಗಳಿಗೆ 12 ಸಾವಿರಕ್ಕೂ ಹೆಚ್ಚು ಉದ್ಯೋಗಿಗಳ ಅವಶ್ಯಕತೆ ಇದೆ. ಈ ಭಾಗದ ಯುವಕರಿಗೆ ಉದ್ಯೋಗಕ್ಕಾಗಿ ಹೆಚ್ಚು ದೂರ ಹೋಗಬೇಕಾದ ಅಗತ್ಯವಿಲ್ಲ. ಎಸ್‌ಎಸ್‌ಎಲ್‌ಸಿ, ಐಟಿಐ, ಡಿಪ್ಲೊಮ, ಡಿ.ಎಡ್, ಬಿ.ಎಡ್, ಡಿ.ಫಾರ್ಮ, ಬಿ.ಫಾರ್ಮ ಸೇರಿದಂತೆ ಯಾವುದೇ ಪದವಿ ಹೊಂದಿರುವ ಯುವಕ/ಯುವತಿಯರಿಗೆ ಅವಕಾಶಗಳಿವೆ. ಕಂಪನಿಗೆ ಅಗತ್ಯವಿರುವ ಕೌಶಲಗಳ ಕೊರತೆಯಿದ್ದಲ್ಲಿ, ಅವುಗಳನ್ನು ಕಲಿಸುವ ವ್ಯವಸ್ಥೆಯನ್ನೂ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು. ಗ್ರಾಮೀಣ ಯುವಜನರು ಉತ್ತಮ ಉದ್ಯೋಗಿಗಳಾಗಿ ಬದುಕನ್ನು ರೂಪಿಸಿಕೊಳ್ಳಲಿ ಎಂಬುದೇ ಈ ಮೇಳದ ಉದ್ದೇಶವಾಗಿದೆ ಎಂದರು.

ಈ ಬೃಹತ್ ಉದ್ಯೋಗ ಮೇಳದಲ್ಲಿ ಸುಮಾರು 3,000ಕ್ಕೂ ಹೆಚ್ಚು ಯುವಕ ಯುವತಿಯರು ನೋಂದಾಯಿಸಿಕೊಂಡಿದ್ದರು.

ಗ್ರಾಮೀಣ ವಿದ್ಯಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಕೆ. ಗುಡಿಯಪ್ಪ, ಕಾರ್ಯದರ್ಶಿ ರಾಜೀವ್ ಕುಮಾರ್, ಜ್ಞಾನ ಜ್ಯೋತಿ ಶಾಲೆಯ ಪ್ರಾಂಶುಪಾಲೆ ಮನುಶ್ರೀ ರಾಜೀವ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರಕುಮಾರ್ ಸೇರಿದಂತೆ ಹಲವು ಗಣ್ಯರು ಹಾಗೂ ಸಂಸ್ಥೆಯ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-06/12/2025

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 06/12/2025

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 280
Qty: 14331 Kg
Mx : 751
Mn: 430
Avg: 623

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 06
Qty: 367 Kg
Mx : ₹ 875
Mn: ₹ 688
Avg: ₹ 815


For Daily Updates WhatsApp ‘HI’ to 7406303366

PDO ವಿರುದ್ಧ ಆಕ್ರೋಶ: ಬಹುತೇಕ ದೂರಿನಲ್ಲೇ ಕಳೆದ ಹೊಸಪೇಟೆ ಗ್ರಾಮ ಸಭೆ

0
Sidlaghatta hosapete Grama Sabhe

Hosapete, Sidlaghatta, Chikkaballapur : ಶಿಡ್ಲಘಟ್ಟ ತಾಲ್ಲೂಕಿನ ಹೊಸಪೇಟೆ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ನಡೆದ ಗ್ರಾಮ ಸಭೆಯಲ್ಲಿ, ಕೈಗೊಂಡ ಮತ್ತು ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳ ಮಾಹಿತಿ ಹಾಗೂ ಸರ್ಕಾರದ ಯೋಜನೆಗಳ ಬಗ್ಗೆ ಚರ್ಚಿಸುವುದಕ್ಕಿಂತಲೂ ಹೆಚ್ಚಾಗಿ, ಪಿಡಿಒ ಯಮುನಾರಾಣಿ ಅವರ ಕಾರ್ಯವೈಖರಿ ವಿರುದ್ಧ ಸಾರ್ವಜನಿಕರು ದೂರುವುದರಲ್ಲೇ ಸಭೆಯ ಬಹುತೇಕ ಸಮಯ ಕಳೆದುಹೋಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ದ್ಯಾವಮ್ಮಕೆಂಪಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಪಿಡಿಒ ಯಮುನಾರಾಣಿ ಅವರ ವಿರುದ್ಧ ಸಾರ್ವಜನಿಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಪಿಡಿಒ ವಿರುದ್ಧದ ಪ್ರಮುಖ ಆರೋಪಗಳು: ಸಾರ್ವಜನಿಕರು ಪಿಡಿಒ ವಿರುದ್ಧ ಹಳ್ಳಿಗಳಿಗೆ ಭೇಟಿ ನೀಡದಿರುವುದು, ಗ್ರಾಮಸ್ಥರ ಸಮಸ್ಯೆಗಳನ್ನು ಕೇಳದಿರುವುದು ಮತ್ತು ಮನರೇಗಾ ಸೇರಿದಂತೆ ವಿವಿಧ ಯೋಜನೆಗಳ ಕಾಮಗಾರಿಗಳು ನಡೆಯುವ ಸ್ಥಳಕ್ಕೆ ಭೇಟಿ ನೀಡದೆ ಕಚೇರಿಯಲ್ಲೇ ಕುಳಿತು ಕೆಲಸ ಮಾಡುವುದು ಹೆಚ್ಚಾಗಿದೆ ಎಂದು ದೂರಿದರು. ಅಲ್ಲದೆ, ಕೆಲಸ ಕಾರ್ಯಗಳಿಗಾಗಿ ಕಚೇರಿಗೆ ಬಂದರೂ ಅವರು ಹೆಚ್ಚಾಗಿ ಲಭ್ಯವಿರುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಭೆ ಆಯೋಜನೆಯ ಬಗ್ಗೆ ಆಕ್ಷೇಪ: ಗ್ರಾಮ ಸಭೆ ಕರೆದಿರುವ ಬಗ್ಗೆ ಗ್ರಾಮಗಳಲ್ಲಿ ವಾರ್ಡ್ ಸಭೆಗಳು ನಡೆದಿವೆಯೇ ಎಂಬ ಮಾಹಿತಿ ಇಲ್ಲ. ಅಲ್ಲದೆ, ಗ್ರಾಮ ಸಭೆಗೂ ಮುನ್ನ ಸಾರ್ವಜನಿಕರಿಗೆ ಕರಪತ್ರಗಳ ಮೂಲಕ ಪ್ರಚಾರ ಮಾಡಿಲ್ಲ. ಪರಿಣಾಮವಾಗಿ ಗ್ರಾಮ ಸಭೆಯಲ್ಲಿ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರನ್ನು ಹೊರತುಪಡಿಸಿ ಸಾರ್ವಜನಿಕರ ಕೊರತೆ ಎದ್ದು ಕಾಣುತ್ತಿತ್ತು. ಕಾಟಾಚಾರಕ್ಕೆ ಗ್ರಾಮಸಭೆ ನಡೆಸಲಾಗುತ್ತಿದೆ ಎಂದು ಸಾರ್ವಜನಿಕರು ದೂರಿದರು.

ಇಲಾಖಾ ಅಧಿಕಾರಿಗಳ ಗೈರು ಮತ್ತು ನಿಯಮ ಉಲ್ಲಂಘನೆ: ತಾಲ್ಲೂಕು ಮಟ್ಟದ ಬಹುತೇಕ ಅಧಿಕಾರಿಗಳು ಅಥವಾ ಅವರ ಪರವಾಗಿ ಇಲಾಖಾ ಅಧಿಕಾರಿಗಳು ಸಭೆಗೆ ಗೈರು ಹಾಜರಾಗಿದ್ದರು. ಪಂಚಾಯಿತಿಯಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಿಲ್ಲ, ಈ ಬಗ್ಗೆ ಸದಸ್ಯರಿಗೆ ಮಾಹಿತಿ ನೀಡಿಲ್ಲ. ಅಲ್ಲದೆ, ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ ನಡೆಸಿ ವರದಿ ಕಳುಹಿಸುವಂತೆ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ನೋಟಿಸ್ ಕಳುಹಿಸಿದ್ದರೂ ಪೂರ್ವಭಾವಿ ಸಭೆ ನಡೆಸಿಲ್ಲ ಎಂದು ದೂರಲಾಯಿತು.

ಮಕ್ಕಳ ಗ್ರಾಮಸಭೆ ಬಗ್ಗೆ ದೂರು: ಗ್ರಾಮಸಭೆಯ ದಿನದಂದೇ ಮಕ್ಕಳ ಗ್ರಾಮಸಭೆ ಮಾಡುವುದಾಗಿ ಮಾಹಿತಿ ಕೇಂದ್ರದಲ್ಲಿ ಪ್ರಕಟಣೆ ಹಾಕಿದ್ದರೂ, ಮಕ್ಕಳ ಗ್ರಾಮಸಭೆ ನಡೆಸಿಲ್ಲ. ಮಕ್ಕಳ ಸಮಸ್ಯೆಗಳ ಬಗ್ಗೆ ಚರ್ಚೆಯನ್ನೇ ನಡೆಸದೆ ಅವರ ಹಕ್ಕುಗಳಿಗೆ ಚ್ಯುತಿ ತಂದಿದ್ದೀರಿ ಎಂದು ಸಾರ್ವಜನಿಕರು ದೂರಿಕೊಂಡರು. ಸಭೆಯಲ್ಲಿ ಕೆಲ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಯಿಂದ ಸಿಗುವ ಸವಲತ್ತುಗಳು ಮತ್ತು ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶ್ವೇತಾಹರೀಶ್, ಕಾರ್ಯದರ್ಶಿ ಮಹಾಲಿಂಗಪ್ಪ, ರೇಷ್ಮೆ ಇಲಾಖೆ ವಿಸ್ತರಣಾಧಿಕಾರಿ ಸೋಮಣ್ಣ, ಪಶುಪಾಲನಾ ಇಲಾಖೆಯ ಡಾ. ಮುನಿಶಾಮಿ, ಸದಸ್ಯರಾದ ರವಿಕುಮಾರ್, ಮಂಜುನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ಚರಂಡಿಗೆ ಬಿದ್ದ ಹಸುವನ್ನು ರಕ್ಷಿಸಿದ ಯುವಕರು

0
Sidlaghatta Melur youth rescue cow fallen to drain

Melur, Sidlaghatta, Chikkaballapur : ತಾಲ್ಲೂಕಿನ ಮೇಲೂರು ಗ್ರಾಮದಲ್ಲಿ ಆಕಸ್ಮಿಕವಾಗಿ ಚರಂಡಿಗೆ ಬಿದ್ದಿದ್ದ ಸೀಮೆ ಹಸುವೊಂದನ್ನು ಸ್ಥಳೀಯ ಯುವಕರು ತಕ್ಷಣ ಕಾರ್ಯಪ್ರವೃತ್ತರಾಗಿ ಜೆಸಿಬಿ ಯಂತ್ರದ ನೆರವಿನಿಂದ ರಕ್ಷಿಸಿದ್ದಾರೆ. ರಕ್ಷಣೆಯ ನಂತರ ಹಸುವಿಗೆ ಸೂಕ್ತ ಚಿಕಿತ್ಸೆ ಕೊಡಿಸಿ ರೈತರಿಗೆ ಒಪ್ಪಿಸುವ ಮೂಲಕ ಯುವಕರ ತಂಡ ಮಾನವೀಯತೆ ಮೆರೆದಿದೆ.

ಮೇಲೂರು ಮಾರ್ಗದಲ್ಲಿ ಹಾದುಹೋಗುವ ರಸ್ತೆ ಪಕ್ಕದಲ್ಲಿದ್ದ ಚರಂಡಿಯ ಮೋರಿಗೆ ಸೀಮೆ ಹಸು ಬಿದ್ದಿತ್ತು. ತಕ್ಷಣ ಇದನ್ನು ಗಮನಿಸಿದ ಗ್ರಾಮದ ಯುವಕ ಧನುಷ್ ಮತ್ತು ಅವರ ಸ್ನೇಹಿತರ ತಂಡ ಕಾರ್ಯೋನ್ಮುಖವಾಯಿತು. ಅವರು ತಡಮಾಡದೆ ಜೆಸಿಬಿ ಯಂತ್ರವನ್ನು ತರಿಸಿ, ಬಿದ್ದಿದ್ದ ಹಸುವನ್ನು ಸುರಕ್ಷಿತವಾಗಿ ಮೇಲಕ್ಕೆತ್ತಿದರು. ಈ ವೇಳೆ ಗಾಯಗೊಂಡಿದ್ದ ಹಸು ನಿತ್ರಾಣಗೊಂಡಿತ್ತು.

ರಕ್ಷಣಾ ಕಾರ್ಯದ ಬಳಿಕ, ಯುವಕರು ಸೀಮೆ ಹಸುವನ್ನು ಹತ್ತಿರದಲ್ಲೇ ಇದ್ದ ಪಶು ವೈದ್ಯಕೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದರು. ಸಂಪೂರ್ಣ ಉಪಚರಿಸಿದ ನಂತರ ಹಸುವನ್ನು ಅದರ ಮಾಲೀಕರಾದ ರೈತರಿಗೆ ಒಪ್ಪಿಸಿದರು. ಯುವಕ ಧನುಷ್ ಮತ್ತು ಅವರ ಸ್ನೇಹಿತರು ಸಮಯಪ್ರಜ್ಞೆ ಮತ್ತು ಮಾನವೀಯತೆಯಿಂದ ಮಾಡಿದ ಈ ಕಾರ್ಯಕ್ಕೆ ಗ್ರಾಮಸ್ಥರು ಹಾಗೂ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

Sidlaghatta WhatsApp Channel Group

For Daily Updates WhatsApp ‘HI’ to 7406303366

ವಕೀಲರು ಸಮಾಜದ ಎಂಜಿನಿಯರ್‌ಗಳು; ವೃತ್ತಿ ಪಾವಿತ್ರ್ಯತೆ ಕಾಪಾಡಿ

0
Sidlaghatta Lawyers Day Event

Sidlaghatta, Chikkaballapur : ವೃತ್ತಿ ಯಾವುದೇ ಇರಲಿ, ಅದರಲ್ಲಿ ಮೇಲು-ಕೀಳಿಲ್ಲ. ಪ್ರತಿಯೊಬ್ಬರೂ ತಮ್ಮ ವೃತ್ತಿ ಪಾವಿತ್ರ್ಯತೆ ಮತ್ತು ವೃತ್ತಿ ಧರ್ಮವನ್ನು ಕಾಪಾಡಿಕೊಂಡು ಮುನ್ನಡೆದರೆ, ನಮಗೂ ಮತ್ತು ವೃತ್ತಿಗೂ ಗೌರವ ದೊರೆಯಲಿದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ರಾಮಲಿಂಗೇಗೌಡ ಅವರು ತಿಳಿಸಿದರು.

ಶಿಡ್ಲಘಟ್ಟ-ದಿಬ್ಬೂರಹಳ್ಳಿ ಮಾರ್ಗದಲ್ಲಿರುವ ಜೆಎಂಎಫ್‌ಸಿ ನ್ಯಾಯಾಲಯದ ಸಭಾಂಗಣದಲ್ಲಿ ತಾಲ್ಲೂಕು ವಕೀಲರ ಸಂಘದಿಂದ ಆಯೋಜಿಸಿದ್ದ “ವಕೀಲರ ದಿನಾಚರಣೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನ್ಯಾಯಾಧೀಶರ ಮತ್ತು ವಕೀಲರ ವೃತ್ತಿಯು ಸಮಾಜ ಹಾಗೂ ನಾಗರಿಕರ ಒಳಿತಿಗಾಗಿ ಮಾರ್ಗದರ್ಶನ ನೀಡುವಂತಹ ಪವಿತ್ರ ವೃತ್ತಿಯಾಗಿದೆ. ಈ ನಿಟ್ಟಿನಲ್ಲಿ ವಕೀಲರು ತಾವು ನಿರ್ವಹಿಸುವ ವೃತ್ತಿಗೆ ಮತ್ತು ಸಮಾಜಕ್ಕೆ ಘನತೆ ತರುವಂತಹ ಕೆಲಸವನ್ನು ಮಾಡಬೇಕು ಎಂದು ಅವರು ಸಲಹೆ ನೀಡಿದರು. ಎಂಜಿನಿಯರ್‌ಗಳು ಕಟ್ಟಡ, ಅಣೆಕಟ್ಟುಗಳನ್ನು ನಿರ್ಮಿಸಿದರೆ, ವಕೀಲರು ಸಮಾಜದ ಎಂಜಿನಿಯರುಗಳಾಗಿ ಕಾರ್ಯನಿರ್ವಹಿಸುತ್ತಾರೆ. ಅವರು ಸಮಾಜದಲ್ಲಿನ ಸಾಮಾಜಿಕ ಅಸಮತೋಲನವನ್ನು ನಿವಾರಿಸಿ, ಎಲ್ಲಾ ವರ್ಗದವರ ಕುಂದುಕೊರತೆಗಳಿಗೆ ನ್ಯಾಯ ಒದಗಿಸಿ, ನೆಮ್ಮದಿಯ ಜೀವನಕ್ಕೆ ದಾರಿ ತೋರಿಸುವ ಮಹತ್ವದ ಕೆಲಸವನ್ನು ನಿರ್ವಹಿಸುತ್ತಾರೆ ಎಂದು ಅವರು ತಿಳಿಸಿದರು.

ಪ್ರಧಾನ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ ಅವರು ಮಾತನಾಡಿ, ಇತ್ತೀಚಿನ ವರ್ಷಗಳಲ್ಲಿ ಯುವ ವಕೀಲರಲ್ಲಿ ಅಧ್ಯಯನದ ಕೊರತೆ ಕಾಣುತ್ತಿದೆ. ಪ್ರಕರಣಗಳ ಕಡತಗಳನ್ನು ಸರಿಯಾಗಿ ಪರಿಶೀಲಿಸದೆ ಆತುರಾತುರವಾಗಿ ಮುಂದುವರೆಸುತ್ತಿರುವುದು ಕಂಡುಬರುತ್ತಿದೆ. ಇದರಿಂದ ವಿನಾಕಾರಣ ವಕೀಲರು, ನ್ಯಾಯಾಲಯ ಹಾಗೂ ಮುಖ್ಯವಾಗಿ ಕಕ್ಷಿದಾರರ ಅಮೂಲ್ಯ ಸಮಯ ಹಾಳಾಗುತ್ತಿದೆ. ವಕೀಲಿ ವೃತ್ತಿಯನ್ನು ಇಷ್ಟಪಟ್ಟು ಆಯ್ದುಕೊಂಡಿರುವ ಯುವ ವಕೀಲರು ಹೆಚ್ಚು ಅಧ್ಯಯನ ಮಾಡಿ, ಎಲ್ಲವನ್ನೂ ತಿಳಿದುಕೊಂಡು ಸಮರ್ಥವಾಗಿ ವಾದ ಮಂಡಿಸಬೇಕು ಎಂದು ಅವರು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಿಲ್ಪ, ಪ್ರಧಾನ ಸಿವಿಲ್ ನ್ಯಾಯಾಧೀಶೆ ಸುಕನ್ಯ, ಹಿರಿಯ ವಕೀಲ ಎಂ. ಪಾಪಿರೆಡ್ಡಿ, ವಕೀಲರ ಸಂಘದ ಅಧ್ಯಕ್ಷ ಎ. ನಾರಾಯಣಸ್ವಾಮಿ, ಕಾರ್ಯದರ್ಶಿ ಸಿ.ಜಿ. ಭಾಸ್ಕರ್ ಹಾಗೂ ಹಲವು ವಕೀಲರು ಉಪಸ್ಥಿತರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

error: Content is protected !!