16.1 C
Sidlaghatta
Monday, December 29, 2025
Home Blog Page 62

ನಮ್ಮ ಭಾಷೆ, ವಿಚಾರ, ನಮ್ಮತನಕ್ಕೆ ದಕ್ಕೆಯಾದಾಗ ಧ್ವನಿ ಎತ್ತುವಂತಾಗಬೇಕು

0
Sidlaghatta Dolphins pu college kannada sahitya academy programme

Sidlaghatta : ನಮ್ಮ ಭಾಷೆ, ನಮ್ಮ ವಿಚಾರಗಳು, ನಮ್ಮತನಕ್ಕೆ ದಕ್ಕೆ ಆದಾಗ ಧ್ವನಿ ಎತ್ತಬೇಕು. ಧ್ವನಿ ಎತ್ತದಿದ್ದಲ್ಲಿ ನಮ್ಮತನವನ್ನು ನಾವು ಕಳೆದುಕೊಳ್ಳುತ್ತೇವೆ, ನಮ್ಮ ನಾಡಿನಲ್ಲಿ ನಾವೇ ಪರಕೀಯರಂತೆ ನಿರಭಿಮಾನದ ಬದುಕನ್ನು ಬದುಕಬೇಕಾಗುತ್ತದೆ ಎಂದು ಸಾಹಿತ್ಯ ಅಕಾಡೆಮಿ ಸದಸ್ಯೆ ಹಾಗೂ ಲೈಂಗಿಕ ಅಲ್ಪಸಂಖ್ಯಾತರ ಪರ ಹಕ್ಕುಗಳ ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ ಅಭಿಪ್ರಾಯಪಟ್ಟರು.

ಕರ್ನಾಟಕ ಸಾಹಿತ್ಯ ಅಕಾಡೆಮಿ ಹಾಗೂ ಚಿಕ್ಕಬಳ್ಳಾಪುರ ಚಕೋರ ಸಾಹಿತ್ಯ ವೇದಿಕೆ ಆಶ್ರಯದಲ್ಲಿ ನಗರದ ಡಾಲ್ಫಿನ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ “ಸಾಹಿತ್ಯದಲ್ಲಿ ಸಮ ಸಮಾಜದ ಆಶಯಗಳು” ಮತ್ತು “ಕುವೆಂಪು ಮಂತ್ರ ಮಾಂಗಲ್ಯ” ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ತಮಿಳು ಚಿತ್ರನಟ ಕಮಲ್ ಹಾಸನ್ ಅವರು ತಮಿಳು ಭಾಷೆಯಿಂದ ಕನ್ನಡ ಹುಟ್ಟಿತು ಎಂದು ನೀಡಿರುವ ಹೇಳಿಕೆಯನ್ನು ಕನ್ನಡ ನಾಡಿನ ಸಾಮಾನ್ಯ ಪ್ರಜೆಗಳಾಗಿ ನಾವು ಒಪ್ಪಲು ಸಾಧ್ಯವಿಲ್ಲ. ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನ ಮಾನ ದೊರೆತಿದೆ. ಎಂಟು ಜ್ಞಾನ ಪೀಠ ಪ್ರಶಸ್ತಿಗಳು ಕನ್ನಡಕ್ಕೆ ಸಿಕ್ಕ ಹೆಗ್ಗಳಿಕೆ ನಮ್ಮ ಭಾಷೆ, ಸಾಹಿತ್ಯಕ್ಕೆ ಇದೆ ಎಂದರು.

ನಾವು ತಪ್ಪು ಒಪ್ಪುಗಳನ್ನು ಪ್ರಶ್ನಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿ ಮತ್ತು ಯುವಜನರು ಹೋರಾಟದ ಮನೋಭಾವವನ್ನು ಕೂಡ ಬದುಕಿನಲ್ಲಿ ಅಳವಡಿಸಿಕೊಳ್ಳುವಂತಾಗಬೇಕು ಎಂದು ಹೇಳಿದರು.

ಲೈಂಗಿಕ ಅಲ್ಪಸಂಖ್ಯಾತರ ಬಗ್ಗೆ ಸಮಾಜದಲ್ಲಿ ಒಂದು ರೀತಿಯ ಅಸಡ್ಡೆಯ ಭಾವ ಒಂದು ಕಾಲದಲ್ಲಿತ್ತು. ಸಂವಿಧಾನದಲ್ಲೂ ನಾವು ಅಪರಾಧಿಗಳೆ ಆಗಿದ್ದೆವು. ಆದರೆ ನಾವು ಅದರ ವಿರುದ್ದ ಹೋರಾಟ ಮಾಡಿದರ ಫಲ ಇಂದು ನಾವು ಕೂಡ ಸಮಾಜದ ಒಂದು ಭಾಗವಾಗಿದ್ದೇವೆ ಎಂದರು.

ನಾನು ಬರೆದ “ಕರುಣೆಗೊಂದು ಸವಾಲು ಅಕ್ಕೈ” ಪುಸ್ತಕಕ್ಕೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿದೆಯಲ್ಲದೆ ರಾಜ್ಯದ ಅನೇಕ ವಿಶ್ವ ವಿದ್ಯಾಲಯಗಳು ಅದನ್ನು ಪಠ್ಯವನ್ನಾಗಿ ಅಳವಡಿಸಿಕೊಂಡಿರುವುದಕ್ಕೆ ಸಂತಸವಾಗುತ್ತದೆ ಮತ್ತು ಇದು ಹೋರಾಟಗಾರರಿಗೆ, ಶೋಷಿತರಿಗೆ, ಲೈಂಗಿಕ ಅಲ್ಪ ಸಂಖ್ಯಾತರಿಗೆ ಮಾದರಿಯೂ ಪ್ರೇರಣೆಯೂ ಆಗಲಿ ಎಂದು ಆಶಿಸಿದರು.

ಕನ್ನಡ ಉಪನ್ಯಾಸಕ ಎಂ.ಮುನಿರಾಜು ಮುಖ್ಯ ಭಾಷಣಕಾರರಾಗಿ ಮಾತನಾಡಿ, ಕನ್ನಡ ಸಾಹಿತ್ಯದಲ್ಲಿ ವಾಲ್ಮೀಕಿ ರಾಮಾಯಣದಿಂದ ಹಿಡಿದು ಪಂಪ, ಬಸವಣ್ಣ, ಕನಕದಾಸ, ಸರ್ವಜ್ಞ ಹಾಗೂ ಆದುನಿಕ ಸಾಹಿತ್ಯದ ಕುವೆಂಪು ರವರ ಹಾದಿಯಾಗಿ ಸಮ ಸಮಾಜ ಕುರಿತು ಸಾಹಿತ್ಯದ ಮೂಲಕ ಜಾಗೃತಿಯನ್ನು ಮೂಡಿಸಿರುವುದು ಸಾಹಿತ್ಯ ಕ್ಷೇತ್ರದ ಹೆಮ್ಮೆಯ ವಿಚಾರವಾಗಿದೆ ಎಂದರು.

ಸಮಾಜದಲ್ಲಿ ಇರುವ ಅಸಮಾನತೆಯನ್ನು ಮತ್ತು ಮದುವೆಗಳ ಆಡಂಬೋಲ ನಿವಾರಿಸಲು ಕುವೆಂಪು ರವರು ಸರಳ ಸುಂದರ ಮಂತ್ರ ಮಾಂಗಲ್ಯದ ಮೂಲಕ ಮದುವೆ ಆಗಬೇಕೆಂದು ಅವರು ನೀಡಿರುವ ಮಾರ್ಗ ಇಂದಿಗೂ ಆದರ್ಶವಾಗಿದೆ ಎಂದು ಹೇಳಿದರು.

ಆ ಮೂಲಕ ಮೌಡ್ಯ, ಮೂಡ ನಂಬಿಕೆ, ಅಂಧಾಚಾರಗಳಿಗೆ ಮನಸೋಲದೆ ಜಾತಿ, ಮತ, ಧರ್ಮ, ಭಾಷೆ, ದೇಶ ಯಾವುದರ ಹಂಗಿಲ್ಲದೆ ನಡೆಸಲು ಕುವೆಂಪು ಮಂತ್ರ ಮಾಗಲ್ಯ ಮಾದರಿ ಆಗಿದೆ. ಆ ಮೂಲಕ ಸಮ ಸಮಾಜದ ನಿರ್ಮಾಣಕ್ಕೆ ಅವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರು ಆಳವಡಿಸಿಕೊಂಡು ಸಮ ಸಮಾಜದ ನಿರ್ಮಾಣಕ್ಕೆ ಮಾದರಿಯಾಗಬೇಕೆಂದು ತಿಳಿಸಿದರು.

ಕನ್ನಡ ಶಿಕ್ಷಕ ವಿ.ನಾರಾಯಣಸ್ವಾಮಿ ಅವರು ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮ ನಡೆಸಿಕೊಟ್ಟರು. ಡಾಲ್ಫಿನ್ಸ್ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಪ್ರೊ.ಎನ್.ಶ್ರೀನಿವಾಸಮೂರ್ತಿ, ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಎಸ್.ವಿ.ನಾಗರಾಜ ರಾವ್, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎ. ನಾರಾಯಣಸ್ವಾಮಿ, ಕಸಾಪ ತಾಲ್ಲೂಕು ಅಧ್ಯಕ್ಷ ನಾರಾಯಣಸ್ವಾಮಿ, ಕನ್ನಡ ಕಸ್ತೂರಿ ಜನಪರ ವೇದಿಕೆ ಜಿಲ್ಲಾಧ್ಯಕ್ಷ ರಾಮಾಂಜಿ, ಚಕೋರ ಸಾಹಿತ್ಯ ವಿಚಾರ ವೇದಿಕೆ ಜಿಲ್ಲಾ ಸಂಚಾಲಕ ಪಾತಮುತ್ತಕಹಳ್ಳಿ ಮು.ಚಲಪತಿಗೌಡ, ಈ ಧರೆ ಪ್ರಕಾಶ್ ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ವಿಶ್ವ ಯೋಗ ದಿನಾಚರಣೆ, ಲೇಖನಸಾಮಗ್ರಿಗಳ ವಿತರಣೆ

0
Sugaturu Government School Yoga day

Sugaturu, Sidlaghatta : ಪ್ರಾಚೀನ ಭಾರತೀಯ ಆರೋಗ್ಯ ಮತ್ತು ಮೂಲಜೀವನಪದ್ದತಿಯ ರೂಪದಲ್ಲಿ ಯೋಗವು ಇಂದಿಗೂ ಬಳಕೆಯಾಗುತ್ತಿದ್ದು, ವಿಶ್ಪದಾದ್ಯಂತ ಬಹುತೇಕ ರಾಷ್ಟ್ರಗಳು ಜೀವನ ಶೈಲಿಯ ರೂಪದಲ್ಲಿ ಯೋಗವನ್ನು ಪರಿವರ್ತಿಸಿಕೊಂಡಿರುವುದು ಭಾರತದ ಹೆಮ್ಮೆಯಾಗಿದೆ. ಯೋಗದಿಂದ ಮಾನಸಿಕ ಮತ್ತು ಶಾರೀರಿಕ ಸಾಧನೆಯು ಸಾಧ್ಯವಾಗಿ ಸಕಲಾರೋಗ್ಯವು ಸುಲಭವಾಗಿ ಸಂವರ್ಧಿಸಬಲ್ಲದು ಎಂದು ಮುಖ್ಯಶಿಕ್ಷಕ ಎಚ್.ಎಸ್.ರುದ್ರೇಶಮೂರ್ತಿ ಹೇಳಿದರು.

ತಾಲ್ಲೂಕಿನ ಸುಗಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶನಿವಾರ ಜಿಗಣಿಯ ಪ್ರಶಾಂತಿ ಕುಟೀರಂನ ಎಸ್-ವ್ಯಾಸ ಡೀಮ್ಡ್ ಯೂನಿವರ್ಸಿಟಿಯ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಯೋಗದಿನಾಚರಣೆ, ಲೇಖನ ಸಾಮಗ್ರಿಗಳ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಯೋಗವು ಭಾವನಾತ್ಮಕ ಚೈತನ್ಯವನ್ನು ಒದಗಿಸಿ ಆಧ್ಯಾತ್ಮಿಕ ಸಾಧನೆಗೆ ಪೂರಕವಾಗಿ ಎಡೆಮಾಡಿಕೊಡುತ್ತದೆ. ಯೋಗವು ಭಾರತೀಯ ಸಂಸ್ಕೃತಿಯ ಪ್ರತೀಕವಾಗಿದ್ದು ರೋಗಗಳನ್ನು ತಡೆಯುವ ಶಕ್ತಿ ಇದೆ. ಶರೀರವನ್ನು ಪ್ರಕೃತಿಗೆ ಸರಿಯಾಗಿ ಹೊಂದಿಸಬಲ್ಲ ಶರೀರದ ರಹಸ್ಯ ತಿಳಿಸಬಲ್ಲ ಸೂಕ್ತ ವಿದ್ಯೆಯಾಗಿದೆ.

ಭಾರತೀಯ ಮೂಲದ ಯೋಗಾಭ್ಯಾಸಕ್ಕೆ ವಿಶ್ವಮನ್ನಣೆ ಸಿಕ್ಕಿದೆ. ಇಡೀ ಜಗತ್ತಿನ ಸುಮಾರು 200 ಕ್ಕೂ ಹೆಚ್ಚು ರಾಷ್ಟ್ರಗಳು ಯೋಗವನ್ನು ಒಪ್ಪಿಕೊಂಡು ಭಾರತಕ್ಕೆ ಯೋಗದ ಮೂಲಕ ನಮಿಸಿವೆ. ಆಧುನೀಕರಣದ ಪರಿಣಾಮಗಳ ಸುಧಾರಣೆಗಾಗಿ ಹಿಂದಿಗಿಂತಲೂ ಯೋಗವು ಇಂದಿಗೆ ಅನುಕರಣೀಯವಾಗಿದೆ. ಪ್ರಾಥಮಿಕ ಶಿಕ್ಷಣ ಹಂತದಿಂದಲೇ ಯೋಗಶಿಕ್ಷಣವನ್ನು ಕಡ್ಡಾಯಗೊಳಿಸಿ, ಮಕ್ಕಳದಿಸೆಯಿಂದಲೇ ಯೋಗಾಭ್ಯಾಸವನ್ನು ರೂಢಿಗೊಳಿಸಬೇಕು. ದೇಹಾರೋಗ್ಯ, ಇಂದ್ರಿಯ ನಿಗ್ರಹ, ಮಾನಸಿಕ ಸಂಯಮ, ಏಕಾಗ್ರತೆ, ಸ್ಮರಣಶಕ್ತಿಯೊಂದಿಗೆ ಬುದ್ಧಿವಿಕಸನ ಮಾಡಿಕೊಳ್ಳಲು ನಿಯಮಿತವಾದ ಯೋಗಾಭ್ಯಾಸ ಅಗತ್ಯ ಎಂದರು.

ಎಸ್-ವ್ಯಾಸ ಡೀಮ್ಡ್ ಯೂನಿವರ್ಸಿಟಿಯ ನ್ಯಾಚುರೋಪತಿ ವಿಭಾಗದ ಎಸ್.ಕೃತ್ತಿಕಾ ಮಾತನಾಡಿ, ಯುವಪೀಳಿಗೆಯು ದೃಶ್ಯಮಾಧ್ಯಮಗಳಿಂದ ಅನುಕೂಲಕರವಾಗಿ ಸ್ವಲ್ಪ ಅಂತರಕಾಯ್ದುಳ್ಳಬೇಕು. ದೇಹಾರೋಗ್ಯದ ದೃಷ್ಟಿಯಿಂದ ಯೋಗಾಭ್ಯಾಸಕ್ಕೆ ಒತ್ತುಕೊಡಬೇಕು. ಯೋಗದಿಂದ ಏಕಾಗ್ರತೆ ಹೆಚ್ಚುವುದರೊಂದಿಗೆ ಆರೋಗ್ಯ ವೃದ್ಧಿಯಾಗುತ್ತದೆ. ದೇಶದ ಯೋಗಕ್ಕೆ ವಿಶ್ವ ಮಟ್ಟದ ಮಾನ್ಯತೆ ದೊರೆತಿದ್ದು ಯೋಗಾಭ್ಯಾಸದ ಅನುಕೂಲಗಳು ವೈಜ್ಞಾನಿಕವಾಗಿ ದೃಢಪಟ್ಟಿವೆ. ಯೋಗ, ಧ್ಯಾನವು ಮನುಷ್ಯನೊಳಗಿನ ಅಂತಃಶಕ್ತಿಯನ್ನು ಜಾಗೃತಗೊಳಿಸುತ್ತದೆ ಎಂದರು.

ವಿದ್ಯಾರ್ಥಿಗಳಿಂದ ಯೋಗಪ್ರದರ್ಶನ ನಡೆಯಿತು. ವಿದ್ಯಾರ್ಥಿಗಳಿಗೆ ವೈಯಕ್ತಿಕ ಸ್ವಚ್ಚತೆಗಾಗಿ ಕಿಟ್, ಜಾಮಿಟ್ರಿ ಬಾಕ್ಸ್, ವಾಟರ್‌ಬಾಟಲ್, ಪುಸ್ತಿಕ, ಪೆನ್ಸಿಲ್ ಮತ್ತಿತರ ಲೇಖಸಾಮಗ್ರಿಗಳನ್ನು ವಿತರಿಸಲಾಯಿತು. ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಎಸ್‌.ಡಿ.ಎಂ.ಸಿ ಅಧ್ಯಕ್ಷ ವೆಂಕಟೇಶ್, ಶಿಕ್ಷಕ ಎ.ಬಿ.ನಾಗರಾಜ, ಬಿ.ನಾಗರಾಜು, ಮಧು, ಶಿಕ್ಷಕಿ ತಾಜೂನ್, ಎಸ್‌.ಡಿ.ಎಂ.ಸಿ ಮಾಜಿ ಸದಸ್ಯ ಬಚ್ಚೇಗೌಡ, ವೇಣುಗೋಪಾಲ್ ಎಸ್-ವ್ಯಾಸ ಯೂನಿವರ್ಸಿಟಿಯ ಆರ್.ಹಿರಣ್ಯ, ಎಸ್.ಹರಿಪ್ರಿಯಾ ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-21/06/2025

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 20/06/2025

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 498
Qty: 28976 Kg
Mx : ₹ 579
Mn: ₹ 303
Avg: ₹ 486

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 09
Qty: 613 Kg
Mx : ₹ 600
Mn: ₹ 522
Avg: ₹ 561


For Daily Updates WhatsApp ‘HI’ to 7406303366

ದೇವಾಲಯ ಉದ್ಘಾಟನೆ ಮತ್ತು ನೂತನ ಶಿಲಾ ವಿಗ್ರಹಗಳ ಪ್ರತಿಷ್ಠಾಪನೆ

0
Sidlaghatta Jangamakote Temple Inauguration

Jangamakote, Sidlaghatta : ನಮ್ಮ ಮಕ್ಕಳಿಗೆ, ಯುವ ಜನರಿಗೆ ನಾವು ಆಸ್ತಿ ಅಂತಸ್ತು ಹಣವನ್ನು ಕೊಡುವುದಲ್ಲ. ಬದಲಿಗೆ ಸಂಸ್ಕಾರವನ್ನು ಹೇಳಿಕೊಡಬೇಕು ಮತ್ತು ಸಂಸ್ಕಾರವನ್ನೆ ಬಳುವಳಿಯಾಗಿ ಕೊಡಬೇಕಿದೆ ಎಂದು ವಿಜಯಪುರ ಬಸವ ಕಲ್ಯಾಣ ಮಠದ ಶ್ರೀಮಹದೇವಸ್ವಾಮಿ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಜಂಗಮಕೋಟೆ ಹೋಬಳಿಯ ಹೊಸಪೇಟೆ ಗ್ರಾಮದಲ್ಲಿ ಶುಕ್ರವಾರ ನಡೆದ ಶ್ರೀಮುನೇಶ್ವರಸ್ವಾಮಿ ಮತ್ತು ಸಪ್ತಮಾತೃಕೆದೇವಿಯ ದೇವಾಲಯ ಉದ್ಘಾಟನೆ ಮತ್ತು ನೂತನ ಶಿಲಾ ವಿಗ್ರಹಗಳ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿದರು.

ನಮ್ಮ ಮಕ್ಕಳು ಮತ್ತು ಯುವಜನರಿಗೆ ಸಂಸ್ಕಾರ, ದೇವರು, ತಂದೆ, ತಾಯಿ, ಧರ್ಮ ಎಂದರೆ ಏನು ಎಂದು ತಿಳಿಸಿಕೊಡಬೇಕು, ಅವುಗಳ ಮಹತ್ವವನ್ನು ಕೂಡ ಮನನ ಮಾಡಿಕೊಡಬೇಕು ಎಂದರು.

ಧರ್ಮ ಎಂದರೆ ಇನ್ನೊಬ್ಬರಿಗೆ ಕೆಡುಕನ್ನು ಬಯಸದೆ ಎಲ್ಲರಿಗೂ ಒಳ್ಳೆಯದಾಗುವ, ಎಲ್ಲರ ಹಿತ ಕಾಯುವ ಕಾಯಕ ಮಾಡುವುದೆ ಧರ್ಮ ಎಂದು ಧರ್ಮದ ಮಹತ್ವವನ್ನು ವಿವರಿಸಿದರು.

ಗ್ರಾಮಗಳಲ್ಲಿ ಎಲ್ಲರೂ ಒಟ್ಟುಗೋಡಿ ಹಳೆಯ ದೇವಾಲಯಗಳನ್ನು ಜೀರ್ಣೋದ್ಧಾರ ಮಾಡುವುದು, ನಿತ್ಯ ಪೂಜೆ ಮಾಡುವುದು, ಇತರರಿಗೆ ಒಳ್ಳೆಯದನ್ನೇ ಬಯಸುವ ಮತ್ತು ಒಳ್ಳೆಯದನ್ನೇ ಮಾಡುವುದನ್ನೆ ಸನಾತನ ಧರ್ಮ ಹೇಳುತ್ತದೆ. ಅದನ್ನು ಎಲ್ಲರೂ ಪಾಲಿಸೋಣ ಎಂದು ಹೇಳಿದರು.

ನಮ್ಮ ಮಕ್ಕಳಿಗೆ ನಾವು ಉತ್ತಮ ಶಿಕ್ಷಣವನ್ನು ಕೊಡಿಸುತ್ತಿದ್ದೇವೆ. ಅದಷ್ಟೆ ಉತ್ತಮ ವ್ಯಕ್ತಿತ್ವ ರೂಪುಗೊಳ್ಳಲು ಸಾಧ್ಯವಿಲ್ಲ. ಶಿಕ್ಷಣದ ಜತೆಗೆ ಧರ್ಮ, ಸಂಸ್ಕಾರ, ತಂದೆ, ತಾಯಿ, ಗುರುಗಳ ಮಹತ್ವವನ್ನು ತಿಳಿಸುವ ಮೂಲಕ ಅವರನ್ನು ಸಂಸ್ಕಾರವಂತರನ್ನಾಗಿ ಮಾಡಬೇಕಿದೆ ಎಂದು ಹೇಳಿದರು.

ಶ್ರೀಮುನೇಶ್ವರಸ್ವಾಮಿ ಮತ್ತು ಸಪ್ತ ಮಾತೃಕೆದೇವಿಯ ದೇವಾಲಯ ಉದ್ಘಾಟನೆ ಮತ್ತು ನೂತನ ಶಿಲಾ ವಿಗ್ರಹಗಳ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ವಿಶೇಷ ಹೂವಿನ ಅಲಂಕಾರ ಮಾಡಿ ನಾನಾ ವಿಧದ ಹೋಮವನ್ನು ನಡೆಸಿ ಮಹಾ ಮಂಗಳಾರತಿ ಮಾಡಿ ತೀರ್ಥ ಪ್ರಸಾದವನ್ನು ವಿನಿಯೋಗಿಸಲಾಯಿತು.

ಗ್ರಾಮದ ಹಿರಿಯರಾದ ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ಗುಡಿಯಪ್ಪ, ಕೆಎಂಎಫ್ ನಿರ್ದೇಶಕ ಆರ್.ಶ್ರೀನಿವಾಸ್, ಕೆಪಿಸಿಸಿ ಸಂಯೋಜಕ ರಾಜೀವ್‌ಗೌಡ, ವೆಂಕಟೇಶ್ವರ ಇಂಜಿನಿಯರಿಂಗ್ ಕಾಲೇಜಿನ ವ್ಯವಸ್ಥಾಪಕ ನಿರ್ದೇಶಕ ಎಂ.ಶಶಿಧರ್, ಬಿಜೆಪಿ ಮುಖಂಡ ಸೀಕಲ್ ಆನಂದಗೌಡ, ಕಾಂಗ್ರೆಸ್ ಮುಖಂಡ ಪುಟ್ಟು ಆಂಜಿನಪ್ಪ, ಗೌತಮ್,ಶಶಿಕುಮಾರ್, ಮಂಜುನಾಥಗೌಡ, ಬಸವಾಪಟ್ಟಣ ಬೈರೇಗೌಡ, ಬೀರೇಗೌಡ, ಬಸಪ್ಪ, ರಮೇಶ್, ವೆಂಕಟರೆಡ್ಡಿ, ಘಟ್ಟಮಾರನಹಳ್ಳಿ ಪ್ರಕಾಶ್, ಅಶೋಕ್ ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ಶಾಲಾ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮ

0
Sidlaghatta Sri Sai International School Aksharabhyasha Programme

Sidlaghatta : ಮಕ್ಕಳಿಗೆ ಉತ್ತಮ ಭವಿಷ್ಯವನ್ನು ರೂಪಿಸುವಲ್ಲಿ ಪೋಷಕರವು ಪಾತ್ರ ಮಹತ್ತರವಾಗಿದೆ. ಆದ್ದರಿಂದ ಅವರಲ್ಲಿ ಶಿಸ್ತು, ಆಚಾರ, ವಿಚಾರ ಹಾಗೂ ಸಂಸ್ಕೃತಿಯನ್ನು ಮೈಗೂಡಿಸಿ, ದೇಶದ ಆಸ್ತಿಗಳನ್ನಾಗಿ ರೂಪಿಸಬೇಕಿದೆ ಎಂದು ಶ್ರೀಸಾಯಿ ಇಂಟರ್ ನ್ಯಾಷನಲ್ ರೆಸಿಡೆನ್ಸಿಯಲ್ ಶಾಲೆಯ ಅಧ್ಯಕ್ಷೆ ದೀಪಾ ಮಂಜುನಾಥ್ ತಿಳಿಸಿದರು.

ತಾಲ್ಲೂಕಿನ ಬಶೆಟ್ಟಹಳ್ಳಿ ಕ್ರಾಸ್ ನಲ್ಲಿರುವ ಶ್ರೀಸಾಯಿ ಇಂಟರ್ ನ್ಯಾಷನಲ್ ರೆಸಿಡೆನ್ಸಿಯಲ್ ಶಾಲೆಯಲ್ಲಿ, ನರ್ಸರಿ, ಎಲ್.ಕೆ.ಜಿ ಹಾಗೂ ಯುಕೆಜಿ ಮಕ್ಕಳಿಗಾಗಿ ಹಮ್ಮಿಕೊಂಡಿದ್ದ ಅಕ್ಷರಾಭ್ಯಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ತಂದೆ-ತಾಯಿ ಮಕ್ಕಳು ಸಜ್ಜನರಾಗಿ ಬೆಳೆಯಲು ಉತ್ತಮ ವಾತಾವರಣ ಕಲ್ಪಿಸಬೇಕು. ಅವರಿಗೆ ಮಹನೀಯರ ಕಥೆಗಳನ್ನು ಹೇಳಿ ಅವರ ಆದರ್ಶಗಳನ್ನು ಮಕ್ಕಳಲ್ಲಿ ಮೈಗೂಡಿಸಬೇಕೆಂದು ಹೇಳಿದರು.

ಶಾಲೆಯಿಂದ ಬರುವ ಮಕ್ಕಳಿಗೆ ಮನೆಯಲ್ಲಿ ಸರಿಯಾಗಿ ಪಾಠ ಕಲಿಸಬೇಕು. ಮಕ್ಕಳ ಮುಂದೆ ಯಾವುದೇ ಕಾರಣಕ್ಕೂ ಜಗಳವಾಡಬಾರದು. ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಲು ತಾಯಿಯ ಪಾತ್ರ ನಿರಂತರವಾಗಿರಬೇಕು. ತಾಯಿಯಿಂದ ಪ್ರಾರಂಭವಾದ ಪಾಠದಿಂದ ಮಕ್ಕಳು ಸರಿಯಾದ ದಾರಿಯಲ್ಲಿ ಸಾಗಿದರೆ, ಅತ್ಯುನ್ನತ ಸ್ಥಾನ ತಲುಪಬಹುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹಿಂದೂ-ಮುಸ್ಲಿಮರು ಎನ್ನುವ ಬೇಧಭಾವವಿಲ್ಲದೆ, ತಮ್ಮ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದರು.

ಶಾಲೆಯ ಸಂಸ್ಥಾಪಕ ಮಂಜುನಾಥ್, ಮುಖ್ಯ ಶಿಕ್ಷಕರಾದ ಪ್ರೀತಿ, ಮುಬಾರಕ್, ಸಹಶಿಕ್ಷಕರಾದ ಅಮರಾವತಿ, ಭೂಮಿಕ, ಅಕೋನ, ರೂಥ್, ಕಲಾವತಿ, ನಾಗೇಂದ್ರ, ನಾಗಮಣಿ, ಬಿಂದು, ಪ್ರಿಯಾಂಕ, ಶ್ರೀನಿವಾಸ್, ಸುಷ್ಮಾ, ಉಷಾ, ಸರಿತ, ನವೀನ್ ಕುಮಾರ್, ಸೌಮ್ಯ, ಅಭಯ ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ಸಾದಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅವಿರೋಧ ಆಯ್ಕೆ

0
Sidlaghatta Sadali gram Panchayat Election

Sadali, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಸಾದಲಿ ಹೋಬಳಿಯ ಸಾದಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಜೆಡಿಎಸ್ ಬೆಂಬಲಿತ ಸದಸ್ಯೆ ವನಜಾಕ್ಷಿ ಪೆದ್ದಪ್ಪಯ್ಯ ಗುರುವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷೆಯಾಗಿದ್ದ ನಿರ್ಮಲಮ್ಮ ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ವನಜಾಕ್ಷಿ ಮಾತ್ರವೇ ನಾಮಪತ್ರ ಸಲ್ಲಿಸಿದ್ದರು. ಹಾಗಾಗಿ ಚುನಾವಣಾಧಿಕಾರಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಜಗದೀಶ್ ಅವಿರೋಧ ಆಯ್ಕೆ ಘೋಷಣೆ ಮಾಡಿದರು.

ಅಧ್ಯಕ್ಷೆಯಾಗಿ ವನಜಾಕ್ಷಿ ಆಯ್ಕೆಯಾಗುತ್ತಿದ್ದಂತೆ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ನಿರ್ಮಲಮ್ಮ, ಉಪಾಧ್ಯಕ್ಷೆ ಮುನಿನರಸಮ್ಮ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅರುಣ ಕುಮಾರಿ, ಕಾರ್ಯದರ್ಶಿ ವೆಂಕಟೇಶ್, ಆನಂದ್, ಸದಸ್ಯರಾದ ಆವುಲ ರೆಡ್ಡಿ, ವಿಜಯಾನಂದ, ಶಶಿಕಲಾ ಸುರೇಶ್, ಗಂಗಾಧರ್, ಅನುಸೂಯಮ್ಮ, ನಿಲವರಾತಹಳ್ಳಿ ಶ್ರೀನಿವಾಸ್, ಸುರೇಶ್, ವೆಂಕಟನರಸಿಂಹಪ್ಪ ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-20/06/2025

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 20/06/2025

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 415
Qty: 24288 Kg
Mx : ₹ 572
Mn: ₹ 365
Avg: ₹ 493

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 05
Qty: 406 Kg
Mx : ₹ 596
Mn: ₹ 556
Avg: ₹ 581


For Daily Updates WhatsApp ‘HI’ to 7406303366

ಶಿಡ್ಲಘಟ್ಟದ “ಗೌಡನ ಕೆರೆ” ಕಟ್ಟಿಸಿದ್ದ ಶಿವನೇಗೌಡ ಹೆಸರಿರುವ ಶಾಸನ ಪತ್ತೆ

0
Sidlaghatta History Scripture Found Archeology

Sidlaghatta : ಶಿಡ್ಲಘಟ್ಟ ನಗರದ ಆಗ್ನೇಯ ದಿಕ್ಕಿನಲ್ಲಿರುವ “ಗೌಡನ ಕೆರೆ”ಗೆ ಸುಮಾರು ಐದು ಶತಮಾನಗಳ ಇತಿಹಾಸವಿದೆ. ಶಿಡ್ಲಘಟ್ಟ ನಗರದ ನಿರ್ಮಾತೃ ಹಲಸೂರಮ್ಮನ ಮಗ ಶಿವನೇಗೌಡ ಈ ಕೆರೆಯನ್ನು ಕಟ್ಟಿಸಿದ್ದರಿಂದಾಗಿ ಇದಕ್ಕೆ “ಗೌಡನ ಕೆರೆ” ಎಂಬ ಹೆಸರು ಬಂತೆಂದು ಪ್ರತೀತಿಯಿದೆ.

ಶಿವನೇಗೌಡರು 47 ವರ್ಷಗಳ ಕಾಲ ಈ ಊರನ್ನು ಆಳಿರುವುದಾಗಿ ಇತಿಹಾಸದಲ್ಲಿ ದಾಖಲಾಗಿದೆ. ಇದೀಗ ಶಿವನೇಗೌಡರ ಹೆಸರಿರುವ ಶಾಸನ ತಾಲ್ಲೂಕಿನ ಸೊಣ್ಣೇನಹಳ್ಳಿಯ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಪತ್ತೆಯಾಗಿದೆ. ಪುರಾತತ್ವ ಇಲಾಖೆಯಿಂದ ಶಿಡ್ಲಘಟ್ಟ ತಾಲ್ಲೂಕಿನ ಗ್ರಾಮಾವಾರು ಸರ್ವೆಗಾಗಿ ಆಗಮಿಸಿದ್ದ ಶಾಸನತಜ್ಞ ಕೆ.ಧನಪಾಲ್ ಮತ್ತು ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಎ.ಎಂ.ತ್ಯಾಗರಾಜ್, ಇದುವರೆಗೂ ಪ್ರಕಟವಾಗದಿರುವ ಈ ಶಾಸನವನ್ನು ಪತ್ತೆಹಚ್ಚಿರುವರು. ಕನ್ನಡ ಲಿಪಿ, ತೆಲುಗು ಭಾಷೆಯಲ್ಲಿರುವ ಈ ಶಾಸನವನ್ನು ಕ್ರಿ.ಶ. 1590 ರಲ್ಲಿ ಬರೆಯಲಾಗಿದೆ. ಆಗ ವಿಜಯನಗರ ಸಾಮ್ರಾಜ್ಯವನ್ನು ವೆಂಕಟಪತಿರಾಯರು ಆಳುತ್ತಿದ್ದರು. ಅವರ ಸಾಮಂತರಾಗಿ ಸುಗುಟೂರು ಪ್ರಾಂತ್ಯವನ್ನು ಇಮ್ಮಡಿ ತಮ್ಮಪ್ಪಗೌಡರು ಆಳ್ವಿಕೆ ನಡೆಸುವಾಗ, ಶಿಡ್ಲಘಟ್ಟ ಪ್ರಾಂತ್ಯವನ್ನು ಆಳಿ, ಅಪಾರ ಜನಸೇವೆ ಮಾಡಿ, ಉತ್ತಮ ಆಡಳಿತ ನಡೆಸಿ ದೈವಸನ್ನಿಧಿಗೆ ಸೇರಿರುವ ಶಿವನೇಗೌಡರ ನೆನಪಿನಲ್ಲಿ ಅವರ ಅನುಯಾಯಿಗಳಾದ ನಾಣಪ್ಪಗೌಡರ ಮಗ ಶಿಲೇಗೌಡರು, ಶಿವಸಮುದ್ರ ಎಂಬ ಕೆರೆಯನ್ನು ಜನೋಪಕಾರಕ್ಕಾಗಿ ಕಟ್ಟಿಸಿ ದಾನ ಮಾಡಿರುವುದಾಗಿ ಇದರಲ್ಲಿ ಬರೆದಿರುವರು.

“ಈ ಶಾಸನವನ್ನು ಕ್ರಿ.ಶ. 1590 ರ ಜುಲೈ ತಿಂಗಳ 21 ನೇ ತಾರೀಖಿನ ಮಂಗಳವಾರ ಸೂರ್ಯ ಗ್ರಹಣದ ದಿನದಂದು ಬರೆಯಲಾಗಿದೆ. ಗ್ರಹಣದ ದಿನ ದಾನ ಕೊಟ್ಟರೆ ಎಲ್ಲರಿಗೂ ಒಳ್ಳೆಯದಾಗುತ್ತದೆಂಬ ನಂಬಿಕೆ ನಮ್ಮ ಹಿರಿಯರದ್ದು. ಹಾಗಾಗಿ ಜನಾನುರಾಗಿ ಆಡಳಿತಗಾರ ಶಿವನೇಗೌಡರ ನೆನಪಿನಲ್ಲಿ ಒಂದು ಕೆರೆಯನ್ನು ಕಟ್ಟಿಸಿ ದಾನ ಮಾಡಲಾಗಿದೆ” ಎಂದು ಶಾಸನತಜ್ಞ ಕೆ.ಧನಪಾಲ್ ತಿಳಿಸಿದರು.

ಇತಿಹಾಸ :

ಶಿಡ್ಲಘಟ್ಟದ ಸ್ಥಳ ಐತಿಹ್ಯದ ಪ್ರಕಾರ ಕ್ರಿ.ಶ.1514 ರಲ್ಲಿ ಉಜ್ಜನಿ ಮೂಲದ ಕೆಂಪೇಗೌಡ ವೆಲ್ಲೂರಿನ ಕದನದಲ್ಲಿ ನಿಧನನಾದ ಮೇಲೆ, ಗರ್ಭಿಣಿಯಾಗಿದ್ದ ಆತನ ಮಡದಿ ಹಲಸೂರಮ್ಮ ಅಬ್ಲೂಡಿನಲ್ಲಿ ಕೋಟೆ ಕಟ್ಟಿ, ಕ್ರಿ.ಶ.1526 ರಲ್ಲಿ ವ್ಯವಸ್ಥಿತವಾಗಿ ಊರನ್ನು ಕಟ್ಟಿಸಿ, ತನ್ನ ಮಾವನಾದ ಸಿಡ್ಲಗೌಡನ ಹೆಸರಿನಿಂದ “ಸಿಡ್ಲ ಘಟ್ಟ” ಎಂದು ಕರೆದಳು. ತನ್ನ ಮಗ ಶಿವನೇಗೌಡರನ್ನು 1529 ರಲ್ಲಿ ಪಟ್ಟದ ಮೇಲೆ ಕೂರಿಸಿದಳು. ಶಿಡ್ಲಘಟ್ಟದ ನೈರುತ್ಯಕ್ಕಿರುವ “ಅಮ್ಮನಕೆರೆ”ಯನ್ನು ಹಲಸೂರಮ್ಮ, ಆಗ್ನೇಯ ದಿಕ್ಕಿನಲ್ಲಿರುವ “ಗೌಡನಕೆರೆ”ಯನ್ನು ಶಿವನೇಗೌಡರು ಕಟ್ಟಿಸಿದರು. ಅಮ್ಮನಕೆರೆಯ ಅಚ್ಚುಕಟ್ಟಿನಲ್ಲಿ ಈಗಲೂ ಶಿವನೇಗೌಡರ ಸಮಾಧಿಯನ್ನು ಕಾಣಬಹುದು.

ಶಾಸನ ಅಧ್ಯಯನದ ಸಂದರ್ಭದಲ್ಲಿ ಗ್ರಾಮಸ್ಥರಾದ ದೇವಪ್ಪ, ಪಿಳ್ಳಮುನಿಯಪ್ಪ, ಲೋಕೇಶ್, ಮುನಿಕೃಷ್ಣಪ್ಪ, ಅಂಬರೀಶ್, ಗಿರೀಶ, ದೇವರಾಜು, ಅರ್ಚಕ ಜಗನ್ನಾಥ್ ಸ್ವಾಮಿ ಹಾಜರಿದ್ದರು.

“ಗೌಡನ ಕೆರೆ” ಕಟ್ಟಿಸಿದ್ದ ಶಿವನೇಗೌಡ ಹೆಸರಿರುವ ಶಾಸನ ಪತ್ತೆ | Sidlaghatta | Chikkaballapur | Karnataka

Sidlaghatta WhatsApp Channel Group

For Daily Updates WhatsApp ‘HI’ to 7406303366

ಸಮಾಜದಲ್ಲಿ ಕ್ರಾಂತಿಯುಂಟು ಮಾಡಲು ಶಿಕ್ಷಣದಿಂದ ಮಾತ್ರ ಸಾಧ್ಯ

0
Sidlaghatta Dolphins PU College Unnati Freshers Day

Sidlaghatta : ಸಮಾಜದಲ್ಲಿ ಕ್ರಾಂತಿಯುಂಟು ಮಾಡಲು ಸಾಧ್ಯವಿದ್ದಲ್ಲಿ ಅದು ಶಿಕ್ಷಣದಿಂದ ಮಾತ್ರ ಎಂದು ವಿಜ್ಞಾನ ಲೇಖಕ, ಕನ್ನಡ ಕ್ವಿಜ್ ಕಾರ್ಯಕ್ರಮದ ರೂವಾರಿ ಡಾ. ನಾ ಸೋಮೇಶ್ವರ ತಿಳಿಸಿದರು.

ನಗರದ ಡಾಲ್ಫಿನ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಉನ್ನತಿ 2025 ಸ್ವಾಗತ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇಂದು ಕಾಲೇಜುಗಳಲ್ಲಿ ಕಲಾ ವಿಭಾಗಗಳಿಗೆ ದಾಖಲಾತಿಯೇ ಶೂನ್ಯವಾಗುತ್ತಿದೆ. ಇದನ್ನು ಹೆಚ್ಚಳ ಮಾಡಬೇಕೆಂದಲ್ಲಿ ಪದವಿಯ ಜೊತೆ ಜೊತೆಗೆ ಐಎಎಸ್, ಕೆಎಎಸ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮೊದಲ ವರ್ಷದಿಂದಲೇ ತರಬೇತಿ ಕೊಡುವ ಕೆಲಸವನ್ನು ಮಾಡಬೇಕಿದೆ. ಇಂದಿನ ಯುವಜನತೆ ರಾಷ್ಟ್ರ ಸೇವೆಗೆ ಮುಂದಾಗಬೇಕು. ಪದವಿ ಪೂರ್ವ ಹಂತದಿಂದಲೇ ಎನ್‌.ಸಿ.ಸಿ ಸೇರಿ ತರಬೇತಿ ಪಡೆದು ಸಿ ಪ್ರಮಾಣ ಪತ್ರವನ್ನು ಹೊಂದಿದ್ದಲ್ಲಿ ಸೈನ್ಯ ಸೇರಲು ಸುಲಭವಾಗುತ್ತದೆ. ಈ ಮೂಲಕ ಪದವಿ ಮುಗಿದ ಕೂಡಲೇ ನೌಕಾ ಪಡೆ, ವಾಯು ಪಡೆ ಅಥವಾ ಸೈನ್ಯಕ್ಕೆ ಸೇರುವ ಮೂಲಕ ರಾಷ್ಟ್ರ ಸೇವೆಗೆ ಮುಂದಾಗಬೇಕು. ಈ ನಿಟ್ಟಿನಲ್ಲಿ ಡಾಲ್ಫಿನ್ಸ್ ಸಂಸ್ಥೆ ಎನ್‌.ಸಿ.ಸಿ ಘಟಕವನ್ನು ಹೊಂದುವುದಷ್ಟೇ ಅಲ್ಲದೇ ನೀಟ್, ಸಿಇಟಿ ಗಳಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಗ್ರಾಮೀಣ ಭಾಗದಲ್ಲಿ ತರಬೇತಿ ನೀಡುತ್ತಿರುವುದು ಪ್ರಶಂಸನೀಯವಾದುದು ಎಂದರು.

ಯುವಜನತೆ ಉತ್ತಮ ಆದಾಯವನ್ನು ಗಳಿಸುತ್ತಿದ್ದಂತೆ ವಿದೇಶಕ್ಕೆ ಹಾರುವ ಬದಲು ಸ್ವದೇಶದಲ್ಲೇ ಸೇವೆ ಸಲ್ಲಿಸುವುದು ಉತ್ತಮ. ಹೆತ್ತವರ ಜತೆಯಲ್ಲಿದ್ದು ಮಾತೃ ಸೇವೆ ಮತ್ತು ಮಾತೃದೇಶ ಸೇವೆ ಮಾಡುವುದಕ್ಕಿಂತ ಪುಣ್ಯದ ಕೆಲಸ ಬೇರೊಂದಿಲ್ಲ ಎಂದರು.

ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಒಂಬತ್ತನೇ ರ್‍ಯಾಂಕ್, ಜಿಲ್ಲೆಗೆ ಎರಡನೇ ರ್‍ಯಾಂಕ್ ಮತ್ತು ತಾಲ್ಲೂಕಿಗೆ ಮೊದಲನೇ ರ್‍ಯಾಂಕ್ ಪಡೆದ ಡಾಲ್ಫಿನ್ಸ್ ಪಿಯು ಕಾಲೇಜಿನ ವಿದ್ಯಾರ್ಥಿನಿ ತನಾಜ್ ಮಾಹಿ ಮತ್ತು ವಿಜ್ಞಾನ ವಿಭಾಗದಲ್ಲಿ ತಾಲ್ಲೂಕಿಗೆ ಎರಡನೇ ರ್‍ಯಾಂಕ್ ಪಡೆದ ಕಿರಣ್ ಬಾಲ ಎಂಬ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಡಾಲ್ಫಿನ್ಸ್ ಸಂಸ್ಥೆಯ ಅಧ್ಯಕ್ಷ ಎ.ನಾಗರಾಜ, ಕಾರ್ಯದರ್ಶಿ ವಿ. ಕೃಷ್ಣಪ್ಪ ಉದ್ಘಾಟಿಸಿ, ವ್ಯವಸ್ಥಾಪಕ ನಿರ್ದೇಶಕ ಅಶೋಕ್, ಆಡಳಿತಾಧಿಕಾರಿ ಚಂದನಾ ಅಶೋಕ್, ಪ್ರಾಂಶುಪಾಲ ಪ್ರೊ. ಶ್ರೀನಿವಾಸ ಮೂರ್ತಿ. ಎನ್, ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಜೆ. ಎ. ಸುದರ್ಶನ್, ಶಾಲೆಯ ಪ್ರಾಂಶುಪಾಲ ಆರಿಫ್ ಅಹಮದ್, ಸಿಬಿಎಸ್‌ಸಿ ವಿಭಾಗದ ಪ್ರಾಂಶುಪಾಲ ಎಲ್. ಮುನಿಕೃಷ್ಣಪ್ಪ, ಎಂ. ಎಚ್ ನಾಗೇಶ್, ಗಜೇಂದ್ರ, ಜಾನಕಿ ರಾಮ್, ನಾಗೇಶಯ್ಯ, ಸಂತೋಷ್ ಕುಮಾರ್, ಮಂಜುನಾಥ್, ವಿನಯ್, ಪ್ರವೀಣ್, ಸಂಪತ್ ಕುಮಾರ್, ಡಾ. ನಾಗೇಶ್, ಗಜೇಂದ್ರ. ಎ, ಖದೀರ್ ಅಹಮದ್, ಶಿಲ್ಪ, ಸುನೀತ ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-19/06/2025

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 19/06/2025

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 504
Qty: 28378 Kg
Mx : ₹ 536
Mn: ₹ 230
Avg: ₹ 471

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 05
Qty: 310 Kg
Mx : ₹ 500
Mn: ₹ 385
Avg: ₹ 446


For Daily Updates WhatsApp ‘HI’ to 7406303366

error: Content is protected !!