Home Blog Page 7

ಶಾಸಕ ಪ್ರದೀಪ್ ಈಶ್ವರ್ ತಮ್ಮ ನಡೆ ನುಡಿಯನ್ನು ಬದಲಿಸಿಕೊಳ್ಳಬೇಕು : ಪೂಲಕುಂಟಹಳ್ಳಿ ರಘುನಾಥರೆಡ್ಡಿ

0
Chikkaballapur MLA Pradeep EshwarKEmpegowda Jayanti

Sidlaghatta : ನಾಡಪ್ರಭು ಶ್ರೀಕೆಂಪೇಗೌಡರ ಜಯಂತಿಯಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರ ಭಾಷಣಕ್ಕೆ ಅಡ್ಡಿಪಡಿಸಿದ್ದು, ಅವರ ವಿರುದ್ದ ಘೋಷಣೆಗಳನ್ನು ಕೂಗಿದ್ದು ಹಾಗೂ ಅವರ ಕಾರಿನತ್ತ ಚಪ್ಪಲಿ ಎಸೆಯುವಂತ ಕಾರ್ಯ ಎಂದಿಗೂ ನಮ್ಮ ಒಕ್ಕಲಿಗ ಸಮುದಾಯವರು ಮಾಡಿಲ್ಲ, ಮಾಡುವುದೂ ಇಲ್ಲ ಎಂದು ರಾಜ್ಯ ಒಕ್ಕಲಿಗರ ಒಕ್ಕೂಟ ಕರ್ನಾಟಕದ ರಾಜ್ಯ ಉಪಾಧ್ಯಕ್ಷ ಪೂಲಕುಂಟಹಳ್ಳಿ ರಘುನಾಥರೆಡ್ಡಿ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ರಾಜ್ಯ ಒಕ್ಕಲಿಗರ ಒಕ್ಕೂಟದ ಪದಾಧಿಕಾರಿಗಳ ಜತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಪ್ರದೀಪ್ ಈಶ್ವರ್ ಅವರಿಗೆ ಆಗದವರು ಮತ್ತು ನಮ್ಮ ಒಕ್ಕಲಿಗ ಸಮುದಾಯಕ್ಕೆ ಕೆಟ್ಟ ಹೆಸರು ತರಬೇಕೆಂಬ ಉದ್ದೇಶದಿಂದ ಯಾರೋ ಕಿಡಿಗೇಡಿಗಳು ಮಾಡದಿ ಕೃತ್ಯವಿದು. ಪೊಲೀಸ್ ಇಲಾಖೆ ಕಿಡಿಗೇಡಿಗಳ ವಿರುದ್ದ ಕಾನೂನು ಕ್ರಮ ಜರುಗಿಸುತ್ತದೆ ನಮ್ಮದೇನು ಅಭ್ಯಂತರವಿಲ್ಲ ಎಂದರು.

ಬೆಂಗಳೂರು ನಗರದ ನಿರ್ಮಾತೃ ನಾಡಪ್ರಭು ಕೆಂಪೇಗೌಡರು ನಮ್ಮ ಸಮುದಾಯಕ್ಕೆ ಮಾತ್ರವಲ್ಲ ಜಗತ್ತಿಗೆ ಹೆಮ್ಮೆ. ಅವರ ಜಯಂತಿಯಂದು ನಡೆದ ಕೃತ್ಯಕ್ಕೆ ರಾಜ್ಯ ಒಕ್ಕಲಿಗರ ಒಕ್ಕೂಟವು ವಿಷಾಧ ವ್ಯಕ್ತಪಡಿಸುತ್ತದೆ. ನಮ್ಮ ಸಮುದಾಯದ ಕಾರ್ಯಕ್ರಮದಲ್ಲಿ ಅಹ್ವಾನಿತರಾದ ಗೌರವಾನ್ವಿತ ಪ್ರದೀಪ್ ಈಶ್ವರ್ ಅವರಿಗೆ ನಡೆದ ಅಪಮಾನಕ್ಕೆ ನಾವು ವಿಷಾಧ ವ್ಯಕ್ತಪಡಿಸುತ್ತೇವೆ ಎಂದರು.

ಖಂಡನೆ :

ಆದರೆ ಪ್ರದೀಪ್ ಈಶ್ವರ್ ಅವರು ಶಾಸಕ ಸ್ಥಾನಕ್ಕೆ ಧಕ್ಕೆ ತರುವಂತೆ ನಡೆದುಕೊಳ್ಳುವ ಮೂಲಕ ಅವರಿಗೆ ಮತಕೊಟ್ಟು ಗೆಲ್ಲಿಸಿದ ಕ್ಷೇತ್ರದ ಎಲ್ಲ ಜಾತಿ ಧರ್ಮಗಳನ್ನೊಳಗೊಂಡ ಮತದಾರರಿಗೆ ಅಪಮಾನ ಮಾಡುತ್ತಿದ್ದಾರೆ ಎಂದು ಅವರು ದೂರಿ, ಪ್ರದೀಪ್ ಈಶ್ವರ್ ಅವರಿಗೆ ಕ್ಷೇತ್ರದ ಎಲ್ಲ ಧರ್ಮ ಜಾತಿಯ ಮತದಾರರು ಕೂಡ ಮತಕೊಟ್ಟು ಗೆಲ್ಲಿಸಿದ್ದಾರೆ. ಮುಖ್ಯವಾಗಿ ಅವರು ಜೆಡಿಎಸ್‌ನ ಮತಗಳಿಂದಲೆ ಗೆದ್ದಿದ್ದು ಎಂದರೂ ತಪ್ಪಾಗಲಾರದು.

ಗೆದ್ದ ಮೇಲೆ ಅವರು ಬುದ್ದಿ ಭ್ರಮಣೆಯಾದಂತೆ ವರ್ತಿಸುತ್ತಿದ್ದಾರೆ. ಎರಡು ಬಾರಿ ಸಿಎಂ ಆಗಿ, ಕೇಂದ್ರದಲ್ಲಿ ಮಂತ್ರಿಯಾಗಿ ಅಪಾರ ಅನುಭವ ಇರುವ, ರೈತರು ಹಾಗೂ ಜನ ಸಾಮಾನ್ಯರ ಪರ ಕಾಳಜಿಯುಳ್ಳ ಎಚ್.ಡಿ.ಕುಮಾರಸ್ವಾಮಿ ಬಗ್ಗೆ ಮಾತನಾಡಲು ಪ್ರದೀಪ್ ಈಶ್ವರ್‌ಗೆ ನೈತಿಕತೆ ಇಲ್ಲ. ಮಾತನಾಡುವಾಗ ಪ್ರಜ್ಞೆ ಇದ್ದು ಮಾತನಾಡಬೇಕೆಂದು ಎಚ್ಚರಿಕೆ ಕೊಟ್ಟರು.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ಮುಖಂಡರು, ಶಾಸಕರೂ ಆದ ಎಸ್.ಎನ್.ಸುಬ್ಬಾರೆಡ್ಡಿ, ಡಾ.ಎಂ.ಸಿ.ಸುಧಾಕರ್, ಗೌರಿಬಿದನೂರಿನ ಎನ್.ಎಚ್.ಶಿವಶಂಕರ್‌ರೆಡ್ಡಿ ಅವರಿಂದ ಪ್ರದೀಪ್ ಈಶ್ವರ್ ಗೆದ್ದಿದ್ದು. ಆದರೆ ಗೆದ್ದ ಮೇಲೆ ಇವರ ಬೆನ್ನಿಗೆ ಚೂರಿ ಹಾಕುವ, ಇವರಿಗೆ ಮುಜುಗರವಾಗುವ, ಕಾಂಗ್ರೆಸ್‌ಗೆ ಅಪಮಾನವಾಗುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ ಎಂದು ದೂರಿದರು.

ಶಿಡ್ಲಘಟ್ಟ ಕ್ಷೇತ್ರದ ಶಾಸಕ ಬಿ.ಎನ್.ರವಿಕುಮಾರ್ ಅವರ ಬಳಿ ಮಾತ್ರ ಇಟ್ಟುಕೊಳ್ಳಬೇಡಿ, ಅವರು ಸಾಮಾನ್ಯ ರೈತ ಕುಟುಂಬದಿಂದ ಬಂದವರು. ಅವರ ನಡೆ ನುಡಿ ಸೇವಾ ಕಾರ್ಯಗಳು ಇಡೀ ರಾಜ್ಯದಲ್ಲಿಯೆ ಮಾದರಿಯಾಗಿದೆ. ಅವರ ಬಗ್ಗೆ ಮಾತನಾಡುವಾಗ ಮೈಯ್ಯೆಲ್ಲಾ ಎಚ್ಚರಿಕೆ ಇಟ್ಟುಕೊಂಡು ಮಾತನಾಡಬೇಕೆಂದರು.

ನೀವು ಪದೇ ಪದೇ ಓಬಿಸಿ ಹುಡುಗ ಅನ್ನಬೇಡ, ನಾವು ಓಬಿಸಿಗಳೆ. ನಮ್ಮ ಸಮುದಾಯದ ಮತಗಳು ನಿಮಗೆ ಬಂದಿವೆ. ಮುಂದಿನ ದಿನಗಳಲ್ಲಾದರೂ ನಿಮ್ಮ ನಡೆ ನುಡಿಯನ್ನು ಬದಲಿಸಿಕೊಳ್ಳಿ. ಇಲ್ಲವಾದಲ್ಲಿ ರಾಜ್ಯಾಧ್ಯಂತ ಒಕ್ಕಲಿಗರ ಒಕ್ಕೂಟದಿಂದ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಒಕ್ಕಲಿಗರ ಒಕ್ಕೂಟದ ರಾಜ್ಯ ಕಾರ್ಯದರ್ಶಿ ನಾಗರಾಜ್‌ ರೆಡ್ಡಿ, ಚಿಕ್ಕಬಳ್ಳಾಪುರ ತಾಲ್ಲೂಕು ಅಧ್ಯಕ್ಷ ಮಂಜುನಾಥ್‌ಗೌಡ, ಗೌರಿಬಿದನೂರು ತಾಲ್ಲೂಕು ಅಧ್ಯಕ್ಷ ವೆಂಕಟರೆಡ್ಡಿ, ಚಿಂತಾಮಣಿ ತಾಲ್ಲೂಕು ಅಧ್ಯಕ್ಷ ಬಾಬುರೆಡ್ಡಿ, ಶಿಡ್ಲಘಟ್ಟ ತಾಲ್ಲೂಕು ಅಧ್ಯಕ್ಷ ಶ್ರೀನಾಥರೆಡ್ಡಿ ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ಶಿಡ್ಲಘಟ್ಟದಲ್ಲಿ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಅಭಿಯಾನ

0
Sidlaghatta Pulse Polio campaign inauguration

Sidlaghatta : ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಎರಡು ಹನಿ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಮೂಲಕ ಪೋಲಿಯೋ ಮುಕ್ತ ಭಾರತ ಮತ್ತು ಆರೋಗ್ಯವಂತ ಸಮಾಜವನ್ನು ನಿರ್ಮಿಸಲು ಪೋಷಕರು ಸಹಕರಿಸಬೇಕೆಂದು ಶಾಸಕ ಬಿ.ಎನ್. ರವಿಕುಮಾರ್ ಮನವಿ ಮಾಡಿದರು.

ತಾಲ್ಲೂಕಿನ ಆನೂರು ಹುಣಸೇನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಭಾನುವಾರ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ತಾಲ್ಲೂಕಿನಲ್ಲಿ 0-5 ವರ್ಷದ 20,755 ಮಕ್ಕಳನ್ನು ಗುರುತಿಸಲಾಗಿದ್ದು, ಅವರಿಗೆ ಕಡ್ಡಾಯವಾಗಿ ಪೋಷಕರು ಎರಡು ಹನಿ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಮೂಲಕ ಮಕ್ಕಳ ಆರೋಗ್ಯ ಕಾಪಾಡುವ ಜೊತೆಗೆ ಆರೋಗ್ಯವಂತ ಸಮಾಜವನ್ನು ನಿರ್ಮಿಸಲು ಸಹಕರಿಸಬೇಕೆಂದು ವಿನಂತಿಸಿದರು.

ತಹಶೀಲ್ದಾರ್ ಗಗನ ಸಿಂಧು, ಚಿಮುಲ್ ನಿರ್ದೇಶಕರಾದ ಬಂಕ್ ಮುನಿಯಪ್ಪ, ಹುಜಗೂರು ರಾಮಯ್ಯ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶ ಮೂರ್ತಿ, ಸಿಡಿಪಿಓ ವಿದ್ಯಾ ವಸ್ತ್ರದ, ಕೆ.ಮುತ್ತಕದಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ನರ್ಮದಾ, ಮುಖಂಡರಾದ ಮೇಲೂರು ಮಂಜುನಾಥ್, ತಾದೂರು ರಘು, ನಾರಾಯಣಸ್ವಾಮಿ, ಆನೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವೆಂಕಟೇಶ್, ಚಿಕ್ಕಣ್ಣ, ನರಸಿಂಹಮೂರ್ತಿ ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-28/06/2026

0
Sidlaghatta Silk Cocoon Market-28/06/2026

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 28/06/2026

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 566
Qty: 30911 Kg
Mx : 728
Mn: 444
Avg: 657

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 14
Qty: 715 Kg
Mx : ₹ 832
Mn: ₹ 674
Avg: ₹ 736


For Daily Updates WhatsApp ‘HI’ to 7406303366

ಕೆಂಪೇಗೌಡ ಯುವಕಸಂಘದ ವತಿಯಿಂದ ಕೆಂಪೇಗೌಡ ಜಯಂತಿ ಆಚರಣೆ

0
Sugaturu Kempegowda Jayanti Celebration

Sugaturu, Sidlaghatta : ಕೆಂಪೇಗೌಡರು ಕೇವಲ ಒಂದು ನಗರವನ್ನು ಕಟ್ಟಿದ ರಾಜನಾಗಿರದೇ, ಐನೂರು ವರ್ಷಗಳ ಹಿಂದೆಯೇ ಆಧುನಿಕ ನಗರಾಭಿವೃದ್ಧಿಗೆ ಮುನ್ನುಡಿ ಬರೆದ ಮಹಾನ್ ದ್ರಷ್ಟಾರ. ಅವರ ಶೌರ್ಯ, ಸಾಹಸ ಹಾಗೂ ಪ್ರಜಾವತ್ಸಲತೆ ಇಂದಿನ ಪೀಳಿಗೆಗೆ ಮತ್ತು ಆಡಳಿತಗಾರರಿಗೆ ದಾರಿದೀಪವಾಗಿದೆ ಎಂದು ಕೆಂಪೇಗೌಡ ಯುವಕಸಂಘದ ನಿರ್ದೇಶಕ ಎನ್‌.ಮಂಜುನಾಥ್‌ ಗೌಡ ಪ್ರಶಂಸಿಸಿದರು.

ತಾಲ್ಲೂಕಿನ ಸುಗಟೂರು ಗ್ರಾಮದಲ್ಲಿ ಕೆಂಪೇಗೌಡ ಯುವಕಸಂಘದ ವತಿಯಿಂದ ಹಮ್ಮಿಕೊಂಡಿದ್ದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಶಿಕ್ಷಕ ಎಚ್‌.ಎಸ್. ರುದ್ರೇಶಮೂರ್ತಿ ಮಾತನಾಡಿ, ಅವರು ಬೆಂಗಳೂರನ್ನು ವೈಜ್ಞಾನಿಕವಾಗಿ ನಿರ್ಮಿಸಿದವರು. ಕೆರೆ-ಕಟ್ಟೆಗಳ ನಿರ್ಮಾಣ, ಕುಡಿಯುವ ನೀರಿನ ಸೂಕ್ತ ವ್ಯವಸ್ಥೆ ಮತ್ತು ಪರಿಸರ ಸಮತೋಲನಕ್ಕೆ ಅವರು ನೀಡಿದ ಆದ್ಯತೆಯು ಕೆಂಪೇಗೌಡರಿಗಿದ್ದ ಪರಿಸರ ಪ್ರೇಮಕ್ಕೆ ಸಾಕ್ಷಿಯಾಗಿದೆ. ಅಂದು ಅವರು ದೂರದೃಷ್ಟಿಯಿಂದ ನಿರ್ಮಿಸಿದ ರಸ್ತೆಗಳು, ಕೋಟೆ-ಕೊತ್ತಲಗಳು ಹಾಗೂ ಮಾರುಕಟ್ಟೆಗಳು ಇಂದಿಗೂ ಬೆಂಗಳೂರಿನ ಆರ್ಥಿಕತೆಯ ಬೆನ್ನೆಲುಬಾಗಿ ನಿಂತಿವೆ ಎಂದರು.

ಇತಿಹಾಸ ಪ್ರಸಿದ್ಧ ಶ್ರೀ ಸತ್ಯಮ್ಮದೇವಿ ದೇವಾಲಯದಲ್ಲಿ ವಿಶೇಷ ಪೂಜೆಸಲ್ಲಿಸಿದ ನಂತರ ಕೆಂಪೇಗೌಡರ ಭಾವಚಿತ್ರವನ್ನು ಹೊತ್ತ ಪಲ್ಲಕ್ಕಿಯನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾನಪದ ಕಲಾತಂಡಗಳೊಂದಿಗೆ ಮೆರವಣಿಗೆ ಮಾಡಲಾಯಿತು.

ಕೆಂಪೇಗೌಡ ಯುವಕ ಸಂಘದ ವಿಜಯಕುಮಾರ್‌, ಅಶೋಕ್‌ ಕುಮಾರ್‌, ಗಣೇಶ್, ಪೋಟೋ ರವಿಕುಮಾರ್‌, ಗ್ರಾಮಪಂಚಾಯಿತಿ ಮಾಜಿ ಸದಸ್ಯ ಎಸ್‌.ಎಂ.ನಾರಾಯಣಸ್ವಾಮಿ, ವಿಶ್ವನಾಥ್‌, ಚೇತನ್‌, ಮಂಜುನಾಥ್‌, ಮಹೇಶ್‌, ಹಿರಿಯರಾದ ಕೃಷ್ಣಪ್ಪ, ಮರೇಗೌಡ, ಮುನೇಗೌಡ, ಮುನಿರಾಜು, ಆಂಜನೇಯರೆಡ್ಡಿ, ಹರೀಶ್‌ ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ನಾನು ಅಲ್ಲ ನಾವು ಎಂಬ ವಿನಯ ಬೆಳೆಸಿಕೊಳ್ಳಿ : Congress ಮುಖಂಡ ರಾಜೀವ್ ಗೌಡ

0
Sidlaghatta Congress Leader Rajeev Gowda Anjinappa Puttu

Sidlaghatta : “ನಾನು, ನಾನೇ, ನನ್ನಿಂದ…” ಎನ್ನುವ ದುರಹಂಕಾರದ ಮಾತುಗಳನ್ನು ಬಿಟ್ಟು, “ದೇವರ ಕೃಪೆಯಿಂದ, ಕಾಂಗ್ರೆಸ್ ಕಾರ್ಯಕರ್ತರ, ಗುರು-ಹಿರಿಯರ ಆಶೀರ್ವಾದದಿಂದ ಮತ್ತು ಎಲ್ಲರ ಸಹಕಾರದಿಂದ” ಎಂಬ ವಿನಯಪೂರ್ವಕ ಮನೋಭಾವವನ್ನು ಅಳವಡಿಸಿಕೊಳ್ಳಬೇಕು ಎಂಬುದಾಗಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ತಿಳಿಸಿದರು.

ಕ್ಷೇತ್ರದಲ್ಲಿ ಮುಂಬರುವ 2028 ರ ಚುನಾವಣೆಯಲ್ಲಿ ಹಾಲಿ ಶಾಸಕ ಬಿ.ಎನ್.ರವಿಕುಮಾರ್ ಹಾಗು ತಮ್ಮ ನಡುವೆ ಮಾತ್ರ ಸ್ಪರ್ಧೆ (ಪೈಪೋಟಿ) ಇರಲಿದೆ. ಉಳಿದವರು ಮೂರನೇ ಅಥವ ನಾಲ್ಕನೇ ಸ್ಥಾನಕ್ಕೆ ತಳ್ಳಲ್ಪಡುತ್ತಾರೆ ಎಂದು 2023 ರ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿದ್ದ ಪುಟ್ಟು ಆಂಜಿನಪ್ಪ ಇತ್ತೀಚೆಗೆ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಹಿನ್ನೆಲೆಯಲ್ಲಿ ಅವರು ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ನಾನು ಎನ್ನುವುದರ ಬದಲು ನಾವು ಎಂದಾಗ ಕ್ಷೇತ್ರದಲ್ಲಿ ಕಾಂಗ್ರೆಸ್ ಗಟ್ಟಿಗೊಳ್ಳುತ್ತದೆ. ಮತದಾರ ದೇವರುಗಳ ತೀರ್ಮಾನವೇ ಅಂತಿಮ ಎಂಬುದನ್ನು ಮರೆಯಬಾರದು. ಕಾಂಗ್ರೆಸ್ ಪಕ್ಷವೇ ನನ್ನ ತಾಯಿ ಮತ್ತು ದೇವರು ಎಂದು ಯಾರು ತಿಳಿದು ಅದರಂತೆ ನಡೆದುಕೊಳ್ಳುತ್ತಾರೋ ಅವರಿಗೆ ಪಕ್ಷ ಖಂಡಿತವಾಗಿಯೂ ಸ್ಥಾನಮಾನಗಳನ್ನು ನೀಡುತ್ತದೆ. ಪುಟ್ಟು ಆಂಜಿನಪ್ಪ ಅವರು ದುಡುಕಬಾರದು. ಈ ಹಿಂದೆ ಕೂಡ ಎರಡು ಬಾರಿ ದುಡುಕಿ ಪಕ್ಷ ವಿರೋಧಿಯಾಗಿ ಕೆಲಸ ಮಾಡಿದ್ದೀರಿ. ಸ್ವತಂತ್ರ ಅಭ್ಯರ್ಥಿ ಎಂಬುದಾಗಿ ತಮ್ಮನ್ನು ಬಿಂಬಿಸಿಕೊಂಡು ತಮ್ಮ ಜೊತೆಗಿರುವ ಕಾಂಗ್ರೆಸ್ ಕಾರ್ಯಕರ್ತರಿಗೆ ಮುಜುಗರಕ್ಕೀಡು ಮಾಡಬೇಡಿ. ಕಾಂಗ್ರೆಸ್ ಪಕ್ಷವನ್ನು ಕಟ್ಟಿ, ಒಡೆಯುವ ಕೆಲಸ ಮಾಡಬೇಡಿ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದಲ್ಲಿರುವವರಿಗೆ ವ್ಯಕ್ತಿ ಪೂಜೆಯಿಲ್ಲ. ಇಲ್ಲಿ ಪಕ್ಷವೇ ದೊಡ್ಡದು. ಹೈ ಕಮಾಂಡ್ ತೀರ್ಮಾನಕ್ಕೆ ಬದ್ಧವಾಗಿದ್ದು ಪಕ್ಷವನ್ನು ಸಂಘಟಿಸೋಣ. ಪಕ್ಷದೊಳಗೆ ಇದ್ದು, ಸ್ವತಂತ್ರ ಅಭ್ಯರ್ಥಿ ಎಂಬಂತೆ ಮಾತನಾಡಿ ಕಾರ್ಯಕರ್ತರನ್ನು ಗೊಂದಲಕ್ಕೀಡು ಮಾಡಬೇಡಿ ಎಂದು ಹೇಳಿದರು.

ಎಲ್ಲರೂ ಒಗ್ಗೂಡಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸೋಣ. ಕಾಂಗ್ರೆಸ್ ಪಕ್ಷದೊಳಗಿದ್ದು ಕತ್ತು ಕೊಯ್ಯುವ ಕೆಲಸ ಮಾಡುವುದು ಬೇಡ. ಒಳಗೊಂದು ಹೊರಗೊಂದು ಮುಖವಾಡ ಧರಿಸಬಾರದು. 2028 ರ ಚುನಾವಣೆಯಲ್ಲಿ ಯಾರು ಕಾಂಗ್ರೆಸ್ ಶಾಸಕ ಎಂಬುದನ್ನು ತೀರ್ಮಾನಿಸುವುದು ಕ್ಷೇತ್ರದ ಮತದಾರ ದೇವರುಗಳು ಎಂಬ ಎಚ್ಚರವಿರಲಿ ಎಂದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-27/06/2026

0
Sidlaghatta Silk Cocoon Market-27/06/2026

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 27/06/2026

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 503
Qty: 26893 Kg
Mx : 751
Mn: 350
Avg: 669

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 13
Qty: 595 Kg
Mx : ₹ 815
Mn: ₹ 531
Avg: ₹ 731


For Daily Updates WhatsApp ‘HI’ to 7406303366

ಕೆಂಪೇಗೌಡರ ಆದರ್ಶಗಳನ್ನು ಯುವಜನತೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಶಾಸಕ ಬಿ.ಎನ್. ರವಿಕುಮಾರ್

0
Sidlaghatta Kempegowda Jayanti Celebration

Sidlaghatta : ನಾಡಪ್ರಭು ಕೆಂಪೇಗೌಡರು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾದ ನಾಯಕರಲ್ಲ. ಅವರ ದೂರದೃಷ್ಟಿ, ಜನಪರ ಆಡಳಿತ, ಸಮಾಜಮುಖಿ ಚಿಂತನೆ ಮತ್ತು ಅಭಿವೃದ್ಧಿ ಪರಿಕಲ್ಪನೆಗಳು ಇಂದಿಗೂ ಪ್ರಸ್ತುತವಾಗಿದ್ದು, ಯುವಜನತೆ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಬಿ.ಎನ್. ರವಿಕುಮಾರ್ ಕರೆ ನೀಡಿದರು.

ನಗರದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ 517ನೇ ನಾಡಪ್ರಭು ಕೆಂಪೇಗೌಡ ಜಯಂತಿ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಮಹನೀಯರ ಜಯಂತಿಗಳನ್ನು ಆಚರಿಸುವ ಉದ್ದೇಶ ಅವರ ಆದರ್ಶಗಳು, ಸಮಾಜಮುಖಿ ಕಾರ್ಯಗಳು ಹಾಗೂ ಜೀವನ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದಾಗಿದೆ. 12ನೇ ಶತಮಾನದ ಬಸವಣ್ಣ, 16ನೇ ಶತಮಾನದ ನಾಡಪ್ರಭು ಕೆಂಪೇಗೌಡರು, ಮಹರ್ಷಿ ವಾಲ್ಮೀಕಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಸೇರಿದಂತೆ ಅನೇಕ ಮಹನೀಯರು ಸಮಾಜದ ಎಲ್ಲ ವರ್ಗಗಳ ಅಭಿವೃದ್ಧಿಗಾಗಿ ಶ್ರಮಿಸಿದ್ದು, ಅವರ ಸೇವೆ ಮತ್ತು ಚಿಂತನೆ ಇಂದಿಗೂ ಸಮಾಜಕ್ಕೆ ದಾರಿದೀಪವಾಗಿದೆ ಎಂದು ಹೇಳಿದರು.

100ಕ್ಕೂ ಹೆಚ್ಚು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ :

Sidlaghatta Kempegowda Jayanti Celebration

ಕಾರ್ಯಕ್ರಮದಲ್ಲಿ ಎಸ್‌.ಎಸ್‌.ಎಲ್‌.ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ 100ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಿದ ಶಾಸಕ ರವಿಕುಮಾರ್, “ಮಾತೃದೇವೋ ಭವ, ಪಿತೃದೇವೋ ಭವ, ಗುರುದೇವೋ ಭವ” ಎಂಬ ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡು ಉನ್ನತ ಗುರಿಗಳನ್ನು ಸಾಧಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ತಹಸೀಲ್ದಾರ್ ಗಗನ ಸಿಂಧು ಮಾತನಾಡಿ, ನಾಡಪ್ರಭು ಕೆಂಪೇಗೌಡರು ಶತಮಾನಗಳ ಹಿಂದೆಯೇ ಬೆಂಗಳೂರಿನ ಭವಿಷ್ಯವನ್ನು ಊಹಿಸಿ ನಗರ ನಿರ್ಮಾಣಕ್ಕೆ ಯೋಜನೆ ರೂಪಿಸಿದ ಮಹಾನ್ ನಾಯಕ ಎಂದು ಬಣ್ಣಿಸಿದರು.

ವಿದ್ಯಾರ್ಥಿಗಳು ಸಹ ಜೀವನದಲ್ಲಿ ಸ್ಪಷ್ಟ ಗುರಿ, ದೃಢ ಸಂಕಲ್ಪ ಮತ್ತು ದೂರದೃಷ್ಟಿಯೊಂದಿಗೆ ಯೋಜಿತವಾಗಿ ಪರಿಶ್ರಮಪಟ್ಟರೆ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ಸಲಹೆ ನೀಡಿದರು.

ಅದ್ದೂರಿ ಪಲ್ಲಕ್ಕಿ ಮೆರವಣಿಗೆಗೆ ಸಾರ್ವಜನಿಕರ ಮೆಚ್ಚುಗೆ :

ಕಾರ್ಯಕ್ರಮಕ್ಕೂ ಮುನ್ನ ನಗರದ ಮಯೂರ ವೃತ್ತದ ಬಳಿಯ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಪುಷ್ಪಮಾಲೆ ಅರ್ಪಿಸಿ ಗೌರವ ಸಲ್ಲಿಸಲಾಯಿತು. ಬಳಿಕ ಬಸ್ ನಿಲ್ದಾಣದಿಂದ ಟಿ.ಬಿ. ರಸ್ತೆ, ಕೋಟೆ ವೃತ್ತ ಹಾಗೂ ಕಾಂಗ್ರೆಸ್ ಭವನ ರಸ್ತೆ ಮಾರ್ಗವಾಗಿ ನಾಡಪ್ರಭು ಕೆಂಪೇಗೌಡರ ಪಲ್ಲಕ್ಕಿಗಳ ಅದ್ದೂರಿ ಮೆರವಣಿಗೆ ನಡೆಯಿತು.

ಡೊಳ್ಳು ಕುಣಿತ, ತಮಟೆ ವಾದನ, ಜಾನಪದ ಕಲಾತಂಡಗಳ ಮನಮೋಹಕ ಪ್ರದರ್ಶನ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಸಾರ್ವಜನಿಕರ ಗಮನ ಸೆಳೆದವು.

  • BUILT FOR APPLE INTELLIGENCE — Personal, private, powerful. Write, express yourself and get things done effortlessly.
  • A18 CHIP. FAST INTO THE FUTURE — A18 chip empowers Apple Intelligence, gaming and iOS updates for years to come.
  • SUPERSIZED BATTERY LIFE — Text, browse and binge movies and shows with up to 26 hours of video playback — the best batte…
₹59,900

ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಗಗನ ಸಿಂಧು, ತಾಲ್ಲೂಕು ಪಂಚಾಯಿತಿ ಇಒ ಹೇಮಾವತಿ, ನಗರಸಭೆ ಆಯುಕ್ತೆ ಅಮೃತ, ಚಿಮುಲ್ ನಿರ್ದೇಶಕರಾದ ಬಂಕ್ ಮುನಿಯಪ್ಪ, ಹುಜಗೂರು ರಾಮಣ್ಣ, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಮೇಲೂರು ಮಂಜುನಾಥ್, ವಕೀಲರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಅಪ್ಪೇಗೌಡನಹಳ್ಳಿ ಲಕ್ಷ್ಮೀನಾರಾಯಣರೆಡ್ಡಿ, ಒಕ್ಕಲಿಗ ಸಂಘದ ತಾಲ್ಲೂಕು ಅಧ್ಯಕ್ಷ ಬಿ. ನಾರಾಯಣಸ್ವಾಮಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ಬಾರೆಡ್ಡಿ, ಸರ್ಕಲ್ ಇನ್ಸ್ ಪೆಕ್ಟರ್ ಆನಂದ್, ಯುವ ಘಟಕದ ಅಧ್ಯಕ್ಷ ವೆಂಕಟಸ್ವಾಮಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಅದ್ದೂರಿ ಪಲ್ಲಕ್ಕಿ ಮೆರವಣಿಗೆಯಲ್ಲಿ ಶಾಸಕ ಬಿ.ಎನ್. ರವಿಕುಮಾರ್, ಕಾಂಗ್ರೆಸ್ ಮುಖಂಡ ರಾಜೀವ್ ಗೌಡ, ಮಾಜಿ ಶಾಸಕ ಎಂ. ರಾಜಣ್ಣ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸೀಕಲ್ ಆನಂದ್ ಗೌಡ, ರೈತರ ಸಂಘದ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, ಮುನಿನಂಜಪ್ಪ, ತಾದೂರು ಮಂಜುನಾಥ್ ಸೇರಿದಂತೆ ವಿವಿಧ ಸಮುದಾಯಗಳ ಮುಖಂಡರು, ಯುವಕರು ಹಾಗೂ ಸಾರ್ವಜನಿಕರು ಭಾಗವಹಿಸಿ ಜಯಂತಿ ಸಂಭ್ರಮಕ್ಕೆ ಮತ್ತಷ್ಟು ಮೆರುಗು ತಂದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ಸರ್ಕಾರಿ ಮತ್ತು ವಸತಿ ಶಾಲೆಗಳ ಗೋಧಿ ಅಕ್ರಮ ಸಾಗಾಣಿಕೆ: ಕ್ಯಾಂಟರ್ ವಶಕ್ಕೆ

0
govt school wheat illegal transport seize

Sidlaghatta : ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಸರ್ಕಾರಿ ಶಾಲೆ ಮತ್ತು ವಸತಿ ಶಾಲೆಗಳಿಗೆ ಸರಬರಾಜು ಮಾಡಬೇಕಿದ್ದ ಗೋಧಿ ಈಗ ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡಲು ಯತ್ನಿಸಿದಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತಾಲ್ಲೂಕಿನ ಎಚ್. ಕ್ರಾಸ್ ಜಂಗಮಕೋಟೆ ಮಾರ್ಗದ ಮೂಲಕ ಹೊಸಕೋಟೆಗೆ ತೆರಳುತ್ತಿದ್ದ ವೇಳೆಯಲ್ಲಿ ಶಿಡ್ಲಘಟ್ಟ ಗ್ರಾಮಂತರ ಪೊಲೀಸ್ ಠಾಣೆ ಪಿ.ಎಸ್.ಐ ಸುನಿಲ್ ಮತ್ತು ಸಿಬ್ಬಂದಿ ಜಂಗಮಕೋಟೆ ಕ್ರಾಸ್ ನಲ್ಲಿ ಸುಮಾರು 14 ಟನ್ 250ಕ್ಕೂ ಅಧಿಕ ಗೋಧಿ ಚೀಲಗಳನ್ನು ಹಾಗೂ ಕ್ಯಾಂಟರ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಶಿಡ್ಲಘಟ್ಟ ಗ್ರಾಮಂತರ ಪೊಲೀಸರು ಆಹಾರ ಇಲಾಖೆಯ ನಿರೀಕ್ಷಕಿ ವೆಂಕಟ ಲಕ್ಷ್ಮಿ ಮತ್ತು ಸಿಬ್ಬಂದಿಯವರ ಸಮ್ಮುಖದಲ್ಲಿ ಅಕ್ರಮವಾಗಿ ಸರಬರಾಜು ಆಗುತ್ತಿದ್ದ ಗೋಧಿ ದಾಸ್ತಾನು ಕುರಿತು ಮಹಜರ ನಡೆಸಿದರು.

ಈ ಸಂಬಂಧ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-26/06/2026

0
Sidlaghatta Silk Cocoon Market-26/06/2026

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 26/06/2026

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 385
Qty: 20907 Kg
Mx : 760
Mn: 433
Avg: 679

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 13
Qty: 615 Kg
Mx : ₹ 775
Mn: ₹ 700
Avg: ₹ 743


For Daily Updates WhatsApp ‘HI’ to 7406303366

ಪೋಷಕರು ತಪ್ಪದೇ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸಿ : ಶಾಸಕ ಬಿ.ಎನ್. ರವಿಕುಮಾರ್

0
Sidlaghatta Pulse Polio Programme

Sidlaghatta : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಂಯುಕ್ತ ಆಶ್ರಯದಲ್ಲಿ ಜೂನ್ 28ರಂದು ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದ ಅಂಗವಾಗಿ ತಾಲ್ಲೂಕಿನ ಮೇಲೂರು ಗ್ರಾಮದ ಶಾಸಕರ ಗೃಹ ಕಚೇರಿಯಲ್ಲಿ ಗುರುವಾರ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪ್ರಕಟಣಾ ಪತ್ರಿಕೆಯನ್ನು ಶಾಸಕ ಬಿ.ಎನ್. ರವಿಕುಮಾರ್ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶವನ್ನು ಪೋಲಿಯೋ ಮುಕ್ತವಾಗಿಡುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರಂತರವಾಗಿ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುತ್ತಿವೆ. ಈ ಹಿನ್ನೆಲೆಯಲ್ಲಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 20,750 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಒಂದು ವರ್ಷದಿಂದ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಎರಡು ಹನಿ ಪಲ್ಸ್ ಪೋಲಿಯೋ ಔಷಧಿಯನ್ನು ಕಡ್ಡಾಯವಾಗಿ ಹಾಕಿಸಬೇಕು. ಇದಕ್ಕಾಗಿ ಪೋಷಕರು ಸಮೀಪದ ಸರ್ಕಾರಿ ಶಾಲೆಗಳು, ಅಂಗನವಾಡಿ ಕೇಂದ್ರಗಳು ಹಾಗೂ ಆರೋಗ್ಯ ಇಲಾಖೆಯು ಗುರುತಿಸಿರುವ ಲಸಿಕಾ ಕೇಂದ್ರಗಳಿಗೆ ಮಕ್ಕಳನ್ನು ಕರೆತಂದು ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಿದರು.

ಪೋಲಿಯೋ ನಿರ್ಮೂಲನೆಗಾಗಿ ಸರ್ಕಾರ ಹಮ್ಮಿಕೊಂಡಿರುವ ಈ ಮಹತ್ವದ ಆರೋಗ್ಯ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬ ಪೋಷಕರು ಸಹಕರಿಸಬೇಕು. ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ. ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಶೇ 100ರಷ್ಟು ಯಶಸ್ವಿಗೊಳಿಸಲು ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ ಮೂರ್ತಿ, ತಾಲ್ಲೂಕು ಆರೋಗ್ಯ ನಿರೀಕ್ಷಣಾಧಿಕಾರಿ ದೇವರಾಜ್ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-25/06/2026

0
Sidlaghatta Silk Cocoon Market-25/06/2026

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 25/06/2026

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 402
Qty: 22018 Kg
Mx : 770
Mn: 515
Avg: 690

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 10
Qty: 568 Kg
Mx : ₹ 847
Mn: ₹ 666
Avg: ₹ 776


For Daily Updates WhatsApp ‘HI’ to 7406303366

Police ಇಲಾಖೆ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ಮಾದಕ ವಸ್ತುಗಳ ವಿರುದ್ಧ ಅರಿವು ಜಾಥಾ

0
police students Narcotics Awareness rally

Sidlaghatta : ಸ್ಥಳೀಯ Police ಇಲಾಖೆ ಹಾಗೂ ಶಾಲಾ ವಿದ್ಯಾರ್ಥಿಗಳ ಸಹಯೋಗದಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಬುಧವಾರ ಜಾಥಾವನ್ನು ಹಮ್ಮಿಕೊಳ್ಳಲಾಯಿತು. ಜಾಥಾಗೆ ಸರ್ಕಲ್ ಇನ್ಸ್ಪೆಕ್ಟರ್ ಆನಂದ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯುವ ಸಮುದಾಯ ಮಾದಕ ವಸ್ತುಗಳ ಚಟದಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಮಾದಕ ವಸ್ತುಗಳ ಬಳಕೆಯಿಂದ ವ್ಯಕ್ತಿ, ಕುಟುಂಬ ಹಾಗೂ ಸಮಾಜದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿದೆ ಎಂದು ತಿಳಿಸಿದರು.

ಪಿಎಸ್ಐ ವೇಣುಗೋಪಾಲ್ ಮಾತನಾಡಿ, ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಗುರಿ. ಪೊಲೀಸ್ ಇಲಾಖೆಯು ಸಮಾಜದಲ್ಲಿ ನಡೆಯುವ ಕಾನೂನುಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸುವ ಪ್ರಯತ್ನ ಮಾಡುತ್ತಿದ್ದು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಬಾರದು ಹಾಗೂ ಅವುಗಳನ್ನು ಬೆಂಬಲಿಸಬಾರದು ಎಂದರು.

ತುರ್ತು ಸಂದರ್ಭದಲ್ಲಿ ಸಂಪರ್ಕಿಸಬಹುದಾದ ಸಂಖ್ಯೆಗಳಾದ 112, 1098, ಇನ್ನಿತರ ಸಹಾಯವಾಣಿಗಳ ಸಂಖ್ಯೆಗಳ ಕುರಿತು ಮಾಹಿತಿ ಹಂಚಿಕೊಂಡರು.

ಜಾಥಾದಲ್ಲಿ ವಿದ್ಯಾರ್ಥಿಗಳು, ಪೊಲೀಸ್ ಸಿಬ್ಬಂದಿ, ವಿವಿಧ ಸಂಘಟನೆಗಳ ಸದಸ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿ, ಮಾದಕ ವಸ್ತುಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಜಾಥಾ ಮೂಲಕ ಜನರಲ್ಲಿ ಮಾದಕ ವಸ್ತುಗಳ ಹಾವಳಿಯ ಬಗ್ಗೆ ಅರಿವು ಮೂಡಿಸಲಾಯಿತು.

Sidlaghatta WhatsApp Channel Group

For Daily Updates WhatsApp ‘HI’ to 7406303366

ಜೂನ್ 29ರಂದು ಎಲ್ಲ ತಾಲ್ಲೂಕುಗಳ ವಲಯ ಅರಣ್ಯಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ

0
Chikkaballapur District DSS Forest Dept Protest

Sidlaghatta : ಜಿಲ್ಲೆಯಲ್ಲಿ ಸಾಕಷ್ಟು ಕಡೆ ಅರಣ್ಯ ಇಲಾಖೆ ಅಧಿಕಾರಿಗಳು ರೈತರನ್ನು ಒಕ್ಕಲೆಬ್ಬಿಸಿ ವಿನಾಕಾರಣ ಕಿರುಕುಳ ನೀಡುತ್ತಿದ್ದು ಅರಣ್ಯಾಧಿಕಾರಿಗಳ ರೈತ, ದಲಿತ ವಿರೋಧಿ ನೀತಿಯನ್ನು ಖಂಡಿಸಿ ಜೂನ್ 29ರಂದು ಜಿಲ್ಲೆಯ ಎಲ್ಲ ತಾಲ್ಲೂಕುಗಳ ವಲಯ ಅರಣ್ಯಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ದಸಂಸ ಜಿಲ್ಲಾ ಸಂಚಾಲಕ ಎನ್.ಎ.ವೆಂಕಟೇಶ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯ ಚಿಕ್ಕಬಳ್ಳಾಪುರ ತಾಲೂಕು ನಂದಿ ಹೋಬಳಿಯ ಸಿಂಗಾಟಕದಿರೇನಹಳ್ಳಿ ಬಳಿ 1995ರಲ್ಲೇ 7 ಮಂದಿ ದಲಿತ ಕುಟುಂಬಗಳಿಗೆ ಸರ್ಕಾರಿ ಜಮೀನು ಮಂಜೂರು ಆಗಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ವಿನಾಕಾರಣ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿದರು.

ಮಂಜೂರಾದ ಭೂಮಿ ನಮ್ಮದು ಎಂದು ದಲಿತ ಕುಟುಂಬಗಳನ್ನು ಒಕ್ಕಲೆಬ್ಬಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು ಈ ಹಿಂದೆ ಇದು ಅರಣ್ಯ ಇಲಾಖೆಗೆ ಸೇರಿಲ್ಲ. ಕಂದಾಯ ಇಲಾಖೆಗೆ ಸೇರಿದ್ದು ಎಂದು ಹೇಳಿದರೆ, ಇನ್ನೊಮ್ಮೆ ಇದು ಅರಣ್ಯ ಇಲಾಖೆಗೆ ಸೇರಿದ ಭೂಮಿ ಎನ್ನುತ್ತಾರೆ.

ಅರಣ್ಯ ಇಲಾಖೆಯ ಸೆಟ್ಲಮೆಂಟ್ ಅಧಿಕಾರಿಗಳಿಂದಲೂ ಈ 21 ಎಕರೆ ಜಮೀನು 7 ಮಂದಿ ದಲಿತ ಕುಟುಂಬಗಳಿಗೆ ಸೇರಿದ್ದು ಎಂದು ತೀರ್ಪು ನೀಡಿದ್ದರೂ ಕೂಡ ಅರಣ್ಯ ಇಲಾಖೆ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಮಾತ್ರ ತಮ್ಮ ತಮ್ಮಲ್ಲಿ ಒಮ್ಮತವಿಲ್ಲದೆ ವಿನಾಕಾರಣ ದಲಿತ ರೈತ ಕುಟುಂಬಗಳಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ದೂರಿದರು.

ಇದನ್ನು ವಿರೋಧಿಸಿ ಜೂನ್ 29ರಂದು ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ವಲಯ ಅರಣ್ಯಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

ದಸಂಸ ತಾಲೂಕು ಸಂಚಾಲಕ ದೊಡ್ಡತಿರುಮಳಪ್ಪ, ಸಂಘಟನಾ ಸಂಚಾಲಕ ಡಿ.ಎಂ.ವೆಂಕಟೇಶ್, ರಾಜ್ ಕುಮಾರ್, ಮುನಿಕದರಿಪ್ಪ, ಸದಸ್ಯರಾದ ರಾಮದಾಸ್, ರಾಮಕೃಷ್ಣಪ್ಪ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ರೈಲ್ವೆ ಕೆಳಸೇತುವೆಯಲ್ಲಿ ಸಂಚಾರಕ್ಕೆ ಅಡಚಣೆ – ಅಧಿಕಾರಿಗಳ ಭೇಟಿ

0
Railway Underpass Repair

Sidlaghatta : ಶಿಡ್ಲಘಟ್ಟ-ಚಿಂತಾಮಣಿ ಮಾರ್ಗದ ರಾಷ್ಟ್ರೀಯ ಹೆದ್ದಾರಿ-234ರ ವೀರಾಪುರ ಬಳಿಯ ರೈಲ್ವೆ ಕೆಳಸೇತುವೆಯಲ್ಲಿ ಕಬ್ಬಿಣದ ಸರಳುಗಳು ಕಿತ್ತು ಬಂದಿದ್ದು ಸುಗಮ ಸಂಚಾರಕ್ಕೆ ಅಡಚಣೆಯಾಗುತ್ತಿದ್ದ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

ರೈಲ್ವೆ ಕೆಳಸೇತುವೆಯಲ್ಲಿ ನೀರು ಹರಿದು ಹೋಗಲು ಅಳವಡಿಸಿರುವ ಕಬ್ಬಿಣದ ಸರಳುಗಳ ವೆಲ್ಡಿಂಗ್ ಕಿತ್ತು ಬಂದಿದ್ದು ಸರಳೊಂದು ಮೇಲ್ಮುಖವಾಗಿ ಮೇಲಕ್ಕೆ ಎದ್ದಿದ್ದು ಸಂಚಾರಕ್ಕೆ ಅಡಚಣೆಯಾಗುತ್ತಿತ್ತು. ಕಳೆದ ಐದಾರು ತಿಂಗಳಲ್ಲಿ ನಾಲ್ಕು ಬಾರಿ ವೆಲ್ಡಿಂಗ್ ಮಾಡಿದ್ದರೂ ಪದೇ ಪದೇ ಕಿತ್ತು ಬಂದು ಹಲವು ಬಾರಿ ಸಣ್ಣ ಪುಟ್ಟ ಅಪಘಾತಗಳು ನಡೆದಿದ್ದವು.

ಕೆಳಸೇತುವೆಯ ಆಸುಪಾಸಿನ ವೀರಾಪುರ, ತಲದುಮ್ಮನಹಳ್ಳಿಯ ಗ್ರಾಮಸ್ಥರು ಕೆಳಸೇತುವೆಯಲ್ಲಿನ ಕಬ್ಬಿಣದ ಸರಳುಗಳು ಪದೇ ಪದೇ ಕಿತ್ತು ಬರುತ್ತಿದ್ದು ಶಾಶ್ವತವಾಗಿ ದುರಸ್ತಿ ಕಾರ್ಯ ಮಾಡಿ ಎಂದು ರೈಲ್ವೇ ಇಲಾಖೆ ಮತ್ತು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲ ರಸ್ತೆ ಬಂದ್ ಮಾಡುವುದಾಗಿ ಎಚ್ಚರಿಕೆ ಕೊಟ್ಟಿದ್ದರು.

ಈ ಹಿನ್ನಲೆಯಲ್ಲಿ ಸಿಪಿಐ ಆನಂದ್ ಕುಮಾರ್ ಅವರು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳನ್ನು ಸಂಪರ್ಕಿಸಿ ಸಮಸ್ಯೆ ಬಗೆಹರಿಸಲು ಕೋರಿದ್ದರು. ಹಾಗಾಗಿ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸ್ಥಳೀಯರೊಂದಿಗೆ ಚರ್ಚಿಸಿದರು.

ನಂತರ ರೈಲ್ವೆ ಇಲಾಖೆಯ ಎಂಜಿನಿಯರ್‌ ಗಳೊಂದಿಗೆ ಕರೆ ಮಾಡಿ ಮಾತನಾಡಿ ಸಮಸ್ಯೆಯನ್ನು ವಿವರಿಸಿದರಲ್ಲದೆ ಶಾಶ್ವತವಾಗಿ ದುರಸ್ತಿ ಮಾಡಲು ಮನವಿ ಮಾಡಿದರು. ಎರಡು ಮೂರು ದಿನದೊಳಗೆ ಸ್ಥಳಕ್ಕೆ ರೈಲ್ವೆ ಇಲಾಖೆ ಎಂಜಿನಿಯರ್‌ ಗಳು ಭೇಟಿ ನೀಡಿ ಪರಿಶೀಲಿಸಿ ಶಾಶ್ವತ ದುರಸ್ತಿ ಕಾರ್ಯ ಮಾಡುವ ಭರವಸೆ ನೀಡಿದರು.

ಸಿಪಿಐ ಆನಂದ್ ಕುಮಾರ್, ಗ್ರಾಮಾಂತರ ಠಾಣೆ ಎಸ್‌ ಐ ಸುನಿಲ್ ಕುಮಾರ್, ರೈತ ಸಂಘದ ವೀರಾಪುರ ಮುನಿನಂಜಪ್ಪ ಸೇರಿದಂತೆ ವೀರಾಪುರ, ತಲದುಮ್ಮನಹಳ್ಳಿ ಗ್ರಾಮಸ್ಥರು ಸ್ಥಳದಲ್ಲಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-24/06/2026

0
Sidlaghatta Silk Cocoon Market-24/06/2026

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 24/06/2026

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 440
Qty: 24713 Kg
Mx : 783
Mn: 525
Avg: 682

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 12
Qty: 788 Kg
Mx : ₹ 832
Mn: ₹ 688
Avg: ₹ 766


For Daily Updates WhatsApp ‘HI’ to 7406303366

ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ್ ದಿವಸ್ ಆಚರಣೆ

0
Shyama prasad Mukherjee Balidan diwas

Sidlaghatta : ಶಿಡ್ಲಘಟ್ಟ ನಗರದ BJP ಸೇವಾಸೌಧದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಬಲಿದಾನ್ ದಿವಸ್‌ ನ್ನು ತಾಲ್ಲೂಕು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸೀಕಲ್ ಆನಂದ್ ಗೌಡ ಅವರ ನೇತೃತ್ವದಲ್ಲಿ ಮಂಗಳವಾರ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಅವರ ದೇಶಭಕ್ತಿ, ರಾಷ್ಟ್ರದ ಏಕತೆ ಮತ್ತು ಅಖಂಡತೆಗೆ ನೀಡಿದ ಕೊಡುಗೆಯನ್ನು ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸೀಕಲ್ ಆನಂದ್ ಗೌಡ, “ಶ್ಯಾಮ್ ಪ್ರಸಾದ್ ಮುಖರ್ಜಿ ಅವರು ರಾಷ್ಟ್ರದ ಏಕತೆಗಾಗಿ ತಮ್ಮ ಜೀವನವನ್ನೇ ಸಮರ್ಪಿಸಿದ ಮಹಾನ್ ನಾಯಕರು. ಅವರ ತ್ಯಾಗ, ರಾಷ್ಟ್ರಭಕ್ತಿ ಹಾಗೂ ಆದರ್ಶಗಳು ಇಂದಿನ ಯುವಜನತೆಗೆ ಪ್ರೇರಣೆಯಾಗಿವೆ. ಅವರ ಚಿಂತನೆಗಳನ್ನು ಸಮಾಜದಲ್ಲಿ ಎಲ್ಲರೂ ಅಳವಡಿಸಿಕೊಳ್ಳಬೇಕು” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿ, ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಸಂಕಲ್ಪ ಮಾಡಿದರು. ಬಳಿಕ ಎರಡು ನಿಮಿಷಗಳ ಮೌನಾಚರಣೆ ಮೂಲಕ ಅವರಿಗೆ ಗೌರವ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಹಾಗೂ ತಾಲ್ಲೂಕು ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಕಾರ್ಯಕರ್ತರು ಮತ್ತು ಪಕ್ಷದ ಬೆಂಬಲಿಗರು ಉಪಸ್ಥಿತರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ ಕಾರ್ಯ ಪಾರದರ್ಶಕವಾಗಿ ನಡೆಯಲಿದೆ

0
Sidlaghatta SIR Voters Evalutation Training

Sidlaghatta : ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ ಕಾರ್ಯ(ಎಸ್‌.ಐ.ಆರ್)ವು ಯಾರಿಗೂ ಯಾವುದೆ ರೀತಿಯಲ್ಲಿ ಸಂಶಯಕ್ಕೆ ಎಡೆ ಮಾಡಿಕೊಡದಂತೆ ಅತ್ಯಂತ ಪಾರದರ್ಶಕವಾಗಿ ನಡೆಸಲು ಎಲ್ಲ ಸಿದ್ದತೆಗಳನ್ನು ಪೂರ್ಣಗೊಳಿಸಿದ್ದೇವೆ. ಎಲ್ಲರ ಸಹಕಾರದಿಂದ ಎಸ್‌.ಐ.ಆರ್ ಕಾರ್ಯವನ್ನು ಸುಸೂತ್ರವಾಗಿ ನಡೆಸೋಣ ಎಂದು ಜಿಲ್ಲಾಧಿಕಾರಿ ಜಿ.ಪ್ರಭು ತಿಳಿಸಿದರು.

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆದ ಮತಗಟ್ಟೆ ಅಧಿಕಾರಿ(ಬಿ.ಎಲ್‌.ಒ), ರಾಷ್ಟ್ರೀಯ ರಾಜಕೀಯ ಪಕ್ಷಗಳು ನೇಮಿಸಿರುವ ಬಿ.ಎಲ್‌.ಎ-1 ಹಾಗೂ ಬಿ.ಎಲ್‌.ಎ-2ಗಳಿಗೆ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಈ ದೇಶದ ಯಾವೊಬ್ಬ ಅರ್ಹ ಮತದಾರರನ್ನೂ ಮತದಾರರ ಪಟ್ಟಿಯಿಂದ ಕೈ ಬಿಡುವಂತಾಗಬಾರದು. ಹಾಗೆಯೆ ಅನರ್ಹ ಒಬ್ಬರೂ ಕೂಡ ಮತದಾರರ ಪಟ್ಟಿ ಸೇರಬಾರದು ಎಂಬುದೆ ಎಸ್‌.ಐ.ಆರ್ ಕಾರ್ಯದ ಉದ್ದೇಶವಾಗಿದೆ. ಇಲ್ಲಿ ಯಾವುದೆ ಪಕ್ಷ, ಜಾತಿ, ಧರ್ಮದ ತಾರತಮ್ಯ ಇಲ್ಲದೆ ನಿಷ್ಪಕ್ಷಪಾತವಾಗಿ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ ನಡೆಯಲಿದೆ ಎಂದು ಹೇಳಿದರು.

ಪ್ರತಿ ಕುಟುಂಬಕ್ಕೂ ನಮ್ಮ ಮತಗಟ್ಟೆ ಅಧಿಕಾರಿಗಳು ಭೇಟಿ ನೀಡಿ ಈಗಾಗಲೆ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರಿಗೆ ಅವರ ವಿವರಗಳನ್ನು ನಮೂದಿಸಿರುವ ನಮೂನೆಗಳನ್ನು ನೀಡಿ ಅದರಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿಸಿಕೊಳ್ಳುತ್ತೇವೆ. ಮತದಾರರು ಭೌತಿಕವಾಗಿ ಸ್ಥಳದಲ್ಲಿ ಇಲ್ಲದೆ ನಾನಾ ಕಾರಣಗಳಿಗೆ ಹೊರಗೆ ಇದ್ದರೆ ಕುಟುಂಬದ ಯಾರಾದರೂ ಸರಿ ಮಾಹಿತಿಯನ್ನು ನೀಡಿ ಸಹಿ ಹಾಕಬಹುದು ಎಂದು ವಿವರಿಸಿದರು.

ಎಸ್‌.ಐ.ಆರ್‌ ನಲ್ಲಿ ನಾವು ಹೊಸದಾಗಿ ಮತದಾರರ ಸೇರ್ಪಡೆ ಮಾಡಿಕೊಳ್ಳುವುದಿಲ್ಲ. 2025 ರ ಮತದಾರರ ಅಂತಿಮ ಪಟ್ಟಿಯಂತೆ ಪರಿಷ್ಕರಣೆ ಕಾರ್ಯ ಮಾಡಲಿದ್ದೇವೆ. ಅಂತಿಮ ಮತದಾರರ ಕರಡು ಪಟ್ಟಿ ಪ್ರಕಟಣೆ ಆದ ನಂತರ ತಮ್ಮ ಹಕ್ಕು ಮಂಡಿಸಲು ಮತದಾರರಿಗೆ ಅವಕಾಶವಿದೆ ಎಂದರು.

ಈ ಹಿಂದೆ 2002ರಲ್ಲಿ ಎಸ್‌.ಐ.ಆರ್ ಕಾರ್ಯ ನಡೆದಿತ್ತು. ಆ ನಂತರ ಮತ್ತೆ ಇದೀಗ ನಡೆಯುತ್ತಿದೆ. 2002ಕ್ಕೂ ಮೊದಲು ಮತದಾರರ ಪಟ್ಟಿಯಲ್ಲಿರುವವರು ಅವರು ಆಗ ಯಾವ ವಿಧಾನಸಭಾ ಕ್ಷೇತ್ರದಲ್ಲಿ ಯಾವ ಭಾಗದಲ್ಲಿ ಮತದಾರರಾಗಿದ್ದರು ಎಂಬ ಮಾಹಿತಿಯನ್ನು ನೀಡಬೇಕಾಗುತ್ತದೆ ಎಂದರು.

ಈಗಾಗಲೆ ಮತದಾರರ, ಕುಟುಂಬವಾರು ಮ್ಯಾಪಿಂಗ್ ಕಾರ್ಯ ಮುಗಿದಿದ್ದು ನಮ್ಮ ಸಿಬ್ಬಂದಿ ಮನೆ ಮನೆಗೂ ಭೇಟಿ ನೀಡಿ ನಮೂನೆಗಳಲ್ಲಿ ಮಾಹಿತಿಯನ್ನು ಭರ್ತಿ ಮಾಡಿಸಿಕೊಳ್ಳಲಿದ್ದು ಈ ವೇಳೆ ಬಿಎಲ್1, ಬಿಎಲ್2 ಸೇರಿದಂತೆ ಸ್ಥಳೀಯರು ಯಾರು ಬೇಕಾದರೂ ಜತೆಗಿರಬಹುದು.

ನಗರ ಮತ್ತು ಗ್ರಾಮೀಣ ಭಾಗದಲ್ಲಿನ ಮತದಾರರು ಕೂಡ ಈ ಎಸ್‌.ಐ.ಆರ್ ಕಾರ್ಯದಲ್ಲಿ ಪಾಲ್ಗೊಳ್ಳುವಿಕೆ ಆಗಬೇಕು ಎಂಬುದು ಚುನಾವಣಾ ಆಯೋಗದ ಉದ್ದೇಶ. ಆಗಲೆ ಎಸ್‌.ಐ.ಆರ್ ಕಾರ್ಯವು ಸುಸೂತ್ರವಾಗಿ ನಿಷ್ಪಕ್ಷಪಾತವಾಗಿ ಯಾವುದೆ ರೀತಿಯ ಸಂಶಯ ಇಲ್ಲದಂತೆ ನಡೆಯಲಿದೆ ಎಂದು ಅಭಿಪ್ರಾಯಪಟ್ಟರು.

ಈ ವೇಳೆ ತರಬೇತಿಯಲ್ಲಿ ಭಾಗವಹಿಸಿದ್ದ ಬಿ.ಎಲ್‌.ಒಗಳು, ಬಿ.ಎಲ್‌.ಎ-1, ಬಿಎಲ್‌ಎ-2 ಅವರು ಎಸ್‌.ಐ.ಆರ್ ಕಾರ್ಯ ಕುರಿತು ತಮ್ಮಲ್ಲಿದ್ದ ಅನುಮಾನಗಳ ಬಗ್ಗೆ ಪ್ರಶ್ನೆ ಮಾಡಿ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದು ಪರಿಹರಿಸಿಕೊಂಡರು. ಇನ್ನೂ ಎರಡು ಮೂರು ಹಂತದಲ್ಲಿ ತರಬೇತಿ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಿದ್ದೇವೆ ಎಂದು ಜಿಲ್ಲಾಧಿಕಾರಿ ಜಿ.ಪ್ರಭು ಅವರು ಭರವಸೆ ನೀಡಿದರು.

ಜಂಟಿ ಕೃಷಿ ನಿರ್ದೇಶಕರು ಹಾಗೂ ಮತದಾರರ ನೋಂಧಣಾಕಾರಿ ಎಸ್.ಎಸ್.ಅಬೀದ್, ತಹಶೀಲ್ದಾರರು ಹಾಗೂ ಮತದಾರರ ಸಹಾಯಕ ನೋಂದಣಾಧಿಕಾರಿ ಎನ್.ಗಗನಸಿಂಧು, ನಗರಸಭೆ ಪೌರಾಯುಕ್ತೆ ಹಾಗೂ ನಗರ ಮತದಾರರ ಸಹಾಯಕ ನೋಂದಣಾಧಿಕಾರಿ ಜಿ.ಅಮೃತಗೌಡ, ಬಿ.ಎಲ್‌.ಒಗಳು, ಬಿ.ಎಲ್‌.ಎ-1, ಬಿ.ಎಲ್‌.ಎ-2 ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-23/06/2026

0
Sidlaghatta Silk Cocoon Market-22/06/2026

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 23/06/2026

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 453
Qty: 25088 Kg
Mx : 777
Mn: 525
Avg: 671

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 09
Qty: 431 Kg
Mx : ₹ 789
Mn: ₹ 388
Avg: ₹ 750


For Daily Updates WhatsApp ‘HI’ to 7406303366

ಶಿಥಿಲಗೊಂಡ ಶಿವನ ದೇವಸ್ಥಾನದ ಪುನರುಜ್ಜೀವನ ಕಾರ್ಯಕ್ಕೆ ಚಾಲನೆ

0
Sidlaghatta Muttur Temple Rejuvenation

Muttur, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಮುತ್ತೂರು ಗ್ರಾಮದಲ್ಲಿ ಶಿಥಿಲಗೊಂಡಿರುವ ನೊಳಂಬರ ಕಾಲಕ್ಕೆ ಸೇರಿರುವ ಶಿವನ ದೇವಸ್ಥಾನ, ವೀರಗಲ್ಲು ಮತ್ತು ಶಾಸನವನ್ನು ನಿವಾಸ ಸಂಸ್ಥೆ, ಗ್ರಾಮಾಂತರ ಟ್ರಸ್ಟ್ ಮತ್ತು ಗ್ರಾಮಸ್ಥರ ಸಹಯೋಗದಲ್ಲಿ ಪಾರಂಪರಿಕ ಪುನರುಜ್ಜೀವನ ಕಾರ್ಯಕ್ಕೆ ಸೋಮವಾರ ಚಾಲನೆ ನೀಡಲಾಯಿತು.

ಕೆಲವು ತಿಂಗಳ ಹಿಂದೆ ಪುರಾತತ್ವ ಇಲಾಖೆಯ ಗ್ರಾಮಾಂತರ ಸವೆ ಕಾರ್ಯವನ್ನು ನಡೆಸಿದ್ದ ಶಾಸನತಜ್ಞರಾದ ಕೆ.ಧನಪಾಲ್ ಮತ್ತು ಎ.ಎಂ.ತ್ಯಾಗರಾಜ್ ಅವರು ಗ್ರಾಮದ ದೇವಸ್ಥಾನ, ವೀರಗಲ್ಲು ಮತ್ತು ಶಾಸನವನ್ನು ಅಧ್ಯಯನ ಮಾಡಿ, ಇದನ್ನು ಸಂರಕ್ಷಿಸುವಂತೆ ಗ್ರಾಮಸ್ಥರಲ್ಲಿ ವಿನಂತಿಸಿದ್ದರು.

ಈ ಹಿನ್ನೆಲೆಯಲ್ಲಿ ಮುತ್ತೂರು ಗ್ರಾಮದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನು ಮಾಡುತ್ತಿರುವ ಗ್ರಾಮಾಂತರ ಟ್ರಸ್ಟ್ ಸಂಸ್ಥೆಯವರು ಮುಂದೆ ಬಂದು ಮಿಥಿಕ್ ಸೊಸೈಟಿ, ಸಂರಚನಾ ತಜ್ಞ ಇಂಜಿನಿಯರ್ ಪ್ರೊ.ರಘುನಾಥ್ ಮತ್ತು ಪುರಾತತ್ವ ಇಲಾಖೆಯವರ ಸಲಹೆ ಪಡೆದು, ನಿವಾಸ ಸಂಸ್ಥೆ ಮತ್ತು ದಾನಿಗಳ ನೆರವನ್ನು ಪಡೆದು ಪುನರುಜ್ಜೀವನ ಕಾರ್ಯಕ್ಕೆ ಮುಂದಾಗಿರುವರು.

ಈ ಸಂದರ್ಭದಲ್ಲಿ ದಾನಿಗಳಾದ ಲಲಿತ ಕಂದಸ್ವಾಮಿ, ರಮೇಶ್ ಸುಂದರೇಶನ್, ತಿರುವಣ್ಣಾಮಲೈ ಅರುಣಾಚಲರಮಣ ಆತ್ಮವಿದ್ಯಾಮಂದಿರದ ರಮಣಸ್ವರೂಪಾನಂದ ಸ್ವಾಮೀಜಿ, ಮೈಸೂರು ಮಹೇಶ್, ನಿವಾಸ ಸಂಸ್ಥೆ ಮತ್ತು ಗ್ರಾಮಾಂತರ ಟ್ರಸ್ಟ್ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ಬ್ಯಾಟರಾಯ ಸ್ವಾಮಿ ಬೆಟ್ಟದಲ್ಲಿ ವಿಶ್ವ ಪರಿಸರ ಹಾಗೂ ಯೋಗ ದಿನಾಚರಣೆ

0
chikkdasarahalli yoga day celebration

Chikkadasarahalli, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಚಿಕ್ಕದಾಸರಹಳ್ಳಿ ಗ್ರಾಮದ ಶ್ರೀ ಬ್ಯಾಟರಾಯಸ್ವಾಮಿ ಗುಟ್ಟದಲ್ಲಿ ಸಾವಯುವ ಸಂತೆ ವಿಜಯಪುರ, ಮಾತೃ ಮಡಿಲು ಸೇವಾ ಸಂಸ್ಥೆ, ಆಸ್ವಾದಂ ಆತ್ಮಜ್ಯೋತಿ ಸ್ವಾಧ್ಯಾಯ ಮಿಷನ್ ಹಾಗೂ ವಿಶೇಷ ಚೇತನ ಮಕ್ಕಳ ಚಂದನವನ ಇಕೋ ಕ್ಲಬ್‌ ಗಳ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ವಿಶ್ವ ಯೋಗ ದಿನಾಚರಣೆ ಅಂಗವಾಗಿ ವಿಶೇಷ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಶ್ರೀ ಬ್ಯಾಟರಾಯಸ್ವಾಮಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಗೋಪೂಜೆ ನೆರವೇರಿಸುವ ಮೂಲಕ ಪ್ರಕೃತಿ ಮತ್ತು ಪ್ರಾಣಿ ಸಂಕುಲದ ರಕ್ಷಣೆಯ ಸಂಕಲ್ಪ ಮಾಡಲಾಯಿತು.

500ಕ್ಕೂ ಹೆಚ್ಚು ಉಂಡೆ ಬೀಜಗಳ ಬಿತ್ತನೆ: ದೇವಾಲಯದ ಸುತ್ತಮುತ್ತಲಿನ ಗುಡ್ಡದ ಪ್ರದೇಶದಲ್ಲಿ ಹಸಿರನ್ನು ವೃದ್ಧಿಸುವ ನಿಟ್ಟಿನಲ್ಲಿ ವಿವಿಧ ಸಂಸ್ಥೆಗಳ ಸ್ವಯಂ ಸೇವಕರು ಒಟ್ಟಾಗಿ 500ಕ್ಕೂ ಹೆಚ್ಚು ಉಂಡೆ ಬೀಜಗಳನ್ನು ಬಿತ್ತಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ವಿಜಯಪುರ ದಿನೇಶ್ ಅವರು, ಪರಿಸರ ಸಮತೋಲನದಲ್ಲಿ ಬಿತ್ತನೆ ಬೀಜಗಳ ಪಾತ್ರ ಹಾಗೂ ಉಂಡೆ ಬೀಜಗಳನ್ನು ತಯಾರಿಸಿ ಬಿತ್ತುವ ವಿಧಾನದ ಬಗ್ಗೆ ಸಾರ್ವಜನಿಕರಿಗೆ ಮತ್ತು ಸ್ವಯಂ ಸೇವಕರಿಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು.

ಕೃಷಿಕ ರಮೇಶ್ ಮಾತನಾಡಿ, ನಾವು ಸಾವಯವ ಕೃಷಿ ಮಾಡುತ್ತಿದ್ದು , ನಮ್ಮ ತೋಟದಲ್ಲಿ 185 ಕ್ಕೂ ಹೆಚ್ಚಿನ ಹಣ್ಣಿನ ಗಿಡಗಳನ್ನು ಬೆಳೆಯುತ್ತಿದೇನೆ. ಯೋಗ ದಿನಾಚರಣೆ ಅಂಗವಾಗಿ ಸ್ವಯಂ ಪ್ರೇರಿತರಾಗಿ ಬಂದು ಇಲ್ಲಿ ಬಂದು ಬೀಜ ಉಂಡೆಗಳನ್ನು ನೆಡುತ್ತಿದ್ದೇವೆ ಎಂದು ತಿಳಿಸಿದರು.

ಸಾವಯವ ಕೃಷಿಕ ಬೋದಗೂರು ವೆಂಕಟಸ್ವಾಮಿರೆಡ್ಡಿ ಮಾತನಾಡಿ, ನಮ್ಮ ಸಮಾಜಕ್ಕೆ ಒಳ್ಳೆಯ ಆಹಾರ ನೀಡುವ ಉದ್ದೇಶದಿಂದ ನಾವು ಸಾವಯವ ಕೃಷಿ ಸಂತೆಯನ್ನು ನಡೆಸಿಕೊಂಡು ಬರುತ್ತಿದ್ದು ಇದರಲ್ಲಿ ಸಾವಯವ ಗೊಬ್ಬರ ಬಳಸಿ ಬೆಳೆದಂತಹ ಹಣ್ಣು ತರಕಾರಿಗಳನ್ನು ಮಾತ್ರ ಮಾರಾಟ ಮಾಡುತ್ತಿದ್ದೇವೆ. ಗ್ರಾಹಕರಿಗೆ ಕೈಗೆಟಕುವ ಬೆಲೆಯಲ್ಲಿ ಉತ್ತಮ ಗುಣಮಟ್ಟದ ಸಾವಯವ ಹಣ್ಣು ತರಕಾರಿಗಳನ್ನು ನೀಡುತ್ತಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆದಂತಹ ಹಣ್ಣು ಸೊಪ್ಪು ತರಕಾರಿಗಳಿಂದಲೇ ಅಡುಗೆಯನ್ನು ತಯಾರಿಸಿ ಕಾರ್ಯಕ್ರಮಕ್ಕೆ ಬಂದಂತಹ ಎಲ್ಲರಿಗೆ ಉಣಬಡಿಸಲಾಯಿತು. ಗಿಡಗಳನ್ನು ಬೆಳೆಸಿ ಪರಿಸರ ಉಳಿಸುವ ಶಪಥ ಮಾಡಿದರು. ಯೋಗ ಮತ್ತು ಪರಿಸರ ದಿನದ ಸಮ್ಮಿಲನವಾಗಿ ಮೂಡಿಬಂದ ಈ ಕಾರ್ಯಕ್ರಮ ವಿಶೇಷವಾಗಿತ್ತು.

ಬ್ಯಾಟರಾಯಸ್ವಾಮಿ ದೇವಾಲಯ ಕಮಿಟಿ ಅಧ್ಯಕ್ಷ ಬ್ಯಾಟರಾಯ ಶೆಟ್ಟಿ , ರಜನಿ, ಸಾವಯವ ರೈತರಾದ ವಿಜಯಪುರ ದಿನೇಶ್, ರಮೇಶ್, ಬಸವರಾಜ್, ಆವತಿ ಅನಿಲ್, ವೆಂಕಟೇಶ್, ಬೋದಗೂರು ವೆಂಕಟಸ್ವಾಮಿ ರೆಡ್ಡಿ, ಧರ್ಮಪುರ ವೀರಭದ್ರಪ್ಪ, ನಾರಾಯಣ ಸ್ವಾಮಿ, ಹಾರೋಹಳ್ಳಿ ಕೃಷ್ಣ ಮೂರ್ತಿ , ನಡಿಪಿನಾಯಕನಹಳ್ಳಿ ಶ್ರೀಧರ್, ನಕ್ಕನಹಳ್ಳಿ ಪ್ರಸಾದ್, ಅಂಗಟ ನರಸಾರೆಡ್ಡಿ, ಮಾತೃ ಮಡಿಲು ಸಂಸ್ಥೆ ಜಗದೀಶ್, ವಂದನ ಜಗದೀಶ್, ಚೆನ್ನಕೇಶವ, ಪರಿಸರ ಪ್ರೇಮಿಗಳು ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366