14.1 C
Sidlaghatta
Thursday, December 25, 2025
Home Blog Page 9

ದಲಿತ ಸಂಘರ್ಷ ಸೇನೆಯ ನೂತನ ಪದಾಧಿಕಾರಿಗಳ ಪುನರ್ ಆಯ್ಕೆ ಸಭೆ

0
sidlaghatta DSS Members Reappointment

Sidlaghatta, Chikkaballapur : ದಲಿತ ಸಂಘರ್ಷ ಸೇನೆ ಯಾವುದೇ ಒಂದು ಕೋಮಿಗೆ ಸೀಮಿತವಲ್ಲ, ಬದಲಿಗೆ ಎಲ್ಲರನ್ನು ಒಗ್ಗೂಡಿಸಿಕೊಂಡು ಸಂಘಟನೆಯನ್ನು ಬಲಪಡಿಸಿ ನೊಂದವರ ಪರ ಹೋರಾಟ ನಡೆಸುವುದು ಸಂಘಟನೆಯ ಗುರಿಯಾಗಿದೆ ಎಂದು ದಲಿತ ಸಂಘರ್ಷ ಸೇನೆಯ ರಾಜ್ಯಾಧ್ಯಕ್ಷ ಜಿ.ಆನಂದ್ ತಿಳಿಸಿದರು

ನಗರದ ಶಿಡ್ಲಘಟ್ಟ-ಚಿಂತಾಮಣಿ ರಸ್ತೆಯಲ್ಲಿರುವ ಎವಿಎಂ ಪಾರ್ಟಿಹಾಲ್ ನಲ್ಲಿ ಹಮ್ಮಿಕೊಂಡಿದ್ದ ದಲಿತ ಸಂಘರ್ಷ ಸೇನೆ ನೂತನ ಪದಾಧಿಕಾರಿಗಳ ಪುನರ್ ಆಯ್ಕೆ ಸಭೆಯಲ್ಲಿ ಸಂವಿದಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ವ ನಮನವನ್ನು ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರು ರಚಿಸಿರುವ ಸಂವಿಧಾನವನ್ನು ಗೌರವಿಸುವ ಜೊತೆಗೆ ರಕ್ಷಿಸುವ ಕೆಲಸವನ್ನು ಸಂಘಟನೆಯ ಪದಾಧಿಕಾರಿಗಳು ಪ್ರಾಮಾಣಿಕವಾಗಿ ಮಾಡಬೇಕು.

ಜನಸಾಮಾನ್ಯರ ಜೊತೆ ಕೆಲಸ ಮಾಡುವಾಗ ವ್ಯಕ್ತಿಗೆ ಪದವಿಗಿಂತ ಪ್ರಾಮಾಣಿಕ ಸೇವೆ ಬಹು ಮುಖ್ಯವಾಗಿರುತ್ತದೆ. ಹಾಗಾಗಿ ದಲಿತ ಸಂಘರ್ಷ ಸೇನೆಯ ಪದಾಧಿಕಾರಿಗಳು ನೊಂದವರ ಪರ ಸ್ಪಂದಿಸುವ ಕೆಲಸ ಮಾಡಬೇಕು ಎಂದರು.

ದಲಿತ ಮುಖಂಡ ಸಿ.ವಿ.ಲಕ್ಷಣ್‌ರಾಜು ಮಾತನಾಡಿ ಸಮಾನತೆ ಹಾಗೂ ಸ್ವಾತ್ರಂತ್ರತೆಯ ಹಕ್ಕುಗಳನ್ನು ಪಡೆಯಲು ಹೋರಾಟಗಳನ್ನು ರೂಪಿಸುವ ಮೂಲಕ ಸಂಘಟನೆಗಳು ಕಾರ್ಯ ನಿರ್ವಹಿಸಬೇಕು ಎಂದರು.

ಸಭೆಯಲ್ಲಿ ಮುತ್ತೂರು ವೆಂಕಟೇಶ್, ದೊಡ್ಡದಾಸರಹಳ್ಳಿ ದೇವರಾಜ್ ಮತ್ತಿತರರು ಹಾಜರಿದ್ದರು.

ನೂತನ ಪದಾಧಿಕಾರಿಗಳ ಆಯ್ಕೆ :

ದಲಿತ ಸಂಘರ್ಷ ಸೇನೆ ಜಿಲ್ಲಾಧ್ಯಕ್ಷರಾಗಿ ನಗರದ ನಾಗನರಸಿಂಹ, ಜಿಲ್ಲಾ ಕಾರ್ಯಧ್ಯಕ್ಷರಾಗಿ ಕೆ.ರವಿಶಂಕರ್, ಕಾರ್ಯದರ್ಶಿಯಾಗಿ ಟಿ.ಪೆದ್ದನಹಳ್ಳಿ ಕೃಷ್ಣ, ಶಿಡ್ಲಘಟ್ಟ ತಾಲ್ಲೂಕು ಅಧ್ಯಕ್ಷರಾಗಿ ಕೆ.ನಾರಾಯಣಸ್ವಾಮಿ, ಕಾರ್ಯಾಧ್ಯಕ್ಷರಾಗಿ ಹನುಮಂತಪುರ ಕೃಷ್ಣಪ್ಪ, ಉಪಾಧ್ಯಕ್ಷರಾಗಿ ಕೆ.ಅರುಣ್ ಕುಮಾರ್, ಗೋಕುಲ್, ನಾಗೇಶ್, ಪ್ರಧಾನ ಕಾರ್ಯದರ್ಶಿಯಾಗಿ ದೊಡ್ಡದಾಸರಹಳ್ಳಿ ವಿನಯ್, ಕಾರ್ಯದರ್ಶಿಯಾಗಿ ಪಲಿರ್ಚೆಲು ಬಾಬು, ಸಂಘಟನಾ ಕಾರ್ಯದರ್ಶಿಯಾಗಿ ಚಿಕ್ಕದಾಸರಹಳ್ಳಿ ಲೋಕೇಶ್, ಖಜಾಂಚಿಯಾಗಿ ಮುನಿರಾಜು.ಎಂ, ತಾಲ್ಲೂಕು ಕಾರ್ಮಿಕ ಘಟಕದ ಅಧ್ಯಕ್ಷರಾಗಿ ಚಿಕ್ಕದಾಸರಹಳ್ಳಿ ಕೃಷ್ಣಪ್ಪ, ಶಿಡ್ಲಘಟ್ಟ ನಗರ ಘಟಕ ಅಧ್ಯಕ್ಷರಾಗಿ ಎ.ನರಸಿಂಹಮೂರ್ತಿ. ಪ್ರಧಾನ ಕಾರ್ಯದರ್ಶಿಯಾಗಿ ಮುರಳಿ, ಉಪಾಧ್ಯಕ್ಷರಾಗಿ ಕೆ.ಸುಬ್ರಮಣಿ, ಕಾರ್ಯದಕ್ಷರಾಗಿ ನಂದತೇಜ ಸಫಾರಿ, ಕಾರ್ಯದರ್ಶಿಯಾಗಿ ನವೀನ್, ಖಜಾಂಚಿಯಾಗಿ ಸುರೇಶ್ ರವರನ್ನು ಆಯ್ಕೆ ಮಾಡಲಾಯಿತು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-28/11/2025

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 28/11/2025

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 308
Qty: 16436 Kg
Mx : 785
Mn: 523
Avg: 693

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 06
Qty: 323 Kg
Mx : ₹ 866
Mn: ₹ 785
Avg: ₹ 840


For Daily Updates WhatsApp ‘HI’ to 7406303366

ಮಳ್ಳೂರು ಆರೋಗ್ಯ ಕೇಂದ್ರದಲ್ಲಿ ಜನಔಷಧಿ ಕೇಂದ್ರ ಉದ್ಘಾಟನೆ

0
Mallur Janaushadhi Centre Inauguration

ಶಿಡ್ಲಘಟ್ಟ ತಾಲ್ಲೂಕಿನ ಮಳ್ಳೂರು ಗ್ರಾಮದ ಆರೋಗ್ಯ ಕೇಂದ್ರದಲ್ಲಿ ಪ್ರಧಾನಮಂತ್ರಿ ಜನಔಷಧಿ ಕೇಂದ್ರವನ್ನು ಡಾ. ಪೃಥ್ವಿಶ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ಜನರು ದಿನನಿತ್ಯದ ಒತ್ತಡದ ಬದುಕಿನ ನಡುವೆ ರಕ್ತದೊತ್ತಡ, ಮಧುಮೇಹ ಸೇರಿದಂತೆ ಹಲವು ದೀರ್ಘಕಾಲಿಕ ರೋಗಗಳಿಗೆ ತುತ್ತಾಗುತ್ತಿರುವುದನ್ನು ಉಲ್ಲೇಖಿಸಿದರು. ಇಂತಹ ಕಾಯಿಲೆಗಳಿಗೆ ನಿಯಮಿತವಾಗಿ ಔಷಧಿ ಸೇವಿಸಬೇಕಾದ ಪರಿಸ್ಥಿತಿಯಲ್ಲಿ, ದುಬಾರಿ ಔಷಧಿಗಳ ವೆಚ್ಚ ಬಡ ಕುಟುಂಬಗಳಿಗೆ ಹೆಚ್ಚಿನ ಹೊರೆ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಗುಣಮಟ್ಟದ ಮತ್ತು ಕೈಗೆಟುಕುವ ದರದ ಔಷಧಿಗಳನ್ನು ಸಾರ್ವಜನಿಕರಿಗೆ ಲಭ್ಯ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಜನಔಷಧಿ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಅವರು ಹೇಳಿದರು. ಜನರು ಇದರ ಸದುಪಯೋಗ ಪಡೆದುಕೊಂಡರೆ ಆರೋಗ್ಯ ವೆಚ್ಚ ಗಣನೀಯವಾಗಿ ಕಡಿಮೆಯಾಗಲಿದೆ ಎಂದು ಅಭಿಪ್ರಾಯಪಟ್ಟರು.

ರೇಷ್ಮೆ ಮಂಡಳಿ ನಿರ್ದೇಶಕ ಮಳ್ಳೂರು ಶಿವಣ್ಣ ಮಾತನಾಡಿ, ಈ ಭಾಗದ ಜನರಲ್ಲಿ ಬಹುತೇಕರು ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಉದ್ಯಮದಲ್ಲಿ ತೊಡಗಿಸಿಕೊಂಡಿರುವುದರಿಂದ 50 ವರ್ಷ ಮೇಲ್ಪಟ್ಟವರಲ್ಲಿ ಉಸಿರಾಟ ತೊಂದರೆ, ಮಧುಮೇಹ ಮತ್ತು ರಕ್ತದೊತ್ತಡದಂತಹ ಕಾಯಿಲೆಗಳು ಸಾಮಾನ್ಯವಾಗಿವೆ ಎಂದರು. ಆಸ್ಪತ್ರೆಗಳಲ್ಲಿ ದೊರೆಯುವ ಔಷಧಿಗಳ ಬೆಲೆ ದುಬಾರಿಯಾಗಿರುವುದರಿಂದ ಕೆಲವು ಸಂದರ್ಭಗಳಲ್ಲಿ ಜನರು ಔಷಧಿ ಖರೀದಿ ಮಾಡಲು ಸಾಧ್ಯವಾಗದೇ ರೋಗ ಗಂಭೀರಗೊಂಡು ಸಾವಿನ ಪ್ರಕರಣಗಳು ಸಂಭವಿಸಿರುವುದನ್ನು ಹೇಳಿದರು. ಈಗ ಜನಔಷಧಿ ಕೇಂದ್ರ ಆರಂಭವಾಗಿರುವುದರಿಂದ ಬಡವರಿಗೆ ಬಹಳ ಉಪಯೋಗವಾಗಲಿದೆ ಎಂದು ಅವರು ತಿಳಿಸಿದರು. ಜೊತೆಗೆ ನಿಯಮಿತ ಆರೋಗ್ಯ ತಪಾಸಣೆ ಅಗತ್ಯವಿದೆ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಜ್ಯೋತಿ ಪೃಥ್ವೀಶ್, ಡಾ. ಕುಲಕರ್ಣಿ (ಮುದ್ದೇನಹಳ್ಳಿ), ಆರೋಗ್ಯ ಭಾರತಿಯ ರಾಜ್ಯ ಖಜಾಂಚಿ ಗಂಗಾಧರ್, ಚಂದ್ರಶೇಖರ್, ಆಯುರ್ವೇದ ವೈದ್ಯರಾದ ಡಾ. ನಟರಾಜ್, ಜನಔಷಧಿ ಕೇಂದ್ರದ ವಿಜಯಕುಮಾರ್, ಸ್ವಾಮಿ ವಿವೇಕಾನಂದ ಶಾಲೆಯ ಪ್ರಾಂಶುಪಾಲ ಸುರೇಶ್, ಜಿಲ್ಲಾಮಟ್ಟದ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಉಪಾಧ್ಯಕ್ಷ ಮಳ್ಳೂರು ಹರೀಶ್, ಗ್ರಾಮಾಭಿವೃದ್ಧಿ ಸಂಸ್ಥೆಯ ಕಾರ್ಯದರ್ಶಿ ರಮೇಶ್ ಕೋಟೆ ಮತ್ತು ಹಲವರು ಉಪಸ್ಥಿತರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-27/11/2025

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 27/11/2025

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 344
Qty: 18513 Kg
Mx : 790
Mn: 540
Avg: 688

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 07
Qty: 265 Kg
Mx : ₹ 903
Mn: ₹ 622
Avg: ₹ 838


For Daily Updates WhatsApp ‘HI’ to 7406303366

ನ.29ರಂದು ಪ್ರಗತಿಪರ ಹೋರಾಟಗಾರರ ಸಂಘದಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

0
Sidlaghatta Kannada Rajyotsava nov29

Sidlaghatta, Chikkaballapur : ನವೆಂಬರ್ 29ರಂದು ಶಿಡ್ಲಘಟ್ಟದಲ್ಲಿ ಕನ್ನಡ ರಾಜ್ಯೋತ್ಸವವನ್ನು ನೆರವೇರಿಸಲು ಪ್ರಗತಿಪರ ಹೋರಾಟಗಾರರ ಸಂಘದಿಂದ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ವಿಸ್ಡಂ ನಾಗರಾಜ್ ತಿಳಿಸಿದರು.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಟೆ ವೃತ್ತದಲ್ಲಿ ರಾಜ್ಯೋತ್ಸವದ ಮುಖ್ಯ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಶಾಸಕ ಬಿ.ಎನ್.ರವಿಕುಮಾರ್ ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕ ಕುಶಲ್ ಚೌಕ್ಸೇ ಸೇರಿದಂತೆ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು. ಕನ್ನಡ ಚಲನಚಿತ್ರ ಕ್ಷೇತ್ರದ ಜೂನಿಯರ್ ಕಲಾವಿದರೂ ಕಾರ್ಯಕ್ರಮಕ್ಕೆ ಹಾಜರಾಗಲಿದ್ದಾರೆ.

ಕಾರ್ಯಕ್ರಮದಲ್ಲಿ ಕನ್ನಡ ಚಲನಚಿತ್ರ ಗೀತೆಗಳ ಗಾಯನ, ರಸ ಸಂಜೆ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಕಳೆದ ವರ್ಷ ರಾಜ್ಯೋತ್ಸವ ನಡೆಸಿ ಉಳಿದ ಹಣದ ಜೊತೆಗೆ ಸಂಘಟನೆಯವರು ಸ್ವಂತವಾಗಿ ಹಣ ನೀಡಿ ಈ ವರ್ಷದ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದೇವೆ. ಸಾರ್ವಜನಿಕರಿಂದ ಯಾವುದೇ ದೇಣಿಗೆ ಸಂಗ್ರಹಣೆ ಮಾಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಗೌರವಾಧ್ಯಕ್ಷ ಚನ್ನೇಗೌಡ, ಉಪಾಧ್ಯಕ್ಷ ಸಿ.ಎಂ.ಬೈರೇಗೌಡ, ಕಾರ್ಯದರ್ಶಿ ರವಿಪ್ರಕಾಶ್, ಖಜಾಂಚಿ ಅಹಮದ್, ಮನೋಜ್ ಕುಮಾರ್, ಮಧುಲತಾ, ಪ್ರದೀಪ್, ಸುಬ್ರಮಣಿ, ಎಸ್‌.ಆರ್‌.ಮಂಜುನಾಥ್, ದ್ಯಾವಪ್ಪ, ಶ್ರೀನಿವಾಸ್, ಚಲುವರಾಜ್ ಸೇರಿದಂತೆ ಪದಾಧಿಕಾರಿಗಳು ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ಶಿಡ್ಲಘಟ್ಟ ಕೋಟೆ ಸೋಮೇಶ್ವರ ದೇವಸ್ಥಾನದಲ್ಲಿ ಷಷ್ಠಿ ವಿಶೇಷ ಪೂಜೆ

0
Sidlaghatta Kote Someshwara Temple Shashti Pooja

Sidlaghatta, Chikkaballapur : ಶಿಡ್ಲಘಟ್ಟ ನಗರದ ಕೋಟೆ ಶ್ರೀಸೋಮೇಶ್ವರಸ್ವಾಮಿ ದೇವಾಲಯದಲ್ಲಿ ಷಷ್ಠಿ ಪ್ರಯುಕ್ತ ಬುಧವಾರ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಿತು. ದೇವಸ್ಥಾನದ ಆವರಣದಲ್ಲಿ ಬಿಲ್ಪತ್ರೆಯ ಮರದ ಕೆಳಗೆ ನಿರ್ಮಿಸಲಾದ ಹೋಮ ಕುಂಡದಲ್ಲಿ ಮೃತ್ಯುಂಜಯ ಹೋಮವನ್ನು ವಿಧಿವಿಧಾನಗಳೊಂದಿಗೆ ನೆರವೇರಿಸಲಾಯಿತು.

ಭಕ್ತರು ನವಧಾನ್ಯ, ವಸ್ತ್ರ ಮತ್ತು ಇತರ ಕಾಣಿಕೆಗಳನ್ನು ಅರ್ಪಿಸಿ ಹೋಮದ ಸುತ್ತ ಮೂರೂ ಬಾರಿ ಪ್ರದಕ್ಷಿಣೆ ಹಾಕಿ, ತಮ್ಮ ಇಷ್ಟಾರ್ಥಗಳ ಸಿದ್ಧಿಯಾಗಲು ದೇವರಲ್ಲಿ ಪ್ರಾರ್ಥಿಸಿದರು. ದೇವಸ್ಥಾನದ ಆವರಣದಲ್ಲಿರುವ ನಾಗ ದೇವತೆಯ ಸುತ್ತಲೂ ಭಕ್ತರು ಪ್ರದಕ್ಷಿಣೆ ಹಾಕಿ, ಮನೆ–ಮನೆಯಲ್ಲಿ ಇರುವ ಕಷ್ಟಗಳು ದೂರವಾಗಲಿವಂತೆ ಪ್ರಾರ್ಥನೆ ಸಲ್ಲಿಸಿದರು.

ಲಿಂಗರೂಪಿ ಶ್ರೀಸೋಮೇಶ್ವರ ಸ್ವಾಮಿಯ ಮೂರ್ತಿಗೆ ವಿಶೇಷ ಹೂವಿನ ಅಲಂಕಾರ ಮಾಡಿ ಮಹಾ ಮಂಗಳಾರತಿ ನೆರವೇರಿಸಲಾಯಿತು. ನಂತರ ಭಕ್ತರಿಗೆ ತೀರ್ಥ ಪ್ರಸಾದವನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸ್ಥಳೀಯ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಭಕ್ತಿಶ್ರದ್ಧೆ ತೋರಿದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ಶಿಡ್ಲಘಟ್ಟದಲ್ಲಿ ಸಂವಿಧಾನ ದಿನಾಚರಣೆ, ವಿದ್ಯಾರ್ಥಿಗಳಿಗೆ ಪುರಸ್ಕಾರ

0
Sidlaghatta National Constitution Day Celebration

Sidlaghatta, Chikkaballapur : “ನಮ್ಮ ಸಂವಿಧಾನವು ಕೇವಲ ಒಂದು ಪುಸ್ತಕವಲ್ಲ, ಅದು ದೇಶದ ಆತ್ಮ,” ಎಂದು ಶಾಸಕ ಬಿ.ಎನ್. ರವಿಕುಮಾರ್ ಹೇಳಿದರು. ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸಂವಿಧಾನ ದಿನಾಚರಣೆ ಅಂಗವಾಗಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಂವಿಧಾನವು ಸಮಾನತೆ, ಸ್ವಾತಂತ್ರ್ಯ, ನ್ಯಾಯ ಮತ್ತು ಭ್ರಾತೃತ್ವದ ಮೌಲ್ಯಗಳ ಮೇಲೆ ನಿರ್ಮಿತವಾಗಿದ್ದು, ಸಮಾಜದ ಪ್ರತಿಯೊಬ್ಬ ವ್ಯಕ್ತಿಗೂ ಮೂಲಭೂತ ಸವಲತ್ತುಗಳನ್ನು ಒದಗಿಸುವ ಉದ್ದೇಶ ಹೊಂದಿದೆ. ಸಂವಿಧಾನದ ರಚನೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಪರಿಶ್ರಮ ಮತ್ತು ದೂರದೃಷ್ಟಿಯನ್ನು ಸ್ಮರಿಸುತ್ತಾ, “ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು” ಎಂಬ ತತ್ವವನ್ನು ಸಂವಿಧಾನ ಸಾರುತ್ತದೆ ಎಂದು ಶಾಸಕರು ಹೇಳಿದರು.

ತಹಶೀಲ್ದಾರ್ ಗಗನಸಿಂಧು ಮಾತನಾಡಿ, ಸಂವಿಧಾನವು ಜಾತಿ, ಧರ್ಮ, ಲಿಂಗ, ಸ್ಥಾನದ ಆಧಾರದ ಮೇಲೆ ಯಾವುದೇ ತಾರತಮ್ಯ ಇಲ್ಲದೆ ಎಲ್ಲ ನಾಗರಿಕರೂ ಸಮಾನರಾಗಿದ್ದಾರೆ ಎಂಬ ಸಂದೇಶ ನೀಡುತ್ತದೆ ಎಂದು ವಿವರಿಸಿದರು. ಪ್ರತಿಯೊಬ್ಬ ನಾಗರಿಕನಿಗೂ ತನ್ನ ಅಭಿಪ್ರಾಯ ಮತ್ತು ನಂಬಿಕೆಯನ್ನು ಸ್ವತಂತ್ರವಾಗಿ ವ್ಯಕ್ತಪಡಿಸುವ ಹಕ್ಕು ಇದೆ. ದೇಶದ ಸೌಹಾರ್ದತೆಯನ್ನು ಕಾಪಾಡುವುದು ಎಲ್ಲರ ಜವಾಬ್ದಾರಿ ಎಂದರು.

ತಾಲ್ಲೂಕು ಪಂಚಾಯಿತಿ ಇಒ ಹೇಮಾವತಿ ಮಾತನಾಡಿ, ಸಂವಿಧಾನವು ಕೇವಲ ಹಕ್ಕುಗಳನ್ನೇ ಅಲ್ಲ, ನಾಗರಿಕರ ಕರ್ತವ್ಯಗಳನ್ನೂ ತಿಳಿಸಿದೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗೌರವಿಸುವುದು, ರಾಷ್ಟ್ರದ ಸಂಪತ್ತನ್ನು ರಕ್ಷಿಸುವುದು, ಪರಿಸರವನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಯುವಕರು ಸಂವಿಧಾನದ ಆಶಯಗಳನ್ನು ಅರಿತು ಜೀವನದಲ್ಲಿ ಪಾಲಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದ ಸಂದರ್ಭದಲ್ಲಿ ಸಂವಿಧಾನ ದಿನಾಚರಣೆಯನ್ನು ಅಂಗವಾಗಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಗಳ ತಾಲ್ಲೂಕು ಮಟ್ಟದ ವಿಜೇತರಿಗೆ ನಗದು ಬಹುಮಾನ ಮತ್ತು ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಪಿ.ಎಲ್‌.ಡಿ ಬ್ಯಾಂಕ್ ಅಧ್ಯಕ್ಷ ಬಂಕ್ ಮುನಿಯಪ್ಪ, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಮೇಲೂರು ಮಂಜುನಾಥ್, ಜಿಲ್ಲಾ ಸಫಾಯಿ ಕರ್ಮಚಾರಿ ಸಮಿತಿ ಸದಸ್ಯ ಲಕ್ಷ್ಮಣರಾಜು, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಜಗದೀಶ್ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-26/11/2025

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 26/11/2025

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 254
Qty: 13138 Kg
Mx : 782
Mn: 520
Avg: 672

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 05
Qty: 182 Kg
Mx : ₹ 877
Mn: ₹ 723
Avg: ₹ 827


For Daily Updates WhatsApp ‘HI’ to 7406303366

ಸಾದಲಿ ಸಹಕಾರಿ ಸಂಘದಲ್ಲಿ ಹೊಸ ಮಂಡಳಿ ಅಧಿಕಾರಕ್ಕೆ

0
Sidlaghatta Sadali Agriculture cooperative society Election

Sadali, Sidlaghatta, Chikkaballapur : ಗ್ರಾಮೀಣ ಭಾಗದಲ್ಲಿ ಕೃಷಿಕರ ಬದುಕು ಮತ್ತು ಕೃಷಿ ಅಭಿವೃದ್ಧಿಯಲ್ಲಿ ಸಹಕಾರಿ ಸೇವಾ ಬ್ಯಾಂಕುಗಳ ಪಾತ್ರ ಅತ್ಯಂತ ಮುಖ್ಯವಾಗಿದ್ದು, ವಾಣಿಜ್ಯ ಮತ್ತು ರಾಷ್ಟ್ರೀಯ ಬ್ಯಾಂಕುಗಳಿಗಿಂತಲೂ ಸಹಕಾರಿ ಬ್ಯಾಂಕುಗಳು ರೈತರಿಗೆ ಹೆಚ್ಚು ಹತ್ತಿರವಾಗಿ ಸೇವೆ ಸಲ್ಲಿಸುತ್ತಿವೆ ಎಂದು ಶಾಸಕ ಬಿ.ಎನ್.ರವಿಕುಮಾರ್ ಹೇಳಿದರು.

ತಾಲ್ಲೂಕಿನ ಸಾದಲಿ ವ್ಯವಸಾಯ ಸೇವಾ ಸಹಕಾರ ಸಂಘದ ಚುನಾವಣೆಯಲ್ಲಿ ಜಯಗಳಿಸಿದ ಜೆಡಿಎಸ್ ಬೆಂಬಲಿತ ನಿರ್ದೇಶಕರಿಗೆ ತಮ್ಮ ಗೃಹ ಕಚೇರಿಯಲ್ಲಿ ಅಭಿನಂದನೆ ಸಲ್ಲಿಸಿ ಅವರು ಮಾತನಾಡಿದರು. ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು ಹಾಗೂ ರೈತರಿಗೆ ಕಡಿಮೆ ಬಡ್ಡಿದರದಲ್ಲಿ ಅಥವಾ ಬಡ್ಡಿರಹಿತವಾಗಿ ಸಕಾಲಕ್ಕೆ ಸಾಲ ನೀಡುವ ಮೂಲಕ ಸಹಕಾರಿ ಬ್ಯಾಂಕುಗಳು ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುತ್ತಿವೆ ಎಂಬುದನ್ನು ಅವರು ಒತ್ತಿ ಹೇಳಿದರು.

ಚುನಾವಣಾ ಸಮಯದಲ್ಲಿ ರಾಜಕೀಯ ಚರ್ಚೆಗಳು ನಡೆಯುವುದು ಸಹಜವಾದರೂ, ಚುನಾವಣೆ ಬಳಿಕ ಸೋಲು–ಗೆಲುವು ಮೀರಿಸಿ ಎಲ್ಲರೂ ಒಂದಾಗಿ ಕೆಲಸ ಮಾಡಬೇಕೆಂದರು. ಸಹಕಾರಿ ಸಂಸ್ಥೆಗಳಲ್ಲಿ ಅನಗತ್ಯ ರಾಜಕೀಯ ನುಸುಳದಂತೆ ನೋಡಿಕೊಳ್ಳುವುದು ಹೊಸದಾಗಿ ಆಯ್ಕೆಯಾದ ನಿರ್ದೇಶಕರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಸಾದಲಿ ಸಹಕಾರಿ ಬ್ಯಾಂಕು ಹಿಂದೆ ಕಾಂಗ್ರೆಸ್ ಅಭ್ಯರ್ಥಿಗಳ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿದ್ದರೂ, ಈ ಬಾರಿ ಮತದಾರರು ಜೆಡಿಎಸ್ ಬೆಂಬಲಿತ ಮಂಡಳಿಗೆ ಅಧಿಕಾರ ನೀಡಿ ಬದಲಾವಣೆಯನ್ನು ತೋರಿಸಿದ್ದಾರೆ. ಮತದಾರರ ವಿಶ್ವಾಸ ಉಳಿಸಿಕೊಳ್ಳುವ ನಿಟ್ಟಿನಲ್ಲಿ ನೀವು ಉತ್ತಮ ಆಡಳಿತ ನೀಡಬೇಕು ಎಂದು ನಿರ್ದೇಶಕರಿಗೆ ಅವರು ಮನವಿ ಮಾಡಿದರು.

ವಿಜಯಶಾಲಿಯಾದ ನಿರ್ದೇಶಕರಾದ ಸಿ.ಅಶ್ವತ್ಥಪ್ಪ, ಕೆ.ಉಮಾಶಂಕರ್, ಆರ್.ತ್ಯಾಗರಾಜ್, ಮಂಜುಳಮ್ಮ, ಸುಬ್ಬರತ್ನಮ್ಮ, ನರಸಿಂಹಮೂರ್ತಿ, ಎಸ್.ಎಲ್.ಅಶ್ವತ್ಥನಾರಾಯಣ್, ವೆಂಕಟೇಶ್, ಎಸ್.ಕೃಷ್ಣಾರೆಡ್ಡಿ, ಕೆ.ವಿ.ನಂಜಪ್ಪ ಸೇರಿದಂತೆ ಹಲವರು ಹಾಗೂ ಸ್ಥಳೀಯ ಜೆಡಿಎಸ್ ಮುಖಂಡರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-25/11/2025

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 25/11/2025

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 326
Qty: 17041 Kg
Mx : 760
Mn: 322
Avg: 668

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 08
Qty: 365 Kg
Mx : ₹ 849
Mn: ₹ 673
Avg: ₹ 733

error: Content is protected !!