Home Blog Page 9

ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(SIR)

0
Sidlaghatta Voters SIR Programme

Sidlaghatta : ಭಾರತ ಚುನಾವಣಾ ಆಯೋಗದ ಸೂಚನೆಯಂತೆ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR)ನ್ನು ನಡೆಸಲಿದ್ದು ಅದಕ್ಕೆ ಅಗತ್ಯವಾದ ಎಲ್ಲ ರೀತಿಯ ತಯಾರಿ ನಡೆದಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಹಾಗೂ ಮತದಾರರ ನೋಂದಣಾಧಿಕಾರಿ ಎಸ್.ಎಸ್.ಅಬೀದ್ ತಿಳಿಸಿದರು.

ನಗರದ ತಹಶೀಲ್ದಾರರ ಕಚೇರಿಯಲ್ಲಿ ತಹಶೀಲ್ದಾರ್ ಹಾಗೂ ಸಹಾಯಕ ನೋಂದಣಾಧಿಕಾರಿ ಎನ್.ಗಗನಸಿಂಧು ಹಾಗೂ ನಗರದ ಸಹಾಯಕ ನೋಂದಣಾಧಿಕಾರಿ ಜಿ.ಅಮೃತ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಎಸ್‌.ಐ.ಆರ್ ಕುರಿತು ವಿವರಿಸಿದರು.

ಜೂನ್ 20ರಿಂದ 29ರವರೆಗೂ 10 ದಿನಗಳ ಕಾಲ ಮತಗಟ್ಟೆವಾರು ನೇಮಿಸಿದ ಮತಗಟ್ಟೆ ಅಧಿಕಾರಿ(BLO) ಹಾಗೂ ಮತಗಟ್ಟೆ ಮೇಲ್ವಿಚಾರಕ ಅಧಿಕಾರಿಗಳು ಸೇರಿದಂತೆ ಎಸ್‌.ಐ.ಆರ್‌ ಗೆ ಕಾರ್ಯದಲ್ಲಿ ನೇಮಕಗೊಂಡ ಅಧಿಕಾರಿ, ಸಿಬ್ಬಂದಿಗೆ ತರಬೇತಿ ನೀಡಲಾಗುವುದು.

ಗಣತಿ ನಮೂನೆಗಳನ್ನು ಬಿ.ಎಲ್‌.ಓ ಗಳಿಗೆ ವಿತರಿಸುವುದು ಮತ್ತು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳಿಂದ ಪ್ರತಿ ಮತಗಟ್ಟೆಗೂ ನೇಮಕಗೊಂಡ ಬಿ.ಎಲ್‌.ಎಗಳಿಗೆ ತರಬೇತಿ ನೀಡುವುದರೊಂದಿಗೆ ಎಸ್‌.ಐ.ಆರ್ ಕಾರ್ಯಕ್ಕೆ ಸಹಕಾರ ನೀಡಲು ರಾಜಕೀಯ ಪಕ್ಷಗಳಿಂದ ನೇಮಕಗೊಂಡ ಬಿ.ಎಲ್‌.ಎ ಮತ್ತು ರಾಜಕೀಯ ಪಕ್ಷಗಳ ಮುಖ್ಯಸ್ಥರಿಗೆ ಮನವಿ ಮಾಡಲಾಗುವುದು ಎಂದರು.

ಜೂನ್ 30ರಿಂದ ಜುಲೈ 29ರವರೆಗೂ ಒಂದು ತಿಂಗಳ ಕಾಲ ಎಲ್ಲ ಬಿ.ಎಲ್‌.ಓ ಗಳು ಮನೆ ಮನೆಗೂ ಭೇಟಿ ನೀಡಿ ಮತದಾರರ ಪರಿಷ್ಕರಣೆಯ ನಮೂನೆಗಳನ್ನು ವಿತರಿಸಿ ಅಗತ್ಯ ಮಾಹಿತಿಯೊಂದಿಗೆ ಅರ್ಜಿ ನಮೂನೆ ಭರ್ತಿ ಮಾಡಿಸಿಕೊಳ್ಳುವುದು.

ಜತೆಗೆ 1200ಕ್ಕೂ ಹೆಚ್ಚು ಮತದಾರರು ಇರುವ ಮತಗಟ್ಟೆಗಳನ್ನು ಗುರ್ತಿಸುವ ಕಾರ್ಯವೂ ಜತೆ ಜತೆಗೆ ನಡೆಯಲಿದೆ ಎಂದು ವಿವರಿಸಿದರು.

ಅಂತಿಮವಾಗಿ ಆಗಷ್ಟ್ 5ರಂದು ಅಂತಿಮ ಕರಡು ಮತದಾರರ ಪಟ್ಟಿಯನ್ನು ಎಲ್ಲ ಮತಗಟ್ಟೆಗಳು ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಸಾರ್ವಜನಿಕವಾಗಿ ಪ್ರಕಟಿಸಲಾಗುತ್ತದೆ.

ಕರಡು ಮತದಾರರ ಪಟ್ಟಿ ಕುರಿತು ಹಕ್ಕು ಮತ್ತು ಆಕ್ಷೇಪಣೆಗಳು ಇದ್ದಲ್ಲಿ ಆಗಸ್ಟ್ 5ರಿಂದ ಸೆಪ್ಟಂಬರ್ 4ರವರೆಗೂ ಒಂದು ತಿಂಗಳು ಕಾಲಾವಕಾಶ ಇರಲಿದೆ. ಸ್ವೀಕೃತವಾದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಂಬಂಧಿಸಿದ ಅಧಿಕಾರಿಗಳು ಅಕ್ಟೋಬರ್ 3 ರೊಳಗೆ ಇತ್ಯರ್ಥಪಡಿಸಬೇಕಾಗುತ್ತದೆ ಎಂದು ತಿಳಿಸಿದರು.

ಅಂತಿಮವಾಗಿ ಅಕ್ಟೋಬರ್ 7ರಂದು ಅಂತಿಮಗೊಂಡ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಯ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ವಿವರಿಸಿದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-17/06/2026

0
Sidlaghatta Silk Cocoon Market-17/06/2026

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 17/06/2026

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 421
Qty: 23625 Kg
Mx : 765
Mn: 508
Avg: 679

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 22
Qty: 1415 Kg
Mx : ₹ 754
Mn: ₹ 323
Avg: ₹ 707


For Daily Updates WhatsApp ‘HI’ to 7406303366

KIADB ಭೂಸ್ವಾಧೀನ ವಿರೋಧಿ ರೈತ ಮುಖಂಡರ ಬಂಧನ: ಪ್ರತಿಭಟನೆ

0
KADB Farmer Leaders Arrest Protest

Sidlaghatta : ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ ಭೂಸ್ವಾಧೀನವನ್ನು ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ ಸೇರಿದಂತೆ ಪ್ರಮುಖ ರೈತ ಮುಖಂಡರನ್ನು ಬೆಂಗಳೂರಿನಲ್ಲಿ ಬಂಧಿಸಿರುವುದನ್ನು ಖಂಡಿಸಿ, ರೈತರು ಬೀದಿಗಿಳಿದು ತೀವ್ರ ಪ್ರತಿಭಟನೆ ನಡೆಸಿದರು.

ಬಂಧನದ ಹಿನ್ನೆಲೆ:

ಕೆಐಎಡಿಬಿ (KIADB) ಕಚೇರಿಯ ಬಳಿ ರೈತ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭೂಸ್ವಾಧೀನ ವಿರೋಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಮುಂದೆ ರೈತರು ಕಳೆದ 95 ದಿನಗಳಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ. ಇತ್ತೀಚೆಗೆ ಹಮ್ಮಿಕೊಂಡಿದ್ದ ‘ಬೆಂಗಳೂರು ಚಲೋ’ ಬೈಕ್ ರ‍್ಯಾಲಿಯನ್ನು ಪೊಲೀಸರು ತಡೆದಿದ್ದರು. ಈ ವೇಳೆ ಸ್ಥಳಕ್ಕೆ ಬಂದಿದ್ದ ಜಿಲ್ಲಾಧಿಕಾರಿ ಜಿ. ಪ್ರಭು ಅವರು, ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆಗೆ ದಿನಾಂಕ ನಿಗದಿಪಡಿಸುವುದಾಗಿ ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಬುಧವಾರ ಮಾತುಕತೆಗಾಗಿ ಕೆಐಎಡಿಬಿ ಕಚೇರಿಗೆ ತೆರಳಿದ್ದ ವೇಳೆ, ರೈತ ಮುಖಂಡರನ್ನು ಪೊಲೀಸರು ಏಕಾಏಕಿ ಬಂಧಿಸಿದ್ದಾರೆ.

ರಸ್ತೆ ತಡೆ ಮತ್ತು ಮಾನವ ಸರಪಳಿ:

ಮುಖಂಡರ ಬಂಧನದ ಸುದ್ದಿ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ರೈತರು, ಶಿಡ್ಲಘಟ್ಟದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಸರ್ಕಾರ ಮತ್ತು ಕೆಐಎಡಿಬಿ ವಿರುದ್ಧ ಘೋಷಣೆಗಳನ್ನು ಕೂಗಿದ ರೈತರು, ಮಾನವ ಸರಪಳಿ ರಚಿಸಿ ರಸ್ತೆ ತಡೆ ನಡೆಸಿದರು. ಪರಿಸ್ಥಿತಿಯನ್ನು ತಿಳಿಗೊಳಿಸಲು ಸ್ಥಳಕ್ಕೆ ಬಂದ ಪೊಲೀಸರು ಪ್ರತಿಭಟನಾಕಾರರನ್ನು ತೆರವುಗೊಳಿಸಿದರು.

ಉದ್ದೇಶಪೂರ್ವಕ ಬಂಧನ – ಬೈರೇಗೌಡ ಆರೋಪ:

ಬಂಧನದ ಕುರಿತು ದೂರವಾಣಿ ಮೂಲಕ ಪ್ರತಿಕ್ರಿಯಿಸಿದ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, “ನಾವು ಈ ಹಿಂದೆಯೂ ಹಲವು ಬಾರಿ ನೂರಾರು ರೈತರೊಂದಿಗೆ ಕೆಐಎಡಿಬಿ ಕಚೇರಿಗೆ ಬಂದಿದ್ದೆವು. ಆದರೆ ಇಂದು ಸಭೆಗೆಂದು ಅಧಿಕೃತವಾಗಿ ಆಹ್ವಾನಿಸಿ, ನಂತರ ನಮ್ಮನ್ನು ಉದ್ದೇಶಪೂರ್ವಕವಾಗಿ ಬಂಧಿಸಲಾಗಿದೆ,” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರವು ಮಾತುಕತೆಯ ನೆಪದಲ್ಲಿ ರೈತರಿಗೆ ದ್ರೋಹ ಬಗೆದಿದೆ ಎಂದು ಆರೋಪಿಸಿರುವ ರೈತ ಸಂಘಟನೆಗಳು, ತಮ್ಮ ಮುಖಂಡರನ್ನು ಕೂಡಲೇ ಬಿಡುಗಡೆ ಮಾಡದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಸಿವೆ.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-16/06/2026

0
Sidlaghatta Silk Cocoon Market-16/06/2026

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 16/06/2026

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 356
Qty: 19692 Kg
Mx : 757
Mn: 355
Avg: 677

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 18
Qty: 1186 Kg
Mx : ₹ 838
Mn: ₹ 480
Avg: ₹ 740


For Daily Updates WhatsApp ‘HI’ to 7406303366

15 ನಿಮಿಷಗಳ ಪ್ರಾಣಾಯಾಮದಿಂದ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ದುಪ್ಪಟ್ಟು

0
Yoga for students workshop

Sidlaghatta (Sugaturu) : ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ವೈಯಕ್ತಿಕ ನೈರ್ಮಲ್ಯವೇ ಮೊದಲ ಮೆಟ್ಟಿಲು. ಯೋಗಾಭ್ಯಾಸವು ದೈಹಿಕ ಕಸರತ್ತು ಆಗಿರದೇ ದೇಹ ಮತ್ತು ಮನಸ್ಸನ್ನು ಶುದ್ಧವಾಗಿಡುವ ಪ್ರಕ್ರಿಯೆಯಾಗಿದೆ. ವಿದ್ಯಾರ್ಥಿಗಳು ದಿನನಿತ್ಯದ ಆಚಾರ-ವಿಚಾರಗಳಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಶುದ್ಧವಾದ ದೇಹ ಮತ್ತು ಪರಿಸರದಲ್ಲಿ ಮಾತ್ರ ಸತ್‌ ಚಿಂತನೆಗಳು ಮೂಡಲು ಸಾಧ್ಯ. ಯೋಗಾಭ್ಯಾಸವು ಮಕ್ಕಳಲ್ಲಿ ಆಂತರಿಕ ಶಿಸ್ತನ್ನು ಮೂಡಿಸುವ ಮೂಲಕ ಸ್ವಚ್ಛ ಹಾಗೂ ಆರೋಗ್ಯಕರ ಜೀವನಶೈಲಿಗೆ ಪ್ರೇರಣೆ ನೀಡುತ್ತದೆ ಎಂದು ಶಿಕ್ಷಕ ಎಚ್‌.ಎಸ್‌.ರುದ್ರೇಶಮೂರ್ತಿ ತಿಳಿಸಿದರು.

ತಾಲ್ಲೂಕಿನ ಸುಗಟೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯನ್ನು ಉತ್ತೇಜಿಸುವ ಸಲುವಾಗಿ ಶಾಲೆಯ ಸುಂದರಲಾಲ್ ಬಹುಗುಣ ಇಕೋಕ್ಲಬ್ ಹಾಗೂ ಬೆಂಗಳೂರಿನ ಎಸ್‌ ವ್ಯಾಸ ಯೋಗ ವಿಶ್ವವಿದ್ಯಾಲಯದ ಜಂಟಿ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ “ಯೋಗಸಪ್ತಾಹ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿದ್ಯಾಭ್ಯಾಸದಲ್ಲಿ ಯೋಗದ ಅವಶ್ಯಕತೆ:

ಇಂದಿನ ತೀವ್ರ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳಿಗೆ ಯೋಗ ಅತ್ಯಂತ ಅವಶ್ಯಕ ಪಠ್ಯೇತರ ಚಟುವಟಿಕೆಯಾಗಿದೆ. ಪರೀಕ್ಷೆಯ ಒತ್ತಡ, ಆತಂಕಗಳನ್ನು ದೂರ ಓಡಿಸಿ, ನೆನಪಿನ ಶಕ್ತಿಯನ್ನು ವೃದ್ಧಿಸುವ ಅದ್ಭುತ ಶಕ್ತಿ ಯೋಗಕ್ಕಿದೆ. ದಿನಕ್ಕೆ ಕೇವಲ ಹದಿನೈದು ನಿಮಿಷಗಳ ಪ್ರಾಣಾಯಾಮ ಮತ್ತು ಧ್ಯಾನವು ವಿದ್ಯಾರ್ಥಿಗಳಲ್ಲಿ ಏಕಾಗ್ರತೆಯನ್ನು ದುಪ್ಪಟ್ಟು ಮಾಡುತ್ತದೆ. ನಿರಂತರ ಯೋಗಾಭ್ಯಾಸದಲ್ಲಿ ತೊಡಗಿಕೊಳ್ಳುವ ವಿದ್ಯಾರ್ಥಿಗಳು ಓದಿನಲ್ಲಿ ಮಾತ್ರವಲ್ಲದೆ, ಕ್ರೀಡೆ ಮತ್ತು ಇತರ ಸೃಜನಶೀಲ ಚಟುವಟಿಕೆಗಳಲ್ಲೂ ಮುಂಚೂಣಿಯಲ್ಲಿ ಇರಬಹುದು ಎಂದು ವಿವರಿಸಿದರು.

ಒಂದು ವಾರ ಕಾಲ ಯೋಗಾಭ್ಯಾಸ:

ಶಾಲೆಯಲ್ಲಿ ಪ್ರತಿ ಶನಿವಾರವೂ ಯೋಗ ತರಗತಿ ನಡೆಯಲಿದ್ದು, ಈ ವಾರಪೂರ್ತಿ ಬೆಳಿಗ್ಗೆ ಒಂದು ಗಂಟೆ ಕಾಲ ಸರಳಯೋಗ, ಮಧ್ಯಾಹ್ನ ಒಂದು ಅವಧಿ ಉಪನ್ಯಾಸ, ಪ್ರಾತ್ಯಕ್ಷಿಕೆ ಪ್ರದರ್ಶನ ನಡೆಯಲಿದೆ. ಇದೇ ತಿಂಗಳ 21 ರಂದು ಸಪ್ತಾಹದ ಸಮಾರೋಪ ನಡೆಯಲಿದೆ ಎಂದು ಅವರು ತಿಳಿಸಿದರು.

ಆರೋಗ್ಯಕರ ಜೀವನಕ್ಕೆ ಯೋಗದ ಆವಶ್ಯಕತೆ:

ವಿಶ್ವವಿದ್ಯಾಲಯದ ಸ್ವಯಂಸೇವಕಿ ಕೃತಿಕಾ ಮಾತನಾಡಿ, ಇಂದಿನ ಆಧುನಿಕ ಹಾಗೂ ಒತ್ತಡದ ಜೀವನಶೈಲಿಯಲ್ಲಿ ಯೋಗವು ಪ್ರತಿಯೊಬ್ಬರಿಗೂ ಅತ್ಯಗತ್ಯವಾಗಿದೆ. ವಿದ್ಯಾರ್ಥಿ ದೆಸೆಯಲ್ಲೇ ಯೋಗಾಭ್ಯಾಸವನ್ನು ರೂಢಿಸಿಕೊಳ್ಳುವುದರಿಂದ ಏಕಾಗ್ರತೆ, ನೆನಪಿನ ಶಕ್ತಿ ಹಾಗೂ ದೈಹಿಕ ಸದೃಢತೆ ಹೆಚ್ಚುತ್ತದೆ. ಪ್ರಕೃತಿಯನ್ನು ಪ್ರೀತಿಸುವ ಇಕೋಕ್ಲಬ್, ಮಾನವನ ಆಂತರಿಕ ಪ್ರಕೃತಿಯನ್ನು ಸಮತೋಲನದಲ್ಲಿಡುವ ಯೋಗವನ್ನು ಪ್ರೋತ್ಸಾಹಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಎಸ್‌-ವ್ಯಾಸ ವಿಶ್ವವಿದ್ಯಾಲಯದ ತರಬೇತಿ:

ಬೆಂಗಳೂರಿನ ಹೆಸರಾಂತ ಎಸ್‌-ವ್ಯಾಸ ಯೋಗ ವಿಶ್ವವಿದ್ಯಾಲಯದ ನುರಿತ ಸ್ವಯಂಸೇವಕರಾದ ಕೃತಿಕಾ, ಹರಿಪ್ರಿಯಾ ಮತ್ತು ಹಿರಣ್ಯ ಅವರು ವಿದ್ಯಾರ್ಥಿಗಳಿಗೆ ಸರಳ ಪ್ರಾಣಾಯಾಮ, ಸೂರ್ಯನಮಸ್ಕಾರ ಮತ್ತು ಆಸನಗಳ ಪ್ರಾತ್ಯಕ್ಷಿಕೆಯನ್ನು ಪ್ರದರ್ಶಿಸಿದರು. ದಿನನಿತ್ಯದ ಅಭ್ಯಾಸದಿಂದ ಆಗುವ ಧನಾತ್ಮಕ ಬದಲಾವಣೆಗಳು, ವೈಯಕ್ತಿಕ ನೈರ್ಮಲ್ಯಗಳ ಕುರಿತು ಉಪನ್ಯಾಸ ನಡೆಯಿತು.

ಮುಖ್ಯ ಶಿಕ್ಷಕಿ ಪದ್ಮಶ್ರೀ, ಶಿಕ್ಷಕ ಎ.ಬಿ.ನಾಗರಾಜ, ಬಿ.ನಾಗರಾಜು, ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ಕೆಂಪೇಗೌಡರ ಜಯಂತಿ ಕಾರ್ಯಕ್ರಮಕ್ಕೆ ಎಲ್ಲಾ ಸಮುದಾಯಗಳ, ಸಂಘಟನೆಗಳ ಮುಖಂಡರಿಗೆ ಅಹ್ವಾನ

0
Sidlaghatta Kemegowda Jayanti Preparation Meeting

Sidlaghatta : ತಾಲ್ಲೂಕು ಪಂಚಾಯಿತಿ ಸಭಾರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಕೆಂಪೇಗೌಡ ಒಕ್ಕಲಿಗರ ಸಂಘದ ವತಿಯಿಂದ ಸೋಮವಾರ ಕೆಂಪೇಗೌಡ ಜಯಂತಿ ಪೂರ್ವಭಾವಿ ಸಭೆ ನಡೆಯಿತು.

ತಹಶೀಲ್ದಾರ್ ಗಗನಸಿಂದು ಮಾತನಾಡಿ, ಜೂನ್ 27ರಂದು ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಪ್ರತಿವರ್ಷದಂತೆ ಅರ್ಥಪೂರ್ಣವಾಗಿ ಆಚರಿಸೋಣ. ಕೆಂಪೇಗೌಡರ ಕೊಡುಗೆಗಳು ಜಗತ್ತಿಗೆ ಮಾದರಿಯಾಗಿವೆ. ಹಾಗಾಗಿ ಅವರ ಜಯಂತಿ ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗದೆ, ತಾಲ್ಲೂಕಿನ ಎಲ್ಲಾ ಸಮುದಾಯಗಳ, ಸಂಘಟನೆಗಳ ಮುಖಂಡರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸೋಣ. ಒಳಂಗಣ ಕಾರ್ಯಕ್ರಮವನ್ನು ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭಕ್ಕೆ ಎಲ್ಲಾ ಸಿದ್ಧತೆಗಳನ್ನು ಮಾಡಲಾಗುವುದು ಎಂದರು.

ಕೆಂಪೇಗೌಡ ಒಕ್ಕಲಿಗ ಸಂಘದ ಅಧ್ಯಕ್ಷ ಬಿ.ನಾರಾಯಣಸ್ವಾಮಿ ಮಾತನಾಡಿ, ನಾಡಪ್ರಭು ಕೆಂಪೇಗೌಡರು ಯಾವುದೇ ಒಂದು ಸಮುದಾಯಕ್ಕೆ ‌ಸೀಮಿತವಾದವರಲ್ಲ. ಎಲ್ಲಾ ಸಮುದಾಯದ ಅಭಿವೃದ್ಧಿಗೆ ಶ್ರಮಿಸಿದ ಮಹಾನಿಯರು. ಅವರ ಜಯಂತಿಯನ್ನು ಪಕ್ಷಾತೀತವಾಗಿ ಎಲ್ಲಾ ಸಮುದಾಯಗಳೊಂದಿಗೆ ಆಚರಿಸೋಣ. ಸಂಘದ ವತಿಯಿಂದ 100 ವಿದ್ಯಾರ್ಥಿಗಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದರು.

ಒಕ್ಕಲಿಗರ ಯುವಕ ಸಂಘದ ಅಧ್ಯಕ್ಷ ಜೆ.ವಿ.ವೆಂಕಟಸ್ವಾಮಿ ಮಾತನಾಡಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಪಕ್ಷಾತೀತವಾಗಿ ವಿಜೃಂಭಣೆಯಿಂದ ಆಚರಿಸಲಾಗುವುದು. ಮೆರವಣಿಗೆಯಲ್ಲಿ ಸಾಂಸ್ಕೃತಿಕ ಕಲಾ ತಂಡಗಳು, ಗ್ರಾಮಗಳಿಂದ ನಾಡಪ್ರಭು ಕೆಂಪೇಗೌಡರ ಸ್ಥಬ್ದ ಚಿತ್ರಗಳ ಅಲಂಕೃತ ಟ್ರಾಕ್ಟರ್ ಗಳು, ಸಾವಿರಾರು ಮಂದಿ ಭಾಗವಹಿಸಿ ಅದ್ದೂರಿ ಮೆರವಣಿಗೆ ನಡೆಯುತ್ತದೆ ಎಂದರು.

ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ ಮಾತನಾಡಿ, ಜೂನ್ 27 ರ ಶನಿವಾರ ಬೆಳಿಗ್ಗೆ 9.30 ಕ್ಕೆ ಚಿಂತಾಮಣಿ ರಸ್ತೆ ಬದಿಯಲ್ಲಿ ಶ್ರೀ ನಾಡಪ್ರಭು ಕೆಂಪೇಗೌಡರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು, ನಂತರ 10ಕ್ಕೆ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ವೇದಿಕೆ ಕಾರ್ಯಕ್ರಮದಲ್ಲಿ ಗಣ್ಯರ ಭಾಷಣ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು. ನಂತರ 11ಕ್ಕೆ ಅದ್ದೂರಿ ಮೆರವಣಿಗೆಗೆ ಗಣ್ಯರು ಚಾಲನೆ ನೀಡಲಿದ್ದಾರೆ. ನಾಡಪ್ರಭು ಕೆಂಪೇಗೌಡರ ಜಯಂತಿಯಲ್ಲಿ ಎಲ್ಲಾ ಸರ್ಕಾರಿ ನೌಕರು ಕಡ್ಡಾಯವಾಗಿ ಭಾಗವಹಿಸುವಂತೆ ಕೋರಿದರು.

ನಗರಸಭೆ ವತಿಯಿಂದ ರಸ್ತೆಯ ಸ್ವಚ್ಛತೆ ಹಾಗು ಮೆರವಣಿಗೆ ಸಾಗುವ ದಾರಿಯಲ್ಲಿ ಯಾವುದೇ ಅಡೆತಡೆ ಇಲ್ಲದಂತೆ ಜಾಗೃತಿ ವಹಿಸಬೇಕು ಎಂದರು. ಪೋಲೀಸ್ ಅಧಿಕಾರಿಗಳು ಮೆರವಣಿಗೆಗೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುವುದೆಂದರು.

ಸಭೆಯಲ್ಲಿ ತಾಲ್ಲೂಕು ಒಕ್ಕಲಿಗರ ಯುವಸೇನೆ ಸಂಘದ ಅಧ್ಯಕ್ಷ ಜೆ.ಎಸ್.ವೆಂಕಟಸ್ವಾಮಿ, ತಾಲ್ಲೂಕು ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ, ಪಿ.ಎಸ್.ಐ ವೇಣುಗೋಪಾಲ, ಹಾಗು ಸಮುದಾಯದ ಮುಖಂಡರು ಭಾಗವಹಿಸಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-15/06/2026

0
Sidlaghatta Silk Cocoon Market-15/06/2026

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 15/06/2026

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 393
Qty: 21874 Kg
Mx : 761
Mn: 440
Avg: 675

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 27
Qty: 1367 Kg
Mx : ₹ 827
Mn: ₹ 522
Avg: ₹ 700


For Daily Updates WhatsApp ‘HI’ to 7406303366

KIADB : ಪ್ರತಿ ಎಕರೆಗೆ ಕನಿಷ್ಠ 3 ಕೋಟಿ ರೂ ಭೂಪರಿಹಾರ ಕೊಡಿ

0
Sidlaghatta Jangamakote KIADB Farmers Land 3 Crore

Sidlaghatta : ತಾಲ್ಲೂಕಿನ ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ ಕೈಗಾರಿಕಾ ಪ್ರದೇಶದ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ನಿಗದಿ ಪಡಿಸಿರುವ ಭೂಪರಿಹಾರ ದರ ತೀರಾ ಕಡಿಮೆ ಇದ್ದು, ಪ್ರತಿ ಎಕರೆಗೆ ಕನಿಷ್ಠ 3 ಕೋಟಿ ರೂ ಭೂಪರಿಹಾರ ಕೊಡಿಸಬೇಕೆಂದು ಶಾಸಕ ಬಿ.ಎನ್.ರವಿಕುಮಾರ್ ಅವರಿಗೆ ಜಂಗಮಕೋಟೆ ಹೋಬಳಿ KIADB ಜಮೀನುಗಳ ರೈತರ ಪರ ಹೋರಾಟ ಸಮಿತಿ ಸದಸ್ಯರು ಮನವಿ ಸಲ್ಲಿಸಿದರು.

ಜಂಗಮಕೋಟೆ ಹೋಬಳಿ ಕೈಗಾರಿಕಾ ಪ್ರದೇಶದ ಭೂ ಸ್ವಾಧೀನಕ್ಕೆ ಒಳಪಟ್ಟಿರುವ ಕೊಲಿಮಿಹೊಸೂರು, ಅರಿಕೆರೆ, ಸಂಜೀವಪಟ್ಟಣ, ಬಸವಾಪಟ್ಟಣ, ತಾದೂರು, ತೊಟ್ಲಗಾನಹಳ್ಳಿ, ನಡಿಪಿನಾಯಕನಹಳ್ಳಿ, ಯಣ್ಣಂಗೂರು, ಹೊಸಪೇಟೆ, ಚೊಕ್ಕಂಡಹಳ್ಳಿ, ದೇವಗಾನಹಳ್ಳಿ, ಗೊಲ್ಲಹಳ್ಳಿ, ಎದ್ದಲತಿಪ್ಪೇನಹಳ್ಳಿ ಗ್ರಾಮಗಳ 2271 ಎಕರೆ ಜಮೀನುಗಳ ಭೂಸ್ವಾಧೀನ ಅಂತಿಮ ಅಧಿಸೂಚನೆ ಆಗಿ ಸಲಹಾ ಸಮಿತಿ ಸಭೆಯಲ್ಲಿ ದರ ನಿಗದಿ ಮಾಡಿ ನಂತರ ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿಯಲ್ಲಿ ನಿಗದಿಯಾದ ಭೂದರ ತೀರಾ ಕಡಿಮೆಯಿದೆ. ಈ ಪ್ರದೇಶಕೆ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕೇವಲ 16 ಕಿ.ಮೀ.ದೂರವಿದೆ.

ಅಂತರ್ಜಲ ಕುಸಿತ, ರೈತರು ಬೆಳೆದ ಬೆಳೆಗೆ ಬೆಲೆ ಸಿಗದೆ, ಮಹಿಳೆಯರು ಮತ್ತು ಪುರುಷರು ಸಾವಿರಾರು ಸಂಖ್ಯೆಯಲ್ಲಿ ಉದ್ಯೋಗಕ್ಕೆ ವಲಸೆ ಹೋಗಬೇಕಾದ ಪರಿಸ್ಥಿತಿ ಇದೆ. ಈ ಸಮಸ್ಯೆಗಳಿಂದ ರೈತರು ಭೂಮಿ ಕೊಡಲು ಮುಂದಾಗಿದ್ದಾರೆ. ನಮ್ಮ ತಾಲ್ಲೂಕಿಗೆ ಕೈಗಾರಿಕೆಯ ಅವಶ್ಯಕತೆ ಇದೆ. ಶಾಶ್ವತವಾಗಿ ಭೂಮಿ ಕಳೆದುಕೊಳ್ಳುವ ರೈತರು, ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಕೊಡುವ ಪರಿಹಾರದ ಹಣದಿಂದ ತಾಲ್ಲೂಕಿನ ಯಾವುದೇ ಭಾಗದಲ್ಲಿ ಕೃಷಿ ಭೂಮಿ ಕೊಳ್ಳಲು ಆಗುವುದಿಲ್ಲ. ಹಾಗಾಗಿ ಪ್ರತಿ ಎಕರೆಗೆ ಕನಿಷ್ಠ 3 ಕೋಟಿ ರೂ ಭೂಪರಿಹಾರ ಕೊಡಿಸಬೇಕೆಂದು ಮನವಿ ಮಾಡಿದರು.

ಭೂಮಿ ಕೊಟ್ಟ ರೈತನ ಕುಟುಂಬಕ್ಕೆ ಒಂದು ಖಾಯಂ ಉದ್ಯೋಗ ನೀಡಬೇಕು. ಭೂ ಪರಿಹಾರ ಪಡೆಯಲು ಒಪ್ಪದೇ ಇರುವ ರೈತರಿಗೆ ಪ್ರತಿ ಎಕರೆಗೆ 16 ಗುಂಟೆ ಪರ್ಯಾಯ ಜಮೀನನ್ನು ಬದಲಿಯಾಗಿ ನೀಡಲು ಕ್ರಮ ವಹಿಸಬೇಕೆಂದು ಮನವಿ ಸಲ್ಲಿಸಿದರು.

ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಪ್ರತೀಶ್, ಜಿಲ್ಲಾ ಯುವ ಘಟಕದ ಅಧ್ಯಕ್ಷ ನಲ್ಲೇನಹಳ್ಳಿ ಸುಭ್ರಮಣಿ, ಬಸವಪಟ್ಟಣ ಗ್ರಾಮದ ಪ್ರಭುಗೌಡ, ಮಧುಗೌಡ, ರಾಮದಾಸ್, ಗಜೇಂದ್ರ,ಚೇತನ್, ಕನಕಪ್ಪ, ನಾರಾಯಣಪ್ಪ, ತಿಪ್ಪೇಗೌಡ, ಯಣ್ಣಂಗೂರು ಗ್ರಾಮದ ಮಧು, ಗಂಗಾಧರ್, ಈರಪ್ಪ, ಚೊಕ್ಕಂಡಹಳ್ಳಿ ದೇವರಾಜ್, ಅಮರನಾಥ್, ಜಂಗಮಕೋಟೆ ಜೆ.ಸಿ.ಮಂಜಣ್ಣ, ನಾರಾಯಣಸ್ವಾಮಿ ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ಶಿಡ್ಲಘಟ್ಟದಲ್ಲಿ ಮಧ್ಯಂತರವಾಗಿ ಅಪರ ಜಿಲ್ಲಾ ನ್ಯಾಯಾಲಯದ ನ್ಯಾಯಪೀಠಾಸನ ಸ್ಥಾಪನೆ

0
Sidlaghatta Interim Additional District Court Bench

Sidlaghatta : ಶಿಡ್ಲಘಟ್ಟದ ನ್ಯಾಯಾಲಯದಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಿರುವುದರಿಂದ ವಾರದಲ್ಲಿ ಮೂರು ದಿನಗಳ ಕಾಲ ಅಪರ ಜಿಲ್ಲಾ ನ್ಯಾಯಾಲಯವನ್ನು ಶಿಡ್ಲಘಟ್ಟದಲ್ಲಿ ಮಧ್ಯಂತರವಾಗಿ ನ್ಯಾಯಪೀಠಾಸನ ಕಾರ್ಯನಿರ್ವಹಿಸುವಂತೆ ಮಾಡಿಕೊಡುವುದಾಗಿ ಉಚ್ಚನ್ಯಾಯಾಲಯ ಹಾಗೂ ಚಿಕ್ಕಬಳ್ಳಾಪುರ ಆಡಳಿತಾತ್ಮಕ ನ್ಯಾಯಾಧೀಶ ಹಂಚಾಟೆ ಸಂಜೀವಕುಮಾರ್ ತಿಳಿಸಿದರು.

ನಗರದ ನ್ಯಾಯಾಲಯದ ಆವರಣದಲ್ಲಿ ಭಾನುವಾರ ಗಿಡಗಳನ್ನು ನೆಟ್ಟು, ಇ – ಸೇವಾ ಕೇಂದ್ರ ಮತ್ತು ಅಂಚೆ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಕರಣಗಳ ಸಂಖ್ಯೆ ಹೆಚ್ಚಾದಾಗ ವಕೀಲರು ಚಿಂತಾಮಣಿಗೆ ಹೋಗಿ ಬರಲು ತೊಂದರೆಯಾಗುವುದರಿಂದ ಇಲ್ಲಿಯೇ ನ್ಯಾಯಪೀಠಾಸನ ಬಂದಾಗ ಅನುಕೂಲವಾಗುತ್ತದೆ. ನ್ಯಾಯಾಲಯದ ಆವರಣದಲ್ಲಿ ಇ-ಸೇವಾ ಕೇಂದ್ರಗಳನ್ನು ಸ್ಥಾಪಿಸುವ ಮುಖ್ಯ ಉದ್ದೇಶವೆಂದರೆ ವಕೀಲರಿಗೆ ಮತ್ತು ದಾವೆದಾರರಿಗೆ (ಕಕ್ಷಿದಾರರಿಗೆ) ಡಿಜಿಟಲ್ ತಂತ್ರಜ್ಞಾನದ ಮೂಲಕ ನ್ಯಾಯಾಲಯದ ಸೇವೆಗಳನ್ನು ಸುಲಭವಾಗಿ, ಪಾರದರ್ಶಕವಾಗಿ ಮತ್ತು ವೇಗವಾಗಿ ಒದಗಿಸುವುದಾಗಿದೆ. ಇದು ಎಲ್ಲರಿಗೂ ನ್ಯಾಯ ಲಭ್ಯವಾಗುವಂತೆ ಮಾಡುವ ಇ-ಕೋರ್ಟ್ಸ್ ಯೋಜನೆಯ ಒಂದು ಪ್ರಮುಖ ಭಾಗವಾಗಿದೆ. ಇದನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಹೇಳಿದರು.

ಗಿಡಗಳು ನಮ್ಮ ಜೀವನದ ಆಧಾರವಾಗಿವೆ. ಗಿಡ ನೆಡುವುದರಿಂದ ಪರಿಸರ ಸಂರಕ್ಷಣೆ, ಶುದ್ಧ ಗಾಳಿ, ಮಳೆ ಹೆಚ್ಚಳ ಹಾಗೂ ಭೂಮಿಯ ಸಮತೋಲನ ಕಾಪಾಡಲು ಸಾಧ್ಯವಾಗುತ್ತದೆ. ಇಂದು ನಾವು ನೆಡುವ ಒಂದು ಗಿಡ ಭವಿಷ್ಯದ ಪೀಳಿಗೆಗೆ ಅಮೂಲ್ಯವಾದ ಕೊಡುಗೆಯಾಗುತ್ತದೆ. ಪ್ರತಿಯೊಬ್ಬರೂ ಗಿಡಗಳನ್ನು ನೆಡುವುದರ ಜೊತೆಗೆ ಅವುಗಳನ್ನು ಸಂರಕ್ಷಿಸುವ ಜವಾಬ್ದಾರಿಯನ್ನು ಸಹ ವಹಿಸಬೇಕು. ಹಸಿರು ಪರಿಸರ ನಿರ್ಮಾಣವು ನಮ್ಮೆಲ್ಲರ ಕರ್ತವ್ಯವಾಗಿದೆ. ಮಿಯಾವಾಕಿ ಪದ್ಧತಿಯ ಮೂಲಕ ಗಿಡಗಳನ್ನು ನೆಡುವುದರಿಂದ ಕಡಿಮೆ ಜಾಗದಲ್ಲೇ ದಟ್ಟವಾದ ಅರಣ್ಯವನ್ನು ನಿರ್ಮಿಸಬಹುದು. ಇದು ಪರಿಸರ ಸಂರಕ್ಷಣೆ, ವಾಯು ಮಾಲಿನ್ಯ ನಿಯಂತ್ರಣ, ಭೂಗರ್ಭ ಜಲಮಟ್ಟದ ವೃದ್ಧಿ ಹಾಗೂ ಜೈವ ವೈವಿಧ್ಯತೆಯ ರಕ್ಷಣೆಗೆ ಸಹಕಾರಿಯಾಗಿದೆ ಎಂದರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಮಲಿಂಗೇಗೌಡ, ಅಪರ ಜಿಲ್ಲಾ ನ್ಯಾಯಾಧೀಶರಾದ ಕಾಂತರಾಜು ಮತ್ತು ಸಿದ್ಧಣ್ಣ, ಹಿರಿಯ ಸಿವಿಲ್ ನ್ಯಾಯಾಧೀಶ ಉಮೇಶ್, ಶಿಡ್ಲಘಟ್ಟ ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ, ಪ್ರಧಾನ ಸಿವಿಲ್ ನ್ಯಾಯಾಧೀಶೆ ಸಿ.ಎಸ್.ಸುಕನ್ಯಾ, ಅಪರ ಸಿವಿಲ್ ನ್ಯಾಯಾಧೀಶರಾದ ರಂಜಿತಾ ಮತ್ತು ಭಾವನಾ, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಕಾರ್ಯದರ್ಶಿ ಸಿ.ಗಿ ಭಾಸ್ಕರ್, ವಕೀಲರಾದ ಎಂ.ಪಾಪಿರೆಡ್ಡಿ, ಶಾಬುದ್ದೀನ್, ಶಿವಕುಮಾರ್, ಕೃಷ್ಣಮೂರ್ತಿ, ಅಶೋಕ್, ಮೋಹನ್, ಶಾರತ್, ಚಿಕ್ಕಬಳ್ಳಾಪುರ ಉಪವಿಭಾಗದ ಅಂಚೆ ನಿರೀಕ್ಷಕ ಕುಮಾರ್ ಅಭಿನೀತ್, ರಾಬರ್ಟ್ ಸನ್ ಪೇಟೆಯ ಅಂಚೆ ನಿರೀಕ್ಷಕ ಶಶಿಕಿರಣ್, ಶಿಡ್ಲಘಟ್ಟ ಅಂಚೆಕಚೇರಿಯ ಪೋಸ್ಟ್ ಮಾಸ್ಟರ್ ವೈ.ಎನ್.ಚಾಮರಾಜ್, ಕೋರ್ಟ್ ಆವರಣದ ಅಂಚೆಕಚೇರಿಯ ಸಬ್ ಪೋಸ್ಟ್ ಮಾಸ್ಟರ್ ನಂದೀಶ, ಕೋಲಾರ ವಿಭಾಗದ ಮುರಳೀಧರ್, ಶಶಿಕುಮಾರ್, ರವಿಚಂದ್ರ, ಚಿಕ್ಕಬಳ್ಳಾಪುರ ವಿಭಾಗದ ಸಿ.ಎಂ.ಶ್ರೀಧರ್, ಎಚ್.ಪಿ.ಸುರೇಶ್, ಶಿಡ್ಲಘಟ್ಟ ಅಂಚೆ ವಿಭಾಗದ ಎನ್.ಆಶಾ, ಎಸ್.ಯಮುನಾ, ತಥಾಗತ ಘೋಷ್, ನಾಗಮಣಿ ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-14/06/2026

0
Sidlaghatta Silk Cocoon Market-14/06/2026

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 14/06/2026

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 325
Qty: 17589 Kg
Mx : 742
Mn: 455
Avg: 664

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 18
Qty: 1244 Kg
Mx : ₹ 826
Mn: ₹ 695
Avg: ₹ 757


For Daily Updates WhatsApp ‘HI’ to 7406303366

ಕೆಂಪೇಗೌಡ ಜಯಂತಿ ಪೂರ್ವಭಾವಿ ಸಭೆ

0
Kempegowda Jayanti Preparatory Meeting

Sidlaghatta : ತಾಲ್ಲೂಕಿನಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆಯನ್ನು ಜೂನ್ 27 ರ ಶನಿವಾರ ಅದ್ದೂರಿಯಾಗಿ ಅರ್ಥಪೂರ್ಣವಾಗಿ ಆಚರಿಸಬೇಕೆಂದು ಒಕ್ಕಲಿಗ ಸಮುದಾಯದ ಮುಖಂಡರು ಒಕ್ಕೊರಲಿನ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ತಾಲ್ಲೂಕಿನ ಹಂಡಿಗನಾಳ ಶ್ರೀ ಕೆಂಪಣ್ಣ ಶ್ರೀ ವೀರಣ್ಣ ಕಲ್ಯಾಣಮಂಟಪದಲ್ಲಿ ಕೆಂಪೇಗೌಡ ಆಚರಣಾ ಸಮಿತಿಯಿ೦ದ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಪಕ್ಷಾತೀತವಾಗಿ ಒಕ್ಕಲಿಗ ಜನಾಂಗದ ಮುಖಂಡರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಮುದಾಯದ ಮುಖಂಡರು ತಮ್ಮ ತಮ್ಮ ಅಮೂಲ್ಯವಾದ ಅಭಿಪ್ರಾಯ ಅನಿಸಿಕೆಗಳನ್ನು ವ್ಯಕ್ತಪಡಿಸಿ, ಕಾರ್ಯಕ್ರಮವನ್ನು ಶಿಸ್ತುಬದ್ಧವಾಗಿ, ಆರ್ಥಪೂರ್ಣವಾಗಿ ಅದ್ದೂರಿಯಾಗಿ ಆಚರಿಸಲು ತಾವು ಸಂಪೂರ್ಣ ಬೆ೦ಬಲ ನೀಡುವುದಾಗಿ ತಿಳಿಸಿದರು.

ಸಮುದಾಯದ ಬಡ ಮಕ್ಕಳನ್ನು ಗುರ್ತಿಸಿ ಶಿಕ್ಷಣಕ್ಕೆ ಸಂಘದಿಂದ ಸಹಾಯಧನ ನೀಡಿ ಶೈಕ್ಷಣಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ ಮಾಡಬೇಕು ಎಂದು ಕೆಲವರು ಸಲಹೆ ನೀಡಿದರು.

ಕಾರ್ಯಕ್ರಮಗಳಲ್ಲಿ DJ ಗಳನ್ನು ಬಳಸಬಾರದು ಎಂದು ಕೋರ್ಟ್ ಆದೇಶ ಹೊರಡಿಸಿರುವುದರಿಂದ ಯಾರೂ ಸಹ ಡಿಜೆಗಳನ್ನು ಆಳವಡಿಸಬಾರದು ಎಂದು ತೀರ್ಮಾನಿಸಿದೆ ಒಂದು ವೇಳೆ ಅಳವಡಿಸಿಕೊಂಡು ಬಂದಿದ್ದೆ ಅದರೆ ಅದಕ್ಕೆ ಅವರೆ ಹೊಣೆ ಯಾವುದೇ ಕಾರಣಕ್ಕೂ ಆಚರಣಾ ಸಮಿತಿ ಜವಾಬ್ದಾರಿ ಅಲ್ಲ. ಕಾರ್ಯಕ್ರಮದ ರೂಪರೇಷಗಳನ್ನು ತಯಾರಿಸುವ ಜವಬ್ದಾರಿಯನ್ನು ಆಚರಣಾ ಸಮಿತಿಗೆ ವಹಿಸಲು ತೀರ್ಮಾನಿಸಲಾಯಿತು.

ನಾಡಪ್ರಭು ಕೆಂಪೇಗೌಡರ ಪಲ್ಲಕ್ಕಿ ಉತ್ಸವದಲ್ಲಿ ನೂರಾರು ಪಲ್ಲಕ್ಕಿಗಳು ಭಾಗವಹಿಸಿ ಮೆರವಣಿಗೆಯನ್ನು ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಲಾಯಿತು.

ಜಯಂತೋತ್ಸವದ ಎಲ್ಲಾ ಕಾರ್ಯಕ್ರಮಗಳಿಗೂ, ಆರ್ಥಿಕ ಕ್ರೂಡಿಕರಣ ಹಾಗೂ ಕಾರ್ಯಕ್ರಮಗಳ ಆಯೋಜನೆ ಬಗ್ಗೆ ಹಾಗೂ ಭಾಗವಹಿಸುವರಿಗೆ ಊಟದ ವ್ಯವಸ್ಥೆಯನ್ನು ಏರ್ಪಡಿಸುವ ಬಗ್ಗೆ ಅನಿಸಿಕೆಗಳನ್ನು ತಿಳಿಸಿದರು.

ತಾಲ್ಲೂಕಿನ ಒಕ್ಕಲಿಗರ ಕ್ಷೇಮಾಭಿವೃದ್ದಿಗಾಗಿ ಹಾಗೂ ಒಕ್ಕಲಿಗರ ಮೇಲೆ ನಡೆಯುವ ದೌರ್ಜನ್ಯಗಳನ್ನು ಮೆಟ್ಟಿ ನಿಲ್ಲಲು ಒಕ್ಕಲಿಗರ ಸಮುದಾಯ ಪ್ರತಿ ಮೂರು ತಿಂಗಳಿಗೆ ಸಭೆ ಸೇರಿ ಸಾಧಕ ಭಾಧಕಗಳನ್ನು ಚರ್ಚೆ ಮಾಡಬೇಕು ಎಂದು ಸಲಹೆ ನೀಡಿದರು. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ಮಾಡಿಕೊಡದೆ ಒಗ್ಗಟ್ಟಿನಿಂದ ಶಾಂತಿಯಿಂದ ಸಹೋದರತೆಯಿಂದ ಪಕ್ಷಾತೀತವಾಗಿ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಯಿತು.

ಕೆ.ಎಸ್.ಆರ್.ಟಿ.ಸಿ ಬಸ್ ಸ್ಟ್ಯಾಂಡ್ ಸಲ್ಲಾಪುರಮ್ಮ ದೇವಾಲಯದಿಂದ ಬೆಳಿಗ್ಗೆ 11ಗಂಟೆಗೆ ಸರಿಯಾಗಿ ಕೆಂಪೇಗೌಡ ಪಲ್ಲಕ್ಕಿ ಮೆರವಣಿಗೆ ಮುಖಾಂತರ ಗ್ರಾಮಗಳಿಂದ ಆಗಮಿಸಿರುವ ಪಲ್ಲಕ್ಕಿಗಳ ಹಾಗೂ ಕಲಾತಂಡಗಳೊಂದಿಗೆರ ಮೆರವಣಿಗೆಗೆ ಕ್ಷೇತ್ರದ ಶಾಸಕರು ಮತ್ತು ಸಮುದಾಯದ ಮುಖಂಡರು ಚಾಲನೆ ನೀಡುವ ಮೂಲಕ ಮೆರವಣಿಗೆ ಪ್ರಾರಂಭವಾಗುತ್ತದೆ. ಟಿಬಿ ರಸ್ತೆ, ಕೋಟೆ ವೃತ್ತ , ರೈಲ್ವೆ ನಿಲ್ದಾಣ, ಉಲ್ಲೂರುಪೇಟೆ ಅಶ್ವಥ ಕಟ್ಟೆ, ತಾಲ್ಲೂಕು ಒಕ್ಕಲಿಗರ ಯುವ ಸೇನೆ ಸಂಘ ಕಚೇರಿ ಬಳಿ ಪಲ್ಲಕ್ಕಿ ಗಳಿಗೆ ನೆನಪಿನಕಾಣಿಕೆ ವಿತರಣೆ, ಮಯೂರ ವೃತ್ತದ ಬಳಿ ಒಕ್ಕಲಿಗ ಭವನದ ಬಳಿ ಊಟದ ವ್ಯವಸ್ಥೆಯನ್ನು ಏರ್ಪಡಿಸಲಾಗಿದ್ದು ತದನಂತರ ತಮ್ಮ ಗ್ರಾಮಗಳಿಗೆ ಹಿಂದಿರುಗಲಾಗುವುದು ಎಂದು ವಿವರ ನೀಡಿದರು.

ಶಿಡ್ಲಘಟ್ಟ ತಾಲ್ಲೂಕಿನ ಶಾಲೆಗಳಲ್ಲಿ ವ್ಯಾಸಂಗ ಮಾಡಿರುವ ಸ್ಥಳೀಯ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದಿರುವ 100 ವಿದ್ಯಾರ್ಥಿಗಳನ್ನು ಗುರುತಿಸಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಡೆಯುವ ಕೆಂಪೇಗೌಡ ಜಯಂತಿ ಸರ್ಕಾರದ ಕಾರ್ಯಕ್ರಮದಲ್ಲಿ ಕೆಂಪೇಗೌಡ ಜಯಂತಿ ಆಚರಣಾ ಸಮಿತಿ ವತಿಯಿಂದ ಪುರಸ್ಕರಿಸಲಾಗುವುದು ಎಂದು ಕೆಂಪೇಗೌಡ ಜಯಂತಿ ಆಚರಣಾ ಸಮಿತಿ ಸದಸ್ಯರು ತಿಳಿಸಿದರು.

ಶಿಡ್ಲಘಟ್ಟ ಟೌನ್ ಒಕ್ಕಲಿಗರ ಸಂಘದ ಅಧ್ಯಕ್ಷ ಬಿ.ನಾರಾಯಣಸ್ವಾಮಿ, ತಾಲ್ಲೂಕು ಒಕ್ಕಲಿಗರ ಯುವಸೇನೆ ಸಂಘದ ಅಧ್ಯಕ್ಷ ಜೆ.ಎಸ್.ವೆಂಕಟಸ್ವಾಮಿ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ, ಪುರುಷೋತ್ತಮ್, ದೇವರಾಜ್, ಬಿಜೆಪಿ ತಾಲ್ಲೂಕು ಅಧ್ಯಕ್ಷ ಸೀಕಲ್ ಆನಂದಗೌಡ, ಪೂಲಕುಂಟ್ಲಹಳ್ಳಿ ಪಿ.ಎನ್.ರಘುನಾಥರೆಡ್ಡಿ, ಹಿರೆಬಲ್ಲ ಕೃಷ್ಣಪ್ಪ, ದಿಬ್ಬೂರಹಳ್ಳಿ ಪ್ರಸನ್ನ, ರಾಯಪನಹಳ್ಳಿ ಅಶ್ವಥನಾರಾಯಣರೆಡ್ಡಿ, ದಿಬ್ಬೂರಹಳ್ಳಿ ರಾಮಚಂದ್ರ ಎನ್.ಪಿ.ಎಸ್.ಅಧ್ಯಕ್ಷ ಗಜೇಂದ್ರ, ರೈತ ಸಂಘದ ತಾಲ್ಲೂಕು ಅಧ್ಯಕ್ಷ ತಾದೂರು ಮಂಜುನಾಥ್, ಸಿ.ಎಂ.ಮುನಿರಾಜು, ಗೊರಮೊಡಗು ರಾಜಣ್ಣ. ಎಚ್.ಕೆ.ಸುರೇಶ್, ಅನೂರು ವಿಜಯೇಂದ್ರ, ಎಂ.ಎಸ್.ಸೊಣ್ಣಪ್ಪರೆಡ್ಡಿ, ಲಕ್ಷಿನಾರಾಯಣ ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-13/06/2026

0
Sidlaghatta Silk Cocoon Market-13/06/2026

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 13/06/2026

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 354
Qty: 19063 Kg
Mx : 749
Mn: 500
Avg: 673

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 27
Qty: 1583 Kg
Mx : ₹ 803
Mn: ₹ 609
Avg: ₹ 736


For Daily Updates WhatsApp ‘HI’ to 7406303366

ಆಸ್ಪತ್ರೆಯ ರೋಗಿಗಳಿಗೆ ಮಾವಿನ ಹಣ್ಣು ವಿತರಣೆ

0
Sidlaghatta Government Hospital Patients Fruits Distribution

Sidlaghatta : ವರ್ಷದ ಆಯಾ ಋತುಮಾನಗಳಲ್ಲಿ ಸಿಗುವ ಸ್ಥಳೀಯ ಹಣ್ಣು ಹಂಪಲುಗಳನ್ನು ಸೇವಿಸುವುದರಿಂದ ಉತ್ತಮ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬಹುದಾಗಿದೆ ಎಂದು ಪ್ರಗತಿಪರ ರೈತ, ರಾಜ್ಯ ಒಕ್ಕಲಿಗರ ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಪೂಲಕುಂಟಹಳ್ಳಿ ರಘುನಾಥರೆಡ್ಡಿ ತಿಳಿಸಿದರು.

ತಮ್ಮ ಮಾವಿನ ತೋಟದಲ್ಲಿ ಸಾವಯವ ಪದ್ದತಿಯಲ್ಲಿ ಮೊದಲ ಫಸಲು ಬಂದಿದ್ದು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳ ರೋಗಿಗಳಿಗೆ ಮಾವಿನ ಹಣ್ಣು ಹಾಗೂ ನಂದಿನಿ ಹಾಲು ಬ್ರೆಡ್ ವಿತರಿಸಿ ಅವರು ಮಾತನಾಡಿದರು.

ಸಾವಯವ ಪದ್ದತಿಯಲ್ಲಿ ಮಾವಿನ ಫಸಲು ತೆಗೆದಿದ್ದು ಮೊದಲ ಫಸಲಿನ ಎಲ್ಲ ಮಾವಿನ ಹಣ್ಣನ್ನು ಸಾರ್ವಜನಿಕ ಆಸ್ಪತ್ರೆಯ ಒಳ ರೋಗಿಗಳು ಸೇರಿದಂತೆ ನನ್ನೂರಿನ ಸುತ್ತ ಮುತ್ತಲ ಗ್ರಾಮಗಳ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತವಾಗಿ ವಿತರಿಸಲಿದ್ದೇನೆ ಎಂದರು.

ನಾವು ಇಲ್ಲಿನ ವಾತಾವರಣ ಹವಾಗುಣಕ್ಕೆ ಹೊಂದಿಕೊಂಡಿರುತ್ತೇವೆ. ಹಾಗಾಗಿ ಎಲ್ಲೆಲ್ಲೋ ಬೆಳೆದ ಹಣ್ಣುಗಳನ್ನು ಹೆಚ್ಚಿನ ಬೆಲೆ ಕೊಟ್ಟು ಖರೀದಿಸಿ ಸೇವಿಸುವುದಕ್ಕಿಂತಲೂ ಎಲ್ಲ ಹವಾಮಾನದಲ್ಲೂ ಸ್ಥಳೀಯವಾಗಿ ಸಿಗುವ ಎಲ್ಲ ರೀತಿಯ ಹಣ್ಣುಗಳನ್ನು ಸೇವಿಸಿ ನಮ್ಮ ದೇಹಕ್ಕೆ ಬೇಕಾಗುವ ಎಲ್ಲ ಅಂಶಗಳು ಸಿಗಲಿವೆ ಎಂದು ಹೇಳಿದರು.

ಭೂಮಿ ತಾಯಿಯ ಮೇಲೆ ನಂಬಿಕೆ ಇಟ್ಟುಕೊಂಡು ಕೃಷಿ ಮಾಡಿದ ಜಗತ್ತಿಗೆ ಅನ್ನ ಕೊಟ್ಟ ರೈತ ಎಂದಿಗೂ ನಷ್ಟಕ್ಕೆ ಕಷ್ಟಕ್ಕೆ ಸಿಲುಕಿಲ್ಲ. ನಾನು ಬೇರೆ ಬೇರೆ ಉದ್ದಿಮೆಯಲ್ಲಿ ಹಣ ಮಾಡುತ್ತಿದ್ದರೂ ಕೃಷಿಯಲ್ಲಿ ಆತ್ಮ ತೃಪ್ತಿ ಕಂಡುಕೊಂಡಿದ್ದೇನೆ ಎಂದರು.

ಹಾಗಾಗಿ ನಾನು ಸಾವಯವ ಕೃಷಿ ಪದ್ದತಿಯಲ್ಲಿ ಬೆಳೆದ ಮಾವಿನ ಮೊದಲ ಫಸಲಿನ ಅಷ್ಟೂ ಮಾವಿನ ಹಣ್ಣನ್ನು ಮಾರಾಟ ಮಾಡದೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳ ರೋಗಿಗಳು, ನಮ್ಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸುತ್ತಿದ್ದೇನೆ ಎಂದರು.

ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಮನೋಹರ್, ನಾಗನರಸಿಂಹ, ಕೆ.ನಾರಾಯಣಸ್ವಾಮಿ, ದ್ಯಾವಪ್ಪ, ಪತ್ರಕರ್ತರ ಸಂಘದ ಅಧ್ಯಕ್ಷ ಎ.ಶಶಿಕುಮಾರ್, ಆಸ್ಪತ್ರೆ ಸಿಬ್ಬಂದಿ ಹಾಜರಿದ್ದರು

Sidlaghatta WhatsApp Channel Group

For Daily Updates WhatsApp ‘HI’ to 7406303366

ಹಾಳು ಬಾವಿಗೆ ಬಿದ್ದ ಕೃಷ್ಣಮೃಗ ಮರಿ ರಕ್ಷಣೆ

0
Sidlaghatta Tummanahalli Blackbuck Rescue

Sidlaghatta : ತಾಲ್ಲೂಕಿನ ತುಮ್ಮನಹಳ್ಳಿಯ ಹಾಳು ಬಾವಿಗೆ ಬಿದ್ದಿದ್ದ ಕೃಷ್ಣಮೃಗದ ಮರಿಯನ್ನು ಶುಕ್ರವಾರ ಅಗ್ನಿಶಾಮಕ ದಳದವರು ರಕ್ಷಿಸಿ, ಅರಣ್ಯ ಇಲಾಖೆಯ ಸಿಬ್ಬಂದಿ ವಶಕ್ಕೆ ನೀಡಿದರು.

ತುಮ್ಮನಹಳ್ಳಿ ಗ್ರಾಮದಲ್ಲಿ ಸುಮಾರು 40 ಅಡಿ ಆಳದ ಹಾಳು ಬಾವಿಗೆ ಕೃಷ್ಣಮೃಗದ ಮರಿ ಬಿದ್ದಿರುವುದನ್ನು ಕಂಡ ಗ್ರಾಮಸ್ಥರು ಅಗ್ನಿಶಾಮಕ ದಳ ಹಾಗೂ ಅರಣ್ಯ ಇಲಾಖೆಯವರ ಗಮನಕ್ಕೆ ತಂದಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ದಳದವರು, ಹಗ್ಗಗಳು ಕಟ್ಟಿಕೊಂಡು ಬಾವಿಗೆ ಇಳಿದು, ಕೃಷ್ಣಮೃಗದ ಮರಿ ಗಾಬರಿ ಆಗದಂತೆ ಅದರ ಮುಖವನ್ನು ಬಟ್ಟೆಯಲ್ಲಿ ಮುಚ್ಚಿ, ಹಗ್ಗದ ಸಹಾಯದಿಂದ ಮೇಲೆತ್ತಿದರು. ನಂತರ ಅರಣ್ಯ ಇಲಾಖೆಯ ಸಿಬ್ಬಂದಿಗೆ ಹಸ್ತಾಂತರಿಸಿದರು.

ಅಗ್ನಿಶಾಮಕ ಠಾಣಾಧಿಕಾರಿ ಕೆ .ಲೋಕೇಶ್, ಸಿಬ್ಬಂದಿ ಜಿ.ಅಶೋಕ, ರತ್ನ ಭೂಷಣ ಮುಖರೆ, ಕೆ.ಶ್ರೀನಿವಾಸ, ರಕ್ಷಿತ್ ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-12/06/2026

0
Sidlaghatta Silk Cocoon Market-12/06/2026

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 12/06/2026

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 516
Qty: 28237 Kg
Mx : 755
Mn: 506
Avg: 663

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 37
Qty: 2205 Kg
Mx : ₹ 826
Mn: ₹ 533
Avg: ₹ 650


For Daily Updates WhatsApp ‘HI’ to 7406303366

ಅಪರ ಸಿವಿಲ್ ನ್ಯಾಯಾಧೀಶೆಗೆ ಬೀಳ್ಕೊಡುಗೆ

0
sidlaghatta judge send off programme

Sidlaghatta : ನಗರದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಅಪರ ಸಿವಿಲ್ ನ್ಯಾಯಾಧೀಶೆಯಾಗಿ ಕಾರ್ಯನಿರ್ವಹಿಸಿ ವರ್ಗಾವಣೆಗೊಂಡಿರುವ ರಂಜಿತಾ ಅವರಿಗೆ, ವಕೀಲರ ಸಂಘದ ವತಿಯಿಂದ ನ್ಯಾಯಾಲಯದ ಸಭಾಂಗಣದಲ್ಲಿ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಗಿತ್ತು.

ನ್ಯಾಯಾಧೀಶರು ಮತ್ತು ವಕೀಲರ ಸಹಕಾರ ಮುಖ್ಯ

ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮದ್ ರೋಷನ್ ಷಾ ಮಾತನಾಡಿ, “ಹೊಸ ಸ್ಥಳಗಳಿಗೆ ತೆರಳಿದಾಗ ಅಧಿಕಾರಿಗಳಿಗೆ ಹೊಸ ಅನುಭವಗಳು ಹಾಗೂ ಸವಾಲುಗಳು ಎದುರಾಗುವುದು ಸಹಜ. ಕೆಲಸ ಮಾಡುವ ಶೈಲಿ ಎಲ್ಲರಲ್ಲೂ ವಿಭಿನ್ನವಾಗಿದ್ದರೂ, ತಪ್ಪುಗಳನ್ನು ಮುಕ್ತವಾಗಿ ಚರ್ಚಿಸಿದಾಗ ಮಾತ್ರ ಸರಿಪಡಿಸಿಕೊಳ್ಳಲು ಸಾಧ್ಯವಾಗುತ್ತದೆ. ನ್ಯಾಯಾಂಗ ವ್ಯವಸ್ಥೆಯಲ್ಲಿ ನ್ಯಾಯಾಧೀಶರು ಹಾಗೂ ವಕೀಲರು ಪರಸ್ಪರ ಸಹಕಾರದಿಂದ ಕೆಲಸ ಮಾಡಿದರೆ ಮಾತ್ರ ಕಕ್ಷಿದಾರರಿಗೆ ಸಮಯಕ್ಕೆ ಸರಿಯಾಗಿ ನ್ಯಾಯ ದೊರೆಯುತ್ತದೆ,” ಎಂದು ಅಭಿಪ್ರಾಯಪಟ್ಟರು. ಅಲ್ಲದೆ, ನ್ಯಾಯಾಲಯದಲ್ಲಿ ಬಾಕಿ ಇರುವ ಚೆಕ್ ಬೌನ್ಸ್ ಹಾಗೂ ಹಳೆಯ ಸಿವಿಲ್ ಪ್ರಕರಣಗಳ ವಿಲೇವಾರಿಗೆ ವಕೀಲರು ಹೆಚ್ಚಿನ ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ಶಿಡ್ಲಘಟ್ಟದ ದಿನಗಳು ಸದಾ ನೆನಪಿನಲ್ಲಿರುತ್ತವೆ: ನ್ಯಾಯಾಧೀಶೆ ರಂಜಿತಾ

ಸನ್ಮಾನ ಸ್ವೀಕರಿಸಿ ಮಾತನಾಡಿದ ಅಪರ ಸಿವಿಲ್ ನ್ಯಾಯಾಧೀಶೆ ರಂಜಿತಾ, “ಶಿಡ್ಲಘಟ್ಟ ನನಗೆ ಮೊದಲ ನೇಮಕಾತಿ ಸ್ಥಳವಾಗಿದ್ದು, ಈ ಸ್ಥಳ ಹಾಗೂ ಇಲ್ಲಿನ ವಾತಾವರಣ ಸದಾ ನೆನಪಿನಲ್ಲಿ ಉಳಿಯಲಿದೆ,” ಎಂದು ಭಾವುಕರಾದರು.

“ಇಲ್ಲಿನ ವಕೀಲರಿಂದ ಉತ್ತಮ ಸಹಕಾರ ದೊರೆತಿದ್ದರಿಂದ, ಹೆಚ್ಚಿನ ಪ್ರಕರಣಗಳ ಒತ್ತಡದ ನಡುವೆಯೂ ನ್ಯಾಯಾಲಯದ ಕಾರ್ಯಗಳನ್ನು ಸುಗಮವಾಗಿ ನಿರ್ವಹಿಸಲು ಸಾಧ್ಯವಾಯಿತು. ಕಲಾಪದ ವೇಳೆ ವಕೀಲರ ಅನುಕೂಲವನ್ನು ಗಮನದಲ್ಲಿಟ್ಟುಕೊಂಡೇ ಕ್ರಮವಹಿಸಲಾಗಿದೆಯೇ ಹೊರತು, ಯಾರನ್ನೂ ಅನಾವಶ್ಯಕವಾಗಿ ಕಾಯಿಸುವ ಉದ್ದೇಶ ನಮಗಿರಲಿಲ್ಲ,” ಎಂದು ಅವರು ಸ್ಪಷ್ಟಪಡಿಸಿದರು. ಜೊತೆಗೆ, ಹಿರಿಯ ಸಿವಿಲ್ ನ್ಯಾಯಾಧೀಶರಾದ ರೋಷನ್ ಷಾ ಅವರ ಮಾರ್ಗದರ್ಶನ ಹಾಗೂ ಸಹೋದ್ಯೋಗಿಗಳ ಸಹಕಾರವನ್ನು ಸ್ಮರಿಸಿ ಕೃತಜ್ಞತೆ ಸಲ್ಲಿಸಿದರು.

ಸಮಾರಂಭದಲ್ಲಿ ಹಿರಿಯ ವಕೀಲ ಪಾಪಿರೆಡ್ಡಿ, ವಕೀಲರ ಸಂಘದ ಅಧ್ಯಕ್ಷ ಎ. ನಾರಾಯಣಸ್ವಾಮಿ, ಕಾರ್ಯದರ್ಶಿ ಸಿ.ಜಿ. ಭಾಸ್ಕರ್ ಸೇರಿದಂತೆ ಹಲವು ವಕೀಲರು ಹಾಗೂ ನ್ಯಾಯಾಲಯದ ಸಿಬ್ಬಂದಿ ಉಪಸ್ಥಿತರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ಮಂತ್ರಿಗಳಿಗೆ ಮಾವಿನ ಹಣ್ಣು ಕೊಡುವುದು ಬಿಟ್ಟು ತಾಲ್ಲೂಕಿಗೆ ಅನುದಾನ ತನ್ನಿ

0
Poolakuntla Raghunatha Reddy congress leaders sidlaghatta

Sidlaghatta : ಮುಖ್ಯಮಂತ್ರಿ ಸೇರಿದಂತೆ ಸಚಿವರಿಗೆ ಬುಟ್ಟಿಯಲ್ಲಿ ಮಾವಿನ ಹಣ್ಣು ಕೊಡುವುದು ಬಿಟ್ಟು ತಾಲ್ಲೂಕಿಗೆ ಅನುದಾನ ತನ್ನಿ, ದರಕಾಸ್ತು ಸಮಿತಿಗೆ ಸದಸ್ಯರನ್ನು ನೇಮಿಸುವ ಕೆಲಸ ಮಾಡಿ ರೈತರಿಗೆ ಅನುಕೂಲ ಮಾಡಿಕೊಡಿ ಎಂದು ಜೆಡಿಎಸ್ ಮುಖಂಡ, ರಾಜ್ಯ ಒಕ್ಕಲಿಗರ ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಪೂಲಕುಂಟಹಳ್ಳಿ ರಘುನಾಥರೆಡ್ಡಿ ಅವರು ಕಾಂಗ್ರೆಸ್ ಮುಖಂಡರನ್ನು ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ತಾಲ್ಲೂಕಿನ ಕಾಂಗ್ರೆಸ್ ಮುಖಂಡ ಪುಟ್ಟು ಆಂಜಿನಪ್ಪ ಅವರು ತಮ್ಮ ತೋಟದಲ್ಲಿ ಬೆಳೆದ ಮಾವಿನ ಹಣ್ಣುಗಳನ್ನು ಬುಟ್ಟಿಗೆ ತುಂಬಿಕೊಂಡು ಸಿಎಂ ಡಿಕೆಶಿ, ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವರಾದ ಕೃಷ್ಣಬೈರೇಗೌಡ ಸೇರಿದಂತೆ ಹಲವು ಸಚಿವರಿಗೆ ಕೊಡುತ್ತಿದ್ದಾರೆ.

ಕೊಡಲಿ ನಮ್ಮದೇನು ಅಭ್ಯಂತರವಿಲ್ಲ. ಆದರೆ ಅದೇ ಸಿಎಂ, ಡಿಸಿಎಂ, ಸಚಿವರನ್ನು ಭೇಟಿ ಮಾಡಿ ಶಿಡ್ಲಘಟ್ಟ ತಾಲ್ಲೂಕಿಗೆ ವಿಶೇಷ ಅನುದಾನ ತರಲಿ.

ಮುಖ್ಯವಾಗಿ ಕಳೆದ ಹಲವು ವರ್ಷಗಳಿಂದಲೂ ತಾಲ್ಲೂಕಿನಲ್ಲಿ ದರಕಾಸ್ತು ಸಮಿತಿ ರಚನೆಯಾಗಿಲ್ಲ. ಅನೇಕ ವರ್ಷಗಳಿಂದಲೂ ನಮೂನೆ 51, 53 ಹಾಗೂ 57ನ್ನು ಹಾಕಿಕೊಂಡು ಬಕ ಪಕ್ಷಿಗಳಂತೆ ಸಾವಿರಾರು ರೈತರು ಕಾಯುತ್ತಿದ್ದಾರೆ. ದರಕಾಸ್ತು ಸಮಿತಿ ಇಲ್ಲದ ಕಾರಣ ಇವರಿಗೆ ಜಮೀನು ಹಕ್ಕು ಪತ್ರ ವಿತರಣೆಯಾಗಿಲ್ಲ. ಇದರಿಂದ ಜಮೀನಿನ ಮಾಲೀಕರಾಗುವ ಕನಸು ಕನಸಾಗಿಯೆ ಉಳಿದಿದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರವಿದೆ. ತಾಲ್ಲೂಕಿನ ಕಾಂಗ್ರೆಸ್ ಮುಖಂಡರ ಮಾತು ನಡೆಯುತ್ತದೆ. ವಿಶೇಷ ಅನುದಾನ ತನ್ನಿ, ದರಕಾಸ್ತು ಸಮಿತಿ ರಚಿಸಲು ಸರ್ಕಾರದ ಮೇಲೆ ಒತ್ತಡ ಹಾಕಿ. ರೈತರಿಗೆ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಿ ಎಂದು ಒತ್ತಾಯಿಸಿದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ಖಾಸಗೀಕರಣ ವಿರೋಧಿಸಿ BESCOM ನೌಕರರ ಪ್ರತಿಭಟನೆ

0
Sidlaghatta BESCOM Privatisation Protest

Sidlaghatta : BESCOM ವ್ಯಾಪ್ತಿಯಲ್ಲಿ ವಿದ್ಯುತ್ ಸೇವೆಯನ್ನು ಖಾಸಗೀಕರಣ ಮಾಡುವ ಪ್ರಕ್ರಿಯೆಗೆ ವಿರೋಧ ವ್ಯಕ್ತಪಡಿಸಿ ಶಿಡ್ಲಘಟ್ಟ ನಗರದಲ್ಲಿ BESCOM ನೌಕರರು, ಅಧಿಕಾರಿಗಳು ಹಾಗೂ ಅನುಮತಿ ಪಡೆದ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಶಾಂತಿಯುತ ಪ್ರತಿಭಟನೆ ನಡೆಸಿದರು.

ನಗರದ ಬೆಸ್ಕಾಂ ಕಚೇರಿ ಮುಂಭಾಗ ನಡೆದ ಪ್ರತಿಭಟನೆಯು ಶಿಡ್ಲಘಟ್ಟ ಉಪಭಾಗದ ಕೇಂದ್ರ ಸಮಿತಿ ಹಾಗೂ ಸ್ಥಳೀಯ ಸಮಿತಿಯ ನಿರ್ದೇಶನದಂತೆ ನಡೆಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದವರು ವಿದ್ಯುತ್ ಕ್ಷೇತ್ರವನ್ನು ಯಾವುದೇ ಕಾರಣಕ್ಕೂ ಖಾಸಗೀಕರಣ ಮಾಡಬಾರದು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ನೌಕರರ ಸಂಘದ ಪ್ರಾಥಮಿಕ ಸಮಿತಿ ಕಾರ್ಯದರ್ಶಿ ಜಿ.ಆರ್. ಶ್ರೀಧರ್ ಮಾತನಾಡಿ, ಟಾಟಾ ಕಂಪನಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಸಲ್ಲಿಸಿರುವ ಅರ್ಜಿಯ ಮೂಲಕ ಬೆಸ್ಕಾಂ ವ್ಯಾಪ್ತಿಯ ಎಂಟು ಜಿಲ್ಲೆಗಳಲ್ಲಿ ಖಾಸಗೀಕರಣದ ಮೂಲಕ ವಿದ್ಯುತ್ ಸೇವೆ ನೀಡಲು ಮುಂದಾಗಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ಹೇಳಿದರು.

ಪ್ರಸ್ತುತ ಬೆಸ್ಕಾಂ ಹಾಗೂ ಕೆಪಿಟಿಸಿಎಲ್ ವತಿಯಿಂದ ರೈತರಿಗೆ ಸಬ್ಸಿಡಿ ದರದಲ್ಲಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಗ್ರಾಮೀಣ ಭಾಗದಲ್ಲಿಯೂ ಸಾರ್ವಜನಿಕರಿಗೆ ಸಮರ್ಪಕ ಸೇವೆ ನೀಡಲಾಗುತ್ತಿದೆ. ಖಾಸಗೀಕರಣ ಜಾರಿಯಾದರೆ ಸಾರ್ವಜನಿಕ ಸೇವೆಯ ಗುಣಮಟ್ಟ ಕುಸಿಯುವ ಸಾಧ್ಯತೆ ಇದೆ ಎಂದು ಅವರು ಅಭಿಪ್ರಾಯಪಟ್ಟರು.

ಸಹಾಯಕ ಅಭಿಯಂತರ ವೇದಕಿರಣ್ ಮಾತನಾಡಿ, ಹಲವು ನೌಕರರ ತ್ಯಾಗ ಮತ್ತು ಪರಿಶ್ರಮದಿಂದ ಬೆಳೆದಿರುವ ಸರ್ಕಾರಿ ಸಂಸ್ಥೆಗಳನ್ನು ಡಿ-ಲೈಸೆನ್ಸಿಂಗ್ ಮೂಲಕ ದುರ್ಬಲಗೊಳಿಸಲು ಯತ್ನಿಸಲಾಗುತ್ತಿದೆ ಎಂದು ಆರೋಪಿಸಿದರು. ಖಾಸಗಿ ಕಂಪನಿಗಳು ಲಾಭದಾಯಕ ಪ್ರದೇಶಗಳಿಗೆ ಮಾತ್ರ ಸೇವೆ ನೀಡುವ ಸಾಧ್ಯತೆ ಇದ್ದು, ಗ್ರಾಮೀಣ ಹಾಗೂ ಬಡ ಜನರಿಗೆ ತೊಂದರೆ ಉಂಟಾಗಬಹುದು ಎಂದು ಎಚ್ಚರಿಸಿದರು.

ಖಾಸಗೀಕರಣದಿಂದ ಸರ್ಕಾರಿ ಸಂಸ್ಥೆಗಳ ಆದಾಯ ಕುಸಿದು ಮುಂದಿನ ದಿನಗಳಲ್ಲಿ ಬೆಸ್ಕಾಂ ಹಾಗೂ ಇತರ ಎಸ್ಕಾಂಗಳ ಸ್ಥಿತಿ ಬಿ.ಎಸ್.ಎನ್.ಎಲ್‌ನಂತಾಗುವ ಭೀತಿ ಇದೆ ಎಂದು ಹೇಳಿದರು.

ಪ್ರತಿಭಟನಾಕಾರರು, ಖಾಸಗೀಕರಣದಿಂದ ಸಾರ್ವಜನಿಕರ ಮೇಲೆ ಹೆಚ್ಚುವರಿ ಆರ್ಥಿಕ ಭಾರ ಬೀಳುವ ಸಾಧ್ಯತೆ ಇದ್ದು, ನೌಕರರ ಸೇವಾ ಭದ್ರತೆಯೂ ಹದಗೆಡಬಹುದು ಎಂದು ಆತಂಕ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ನೌಕರರ ಸಂಘದ ಅಧ್ಯಕ್ಷ ಡಿ.ಎನ್. ಶ್ರೀನಿವಾಸ್, ಕಾರ್ಯದರ್ಶಿ ಜಿ.ಆರ್. ಶ್ರೀಧರ್, ಸಹಾಯಕ ಅಭಿಯಂತರ ವೇದಕಿರಣ್, ಆರ್.ಸಿ. ಅನಂತ್ ಗೌಡ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಲ್ಯಾಣ ಸಂಸ್ಥೆಯ ಅಧ್ಯಕ್ಷ ಡಿ. ಕೃಷ್ಣಪ್ಪ, ಕಾರ್ಯದರ್ಶಿ ನಾಗಪ್ಪ, ತಾಲ್ಲೂಕು ಅನುಮತಿ ಪಡೆದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಎಸ್.ಜಿ. ಶಶಿಕುಮಾರ್, ಕಾರ್ಯದರ್ಶಿ ನಾಗರಾಜ್, ಜಿಲ್ಲಾ ನಿರ್ದೇಶಕ ವಿ.ಕೆ. ಶ್ರೀನಿವಾಸ್ ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-11/06/2026

0
Sidlaghatta Silk Cocoon Market-11/06/2026

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 11/06/2026

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 429
Qty: 24079 Kg
Mx : 765
Mn: 460
Avg: 681

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 14
Qty: 824 Kg
Mx : ₹ 832
Mn: ₹ 668
Avg: ₹ 747


For Daily Updates WhatsApp ‘HI’ to 7406303366

ಬಿಸಿಯೂಟ ಪೂರೈಕೆಗೆ ISKCON ಗೆ ಅವಕಾಶ ನೀಡಿರುವುದಕ್ಕೆ ವಿರೋಧ

0
Sidlaghatta ISKCON Mid day Meals Protest

Sidlaghatta : ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಮದ್ಯಾಹ್ನದ ಬಿಸಿಯೂಟವನ್ನು ಪೂರೈಸಲು ISKCON ಸಂಸ್ಥೆಯ ಅಕ್ಷಯ ಪಾತ್ರೆ ಫೌಂಡೇಷನ್‌ ಗೆ ಅವಕಾಶ ಕೊಟ್ಟಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಬಿಸಿಯೂಟ ತಯಾರಿಸುವ ನೌಕರರು ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಸರ್ಕಾರಿ ಶಾಲೆಗಳಿಗೆ ಸರ್ಕಾರೇತರ ಸಂಘ ಸಂಸ್ಥೆ, ಧರ್ಮಾಧಾರಿತ ಸಂಸ್ಥೆಗಳಿಂದ ಬಿಸಿಯೂಟ ಪೂರೈಸುವುದನ್ನು ಸರ್ಕಾರ ಮತ್ತು ಸುಪ್ರೀಂ ಕೋರ್ಟ್ ಕೂಡ ನಿಷೇಧಿಸಿದೆ. ಆದರೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಮಾತ್ರ ಧರ್ಮಾಧಾರಿತ ಸಂಸ್ಥೆ ಇಸ್ಕಾನ್‌ ಗೆ ಅನುಮತಿ ಕೊಟ್ಟಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಈಗಾಗಲೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಎಲ್ಲ ಸರ್ಕಾರಿ ಶಾಲೆಗಳಲ್ಲೂ ಮದ್ಯಾಹ್ನದ ಬಿಸಿಯೂಟ ಯೋಜನೆಯು ಯಾವುದೆ ಅಡ್ಡಿ ಆತಂಕವಿಲ್ಲದೆ ಸುಸೂತ್ರವಾಗಿ ನಡೆಯುತ್ತಿದೆ. 1,13,700 ಮಂದಿ ಮಹಿಳೆಯರು ಬಿಸಿಯೂಟ ತಯಾರಿಕೆಯಲ್ಲಿ ತೊಡಗಿದ್ದಾರೆ.

ಆರಂಭದಲ್ಲಿ ಅತಿ ಕಡಿಮೆ ಸಂಬಳಕ್ಕೆ ಕೆಲಸ ಮಾಡಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದು ಮುಖ್ಯ ಶಿಕ್ಷಕರಿಗೆ ಅಥವಾ ಇಲಾಖೆಯ ಅಧಿಕಾರಿಗಳಿಗೆ ಯಾವುದೆ ರೀತಿಯ ಅಡಚಣೆ ತೊಂದರೆ ಇಲ್ಲದೆ ಮಕ್ಕಳಿಗೆ ಬಿಸಿಯೂಟ ತಯಾರಿಸಿ ಬಡಿಸಲಾಗುತ್ತಿದೆ.

ಆದರೂ ಇದೀಗ ಸುಪ್ರೀಂ ಕೋರ್ಟ್ ಸೂಚನೆಯನ್ನು ಉಲ್ಲಂಘಿಸಿ ಸರ್ಕಾರೇತರ ಸಂಸ್ಥೆಗೆ ಸರ್ಕಾರಿ ಶಾಲಾ ಮಕ್ಕಳಿಗೆ ಮದ್ಯಾಹ್ನದ ಬಿಸಿಯೂಟ ಪೂರೈಸಲು ಅವಕಾಶ ಮಾಡಿಕೊಟ್ಟಿರುವುದು ಹತ್ತು ಹಲವು ಅನುಮಾನಗಳಿಗೆ ಅವಕಾಶ ಮಾಡಿಕೊಟ್ಟಿದೆ ಎಂದು ದೂರಿದರು.

ಮಕ್ಕಳಲ್ಲಿ ಪೌಷ್ಠಿಕತೆಯನ್ನು ಹೆಚ್ಚಿಸುವ ಬೆಳ್ಳುಳ್ಳಿ, ಈರುಳ್ಳಿಯನ್ನು ಇಸ್ಕಾನ್‌ ನ ಅಕ್ಷಯ ಪಾತ್ರೆ ತಯಾರಿಸುವ ಬಿಸಿಯೂಟದ ಅಡುಗೆಯಲ್ಲಿ ಬಳಸುವುದಿಲ್ಲ. ಇದು ಮಕ್ಕಳಲ್ಲಿ ಅಗತ್ಯ ಪೌಷ್ಟಿಕತೆ ಕುಗ್ಗಲು ಕಾರಣವಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿ ಜತೆಗೆ ಅನೇಕ ವರ್ಷಗಳಿಂದಲೂ ಕೆಲಸ ಮಾಡಿಕೊಂಡು ಬಂದ ಬಿಸಿಯೂಟ ತಯಾರಿಸುವ ನೌಕರರ ಕೆಲಸಕ್ಕೂ ಕುತ್ತು ತರಲಿದೆ ಎಂದು ಬೇಸರ ವ್ಯಕ್ತಪಡಿಸಿದರು.

ತಾಲ್ಲೂಕು ಪಂಚಾಯಿತಿ ಇಒ ಆರ್.ಹೇಮಾವತಿ ಅವರಿಗೆ ಮನವಿ ಸಲ್ಲಿಸಿದರು. ಸಿಐಟಿಯು ಜಿಲ್ಲಾಧ್ಯಕ್ಷೆ ಜಿ.ಎಂ.ಲಕ್ಷ್ಮಿದೇವಮ್ಮ, ಮುಖಂಡರಾದ ಮುನಿಕೃಷ್ಣಪ್ಪ, ಮುನಿಯಪ್ಪ, ಬಿಸಿಯೂಟ ನೌಕರರ ಸಂಘದ ಅಧ್ಯಕ್ಷೆ ಮುನಿಲಕ್ಷ್ಮಮ್ಮ, ಮಂಜುಳಮ್ಮ, ಗಾಯಿತ್ರಿ, ನಾಗಮಣಿ, ಸುಶೀಲ, ಚಂದ್ರಕಲ, ದ್ಯಾವಮ್ಮ, ಮಂಜುಳಬಾಯಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366