ನಗರದ ವಾಸವಿ ಕಲ್ಯಾಣ ಮಂಟಪದಲ್ಲಿ ಶನಿವಾರ ಸಕ್ಷಮ ವಿಕಲಚೇತನರ ಸಬಲೀಕರಣಕ್ಕಾಗಿ ಸಮರ್ಪಿತ ರಾಷ್ರ್ಟೀಯ ಸಂಘಟನೆ ‘ಸಕ್ಷಮ’ ಹಾಗೂ ಬೆಂಗಳೂರಿನ ಟಿಕ್ಸಾಸ್ ಕಂಪನಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಹಯೋಗದೊಂದಿಗೆ ಅಂಗವಿಕಲ ಮಕ್ಕಳಿಗೆ ಸ್ಕೂಲ್ ಬ್ಯಾಗ್ ಮತ್ತು ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್ ಬಾಬು ಮಾತನಾಡಿದರು.
ಅಂಗವಿಕಲ ಮಕ್ಕಳು ಸಮಾಜಕ್ಕೆ ಹೊರೆಯಲ್ಲ. ಅಂಗವಿಕಲ ಮಕ್ಕಳ ಮಾನಸಿಕ ಪರಿಸ್ಥಿತಿಯ ಬಗ್ಗೆ ಪಾಲಕರು ಯಾವುದೇ ಕಾರಣಕ್ಕೂ ಧೈರ್ಯಗೆಡಬಾರದು ಎಂದು ಅವರು ತಿಳಿಸಿದರು.
ಅಂಗವಿಕಲರು ಸಮಾಜದಲ್ಲಿ ಎಲ್ಲರಂತೆಯೇ ಸರಿ ಸಮಾನರು. ಆದರೆ ಸಮಾಜದಲ್ಲಿ ಅವರನ್ನು ತಾರತಮ್ಯದಿಂದ ಕಾಣುತ್ತಿರುವುದು ಸರಿಯಲ್ಲ. ವಿಶೇಷ ಅಗತ್ಯವುಳ್ಳ ಮಕ್ಕಳ ಆರೋಗ್ಯವನ್ನು ವೃದ್ಧಿಸುವ ನಿಟ್ಟಿನಲ್ಲಿ ಹಾಗೂ ಗುಣಮಟ್ಟದ ಶಿಕ್ಷಣ ಕಲ್ಪಿಸಿಕೊಡುವಲ್ಲಿ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದರ ಜತೆಗೆ ಹಲವು ಸವಲತ್ತುಗಳನ್ನು ಮಕ್ಕಳಿಗೆ ನೀಡುತ್ತಿದೆ. ಆದುದರಿಂದ ಪಾಲಕರು ಈ ಬಗ್ಗೆ ಮನದಟ್ಟು ಮಾಡಿಕೊಂಡು ಮಕ್ಕಳ ಆರೋಗ್ಯದ ಕಡೆ ಕಾಳಜಿ ವಹಿಸುವುದರ ಜತೆಗೆ ಶಿಕ್ಷಣ ಕೊಡಿಸಿ ವಿದ್ಯಾವಂತರನ್ನಾಗಿ ಮಾಡಬೇಕು. ಆದರೆ ಆ ಮಕ್ಕಳ ಮನೋ ಪರಿಸ್ಥಿತಿ ಬಗ್ಗೆ ಯಾವುದೇ ಕಾರಣಕ್ಕೂ ಪಾಲಕರು ಧೃತಿಗೆಡಬಾರದು ಎಂದು ಹೇಳಿದರು.
ಅಂಗವಿಕಲ ಮಕ್ಕಳಿಗೆ ಸ್ಕೂಲ್ ಬ್ಯಾಗ್, ಪುಸ್ತಕ ಹಾಗೂ ಕಲಿಕಾ ಸಮಾಗ್ರಿಗಳನ್ನು ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಸಕ್ಷಮ ಜಿಲ್ಲಾ ಘಟಕದ ಗಣೇಶ್, ಟಿಕ್ಸಾಸ್ ಕಂಪನಿಯ ಶಿಲ್ಪ, ನಿತೀಶ್, ರಾಜು, ಬಿ.ಆರ್.ಸಿ ಭಾಸ್ಕರ್, ಜಗದೀಶ್ ಕುಮಾರ್, ಸುಬ್ರಮಣಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -