ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ನಗರದ ಪ್ರವಾಸಿ ಮಂದಿರದಿಂದ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿಯವರೆಗೂ ಬುಧವಾರ ಹೊರಟ ಬೈಕ್ ರ‍್ಯಾಲಿಗೆ ಚಾಲನೆ ನೀಡಿ ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಜಿ.ನರಸಿಂಹಮೂರ್ತಿ ಮಾತನಾಡಿದರು
ನಗರದ ಹೃದಯ ಭಾಗದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್‌ರ ಭವನ ನಿರ್ಮಿಸಲು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಅವರು ಆರೋಪಿಸಿದರು.
ಕಳೆದ ಕೆಲ ವರ್ಷಗಳಿಂದ ದಲಿತ ಕುಂದು ಕೊರತೆ ಸಭೆ ಮತ್ತು ನಾಡ ಹಬ್ಬಗಳ ಆಚರಣಾ ಸಮಿತಿಯ ಸಭೆಗಳಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಒತ್ತಾಯಿಸುತ್ತಾ ಬಂದಿದ್ದೇವೆ. ತಾಲ್ಲೂಕು ಆಡಳಿತ ಮತ್ತು ಜನಪ್ರತಿನಿಧಿಗಳು ಈ ಬಗ್ಗೆ ಯಾವುದೇ ಕ್ರಮ ಜರುಗಿಸುವ ಬದಲಿಗೆ ಕಣ್ಣೊರೆಸುವ ಕೆಲಸ ಮಾಡುತ್ತಾ ಬಂದಿದ್ದಾರೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್‌ರ ಭವನ ನಿರ್ಮಿಸಲು ನಗರದ ತಾಲ್ಲೂಕು ಕಚೇರಿಯ ಮುಂಭಾಗದಲ್ಲಿರುವ ತೋಟಗಾರಿಕೆ ಇಲಾಖೆ ಆವರಣ ಅಥವ ಕಂದಾಯ ಭವನದ ಹಿಂಭಾಗದ ಹಳೆ ಪೊಲೀಸ್ ಕ್ವಾಟ್ರಸ್ ಅಥವಾ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ಪಾಳು ಬಿದ್ದಿರುವ ವಸತಿ ಗೃಹಗಳ ನಿವೇಶನವನ್ನು ಮಂಜೂರು ಮಾಡಿದಲ್ಲಿ ಅಂಬೇಡ್ಕರ್ ಭವನ ಎಲ್ಲರಿಗೂ ಉಪಯೋಗಕ್ಕೆ ಬರುತ್ತದೆ. ಹಾಗಾಗಿ ಕೂಡಲೇ ಮೇಲಿನ ಮೂರು ಸ್ಥಳಗಳಲ್ಲಿ ಯಾವುದಾದರೂ ಒಂದು ಸ್ಥಳ ಮಂಜೂರು ಮಾಡಿ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ಹೊರಟಿದ್ದೇವೆ ಎಂದರು.
ತಾಲ್ಲೂಕು ದಲಿತ ಸಂಘಟನೆಗಳ ಒಕ್ಕೂಟದ ಉಪಾಧ್ಯಕ್ಷ ಎಸ್.ಎಂ.ರಮೇಶ್, ಕಾರ್ಯದರ್ಶಿಗಳಾದ ಕೆ.ಎಸ್.ಅರುಣ್‌ಕುಮಾರ್, ಈಧರೆ ಪ್ರಕಾಶ್, ಮುಖಂಡರಾದ ಸಿ.ಎಂ.ಮುನೆಯ್ಯ, ಮುನಿನರಸಿಂಹ, ಶ್ರೀರಾಮಣ್ಣ, ನಾಗನರಸಿಂಹ, ಮಳ್ಳೂರು ಅಶೋಕ್, ಭಕ್ತರಹಳ್ಳಿ ಪ್ರತೀಶ್, ಸುರೇಶ್, ರವಿ, ಮಂಜುನಾಥ್ ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







