ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಆಶಯಗಳನ್ನು ಈಡೇರಿಸಲು ಕರ್ನಾಟಕ ರಿಪಬ್ಲಿಕನ್ ಸೇನಾ ಅಭ್ಯರ್ಥಿ ವೆಂಕಟೇಶಪ್ಪರನ್ನು ಬೆಂಬಲಿಸಿ ಎಂದು ಕೆಆರ್‌ಎಸ್ ಪಕ್ಷದ ರಾಜ್ಯಾಧ್ಯಕ್ಷ ಜಿಗಣಿ ಶಂಕರ್ ಹೇಳಿದರು.
ನಗರದ ಪತ್ರಕರ್ತರ ಭವನದಲ್ಲಿ ಭಾನುವಾರ ಸುದ್ದಿಘೋಷ್ಠಿಯಲ್ಲಿ ಮಾತನಾಡಿದ ಅವರು ಇತ್ತೀಚೆಗೆ ನಡೆಯುತ್ತಿರುವ ಚುನಾವಣೆಗಳಲ್ಲಿ ಹಣಬಲ ಹಾಗು ತೋಳ್ಬಲ ವಿದ್ದವರು ಮಾತ್ರ ಅಧಿಕಾರ ಹಿಡಿದು ವಿಧಾನಸೌಧಕ್ಕೆ ಹೋಗುತ್ತಿದ್ದಾರೆ. ಇಂತಹವರ ನಡುವೆ ಪ್ರಾಮಾಣಿಕರು ಚುನಾವಣೆಗಳಲ್ಲಿ ಸ್ಪರ್ಧಿಸಲು ಸಾಧ್ಯವಾಗುತ್ತಿಲ್ಲ. ಸಮ ಸಮಾಜ ನಿರ್ಮಾಣ ಗುರಿಯೊಂದಿಗೆ ಸಂವಿದಾನ ಶಿಲ್ಪಿ ಅಂಬೇಡ್ಕರ್‌ರವರ ಮೊಮ್ಮಗ ಆನಂದ್‌ರಾಜ್ ಅಂಬೇಡ್ಕರ್ ರಿಂದ ಸ್ಥಾಪಿತಗೊಂಡಿರುವ ರಿಪಬ್ಲಿಕನ್ ಪಕ್ಷದ ವತಿಯಿಂದ ಒಬ್ಬ ಸಾಮಾನ್ಯನೂ ಚುನಾವಣೆಯಲ್ಲಿ ನಿಲ್ಲಬಹುದು ಎನ್ನುವುದನ್ನು ಸಾಭೀತು ಪಡಿಸಿದ್ದೇವೆ.
ಇದೇ ಮೊದಲ ಭಾರಿಗೆ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ೨೨೪ ಕ್ಷೇತ್ರಗಳ ಪೈಕಿ ೩೫ ಅಭ್ಯರ್ಥಿಗಳನ್ನು ಪಕ್ಷದಿಂದ ಕಣಕ್ಕಿಳಿಸಿದ್ದು ಉತ್ತಮ ಸಮಾಜ ನಿರ್ಮಾಣಕ್ಕಾಗಿ ಕೆಆರ್‌ಎಸ್ ಅಭ್ಯರ್ಥಿ ವೆಂಕಟೇಶಪ್ಪರನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.
ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ವೆಂಕಟೇಶಪ್ಪ ಮಾತನಾಡಿ ಮತದಾನ ಪ್ರತಿಯೊಬ್ಬರ ಹಕ್ಕು ಅದನ್ನು ಸೂಕ್ತ ವ್ಯಕ್ತಿಗೆ ಹಾಕುವ ಮೂಲಕ ಕ್ಷೇತ್ರವನ್ನು ಅಭಿವೃದ್ದಿಯತ್ತ ಕೊಂಡೊಯ್ಯುವ ಕೆಲಸಕ್ಕೆ ಎಲ್ಲರೂ ಮುಂದಾಗಬೇಕು. ಈ ಭಾರಿಯ ಚುನಾವಣೆಯಲ್ಲಿ ಕೆಆರ್‌ಎಸ್ ಪಕ್ಷದ ಅಭ್ಯರ್ಥಿಯಾದ ತನಗೆ ಮತ ಹಾಕಿ ಜಯಶೀಲರನ್ನಾಗಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ದೇವರಾಜ್, ಮುಖಂಡರಾದ ಬೊಮ್ಮಸಂದ್ರ ಮುನಿರಾಜು, ದ್ಯಾವಪ್ಪ ಮತ್ತಿತರರು ಹಾಜರಿದ್ದರು.
- Advertisement -
- Advertisement -
- Advertisement -