ಶ್ರೀ ಕೆಂಪೇಗೌಡ ಜಯಂತ್ಯುತ್ಸವ ಆಚರಣಾ ಸಮಿತಿಯಿಂದ ಜೂನ್ 27 ರ ಮಂಗಳವಾರ ದಿಬ್ಬೂರಹಳ್ಳಿ ರಸ್ತೆಯ ನ್ಯಾಯಾಲಯದ ಬಳಿ ಅದ್ದೂರಿ ಕೆಂಪೇಗೌಡ ಜಯಂತ್ಯುತ್ಸವವನ್ನು ಆಚರಿಸಲಾಗುತ್ತಿದೆ.
ತಾಲ್ಲೂಕಿನ ಪ್ರತಿಯೊಂದು ಗ್ರಾಮದಿಂದಲೂ ಪಲ್ಲಕ್ಕಿಗಳು ಆಗಮಿಸಿ ಬೆಳಿಗ್ಗೆ 10 ಗಂಟೆಗೆ ನಗರದ ಬಸ್ ನಿಲ್ದಾಣದಿಂದ ಮೆರವಣಿಗೆ ಹೊರಡಲಿದೆ. ನಗರದ ಪ್ರಮುಖ ಬೀದಿಗಳಲ್ಲಿ ಕಲಾತಂಡಗಳೊಂದಿಗೆ ಒಕ್ಕಲಿಗ ಕುಲಬಾಂಧವರು ಮೆರವಣಿಗೆಯಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 1ಗಂಟೆಗೆ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಮತ್ತು ಚಂದ್ರಶೇಖರನಾಥ ಸ್ವಾಮೀಜಿ ಪಾಲ್ಗೊಳ್ಳುವರು. ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಹಾಗೂ ಒಕ್ಕಲಿಗ ಜನಾಂಗದ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಗುವುದು. ಹಾಸ್ಯ ಕಲಾವಿದ ಕೋಟೆ ನಾಗರಾಜ್ ಅವರಿಂದ ಮನರಂಜನಾ ಕಾರ್ಯಕ್ರಮವಿರುತ್ತದೆ. ತಾಲ್ಲೂಕಿನ ಸಮಸ್ತ ಒಕ್ಕಲಿಗ ಕುಲಬಾಂಧವರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಆಚರಣಾ ಸಮಿತಿಯಿಂದ ಕೋರಲಾಗಿದೆ.
- Advertisement -
- Advertisement -
- Advertisement -







