Home News ಅನುದಾನವನ್ನು ಬಿಡುಗಡೆ ಮಾಡದಿರುವುದನ್ನು ಖಂಡಿಸಿ ಅಂಗವಿಕಲರ ಪ್ರತಿಭಟನೆ

ಅನುದಾನವನ್ನು ಬಿಡುಗಡೆ ಮಾಡದಿರುವುದನ್ನು ಖಂಡಿಸಿ ಅಂಗವಿಕಲರ ಪ್ರತಿಭಟನೆ

0

ತಾಲ್ಲೂಕು ಪಂಚಾಯತಿ ಅನುದಾನದಲ್ಲಿ ಶೇಕಡಾ 3 ರಷ್ಟು ಅನುದಾನವನ್ನು ಅಂಗವಿಕಲರಿಗೆ ಬಿಡುಗಡೆ ಮಾಡದಿರುವುದನ್ನು ಖಂಡಿಸಿ ಬುಧವಾರ ತಾಲ್ಲೂಕು ಅಂಗವಿಕಲರ ಒಕ್ಕೂಟದ ವತಿಯಿಂದ ತಾಲ್ಲೂಕು ಪಂಚಾಯತಿ ಮುಂದೆ ಪ್ರತಿಭಟನೆಯನ್ನು ನಡೆಸಲಾಯಿತು.
ತಾಲ್ಲೂಕಿನಾದ್ಯಂತ 3342 ಕ್ಕೂ ಮೇಲ್ಪಟ್ಟು ಅಂಗವಿಕಲರಿದ್ದು, ಅವರು ಕನಿಷ್ಠ ಪ್ರಮಾಣದ ಮೂಲಭೂತ ಹಕ್ಕುಗಳಾದ ಆರೋಗ್ಯ, ಶಿಕ್ಷಣ ಮತ್ತು ಆರ್ಥಿಕ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ತಾಲ್ಲೂಕು ಪಂಚಾಯತಿ ಅನುದಾನದಲ್ಲಿ ಅಂಗವಿಕಲರಿಗೆ ಮೀಸಲಿಡಬೇಕಾದ ಹಣವನ್ನು ಬಿಡುಗಡೆ ಮಾಡದೇ ಅಂಗವಿಕಲರ ಹಕ್ಕನ್ನು ಉಲ್ಲಂಘಿಸಿದ್ದಾರೆ ಎಂದು ತಾಲ್ಲೂಕು ಅಂಗವಿಕಲರ ಒಕ್ಕೂಟದ ಬಿ.ಮುನಿರಾಜು ಆರೋಪಿಸಿದರು.
ಅಂಗವಿಕಲರಿಗೆ ಮೀಸಲಿಡಬೇಕಾದ ಶೇಕಡಾ 3 ರಷ್ಟು ಅನುದಾನ ಈ ಕೂಡಲೇ ಬಿಡುಗಡೆ ಮಾಡಬೇಕು. ಎಲ್ಲಾ ತಾಲ್ಲೂಕುಗಳಂತೆ ಅನುದಾನ ಚೆಕ್‌ ವಿತರಿಸಬೇಕು. ಗ್ರಾಮ ಪಂಚಾಯತಿಗಳಲ್ಲಿ ಅಂಗವಿಕಲರಿಗೆ ಆಶ್ರಯ ಯೋಜನೆಯಲ್ಲಿ ಸೌಲಭ್ಯ ಸಿಗಬೇಕು. 2012 ರಿಂದ 2014 ರವರೆಗೂ ಅಂಗವಿಕಲರಿಗೆ ಅನುದಾನ ನೀಡದೆ ಸುಳ್ಳು ಭರವಸೆ ನೀಡುತ್ತಿರುವ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಮೇಲೆ ಶಿಸ್ತುಕ್ರಮ ಜರುಗಿಸಬೇಕೆಂದು ಈ ಸಂದರ್ಭದಲ್ಲಿ ಒತ್ತಾಯಿಸಿದರು. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಅಂಗವಿಕಲರು ಘೋಷಣೆಗಳನ್ನು ಕೂಗಿದರು. ಸಂತೋಷ್‌ಕುಮಾರ್‌, ಭಾಸ್ಕರ್‌, ರೂಪ, ಮೋತಿ, ವಿನೋದಮ್ಮ, ಚಿಕ್ಕಮಾರಪ್ಪ, ಮಂಜುನಾಥ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.