ಪಟ್ಟಣದ ಆಟೋ ಚಾಲಕರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಸುಮಾರು 300 ಕ್ಕೂ ಹೆಚ್ಚು ಆಟೋಗಳಿಗೆ ಕನ್ನಡ ಬಾವುಟಗಳನ್ನು ಕಟ್ಟಿಕೊಂಡು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿ ತಮ್ಮ ಸಂಘದ ಒಗ್ಗಟ್ಟು ಮತ್ತು ಕನ್ನಡಾಭಿಮಾನವನ್ನು ಪ್ರದರ್ಶಿಸಿದರು. ಹಲವಾರು ಆಟೋಗಳನ್ನು ಕೆಂಪು ಚೆಂಡು ಹೂ ಮತ್ತು ಹಳದಿ ಶಾಮಂತಿಗೆ ಹೂಗಳಿಂದ ಅಲಂಕರಿಸಿ ನಾಡ ಬಣ್ಣವನ್ನು ಹೂಗಳ ಮೂಲಕ ಪ್ರದರ್ಶಿಸಿರುವುದಲ್ಲದೆ, ನಾಡ ಬಾವುಟಗಳನ್ನೂ ಕಟ್ಟಿಕೊಂಡು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದುದು ವಿಶೇಷವಾಗಿತ್ತು.
ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿರುವ ಜೈ ಭುವನೇಶ್ವರಿ ಆಟೋ ನಿಲ್ದಾಣದಲ್ಲಿ ನಾಡಧ್ವಜಾರೋಹಣ ಮತ್ತು ಸಂಜೆ ಆರ್ಕೇಸ್ಟ್ರಾ ಆಯೋಜಿಸಿದ್ದರು.
- Advertisement -
- Advertisement -
- Advertisement -
- Advertisement -