ತಾಲ್ಲೂಕಿನ ದಿಬ್ಬೂರಹಳ್ಳಿ ಬಳಿಯ ಬಚ್ಚನಹಳ್ಳಿ ಆಶ್ರಮ ವಸತಿ ಶಾಲೆಯಲ್ಲಿ ಅವ್ಯವಹಾರ ಹಾಗೂ ಅವ್ಯವಸ್ಥೆ ತಾಂಡವವಾಡುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಶಿಡ್ಲಘಟ್ಟ ತಾಲ್ಲೂಕಿನ ದಿಬ್ಬೂರಹಳ್ಳಿ ಬಳಿಯ ಬಚ್ಚನಹಳ್ಳಿ ಆಶ್ರಮ ವಸತಿ ಶಾಲೆಯಲ್ಲಿ ದಿನಸಿ ಸಾಮಗ್ರಿಗಳನ್ನು ಬಚ್ಚಲುಮನೆಯಲ್ಲಿ ಪೇರಿಸಿಟ್ಟಿರುವುದು.ವಸತಿ ಶಾಲೆಯ ವಾರ್ಡನ್ ಮಕ್ಕಳಿಗೆ ನೀಡಬೇಕಾದ ತಟ್ಟೆ, ಲೋಟ, ಬೆಡ್ಶೀಟ್, ಟ್ರಂಕ್ ಮುಂತಾದ ಸಾಮಗ್ರಿಗಳು ಹಾಗೂ ಇನ್ನಿತರೆ ವಸ್ತುಗಳನ್ನು ವಿದ್ಯಾರ್ಥಿಗಳಿಗೆ ಸರಿಯಾಗಿ ನೀಡದೇ ಬಿಲ್ಲುಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಇದರೊಂದಿಗೆ ಈ ವಸತಿ ಶಾಲೆಯಲ್ಲಿ ಯಾವುದೇ ಮೂಲಭೂತ ಸೌಕರ್ಯಗಳಿಲ್ಲ. ಈಚೆಗೆ ವಿದ್ಯಾರ್ಥಿಯೊಬ್ಬ ಅನಾರೋಗ್ಯದಿಂದ ನರಳುತ್ತಿದ್ದರೂ ಆಸ್ಪತ್ರೆಗೆ ಸೇರಿಸಿರಲಿಲ್ಲ. ನಂತರ ಗ್ರಾಮಸ್ಥರ ಒತ್ತಾಯದಿಂದ ಆಸ್ಪತ್ರೆಯಲ್ಲಿ ಕಳಪೆಯಾದ ಹಾಸಿಗೆ ಹಾಗೂ ಟ್ರಂಕುಗಳುಚಿಕಿತ್ಸೆ ನೀಡಲಾಯಿತು. ಕಳಪೆ ತರಕಾರಿಗಳನ್ನು ಬಳಸಲಾಗುತ್ತಿದೆ. ದಿನಸಿ ಸಾಮಗ್ರಿಗಳನ್ನು ಬಚ್ಚಲುಮನೆಯಲ್ಲಿ ಪೇರಿಸಿಡಲಾಗಿದೆ. ಬಯೋಮೆಟ್ರಿಕ್ ವ್ಯವಸ್ಥೆ ಇಲ್ಲದ ಕಾರನ ಹಾಜರಾತಿ ಸರಿಯಾಗಿ ತೆಗೆದುಕೊಳ್ಳುತ್ತಿಲ್ಲ. ತಿಂಗಳಿಗೊಮ್ಮೆ ಹಾಜರಾತಿ ಹಾಕಿ ಬಿಲ್ಲು ಮಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸದಿದ್ದಲ್ಲಿ ವಿದ್ಯಾರ್ಥಿ ಸಂಘಟನೆಯ ಮೂಲಕ ಪ್ರತಿಭಟಿಸಬೇಕಾಗುತ್ತದೆ ಎಂದು ಡಿ.ವೈ.ಎಫ್.ಐ ರಾಜ್ಯ ಮುಖಂಡ ಮುನೀಂದ್ರ ತಿಳಿಸಿದ್ದಾರೆ.
Subscribe to ನಮ್ಮ ಶಿಡ್ಲಘಟ್ಟ Newspaper
Launching Soon! Register for your Free Newspaper Copy Today.