ಉಚಿತ ಆರೋಗ್ಯ ತಪಾಸಣಾ ಶಿಬಿರ

0
321

ನಗರದ ಸಿದ್ದಾರ್ಥನಗರದ ಬಡಾವಣೆ ಶಾಲೆಯ ಆವರಣದಲ್ಲಿ ಶನಿವಾರ ಜನಸೇವಾ ಕೇಂದ್ರ ಹಾಗೂ ಈಸ್ಟ್ ಪಾಯಿಂಟ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಬಹುಜನ ವಿದ್ಯಾರ್ಥಿ ಸಂಘದ ಸಂಪನ್ಮೂಲ ವ್ಯಕ್ತಿ ಪ್ರೊ.ಹರಿರಾಮ್ ಮಾತನಾಡಿದರು.
ನಗರ ಹಾಗೂ ಗ್ರಾಮೀಣ ಭಾಗದ ಬಡ ಜನರು ತಜ್ಞ ವೈದ್ಯರಿಂದ ಚಿಕಿತ್ಸೆ ಪಡೆಯಲಾಗದು ಎಂಬ ಕಾರಣಕ್ಕೆ ಯುವಕರಿಂದ ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಅವರು ಹೇಳಿದರು.
ಬಹಳಷ್ಟು ವಯೋವೃದ್ಧರೂ ಹಾಗೂ ಆರ್ಥಿಕವಾಗಿ ಹಿಂದುಳಿದವರು ದೂರದ ಒಳ್ಳೆಯ ಆಸ್ಪತ್ರೆಗೆ ಹೋಗಲು ಕಷ್ಟಪಡುತ್ತಿದ್ದಾರೆ. ಆಸ್ಪತ್ರೆಯ ಚಿಕಿತ್ಸೆ ವೆಚ್ಚ ಅಧಿಕವಾಗಿರುವುದರಿಂದ ಬಹುತೇಕ ಬಡವರಿಗೆ ಉತ್ತಮ ಚಿಕಿತ್ಸೆ ಪಡೆಯಲಾಗುವುದಿಲ್ಲ. ಹಾಗಾಗಿ ಜನಸೇವಾ ಕೇಂದ್ರದ ಯುವಕರು ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಶಿಬಿರದಲ್ಲಿ ಸುಮಾರು ಮುನ್ನೂರಕ್ಕೂ ಹೆಚ್ಚು ಜನರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.
ಈ ಸಂದರ್ಭದಲ್ಲಿ ವಕೀಲ ಮಹೇಶ್‌ದಾಸ್, ಜನಸೇವಾ ಕೇಂದ್ರದ ಪದಾಧಿಕಾರಿಗಳಾದ ಕೆ.ಮೂರ್ತಿ, ನರೇಶ್‌ಬಾಬು, ರವಿ, ರಾಜು, ರಾಮು, ಸುಂದರ್‌ರಾಜ್, ವೆಂಕಟರಾಜು ಹಾಜರಿದ್ದರು.

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!