ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಒತ್ತಾಯಿಸಿ ಎನ್‌ಎಸ್‌ಯುಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಶುಕ್ರವಾರ ಬಸ್ ನಿಲ್ದಾಣದಲ್ಲಿ ಪ್ರತಿಭಟಿಸಿ ಘಟಕ ನಿಯಂತ್ರಣಾಧಿಕಾರಿ ವಲಿಪಾಷ ಅವರಿಗೆ ಮನವಿ ಸಲ್ಲಿಸಿದರು.
ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಹಿಂದಿನ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುತ್ತೇವೆಂದು ವಿಧಾನಸಭೆಯಲ್ಲಿ ಘೋಷಿಸಿದ್ದರು. ಆದರೆ ಈಗಿನ ಸಮ್ಮಿಶ್ರ ಸರ್ಕಾರ ಬಸ್ ಪಾಸ್ ನೀಡದೇ ಮೀನಮೇಷ ಎಣಿಸುತ್ತಿರುವುದು ಖಂಡನೀಯವಾಗಿದೆ. ಶಾಲಾ ಕಾಲೇಜಿಗೆ ಗ್ರಾಮೀಣ ಭಾಗದಿಂದ ಹೋಗಿ ಬರುವ ವಿದ್ಯಾರ್ಥಿಗಳು ಬಡ ಕೃಷಿ ಕಾರ್ಮಿಕರ ಮಕ್ಕಳಾಗಿದ್ದು ಅವರು ಜೀವನೋಪಾಯ ನಡೆಸುವುದೇ ಕಷ್ಟಕರವಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಜ್ಯದ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ನೀಡಬೇಕು ಮತ್ತು ಈಗಾಗಲೇ ಬಸ್ ಪಾಸ್ ಹಣ ನೀಡಿ ಪಡೆದಿರುವ ವಿದ್ಯಾರ್ಥಿಗಳಿಗೆ ಹಣವನ್ನು ಮರುಪಾವತಿ ಮಾಡಬೇಕು. ಈ ಬೇಡಿಕೆಯನ್ನು ಈಡೇರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ಎನ್‌ಎಸ್‌ಯುಐ ರಾಜ್ಯ ಸಂಚಾಲಕ ಕುಂದಲಗುರ್ಕಿ ಮುನೀಂದ್ರ, ಅಫ್ರದ್, ಅಭಿಲಾಶ್, ನವೀನ್, ಮಂಜುಳ, ಅರುಣ, ನಿರಂಜನ, ಮಂಜುನಾಥ, ವೆಂಕಟೇಶ್ ಹಾಜರಿದ್ದರು.
- Advertisement -
- Advertisement -
- Advertisement -