Home News ಉನ್ನತ ಶಿಕ್ಷಣಕ್ಕಾಗಿ ಪ್ರೋತ್ಸಾಹ ಮಾಡಲು ಮುಂದಾಗಬೇಕು

ಉನ್ನತ ಶಿಕ್ಷಣಕ್ಕಾಗಿ ಪ್ರೋತ್ಸಾಹ ಮಾಡಲು ಮುಂದಾಗಬೇಕು

0

ಬಡತನದಲ್ಲಿ ಜನಿಸಿ ಉತ್ತಮ ಶಿಕ್ಷಣ ಪಡೆಯಲು ಪರದಾಡುವ ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಕೆಲಸವನ್ನು ಆರ್ಥಿಕವಾಗಿ ಮುಂದುವರೆದ ಹಾಗು ಉನ್ನತ ಸ್ಥಾನಗಳಲ್ಲಿರುವ ಶ್ರೀಮಂತರು ಮಾಡಲು ಮುಂದಾಗಬೇಕು ಎಂದು ಕರ್ಣಶ್ರೀ ಚಾರಿಟೆಬಲ್ ಟ್ರಸ್ಟ್‍ನ ಅಧ್ಯಕ್ಷ ಡಿ.ಆರ್.ಶಿವಕುಮಾರ್‍ಗೌಡ ಹೇಳಿದರು.
ನಗರದ ಚಿಂತಾಮಣಿ ರಸ್ತೆಯಲ್ಲಿರುವ ಕರ್ಣಶ್ರೀ ಚಾರಿಟಬಲ್ ಟ್ರಸ್ಟ್‍ನ ಕಛೇರಿಯಲ್ಲಿ ಪಿಯುಸಿಯಲ್ಲಿ ಶೇ 94 ರಷ್ಟು ಅಂಕ ಪಡೆದ ನಗರದ 13 ನೇ ವಾರ್ಡಿನ ಸುಮ ಎಂಬ ವಿದ್ಯಾರ್ಥಿಗೆ ಉನ್ನತ ಶಿಕ್ಷಣಕ್ಕಾಗಿ 20 ಸಾವಿರ ರೂ ಚೆಕ್ ವಿತರಿಸಿ ಮಾತನಾಡಿದರು.
ಸಮಾಜದಲ್ಲಿ ಬಹುತೇಕ ಬಡ ವಿದ್ಯಾರ್ಥಿಗಳು ಕಷ್ಟಗಳನ್ನು ಎದಿರುಸುತ್ತಾ ಪ್ರಾಥಮಿಕ ಶಿಕ್ಷಣ ಮುಗಿಸುತ್ತಾರೆ. ಆದರೆ ಆರ್ಥಿಕ ತೊಂದರೆಯಿಂದ ಉನ್ನತ ಶಿಕ್ಷಣ ಪಡೆಯಲಾಗದೇ ಶಿಕ್ಷಣ ವನ್ನು ಅರ್ಧಕ್ಕೆ ನಿಲ್ಲಿಸುತ್ತಾರೆ. ಹಾಗಾಗಿ ಶ್ರೀಮಂತರು ಸೇರಿದಂತೆ ಸಮಾಜದಲ್ಲಿ ಉನ್ನತ ಸ್ಥಾನ ಮಾನ ಅಲಂಕರಿಸಿರುವವರು ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸಹಾಯಕ್ಕೆ ಬಂದರೆ ಅವರೂ ಸಹ ಸಮಾಜದ ಮುಖ್ಯ ವಾಹಿನಿಗೆ ಬರುತ್ತಾರೆ ಎಂದರು.
ಪ್ರತಿಯೊಬ್ಬರೂ ಸಾರ್ವಜನಿಕ ಜೀವನದಲ್ಲಿ ಸಹಾಯ ಮನೋಭಾವವನ್ನು ರೂಡಿಸಿಕೊಂಡಾಗ ಮಾತ್ರ ಸಮಾಜದಲ್ಲಿ ಎಲ್ಲರೂ ಸುಖವಾಗಿರಲು ಸಾಧ್ಯ. ಟ್ರಸ್ಟ್ ಮೂಲಕ ಕಳೆದ ಐದು ವರ್ಷದಿಂದ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದು ಮುಂದಿನ ದಿನಗಳಲ್ಲಿಯೂ ಬಡವರ ಸೇವೆ ನಿರಂತರವಾಗಿ ಮಾಡಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡ ಸುಗಟೂರು ಸಂತೋಷರವರ ಮಗಳು ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದು ಚಿಕಿತ್ಸೆಗಾಗಿ ಆರ್ಥಿಕ ಸಹಾಯ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಸುರೇಂದ್ರ ಗೌಡ, ಶ್ರೀರಾಮರೆಡ್ಡಿ, ಮುಖಂಡರಾದ ಮುನಿರಾಜು, ಕೊತ್ತನೂರು ರವಿ, ಶ್ರೀನಿವಾಸ್, ಬೈರಾರೆಡ್ಡಿ, ಮುನಿರಾಜು, ಚಲಪತಿ ಮತ್ತಿತರರು ಹಾಜರಿದ್ದರು.

error: Content is protected !!