ಕ್ರೀಡಾ ಸ್ಪರ್ಧೆಗಳನ್ನು ನಡೆಸಲು ಸಾರ್ವಜನಿಕರು ಸಹಕಾರ ನೀಡಬೇಕು. ಸ್ಥಳೀಯ ಪ್ರತಿಭೆಗಳು ಹೊರಹೊಮ್ಮಲು, ಕ್ರೀಡಾಸಕ್ತ ಮಕ್ಕಳಿಗೆ ಪ್ರೋತ್ಸಾಹಿಸಲು ಇದು ವೇದಿಕೆಯಾಗುತ್ತದೆ ಎಂದು ಗೌರಿಬಿದನೂರು ನಂದಿ ರೈಡರ್ಸ್ ಸ್ಕೇಟಿಂಗ್ ಅಸೋಸಿಯೇಷನ್ ಮುಖ್ಯಸ್ಥ ಚಂದ್ರಶೇಖರ್ ತಿಳಿಸಿದರು.
ನಗರದ ನೆಹರು ಕ್ರೀಡಾಂಗಣದಲ್ಲಿ ಭಾನುವಾರ ಶಿಡ್ಲಘಟ್ಟ ಸ್ಪೀಡ್ ಸ್ಕೇಟಿಂಗ್ ಅಸೋಸಿಯೇಷನ್ ಆಯೋಜಿಸಿದ್ದ ಎರಡನೇ ವರ್ಷದ ಜಿಲ್ಲಾ ಮಟ್ಟದ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಿ ಅವರು ಮಾತನಾಡಿದರು.
ನಿರಂತರ ಅಭ್ಯಾಸದಿಂದ ಮಾತ್ರ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ. ದೈಹಿಕ, ಶಾರೀರಿಕ ಮತ್ತು ಮಾನಸಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿಯಾಗಿದೆ. ಎಲ್ಲರೂ ಕ್ರೀಡೆಗೆ ಹೆಚ್ಚಿನ ಒತ್ತು ನೀಡಬೇಕು. ಪ್ರತಿದಿನವೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕಗಳನ್ನು ಪಡೆಯುತ್ತಾ ದೇಶದ ಕೀರ್ತಿಯನ್ನು ಬೆಳಗಿಸುತ್ತಿರುವ ಕ್ರೀಡಾಪಟುಗಳ ಚಿತ್ರಗಳನ್ನು ಪತ್ರಿಕೆಗಳಲ್ಲಿ ನೋಡಿದಾಗ ಹೆಮ್ಮೆಯಾಗುತ್ತದೆ. ಅವರಿಂದ ಮಕ್ಕಳು ಸ್ಫೂರ್ತಿ ಹೊಂದುವಂತಾಗಲಿ ಎಂದರು.
ಚಿಕ್ಕಬಳ್ಳಾಪುರ, ಶಿಡ್ಲಘಟ್ಟ, ಗೌರಿಬಿದನೂರು ಸೇರಿದಂತೆ ಹಲವೆಡೆಗಳಿಂದ ಸುಮಾರು 40 ಮಕ್ಕಳು ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು.
ಶಿಡ್ಲಘಟ್ಟ ಸ್ಪೀಡ್ ಸ್ಕೇಟಿಂಗ್ ಅಸೋಸಿಯೇಷನ್ ತಂಡದ ಮಕ್ಕಳು ಟ್ರೋಫಿ ಗೆದ್ದರೆ, ಗೌರಿಬಿದನೂರಿನ ಸ್ಕೇಟಿಂಗ್ ತಂಡ ರನ್ನರ್ ಅಪ್ ಟ್ರೋಫಿ ಪಡೆದರು.
ಶಿಡ್ಲಘಟ್ಟ ಸ್ಕೇಟಿಂಗ್ ತರಬೇತುದಾರ ಅರುಣ್‌ಕುಮಾರ್, ಚಿಕ್ಕಬಳ್ಳಾಫುರ ಸ್ಕೇಟಿಂಗ್ ತರಬೇತುದಾರ ಹರಿ, ಲಯನ್ಸ್ ಕ್ರೀಡಾ ಸಂಸ್ಥೆ ಗೌರವಾಧ್ಯಕ್ಷ ಮುನಿರಾಜು ಹಾಜರಿದ್ದರು.
- Advertisement -
- Advertisement -
- Advertisement -