ಕರೋನಾ ಸೋಂಕು ಹರಡದಂತೆ ತಡೆಯಲು ಎಸ್.ಎನ್.ಕ್ರಿಯಾ ಟ್ರಸ್ಟ್ ವತಿಯಿಂದ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 1 ಲಕ್ಷ ಮಾಸ್ಕ್ ಹಾಗೂ 1 ಲಕ್ಷ ಸೋಪುಗಳನ್ನು ವಿತರಿಸುತ್ತಿದ್ದೇವೆ ಎಂದು ಎಸ್.ಎನ್.ಕ್ರಿಯಾ ಟ್ರಸ್ಟ್ ಅಧ್ಯಕ್ಷ ಆಂಜಿನಪ್ಪ (ಪುಟ್ಟು) ತಿಳಿಸಿದರು.
ಎಸ್.ಎನ್.ಕ್ರಿಯಾ ಟ್ರಸ್ಟ್ ವತಿಯಿಂದ ಶುಕ್ರವಾರ ನಗರದ ವಿವಿಧ ವಾರ್ಡುಗಳಲ್ಲಿ ಮನೆ ಮನೆಗೂ ತೆರಳಿ ಉಚಿತ ಮಾಸ್ಕ್ ಹಾಗು ಸೋಪು ವಿತರಣೆ ಮಾಡಿ ಅವರು ಮಾತನಾಡಿದರು.
ಆರೋಗ್ಯವೊಂದಿದ್ದರೆ ಜೀವನದಲ್ಲಿ ಏನಾದರೂ ಸಾಧಿಸಬಹುದು ಆ ನಿಟ್ಟಿನಲ್ಲಿ ನಾಗರಿಕರು ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಜೊತೆಗೆ ವೈಯಕ್ತಿಕ ಸ್ವಚ್ಚತೆ ಕಾಪಾಡಿಕೊಳ್ಳುವುದರಿಂದ ಕರೋನಾ ವೈರಸ್ ಹರಡುವುದನ್ನು ತಡೆಗಟ್ಟಬಹುದು. ದೇಶಾದ್ಯಂತ ಕರೋನಾ ಸೋಂಕು ಹರಡದಂತೆ ಜಾರಿಗೆ ತಂದಿರುವ ಲಾಕ್ ಡೌನ್‌ಗೆ ಜನತೆ ಉತ್ತಮವಾಗಿ ಸ್ಪಂದಿಸುತ್ತಿರುವುದು ಶ್ಲಾಘನೀಯ. ಸರ್ಕಾರದ ರೀತಿ ನೀತಿಗಳನ್ನು ಗೌರವಿಸುವ ಜೊತೆಗೆ ಪಾಲಿಸುವುದು ನಮ್ಮೆಲ್ಲರ ಕರ್ತವ್ಯ. ಪ್ರಪಂಚದ ಬೇರೆ ಬೇರೆ ದೇಶಗಳಲ್ಲಿ ಕರೋನಾ ವೈರಸ್ ನಿಂದಾದ ನಷ್ಟವನ್ನು ಕಂಡಿರುವ ನಾವುಗಳು ಅತ್ಯಂತ ಮುನ್ನೆಚ್ಚರಿಕೆಯಿಂದ ಇರುವುದು ಸೂಕ್ತ ಎಂದರು
ಕೊರೊನಾ ಸೋಂಕಿನ ವಿರುದ್ಧ ನಡೆಯುತ್ತಿರುವ ಸಂಘರ್ಷದಲ್ಲಿ ಒಂದೆಡೆ ವೈದ್ಯರು ಮತ್ತೊಂದೆಡೆ ಪೊಲೀಸರು ಸೇರಿದಂತೆ ಸಾವಿರಾರು ಸ್ವಯಂ ಸೇವಕರು ನಿಷ್ಠೆಯಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸುಮಾರು 130 ಕೋಟಿ ಜನಸಂಖ್ಯೆಯಿರುವ ದೇಶದಲ್ಲಿ 21 ದಿನಗಳ ಕಾಲ ಲಾಕ್ ಡೌನ್ ಮಾಡುವುದು ಎಂದರೆ ತಮಾಷೆಯ ಮಾತಲ್ಲ. ಇಂತಹ ಸಮಯದಲ್ಲಿ ಜನರು ತಮ್ಮ ತಮ್ಮ ಮನೆಗಳಲ್ಲಿಯೇ ಉಳಿದುಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಎಸ್.ಎನ್.ಕ್ರಿಯಾ ಟ್ರಸ್ಟ್ ಸದಸ್ಯರಾದ ಆನೂರು ದೇವರಾಜ್, ವಿಶ್ವನಾಥ್, ಅಫ್ಸರ್‌ಪಾಷ, ವೆಂಕಟೇಶ್, ಜಮೀರ್, ಸಾದಿಕ್, ಆನಂದ್ ಹಾಜರಿದ್ದರು.
- Advertisement -
- Advertisement -
- Advertisement -