ನಗರದ ತಾಲ್ಲೂಕು ಕಚೇರಿ ಮುಂದೆ ರೈತ ನಾಯಕ ಪ್ರೊ.ನಂಜುಂಡಸ್ವಾಮಿ ಸ್ಥಾಪಿತ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸದಸ್ಯರು ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಸೋಮವಾರ ಪ್ರಾರಂಭಿಸಿದರು.
ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಹೋಲಿಸಿದರೆ ಶಿಡ್ಲಘಟ್ಟ ತಾಲ್ಲೂಕಿಗೆ ಮಾತ್ರ ಮಲತಾಯಿ ಧೋರಣೆ ಮಾಡುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಜಿಲ್ಲೆಯ ಎಲ್ಲಾ ಕಡೆ ಎ.ಪಿ.ಎಂ.ಸಿ ಮಾರುಕಟ್ಟೆಗಳಿದ್ದು ಶಿಡ್ಲಘಟ್ಟ ತಾಲ್ಲೂಕಿಗೆ ಮಾತ್ರ ಇಲ್ಲವಾಗಿದೆ. ಈ ತಕ್ಷಣ ಎ.ಪಿ.ಎಂ.ಸಿ ಮಾರುಕಟ್ಟೆಗೆ ಸ್ಥಳ ನಿಗದಿಪಡಿಸಿಕೊಟ್ಟು ನಮ್ಮ ತಾಲ್ಲೂಕಿನ ರೈತರಿಗೆ ಅನುಕೂಲ ಮಾಡಿಕೊಡಬೇಕು. ಕೊಳಚೆ ನಿವಾಸಿಗಳಿಗೆ ಮನೆಗಳನ್ನು ನಿರ್ಮಿಸಿಕೊಡಬೇಕು ಎಂದು ಒತ್ತಾಯಿಸಿದರು.
ರೈತ ಸಂಘದ ರಾಜ್ಯ ಘಟಕದ ಗೌರವಾಧ್ಯಕ್ಷ ನಾರಾಯಣರೆಡ್ಡಿ, ಪದಾಧಿಕಾರಿ ನಾರಾಯಣರೆಡ್ಡಿ, ಜಿಲ್ಲಾ ಘಟಕದ ಅಧ್ಯಕ್ಷೆ ಸುಷ್ಮಾ ಶ್ರೀನಿವಾಸ್, ಪ್ರವೀಣ್‌ಕುಮಾರ್, ರಾಮುಶಿವಣ್ಣ, ಜಿ.ನಾರಾಯಣಸ್ವಾಮಿ, ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಎನ್.ವೆಂಕಟಲಕ್ಷ್ಮಯ್ಯ ಹಾಜರಿದ್ದರು.
- Advertisement -
- Advertisement -
- Advertisement -