ವಿದ್ಯಾರ್ಥಿಗಳು ಓದಿನ ಜತೆಗೆ ಕ್ರೀಡೆ, ಕಲೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಾಗ ಮಾತ್ರ ಪ್ರತಿಭಾವಂತರಾಗಲು ಸಾಧ್ಯವಾಗುತ್ತದೆ ಎಂದು ಜಂಗಮಕೋಟೆ ಗ್ರಾಮ ಪಂಚಾಯತಿ ಅಧ್ಯಕ್ಷೆ ರಹಮತ್ ಜಾನ್ ತಿಳಿಸಿದರು.
ತಾಲ್ಲೂಕಿನ ಜಂಗಮಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಜಂಗಮಕೋಟೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳ ಪ್ರತಿಭೆಯ ಅಭಿವ್ಯಕ್ತಿಗೆ ಸೂಕ್ತ ವೇದಿಕೆ ಕಲ್ಪಿಸುವುದಕ್ಕಾಗಿ ನಡೆಸುವ ಪ್ರತಿಭಾ ಕಾರಂಜಿ ಶಿಕ್ಷಣ ಇಲಾಖೆಯ ಮಹತ್ವದ ಕಾರ್ಯಕ್ರಮವಾಗಿದೆ. ಶಿಕ್ಷಕರು ಮಕ್ಕಳ ಪ್ರತಿಭೆಯನ್ನು ಶಾಲಾ ಹಂತದಲ್ಲಿ ಗುರುತಿಸಿ ಪ್ರೋತ್ಸಾಹಿಸಿದರೆ ಭವಿಷ್ಯದ ದಿನಗಳಲ್ಲಿ ಅಭಿರುಚಿ ಇರುವ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳುವಲ್ಲಿ ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಜಂಗಮಕೋಟೆ ಕ್ಲಸ್ಟರ್ನ 16 ಶಾಲೆಗಳಿಂದ 450 ಮಂದಿ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿಯ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ವಿವಿಧ ಶಾಲೆಗಳ 70 ಮಂದಿ ಶಿಕ್ಷಕರು ಪಾಲ್ಗೊಂಡಿದ್ದರು.
ಸಿ.ಆರ್.ಪಿ ಸುಂದರಾಚಾರಿ, ಎಸ್ಡಿಎಂಸಿ ಅಧ್ಯಕ್ಷರಾದ ಹೊಸಪೇಟೆ ಪಾಪಣ್ಣ, ಬಳುವನಹಳ್ಳಿ ಬಾಬು, ವೆಂಕಟಾಪುರ ಗ್ರಾಮ ಪಂಚಾಯತಿ ಅಧ್ಯಕ್ಷ ರಘು, ಶಿಕ್ಷಕರಾದ ಮುನಿರತ್ನಮ್ಮ, ಗೀತಾ, ರುದ್ರೇಶಮೂರ್ತಿ, ವೇಣು, ಮಾಧವಿ, ಬೈರಾರೆಡ್ಡಿ, ಸುಮಾ, ಈರಯ್ಯ ಮತ್ತಿತರರು ಹಾಜರಿದ್ದರು.
- Advertisement -
- Advertisement -
- Advertisement -
- Advertisement -