ತಾಲ್ಲೂಕಿನಾದ್ಯಂತ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪಲ್ಸ್ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಆರೋಗ್ಯವಂತ ಸಮಾಜವನ್ನು ನಿರ್ಮಿಸಲು ಪೋಷಕರು ಸಹಕರಿಸಬೇಕೆಂದು ಶಾಸಕ ಎಂ.ರಾಜಣ್ಣ ಹೇಳಿದರು.
ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾನುವಾರ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಕ್ಕಳಲ್ಲಿ ಶಾಶ್ವತ ಅಂಗವಿಕಲತೆ ಉಂಟು ಮಾಡಿ, ದೀರ್ಘಕಾಲ ಭೀಕರ ಪರಿಣಾಮ ಬೀರುವ ಪೋಲಿಯೋ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಹಾಗೂ ದೇಶವನ್ನು ಪೋಲಿಯೋ ಮುಕ್ತ ರಾಷ್ಟ್ರವನ್ನಾಗಿ ಮಾಡುವುದು ನಮ್ಮ ಆದ್ಯ ಕರ್ತವ್ಯ ಎಂದು ತಿಳಿಸಿದರು.
ತಹಶೀಲ್ದಾರ್ ಮನೋರಮಾ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅನಿಲ್ಕುಮಾರ್, ಸಾರ್ವಜನಿಕ ಆಸ್ಪತ್ರೆಯ ಅಭಿವೃದ್ಧಿ ಸಮಿತಿಯ ಸದಸ್ಯ ಶ್ರೀನಿವಾಸ್, ನಗರಸಭಾ ಸದಸ್ಯ ವೆಂಕಟಸ್ವಾಮಿ, ಪಲ್ಸ್ ಪೋಲಿಯೋ ಕಾರ್ಯಕ್ರಮದ ಅಧಿಕಾರಿ ಸುಧಾ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -