ಕನ್ನಡವೆಂದರೆ ಕೇವಲ ಭಾಷೆಯಲ್ಲ, ನಮ್ಮ ಗಾಳಿ, ಭೂಮಿ, ಪರಿಸರ, ಪಶು ಪಕ್ಷಿ ಕ್ರಿಮಿ ಕೀಟ ಎಲ್ಲವೂ ಒಳಗೊಳ್ಳುತ್ತದೆ ಎಂದು ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಲಕ್ಷ್ಮೀನಾರಾಯಣರೆಡ್ಡಿ ತಿಳಿಸಿದರು.
ತಾಲ್ಲೂಕಿನ ಅಪ್ಪೇಗೌಡನಹಳ್ಳಿ ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ಸೋಮವಾರ ಕನ್ನಡ ಸಾರಸ್ವತ ಪರಿಚಾರಿಕೆ ವತಿಯಿಂದ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಲೆಯ ಆವರಣ ಹಾಗೂ ಗ್ರಾಮದ ರುದ್ರಭೂಮಿಯಲ್ಲಿ ನೂರು ಗಿಡಗಳನ್ನು ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬರೂ ತಮ್ಮಿಂದಾಗುವ ಅಳಿಲು ಸೇವೆಯ ಮೂಲಕ ನಾಡನ್ನು ಹಸಿರುಮಯವನ್ನಾಗಿಸುವ ಪ್ರಯತ್ನ ಮಾಡಬೇಕು. ಪ್ಲಾಸ್ಟಿಕ್‌ಗೆ ಬದಲಾಗಿ ಬಟ್ಟೆ ಚೀಲ ಬಳಸಿ, ಮನೆಯ ಮುಂದೊಂದು ಗಿಡ ನೆಡಿ, ನೀರನ್ನು ಹಿತಮಿತವಾಗಿ ಬಳಸಿ, ಪರಿಸರ ಸಂರಕ್ಷಣೆ ಮಾಡುವ ಮೂಲಕ ಭೂಮಿಯ ರಕ್ಷಣೆ ಮಾಡೋಣ ಎಂದು ಹೇಳಿದರು.
ಕನ್ನಡ ಸಾರಸ್ವತ ಪರಿಚಾರಿಕೆ(ಕಸಾಪ) ಅಧ್ಯಕ್ಷ ಬಿ.ಆರ್.ಅನಂತಕೃಷ್ಣ ಮಾತನಾಡಿ, ನಮ್ಮ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಹಸಿರಿನ ಸಂರಕ್ಷಣೆ ಇಂದಿನ ತುರ್ತು ಅಗತ್ಯ. ಪರಿಸರ ಸ್ನೇಹಿ ಜೀವನ ಕ್ರಮ ಅಳವಡಿಸಿಕೊಳ್ಳಿ. ಪ್ರತಿಯೊಬ್ಬ ವಿದ್ಯಾರ್ಥಿಯೂ ಶಾಲೆಯ ಆವರಣದಲ್ಲಿ ನೆಟ್ಟ ಒಂದೊಂದು ಗಿಡವನ್ನು ದತ್ತು ತೆಗೆದುಕೊಂಡು ಪೋಶಿಸಬೇಕು. ಮುಂದಿನವರಿಗೆ ಹಸಿರು ಪರಿಸರವನ್ನು ಬಿಟ್ಟು ಹೋಗಲು ಪಣ ತೊಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕನ್ನಡ ಸಾರಸ್ವತ ಪರಿಚಾರಿಕೆ(ಕಸಾಪ) ವತಿಯಿಂದ ಶಾಲೆಯ ಗ್ರಂಥಾಲಯಕ್ಕೆ ಪರಿಸರ ಸಂಬಂಧಿತ ಪುಸ್ತಕಗಳನ್ನು ಉಡುಗೊರೆಯಾಗಿ ನೀಡಲಾಯಿತು.
ಗ್ರಾಮ ಪಂಚಾಯ್ತಿ ಅಧ್ಯಕ್ಷ ಮುನಿಯಪ್ಪ, ಸದಸ್ಯರಾದ ಜಯರಾಮ್, ಎ.ಎಂ.ತ್ಯಾಗರಾಜ್, ಸಾದಲಿ ವೆಂಕಟಾಚಲಪತಿ, ಮುಖ್ಯ ಶಿಕ್ಷಕಿ ವೆಂಕಟರತ್ನಮ್ಮ, ಶಿಕ್ಷಕರಾದ ಚಾಂದ್‌ಪಾಷ, ಅಶೋಕ್, ಭಾರತಿ, ಪಿಡಿಓ ಅಂಜನ್‌ಕುಮಾರ್, ಕಾರ್ಯದರ್ಶಿ ಶ್ರೀನಿವಾಸ್, ಎಸ್‌ಡಿಎಂಸಿ ಅಧ್ಯಕ್ಷೆ ಪುಷ್ಪ, ಸದಸ್ಯ ಹನುಮಂತರೆಡ್ಡಿ, ಗ್ರಾಮಸ್ಥರಾದ ನರಸಿಂಹಮೂರ್ತಿ, ಸಂಪತ್ತು, ವೆಂಕಟೇಶ್, ತಿರುಮಳಪ್ಪ, ವೆಂಕಟಮ್ಮ, ಮಂಜುಳಮ್ಮ, ಮುನಿರತ್ನಮ್ಮ, ಅಂಗನವಾಡಿ ಶಿಕ್ಷಕಿ ನಳಿನಮ್ಮ, ಸಹಾಯಕಿ ಲೀಲಮ್ಮ ಹಾಜರಿದ್ದರು.
- Advertisement -
- Advertisement -
- Advertisement -
- Advertisement -