ನಗರದ ಕೋಟೆ ವೃತದಲ್ಲಿ ಸುವರ್ಣ ಕರ್ನಾಟಕ ಜನ ಶಕ್ತಿ ವೇದಿಕೆ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸುವರ್ಣ ಕರ್ನಾಟಕ ಜನ ಶಕ್ತಿ ವೇದಿಕೆಯ ರಾಜ್ಯಧ್ಯಕ್ಷ ನಾಗೇನಹಳ್ಳಿ ಕೃಷ್ಣಮೂರ್ತಿ ಮಾತನಾಡಿದರು.
ರಾಜ್ಯೋತ್ಸವವು ಕೇವಲ ಒಂದು ದಿನಕ್ಕೆ ಸೀಮಿತವಾಗದೇ ನಿತ್ಯೋತ್ಸವವಾಗಬೇಕು. ಈ ನಿಟ್ಟಿನಲ್ಲಿ ನವೆಂಬರ್‌ಗೆ ಮಾತ್ರ ರಾಜ್ಯೋತ್ಸವ ಆಚರಿಸಿ ಕನ್ನಡದ ಮೇಲಿನ ಪ್ರೇಮವನ್ನು ವ್ಯಕ್ತಪಡಿಸುವುದಕ್ಕಿಂತ ವರ್ಷದ ಎಲ್ಲ ದಿನಗಳಲ್ಲೂ ಕನ್ನಡ ಭಾಷೆಯನ್ನು ಬಳಸುವ ಮೂಲಕ ಗೌರವಿಸಬೇಕು ಎಂದು ಅವರು ತಿಳಿಸಿದರು.
ನಾಡು, ನುಡಿ, ಜಲ, ಸಂಸ್ಕೃತಿ, ಸ್ವಾಭಿಮಾನಕ್ಕೆ ಧಕ್ಕೆಯಾದ ಸಂದರ್ಭದಲ್ಲಿ ಪ್ರತಿಯೊಬ್ಬರೂ ಹೋರಾಟ ನಡೆಸುವ ಮೂಲಕ ತಾಯಿ ಭುವನೇಶ್ವರಿ ರಕ್ಷಣೆಗೆ ನಿಲ್ಲಬೇಕು. ಕನ್ನಡ ಕೇವಲ ಭಾಷೆಯಲ್ಲ, ಬದಲಿಗೆ ನೂರಾರು ವರ್ಷಗಳ ಇತಿಹಾಸ ಹೊಂದಿರುವ ಸಾಹಿತ್ಯಾತ್ಮಕ ಧ್ವನಿಯಾಗಿದೆ. ಪ್ರತಿಯೊಬ್ಬರೂ ಕನ್ನಡ ಅಭಿವೃದ್ಧಿಗೆ ಕಂಕಣಬದ್ಧರಾಗಬೇಕಿದೆ ಎಂದರು.
ತಹಶೀಲ್ದಾರ್ ಎಂ.ದಯಾನಂದ್ ಮಾತನಾಡಿ, ಈ ರಾಜ್ಯೋತ್ಸವ ನಮಗೆ ಬರಬೇಕಾದರೆ ಹಲವರ ಪ್ರಾಣ ಬಲಿದಾನಗಳು ನಡೆದಿದೆ. ನಿಮ್ಮ ಮನೆ ಭಾಷೆ ಯಾವುದೇ ಇದ್ದರೂ ಮೊದಲ ಆದ್ಯತೆ ಕನ್ನಡಕ್ಕೆ ನೀಡಿ. ಕನ್ನಡ ಭಾಷೆಯನ್ನು ಹೆಚ್ಚು ಗೌರವಿಸಿ ಎಂದರು.
ಈ ಸಂದರ್ಭದಲ್ಲಿ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ವಾದ್ಯಗೋಷ್ಠಿಯನ್ನು ಆಯೋಜಿಸಲಾಗಿದ್ದು, ಕನ್ನಡ ಪ್ರೇಮವನ್ನು ಬಿಂಬಿಸುವ ಗೀತೆಗಳನ್ನು ಹಾಡಲಾಯಿತು. ಸುವರ್ಣ ಕರ್ನಾಟಕ ಜನ ಶಕ್ತಿ ವೇದಿಕೆಯ ತಾಲ್ಲೂಕು ಪದಾಧಿಕಾರಿಗಳ ತಂದೆ ತಾಯಿಯರನ್ನು ಸನ್ಮಾನಿಸಲಾಯಿತು.
ರಾಜ್ಯ ಸಮಿತಿ ಸದಸ್ಯ ಮಹಮ್ಮದ್ ಅಲಿ, ಸಂಜೀವಪ್ಪ, ಜಿಲ್ಯಾಧ್ಯಕ್ಷ ಮಂಜುನಾಥ್‌ರೆಡ್ಡಿ, ಮಹಿಳಾ ಘಟಕ ಸಂಚಾಲಕಿ ಜಾನಕಿ ಮೋಹನ್, ರಾಜ್ಯ ಸಂಘಟನಾ ಕಾರ್ಯದರ್ಶಿ ನವೀನ್ ಕುಮಾರ್, ರಾಜ್ಯ ಕಾರ್ಮಿಕ ಘಟಕ ಅಧ್ಯಕ್ಷ ಹನುಮಂತರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರೇಶ್, ತಾಲ್ಲೂಕು ಅಧ್ಯಕ್ಷ ಬೈರಾರೆಡ್ಡಿ, ಮಹಿಳಾ ಘಟಕ ಅಧ್ಯಕ್ಷೆ ಗಾಯಿತ್ರಮ್ಮ, ನಗರಾಧ್ಯಕ್ಷ ಮಧುಕುಮಾರ್, ಉಪಾಧ್ಯಕ್ಷ ಸುರೇಶ್, ಅಂಬರೀಶ್, ಕಾರ್ಮಿಕ ಘಟಕ ಅಧ್ಯಕ್ಷ ಗಂಗಾಧರ್, ಸದಸ್ಯರಾದ ಮಂಜುನಾಥ್, ಚಂದ್ರು, ಕೃಷ್ಣಪ್ಪ, ಹೇಮಂತ್, ಮಂಜು, ಆನಂದ್, ನಗರಸಭೆ ಸದಸ್ಯ ನಾರಾಯಣಸ್ವಾಮಿ, ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ, ತಾದೂರು ಮಂಜುನಾಥ್, ರವಿಕ್ರಪಾಶ್, ಆನೂರು ದೇವರಾಜು, ಮುನಿರಾಜು ಹಾಜರಿದ್ದರು.