Home News ಕಾಂಗ್ರೆಸ್ ತೊರೆದು ಜೆಡಿಎಸ್‌ ಸೇರಿದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮತ್ತು ಬೆಂಬಲಿಗರು

ಕಾಂಗ್ರೆಸ್ ತೊರೆದು ಜೆಡಿಎಸ್‌ ಸೇರಿದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮತ್ತು ಬೆಂಬಲಿಗರು

0

ತಾಲ್ಲೂಕಿನ ಮಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶನಿವಾರ ಚುನಾವಣೆ ಪ್ರಚಾರ ನಡೆಸುವಾಗ ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಮಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಧ ಶಿವಕುಮಾರ್, ಸದಸ್ಯ ವಿ.ರವಿಕುಮಾರ್ ಹಾಗೂ ಬೆಂಬಲಿಗರನ್ನು ಪಕ್ಷಕ್ಕೆ ಜೆಡಿಎಸ್ ಅಭ್ಯರ್ಥಿ ಬಿ.ಎನ್. ರವಿಕುಮಾರ್ ಬರಮಾಡಿಕೊಂಡರು.
ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸುವುದು, ಮೂಲ ಭೂತ ಸೌಕರ್ಯ, ಉದ್ಯೋಗ ಹಾಗೂ ಅಭಿವೃದ್ಧಿ ನಮ್ಮ ಮುಖ್ಯ ಗುರಿಯಾಗಿದೆ ಎಂದು ಈ ಸಮಯದಲ್ಲಿ ಅವರು ತಿಳಿಸಿದರು.
ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಿಂದ ರಾಜ್ಯದ ಅಭಿವೃದ್ಧಿ ಅಸಾಧ್ಯ ಎಂದು ಅರಿತಿರುವ ರಾಜ್ಯದ ಜನತೆ ಈ ಭಾರಿಯ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿಸಲಿದ್ದು ರಾಜ್ಯದ ಅಧಿಕಾರ ಚುಕ್ಕಾಣಿ ಹಿಡಿಯುವುದು ಶತಸಿದ್ದ.
2018 ರ ಚುನಾವಣೆಯಲ್ಲಿ ಎಚ್.ಡಿ.ಕುಮಾರಸ್ವಾಮಿಯವರ ಕೈ ಬಲಪಡಿಸುವ ನಿಟ್ಟಿನಲ್ಲಿ ಕ್ಷೇತ್ರದಾದ್ಯಂತ ಈಗಾಗಲೇ ಬಿರುಸಿನ ಚುನಾವಣೆ ಪ್ರಚಾರ ಕೈಗೊಂಡಿದ್ದು, ಕಳೆದ ಅವರ 20 ತಿಂಗಳ ಮುಖ್ಯಮಂತ್ರಿಯ ಅವಧಿಯಲ್ಲಿ ಜಾರಿ ಮಾಡಿದ ವಿವಿಧ ಜನಪರ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ನೀಡುವ ಮೂಲಕ ಪಕ್ಷ ಸಂಘಟನೆಗೆ ಹೆಚ್ಚಿನ ಆಧ್ಯತೆ ನೀಡಲಾಗುತ್ತಿದೆ ಎಂದರು.
ಕ್ಷೇತ್ರದಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಈ ಭಾರಿಯೂ ಕ್ಷೇತ್ರದಲ್ಲಿ ಜೆಡಿಎಸ್ ಅಧಿಕಾರ ಹಿಡಿಯಲಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಶಿವಕುಮಾರ್, ಎಂ.ಕೆ.ಗಿರೀಶ್, ಸಿ.ಎಂ.ಸೊಣ್ಣಪ್ಪ, ಅಮರೇಂದ್ರ, ಸುರೇಂದ್ರಬಾಬು, ಹರೀಶ್, ಮನೋಹರ ಸೇರಿದಂತೆ ಐವತ್ತಕ್ಕೂ ಹೆಚ್ಚು ಮಂದಿ ಯುವಕರು ಜೆಡಿಎಸ್ ಸೇರ್ಪಡೆಗೊಂಡರು.