Home News ಕಾಮಗಾರಿಗಳ ಪರಿಶೀಲನೆ ಮಾಡಿದ ನಗರಸಭೆ ಅಧ್ಯಕ್ಷ

ಕಾಮಗಾರಿಗಳ ಪರಿಶೀಲನೆ ಮಾಡಿದ ನಗರಸಭೆ ಅಧ್ಯಕ್ಷ

0

ನಗರಸಭೆ ಸಾಮಾನ್ಯ ಸಭೆ ದಿನಾಂಕ ನಿಗಧಿಗೊಳಿಸಿ ಅತಿ ತ್ವರಿತವಾಗಿ ಕಾಮಗಾರಿಗಳನ್ನು ನಡೆಸಬೇಕಾಗಿರುವುದರಿಂದ ನಗರಸಭೆ ವ್ಯಾಪ್ತಿಯಲ್ಲಿ ಎಸ್‌ಎಫ್‌ಸಿ ಯೋಜನೆಯಡಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ನಗರಸಭೆ ಅಧ್ಯಕ್ಷ ಅಫ್ಸರ್‌ಪಾಷ ತಿಳಿಸಿದರು.
ನಗರದ ಬಸ್ ನಿಲ್ದಾಣದ ಸಮೀಪವಿರುವ ಪಂಪ್‌ಹೌಸ್ ಬಳಿ ನಿರ್ಮಿಸಲಾಗುತ್ತಿರುವ ನೀರಿನ ಟ್ಯಾಂಕ್ ಸೇರಿದಂತೆ ೮ ನೇ ವಾರ್ಡಿನಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಶೌಚಾಲಯ ಕಾಮಗಾರಿ ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳ ಕಾಮಗಾರಿ ಪರಿಶೀಲನೆಯನ್ನು ಶುಕ್ರವಾರ ನಡೆಸಿ ಅವರು ಮಾತನಾಡಿದರು.
ನಗರಸಭೆ ಸಾಮಾನ್ಯಸಭೆ ಕರೆದು ನಾಲ್ಕು ತಿಂಗಳಾಗಿದ್ದು ತ್ವರಿತವಾಗಿ ಸಾಮಾನ್ಯ ಸಭೆ ನಡೆಸುವುದರಿಂದ ಸಭೆಯಲ್ಲಿ ಸದಸ್ಯರು ನಗರಸಭೆ ವ್ಯಾಪ್ತಿಯಲ್ಲಿ ಯಾವ ಯಾವ ಕಾಮಗಾರಿ ನಡೆಯುತ್ತಿದೆ ಎನ್ನುವುದರ ಬಗ್ಗೆ ಮಾಹಿತಿ ಕೇಳಿದರೆ ಉತ್ತರಿಸಬೇಕಾಗಿರುತ್ತದೆ. ಅದಕ್ಕಾಗಿ ನಗರಸಭೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಪರಿಶೀಲನೆಯನ್ನು ಅಧಿಕಾರಿಗಳ ಜೊತೆಗೂಡಿ ನಡೆಸಲಾಗುತ್ತಿದೆ ಎಂದರು.
ಈಗಾಗಲೆ ಕೆಲವು ಕಾಮಗಾರಿಗಳು ಪೂರ್ಣಗೊಂಡಿದ್ದು ಇನ್ನು ಕೆಲವು ಕಾಮಗಾರಿಗಳು ಅರ್ಧಕ್ಕೆ ನಿಂತಿವೆ. ಸಂಬಂಧಪಟ್ಟ ಕಾಮಗಾರಿಗಳ ಗುತ್ತಿಗೆದಾರರು ತ್ವರಿತವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸೂಚಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಪೌರಾಯುಕ್ತ ಜಿ.ಎನ್.ಚಲಪತಿ, ಕಿರಿಯ ಅಭಿಯಂತರರಾದ ಗಂಗಾಧರ್, ಪ್ರಸಾದ್, ಮುಖಂಡ ಎಸ್.ಎಂ.ರಮೇಶ್ ಹಾಜರಿದ್ದರು.

error: Content is protected !!