ನಗರದ ಎರಡನೇ ವಾರ್ಡಿನಲ್ಲಿ ಚರಂಡಿಗಳನ್ನು ಸರಿಯಾಗಿ ಸ್ವಚ್ಛ ಮಾಡದೆ ಹಾಗೂ ಕುಡಿಯುವ ನೀರಿನ ಪೈಪ್‌ಲೈನ್ ಸರಿಪಡಿಸದ ಕಾರಣ ಕುಡಿಯುವ ನೀರಿನೊಂದಿಗೆ ತ್ಯಾಜ್ಯದ ನೀರು ಮಿಶ್ರಿತವಾಗಿ ಬರುತ್ತಿದೆ.
ಈ ಭಾಗದಲ್ಲಿ ಸ್ವಚ್ಛತೆ ಮರೀಚಿಕೆಯಾಗಿದೆ. ಸಂತೆ ಬೀದಿಯ ಬಳಿಯಲ್ಲೇ ಇರುವುವ ಇಲ್ಲಿ ರಸ್ತೆ ಬದಿಯಲ್ಲಿ ಬಿದ್ದ ಕಸವನ್ನು ಸ್ವಚ್ಚ ಮಾಡದೆ ಕಸ ಕೊಳೆತು ದುರ್ನಾತ ಬೀರುತ್ತಿದೆ. ಕಸದಿಂದ ಸೊಳ್ಳೆಗಳ ಉತ್ಪಾದನೆ ಹೆಚ್ಚಾಗಿ ಸುತ್ತಮುತ್ತಲಿನ ಜಾಗಗಳಲ್ಲಿ ಸೊಳ್ಳೆ ನೊಣಗಳ ಕಾಟ ಜಾಸ್ತಿಯಾಗಿದೆ. ಡೆಂಗ್ಯೂ, ಚಿಕನ್ ಗುನ್ಯಾ ಮತ್ತಿತತರ ಕಾಯಿಲೆಗಳು ಬರುವ ಬೀತಿಯಿಂದ ಆತಂಕ ಪಡುವಂತಾಗಿದೆ ಎಂದು ಇಲ್ಲಿನ ನಿವಾಸಿ ವಿಜಯ್ ತಿಳಿಸಿದ್ದಾರೆ.
ಈಗಾಗಲೇ ಈ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದ್ದರೂ ಸೂಕ್ತ ಕ್ರಮ ಕೈಗೊಂಡಿಲ್ಲ. ಈಗಲಾದರೂ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಚರಂಡಿಗಳನ್ನು, ಕಸದ ರಾಶಿಗಳನ್ನು ಸ್ವಚ್ಚಮಾಡಬೇಕೆಂದು ಇಲ್ಲಿನ ನಿವಾಸಿಗಳು ಆಗ್ರಹಿಸಿದ್ದಾರೆ.
- Advertisement -
- Advertisement -
- Advertisement -
- Advertisement -