ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಶುಕ್ರವಾರ ನಗರದ ವಿವಿಧ ಮುಸ್ಲಿಂ ಸಂಘಟನೆಯ ಸದಸ್ಯರು ಪ್ರತಿಭಟನಾ ಮೆರವಣಿಗೆಯನ್ನು ನಡೆಸಿ ತಹಶೀಲ್ದಾರ್ ಎಂ.ದಯಾನಂದ್ ಅವರಿಗೆ ಮನವಿಯನ್ನು ಸಲ್ಲಿಸಿದರು.
ಪ್ರತಿಭಟನಾ ಮೆರವಣಿಗೆಯಲ್ಲಿ ತಾಲ್ಲೂಕು ಕಚೇರಿಗೆ ಆಗಮಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಷ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಧರ್ಮದ ಆಧಾರದಲ್ಲಿ ದೇಶವನ್ನು ಒಡೆಯಲು ಮುಂದಾಗಿದೆ. ಒಂದು ದೇಶ ಒಂದು ಕಾನೂನು ಎನ್ನುತ್ತಲೇ ಸರ್ಕಾರ ಎರಡು ಕಾನೂನು ಮಾಡಲು ಮುಂದಾಗಿದೆ. ಕೇಂದ್ರ ಸರ್ಕಾರದ ಈ ತಿದ್ದುಪಡಿ ದೇಶದ ನೈತಿಕ, ಸಾಂವಿಧಾನಿಕ ಹಾಗೂ ಜಾತ್ಯಾತೀತ ಪರಂಪರೆಗೆ ವಿರುದ್ಧವಾಗಿದೆ. ಪೌರತ್ವ ಮಸೂದೆ ಧಾರ್ಮಿಕ ನೆಲೆಯ ತಾರತಮ್ಯವಾಗಿದ್ದು, ನಮ್ಮ ಸಂವಿಧಾನ ಪರಿಚ್ಛೇದ ೧೪ ಮತ್ತು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಪೌರತ್ವ ತಿದ್ದುಪಡಿ ಮಸೂದೆಯನ್ನು ಹಿಂಪಡೆಯುವಂತೆ ರಾಷ್ಟ್ರಪತಿಗಳಿಗೆ ತಹಶಿಲ್ದಾರ್ ಎಂ.ದಯಾನಂದ್ ಅವರ ಮೂಲಕ ಮನವಿಯನ್ನು ಸಲ್ಲಿಸಿದರು.
ಜಾಮಿಯಾ ಮಸೀದಿ ಸಮಿತಿ ಅಧ್ಯಕ್ಷ ತಾಜ್ ಪಾಷ, ಕಾರ್ಯದರ್ಶಿ ಹೈದರ್ ವಲಿ ಪದಾಧಿಕಾರಿಗಳು, ಮದೀನ ಮಸೀದಿ ಅಧ್ಯಕ್ಷ ಫಯಾಜ್ ಸಾಬ್, ಯೂನಿಟಿ ಸಿಲ್‌ಸಿಲಾ ಫೌಂಡೇಶನ್ ಅಧ್ಯಕ್ಷ ಮೊಹಮ್ಮದ್ ಅಸದ್, ಆಮೀರಿಯಾ ಮಸೀದಿ ಬಾಬ ಜಾನ್, ಟಿಪ್ಪು ಮೌಲ ಹಾಗೂ ಇತರೆ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು.
- Advertisement -
- Advertisement -
- Advertisement -







