ಕೋಚಿಮುಲ್ ತಾಲ್ಲೂಕು ಉಪಕಚೇರಿ ನಿರ್ಮಿಸಲು ಸರ್ಕಾರದಿಂದ ನಾಲ್ಕು ಗುಂಟೆ ಜಮೀನು ಮಂಜೂರಾಗಿದ್ದು ಒಕ್ಕೂಟದಿಂದ ಬಿಡುಗಡೆಯಾಗಿರುವ ಸುಮಾರು ೬೦ ಲಕ್ಷ ರೂ ವೆಚ್ಚದಲ್ಲಿ ಎರಡಂತಸ್ತಿನ ನೂತನ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದು ಕೋಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ ತಿಳಿಸಿದರು.
ನಗರದ ಬೈಪಾಸ್ ರಸ್ತೆಯಲ್ಲಿ ಕೋಚಿಮುಲ್ ತಾಲ್ಲೂಕು ಉಪಕಚೇರಿ ನಿರ್ಮಿಸಲು ಸರ್ಕಾರದಿಂದ ಮಂಜೂರಾಗಿರುವ ಜಮೀನಿನಲ್ಲಿ ಸೋಮವಾರ ಕಟ್ಟಡ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ತಾಲ್ಲೂಕಿನಲ್ಲಿ ಕಳೆದ ೨೫ ವರ್ಷಗಳಿಂದ ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕೋಚಿಮುಲ್ ಶಿಬಿರ ಘಟಕಕ್ಕೆ ಸರ್ಕಾರದಿಂದ ಜಮೀನು ಮಂಜೂರು ಮಾಡಿಸಿ ಒಕ್ಕೂಟದಿಂದ ನೀಡುವ ಅನುಧಾನದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಿಸಲಾಗುವುದು.
ಈಗಾಗಲೇ ಒಕ್ಕೂಟದಿಂದ ೬೦ ಲಕ್ಷ ಅನುದಾನ ಬಿಡುಗಡೆಯಾಗಿದ್ದು ಕೂಡಲೇ ಕಟ್ಟಡ ನಿರ್ಮಾಣ ಕಾರ್ಯ ಶುರು ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಕೋಚಿಮುಲ್ ಶಿಡ್ಲಘಟ್ಟ ಶಿಬಿರ ಘಟಕದ ಉಪವ್ಯವಸ್ಥಾಪಕ ಬಿ.ಎಸ್.ಹನುಮಂತರಾವ್, ವಿಸ್ತರಣಾಧಿಕಾರಿ ಉಮೇಶ್‌ರೆಡ್ಡಿ, ಶ್ರೀನಿವಾಸ್, ಸಿಬ್ಬಂದಿ ಕುಮ್ಮಣ್ಣ, ಬೋದಗೂರು ಚಂದ್ರೇಗೌಡ ಹಾಜರಿದ್ದರು.
- Advertisement -
- Advertisement -
- Advertisement -