Home News ಕ್ರೀಡಾಸಕ್ತಿಯನ್ನು ಬೆಳಸಿಕೊಳ್ಳಲು ಕರೆ

ಕ್ರೀಡಾಸಕ್ತಿಯನ್ನು ಬೆಳಸಿಕೊಳ್ಳಲು ಕರೆ

0

ಮಕ್ಕಳು ಪಾಠ ಪ್ರವಚನಗಳ ಜೊತೆಗೆ ಕ್ರೀಡಾಸಕ್ತಿಯನ್ನು ಬೆಳಸಿಕೊಳ್ಳಬೇಕೆಂದು ಡಾಲ್ಫಿನ್ ಶಾಲೆಯ ಪ್ರಾಂಶುಪಾಲ ಥಾಮಸ್ ಫಿಲಿಪ್ಸ್ ತಿಳಿಸಿದರು.
ನಗರದ ನೆಹರು ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಡಾಲ್ಫಿನ್ ಶಾಲೆಯ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳು ವರ್ಷ ಪೂರ್ತಿ ಓದಿನ ಕಡೆಗೆ ಗಮನ ಹರಿಸುವುದರಲ್ಲಿ ಮಗ್ನರಾಗಿರುತ್ತಾರೆ. ಅವರಲ್ಲಿರುವ ಕ್ರೀಡಾಪ್ರತಿಭೆಯನ್ನು ಗುರ್ತಿಸಲು ಇಂತಹ ಶಾಲಾ ಕ್ರಿಡಾಕೂಟ ಸಹಕಾರಿಯಾಗುತ್ತದೆ. ಪ್ರತಿಭೆ ಎನ್ನುವುದು ಎಲ್ಲರಲ್ಲಿಯೂ ಇರುತ್ತದೆ. ಸಮಯ, ಸಂದರ್ಭ ಒದಗಿಬಂದಾಗ ಆ ಪ್ರತಿಭೆ ಅನಾವರಣಗೊಳ್ಳುತ್ತದೆ. ಮಕ್ಕಳು ಎಲ್ಲರೂ ಸಂತೋಷದಿಂದ ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾರೆ. ಚಿಕ್ಕಂದಿನಿಂದಲೇ ಕ್ರೀಡೆಯನ್ನು ಮೈಗೂಡಿಸಿಕೊಂಡರೆ ಭವಿಷ್ಯದಲ್ಲಿ ಉತ್ತಮ ಕ್ರೀಡಾಪಟುಗಳಾಗಿ ರೂಪುಗೊಳ್ಳುತ್ತಾರೆ ಎಂದು ತಿಳಿಸಿದರು.
ರಿಲೆ, ಲಾಂಗ್‌ಜಂಪ್, ಗೋಣಿ ಚೀಲ ಓಟ, ಗುಂಡು ಎಸೆತ ಮುಂತಾದ ಕ್ರೀಡೆಗಳನ್ನು ಆಡಿಸಲಾಯಿತು. ವಿಜೇತ ಮಕ್ಕಳಿಗೆ ಪ್ರಶಸ್ತಿಪತ್ರ, ಫಲಕ ನೀಡಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರಾದ ಸುನಿತ, ಭರತ್, ರಮೇಶ್, ಮಾಲತಿ, ವಸಂತ್, ಶ್ರೀನಿವಾಸ್ ಹಾಜರಿದ್ದರು.