Home News ಕ್ಲಸ್ಟರ್‌ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಚಾಲನೆ

ಕ್ಲಸ್ಟರ್‌ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಚಾಲನೆ

0

ಪ್ರತಿ ಮಕ್ಕಳಲ್ಲೂ ವಿಶೇಷ ಪ್ರತಿಭೆಯಿರುತ್ತದೆ. ಅದಕ್ಕಾಗಿ ಮಕ್ಕಳಿಗೆ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸುವ ನಿಟ್ಟಿನಿಂದ ಪ್ರತಿಭಾ ಕಾರಂಜಿಯನ್ನು ನಡೆಸಲಾಗುತ್ತದೆ ಎಂದು ಶಿಕ್ಷಣ ಸಂಯೋಜಕ ಭಾಸ್ಕರಗೌಡ ತಿಳಿಸಿದರು.
ನಗರದ ಶ್ರೀಗರುಡಾದ್ರಿ ಪಬ್ಲಿಕ್‌ ಶಾಲೆಯಲ್ಲಿ ಮಂಗಳವಾರ ನಡೆದ ನಗರ ಕ್ಲಸ್ಟರ್‌ ಮಟ್ಟದ ಪ್ರತಿಭಾ ಕಾರಂಜಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ತಾಲ್ಲೂಕಿನಾದ್ಯಂತ 20 ಕ್ಲಸ್ಟರ್‌ಗಳಾಗಿ ವಿಂಗಡಿಸಲಾಗಿದೆ. ನಗರ ಕ್ಲಸ್ಟರ್‌ನ ಪ್ರತಿಭಾ ಕಾರಂಜಿಯಲ್ಲಿ 36 ಪ್ರಾಥಮಿಕ ಶಾಲೆಗಳ ಮಕ್ಕಳು ಭಾಗವಹಿಸಿದ್ದಾರೆ. ವೈಯಕ್ತಿಕ ವಿಭಾಗದಲ್ಲಿ 10 ಸ್ಪರ್ಧೆಗಳು, ಸಾಮೂಹಿಕ ವಿಭಾಗದಲ್ಲಿ 5 ಸ್ಪರ್ಧೆಗಳನ್ನು ನಡೆಸಲಾಗುತ್ತಿದ್ದು, ವಿಜೇತರು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗುತ್ತಾರೆ ಎಂದು ಹೇಳಿದರು.
ಕ್ಷೇತ್ರ ಸಂಪನ್ಮೂಲ ವ್ಯಕ್ತಿ ರಾಜು, ಗುಚ್ಛ ಸಂಪನ್ಮೂಲ ವ್ಯಕ್ತಿಗಳಾದ ಸಿ.ಕೆ.ಶ್ರೀನಿವಾಸರೆಡ್ಡಿ, ಸಿ.ಬಿ.ಪ್ರಕಾಶ್‌, ನರಸಿಂಹರಾಜು, ಸುರೇಶ್‌, ಜನಾರ್ಧನ, ಶ್ರೀಗರುಡಾದ್ರಿ ಪಬ್ಲಿಕ್‌ ಶಾಲೆಯ ಮುಖ್ಯ ಶಿಕ್ಷಕಿ ಕಾವ್ಯಶ್ರೀ, ಶಿಕ್ಷಕರಾದ ವಿ.ಕೃಷ್ಣ, ಕೆ.ಮುನಿಯಪ್ಪ ಹಾಜರಿದ್ದರು.