17.1 C
Sidlaghatta
Tuesday, January 13, 2026

ಖಾಸಗಿ ಬಸ್ ಡಿಕ್ಕಿ: ರಸ್ತೆ ದಾಟುತ್ತಿದ್ದ ಶಾಲಾ ಬಾಲಕ ಸ್ಥಳದಲ್ಲೆ ಸಾವು

- Advertisement -
- Advertisement -

ರಸ್ತೆ ದಾಟುತ್ತಿದ್ದ ಶಾಲಾ ಬಾಲಕನಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದು ಬಾಲಕ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.
ತಾಲ್ಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ೧೧ನೇ ಮೈಲಿಗಲ್ಲು ಬಳಿ ಮಂಗಳವಾರ ನಡೆದ ಅಪಘಾತದಲ್ಲಿ ಗಂಜಿಗುಂಟೆಯ ವಿನಾಯಕ ಟ್ರಸ್ಟ್ ಶಾಲೆಯ ಹರೀಶ್(೭) ಸ್ಥಳದಲ್ಲೆ ಮೃತಪಟ್ಟ ದುರ್ದೈವಿ.
ಚಿಂತಾಮಣಿ ತಾಲ್ಲೂಕು ನಾಯನಹಳ್ಳಿಯ ಶಾಲೆಯ ೨ನೇ ತರಗತಿಯ ಈ ಬಾಲಕ ಶಾಲೆ ಮುಗಿಸಿಕೊಂಡು ಶಾಲಾ ವಾಹನದಲ್ಲಿ ೧೧ನೇ ಮೈಲಿಗಲ್ಲು ಕ್ರಾಸ್‌ನಲ್ಲಿ ಇಳಿದು ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ.
ದಿಬ್ಬೂರಹಳ್ಳಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಖಾಸಗಿ ಬಸ್‌ನ್ನು ವಶಕ್ಕೆ ಪಡೆದಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!