ನಗರದ ಹೊರವಲಯದ ಇದ್ಲೂಡು ಗ್ರಾಮದ ಶ್ರೀ ಗಂಗಾದೇವಿ ದೇವಾಲಯದಲ್ಲಿ ಶುಕ್ರವಾರ ಶ್ರೀ ಗಂಗಾದೇವಿಯ ನೂತನ ಶಿಲಾವಿಗ್ರಹ ಪ್ರತಿಷ್ಠಾಪನೆ ಮಹೋತ್ಸವವನ್ನು ನಡೆಸಲಾಯಿತು.
ಬೆಳಿಗ್ಗೆ ಸುಪ್ರಭಾತ ವೇದಪಾರಾಯಣ, ಹೋಮಗಳು, ಕುಂಭಾಭಿಷೇಕ, ಅಷ್ಟಾವಧಾನ ಸೇವೆ, ಮಹಾಮಂಗಳಾರತಿ ಮತ್ತು ತೀರ್ಥಪ್ರಸಾದ ವಿನಿಯೋಗ ಮಾಡಲಾಯಿತು. ಬುಧವಾರದಿಂದ ಪ್ರಾರಂಭವಾಗಿದ್ದ ಪೂಜಾ ಕಾರ್ಯಕ್ರಮಗಳು ಶುಕ್ರವಾರ ಪೂರ್ಣಗೊಂಡಿತು.
ಪೂಜಾ ಕಾರ್ಯಕ್ರಮದಲ್ಲಿ ಸುತ್ತಮುತ್ತಲಿನ ಗ್ರಾಮಗಳು ಹಾಗೂ ನಗರ ಪ್ರದೇಶದಿಂದ ಭಕ್ತರು ಪಾಲ್ಗೊಂಡಿದ್ದರು. ಜೆಡಿಎಸ್ ಮುಖಂಡ ಮೇಲೂರು ಬಿ.ಎನ್.ರವಿಕುಮಾರ್, ನಗರಸಭೆ ಸದಸ್ಯ ಲಕ್ಷ್ಮಣ್, ಇದ್ಲೂಡು ವಿ.ರಮೇಶ್, ಅನಸೂಯಮ್ಮ, ಅರ್ಚಕ ನವೀನ್ ಕುಮಾರ್ ಹಾಜರಿದ್ದರು.
- Advertisement -
- Advertisement -
- Advertisement -