ಮುಂಬರುವ ಅಕ್ಟೋಬರ್ ೨ರ ಗಾಂಧಿ ಜಯಂತಿ ಒಳಗೆ ಜಿಲ್ಲೆಯ ಎರಡು ತಾಲ್ಲೂಕುಗಳಾದ ಶಿಡ್ಲಘಟ್ಟ ಹಾಗು ಗುಡಿಬಂಡೆಯನ್ನು ಬಯಲು ಬಹಿರ್ದಿಸೆ ಮುಕ್ತ ತಾಲ್ಲೂಕುಗಳನ್ನಾಗಿ ಮಾಡಲು ಧೃಡ ಸಂಕಲ್ಪ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯ್ತಿ ಉಪಕಾರ್ಯದರ್ಶಿ ಸಿದ್ದರಾಮಯ್ಯ ಹೇಳಿದರು.
ತಾಲ್ಲೂಕಿನ ಹೊಸಪೇಟೆ ಗ್ರಾಮ ಪಂಚಾಯ್ತಿಯ ಮಲ್ಲೇನಹಳ್ಳಿ ಗ್ರಾಮದಲ್ಲಿ ಸಾಮೂಹಿಕವಾಗಿ ನಿರ್ಮಿಸುತ್ತಿರುವ ಶೌಚಾಲಯ ಕಾಮಗಾರಿಯನ್ನು ಗುರುವಾರ ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಖಾತೆ ರಾಜ್ಯ ಸಚಿವ ಎಚ್.ಕೆ.ಪಾಟೀಲ್ ಅವರ ಸೂಚನೆಯಂತೆ ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಬಯಲು ಬಹಿರ್ದಿಸೆ ಮುಕ್ತ ಮಾಡಲು ಯೋಜನೆಯನ್ನು ರೂಪಿಸಲಾಗಿದೆ. ಆದರಂತೆ ಜಿಲ್ಲೆಯ ಶಿಡ್ಲಘಟ್ಟ ಮತ್ತು ಗುಡಿಬಂಡೆ ತಾಲ್ಲೂಕುಗಳನ್ನು ಅಕ್ಟೋಬರ್ ೨ ರ ಗಾಂಧಿ ಜಯಂತಿ ಒಳಗೆ ಬಹಿಲು ಬಹಿರ್ದೆಸೆ ತಾಲ್ಲೂಕುಗಳಾಗಿ ಘೋಷಿಸುವ ನಿಟ್ಟಿನಲ್ಲಿ ಎಲ್ಲಾ ಗ್ರಾಮ ಪಂಚಾಯ್ತಿ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯ್ತಿ ಜನಪ್ರತಿನಿಧಿಗಳ ಸಹಕಾರ ಪಡೆದು ಪ್ರಗತಿ ಸಾಧಿಸಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಏಪ್ರಿಲ್, ಮೇ ಮತ್ತು ಜೂನ್ ತಿಂಗಳಿನಲ್ಲಿ ೧೯೦೦ ಕಾರ್ಯಾದೇಶ ಹೊರಡಿಸಿದ್ದು. ಜುಲೈ ಮೊದಲ ವಾರದಲ್ಲಿ ಉಳಿದ ೮೫೦೦ ಫಲಾನುಭವಿಗಳಿಗೆ ದಾಖಲೆಯ ಕಾರ್ಯಾದೇಶ ವಿತರಿಸಲಾಗಿದೆ. ಕಾರ್ಯಾದೇಶ ಪಡೆದ ಎಲ್ಲಾ ಫಲಾನುಭವಿಗಳು ಶೌಚಾಲಯ ನಿರ್ಮಿಸಿಕೊಳ್ಳಲು ಪ್ರೇರೇಪಿಸುವ ಕಾರ್ಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಂದ ಆಗಬೇಕೆಂದರು.
ಪರಿಶಿಷ್ಠ ಜಾತಿ ಹಾಗೂ ಪಂಗಡದ ಫಲಾನುಭವಿಗಳು ಶೌಚಾಲಯ ನಿರ್ಮಿಸಿಕೊಂಡರೆ ೧೫,೦೦೦ ರೂಗಳು ಮತ್ತು ಇತರೆ ಸಾಮಾನ್ಯ ವರ್ಗದ ಫಲಾನುಭವಿಗಳು ಶೌಚಾಲಯ ನಿರ್ಮಿಸಿಕೊಂಡರೆ ೧೨,೦೦೦ ರೂಗಳು ಪ್ರೋತ್ಸಾಹಧನ ನೀಡಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ನರೇಗಾ ಸಹಾಯಕ ನಿರ್ದೇಶಕ ಸಿ,ಎಸ್.ಶ್ರೀನಾಥಗೌಡ, ಪಿ.ಡಿ.ಓ ಇ.ಪವಿತ್ರ, ಲೆಕ್ಕಸಹಾಯಕ ಮಹಾಲಿಂಗಪ್ಪ. ಮಲ್ಲೇನಹಳ್ಳಿ ಗ್ರಾಮ ಪಂಚಾಯ್ತಿ ಸದಸ್ಯ ಕೃಷ್ಣ ಹಾಜರಿದ್ದರು.
- Advertisement -
- Advertisement -
- Advertisement -
- Advertisement -