Home News ಗಾಂಧಿ ಜಯಂತಿ ಪ್ರಯುಕ್ತ ಉಚಿತ ಬರಡು ರಾಸು ಚಿಕಿತ್ಸಾ ಶಿಬಿರ

ಗಾಂಧಿ ಜಯಂತಿ ಪ್ರಯುಕ್ತ ಉಚಿತ ಬರಡು ರಾಸು ಚಿಕಿತ್ಸಾ ಶಿಬಿರ

0

ಆನೂರು ಗ್ರಾಮದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ನಡೆದ ಉಚಿತ ಬರಡು ರಾಸು ಚಿಕಿತ್ಸಾ ಶಿಬಿರದಲ್ಲಿ ರಾಸುಗಳಿಗೆ ಚಿಕಿತ್ಸೆ ನೀಡಿ ಪಶುಪಾಲನಾ ಮತ್ತು ಪಶುಸೇವಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಮುನಿನಾರಾಯಣರೆಡ್ಡಿ ಮಾತನಾಡಿದರು.
ರೈತರು ಹಸುಗಳಿಗೆ ಪೌಷ್ಠಿಕಾಂಶವುಳ್ಳ ಹಸಿ ಮೇವು, ಒಣ ಹುಲ್ಲು, ನೇಪಿಯರ್ ಹುಲ್ಲು, ಹಲಸಂದಿ, ಹುರುಳಿ, ಹಿಪ್ಪುನೇರಳೆ ಕಡ್ಡಿ ಮತ್ತು ಕೆ.ಎಂ.ಎಫ್ನ ಮಿಶ್ರಣ ಪಶು ಆಹಾರ ನೀಡುವುದರ ಮುಖಾಂತರ ಗರ್ಭಧಾರಣೆ ಸಮಸ್ಯೆಯನ್ನು ನಿವಾರಿಸಬಹುದು. ಶುಚಿತ್ವವಿಲ್ಲದೆ ಗರ್ಭಕೋಶದ ಸೋಂಕು ಉಂಟಾಗುತ್ತದೆ ಎಂದು ಅವರು ತಿಳಿಸಿದರು.
ಬಯಲು ಸೀಮೆ ಪ್ರದೇಶದಲ್ಲಿ ಹಸುಗಳಿಗೆ ಪೌಷ್ಠಿಕಾಂಶವುಳ್ಳ ಮೇವಿನ ಕೊರತೆಯಿಂದಾಗಿ ಬರಡು ರಾಸುಗಳ ಸಂಖ್ಯೆ ಹೆಚ್ಚುತ್ತಿದೆ. ನೀರಿನ ಕೊರತೆಯಿಂದ ಮೇವು ಉತ್ಪಾದನೆ ಕುಂಠಿತಗೊಂಡು, ರಾಸಾಯನಿಕ ಸಿಂಪಡಿಸಿರುವ ಮೇವು ಬಳಸುವುದರಿಂದ ರಾಸುಗಳ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಇದರಿಂದ ಹಸುಗಳ ಜೀರ್ಣಕ್ರಿಯೆ ಮತ್ತು ರೋಗ ತಡೆದುಕೊಳ್ಳುವ ಶಕ್ತಿ ಕ್ಷೀಣಿಸುತ್ತಿದೆ ಎಂದರು.
ಶಿಬಿರದಲ್ಲಿ 50ರಾಸುಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಯಿತು.
ಪಶುಪಾಲನಾ ಇಲಾಖೆಯ ನಿವೃತ್ತ ಉಪನಿರ್ದೇಶಕ ಜಿ.ಆರ್‌.ಪ್ರಕಾಶ್‌, ಪಶು ವೈದ್ಯಾಧಿಕಾರಿಗಳಾದ ಡಾ.ಬಿಂದುಜಾ, ಡಾ.ಸುಪ್ರೀತ್‌, ಡಾ.ಪರ್ಹ ಯಾಸ್ಮೀನ್‌, ಡಾ.ವಿನೋದ್‌, ಡಾ.ಅರುಣ್‌ ಹಾಜರಿದ್ದರು.